ಬಳ್ಳಾರಿ: ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ (Banner) ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ ಸಮುದಾಯದ (Valmiki Community) ಸದಸ್ಯರು ನಗರದ ಸಂಗಮ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ಜಯಂತಿ ಹಿನ್ನೆಲೆ ಮಹಾನಗರ ಪಾಲಿಕೆಯ (Ballari Municipal Corporation) ಪರವಾನಗಿ ಪಡೆದು ನಗರದ ಹಲವೆಡೆ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಆದರೆ ಬೆಳಗ್ಗೆ ಏಕಾಏಕಿ ನಗರದ 38 ಕಡೆಗಳಲ್ಲಿ ಹಾಕಲಾಗಿದ್ದ ಬ್ಯಾನರ್‌ಗಳನ್ನು ಕಿತ್ತು ಹಾಕಲಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಾತಿಗಣತಿಯಲ್ಲಿ ತಾಂತ್ರಿಕ ಸಮಸ್ಯೆ – ಹಿಂದೂ ವ್ಯಕ್ತಿಯ ಆಧಾರ್ ನಂಬರ್ ಹಾಕಿದ್ರೆ ಮುಸ್ಲಿಂ ಹೆಸರು!
ಅನುಮತಿ ಪಡೆದು ಬ್ಯಾನರ್ ಅವಳಡಿಕೆ ಮಾಡಲಾಗಿದ್ದರೂ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದ್ದಾರೆ. ಅಧಿಕಾರಿಗಳು ಶಾಸಕ ಭರತ್ ರೆಡ್ಡಿ ಸೂಚನೆ ಮೇರೆಗೆ ಅಧಿಕಾರಿಗಳು ಬ್ಯಾನರ್‌ಗಳನ್ನ ತೆರವು ಮಾಡಿದ್ದಾರೆ ಎಂದು ಆರೋಪಿಸಿದ ಮುಖಂಡರು, ಬ್ಯಾನರ್ ತೆಗೆದ ಅಧಿಕಾರಿಗಳನ್ನ ಕೂಡಲೇ ಸಸ್ಪಂಡ್ ಮಾಡುವಂತೆ ಆಗ್ರಹಿಸಿದರು.
ಘಟನಾ ಸ್ಥಳಕ್ಕೆ ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ , ಎಸ್‌ಪಿ ಶೋಭಾರಾಣಿ ದೌಡಾಯಿಸಿ, ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಅಧಿಕಾರಿಗಳ ಸಮ್ಮುಖದಲ್ಲೇ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕರಿಸಿ , ಪ್ರತ್ಯೇಕ ಜಯಂತಿ ಮಾಡಲು ಪ್ರತಿಭಟನಕಾರರು ನಿರ್ಧರಿಸಿದರು.
ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ (Tumakuru University) ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ (G Parameshwar) ಗುರುವಾರ ಭರವಸೆ ನೀಡಿದರು.
ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ (Valmiki Jayanthi) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು 5 ಸಾವಿರ ವರ್ಷಗಳ ಹಿಂದೆ ಹುಟ್ಟಿದ ವರ್ಣಾಶ್ರಮ ಪದ್ಧತಿಯಿಂದ ಈಗಲೂ ಶ್ರಮಿಕ ವರ್ಗದವರನ್ನು ಕೆಲಸದವರೆಂದು ಗುರುತಿಸುತ್ತಿರುವುದು ನಮ್ಮ ದೌರ್ಭಾಗ್ಯ. ದೇಶದಲ್ಲಿ ಶ್ರಮಿಕ ವರ್ಗ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಶೋಷಣೆ ನಿಂತಿಲ್ಲ. ಸಂವಿಧಾನದಲ್ಲಿ ಸಮಾನತೆ ಹಕ್ಕು ನೀಡಿದ್ದರೂ ಸಮಾಜದಲ್ಲಿ ಮೇಲ್ವರ್ಗ- ಕೆಳವರ್ಗ ಎಂಬ ಭೇದ ಸೃಷ್ಟಿಸಿ ಶೋಷಣೆ ಮುಂದುವರಿದಿದೆ ಎಂದು ವಿಷಾದಿಸಿದರು. ಇದನ್ನೂ ಓದಿ: ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು
ವ್ಯಕ್ತಿಯ ವ್ಯಕ್ತಿತ್ವವನ್ನು ಜಾತಿಯಿಂದ ಗುರುತಿಸುವುದು ನಿಂತಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಆಚರಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಸಂಡೂರು ಟಿಕೆಟ್ ಯಾರಿಗೆ? – ಬಿಜೆಪಿ, ಕಾಂಗ್ರೆಸ್‌ನಿಂದ ಲಾಬಿ ಜೋರು
ಸಾಮಾನ್ಯ ವ್ಯಕ್ತಿಯಾಗಿದ್ದ ರತ್ನಾಕರ ನಂತರ ಪರಿವರ್ತನೆ ಹೊಂದಿ ವಾಲ್ಮೀಕಿಯಾಗಿ 24,000 ಶ್ಲೋಕಗಳಿರುವ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ರಾಮಾಯಣ ಕೃತಿಯ ಮೂಲಕ ಮನುಷ್ಯ ಜೀವನವು ಸತ್ಯ, ಧರ್ಮದ ಆಧಾರದ ಮೇಲೆ ನಿಂತಿದೆ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾಋಷಿಯಾಗಿದ್ದಾರೆ. ನಮ್ಮಲ್ಲಿರುವ ದುಷ್ಟ ಗುಣಗಳನ್ನು ಸಂಹಾರ ಮಾಡಿ ಉತ್ತಮ ಗುಣ ಮೈಗೂಡಿಸಿಕೊಳ್ಳಬೇಕು ಎಂಬುದೇ ರಾಮಾಯಣದ ಸಾರವಾಗಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ 10ನೇ ತರಗತಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು. ಇದನ್ನೂ ಓದಿ: ಬೆಳಗಾವಿ ಉದ್ಯಮಿ ಹತ್ಯೆ – ಪತ್ನಿ ಸೇರಿ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್
ಬೆಂಗಳೂರು: ಶೋಷಿತ ಸಮುದಾಯಗಳ ಪರ ನಿಂತಿರುವ ಸಿದ್ದರಾಮಯ್ಯಗೆ (Siddaramaiah) ಅವರ ಕಷ್ಟದ ಸಮಯದಲ್ಲಿ ಶಾಸಕರು, ಸಚಿವರು, ಸಮುದಾಯಗಳು ಅವರ ಜೊತೆ ನಿಲ್ಲಬೇಕು. ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಸಚಿವ ಕೆಹೆಚ್ ಮುನಿಯಪ್ಪ (KH Muniyappa) ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ (Valmiki Jayanthi) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆದಾಗ ಒಳ್ಳೆ ಕೆಲಸ ಮಾಡಿದ್ದರು. ಪ್ರತಿ ತಾಲೂಕಿನಲ್ಲಿ ಹಾಸ್ಟೆಲ್ ಮಾಡಿದ್ದಾರೆ. ಪ್ರತಿ ಹೋಬಳಿಯಲ್ಲಿ ಎಸ್‌ಸಿ-ಎಸ್ಟಿ ಹಾಸ್ಟೆಲ್ ಕೋಲಾರ-ಚಿಕ್ಕಬಳ್ಳಾಪುರಲ್ಲಿ ಪ್ರಾರಂಭ ಮಾಡಿದ್ದರು ಎಂದರು. ಇದನ್ನೂ ಓದಿ: ತುಂತುರು ಮಳೆಗೆ ನೆನೆದಿದ್ದ ಮನೆಗೋಡೆ ಕುಸಿದು ವೃದ್ಧೆ ಸಾವು
ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ (Raichur VV) ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ (Maharshi Valmiki University) ಎಂದು ಹೆಸರು ಇಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಉಗ್ರಪ್ಪ, ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಪ್ರತಿ ವರ್ಷ 2-3 ಕೋಟಿ ಕೊಡುತ್ತಿರುವ ಹಣ ನಿಲ್ಲಿಸಿ. ಅದರಿಂದ ಏನು ಪ್ರಯೋಜನ ಆಗುತ್ತಿಲ್ಲ. ಹೀಗಾಗಿ ಮಠಕ್ಕೆ ಹಣ ಕೊಡುವ ಬದಲು ಸರ್ಕಾರ ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ಮೆಡಿಕಲ್ ಕಾಲೇಜು ಅಥವಾ ಎಂಜಿನಿಯರಿಂಗ್ ಕಾಲೇಜು ಪ್ರಾರಂಭ ಮಾಡಬೇಕು. ರಾಜ್ಯದಲ್ಲಿ ಈಗ ಇರುವ ಯಾವುದಾದರೂ ಒಂದು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡಬೇಕು. ಬೀದರ್-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮಹರ್ಷಿ ವಾಲ್ಮೀಕಿ ರಾಷ್ಟ್ರೀಯ ಹೆದ್ದಾರಿ ಎಂದು ನಾಮಕರಣ ಮಾಡಬೇಕು. ರಾಮಾಯಣದ ಪುಸ್ತಕಗಳನ್ನು ಎಲ್ಲಾ ಶಾಲೆಗಳಲ್ಲಿ ಇಡುವ ಕೆಲಸ ಸರ್ಕಾರ ಮಾಡಬೇಕು. ನಮ್ಮ ಸಮುದಾಯದ ಅನುದಾನ ಪ್ರತಿ ವರ್ಷ ಖರ್ಚಾಗಬೇಕು. ಇಲ್ಲದೆ ಹೋದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡಿದರು. ಇದನ್ನೂ ಓದಿ: ಹಾಲಿನ ದರ ಏರಿಕೆ ಆಗುತ್ತಾ? – ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?
ರಾಜನಹಳ್ಳಿ ಗುರುಪೀಠದ ಸ್ವಾಮೀಜಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಮಾತನಾಡಿ, ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರು ಇಡಬೇಕು. ಹಾವನೂರು ಹೆಸರಿನಲ್ಲಿ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್- ಎ13 ಆರೋಪಿ ದೀಪಕ್ ರಿಲೀಸ್
ಇಬ್ಬರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಹೆಸರು ಇಡುತ್ತೇವೆ. ಜೊತೆಗೆ ಪರಿಶಿಷ್ಟ ಪಂಗಡಗಳ ವಸತಿ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ನಾಮಕರಣ ಮಾಡೋದಾಗಿ ತಿಳಿಸಿದರು. ಇದನ್ನೂ ಓದಿ: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ: ಸೋಮಣ್ಣ
ಬೆಂಗಳೂರು: ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ ಎಂದು ಮಹರ್ಷಿ ವಾಲ್ಮೀಕಿ ಬಗೆಗಿನ ಸುಳ್ಳು ಮಾಹಿತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಐದು ಮಹನೀಯರಿಗೆ ಸಿಎಂ ವಾಲ್ಮೀಕಿ ಪ್ರಶಸ್ತಿ ವಿತರಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ (Valmiki Jayanti) ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಅಂತಾ ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಜಯಂತಿ; ಮಹರ್ಷಿಗಳ ಪ್ರತಿಮೆಗೆ ಸಿಎಂ ಪುಷ್ಪಾರ್ಚನೆ
ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು. ರಾಮನ ಮಕ್ಕಳಾದ ಲವ-ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.
SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಅಂತಾ ತಿಳಿಸಿದರು. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ. ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಅಂತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: RSS ಅಂದ್ರೆ ‘ರೂಮರ್ಸ್ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ
ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು.
ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಅಂತಾ ತಿಳಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ರಾಜಣ್ಣ, ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿ ಹಲವರು ಭಾಗಿಯಾಗಿದ್ದರು.
ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು (Valmiki Award 2024) ಘೋಷಣೆ ಮಾಡಿದ್ದು, ಐವರು ಸಾಧಕರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಗುರುವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡಲು ಕೆ. ಹೆಚ್.ಮ್ಲಲೇಶಪ್ಪ, ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಗಣ್ಯರನ್ನು ಗುರುತಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದನ್ನೂ ಓದಿ: Channapatna By Election| ಕಾದು ನೋಡುವ ತಂತ್ರಕ್ಕೆ ಮುಂದಾದ ಯೋಗೇಶ್ವರ್
– ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ದುಷ್ಕೃತ್ಯ
– ಎಂಟು ಮಂದಿಯಿಂದ ಓರ್ವನ ಹತ್ಯೆ
– ಅಳಿಯನ ಮೇಲಿನ ಕೋಪಕ್ಕೆ ಮಾವ ಬಲಿ
ಬಾಗಲಕೋಟೆ: ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ಯುವಕನ ಕಾಲು ತುಳಿದ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಿಮ್ಮ ಅಳಿಯ ಕಾಲು ತುಳಿದ ಎಂದು ನೆಪವಿಟ್ಟುಕೊಂಡು ಜಗಳಕ್ಕಿಳಿದ 8 ಮಂದಿ ದುಷ್ಕರ್ಮಿಗಳು ಕೆಎಸ್ಆರ್‌ಟಿಸಿ ಚಾಲಕರ ಎದೆಗೆ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ.
ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಚಾಲಕ ಶಿವಪ್ಪ ಪೂಜಾರಿ(43) ಕೊಲೆಯಾದ ದುರ್ದೈವಿ. ಶೇಖರಪ್ಪ ಪೂಜಾರಿ, ಗ್ಯಾನೆಪ್ಪ ಪೂಜಾರಿ, ಶಿವಪ್ಪ ಯಲ್ಲಪ್ಪ ಇದ್ದಲಗಿ, ಮುತ್ತಪ್ಪ ಪೂಜಾರಿ, ಶ್ರೀಶೈಲ್ ಪೂಜಾರಿ ಸೇರಿದಂತೆ 8 ಜನರು ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಕೇವಲ ಕಾಲು ತುಳಿದ ಎಂಬ ಕಾರಣವನ್ನಿಟ್ಟುಕೊಂಡು ಶುರುವಾದ ಜಗಳ, ಮಾರಾಮಾರಿಗೆ ತಿರುಗಿ ಕೊನೆಗೆ 8 ಜನರು ಸೇರಿ ಶಿವಪ್ಪ ಅವರನ್ನು ಕೊಲೆ ಮಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಶೈಲಿಯಲ್ಲಿ ಯುವಕನ ಕೊಲೆಗೆ ಸಂಚು – ಕೈಗೆ ಚಾಕು ಇರಿತ
ಸೋಮವಾರ ರಾತ್ರಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಮೆರವಣಿಗೆ ವೇಳೆ ಶಿವಪ್ಪ ಅವರ ಅಳಿಯ ಅಯ್ಯಪ್ಪ ಪೂಜಾರಿ ಹಾಗೂ ಕೆಲ ಯುವಕರು ಕುಣಿಯುತ್ತಿದ್ದರು. ಈ ವೇಳೆ ಗ್ಯಾನಪ್ಪಗೆ ಅಯ್ಯಪ್ಪ ಅವರ ಕಾಲು ಬಡಿದಿತ್ತು. ಇಷ್ಟಕ್ಕೆ ಸಿಟ್ಟಿಗೆದ್ದ ಗ್ಯಾನಪ್ಪ ಅಯ್ಯಪ್ಪ ಅವರ ಜೊತೆ ಜಗಳಕ್ಕೆ ನಿಂತುಕೊಂಡನು. ಆದರೆ ಅಲ್ಲಿದ್ದ ಹಿರಿಯರು ಇಬ್ಬರನ್ನೂ ಸಮಾಧಾನ ಮಾಡಿ ಕಳುಹಿಸಿದ್ದರು. ಇದನ್ನೂ ಓದಿ:ತುಂಬು ಗರ್ಭಿಣಿಗೆ ವರದಕ್ಷಿಣೆ ಕಿರುಕುಳ-ಪ್ರಶ್ನಿಸಿದ್ದಕ್ಕೆ ಅತ್ತೆ ಮೇಲೆ ಲಾಂಗ್ ಅಟ್ಯಾಕ್
ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾನಪ್ಪ, ನಿಮ್ಮ ಅಳಿಯನಿಗೆ ಬುದ್ಧಿ ಹೇಳು ಎಂದು ಶಿವಪ್ಪ ಅವರ ಜೊತೆ ಮಾತುಕತೆ ಶುರುಮಾಡಿದ್ದನು. ಆಗ ಮಾತುಕತೆ ಜಗಳಕ್ಕೆ ತಿರುಗಿ, ಮಾರಾಮಾರಿಯಾಗಿ ಕೊನೆಗೆ ಶಿವಪ್ಪ ಕೊಲೆಯಾಗಿದ್ದಾರೆ. ಜಗಳದಲ್ಲಿ ಅಳಿಯನ ಪರ ಮಾತಾಡೋಕೆ ಬಂದ ಶಿವಪ್ಪರನ್ನು 8 ಜನ ಸೇರಿ ಕೊಲೆ ಮಾಡಿದ್ದಾರೆ. ಕಟ್ಟಿಗೆಗಳಿಂದ ಹೊಡೆದು, ಕುಡಗೋಲಿನಿಂದ ಶಿವಪ್ಪನ ಎದೆಗೆ ಕೊಚ್ಚಿ ಕೊಲೆಗೈದಿದ್ದಾರೆ. ಇದನ್ನೂ ಓದಿ:ಪಬ್‍ಜಿ ಕೊಲೆ ಪ್ರಕರಣ – ತರಕಾರಿ ಕತ್ತರಿಸಿದಂತೆ ತಂದೆಯ ರುಂಡ, ಕಾಲು ಕತ್ತರಿಸಿದ ಮಗ
ಸದ್ಯ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 8 ಮಂದಿ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಸ್ವತಃ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಹೌದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲು ಶಿಫಾರಸ್ಸು ಮಾಡಿತ್ತು. ಹೀಗಾಗಿ ಸಮಿತಿ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಮಾಜಿ ಪ್ರಧಾನಿಯವರ ಹೆಸರನ್ನು ಅಂತಿಮಗೊಳಿಸಿತ್ತು.
ಬುಧವಾರ ವಿಧಾನಸೌಧದಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲಾ ಸಾಧಕರಿಗೂ ಖುದ್ದು ಸಿಎಂ ಕುಮಾರಸ್ವಾಮಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಪ್ರಶಸ್ತಿ ಹಾಗೂ ಗೌರವ ಪಡೆದುಕೊಳ್ಳಲಿದ್ದಾರೆ.
ಸಾಮಾನ್ಯವಾಗಿ ತಂದೆಯಿಂದ ಪುತ್ರನಿಗೆ ಪ್ರಶಸ್ತಿ ಸ್ವೀಕರಿಸುವುದನ್ನು ಕಾಣುತ್ತೇವೆ. ಆದರೆ ಬುಧವಾರ ನಡೆಯಲಿರುವ ಸಮಾರಂಭದಲ್ಲಿ ಪುತ್ರನ ಕೈಯಿಂದ ತಂದೆಯೊಬ್ಬರು ಪ್ರಶಸ್ತಿ ಸ್ವೀಕರಿಸುವ ಮೂಲಕ ವಿಶೇಷ ಹಾಗೂ ಅಪರೂಪದ ಸನ್ನಿವೇಶಕ್ಕೆ ವಿಧಾನಸೌದ ಸಜ್ಜಾಗಿದೆ.
ಬೆಂಗಳೂರು: ವಾಲ್ಮೀಕಿ ಜಯಂತಿ ಆಚರಣೆ ಜಾರಿಗೆ ತಂದಿದ್ದು ನಾವು ಆದರೆ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ನನ್ನನ್ನೇ ಆಹ್ವಾನಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನವರ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಾವು ವಾಲ್ಮೀಕಿ ಜಯಂತಿ ಆಚರಣೆ ಜಾರಿಗೆ ತಂದು ಸರ್ಕಾರಿ ರಜೆ ಘೋಷಿಸಿದ್ದೇವೆ. ಆದರೆ ಇಂದು ಶಾಸಕರ ಭವನದ ಆವರಣದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ. ನಾನು ಸಮಾರಂಭಕ್ಕೆ ಬಂದ್ರೆ ಜನ ಜಯಘೋಷ ಹಾಕಲಿದ್ದಾರೆ ಎನ್ನುವ ಭಯದಿಂದ ನನ್ನನ್ನು ಆಹ್ವಾನಿಸಿಲ್ಲ ಎಂದು ಸಿದ್ದರಾಮಯ್ಯನವರ ವಿರುದ್ಧ ದೂರಿದರು.
ಐಟಿ ಅಧಿಕಾರಿಗಳು ಭಯ ಬೀಳಬೇಕಿಲ್ಲ, ಎಸಿಬಿ ಮೂಲಕ ಎಲ್ಲರನ್ನೂ ಭಯ ಬೀಳಿಸುವ ಕೆಲಸಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಎಸಿಬಿ ಸಿದ್ದರಾಮಯ್ಯನವರ ರಕ್ಷಣಾ ದಳ. ಅದು ಸಿಎಂ, ಜಾರ್ಜ್ ಸೇರಿದಂತೆ ಇತರರ ಭ್ರಷ್ಟಾಚಾರದ ರಕ್ಷಣೆಗೆ ನಿಂತಿದೆ. ಎಸಿಬಿ ಭ್ರಷ್ಟಾಚಾರ ತಡೆಯುವ ದಳ ಅಲ್ಲ, ಲೂಟಿಯ ರಕ್ಷಣೆಗೆ ಇರುವ ದಳ. ಎಸಿಬಿ ಅಸ್ತ್ರ ಪ್ರಯೋಗಕ್ಕೆ ಐಟಿ ಅಧಿಕಾರಿಗಳು ಬಗ್ಗುವುದಿಲ್ಲ. ಅಧಿಕಾರಿಗಳ ಜತೆ ನಾವು ಇರುತ್ತೇವೆ. ಇವೆಲ್ಲವನ್ನೂ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇವೆಂದು ಸಿದ್ದರಾಮಯ್ಯ ವಿರುದ್ಧ ಬಿಎಸ್‍ವೈ ಕೆಂಡಕಾರಿದರು.
ಮೂರು ದಿವಸಕ್ಕೊಮ್ಮೆ ಒಂದೊಂದು ಹಗರಣ ಬಯಲಿಗೆ ಎಳೆಯುತ್ತೇವೆ. ಶೀಘ್ರದಲ್ಲೇ ಬಿಜೆ ಪುಟ್ಟಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ಹಗರಣವೊಂದನ್ನ ಬಯಲಿಗೆಳೆಯಲಿದ್ದಾರೆ ಎಂದು ಬಿಎಸ್‍ವೈ ತಿಳಿಸಿದರು.
ಸಿಎಂ ರೈತರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ರೈತರಿಗೆ ಹಣ ಬಿಡುಗಡೆ ಆಗಿಲ್ಲ ಅಂತ ಸ್ವತಃ ಕಾಗೋಡು ತಿಮ್ಮಪ್ಪನವರೇ ಹೇಳಿದ್ದಾರೆ. ಸಾಲಮನ್ನಾ ಮಾಡಿ 100 ದಿನ ಆದರೂ ರೈತರ ಸಾಲದ ಹಣ ಸಹಕಾರಿ ಬ್ಯಾಂಕ್‍ಗಳಿಗೆ ತಲುಪಿಲ್ಲ. ಅದಕ್ಕೆ ಸಹಕಾರಿ ಸಂಘಗಳು ಬೀದಿಗೆ ಬರುವಂತೆ ಆಗಿದೆ. ರೈತರಿಗೆ ಮತ್ತೆ ಸಾಲ ಕೊಡುತ್ತಿಲ್ಲ, ಇದರಿಂದ ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಸಾಲಮನ್ನಾ ಅಂತ ಸಿಎಂ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ರೈತರಿಗೆ ಬಿಡಿಗಾಸು ಹೋಗಿಲ್ಲ. ತಕ್ಷಣ ಸಿಎಂ ರೈತರ ಖಾತೆಗೆ ಹಣ ಬಿಡುಗಡೆ ಮಾಡಬೇಕು ಎಂದು ಬಿಎಸ್‍ವೈ ಆಗ್ರಹಿಸಿದರು.
ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳು. ಈ ಶುಭ ದಿನದಂದು ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಅನಾವರಣ ಮಾಡಲಿದ್ದೇನೆ @siddaramaiahpic.twitter.com/ozjSlyOKYK
ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿಗಳು ಮಾಜಿ ಸಚಿವ ತಿಪ್ಪೇಸ್ವಾಮಿ ಅವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು pic.twitter.com/l4LNRS65xk