Tag: ವಾರಂಗಲ್

  • Telangana| ಬ್ಯಾಂಕ್‌ನಲ್ಲಿದ್ದ 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನಾಭರಣ ದರೋಡೆ

    Telangana| ಬ್ಯಾಂಕ್‌ನಲ್ಲಿದ್ದ 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನಾಭರಣ ದರೋಡೆ

    ಹೈದರಾಬಾದ್: ತೆಲಂಗಾಣದ (Telangana) ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನಿಂದ 13.6 ಕೋಟಿ ರೂ. ಮೌಲ್ಯದ 19 ಕೆಜಿ ಚಿನ್ನವನ್ನು ಖದೀಮರು ದರೋಡೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬ್ಯಾಂಕ್ (Bank) ಸಿಬ್ಬಂದಿ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪೊಲೀಸರ ಪ್ರಕಾರ, ಕಳ್ಳರು ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಬ್ಯಾಂಕ್ ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಹಾನಿಗೊಳಿಸಿದ್ದಾರೆ. ಯಾವುದೇ ಸಾಕ್ಷ್ಯ ಸಿಗಬಾರದೆಂದು ಡಿಜಿಟಲ್ ವೀಡಿಯೊ ರೆಕಾರ್ಡರ್ ಕೂಡ ಹೊತ್ತೊಯ್ದಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ‘ಲೋಕಾ’ ದಾಳಿ

    ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಾಪಕ ತನಿಖೆ ಕೈಗೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ- ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

  • ತರಗತಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ- ತೆಲಂಗಾಣದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ

    ತರಗತಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ- ತೆಲಂಗಾಣದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ

    ಹೈದರಾಬಾದ್: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ (Student) ತರಗತಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಗರದ ಕಾಲೇಜೊಂದರಲ್ಲಿ ಮಂಗಳವಾರ ನಡೆದಿದೆ.

    ಸ್ಪರ್ಧಾತ್ಮಕ ಪರೀಕ್ಷಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿ ರಾತ್ರಿ 10 ಗಂಟೆಯ ನಂತರ ಕಣ್ಮರೆಯಾಗಿದ್ದ. ಶಾಲಾ ಕಟ್ಟಡದ ಎಲ್ಲಾ ಕೊಠಡಿಗಳಲ್ಲಿ ತೀವ್ರ ಶೋಧ ನಡೆಸಿದಾಗ ಆತನ ಮೃತದೇಹ ಪತ್ತೆಯಾಗಿತ್ತು. ವಿದ್ಯಾರ್ಥಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ

    ತೆಲಂಗಾಣದಲ್ಲಿ (Telangana) ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಮುಂದುವರಿದಿದ್ದು ಪೋಷಕರು ಮತ್ತು ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಸ್ನೇಹಿತನೊಬ್ಬ ವೈಯಕ್ತಿಕ ಫೋಟೋಗಳನ್ನು ಸೋರಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ವಾರಂಗಲ್‍ನಲ್ಲಿ (Warangal) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

    ಕಳೆದ ಡಿಸೆಂಬರ್‍ನಲ್ಲಿ ಹಿರಿಯ ವಿದ್ಯಾರ್ಥಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ವಿದ್ಯಾರ್ಥಿನಿ ಭಾನುವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮತ್ತೊಂದು ಘಟನೆಯಲ್ಲಿ ಕಳೆದ ಶನಿವಾರ ನಿಜಾಮಾಬಾದ್‍ನ (Nizamabad) ಹಾಸ್ಟೆಲ್ ಕೋಣೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇತ್ತೀಚಿನ ಅಧಿಕೃತ ಅಂಕಿ ಅಂಶಗಳ ಪ್ರಕಾರ 2021ರಲ್ಲಿ ಭಾರತದ 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಎಎಪಿಗೆ ಗುಡ್‌ಬೈ; ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ

  • ಭಾರವಾದ ಬ್ಯಾಗ್ ಹೊತ್ತು ಶಾಲಾ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು!

    ಭಾರವಾದ ಬ್ಯಾಗ್ ಹೊತ್ತು ಶಾಲಾ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು!

    ವಾರಂಗಲ್: ಒಂಭತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಆವರಣದಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಕರಿಮಾಬಾದ್‍ನಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ನಡೆದಿದ್ದು, ಮೃತ ವಿದ್ಯಾರ್ಥಿನಿಯನ್ನು 14 ವರ್ಷದ ಪಿ. ಶ್ರೀವರ್ಷಿತ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಶಾಲಾ ಆವರಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿನಿ ಬೆಳಿಗ್ಗೆ 8.45 ಸುಮಾರಿಗೆ ಕೌಟಿಲ್ಯ ಹೈಸ್ಕೂಲ್ ಗೆ ಬಂದಿದ್ದಾಳೆ. ಭಾರವಾದ ಬ್ಯಾಗ್ ಹೊತ್ತ ಆಕೆ ಶಾಲೆಯ ಮೆಟ್ಟಿಲುಗಳನ್ನು ಹತ್ತುತ್ತಾ 3ನೇ ಮಹಡಿವರೆಗೆ ಬಂದು ಕುಸಿದುಬಿದ್ದಾಳೆ. ಕೂಡಲೇ ಅಲ್ಲೇ ಅದ್ದ ಇತರ ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    ಘಟನೆಯಿಂದ ವಿದ್ಯಾರ್ಥಿನಿಯ ಹಣೆಗೆ ತೀವ್ರ ಏಟು ಬಿದ್ದಿದ್ದು, ಮೂಗಿನಲ್ಲಿ ರಕ್ತ ಬರಲಾರಂಭಿಸಿತ್ತು. ಕೂಡಲೇ ಶಾಲಾ ಸಿಬ್ಬಂದಿ ಆಕೆಗೆ ಪ್ರಥಮ ಚಿಕಿತ್ಸೆ ನೀಡಿ ನಂತ್ರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆ ಬಳಿಕ ಅಸ್ವಸ್ಥ ವಿದ್ಯಾರ್ಥಿನಿಯ ಪೋಷಕರಿಗೆ ವಿಷಯ ಮುಟ್ಟಿಸಿದ್ದಾರೆ.

    ಆಸ್ಪತ್ರೆಯಲ್ಲಿ ವೈದ್ಯರು ವಿದ್ಯಾರ್ಥಿನಿಯನ್ನು ಪರೀಕ್ಷಿಸಿ ಆಕೆಗೆ ಬಿಪಿ ಕಡಿಮೆಯಾಗಿದೆ. ಹೀಗಾಗಿ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಂಜಿಎಂ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಅಂತೆಯೇ ಆಕೆಯನ್ನು ನಗರದ ಎಂಜಿಎಂ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

    ಶಾಲಾ ಸಿಬ್ಬಂದಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ತಡವಾಗಿ ಕರೆದುಕೊಂಡು ಹೋಗಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಅಂತ ಪೋಷಕರು ಆರೋಪ ಮಾಡುತ್ತಿದ್ದಾರೆ. ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆಯನ್ನೂ ಮಾಡಿದ್ದಾರೆ.

    ವಿದ್ಯಾರ್ಥಿನಿ ನಿರ್ಜಲೀಕರಣದಿಂದ ಬಳಲುತ್ತಿದ್ದರಿಂದ ಮೃತಪಟ್ಟಿದ್ದಾಳೆ ಅಂತ ವೈದ್ಯರು ಹೇಳಿದ್ದಾಗಿ ಶಾಲೆಯ ಪ್ರಾಂಶುಪಾಲರಾದ ಕೆ. ಶ್ರೀಧರ್ ಹೇಳಿದ್ದಾರೆ.