Tag: ವಿಂಬಲ್ಡನ್‌

  • ಆಲ್ಕರಜ್‌ ಹ್ಯಾಟ್ರಿಕ್‌ ಕನಸು ಭಗ್ನ- ಚೊಚ್ಚಲ ವಿಂಬಲ್ಡನ್‌ ಗೆದ್ದ ಸಿನ್ನರ್‌ | ನಗದು ಬಹುಮಾನ ಎಷ್ಟು?

    ಆಲ್ಕರಜ್‌ ಹ್ಯಾಟ್ರಿಕ್‌ ಕನಸು ಭಗ್ನ- ಚೊಚ್ಚಲ ವಿಂಬಲ್ಡನ್‌ ಗೆದ್ದ ಸಿನ್ನರ್‌ | ನಗದು ಬಹುಮಾನ ಎಷ್ಟು?

    ಲಂಡನ್‌: ಇಟಲಿಯ ಜಾನ್ನಿಕ್‌ ಸಿನ್ನರ್‌ (Jannik Sinner) ಚೊಚ್ಚಲ ಬಾರಿಗೆ ವಿಂಬಲ್ಡನ್‌ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. ಫೈನಲ್‌ನಲ್ಲಿ ಸ್ಪೇನ್‌ನ ಕಾರ್ಲೋಸ್‌ ಆಲ್ಕರಜ್‌ (Carlos Alcaraz) ವಿರುದ್ಧ 4-6, 6-4, 6-4, 6-4 ಸೆಟ್‌ಗಳಲ್ಲಿ ಗೆಲುವು ಸಾಧಿಸಿದರು.

    ಈ ಸೋಲಿನೊಂದಿಗೆ ಹ್ಯಾಟ್ರಿಕ್‌ ವಿಂಬಲ್ಡನ್‌ ಪ್ರಶಸ್ತಿ ಗೆಲ್ಲುವ ಆಲ್ಕರಜ್‌ ಕನಸು ಭಗ್ನಗೊಂಡಿತು. ಸಿನ್ನರ್‌ಗೆ ಶರಣಾಗುವ ಮೂಲಕ ವಿಂಬಲ್ಡನ್‌ನಲ್ಲಿ ಸತತ 20 ಗೆಲುವುಗಳ ಓಟಕ್ಕೂ ಬ್ರೇಕ್‌ ಬಿತ್ತು. ಯಾನ್ನಿಕ್‌ ಸಿನ್ನರ್‌ ಅವರಿಗೆ ಈ ವರ್ಷ 2ನೇ ಹಾಗೂ ಒಟ್ಟಾರೆ 4ನೇ ಗ್ರ್ಯಾನ್‌ಸ್ಲಾಂ ಪ್ರಶಸ್ತಿ ಸಿಕ್ಕಿದಂತಾಗಿದೆ.

    ಕಳೆದ ಎರಡೂ ಆವೃತ್ತಿಗಳಲ್ಲಿ ದಿಗ್ಗಜ ನೊವಾಕ್ ಜೊಕೊವಿಕ್‌ (Novak Djokovic) ಅವರನ್ನ ಮಣಿಸಿ 2 ಬಾರಿ ಪ್ರಶಸ್ತಿಗೆ ಮುತ್ತಿಟ್ಟಿದ್ದ ಅಲ್ಕರಾಜ್‌ ಸತತ 3ನೇ ಬಾರಿ ಚಾಂಪಿಯನ್‌ ಪಟ್ಟಕ್ಕೇರುವ ತವಕದಲ್ಲಿದ್ದರು. ಈ ಬಾರಿಯ ವಿಂಬಲ್ಡನ್‌ ಗ್ರ್ಯಾನ್‌ ಸ್ಲಾಂ ಟೆನಿಸ್‌ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್‌ನಂತೆ ಪುರುಷರ ಸಿಂಗಲ್ಸ್‌ನಲ್ಲೂ ಹೊಸ ಚಾಂಪಿಯನ್‌ನ ಉದಯವಾಗಿರುವುದು ವಿಶೇಷ.

    ಬಹುಮಾನ ಎಷ್ಟು?
    ಚಾಂಪಿಯನ್‌ ಆಗಿರುವ ಸಿನ್ನರ್‌ಗೆ 30 ಲಕ್ಷ ಪೌಂಡ್‌(ಅಂದಾಜು 34.75 ಕೋಟಿ ರೂ.) ಬಹುಮಾನ ಸಿಕ್ಕಿದರೆ, ರನ್ನರ್‌ ಅಪ್‌ ಆದ ಆಲ್ಕರಜ್‌ಗೆ 15.2 ಲಕ್ಷ ಪೌಂಡ್‌ (ಅಂದಾಜು 17.61 ಕೋಟಿ ರೂ.) ಬಹುಮಾನ ಮೊತ್ತ ಸಿಕ್ಕಿದೆ.

     

  • Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

    Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

    ಲಂಡನ್: ಸತತ 10 ವರ್ಷಗಳ ಕಾಲ ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಆರ್ಭಟಿಸಿದ್ದ ನೊವಾಕ್ ಜೊಕೊವಿಕ್‌ಗೆ ?(Novak Djokovic) ಸತತ 2ನೇ ಬಾರಿಗೆ ಸೋಲಾಗಿದೆ. ಕಾರ್ಲೋಸ್‌ ಅಲ್ಕರಾಜ್‌ (Carlos Alcaraz) ಮತ್ತೆ ಚಾಂಪಿಯನ್‌ ಆಗಿದ್ದಾರೆ.

    ಭಾನುವಾರ ಲಂಡನ್‌ನ ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ ಪಂದ್ಯದಲ್ಲಿ ಕಾರ್ಲೋಸ್‌ ಅಲ್ಕರಾಜ್‌ ಸತತ 2ನೇ ಬಾರಿಗೆ ವಿಂಬಲ್ಟನ್‌ ಕಿರೀಟ (Wimbledon Crown) ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲಡ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಾಜಿ ಕ್ರಿಕೆಟರ್‌ಗೆ ಬಿಸಿಸಿಐನಿಂದ 1 ಕೋಟಿ ಆರ್ಥಿಕ ನೆರವು!

    ಕಳೆದ ವರ್ಷ ಸಹ ಅಲ್ಕರಾಜ್‌, ನೊವಾಕ್ ಜೊಕೊವಿಕ್‌ ಅವರನ್ನೇ ಮಣಿಸಿ ಚೊಚ್ಚಲ ವಿಂಬಲ್ಡನ್‌ ಕಿರೀಟಕ್ಕೆ ಮುತ್ತಿಟ್ಟಿದ್ದರು. ಈ ಬಾರಿಯೂ ಜೊಕೊವಿಕ್‌ ಅವರನ್ನೇ ಸೋಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು ವಿಶೇಷ. 6-2, 6-2, 7-6 (7/4) ಸೆಟ್‌ಗಳಲ್ಲಿ ಮಣಿಸುವ ಮೂಲಕ ಚಾಂಪಿಯನ್‌ ಪಟ್ಟವನ್ನು ತಮ್ಮ ಹೆಸರಿನಲ್ಲೇ ಅಲ್ಕರಾಜ್‌ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    ಮೊದಲ ಎರಡು ಸುತ್ತಿನಲ್ಲಿ ಹಿಡಿತ ಸಾಧಿಸಿದ್ದ ಅಲ್ಕರಾಜ್‌ 6-2, 6-2 ಸೆಟ್‌ಗಳಲ್ಲಿ ಮುನ್ನಡೆ ಕಾಯ್ದುಕೊಂಡರು. ಕೊನೆಯ ಸುತ್ತಿನಲ್ಲಿ ತೀವ್ರ ಪೈಪೋಟಿ ಹೊರತಾಗಿಯೂ 7-6 ಸೆಟ್‌ನಲ್ಲಿ ಜೊಕೊವಿಕ್‌ ಅವರನ್ನ ಸೋಲಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    3ನೇ ಗ್ರ್ಯಾಂಡ್‌ಸ್ಲಾಮ್‌ ಕಿರೀಟ:
    ಇದು ಅಲ್ಕರಾಜ್‌ ಗೆದ್ದ 3ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಟ್ರೋಫಿಯೂ (Grand Slam Crown) ಸಹ ಆಗಿದೆ. 2022ರ ಯುಎಸ್‌ ಓಪನ್‌ ಟೂರ್ನಿಯಲ್ಲಿ ತಮ್ಮ ಚೊಚ್ಚಲ ಗ್ರ್ಯಾಂಡ್‌ ಸ್ಲ್ಯಾಮ್‌ ಕಿರೀಟ ಜಯಿಸಿದ್ದರು. ಬಳಿಕ 2023ರಲ್ಲಿ ಆಲ್ ಇಂಗ್ಲೆಂಡ್ ಟೆನ್ನಿಸ್‌ ಕ್ಲಬ್‌ನ ಸೆಂಟರ್‌ ಕೋರ್ಟ್‌ನಲ್ಲಿ ನಡೆದ ಪಂದ್ಯದಲ್ಲಿ ಜೊಕೊವಿಕ್‌ ವಿರುದ್ಧ 2ನೇ ಗ್ರ್ಯಾಂಡ್‌ಸ್ಲ್ಯಾಮ್‌ ಕಿರೀಟ ಗೆದ್ದುಕೊಂಡಿದ್ದರು.

  • ಅಲ್ಕರಾಝ್‌ಗೆ ಚೊಚ್ಚಲ ವಿಂಬಲ್ಡನ್‌ ಕಿರೀಟ – ಸೋಲಿಸಿದ ಆಟಗಾರನನ್ನೇ ಬಾಯ್ತುಂಬ ಹೊಗಳಿದ ದಿಗ್ಗಜ ಜೊಕೊವಿಕ್!

    ಅಲ್ಕರಾಝ್‌ಗೆ ಚೊಚ್ಚಲ ವಿಂಬಲ್ಡನ್‌ ಕಿರೀಟ – ಸೋಲಿಸಿದ ಆಟಗಾರನನ್ನೇ ಬಾಯ್ತುಂಬ ಹೊಗಳಿದ ದಿಗ್ಗಜ ಜೊಕೊವಿಕ್!

    ಲಂಡನ್: ಕಳೆದ 10 ವರ್ಷಗಳಿಂದ ವಿಂಬಲ್ಡನ್ (Wimbledon) ಸೆಂಟರ್ ಕೋರ್ಟ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಆರ್ಭಟಿಸಿದ್ದ ನೊವಾಕ್ ಜೊಕೊವಿಕ್‌ನನ್ನ (Novak Djokovic) ಸೋಲಿಸಿ ವಿಶ್ವ ಶ್ರೇಯಾಂಕ ಆಟಗಾರ ಕಾರ್ಲೊಸ್‌ ಅಲ್ಕರಾಝ್‌ (Carlos Alcaraz) ಚೊಚ್ಚಲ ವಿಂಬಲ್ಡನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ

    ಆಲ್ ಇಂಗ್ಲೆಂಡ್ ಟೆನ್ನಿಸ್‌ ಕ್ಲಬ್‌ನ ಸೆಂಟರ್‌ ಕೋರ್ಟ್‌ನಲ್ಲಿ ಭಾನುವಾರ (ಜುಲೈ 16) ನಡೆದ ಹೈ-ವೋಲ್ಟೇಜ್ ಕಣದಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದರೂ, 20 ವರ್ಷದ ಯುವ ತಾರೆ ಕಾರ್ಲೊಸ್‌ ಅಲ್ಕರಾಝ್‌, 1-6, 7-6 (8-6), 6-1, 3-6, 6-4 ಅಂತರದ 5 ಸೆಟ್‌ಗಳ ಮ್ಯಾರಥಾನ್‌ ಹೋರಾಟದಲ್ಲಿ ಟೆನಿಸ್ ಲೋಕದ ದಿಗ್ಗಜ ನೊವಾಕ್ ಜೊಕೋವಿಕ್ ವಿರುದ್ಧ ಗೆಲುವು ಸಾಧಿಸಿ ವಿಂಬಲ್ಡನ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಇದು ಕಾರ್ಲೊಸ್‌ ಗೆದ್ದ 2ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಟ್ರೋಫಿಯಾಗಿದೆ. ಈ ಹಿಂದೆ 2022 ಯುಎಸ್‌ ಓಪನ್‌ ಟೂರ್ನಿಯಲ್ಲಿ ತಮ್ಮ ಚೊಚ್ಚಲ ಗ್ರ್ಯಾಂಡ್‌ ಸ್ಲ್ಯಾಮ್‌ ಕಿರೀಟ ಜಯಿಸಿದ್ದರು.

    ಬರೋಬ್ಬರಿ 4 ಗಂಟೆ 42 ನಿಮಿಷಗಳ ಕಾಲ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ಗೆಲುವಿನ ಸಂಭ್ರಮ ಕಂಡು ವಿಂಬಲ್ಡನ್ ಮುಕುಟ ಗೆದ್ದ ಕಾರ್ಲೊಸ್‌ ಅಲ್ಕರಾಝ್‌ ವಿಶ್ವದ ನಂಬರ್ 1 ಸ್ಥಾನವನ್ನು ಉಳಿಸಿಕೊಳ್ಳುವುದರ ಜೊತೆಗೆ 2003ರ ಬಳಿಕ ಟೆನ್ನಿಸ್‌ ಲೋಕದ ದಿಗ್ಗಜರಾದ ರೋಜರ್ ಫೆಡರರ್, ರಫಾಲ್ ನಡಾಲ್, ನೊವಾಕ್ ಜೊಕೋವಿಕ್, ಆಂಡಿ ಮರ್ರೆ ನಂತರ ವಿಂಬಲ್ಡನ್ ಗೆದ್ದ ಆಟಗಾರ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ. ಇದನ್ನೂ ಓದಿ: Wimbledon 2023ː ಮಹಿಳಾ ಸಿಂಗಲ್ಸ್‌ ಗೆದ್ದು ಇತಿಹಾಸ ಬರೆದ ವಾಂಡ್ರೊಸೊವಾ

    ನೊವಾಕ್ ಜೊಕೊವಿಕ್‌ ವಿಂಬಲ್ಡನ್‌ನಲ್ಲಿ ಸತತ 5 ಬಾರಿ ಗ್ರಾಂಡ್ ಸ್ಲಾಮ್ ಪ್ರಶಸ್ತಿ (Grand Slam Crown) ಗೆದ್ದಿದ್ದಾರೆ. ಆದ್ರೆ ಕಳೆದ 10 ವರ್ಷಗಳಿಂದ ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೋಲಿಲ್ಲದ ಸರದಾರ ನಾಗಿದ್ದ ಆರ್ಭಟಿಸಿದ್ದ ಜೊಕೊವಿಕ್, ವಿಂಬಲ್ಡನ್ ಫೈನಲ್ ನಲ್ಲಿ ಕಾರ್ಲೊಸ್‌ ಅಲ್ಕರಾಝ್‌ ವಿರುದ್ಧ ಸೋತು ಟೆನ್ನಿಸ್ ದಿಗ್ಗಜ ರೋಜರ್ ಫೆಡರರ್ ಅವರ ಸತತ 7 ಬಾರಿ ಗ್ರಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದಿರುವ ದಾಖಲೆ ಮುರಿಯುವ ಅವಕಾಶ ಕೈಚೆಲ್ಲಿಕೊಂಡಿದ್ದಾರೆ. ಇದನ್ನೂ ಓದಿ: Test Cricketː ನಂ.1 ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!

    ಬಾಯ್ತುಂಬ ಹೊಗಳಿದ ಜೊಕೊವಿಕ್‌:
    ವಿಂಬಲ್ಡನ್‌ ಫೈನಲ್‌ನಲ್ಲಿ ಸೋತ ಬಳಿಕ ಮಾತನಾಡಿದ ಜೊಕೊವಿಕ್‌, ಅಲ್ಕರಾಝ್‌ನನ್ನ ಬಾಯ್ತುಂಬ ಹೊಗಳಿದ್ದಾರೆ. ನನ್ನ ವೃತ್ತಿಬದುಕಿನಲ್ಲಿ ಕಾರ್ಲೊಸ್‌ ಅಲ್ಕರಾಝ್‌ ಮಾದರಿಯ ಆಟಗಾರ ಎದುರಾಗೇ ಇಲ್ಲ ಎಂದು ಗುಣಗಾನ ಮಾಡಿದ್ದಾರೆ. ಕಾರ್ಲೊಸ್‌ ಅಲ್ಕರಾಝ್‌ ಅವರಲ್ಲಿ ರೋಜರ್‌ ಫೆಡರರ್‌, ರಾಫೆಲ್‌ ನಡಾಲ್ ಮತ್ತು ನನ್ನ ಆಟದ ಸಮ್ಮಿಶ್ರಣ ಕಾಣಬಹುದು ಅಂತಾ ಚರ್ಚೆಯಾಗುತ್ತಿದೆ. ಇದನ್ನ ನಾನು ಕೂಡ ಒಪ್ಪಿಕೊಳ್ಳುತ್ತೇನೆ. ಕಾರ್ಲೊಸ್‌ ಪರಿಪೂರ್ಣ ಆಟಗಾರ. ನನ್ನ ವೃತ್ತಿಬದುಕಿನಲ್ಲಿ ಇಂತಹ ಒಬ್ಬ ಆಟಗಾರನನ್ನ ನೋಡಿಯೇ ಇರಲಿಲ್ಲ. ಅವರು ನಿಜಕ್ಕೂ ಒಬ್ಬ ಪರಿಪೂರ್ಣ ಆಟಗಾರನಾಗಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.

    ಇದೇ ವೇಳೆ ಅಲ್ಕರಾಝ್‌ ಸಹ ಮಾತನಾಡಿದ್ದು, ಜೊಕೊವಿಕ್‌ನನ್ನ ಹೊಗಳಿದ್ದಾರೆ. ನಾನು ನಿಮ್ಮನ್ನು ನೋಡುತ್ತಲೇ ಟೆನ್ನಿಸ್‌ ಆಟ ಕಲಿತೆ. ನಾನು ಹುಟ್ಟಿದಾಗಿನಿಂದಲೂ ನೀವು ಹಲವು ಪಂದ್ಯಗಳನ್ನ ಗೆದ್ದಿದ್ದೀರಿ. ನಿಜಕ್ಕೂ ಅವೆಲ್ಲವೂ ಅದ್ಭುತ ಎಂದು ಅಭಿನಂದಿಸಿದ್ದಾರೆ. ಅತಿಹೆಚ್ಚು ಬಾರಿ ಗ್ರ್ಯಾನ್‌ಸ್ಲಾನ್‌ ಗೆದ್ದ ರಫಾಲ್‌ ನಡಾಲ್ ಕೂಡ ಅಲ್ಕರಾಝ್‌ಗೆ ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Wimbledon 2023ː ಮಹಿಳಾ ಸಿಂಗಲ್ಸ್‌ ಗೆದ್ದು ಇತಿಹಾಸ ಬರೆದ ವಾಂಡ್ರೊಸೊವಾ

    Wimbledon 2023ː ಮಹಿಳಾ ಸಿಂಗಲ್ಸ್‌ ಗೆದ್ದು ಇತಿಹಾಸ ಬರೆದ ವಾಂಡ್ರೊಸೊವಾ

    ಲಂಡನ್‌: ಝೆಕ್‌ ಗಣರಾಜ್ಯದ ಆಟಗಾರ್ತಿ ಮಾರ್ಕೆಟಾ ವೊಂಡ್ರೊಸೊವಾ (Marketa Vondrousova) ಶನಿವಾರ ವಿಂಬಲ್ಡನ್ (Wimbledon 2023) ಸಿಂಗಲ್ಸ್ ನಲ್ಲಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

    ಆಲ್‌ ಇಂಗ್ಲೆಂಡ್‌ (England) ಟೆನಿಸ್‌ ಕ್ಲಬ್‌ನ ಸೆಂಟರ್‌ ಕೋರ್ಟ್‌ನಲ್ಲಿ ಶನಿವಾರ ನಡೆದ ಮಹಿಳಾ ಸಿಂಗಲ್ಸ್‌ ಫೈನಲ್‌ ಮ್ಯಾಚ್‌ನಲ್ಲಿ ಜವಾಬ್ದಾರಿಯುತ ಪ್ರದರ್ಶನ ನೀಡಿದ ಝೆಕ್‌ ಗಣರಾಜ್ಯದ (Czech Republic) 24 ವರ್ಷದ ಟೆನ್ನಿಸ್‌ ತಾರೆ ಮರ್ಕೆಟಾ 6-4, 6-4 ಅಂತರದ ನೇರ ಸೆಟ್‌ಗಳ ಅಂತರದಲ್ಲಿ ಟ್ಯುನಿಶಿಯಾದ ಅನುಭವಿ ಆಟಗಾರ್ತಿ ಓನ್ಸ್‌ ಜಬೇಯುರ್‌ (28) ಎದುರು ಗೆಲುವು ಸಾಧಿಸಿದ್ದಾರೆ.

    2021ರ ಟೋಕಿಯೊ ಒಲಿಂಪಿಕ್ಸ್‌ ಬೆಳ್ಳಿ ಪದಕ ಗೆದ್ದಿದ್ದ ಮರ್ಕೆಟಾ ವಾಂಡ್ರೊಸೊವಾ ವಿಂಬಲ್ಡನ್‌ ಮಹಿಳಾ ಸಿಂಗಲ್ಸ್‌ ಇತಿಹಾಸದಲ್ಲಿ ಟ್ರೋಫಿ ಗೆದ್ದ ಮೊಟ್ಟ ಮೊದಲ ಶ್ರೇಯಾಂಕ ರಹಿತ ಆಟಗಾರ್ತಿ ಎಂಬ ಕೀರ್ತಿ ಪತಾಕೆ ಹಾರಿಸಿದ್ದಾರೆ. ಇದನ್ನೂ ಓದಿ: ಒಂದೇ ಮ್ಯಾಚ್‌ನಲ್ಲಿ 12 ವಿಕೆಟ್‌ ಪಡೆದು ಅಶ್ವಿನ್‌ ಸಾಧನೆ – ವಿಂಡೀಸ್ ವಿರುದ್ಧ ಭಾರತಕ್ಕೆ ಜಯದ ಮುನ್ನಡೆ

    ಟೂರ್ನಿಯಲ್ಲಿ ಶ್ರೇಯಾಂಕ ರಹಿತ ಆಟಗಾರ್ತಿಯಾಗಿ ಕಣಕ್ಕಿಳಿದ್ದ ಮರ್ಕೆಟಾ ಆರಂಭದಿಂದಲೂ ಅದ್ಭುತ ಪ್ರದರ್ಶನವನ್ನೇ ನೀಡುತ್ತಾ ಬಂದಿದ್ದರು. ಅದೇ ಆತ್ಮವಿಶ್ವಾಸದೊಂದಿಗೆ ಫೈನಲ್‌ನಲ್ಲೂ ಕಣಕ್ಕಿಳಿದ ಮರ್ಕೆಟಾ ವಿಜಯ ಸಾಧಿಸಿದ್ದಾರೆ. ಇದನ್ನೂ ಓದಿ: Asian Games 2023ಗೆ ಟೀಂ ಇಂಡಿಯಾ ರೆಡಿ – ರಿಂಕುಗೆ ಕೊನೆಗೂ ಸಿಕ್ತು ಚಾನ್ಸ್, ಫಸ್ಟ್ ರಿಯಾಕ್ಷನ್ ಏನು?

    ಇದು ಮರ್ಕೆಟಾ ಗೆದ್ದ ಚೊಚ್ಚಲ ಗ್ರ್ಯಾಂಡ್‌ ಸ್ಲ್ಯಾಮ್‌ ಸಿಂಗಲ್ಸ್‌ ಕಿರಿಟವಾಗಿದೆ. 2019ರ ಫ್ರೆಂಚ್‌ ಓಪನ್‌ ಸಿಂಗಲ್ಸ್‌ ಫೈನಲ್‌ ತಲುಪಿದ್ದ ಮರ್ಕೆಟಾ, ಆಗಿನ ವಿಶ್ವದ ನಂ.1 ಆಟಗಾರ್ತಿ ಆಸ್ಟ್ರೇಲಿಯಾದ ಆಟಗಾರ್ತಿ ಆಷ್ಲೇ ಬಾರ್ಟಿ ಎದುರು ನೇರ ಸೆಟ್‌ಗಳಿಂದ ಸೋತು ರನ್ನರ್ಸ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಂಬಲ್ಡನ್‌ ಟೆನ್ನಿಸ್‌ ಟೂರ್ನಿಯಲ್ಲೂ ಕೆಜಿಎಫ್‌ ಹವಾ

    ವಿಂಬಲ್ಡನ್‌ ಟೆನ್ನಿಸ್‌ ಟೂರ್ನಿಯಲ್ಲೂ ಕೆಜಿಎಫ್‌ ಹವಾ

    ಲಂಡನ್‌: ಪ್ರತಿಷ್ಠಿತ ವಿಂಬಲ್ಡನ್‌ ಟೆನ್ನಿಸ್‌ ಟೂರ್ನಿಯಲ್ಲೂ ಕನ್ನಡದ ಕೆಜಿಎಫ್‌ ಸದ್ದು ಮಾಡಿದೆ.

    ಫೈನಲ್ ಪಂದ್ಯದಲ್ಲಿ ನೋವಾಕ್ ಜೋಕೋವಿಚ್, ಆಸ್ಪ್ರೇಲಿಯಾದ ನಿಕ್‌ ಕಿರಿಯೋಸ್ ವಿರುದ್ಧ 4-6 6-3 6-4 7-6(3) ಅಂತರದಲ್ಲಿ ಗೆಲುವು ಸಾಧಿಸಿ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ.

    ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ವಿಂಬಲ್ಡನ್‌ ಫೇಸ್‌ಬುಕ್‌ ಖಾತೆಯಲ್ಲಿ ಕೆಜಿಎಫ್‌ ಸಿನಿಮಾದ ಪ್ರಸಿದ್ಧ ಡೈಲಾಗ್‌ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. “Trophies, trophies, trophies….I like trophies and trophies like me…I can’t avoid” ಎಂದು ಬರೆದು ಜೋಕೋವಿಚ್ ಅವರನ್ನು ಅಭಿನಂದಿಸಲಾಗಿದೆ. ಇದನ್ನೂ ಓದಿ: ಮುಂದಿನ ಚಿತ್ರಕ್ಕಾಗಿ 15 ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ ಯಶ್

    ಕೆಜಿಎಫ್‌ ಚಾಪ್ಟರ್‌ 2 ಸಿನಿಮಾದಲ್ಲಿ ಯಶ್‌ ಅವರ ಡೈಲಾಗ್‌ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿತ್ತು. “Violence, violence, violence. I don’t like it. I avoid. But, violence likes me, I can’t avoid” ಈ ಡೈಲಾಗ್‌ಗೆ ಅಭಿಮಾನಿಗಳು ಫಿದಾ ಆಗಿದ್ದರು.

    ವಿಂಬಲ್ಡನ್‌ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ನೋವಾಕ್ ಜೋಕೋವಿಚ್ 21ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಲಸಿಕೆ ಕಾರಣ ಅಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಆದ ಅವಮಾವನ್ನು ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಮೂಲಕ ತೀರಿಸಿಕೊಂಡಿದ್ದಾರೆ.

    ನೋವಾಕ್ ಜೋಕೋವಿಚ್ ಮತ್ತೊಂದು ದಾಖಲೆ ಬರೆದಿದ್ದಾರೆ. ಇದು ನೋವಾಕ್ ಗೆದ್ದ ಸತತ 4ನೇ ವಿಂಬಲ್ಡನ್ ಪ್ರಶಸ್ತಿಯಾಗಿದೆ. ಇಷ್ಟೇ ಅಲ್ಲ ವಿಂಬಲ್ಡನ್‌ನ 8 ಫೈನಲ್ ಪಂದ್ಯದಲ್ಲಿ 7 ಪಂದ್ಯ ಗೆದ್ದ ಮತ್ತೊಂದು ದಾಖಲೆ ಸರಿಗಟ್ಟಿದ್ದಾರೆ. ಈ ಹಿಂದೆ ಅಮೆರಿಕದ ಪೀಟ್‌ ಸ್ಯಾಂಪ್ರಸ್‌ 7 ಬಾರಿ ವಿಂಬಲ್ಡನ್‌  ಚಾಂಪಿಯನ್‌ ಆಗಿ ಹೊರಹೊಮ್ಮಿದ್ದರು.

    Live Tv
    [brid partner=56869869 player=32851 video=960834 autoplay=true]