Tag: ವಾರ

  • ವಾರದ ಕೆಟ್ಟದಿನ ಸೋಮವಾರ – ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಅಧಿಕೃತ ಘೋಷಣೆ

    ವಾರದ ಕೆಟ್ಟದಿನ ಸೋಮವಾರ – ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಅಧಿಕೃತ ಘೋಷಣೆ

    ನವದೆಹಲಿ: ವೀಕೆಂಡ್ ಮುಗಿದ ನಂತರ ಬರುವ ಸೋಮವಾರವನ್ನು ಯಾಕಾದರೂ ಬರುತ್ತೋ ಎಂದು ಶಪಿಸುವವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಇದೀಗ ಅಚ್ಚರಿ ಎನ್ನುವಂತೆ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ (Guinness World Record) ಸಂಸ್ಥೆಯೂ ಅಧಿಕೃತವಾಗಿ ಸೋಮವಾರವನ್ನು (Monday)  ಕೆಟ್ಟ ದಿನವೆಂದು ಘೋಷಿಸಿದೆ.

    ಬಹಳಷ್ಟು ಜನರಿಗೆ ಸೋಮವಾರವು ನೀರಸ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಟ್ವೀಟ್ ಮಾಡಿ, ವಾರದ (Week) ಅತ್ಯಂತ ಕೆಟ್ಟ ದಿನದ ದಾಖಲೆಯನ್ನು ನಾವು ಸೋಮವಾರ ಅಧಿಕೃತವಾಗಿ ನೀಡುತ್ತಿದ್ದೇವೆ ಎಂದು ತಿಳಿಸಿದೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಕಾಲ್ಕೆರೆಯುತ್ತಾ ಜಗಳಕ್ಕೆ ಬಂದವನನ್ನು ಚಲಿಸುತ್ತಿದ್ದ ರೈಲಿನಿಂದ ಹೊರ ತಳ್ಳಿದ ಸಹ ಪ್ರಯಾಣಿಕ

    ಈ ಪೋಸ್ಟ್‌ನ್ನು 4 ಲಕ್ಷಕ್ಕೂ ಅಧಿಕ ಜನರು ಲೈಕ್ ಹಾಗೂ ಕಾಮೆಂಟ್ ಮಾಡಿದ್ದು, ನೆಟ್ಟಿಗರು ವಿಭಿನ್ನ ರೀತಿಯ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ನೆಟ್ಟಿಗನೊಬ್ಬ ಕಾಮೆಂಟ್ ಮಾಡಿ ಈ ಕಾರಣಕ್ಕಾಗಿಯೇ ನಾನು ಸೋಮವಾರ ರಜೆ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾನೆ. ಇನ್ನೋರ್ವ ನೀವು ಸಾಕಷ್ಟು ಸಮಯ ತೆಗೆದುಕೊಂಡಿದ್ದೀರಿ ಎಂದು ಹೇಳಿದ್ದಾನೆ. ಇದನ್ನೂ ಓದಿ: 7 ತಿಂಗಳು ಕಳೆದರೂ ಸ್ಮಾರ್ಟ್, ಹೈಟೆಕ್ ಮೀನು ಮಾರುಕಟ್ಟೆಗೆ ಸಿಕ್ಕಿಲ್ಲ ಉದ್ಘಾಟನೆ ಭಾಗ್ಯ

    Live Tv
    [brid partner=56869869 player=32851 video=960834 autoplay=true]

  • ಗ್ರಾಹಕನ ಸೋಗಿನಲ್ಲಿ ಆಭರಣ ಕಳ್ಳತನ- 4ಲಕ್ಷ ಮೌಲ್ಯದ ಸ್ವತ್ತುಗಳು ವಶ

    ಗ್ರಾಹಕನ ಸೋಗಿನಲ್ಲಿ ಆಭರಣ ಕಳ್ಳತನ- 4ಲಕ್ಷ ಮೌಲ್ಯದ ಸ್ವತ್ತುಗಳು ವಶ

    ಕಾರವಾರ : ಚಿನ್ನದಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಆಭರಣ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು 4ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆಯಲಾಗಿದೆ.

    ಸೆಪ್ಟೆಂಬರ್ 17 ರಂದು ಶಿರಸಿ ನಗರದ ರತ್ನದೀಪ ಜ್ಯುವೆಲರಿ ಶಾಪ್ ನಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರಸಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ಬೆಳವಾಗಿಯ ನಾವೇಕರ ಗಲ್ಲಿಯ ನಿಲೇಶ್ ರೇವಣಕರ (32) ಹಾಗೂ ಕಾರವಾರದ ಹಬ್ಬುವಾಡದ ರಾಘವೇಂದ್ರ ದೈವಜ್ಞ (35) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿ ನಿಲೇಶ್ ರತ್ನದೀಪ ಜ್ಯುವೆಲರ್ಸನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು, ಚಿನ್ನದ ಸರವನ್ನು ಕಸಿದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದ. ಇದು ಅಂಗಡಿಯ ಸಿಸಿಟಿಯಲ್ಲಿ ದಾಖಲಾಗಿತ್ತು. ನಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

    ಬಂಧಿತ ಆರೋಪಿಗಳಿಂದ ಪೊಲೀಸರು 22.28 ಗ್ರಾಂ ಬಂಗಾರದ ತೂಕದ ಚಿನ್ನದ ಎರಡು ಸರ ಹಾಗೂ ಮಾರುತಿ ಸ್ವಿಪ್ಟ್ ಕಾರು ಸೇರಿ ಒಟ್ಟೂ 4ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನಲ್ಲಿ ಪಿಎಸ್‍ಐ ರಾಜಕುಮಾರ, ಪಿಎಸ್‍ಐ ಮೋಹಿನಿ ಶೆಟ್ಟಿ ಹಾಗೂ ಸಿಬ್ಬಂದಿಗಳಾದ ಚೇತನ್ ಕುಮಾರ್, ಕೊಟೇಶ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.