ಲಕ್ನೋ: ಇಂಧನ ಸೋರಿಕೆಯಿಂದಾಗಿ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನವನ್ನ (IndiGo Flight) ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Lal Bahadur Shastri International Airport) ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೊರಟಿದ್ದ ವಿಮಾನದಲ್ಲಿ ಇಂಧನ ಸೋರಿಕೆಯಾಗುತ್ತಿರುವುದು (Fuel Leak) ಕಂಡುಬಂದಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಎಲ್ಲಾ 166 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವಾರಣಾಸಿ ಪೊಲೀಸರು ತಿಳಿಸಿದ್ದಾರೆ.
ಇನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ತಿಳಿಸಿದ್ದಾರೆ. ಉಳಿದ ವಿಮಾನಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲವೆಂದು ಹೇಳಿದ್ದಾರೆ.
ಲಕ್ನೋ: ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ (Narendra Modi) ಅವರು ವಾರಣಾಸಿ ಏರ್‌ಪೋರ್ಟ್‌ನಲ್ಲೇ ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದ (Varanasi Gang Rape Case) ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಸಂಬಂಧ ವಾರಣಾಸಿಯ ಪೊಲೀಸ್ ಆಯುಕ್ತರು (Varanasi Police Commissioner), ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ವಾರಣಾಸಿ ಏರ್‌ಪೋರ್ಟ್‌ನಲ್ಲೇ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: 19ರ ಯುವತಿಯ ಕಿಡ್ನ್ಯಾಪ್ – 22 ಮಂದಿ ಕಾಮುಕರಿಂದ ದಿನವಿಡೀ ಗ್ಯಾಂಗ್ ರೇಪ್
ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್‌ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏ.11ರಂದು ವಾರಣಾಸಿಗೆ ಮೋದಿ ಭೇಟಿ – 3,884 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ
ಏನಿದು ಘಟನೆ?
ಉತ್ತರ ವಾರಣಾಸಿಯ ಲಾಲ್‌ಪುರ್ ಪ್ರದೇಶದ ನಿವಾಸಿಯಾಗಿದ್ದ ಸಂತ್ತಸ್ತ ಯುವತಿ ಕಳೆದ ಮಾರ್ಚ್ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದ್ರೆ ಅದೊಂದು ದಿನ (ಮಾ.29) ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಅದೇ ದಿನ ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರ ಬಳಿ ತನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ ಒಂದು ವಾರಗಳ ಕಾಲ 23 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಳು.
ನವದೆಹಲಿ: 19 ವರ್ಷದ ಯುವತಿಯನ್ನ ಅಪಹರಿಸಿ 22 ಮಂದಿ ದಿನವಿಡೀ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ (Varanasi) ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ (UP Police) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ವಾರಣಾಸಿಯ ಲಾಲ್‌ಪುರ್ ಪ್ರದೇಶದ ನಿವಾಸಿಯಾಗಿರುವ ಯುವತಿ ಕಳೆದ ಮಾರ್ಚ್ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದ್ರೆ ಅಂದು ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಬೆಲೆ ಏರಿಕೆಯ ಪಾಪ ನಮ್ಮೇಲೇರಲು ಯತ್ನಿಸುತ್ತಿರುವ ಬಿಜೆಪಿ ನಾಯಕರ ಮುಖಕ್ಕೆ ಮೋದಿ ಮಸಿ ಬಳಿದಿದ್ದಾರೆ: ಸಿಎಂ
ದೂರು ನೀಡಿದ ಅದೇ ದಿನ ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರಿಗೆ ತನಗಾದ ಅನ್ಯಾಯದ ಬಗ್ಗೆ ತಿಳಿಸಿದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ 22 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: IISC, IIT ಮಾದರಿ ಸಂಸ್ಥೆಗಳಿಂದ ಪರಿಶೀಲನೆ, ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ.ಬಿ.ಪಾಟೀಲ್
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೂರು ನೀಡಿದ ಅದೇ ದಿನ ರಾತ್ರಿ ಹುಕ್ಕಾ ಬಾರ್, ಹೋಟೆಲ್, ಲಾಡ್ಜ್ ಮತ್ತು ಅತಿಥಿ ಗೃಹ ಸೇರಿದಂತೆ ವಿವಿಧೆಡೆ ದಾಳಿ ನಡೆಸಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕೆಲವರು ಹುಕುಲ್‌ಗಂಜ್ ಮತ್ತು ಲಲ್ಲಾಪುರ ಪ್ರದೇಶದವರಾಗಿದ್ದು, ಕೆಲವರು ಅಪ್ರಾಪ್ತರೂ ಆಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆರೇ ತಿಂಗಳಲ್ಲಿ ತಂದುಕೊಡ್ತೀನಿ – 2.45 ಲಕ್ಷ ರೂ. ಕದ್ದು ಪತ್ರ ಬರೆದಿಟ್ಟು ಹೋದ ಕಳ್ಳ!