ಲಕ್ನೋ: ಇಂಧನ ಸೋರಿಕೆಯಿಂದಾಗಿ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನವನ್ನ (IndiGo Flight) ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Lal Bahadur Shastri International Airport) ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೊರಟಿದ್ದ ವಿಮಾನದಲ್ಲಿ ಇಂಧನ ಸೋರಿಕೆಯಾಗುತ್ತಿರುವುದು (Fuel Leak) ಕಂಡುಬಂದಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಎಲ್ಲಾ 166 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವಾರಣಾಸಿ ಪೊಲೀಸರು ತಿಳಿಸಿದ್ದಾರೆ.
ಇನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ತಿಳಿಸಿದ್ದಾರೆ. ಉಳಿದ ವಿಮಾನಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲವೆಂದು ಹೇಳಿದ್ದಾರೆ.
– ಆಪರೇಷನ್ ಸಿಂಧೂರ ಯಶಸ್ಸನ್ನ ಮಹಾದೇವನ ಪಾದಗಳಿಗೆ ಅರ್ಪಿಸುತ್ತೇನೆ; ಮೋದಿ
– 9.7 ಕೋಟಿ ರೈತರ ಖಾತೆಗಳಿಗೆ 20,000 ಕೋಟಿ ಜಮೆ
ಲಕ್ನೋ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ, ನಗರಾಭಿವೃದ್ಧಿ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಿದರು.
आज अपने संसदीय क्षेत्र वाराणसी से पीएम-किसान सम्मान निधि की राशि जारी कर और काशीवासियों के लिए विभिन्न विकास कार्यों का उद्घाटन व शिलान्यास कर अत्यंत प्रसन्नता हो रही है। https://t.co/ezUNEParvT
ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ (Development Projects) ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದ್ರು. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು. 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು. ಇದನ್ನೂ ಓದಿ: Operation Akhal | ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ
ಲಕ್ನೋ: ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಆಗಸ್ಟ್ 11 ರಿಂದ ಶ್ರೀ ಕಾಶಿ ವಿಶ್ವನಾಥ ಧಾಮದಲ್ಲಿ (Shri Kashi Vishwanath Temple) ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು (Plastic Ban) ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮಂದಿರದ ಆಡಳಿತ ಮಂಡಳಿ ಘೋಷಿಸಿದೆ.
ಈ ನಿರ್ಧಾರವನ್ನು ಧಾಮದ ಪಾವಿತ್ರ‍್ಯತೆ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ. ಆಡಳಿತ ಮಂಡಳಿಯು ಧಾಮದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ. ಈ ಪೋಸ್ಟರ್‌ಗಳಲ್ಲಿ, ಆಗಸ್ಟ್ 11 ರಿಂದ ಯಾವುದೇ ರೀತಿಯ ಪ್ಲಾಸ್ಟಿಕ್ ಪಾತ್ರೆಗಳೊಂದಿಗೆ ಮಂದಿರಕ್ಕೆ ಪ್ರವೇಶಿಸಲು ಅನುಮತಿಯಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ರೀತಿಯಾಗಿ ಭಕ್ತರಿಗೆ ಧಾಮದ ಪಾವಿತ್ರ‍್ಯತೆ, ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಮುಕ್ತ ವಾತಾವರಣವನ್ನು ಕಾಪಾಡಲು ಸಹಕರಿಸುವಂತೆ ವಿನಂತಿಸಿಕೊಂಡಿದೆ. ಇದನ್ನೂ ಓದಿ: ಮುಡಾ ಹಗರಣ ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಆಯೋಗದ ವರದಿ ಸಲ್ಲಿಕೆ
ಮಂದಿರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವ ಭೂಷಣ್ ಮಿಶ್ರಾ ಮಾತನಾಡಿ, ಕಾಶಿ ವಿಶ್ವನಾಥ ಧಾಮ ಕೇವಲ ಆಧ್ಯಾತ್ಮಿಕ ಕೇಂದ್ರವಾಗಿರದೆ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಮಾದರಿಯಾಗಬೇಕು. ಈ ಉಪಕ್ರಮವು ಪವಿತ್ರ ವಾತಾವರಣವನ್ನು ಹೊಂದಿರುವ ಧಾಮವನ್ನು ಮಾಲಿನ್ಯ ಮುಕ್ತವಾಗಿರಿಸುವ ಗುರಿಯನ್ನು ಹೊಂದಿದೆ. ಸಾವನ್ ತಿಂಗಳಿನ ಮೊದಲ ಸೋಮವಾರದಿಂದ ಭಕ್ತರಿಗೆ ಪ್ಲಾಸ್ಟಿಕ್ ಬುಟ್ಟಿಗಳಲ್ಲಿ ಇತರ ಕಾಣಿಕೆಗಳು ಹಾಗೂ ಪಾಸ್ಟಿಕ್ ಬಾಟಲಿಗಳಲ್ಲಿ ತರದಂತೆ ಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯವರ ಅಧಿಕಾರ ದುರ್ಬಳಕೆ ಬಗ್ಗೆ ಜನರಿಗೆ ಹೇಳಲು ರಾಹುಲ್ ಗಾಂಧಿ ಪ್ರತಿಭಟನೆ: ಡಿಕೆ ಶಿವಕುಮಾರ್
ಈ ನಿಷೇಧದಿಂದ ಭಕ್ತರು ಶಿವಲಿಂಗಕ್ಕೆ ಜಲಾರ್ಪಣೆ ಮಾಡಲು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಲು ಸಾಧ್ಯವಿಲ್ಲ. ಬದಲಿಗೆ, ಲೋಹದ ಪಾತ್ರೆಗಳು ಅಥವಾ ಇತರ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಲು ಸೂಚಿಸಲಾಗಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ವಾರಾಣಸಿ ಮಹಾನಗರ ಪಾಲಿಕೆ, ಹಲವಾರು ಎನ್‌ಜಿಒಗಳು ಮತ್ತು ಸ್ಥಳೀಯ ಸ್ವಯಂಸೇವಕರು ಸಹಕಾರ ನೀಡುತ್ತಿದ್ದಾರೆ. ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಕೇಸ್‌ನಿಂದ ನನ್ನ ಜೀವನವೇ ಹಾಳಾಯ್ತು: ಪ್ರಜ್ಞಾ ಠಾಕೂರ್
2024ರ ಡಿಸೆಂಬರ್‌ನಲ್ಲಿ ನಡೆದ ಮಂದಿರದ ಟ್ರಸ್ಟ್ನ ಸಭೆಯಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್‌ನ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೆ, ಹಾಲು, ಹೂವು-ಹಾರಗಳನ್ನು ತರಲು ಭಕ್ತರು ಪ್ಲಾಸ್ಟಿಕ್ ಚೀಲ ಹಾಗೂ ಬಾಟಲಿಗಳನ್ನು ಬಳಸುತ್ತಿದ್ದರು. ಈಗ ಈ ನಿಷೇಧವನ್ನು ಆಗಸ್ಟ್ 11ರಿಂದ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಮಂದಿರದ ಆಡಳಿತ ಮಂಡಳಿಯು ತಿಳಿಸಿದೆ.
ಸದ್ಯ ಆಗಸ್ಟ್ 9ರ ವರೆಗೆ ಭಕ್ತಾಧಿಗಳು ಧಾಮಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ತರದಂತೆ ತಡೆಯಲು ಪ್ರಯತ್ನಿಸಲಾಗುವುದು. ಆಗಸ್ಟ್ 10ರಿಂದ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳು ಅಂದರೆ ಹಾಲಿನ ಬಾಟಲಿ ಅಥವಾ ಹೂವು-ಹಾರಗಳ ಪ್ಲಾಸ್ಟಿಕ್ ಬುಟ್ಟಿಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
– ಬಾಬರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳಲು ವಾಟ್ಸಪ್ ಗ್ರೂಪಲ್ಲಿ ಪ್ರಚೋದನೆ
– ಜ್ಞಾನವಾಪಿ ಮಸೀದಿ, ಕೆಂಪು ಕೋಟೆ ಫೋಟೋ ಪಾಕ್‌ಗೆ ರವಾನೆ
ಲಕ್ನೋ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಣಾಸಿಯ (Varanasi) ವ್ಯಕ್ತಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (UP ATS) ಬಂಧಿಸಿದೆ. ಇದರೊಂದಿಗೆ ದೇಶದ ವಿವಿಧೆಡೆ ಬಂಧಿತ ಪಾಕ್ ಬೇಹುಗಾರರ (Spy) ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ತುಫೈಲ್ ಬಂಧಿತ ಆರೋಪಿ. ಪಾಕ್ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ತುಫೈಲ್ ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ. ರಾಜ್‌ಘಾಟ್, ನಮೋ ಘಾಟ್, ಜ್ಞಾನವಾಪಿ ಮಸೀದಿ, ರೈಲ್ವೆ ನಿಲ್ದಾಣ ಮತ್ತು ಕೆಂಪು ಕೋಟೆ (Red Fort) ಸೇರಿದಂತೆ ಆಯಕಟ್ಟಿನ ಸ್ಥಳಗಳ ಫೋಟೋ ಮತ್ತು ಮಾಹಿತಿಯನ್ನ ಹಂಚಿಕೊಂಡಿದ್ದಾನೆ ಅನ್ನೋದು ತನಿಖೆ ಸಮಯದಲ್ಲಿ ಗೊತ್ತಾಗಿದೆ.
ಅಲ್ಲದೇ ಕೆಲವು ಸ್ಥಳೀಯರನ್ನು ಪಾಕಿಸ್ತಾನಿಯರೊಟ್ಟಿಗೆ ಸಂಪರ್ಕಿಸುವ ವಾಟ್ಸಪ್ ಗ್ರೂಪ್‌ಗಳಲ್ಲಿ ತುಫೈಲ್ ಸಕ್ರೀಯವಾಗಿದ್ದ. ಅಲ್ಲಿ ತೆಹ್ರೀಕ್-ಇ-ಲಬ್ಬೈಕ್ ಉಗ್ರ ಸಂಘಟನೆಯ ನಾಯಕ ಮೌಲಾನಾ ಸಾದ್ ರಿಜ್ವಿಯ ಉಪನ್ಯಾಸ ವಿಡಿಯೋಗಳನ್ನ ಹಂಚಿಕೊಳ್ಳುತ್ತಿದ್ದ. ಬಾಬರಿ ಮಸೀದಿ (Babri Masjid) ಧ್ವಂಸಕ್ಕೆ ಸೇಡು ತೀರಿಸಿಕೊಳ್ಳಲು ಮತ್ತು ಶರಿಯಾ ಕಾನೂನು ಹೇರಿಕೆಯನ್ನು ಉತ್ತೇಜಿಸುವ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದ ಅನ್ನೋದು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ನಫೀಸಾ ಎಂಬ ಪಾಕಿಸ್ತಾನಿ ಮಹಿಳೆಯ ಸಂಪರ್ಕದಲ್ಲೂ ತುಫೈಲ್ ಇದ್ದ. ಆಕೆಯ ಪತಿ ಪಾಕಿಸ್ತಾನಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟಾರೆ ತುಫೈಲ್ 600 ಪಾಕಿಸ್ತಾನಿಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ತನಿಖಾ ದಳದ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.
ಲಕ್ನೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದೇ ಏಪ್ರಿಲ್ 11ರಂದು (ನಾಳೆ) ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದು, 3,884.18 ಕೋಟಿ ರೂ. ಮೌಲ್ಯದ 44 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ವಾರಣಾಸಿಯ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ (Dilip Patel) ತಿಳಿಸಿದ್ದಾರೆ. ಇದು ವಾರಣಾಸಿಗೆ (Varanasi) ಮೋದಿ ಅವರ 50ನೇ ಭೇಟಿಯಾಗಿದೆ.
ಅಲ್ಲದೇ ನಗರದ ವಿದ್ಯುತ್ ಮೂಲಸೌಕರ್ಯ (Electrical Infrastructure) ಬಲಪಡಿಸುವ ನಿಟ್ಟಿನಲ್ಲಿ 15 ಹೊಸ ಸಬ್‌ಸ್ಟೇಷನ್‌ಗಳ ನಿರ್ಮಾಣ, ಹೊಸ ಟ್ರಾನ್ಸ್‌ಫಾರ್ಮರ್‌ಗಳ ಸ್ಥಾಪನೆ ಮತ್ತು 1,500 ಕಿಮೀ ಹೊಸ ವಿದ್ಯುತ್ ಮಾರ್ಗಗಳ ಸ್ಥಾಪನೆ ಸೇರಿದಂತೆ, 2,250 ಕೋಟಿ ರೂ. ವೆಚ್ಚದ 25 ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ
ಮುಂಬೈ: ವಿಮಾನ ಹಾರಾಟದ ವೇಳೆಯೇ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈನಿಂದ (Mumbai) ವಾರಣಾಸಿಗೆ (Varanasi) ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ಉತ್ತರ ಪ್ರದೇಶದ (Uttar Pradesh) ಮಿರ್ಜಾಪುರ ಮೂಲದ ಸುಶೀಲಾ ದೇವಿ (89) ಎಂದು ತಿಳಿಯಲಾಗಿದೆ.
ಭಾನುವಾರ ಮುಂಬೈನಿಂದ 6ಇ-5028 ಇಂಡಿಗೋ ವಿಮಾನ ವಾರಣಾಸಿಗೆ ತೆರಳುತ್ತಿತ್ತು. ಮೃತ ವೃದ್ಧೆ ಮುಂಬೈನಲ್ಲಿ ವಿಮಾನವನ್ನು ಹತ್ತಿದ್ದರು. ಬಳಿಕ ವಿಮಾನ ಟೇಕ್ ಆಫ್ ಆದ ಮೇಲೆ ವೃದ್ಧೆ ಅಸ್ವಸ್ಥರಾಗಲು ಪ್ರಾರಂಭಿಸಿದ್ದು, ಮುಂಬೈನಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಚಿಕಲ್ತಾನ ವಿಮಾನ ನಿಲ್ದಾಣದಲ್ಲಿ (Chikalthana Aiport) ರಾತ್ರಿ 10 ಗಂಟೆ ಸುಮಾರಿಗೆ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು.ಇದನ್ನೂ ಓದಿ: ಇಡೀ ಸರ್ಕಾರ ಒಬ್ಬ ಕುಮಾರಸ್ವಾಮಿಯನ್ನ ಸೈಲೆಂಟ್ ಮಾಡಲು ಯತ್ನಿಸುತ್ತಿದೆ: ಹೆಚ್‍ಡಿಕೆ
ತುರ್ತು ಭೂಸ್ಪರ್ಶದ ಬಳಿಕ ವೃದ್ಧೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದರು.
ಇನ್ನೂ ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಲು ಎಲ್ಲ ರೀತಿಯ ವಿಧಾನಗಳನ್ನು ಅನುಸರಿಸಲಾಗಿದೆ. ಇಂಡಿಗೋ ಸಂಸ್ಥೆ ಮೃತ ವೃದ್ಧೆಯ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿದೆ. ಬಳಿಕ ವೃದ್ಧೆಯ ಶವವನ್ನು ಛತ್ರಪತಿ ಸಂಭಾಜಿನಗರದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಯಿತು ಎಂದು ತಿಳಿಸಿದರು.
ನವದೆಹಲಿ: 19 ವರ್ಷದ ಯುವತಿಯನ್ನ ಅಪಹರಿಸಿ 22 ಮಂದಿ ದಿನವಿಡೀ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ (Varanasi) ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ (UP Police) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ವಾರಣಾಸಿಯ ಲಾಲ್‌ಪುರ್ ಪ್ರದೇಶದ ನಿವಾಸಿಯಾಗಿರುವ ಯುವತಿ ಕಳೆದ ಮಾರ್ಚ್ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದ್ರೆ ಅಂದು ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಬೆಲೆ ಏರಿಕೆಯ ಪಾಪ ನಮ್ಮೇಲೇರಲು ಯತ್ನಿಸುತ್ತಿರುವ ಬಿಜೆಪಿ ನಾಯಕರ ಮುಖಕ್ಕೆ ಮೋದಿ ಮಸಿ ಬಳಿದಿದ್ದಾರೆ: ಸಿಎಂ
ದೂರು ನೀಡಿದ ಅದೇ ದಿನ ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರಿಗೆ ತನಗಾದ ಅನ್ಯಾಯದ ಬಗ್ಗೆ ತಿಳಿಸಿದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ 22 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: IISC, IIT ಮಾದರಿ ಸಂಸ್ಥೆಗಳಿಂದ ಪರಿಶೀಲನೆ, ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ.ಬಿ.ಪಾಟೀಲ್
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೂರು ನೀಡಿದ ಅದೇ ದಿನ ರಾತ್ರಿ ಹುಕ್ಕಾ ಬಾರ್, ಹೋಟೆಲ್, ಲಾಡ್ಜ್ ಮತ್ತು ಅತಿಥಿ ಗೃಹ ಸೇರಿದಂತೆ ವಿವಿಧೆಡೆ ದಾಳಿ ನಡೆಸಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕೆಲವರು ಹುಕುಲ್‌ಗಂಜ್ ಮತ್ತು ಲಲ್ಲಾಪುರ ಪ್ರದೇಶದವರಾಗಿದ್ದು, ಕೆಲವರು ಅಪ್ರಾಪ್ತರೂ ಆಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆರೇ ತಿಂಗಳಲ್ಲಿ ತಂದುಕೊಡ್ತೀನಿ – 2.45 ಲಕ್ಷ ರೂ. ಕದ್ದು ಪತ್ರ ಬರೆದಿಟ್ಟು ಹೋದ ಕಳ್ಳ!
ಹಾಸನ: ಕುಂಭಮೇಳಕ್ಕೆ(Maha Kumbh Mela) ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ(Hassan) ಮೂಲದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ(Varanasi) ಬಳಿ ನಡೆದಿದೆ.
ಲಕ್ನೋ: ಎಂಟು ವರ್ಷದ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಬಾಲಕಿ ವಿರೋಧಿಸಿದ್ದಕ್ಕೆ ಆಕೆಯ ತಲೆಗೆ ಕಲ್ಲಿನಿಂದ ಹೊಡೆದು ಕೊಲೆಗೈದ ಘಟನೆ ಉತ್ತರ ಪ್ರದೇಶದ (Uttar Pradesh) ವಾರಣಾಸಿಯ (Varanasi) ಸುಜಾಬಾದ್‌ನಲ್ಲಿ ನಡೆದಿದೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಯನ್ನು ಇರ್ಷಾದ್ ಎಂದು ಗುರುತಿಸಿದ್ದು, ಆತನ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಆತನಿಗೆ ಗುಂಡೇಟು ನೀಡಿ ಪೊಲೀಸರು ಬಂಧಿಸಿದ್ದಾರೆ.
ವಾರಣಾಸಿಯ ಶಾಲೆಯ ಬಳಿ ಗೋಣಿ ಚೀಲದಲ್ಲಿ ತುಂಬಿದ್ದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಮೃತದೇಹದ ಮೇಲೆ ಗಾಯದ ಗುರುತುಗಳಿದ್ದವು. ಈ ಸಂಬಂಧ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇರ್ಷಾದ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಸ್ವಲ್ಪ ಸಮಯದ ನಂತರ ಗೋಣಿಚೀಲದಲ್ಲಿ ಶವದೊಂದಿಗೆ ಹೊರಗೆ ಬರುತ್ತಿರುವುದು ಪತ್ತೆಯಾಗಿತ್ತು. ಬಾಲಕಿಯ ಮೇಲೆ ಅತ್ಯಾಚಾರ ಎಸಗುವ ಯತ್ನವನ್ನು ವಿರೋಧಿಸಿದ್ದಕ್ಕೆ ಇರ್ಷಾದ್ ಬಾಲಕಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಅಂಗವಿಕಲ ಆಟೋ ಚಾಲಕರೊಬ್ಬರ ಪುತ್ರಿಯಾಗಿದ್ದು, ಮಂಗಳವಾರ ಸಂಜೆ 6:30ರ ಸುಮಾರಿಗೆ ಸಮೀಪದ ಅಂಗಡಿಯಲ್ಲಿ ಸೊಳ್ಳೆ ಬತ್ತಿ ಖರೀದಿಸಲು ಮನೆಯಿಂದ ಹೊರಟಿದ್ದಳು. ಆಕೆ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗದ ಹಿನ್ನೆಲೆಯಲ್ಲಿ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಾಗಿದೆ.
ಆರೋಪಿ ಇರ್ಷಾದ್ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ನೋ: ಉತ್ತರ ಪ್ರದೇಶದ (Uttar Pradesh) ವಾರಣಾಸಿಯ (Varanasi) ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ.
ಶನಿವಾರ ಮುಂಜಾನೆ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸುಮಾರು 12 ಅಗ್ನಿಶಾಮಕ ದಳ ವಾಹನಗಳು, ಜೊತೆಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ), ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಮತ್ತು ಸ್ಥಳೀಯ ಪೊಲೀಸ್ ತಂಡ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ತಾಸುಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್
ಘಟನೆಯ ಕುರಿತು ಸಿಒ ಜಿಆರ್‌ಪಿ ಕುನ್ವರ್ ಬಹದ್ದೂರ್ ಸಿಂಗ್ ಮಾತನಾಡಿ, ಹಲವಾರು ದ್ವಿಚಕ್ರ ವಾಹನಗಳು ಸುಟ್ಟು ಹೋಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಸುಟ್ಟು ಕರಕಲಾದ ಬಹುತೇಕ ದ್ವಿಚಕ್ರ ವಾಹನಗಳು ರೈಲ್ವೆ ನೌಕರರಿಗೆ ಸೇರಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡ್ಬೇಕು ಅಂದಿದ್ದ ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್