Tag: ವಾಲ್ಮೀಕಿ ಸಮುದಾಯ

  • ರಾಯಚೂರು | ರಮೇಶ್ ಕತ್ತಿ ವಿರುದ್ಧ ದೂರು ಪಡೆಯಲು ನಿರಾಕರಣೆ – ಪೊಲೀಸ್ ಠಾಣೆ ಎದುರು ಹೈಡ್ರಾಮಾ

    ರಾಯಚೂರು | ರಮೇಶ್ ಕತ್ತಿ ವಿರುದ್ಧ ದೂರು ಪಡೆಯಲು ನಿರಾಕರಣೆ – ಪೊಲೀಸ್ ಠಾಣೆ ಎದುರು ಹೈಡ್ರಾಮಾ

    ರಾಯಚೂರು: ವಾಲ್ಮೀಕಿ ಸಮುದಾಯದ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ (Ramesh Katti) ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದು, ರಾಯಚೂರಿನ (Raichuru) ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.

    ರಾಯಚೂರು, ಸಿರವಾರ, ದೇವದುರ್ಗ, ಸಿಂಧನೂರು, ಮಸ್ಕಿ ಪೊಲೀಸ್ ಠಾಣೆಯಲ್ಲಿ ವಾಲ್ಮೀಕಿ ಸಮುದಾಯ ಮುಖಂಡರು ದೂರು ನೀಡಿದ್ದಾರೆ. ಆದರೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದ ವೇಳೆ ದೊಡ್ಡ ಹೈಡ್ರಾಮಾ ನಡೆದಿದೆ.ಇದನ್ನೂ ಓದಿ: 21 ವರ್ಷಗಳ ಹಿಂದಿನ ದರೋಡೆ ಕೇಸ್‌ – ನಾಮಪತ್ರ ಸಲ್ಲಿಸಿದ ಮರುಕ್ಷಣವೇ ಆರ್‌ಜೆಡಿ ಅಭ್ಯರ್ಥಿ ಅರೆಸ್ಟ್‌

    ರಮೇಶ್ ಕತ್ತಿ ವಿರುದ್ಧ ದೂರು ಪಡೆಯದ ಹಿನ್ನೆಲೆ ಹೆಡ್ ಕಾನ್ಸಟೇಬಲ್ ಎನ್.ಶ್ರೀನಿವಾಸ್ ಹಾಗೂ ದೂರುದಾರರ ನಡುವೆ ವಾಗ್ವಾದ ನಡೆದಿದೆ. ಪೊಲೀಸರ ವರ್ತನೆ ಖಂಡಿಸಿ ವಾಲ್ಮೀಕಿ ಸಮುದಾಯದ ಮುಖಂಡರು, ಯುವಕರು ದೇವದುರ್ಗ ಪೊಲೀಸ್ ಠಾಣೆ ಆವರಣದಲ್ಲಿ ಹೆಡ್ ಕಾನ್ಸಟೇಬಲ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಪೊಲೀಸರು ದೂರು ಪಡೆದಿದ್ದಾರೆ.ಇದನ್ನೂ ಓದಿ: ಪಾಕ್‌ನಲ್ಲಿ 4.7 ತೀವ್ರತೆಯ ಭೂಕಂಪ – ಮೂರು ದಿನಗಳಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ

  • ಸಿದ್ದರಾಮಯ್ಯ, ಹೆಚ್‍ಡಿಕೆಗೆ RSS  ಸಂಸ್ಕಾರ ಗೊತ್ತಿಲ್ಲ: ಶ್ರೀರಾಮುಲು

    ಸಿದ್ದರಾಮಯ್ಯ, ಹೆಚ್‍ಡಿಕೆಗೆ RSS ಸಂಸ್ಕಾರ ಗೊತ್ತಿಲ್ಲ: ಶ್ರೀರಾಮುಲು

    – ಪಂಜಾಬ್ ನಲ್ಲಿಯೂ ಸಿದ್ದು ಇದ್ದಾನೆ, ಇಲ್ಲಿಯೂ ಸಿದ್ದು ಇದ್ದಾನೆ

    ರಾಯಚೂರು: ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿಗೆ ಆರ್‌ಎಸ್‌ಎಸ್ ಬಗ್ಗೆ ಗೊತ್ತಿಲ್ಲ. ಆರ್‌ಎಸ್‌ಎಸ್ ದೇಶ ಕಟ್ಟುವ ಕೆಲಸ ಮಾಡುತ್ತಿದೆ ಎಂದು ಸಾರಿಗೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಶ್ರೀ ರಾಮುಲು ವಿರೋಧ ವ್ಯಕ್ತಪಡಿಸಿದರು.

    ರಾಯಚೂರು ಜಿಲ್ಲಾ ಪ್ರವಾಸದಲ್ಲಿರುವ ಶ್ರೀರಾಮುಲು ಆರ್‌ಎಸ್‌ಎಸ್ ಟೀಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮಾಜಿ ಪ್ರಧಾನಿ ದೇವೇಗೌಡರು ಆರ್‌ಎಸ್‌ಎಸ್ ಬಗ್ಗೆ ಹೊಗಳುತ್ತಾರೆ. ಕಾಂಗ್ರೆಸ್ ಸರ್ಕಾರ ಏನಾದರೂ ಅಧಿಕಾರಕ್ಕೆ ಬಂದಿದ್ರೆ ತಾಲಿಬಾನ್ ನಲ್ಲಿ ಆಗುತ್ತಿದ್ದ ಪರಿಸ್ಥಿತಿ ರಾಜ್ಯದಲ್ಲಿಯೂ ಆಗುತ್ತಿತ್ತು. ಈಗ ಆರ್‌ಎಸ್‌ಎಸ್ ಇರುವ ಕಾರಣ, ಆರ್‍ಎಸ್‍ಎಸ್ ಸಂಸ್ಕøತಿ, ದೇಶ ಭಕ್ತಿ ಇರುವ ಕಾರಣ ಭಾರತ ಸುರಕ್ಷಿತವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿ ಮೇಲೆ ಅನುಮಾನ

    ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರ ಮೇಲೆ ಐಟಿ ದಾಳಿ ವಿಚಾರದ ಬಗ್ಗೆ ಮಾತನಾಡಿದ ಅವರು, ಐಟಿ ದಾಳಿ ಆಗಿರುವುದು ಹೊಸದೇನು ಅಲ್ಲ. ಇಂದು ಅವರ ಮೇಲೆ ಆಗಿದೆ, ನಾಳೆ ಇನ್ನೊಬ್ಬರ ಮೇಲೆ ಆಗುತ್ತೆ ಎಂದರು.

    ಬಿಜೆಪಿ ಕೊಲೆಗಡುಕ ಸರ್ಕಾರ ಅನ್ನೋ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ಅಧಿಕಾರಕ್ಕಾಗಿ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಪಂಜಾಬ್ ಮಾದರಿಯಲ್ಲಿ ಕಾಂಗ್ರೆಸ್ ಮಾಡಲು ಹೊರಟಿದೆ ಎಂದು ಆರೋಪಿಸಿದರು.

    ಪಂಜಾಬ್ ನಲ್ಲಿಯೂ ಸಿದ್ದು ಇದ್ದಾನೆ, ಇಲ್ಲಿಯೂ ಸಿದ್ದು ಇದ್ದಾನೆ. ಪಂಜಾಬ್ ನಲ್ಲಿಯೂ ಕ್ಯಾಪ್ಟನ್ ಇದ್ದಾನೆ. ರಾಜ್ಯದಲ್ಲಿ ಸಿದ್ದು ಕ್ಯಾಪ್ಟನ್. ಪಂಜಾಬ್ ನಲ್ಲಿ ದಲಿತ ಸಿಎಂ ಆಗಿದ್ದಾರೆ, ರಾಜ್ಯದಲ್ಲಿಯೂ ದಲಿತ ಸಿಎಂ ಕೂಗು ಇದೆ. ಕಾಂಗ್ರೆಸ್ ನಲ್ಲಿ ಸಿಎಂಗಾಗಿ ಮೂರು ಸಮುದಾಯಗಳು ಕೂಗು ಇದೆ. ಒಂದು ದಲಿತ, ಕುರುಬ ಹಾಗೂ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಒಡೆದು ಮೂರು ಬಾಗಿಲು ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

    ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ಬಗ್ಗೆ ನಾಗಮೋಹನ್ ದಾಸ್ ವರದಿ ಸರ್ಕಾರಕ್ಕೆ ಕೊಟ್ಟಿದ್ದಾರೆ. ಹಲವು ಸಮುದಾಯಗಳು ಹೋರಾಟ ನಡೆಸಿವೆ. ನಮ್ಮ ಬೇಡಿಕೆ ಹಳೆಯ ಬೇಡಿಕೆ ಆಗಿದೆ. ಅದಷ್ಟು ಶ್ರೀಘ್ರದಲ್ಲಿ ವರದಿ ತರಿಸಿಕೊಂಡು ಶೇ.7.5 ಮೀಸಲಾತಿ ನೀಡಲು ಯತ್ನಿಸುವೆ. ನಮ್ಮ ಸರ್ಕಾರ ಪ್ರತ್ಯೇಕ ಸಚಿವಾಲಯ ಮಾಡಿದೆ. ನಮ್ಮ ಸರ್ಕಾರವೇ ವಾಲ್ಮೀಕಿ ಜಯಂತಿ ಆಚರಣೆ ಶುರು ಮಾಡಿದ್ದು. ಶೇ.7.5 ಮೀಸಲಾತಿಗೆ ಕೆಲ ಕಾನೂನು ತೊಡಕು ಇವೆ. ಕಾನೂನು ತೊಡಕು ಸರಿಪಡಿಸಿ ಶೇ.7.5 ಮೀಸಲಾತಿಗೆ ನಮ್ಮ ಸರ್ಕಾರ ಬದ್ಧ ಎಂದು ತಿಳಿಸಿದರು.

    RSS ಪರ ಹಾಗೂ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಗಳಿಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ

  • ಕ್ಯಾಬಿನೆಟ್ ಸಭೆ ಕರೆದು ಶೀಘ್ರವೇ ವಾಲ್ಮೀಕಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ: ಸಿಎಂ

    ಕ್ಯಾಬಿನೆಟ್ ಸಭೆ ಕರೆದು ಶೀಘ್ರವೇ ವಾಲ್ಮೀಕಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ: ಸಿಎಂ

    ದಾವಣಗೆರೆ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರವೇ ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

    ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ತಮ್ಮ ಮನಸ್ಸು, ಶ್ರೀಗಳ ಮಾತನ್ನು ಅರ್ಥೈಸಿಕೊಳ್ಳಲು ಆಗಮಿಸಿದ್ದೇನೆ. ಅವರ ಆಶಯ ಪೂರೈಸೋದು ನಮ್ಮ ಕರ್ತವ್ಯ. ಬಹುದಿನಗಳ ಬೇಡಿಕೆಯಾಗಿರುವ ಎಸ್‍ಟಿ ಮೀಸಲಾತಿ ಪ್ರಮಾಣದ ಹೆಚ್ಚಳದ ಕುರಿತು ವಾಲ್ಮೀಕಿ ಸ್ವಾಮೀಜಿಗಳಿಗೆ ಸತ್ಯಾಗ್ರಹ, ಹೋರಾಟಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿ ಮೀಸಲಾತಿ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

    ಈಗಾಗಲೇ ನಾಗಮೋಹನ್ ದಾಸ್ ವರದಿ ಸರ್ಕಾರದ ಕೈ ಸೇರಿದೆ. ವರದಿಯನ್ನು ಜಾರಿಗೆ ತರುತ್ತೇವೆ. ಈ ಬಗ್ಗೆ ಸ್ವಾಮೀಜಿ ಯಾವುದೇ ಅತಂಕ ಪಡುವುದು ಬೇಡ, ಹೋರಾಟ ಮಾಡುವುದು ಸಹ ಬೇಡ ಎಂದು ತಿಳಿಸಿದರು. ಭಾಷಣ ಮುಗಿಯುತ್ತಿದ್ದಂತೆ ಸಿಎಂ ಯಡಿಯೂರಪ್ಪ ವೇದಿಕೆಯಿಂದ ಹೊರಟರು.

    ಜಾತ್ರೆಯಲ್ಲಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಪ್ರಸನ್ನನಂದಪುರಿ ಸ್ವಾಮೀಜಿ, ಸಚಿವರಾದ ಶ್ರೀರಾಮುಲು, ರಮೇಶ್ ಜಾರಕಿಹೊಳಿ, ಆನಂದಸಿಂಗ್, ಭೈರತಿ ಬಸವರಾಜ್, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ತುಕಾರಾಂ, ಜಿ.ಟಿ.ದೇವೇಗೌಡ, ಶಾಸಕರಾದ ರೇಣುಕಾಚಾರ್ಯ, ರಾಮಚಂದ್ರ, ಸಂಸದ ಜಿ.ಎಂ.ಸಿದ್ದೇಶ್ ಭಾಗಿಯಾಗಿದ್ದರು.

  • ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಶ್ರೀ, ಸಚಿವ ಶ್ರೀರಾಮುಲು ಖಡಕ್ ವಾರ್ನಿಂಗ್

    ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಶ್ರೀ, ಸಚಿವ ಶ್ರೀರಾಮುಲು ಖಡಕ್ ವಾರ್ನಿಂಗ್

    ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಶೇಕಡ 7.5 ಮೀಸಲಾತಿ ನೀಡಬೇಕು. ಅದು ಆಗದಿದ್ದರೇ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಸಚಿವ ಬಿ.ಶ್ರೀರಾಮುಲು ನೀಡಿದ್ದಾರೆ. ಸಚಿವರ ಜೊತೆ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಸಹ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾತಾನಾಡಿದ ಶ್ರೀಗಳು, ನಮ್ಮ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಆಗಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ತಿಂಗಳಲ್ಲಿ ವರದಿ ನೀಡಬೇಕು ಎಂದು ಕೇಳಿಕೊಂಡಿದ್ದೇವೆ. ಈ ವಿಚಾರವಾಗಿ ಇದೇ ಹತ್ತರೊಳಗೆ ವಾಲ್ಮೀಕಿ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿ ಮೀಸಲಾತಿ ಬಗ್ಗೆ ಚರ್ಚೆ ಮಾಡಲಾಗುವುದು. ಶ್ರೀಗಳ ಒಂದು ಮಾತು ಹೇಳಿದ್ರೆ ರಾಗಿಕಾಳಿನಷ್ಟು ನಾವು ಮಾತನ್ನ ತಗೆದು ಹಾಕಲ್ಲ. ಯಾವುದೇ ತ್ಯಾಗಕ್ಕೆ ಸಿದ್ದ ಎಂದು ಶ್ರೀರಾಮುಲು ಪರೋಕ್ಷವಾಗಿ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಾವು ಹೇಳುವುದು ಪಕ್ಷದಲ್ಲಿ ನಡೆಯುವುದಿಲ್ಲ, ನಾನು ಅಸಹಾಯಕ – ಶ್ರೀರಾಮುಲು

    ಇದೇ ಸಂದರ್ಭದಲ್ಲಿ ಮಾತನಾಡಿದ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಶ್ರೀಗಳು, ರಾಜ್ಯದಲ್ಲಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಸಂಘಟನೆಯಾಗಿದೆ. ಮಠದ ಆವರಣದಲ್ಲಿ ಎರಡನೇ ವರ್ಷದ ವಾಲ್ಮೀಕಿ ಜಾತ್ರೆಯನ್ನು ಮಾಡಲು ನಿರ್ಧರಿಸಿದ್ದೇವೆ. ವಾಲ್ಮೀಕಿ ಜಾತ್ರೆಯ ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ಶ್ರೀರಾಮುಲು ವಹಿಸಿಕೊಂಡಿದ್ದು, ಈ ವಾಲ್ಮೀಕಿ ಜಾತ್ರೆಯೊಳಗೆ ಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕು. ಮುಖ್ಯಮಂತ್ರಿಗಳ ಬಗ್ಗೆ ಅಪಾರವಾದ ನಂಬಿಕೆ ಇದೆ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎನ್ನುವ ಭರವಸೆ ಇದೆ. ವಾಲ್ಮೀಕಿ ಜಾತ್ರೆಯೊಳಗೆ ಏನಾದ್ರು ಮೀಸಲಾತಿ ಬಿಡುಗಡೆ ಮಾಡಲಿಲ್ಲ ಎಂದರೆ ಹತ್ತನೇ ತಾರೀಖು ನಂತರ ಎಲ್ಲಾ ಪಕ್ಷದ ವಾಲ್ಮೀಕಿ ಸಮಾಜದ ಶಾಸಕರ, ಸಚಿವರ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ. ಈ ನಿರ್ಧಾರ ಅತ್ಯಂತ ಕಠೋರವಾಗಿರುತ್ತೆ ಎಂದು ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಶ್ರೀಗಳು ಖಡಕ್ ಎಚ್ಚರಿಸಿದರು.

  • ಒಂದು ಡಿಸಿಎಂ ಸ್ಥಾನ, ನಾಲ್ವರಿಗೆ ಮಂತ್ರಿಗಿರಿ ನೀಡಬೇಕು: ಪ್ರಸನ್ನಾಂದ ಸ್ವಾಮೀಜಿ ಆಗ್ರಹ

    ಒಂದು ಡಿಸಿಎಂ ಸ್ಥಾನ, ನಾಲ್ವರಿಗೆ ಮಂತ್ರಿಗಿರಿ ನೀಡಬೇಕು: ಪ್ರಸನ್ನಾಂದ ಸ್ವಾಮೀಜಿ ಆಗ್ರಹ

    ಕೊಪ್ಪಳ: ವಾಲ್ಮೀಕಿ ಸಮುದಾಯದ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ, ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

    ಗಂಗಾವತಿಯಲ್ಲಿ ಆದಿಕಾವಿ ವಾಲ್ಮೀಕಿ ಜಾತ್ರೆಯ ಅಂಗವಾಗಿ ನಾಯಕ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, 2008ರಲ್ಲಿ ಅಂದಿನ ಬಿಜೆಪಿ ಸರ್ಕಾರ ವಾಲ್ಮೀಕಿ ಸಮುದಾಯದ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಿತ್ತು. ಅದರಂತೆ ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡುತ್ತೇವೆ ಎಂದು ಘೊಷಣೆ ಕೂಡ ಮಾಡಿದ್ದರು. ಬಿಜೆಪಿ ನಾಯಕರ ಭರವಸೆಯಂತೆ ನಮ್ಮ ಸಮುದಾಯದ ಒಬ್ಬರನ್ನು ಡಿಸಿಎಂ ಮಾಡಬೇಕು ಮತ್ತು ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

    ಈಗಾಗಲೆ ಸಮಾಜದ ಬಹುದೊಡ್ಡ ಬೇಡಿಕೆ ಎಂಬಂತೆ ಸಮಾಜಕ್ಕೆ ಶೇ. 7.5ರಷ್ಟು ಮೀಸಲಾತಿ ನೀಡಬೇಕೆಂದು ಸಮಾಜದ ಬೇಡಿಕೆಯಾಗಿದೆ. ಬರುವ ವಾಲ್ಮೀಕಿ ಜಾತ್ರೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

  • ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ, 15 ಶಾಸಕರ ರಾಜೀನಾಮೆ ಖಚಿತ- ರಾಜು ಗೌಡ

    ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ, 15 ಶಾಸಕರ ರಾಜೀನಾಮೆ ಖಚಿತ- ರಾಜು ಗೌಡ

    ಯಾದಗಿರಿ: ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ಬೇಕಿಲ್ಲ ಡಿಸಿಎಂ ಸ್ಥಾನದ ಅವಶ್ಯಕತೆಯೂ ಇಲ್ಲ ಎಂದು ಸುರಪುರ ಬಿಜೆಪಿ ಶಾಸಕ ರಾಜು ಗೌಡ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಸಮಾಜದಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಚರ್ಚೆ ನಡೆಯುತ್ತಿರುವಾಗಲೇ ರಾಜು ಗೌಡ ಹೇಳಿಕೆ ಮಹತ್ವ ಪಡೆದುಕೊಂಡಿದೆ.

    ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ ಡಿಸಿಎಂ ಸ್ಥಾನಕ್ಕಿಂತ ಶೇ.7.5ರಷ್ಟು ಮೀಸಲಾತಿ ಬೇಕು, ಮಾಧ್ಯಮಗಳಲ್ಲಿ ರಮೇಶ್ ಜಾರಕಿಹೊಳಿ ಮತ್ತು ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಎಂದು ತೋರಿಸುತ್ತಿದ್ದಾರೆ. ಅವರಿಬ್ಬರೂ ನನಗೆ ಆತ್ಮೀಯರು ಅವರಿಬ್ಬರಿಗೂ ನಾನು ಕೇಳಿಕೊಳ್ಳುವುದು ಇಷ್ಟೇ ಡಿಸಿಎಂ ಸ್ಥಾನದ ಬದಲು ಮೀಸಲಾತಿಗೆ ಆಗ್ರಹಿಸಿ, ಮೀಸಲಾತಿ ಸಿಕ್ಕರೆ ನಮ್ಮ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕಂತೆ ಎಂದರು.

    ಮೀಸಲಾತಿ ನೀಡದಿದ್ದರೆ ನಮ್ಮ ಜನಾಂಗದ 15 ಶಾಸಕರು ರಾಜೀನಾಮೆ ಸಿದ್ಧ ಎಂಬ ವಾಲ್ಮೀಕಿ ಶ್ರೀಗಳ ಹೇಳಿಕೆಗೆ ಧ್ವನಿಗೂಡಿಸಿದ ರಾಜು ಗೌಡ, ಮೀಸಲಾತಿ ವಿಚಾರದಲ್ಲಿ ಶ್ರೀಗಳ ಆದೇಶಕ್ಕೆ ನಾನು ಬದ್ಧ. ಬಿಎಸ್‍ವೈ ನಮ್ಮನ್ನು ರಾಜೀನಾಮೆ ಕೊಡುವ ಮಟ್ಟಕ್ಕೆ ತೆಗೆದುಕೊಂಡು ಹೋಗುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದರು.

    ವಾಲ್ಮೀಕಿ ಶ್ರೀಗಳು ಸಚಿವ ಸ್ಥಾನಕ್ಕೆ ತಮ್ಮ ಹೆಸರು ಸೂಚಿಸಿದ ಕುರಿತು ಮಾತನಾಡಿದ ಅವರು, ನಾನು ಶ್ರೀಗಳ ಮಾತಿಗೆ ಚಿರಋಣಿ ಶ್ರೀಗಳು ನನ್ನ ಮೇಲೆ ಪ್ರೀತಿ, ವಿಶ್ವಾಸ ಇಟ್ಟು ನನ್ನ ಹೆಸರು ಸೂಚಿಸಿದ್ದಾರೆ. ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ 12 ಜನ ಶಾಸಕರಿಗೆ ಕೊಟ್ಟು ಉಳಿದ ನಂತರ ನನಗೂ ಸಚಿವ ಸ್ಥಾನ ನೀಡಿ, ಬಹುತೇಕ ಶಾಸಕರು ಮತ್ತು ಸಂಸದರು ಸಚಿವ ಸ್ಥಾನಕ್ಕೆ ನನ್ನ ಹೆಸರು ಸೂಚಿಸುತ್ತಿದ್ದಾರೆ. ಹೀಗಾಗಿ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

    ಎನ್‍ಆರ್ ಸಿ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ಸಿನವರಿಗೆ ತಾಕತ್ತಿದ್ದರೆ ನಮ್ಮ ಎದೆಗೆ ಗುಂಡು ಹೊಡೆಯಲಿ, ಇನ್ನೊಬ್ಬರ ಹೆಗಲ ಮೇಲೆ ಗನ್ ಇಟ್ಟು ಯಾಕೆ ಹೊಡೆಯುತ್ತೀರಿ. ಅಮಾಯಕರನ್ನು ಯಾಕೆ ಬಲಿ ಕೊಡತ್ತೀರಿ. ರಾಜಕಾರಣಿಗಳು ತಮ್ಮ ಲಾಭಕ್ಕಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಹೋರಾಟ ಬಳಸಿಕೊಳ್ಳುವುದನ್ನು ಬಿಡಬೇಕು. ಉರಿಯೋ ಬೆಂಕಿಗೆ ತುಪ್ಪ ಹಾಕಿ ಆ ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳುವ ಕೆಲಸ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ. ಕೆಲವು ಸಂಘಟನೆಗಳು ಕರ್ನಾಟಕದಲ್ಲಿ ಗಲಾಟೆ ಎಬ್ಬಿಸುವ ಉದ್ದೇಶದಿಂದ ಕೇರಳದಿಂದ ಬಂದಿವೆ, ಮೋದಿಯವರ ಬೆಳವಣಿಗೆ ಸಹಿಸಲಾರದೆ ಈ ರೀತಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ಕುರಿತು ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಯಾವತ್ತೂ ಅವಹೇಳನವಾಗಿ ಮಾತನಾಡಬಾರದು. ಯಾರು ಯಾವ ಉದ್ಯೋಗ ಮಾಡುತ್ತಾರೋ ಅದು ಅವರಿಗೆ ಶ್ರೇಷ್ಠ, ತೇಜಸ್ವಿ ಸೂರ್ಯ ನನಗೆ ತಮ್ಮ ಇದ್ದ ಹಾಗೆ ನಾನು ಅವರಿಗೆ ಬುದ್ಧಿ ಹೇಳುತ್ತೇನೆ ಎಂದರು.

  • ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು: ರಾಜನಹಳ್ಳಿ ಶ್ರೀ ಆಗ್ರಹ

    ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು: ರಾಜನಹಳ್ಳಿ ಶ್ರೀ ಆಗ್ರಹ

    ದಾವಣಗೆರೆ: ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಪ್ರಸನ್ನಾನಂದ ಪುರಿ ರಾಜನಹಳ್ಳಿ ವಾಲ್ಮೀಕಿ ಶ್ರೀ ಆಗ್ರಹಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ಬಿಜೆಪಿಯಲ್ಲಿ ವಾಲ್ಮೀಕಿ ಸಮುದಾಯದ 9 ಮಂದಿ ಶಾಸಕರಿದ್ದಾರೆ. ಹೀಗಾಗಿ ಮೂರು ಮಂದಿಯನ್ನಾದರೂ ಸಚಿವರಾಗಿ ಮಾಡಬೇಕು. ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ನಮ್ಮ ಸಮುದಾಯದ ಯಾರಿಗಾದರೂ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಒಂದು ವೇಳೆ ಬಿಜೆಪಿ ಹೈಕಮಾಂಡ್ ನಮ್ಮ ಆಗ್ರಹಕ್ಕೆ ಬೆಲೆ ಕೊಟ್ಟು, ಸಚಿವ ಸ್ಥಾನ ನೀಡದಿದ್ದರೆ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಈಗಾಗಲೇ ಆಗಸ್ಟ್ 23ರಂದು ನಾವು ಪತ್ರಿಕಾಗೋಷ್ಠಿ ನಡೆಸಿದ್ದೇವೆ. ಕರ್ನಾಟಕದಲ್ಲಿ 4ನೇ ಅತೀ ದೊಡ್ಡ ಜನಾಂಗವಾಗಿರುವ ವಾಲ್ಮೀಕಿ ಜನಾಂಗಕ್ಕೆ ರಾಜಕೀಯ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದೆವು. ಈ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಒತ್ತಾಯಿಸಿದ್ದೇವೆ. ಈ ಪಕ್ಷಕ್ಕೆ, ಸಮುದಾಯಕ್ಕಾಗಿ ಯಾರು ದುಡಿದಿಲ್ಲವೋ ಅವರನ್ನು ಉಪಮುಖ್ಯಮಂತ್ರಿ ಮಾಡಿದ್ದಾರೆ. ನಮ್ಮ ಸಮುದಾಯಕ್ಕಾಗಿ ಶ್ರಮಿಸಿದವರಿಗೆ ಸಚಿವ ಸ್ಥಾನ, ಉಪಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂಬ ಭರವಸೆಯಲ್ಲಿ ಶೇ.70 ಮಂದಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಸಚಿವ ಸಂಪುಟ ಪುನರಾಚನೆ ಆದಾಗಲಾದರೂ ನಮ್ಮ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸಿಎಂ ಅವರಿಗೆ ಒತ್ತಾಯಿಸುತ್ತಿದ್ದೇವೆ ಎಂದು ಶ್ರೀಗಳು ಹೇಳಿದರು.

    ಹಿರಿಯ ನಾಯಕನನ್ನು ಗುರುತಿಸಿ ಅದರ ಪ್ರಕಾರ ಬಿಜೆಪಿ ಸಚಿವ ಸ್ಥಾನ ಕೊಡಲಿ, ಅದು ಪಕ್ಷದ ನಿರ್ಧಾರ ಎಂದರು. ಬಳಿಕ ಹಿಂದಿನ ಸರ್ಕಾರದಲ್ಲಿ ನಾನು ವಾಲ್ಮೀಕಿ ಸಮುದಾಯಕ್ಕೆ ಇರುವ ಮೀಸಲಾತಿಯನ್ನು ಹೆಚ್ಚು ಮಾಡಿ ಎಂದು ಆಗ್ರಹಿಸಿದ್ದೆವು. ಅದಕ್ಕೆ ಸರ್ಕಾರ ಸ್ಪಂದಿಸಿ, ಈಗಾಗಲೇ ಏಕ ಸದಸ್ಯ ಆಯೋಗವನ್ನು ರಚಿಸಿದೆ. ನಾವು ಎರಡು ತಿಂಗಳ ಗಡುವು ನೀಡಿದ್ದೇವು. ಅದು ಮುಗಿಯುತ್ತಾ ಬಂದಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ನಾವು ಮತ್ತೆ ಹೋರಾಟ ಮಾಡುತ್ತೇವೆ ಸಂವಿಧಾನಾತ್ಮಕವಾಗಿ ನ್ಯಾಯ ಪಡೆಯಲು ಮುಂದಾಗುತ್ತೇವೆ ಎಂದು ತಿಳಿಸಿದರು.

    ನಾವು ನೋಡುತ್ತಿದ್ದೇವೆ, ಆಡಳಿತಕ್ಕೆ ಬಂದಿರುವ ಬಹುತೇಕ ಸರ್ಕಾರಗಳು ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿವೆ. ಮತ್ತೆ ನಮ್ಮ ಕಿವಿ ಮೇಲೆ ಹೂವು ಇಡಲು ಬಂದರೆ ನಾವು ಕೇಳಲ್ಲ. ಹೋರಾಟದ ಮೂಲಕ ಪ್ರಾಮಾಣಿಕವಾಗಿ ನಮ್ಮ ಹಕ್ಕನ್ನು ಪಡೆದುಕೊಳ್ಳಲು ನಾವು ಪ್ರಯತ್ನಿಸುತ್ತೇವೆ. ಯಾವ ಸಮುದಾಯದವರು ಹೆಚ್ಚಾಗಿ ಇರುತ್ತಾರೋ ಅವರಿಗೆ ಹೆಚ್ಚಿನ ಮಂತ್ರಿ ಸ್ಥಾನ ಸಿಗುತ್ತೆ. ಬಸವಣ್ಣ ಅವರ ಸಿದ್ದಾಂತ ಬರೀ ಬಾಯಿಯಲ್ಲಿ ಮಾತ್ರ. ಸಾಮಾಜಿಕ ನ್ಯಾಯ ಎಲ್ಲಿದೆ? ನಾನು ಕೇವಲ ನಮ್ಮ ಸಮುದಾಯಕ್ಕೆ ಮಾತ್ರವಲ್ಲಿ ಎಲ್ಲಾ ಸಮುದಾಯದ ವತಿಯಿಂದ ಕೇಳುತ್ತಿದ್ದೇವೆ. ಎಲ್ಲಾ ಸಮುದಾಯದಲ್ಲಿ ಅವಕಾಶ ವಂಚಿತ ನಾಯಕರಿದ್ದಾರೆ ಅವರಿಗೂ ರಾಜಕೀಯ ಸ್ಥಾನಮಾನ ಸಿಗಬೇಕು. ಎಲ್ಲರಿಗೂ ಸರಿಯಾಗಿ ನ್ಯಾಯ ಸಿಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

    ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

    ಬಳ್ಳಾರಿ: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅಶ್ವಾಸನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಪಕ್ಷಕ್ಕಾಗಿ ಎಲ್ಲರೂ ಸೇರಿ ದುಡಿಯೋಣ ಎಂದು ರಾಜ್ಯದ ಜನರಲ್ಲಿ ವಿನಂತಿ ಮಾಡಿಕೊಂಡರು.

    ಎಲ್ಲಾ ಜನರಿಗೆ ನ್ಯಾಯಕೊಡಿಸೋ ಕೆಲಸ ಬಿಜೆಪಿ ಪಕ್ಷ ಸೇರಿದಂತೆ ನಾನು ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವ ಕೆಲಸವಾಗಬೇಕಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಅಶ್ವಾಸನೆ ನೀಡಿದ್ದಾರೆ. ಅದು ಸಿಕ್ಕರೆ ವಾಲ್ಮೀಕಿ ಸಮುದಾಯದಕ್ಕೆ ಎಲ್ಲಾ ಸಿಕ್ಕಂತೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ, ಶಿವನಗೌಡ ಮತ್ತು ರಾಜುಗೌಡ ಎಲ್ಲಾರು ಒಂದಾಗಿದ್ದೇವೆ ಎಂದು ತಿಳಿಸಿದರು.

    ಈ ವೇಳೆ ಜಿಲ್ಲಾ ಉಸ್ತುವಾರಿ ವಿಚಾರವಾಗಿ ಮಾತನಾಡಿದ ಅವರು, ನಾನು ಈ ವಿಷಯಕ್ಕೆ ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯ ನಾನು ನೆರೆ ಪೀಡಿತ ಪ್ರದೇಶಾಭಿವೃದ್ಧಿಗೆ ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿಯಾಗಿದ್ದೇನೆ. ನನಗೆ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟನೆ ನೀಡಿದರು.

  • ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ – ಆಯೋಗ ರಚನೆ

    ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ – ಆಯೋಗ ರಚನೆ

    ಬೆಂಗಳೂರು: ವಾಲ್ಮೀಕಿ ಸಮುದಾದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರಕ್ಕಾಗಿ ಆಯೋಗವೊಂದನ್ನು ರಚನೆ ಮಾಡಲಾಗಿದೆ.

    ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ ನೀಡುವುದರ ಬಗ್ಗೆ ಪರಿಶೀಲನೆಗಾಗಿ ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದು, ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಎರಡು ತಿಂಗಳೊಳಗಾಗಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

    ಕಳೆದ ಜೂನ್ 25 ರಂದು ಬೆಂಗಳೂರಿನಲ್ಲಿ ಬೃಹತ್ ಧರಣಿ ನಡೆಸಿದ್ದ ವಾಲ್ಮೀಕಿ ಸಮುದಾಯ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಅಧ್ಯಕ್ಷ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆದಿತ್ತು.

  • ನಾವ್ ಹೇಳಿದ್ರೆ ಮುಖ್ಯಮಂತ್ರಿಯೂ ಕೇಳಬೇಕು ಅವರಪ್ಪನೂ ಕೇಳಬೇಕು – ಪ್ರಸನ್ನಾನಂದ ಸ್ವಾಮೀಜಿ

    ನಾವ್ ಹೇಳಿದ್ರೆ ಮುಖ್ಯಮಂತ್ರಿಯೂ ಕೇಳಬೇಕು ಅವರಪ್ಪನೂ ಕೇಳಬೇಕು – ಪ್ರಸನ್ನಾನಂದ ಸ್ವಾಮೀಜಿ

    ಬೆಂಗಳೂರು: ನಮ್ಮ ವಾಲ್ಮೀಕಿ ಸಮುದಾಯದ ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ಕೊಟ್ಟರೆ ಮುಖ್ಯಮಂತ್ರಿ ಗೊಟಕ್ ಅಂದುಬಿಡ್ತಾರೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

    ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಮಂದಿ ವಾಲ್ಮೀಕಿ ಸಮುದಾಯದ ಶಾಸಕರು ಇದ್ದಾರೆ. ಇವರು ರಾಜೀನಾಮೆ ನೀಡಿದರೆ ಸರ್ಕಾರ ಉರುಳುತ್ತದೆ ಎಂದು ಹೇಳಿದರು.

    ಮುಖ್ಯಮಂತ್ರಿಗಳ ವಿರುದ್ಧ ಸಿಡಿಮಿಡಿಗೊಂಡ ಸ್ವಾಮೀಜಿ, ಸಿಎಂ ಸರ್ಕಾರ ಉಳಿಸಲು ಕಾಲು ಹಿಡಿಯುತ್ತಾರೆ ಅನ್ನೋದು ನಂಗೆ ಗೊತ್ತಿದೆ. ಅವರು ಸಿಎಂ ಆಗಿ ಮುಂದುವರೆಯಬೇಕೇ? ಬೇಡವಾ ಎಂದು ಇವತ್ತು ನಿರ್ಧಾರವಾಗಲಿ. ನಾವು ಹೇಳಿದರೆ ಮುಖ್ಯಮಂತ್ರಿಯೂ ಕೇಳಬೇಕು ಅವರಪ್ಪನೂ ಕೇಳಬೇಕು ಎಂದು ಎಂದು ವಾಗ್ದಾಳಿ ನಡೆಸಿದರು.

    ಈ ವಿಚಾರವಾಗಿ ಮಾತನಾಡಲು ಬಂದಿದ್ದ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮುಂದೆಯೇ ಮುಖ್ಯಮಂತ್ರಿಗಳಿಗೆ ಅವಾಜ್ ಹಾಕಿದ ಸ್ವಾಮೀಜಿ, ನಮ್ಮವರು ರಾಜೀನಾಮೆ ಕೊಟ್ಟರೆ ಸರ್ಕಾರ ಉಳಿಯಲ್ಲ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನೆಗೆ ಸುದೀಪ್ ಬರಬೇಕಾಗಿತ್ತು. ಆದರೆ ಅವರು ಶೂಟಿಂಗ್‍ನಲ್ಲಿದ್ದಾರೆ. ಅದ್ದರಿಂದ ಬಂದಿಲ್ಲ ಅವರು ವಿಡಿಯೋ ಮೆಸೇಜ್ ಮಾಡಿ ಕಳಿಸಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದ ಜನರು ಡಿಸಿಎಂಗೆ ಮಾತನಾಡಲು ಬಿಡದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗದ್ದಲ ಉಂಟುಮಾಡಿದರು.