Tag: ವಾರ್ಡನ್

  • Kolar| ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದು ಹೆದರಿಸುತ್ತಿದ್ದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ವಾರ್ಡನ್

    Kolar| ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದು ಹೆದರಿಸುತ್ತಿದ್ದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ವಾರ್ಡನ್

    ಕೋಲಾರ: ಸ್ನೇಹಿತರೊಂದಿಗೆ ತುಂಟಾಟ ಮಾಡುತ್ತಾ ವಿದ್ಯಾರ್ಥಿಯೊರ್ವ (Student) ವಸತಿ ಶಾಲೆಯಲ್ಲಿ ದೆವ್ವ ಇದೆ ಎಂದು ಹೆದರಿಸಿದ ಎಂಬ ಕಾರಣಕ್ಕೆ ವಾರ್ಡನ್ (Warden) ಮನಬಂದಂತೆ ಹೊಡೆದು ಗಾಯಗೊಳಿಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಹೊಡದಿದ್ದಾರೆ. ಈ ಹಿಂದೆ ಮುರಡೇಶ್ವರಕ್ಕೆ ಪ್ರವಾಸ ಹೋಗಿ 5 ಜನ ವಿದ್ಯಾರ್ಥಿಗಳು ಮೃತಪಟ್ಟು ಸುದ್ದಿಯಾಗಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯ ಈಗ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಹೊಡೆದು ಗಾಯಗೊಳಿಸಿದ್ದಾರೆ. ಇದನ್ನೂ ಓದಿ: ಏಕಕಾಲದಲ್ಲಿ 2 ಹೆಣ್ಣು, 1 ಗಂಡು ಸೇರಿ ತ್ರಿವಳಿ ಮಕ್ಕಳಿಗೆ ಜನ್ಮವಿತ್ತ ತಾಯಿ

    ಸೋಮವಾರ ಶಾಲೆಯಲ್ಲಿ ಪೋಷಕರ ಸಭೆ ಕರೆದಿದ್ದ ವೇಳೆ ನಾಲ್ಕು ಜನ ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆಯ ಎಸ್.ಅಂಜನ್ ಕುಮಾರ್ ಬಾಸುಂಡೆ ಬರುವಂತೆ ಏಟು ತಿಂದ ವಿದ್ಯಾರ್ಥಿಯಾಗಿದ್ದು, ಈತನ ಜೊತೆಗೆ ಇನ್ನೂ ಮೂರು ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮುಳಬಾಗಿಲು ತಾಲೂಕಿನ ಅನಂತಪುರ ಗ್ರಾಮದ 6ನೇ ತರಗತಿ ವಿದ್ಯಾರ್ಥಿ ಅಂಜನ್ ಕುಮಾರ್‌ನನ್ನು ವಸತಿ ಶಾಲೆಯ ವಾರ್ಡನ್ ಮಹೇಶ್ ಬಾಸುಂಡೆ ಬರುವಂತೆ ಬಾರಿಸಿ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಇತ್ತೀಚೆಗಷ್ಟೆ ತಂದೆಯನ್ನ ಕಳೆದುಕೊಂಡಿರುವ ಅಂಜನ್‌ನನ್ನು ತಾಯಿ ಕಷ್ಟಪಟ್ಟು ವಿದ್ಯಾಭ್ಯಾಸ ಕೊಡಿಸುತ್ತಿದ್ದಾಳೆ. ವಸತಿ ನಿಲಯದಲ್ಲಿ ದೆವ್ವ ಇದೆ ಎಂದು ಸಹಪಾಠಿಗಳನ್ನು ಅಂಜನ್ ಹೆದರಿಸುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳು ಈ ವಿಷಯವನ್ನು ತನ್ನ ಗಮನಕ್ಕೆ ತಂದಿದ್ದರು, ಹಾಗಾಗಿ ಹೊಡೆದಿರುವುದಾಗಿ ವಾರ್ಡನ್ ಮಹೇಶ್ ಹಾಗೂ ಪ್ರಾಂಶುಪಾಲರು ಕುಮಾರ್ ರಾಜ್ ಸಮರ್ಥನೆ ನೀಡಿದ್ದಾರೆ. ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ

    ಇನ್ನೂ ಬೆಲ್ಟ್ ಹಾಗೂ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿರುವ ಹಿನ್ನೆಲೆ ವಿದ್ಯಾರ್ಥಿ ತೊಡೆ ಮೇಲೆ ರಕ್ತ ಹೆಪ್ಪುಗಟ್ಟಿದ ಗಾಯಗಳಾಗಿವೆ. ಶಾಲೆಯಲ್ಲಿ ಪೋಷಕರ ಸಭೆಗೆ ಬಂದಾಗ ತನ್ನ ಮಗನ ಮೇಲೆ ಹಲ್ಲೆ ನಡೆದಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ತಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ

  • ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

    ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

    – ಬೀಳಗಿ ಅಂಬೇಡ್ಕರ್‌ ಹಾಸ್ಟೆಲಿನಲ್ಲಿ ಅವ್ಯವಸ್ಥೆ
    – ‌ವಿದ್ಯಾರ್ಥಿಗಳು ದೂರು ನೀಡಿದ್ರೂ ಕ್ಯಾರೇ ಅನ್ನದ ಸಮಾಜ ಕಲ್ಯಾಣ ಇಲಾಖೆ

    ಬಾಗಲಕೋಟೆ: ವಾರ್ಡನ್‌ ಆದವರು ಹಾಸ್ಟೆಲ್‌ನಲ್ಲಿರಬೇಕು. ವಿದ್ಯಾರ್ಥಿಗಳ ಕಷ್ಟಗಳಿಗೆ ನೆರವಾಗಬೇಕು. ಹಾಸ್ಟೆಲ್‌ನಲ್ಲಿರುವ (Hostel) ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಾರೋ ಇಲ್ವೋ ಎಂಬುದನ್ನು ಪರಿಶೀಲಿಸಬೇಕು. ಆದರೆ ಬೀಳಗಿ ತಾಲೂಕಿನ ಕೋಲೂರ ಪುನರ್ ವಸತಿ ಕೇಂದ್ರದ ಬಿ ಆರ್ ಅಂಬೇಡ್ಕರ್ ಹಾಸ್ಟೆಲಿನಲ್ಲಿರುವ (BR Ambedkar Hostel) ವಾರ್ಡನ್‌ (Warden) ಡ್ಯೂಟಿಗೆ ಚಕ್ಕರ್ ಪಗರ್‌ಗೆ ಹಾಜರ್ ಎನ್ನುವ ಹಾಗೆ ಕೆಲಸ ಮಾಡುತ್ತಿದ್ದಾರೆ.

    ವಸತಿ ನಿಲಯದಲ್ಲಿ 6 ರಿಂದ 10ನೇ ತರಗತಿಯ 40ಕ್ಕೆ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಪ್ರತಿ ನಿತ್ಯ ಹಾಸ್ಟೆಲ್ ಬಾರದೇ ವಾರ್ಡನ್‌ ಮತ್ತು ಮುಖ್ಯ ಅಡುಗೆ ಸಹಾಯಕ ವಾರಕ್ಕೆ ಒಂದು, ಎರಡು ಬಾರಿ ಬಂದು ಸಹಿ ಮಾಡಿ ಹೋಗುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

    ಕೋಲೂರ ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಮತ್ತು ಸದಸ್ಯರು ಹಾಗೂ ಇತರೇ ಪಾಲಕರು ವಸತಿ ನಿಲಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಆವ್ಯವಸ್ಥೆ ಕಂಡು ಶಾಕ್ ಆಗಿದ್ದಾರೆ. ಇದನ್ನೂ ಓದಿ: 9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

    ಹಾಸ್ಟೆಲಿನಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆಯಿದೆ. ಸ್ನಾನ ಮಾಡುವ ಸ್ನಾನ ಗೃಹ, ಶೌಚಾಲಯಗಳು ಸ್ವಚ್ಛವಿಲ್ಲದೇ ವಾಸನೆ ಹೊಡೆಯುತ್ತಿದೆ. ಕಳಪೆ ಗುಣಮಟ್ಟದ ಆಹಾರ ಪದಾರ್ಥ ವಿತರಣೆ ಆಗುತ್ತಿದ್ದು, ಫ್ಯಾನ್‌ಗಳು ಕೆಟ್ಟು ನಿಂತಿವೆ. ವಿದ್ಯುತ್‌ ಹೋದ ಸಂದರ್ಭದಲ್ಲಿ ಆನ್ ಆಗಬೇಕಾದ ಯುಪಿಎಸ್‌ಸಿ ಹಾಳಾಗಿದೆ. ಹಾಸ್ಟೆಲ್ ಸುತ್ತಮುತ್ತ ಕಸ, ಮುಳ್ಳು ಕೊಂಪೆ ಬೆಳೆದಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ.

    ಮಕ್ಕಳ ಕಲಿಕೆಗೆ ಯಾವುದೇ ರೀತಿಯಲ್ಲಿ ಹಿನ್ನಡೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿ ವಸತಿ ನಿಲಯಕ್ಕೆ ವಾರ್ಡನ್‌ಗಳನ್ನು ನೇಮಕ ಮಾಡುತ್ತದೆ. ಆದರೆ ಈ ವಾರ್ಡನ್, ಅಡುಗೆ ಸಹಾಯಕರು ತಮಗೆ ತಿಳಿದಾಗ ಬಂದು ಸಹಿ ಮಾಡಿ ಹೋಗುತ್ತಾರೆ ಎಂದು ಸಾಮಾಜಿಕ ಹೋರಾಟಗಾರ ಪಾಂಡು ಆರೋಪಿಸಿದ್ದಾರೆ. ಇದನ್ನೂ ಓದಿ: ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

    ವಿದ್ಯಾರ್ಥಿಗಳು ಹಲವು ಬಾರಿ ವಸತಿ ನಿಲಯದ ಸಮಸ್ಯೆಗಳು ಮತ್ತು ಅನಾನುಕೂಲತೆಗಳ ಬಗ್ಗೆ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಗಡ್ಡದೇವರಮಠ ಅವರಿಗೆ ತಿಳಿಸಿದ್ದರೂ ವಾರ್ಡನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಗಮನಹರಿಸಿ ವಸತಿ ನಿಲಯ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

  • ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ವಾರ್ಡನ್, ತಾಲೂಕಾಧಿಕಾರಿ ವಿರುದ್ಧ ದೂರು ದಾಖಲು

    ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ವಾರ್ಡನ್, ತಾಲೂಕಾಧಿಕಾರಿ ವಿರುದ್ಧ ದೂರು ದಾಖಲು

    ರಾಯಚೂರು: ವಸತಿ ಗೃಹದಲ್ಲಿ (Hostel) ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ (Student) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು (Sindhanur) ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಇಂದು ನಡೆದಿದೆ.

    ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ (Second PUC) ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದುಕೊಂಡು ಓದುತ್ತಿದ್ದ. ಹಿರೇಹುಸೇನಪ್ಪ ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನಿಸಿದ್ದನು. ಅದಕ್ಕೆ ಆತನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಹೃದಯಾಘಾತ – ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಲಗಿದಲ್ಲೇ ಸಾವು!

    ವಸತಿ ನಿಲಯದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಸೇರಿ ಹಿರೇಹುಸೇನಪ್ಪನ ವಿರುದ್ಧ ಉಳಿದ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ಕಿರುಕುಳ ನೀಡಿ, ಜಾತಿನಿಂದನೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ – 11 ಮಂದಿ ಸಜೀವ ದಹನ

    ಮೃತ ವಿದ್ಯಾರ್ಥಿಯ ತಾಯಿ ಹುಸೆನಮ್ಮ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: Karnataka Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ? 1 ರೂ. ಹೋಗಿದ್ದು ಎಲ್ಲಿಗೆ?

  • ವಿದ್ಯಾರ್ಥಿಗಳಿಂದ ಮಲಗುಂಡಿ ಸ್ವಚ್ಛ ಪ್ರಕರಣ – ಐವರ ಬಂಧನ, ವಾರ್ಡನ್‌ಗೆ ಜಾಮೀನು

    ವಿದ್ಯಾರ್ಥಿಗಳಿಂದ ಮಲಗುಂಡಿ ಸ್ವಚ್ಛ ಪ್ರಕರಣ – ಐವರ ಬಂಧನ, ವಾರ್ಡನ್‌ಗೆ ಜಾಮೀನು

    ಕೋಲಾರ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ (Toilet Clean) ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆಯಂತೆ 5 ಜನ ಆರೋಪಿಗಳನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ.

    ಕೋಲಾರ (Kolar) ಜಿಲ್ಲೆಯ ಮಾಲೂರು ತಾಲೂಕು ಯಲವಳ್ಳಿ ಬಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಇದೇ ತಿಂಗಳ 17ರಂದು ಮಲಗುಂಡಿ ಸ್ವಚ್ಛಗೊಳಿಸಿ, ಮಕ್ಕಳ ಮೇಲೆ ದೌರ್ಜನ್ಯವೆಸಗಲಾಗಿತ್ತು. ಈ ಘಟನೆ ಬೆಳಕಿಗೆ ಬಂದ ಬಳಿಕ ಎಚ್ಚೆತ್ತ ಅಧಿಕಾರಿಗಳು ಎಲ್ಲಾ ಶಿಕ್ಷಕರು, ಸಿಬ್ಬಂದಿಯನ್ನು ವರ್ಗಾವಣೆ ಮಾಡಿ, 5 ಜನರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಇದನ್ನೂ ಓದಿ: ಮಹಿಳೆಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಲೂಟಿ- ಆರೋಪಿ ಅಂದರ್

    ಈ ಹಿಂದೆ ಪ್ರಾಂಶುಪಾಲೆ ಭಾರತಮ್ಮ, ಚಿತ್ರಕಲಾ ಶಿಕ್ಷಕ ಮುನಿಯಪ್ಪ, ಸಹ ಶಿಕ್ಷಕ ಅಭಿಷೇಕ್‌ನನ್ನು ಬಂಧಿಸಲಾಗಿತ್ತು. ಇಂದು ವಸತಿ ಶಾಲೆಯ ವಾರ್ಡನ್ ಮಂಜುನಾಥ್ ಹಾಗೂ ಡಿ ಗ್ರೂಪ್ ಸಿಬ್ಬಂದಿ ಕಲಾವತಿ ಎಂಬವರನ್ನು ಬಂಧಿಸಲಾಗಿದೆ. ವಸತಿ ಶಾಲೆಯ ವಿದ್ಯಾರ್ಥಿಗಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಹಿನ್ನೆಲೆ 5 ಜನರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಹಾಗೂ ಸಹಾಯಕ ನಿರ್ದೇಶಕ ಶಿವಕುಮಾರ್ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ವ್ಯಕ್ತಿಗೆ ಇರಿದಿದ್ದ ಚಾಕುವಿನಿಂದ್ಲೇ ಪೊಲೀಸರ ಮೇಲೆ ಹಲ್ಲೆಗೆ ಯತ್ನ- ರೌಡಿಶೀಟರ್ ಕಾಲಿಗೆ ಗುಂಡೇಟು

    ಪೋಕ್ಸೊ, ಜಾತಿ ನಿಂದನೆ ಹಾಗು ಮಲ ಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿ ಸ್ವಚ್ಛಗೊಳಿಸಿದ ಹಿನ್ನೆಲೆ ಮೂರು ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಅದರಂತೆ 5 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಸದ್ಯ ವಾರ್ಡನ್ (Wraden) ಮಂಜುನಾಥ್ ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸ್ತಿದ್ದ ಕಾರು ಅಪಘಾತ

  • ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ  ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ

    ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ

    ಬೆಂಗಳೂರು: ಕೆಲ ವಿದ್ಯಾರ್ಥಿನಿಯರಿಗೆ (Student) ಲೇಡಿ ವಾರ್ಡನ್ (Warden) ನಿತ್ಯ ಕಿರುಕುಳ ಕೊಡುತ್ತಿರುವ ಆರೋಪ ಬೆಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‍ನಲ್ಲಿ ಕೇಳಿಬಂದಿದೆ.

    ಬೆಂಗಳೂರಿನ (Bengaluru) ಆರ್‌ಆರ್ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‍ನಲ್ಲಿ ವಾರ್ಡನ್ ಟಾರ್ಚರ್‌ಗೆ ವಿದ್ಯಾರ್ಥಿನಿಯರು ಬೇಸತ್ತಿದ್ದಾರೆ. ಅಲ್ಲಿನ ವಾರ್ಡನ್, ರಾತ್ರಿ ಹೊತ್ತಲ್ಲಿ ವಿದ್ಯಾರ್ಥಿನಿಯರು (Student) ಓದ್ಕೊಳ್ಳುವ ಟೈಮ್‍ನಲ್ಲಿ ಲೈಟ್ ಆಫ್ ಮಾಡುತ್ತಾರೆ. ರಾತ್ರಿ 9 ಘಂಟೆಯಿಂದ 11 ಘಂಟೆಯ ತನಕ ಹಾಸ್ಟೆಲ್‍ಗೆ (Hostel) ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ವಿದ್ಯಾರ್ಥಿನಿಯರು ಮೊಬೈಲ್ ಟಾರ್ಚ್ ಆನ್ ಮಾಡಿಕೊಂಡು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರ ಈ ಆರೋಪಕ್ಕೆ ಸ್ಪಷ್ಟನೆ ಕೊಡದ ವಾರ್ಡನ್ ಹಾಸ್ಟೆಲ್‍ನಲ್ಲಿಲ್ಲ.

    ಈ ಹಾಸ್ಟೆಲ್‍ನಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಗಳಿದ್ದಾರೆ. ವಾರ್ಡನ್, ವಿದ್ಯಾರ್ಥಿನಿಗಳಿಂದಲೇ ಟಾಯ್ಲೆಟ್ ರೂಂ ಕ್ಲೀನ್ ಮಾಡಿಸ್ತಾರಂತೆ. ರೂಂ ಕ್ಲೀನ್ ಮಾಡಲ್ಲ ಅಂದ್ರೆ ಟಾರ್ಗೆಟ್ ಮಾಡಿ, ಟಾರ್ಚರ್ ನೀಡ್ತಾರೆ ಅಂತ ವಿದ್ಯಾರ್ಥಿನಿಗಳು ಆರೋಪಿಸಿದ್ದಾರೆ. ಇನ್ನೂ ಕಾಲೇಜು ಮುಗಿಸಿ ಹಾಸ್ಟೆಲ್‍ನಿಂದ ಹೊರ ಹೋಗುವಾಗ ವಾರ್ಡನ್‍ಗೆ ದುಬಾರಿ ಕೊಡುಗೆಗಳು ನೀಡಬೇಕಂತೆ. ಕಾಲೇಜು ಮುಗಿಸಿಕೊಂಡು, ಸಂಜೆ ಹೊತ್ತಲ್ಲಿ ಹಾಸ್ಟೆಲ್‍ಗೆ ಬರೋದು ಲೇಟಾದರೆ, ಇತರೆ ವಿದ್ಯಾರ್ಥಿನಿಗಳ ಮುಂದೆಯೇ ಅವಮಾನ ಮಾಡ್ತಾರೆ ಅಂತ ವಿದ್ಯಾರ್ಥಿನಿಗಳು ದೂರಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸೇರ್ತಾರಾ ಸುಮಲತಾ ಅಂಬರೀಶ್?

    ಘಟನೆಯ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೂ ವಿದ್ಯಾರ್ಥಿನಿಗಳು ತಂದಿದ್ದಾರೆ. ಆದರೆ ಇವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಕೆಲ ವಿದ್ಯಾರ್ಥಿನಿಯರು ಲೇಡಿ ವಾರ್ಡನ್ ಟಾರ್ಚರ್ ಬಗ್ಗೆ ಮಾತನಾಡಲು ಭಯಪಡುತ್ತಿದ್ದಾರೆ. ಇದನ್ನೂ ಓದಿ: ಪಂಚರತ್ನ ಯಾತ್ರೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ನಿಧನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೀದಿಗಿಳಿದು ಪ್ರತಿಭಟಿಸಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು!

    ಬೀದಿಗಿಳಿದು ಪ್ರತಿಭಟಿಸಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು!

    ಯಾದಗಿರಿ: ಜಿಲ್ಲೆಯ ಶಹಪುರ ತಾಲೂಕಿನ ಬೇವಿನಾಳ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ರಸ್ತೆಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ, ಸರಿಯಾದ ಊಟದ ವ್ಯವಸ್ಥೆ ಇಲ್ಲದೆ ಪಿಯುಸಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹೀಗಿದ್ದರೂ ವಾರ್ಡನ್ ಸುಮಮಂಗಲ ನಿರ್ಲಕ್ಷ್ಯ ಧೋರಣೆಯನ್ನು ತಾಳಿದ್ದಾರೆ. ಇದರಿಂದಾಗಿ ಬೇಸರಗೊಂಡ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲ್ನಡಿಗೆಯಲ್ಲಿ ಜಿಲ್ಲಾಕೇಂದ್ರಕ್ಕೆ ಬರಲು ಯತ್ನಿಸಿದ್ದಾರೆ.

    ವಿದ್ಯಾರ್ಥಿಗಳನ್ನು ರಸ್ತೆ ಮಧ್ಯೆಯೇ ಶಾಲಾ ಸಿಬ್ಬಂದಿ ತಡೆದ ಹಿನ್ನೆಲೆ ಶಹಪುರ ತಾಲೂಕಿನ ದೋರನಹಳ್ಳಿ ಬಳಿಯ ಮುಖ್ಯ ರಸ್ತೆಯಲ್ಲಿ ಧರಣಿ ಕೂರುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

    ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ತಮ್ಮ ಕಷ್ಟಗಳನ್ನು ಆಲಿಸುವವರಿಗೂ, ಪ್ರತಿಭಟನೆ ಕೈ ಬಿಡುವ ಮಾತೇ ಇಲ್ಲ ಅಂತ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

  • ವಾರ್ಡನ್‍ನಿಂದ ಹಲ್ಲೆ – 9 ವರ್ಷದ ಬಾಲಕ ಸಾವು

    ವಾರ್ಡನ್‍ನಿಂದ ಹಲ್ಲೆ – 9 ವರ್ಷದ ಬಾಲಕ ಸಾವು

    ಹಾವೇರಿ: ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಹಾಸ್ಟೆಲ್ ವಾರ್ಡನ್‍ನಿಂದ ಹಲ್ಲೆಗೆ ಒಳಗಾಗಿದ್ದ ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ.

    ಮೃತ ಬಾಲಕನನ್ನು ವಿಜಯ್ ಕುಮಾರ್ ಹಿರೇಮಠ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ವಿಜಯ್ ಕುಮಾರನನ್ನು ನಾಲ್ಕು ತಿಂಗಳ ಹಿಂದೆ ಹಾನಗಲ್ ಪಟ್ಟಣದ ಛಾತ್ರಾಲಯ ಎಂಬ ಹಾಸ್ಟೆಲ್ ಗೆ ಸೇರಿಸಲಾಗಿತ್ತು. ಸೆಪ್ಟೆಂಬರ್ 3 ರಂದು ವಾರ್ಡನ್ ಶ್ರವಣಕುಮಾರ್ ಪೆನ್ಸಿಲ್ ವಿಚಾರವಾಗಿ ಬಾಲಕನನ್ನು ಥಳಿಸಿದ್ದ ಎಂದು ದೂರಿನಲ್ಲಿ ದಾಖಲಾಗಿದೆ.

    ಹಲ್ಲೆಯಿಂದ ಜರ್ಜರಿತಗೊಂಡಿದ್ದ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ವಾರ್ಡನ್ ಬಾಲಕನ ಹೊಟ್ಟೆ ಭಾಗಕ್ಕೆ ಒದ್ದಿದ್ದ ಭಾಗ ಊದಿಕೊಂಡ ಕಾರಣ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ್ ಕುಮಾರ್ ಇವತ್ತು ಮೃತಪಟ್ಟಿದ್ದಾನೆ.

    ಬಾಲಕನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಮೃತ ವಿಜಯ್ ಕುಮಾರ್ ತಂದೆ ಅಕ್ಟೋಬರ್ 3 ರಂದು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐಪಿಸಿ 323 ಕಲಂನಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾದ ನಂತರ ವಾರ್ಡನ್ ಶ್ರವಣಕುಮಾರ್ ನಾಪತ್ತೆ ಆಗಿದ್ದಾನೆ. ಪೊಲೀಸರು ಆರೋಪಿ ವಾರ್ಡನ್ ಶ್ರವಣಕುಮಾರ್ ಬಂಧನಕ್ಕಾಗಿ ವಿಶೇಷ ಜಾಲ ಬೀಸಿದ್ದಾರೆ.

  • ಮೊಬೈಲ್ ಕದ್ದಿದಕ್ಕೆ ಬುದ್ಧಿವಾದ ಹೇಳಿದ ವಾರ್ಡನ್- ವಿದ್ಯಾರ್ಥಿನಿ ಆತ್ಮಹತ್ಯೆ

    ಮೊಬೈಲ್ ಕದ್ದಿದಕ್ಕೆ ಬುದ್ಧಿವಾದ ಹೇಳಿದ ವಾರ್ಡನ್- ವಿದ್ಯಾರ್ಥಿನಿ ಆತ್ಮಹತ್ಯೆ

    ಯಾದಗಿರಿ: ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಅರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮೃತ ಲಕ್ಷ್ಮಿ ಕಲಬುರಗಿಯ ಎನ್.ವಿ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದಳು. ಕಲಬುರಗಿಯ ಬಾಲಕಿಯರ ಮೆಟ್ರಿಕ್ ಪೂರ್ವ SCST ಹಾಸ್ಟೆಲ್ ನಲ್ಲಿ ವಾಸವಿದ್ದ ಲಕ್ಷ್ಮಿ, ಕಳೆದ ಒಂದು ವಾರದ ಹಿಂದೆ ತನ್ನ ಸ್ನೇಹಿತೆಯ ಮೊಬೈಲ್ ಕದ್ದು ಸಿಕ್ಕಿಹಾಕಿಕೊಂಡಿದ್ದಳು.

    ಈ ವಿಚಾರವಾಗಿ ಲಕ್ಷ್ಮಿಯನ್ನು ಕರೆದು ಹಾಸ್ಟೆಲ್ ವಾರ್ಡನ್ ಬುದ್ಧಿವಾದ ಹೇಳಿದ್ದರು. ಇದರಿಂದ ಕಳೆದ ಎರಡು ದಿನಗಳಿಂದ ಲಕ್ಷ್ಮಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗುತ್ತಿದೆ. ನಿನ್ನೆ ತನ್ನ ಸ್ವಂತ ಊರು ಅರಳಹಳ್ಳಿಗೆ ಲಕ್ಷ್ಮಿ ಬಂದಿದ್ದು, ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಬಿ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹಾಸ್ಟೆಲಿನಲ್ಲೇ ವಾರ್ಡನ್‍ನಿಂದ ಸಲಿಂಗ ಕಾಮಕ್ರಿಯೆ: ಪ್ರಕರಣ ದಾಖಲು

    ಹಾಸ್ಟೆಲಿನಲ್ಲೇ ವಾರ್ಡನ್‍ನಿಂದ ಸಲಿಂಗ ಕಾಮಕ್ರಿಯೆ: ಪ್ರಕರಣ ದಾಖಲು

    ವಿಜಯಪುರ: ಖಾಸಗಿ ವ್ಯಕ್ತಿ ಜೊತೆಗೆ ವಾರ್ಡನ್ ಹಾಸ್ಟೆಲಿನಲ್ಲೇ ಸಲಿಂಗ ಕಾಮಕ್ರಿಯೆ ನಡೆಸಿದ ಘಟನೆ ವಿಜಯಪುರದ ಇಂಡಿ ತಾಲೂಕಿನ ವಸತಿ ಶಾಲೆಯೊಂದರಲ್ಲಿ ನಡೆದಿದೆ.

    ಬಾಪು ಚವ್ಹಾಣ ಲೈಂಗಿಕ ಕ್ರಿಯೆ ನಡೆಸಿದ ವಾರ್ಡನ್. ಬಾಪು ಚವ್ಹಾಣ ಖಾಸಗಿ ವ್ಯಕ್ತಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದು, ಈ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದೇ ರೀತಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿಗಳಿಗೂ ಲೈಂಗಿಕ ಕಿರುಕುಳ ನಡೆಸಿರುವ ಆರೋಪ ಕೇಳಿ ಬಂದಿದೆ. ಸದ್ಯ ವಾರ್ಡನ್ ಮೇಲೆ ಸೂಕ್ತ ಕ್ರಮಕ್ಕೆ ನೊಂದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ನೊಂದ ವಿದ್ಯಾರ್ಥಿ, ವಾರ್ಡನ್ ರಾತ್ರಿ ಸುಮಾರು 1 ಗಂಟೆಗೆ ನಮ್ಮನ್ನು ರೂಂಗೆ ಕರೆದುಕೊಂಡು ಹೋಗುತ್ತಾನೆ. ನಮ್ಮ ನಿದ್ದೆಯನ್ನು ಹಾಳು ಮಾಡಿ ಆತನ ರೂಂ ಬಾಗಿಲು ಹಾಕಿ ಲೈಟ್ ಆಫ್ ಮಾಡುತ್ತಾನೆ. ಬಳಿಕ ನಮ್ಮ ದೇಹಕ್ಕೆ ಎಣ್ಣೆ ಹಚ್ಚಿ ಅಸಭ್ಯವಾಗಿ ವರ್ತಿಸುತ್ತಾನೆ. ಹೀಗಾಗಿ ಆತನಿಗೆ ಇಲ್ಲಿ ಕೆಲಸ ಮಾಡುವ ಅವಕಾಶವನ್ನು ನೀಡಬಾರದು ಎಂದು ತೋಡಿಕೊಂಡಿದ್ದಾನೆ.

    ಈ ಸಂಬಂಧ ಹಾಸ್ಟೇಲ್ ವಾರ್ಡನ್ ಬಿ.ಸಿ.ಚವ್ಹಾಣ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಇಚ್ಛೆಯಿಂದ ಗಾಯವನ್ನುಂಟು ಮಾಡುವುದು) ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

  • ಟಾಯ್ಲೆಟ್‍ನಲ್ಲಿ ಸ್ಯಾನಿಟರಿ ಪ್ಯಾಡ್ ಎಸೆತ – ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್ ವಜಾ

    ಟಾಯ್ಲೆಟ್‍ನಲ್ಲಿ ಸ್ಯಾನಿಟರಿ ಪ್ಯಾಡ್ ಎಸೆತ – ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್ ವಜಾ

    ಚಂಡೀಗಢ್: ಬಳಸಿದ ಸ್ಯಾನಿಟರಿ ಪ್ಯಾಡ್ ಶೌಚಾಲಯದಲ್ಲಿ ಹಾಕಿದ್ದಕ್ಕೆ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಆರೋಪದ ಮೇರೆಗೆ ಇಬ್ಬರು ವಾರ್ಡನ್ ಗಳನ್ನು ವಜಾ ಮಾಡಲಾಗಿದೆ.

    ಪಂಜಾಬಿನ ಬಟಿಂಡಾ ವಿಶ್ವವಿದ್ಯಾಲಯದ ಮಹಿಳಾ ಹಾಸ್ಟೇಲಿನ ಟಾಯ್ಲೆಟಿನಲ್ಲಿ ಸ್ಯಾನಿಟರಿ ಪ್ಯಾಡ್ ಯಾರೂ ಹಾಕಿದ್ದಾರೆ ಎನ್ನುವುದನ್ನು ಪರಿಶೀಲಿಸಲು ವಾರ್ಡನ್ 12 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದರು. ಇದನ್ನು ವಿರೋಧಿಸಿ 600ರಿಂದ 700 ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿನಿಯರು ಪ್ರತಿಭಟನೆಗೆ ಮಣಿದ ವಿವಿಯ ಆಡಳಿತ ಮಂಡಳಿ ಇಬ್ಬರು ವಾರ್ಡನ್‍ಗಳನ್ನು ಕೆಲಸದಿಂದ ವಜಾ ಮಾಡಿದೆ.

    ಮೊದಲು ಈ ಘಟನೆಯನ್ನು ಆಡಳಿತ ಮಂಡಳಿ ಅಷ್ಟು ಗಂಭಿರವಾಗಿ ತೆಗೆದುಕೊಂಡಿರಲ್ಲ. ಆದರೆ ವಿದ್ಯಾರ್ಥಿನಿಯರ ಪ್ರತಿಭಟನೆ ಜೋರಾಗುತ್ತಿದ್ದಂತೆ ಎಚ್ಚೆತ್ತ ಆಡಳಿತ ಮಂಡಳಿ ಇಬ್ಬರು ಸೆಕ್ಯೂರಿಟಿ ಗಾರ್ಡ್ ಹಾಗೂ ಇಬ್ಬರು ವಾರ್ಡನ್ ಗಳನ್ನು ಕೆಲಸದಿಂದ ಕಿತ್ತು ಹಾಕಿದೆ.

    ವಾರ್ಡನ್ ನಮಗೆ ಹಾಸ್ಟೆಲ್‍ನಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ. ಅವರು ನಮಗೆ ಹುಡುಗರ ಜೊತೆ ಮಾತನಾಡುವುದಕ್ಕೂ ಬಿಡುವುದಿಲ್ಲ. ಈಗ ಅವರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಜುಗರ ಆಗುವಂತೆ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದರು.