Tag: ವಿಕಲಚೇತನ ಮಹಿಳೆ

  • ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ASI ಅಮಾನತು

    ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ASI ಅಮಾನತು

    ಬೆಂಗಳೂರು: ಗಾಡಿ ಟೋಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲೇಟು ನೀಡಿದ ವಿಕಲಚೇತನ ಮಹಿಳೆಯ ಮೇಲೆ ದರ್ಪ ತೋರಿದ ಎಎಸ್‍ಐ ನಾರಾಯಣ್ ಅಮಾನತು ಮಾಡಲಾಗಿದೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೆ ಗೌಡ ಅವರು, ಹಲ್ಲೆ ಸಂಬಂಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳದೆ ಹಲ್ಲೆ ಮಾಡಿರೋದು ತಪ್ಪು. ಹಾಗಾಗಿ ಸದ್ಯಕ್ಕೆ ಹಲಸೂರು ಗೇಟ್‍ನಿಂದ ಎಎಸ್‍ಐರನ್ನು ಸ್ಥಳದಿಂದ ಮ್ಯಾನೆಜ್‍ಮೆಂಟ್ ಸೆಂಟರ್‌ಗೆ ನಿಯೋಜಿಸಲಾಗಿದೆ. ಘಟನೆ ಬಗ್ಗೆ ಇಲಾಖೆ ತನಿಖೆಗೆ ಕೂಡ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಘಟನೆಯೇನು?: ಟೋಯಿಂಗ್ ವಾಹನದಲ್ಲಿ ಕೂತಿದ್ದ ಹಲಸೂರ್ ಗೇಟ್ ಸಂಚಾರಿ ಟೋಯಿಂಗ್ ಎಎಸ್‍ಐ ನಾರಾಯಣ್ ಮೇಲೆ ವಿಕಲಚೇತನ ಮಹಿಳೆ ಕಲ್ಲೇಟು ನೀಡಿದ್ದಾರೆ. ಪರಿಣಾಮ ಎಎಸ್‍ಐ ಮುಖಕ್ಕೆ ಕಲ್ಲು ತಾಗಿ ರಕ್ತ ಬಂದಿದೆ. ಇದರಿಂದ ಸಿಟ್ಟಿಗೆದ್ದ ಎಎಸ್‍ಐ, ಕೂಡಲೇ ವಾಹನದಿಂದ ಕೆಳಗಿಳಿದು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಬೂಟಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.  ಇದನ್ನೂ ಓದಿ: ಗಾಡಿ ಟೋಯಿಂಗ್ ಮಾಡ್ತಿದ್ದ ASIಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದ ನಾರಾಯಣ್

    ಜ.24 ರಂದು ನಡೆದಿರುವ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಬೆಳಕಿಗೆ ಬಂದಿದೆ. ಎಎಸ್‍ಐ ಮೇಲೆ ಮಹಿಳೆ ಎರಡು ಬಾರಿ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಮಹಿಳೆ ಹಲ್ಲೆಯಿಂದ ಕೋಪಗೊಂಡ ಎಎಸ್‍ಐ ನಿಂದಲೂ ಮಹಿಳೆ ಮೇಲೆ ರಸ್ತೆಯಲ್ಲೆ ಹಲ್ಲೆಗೈದಿರುವುದಾಗಿ ತಿಳಿದುಬಂದಿದೆ. ಘಟನೆ ಬಳಿಕ ಎಎಸ್ ಐ ನಾರಾಯಣ್ ಅವರು ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿ ಹಲ್ಲೆ ಆರೋಪದಡಿ ಮಹಿಳೆಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ತಪಾಸಣೆ ನೆಪದಲ್ಲಿ ಮಹಿಳಾ ರೋಗಿಗೆ ಕಿರುಕುಳ – ವೈದ್ಯನ ವಿರುದ್ಧ ದೂರು

  • ಅಂಗನವಾಡಿ ಶಿಕ್ಷಕಿ ಹುದ್ದೆಗಾಗಿ ವಿಕಲಚೇತನೆಯ ಒಂಟಿ ಹೋರಾಟ

    ಅಂಗನವಾಡಿ ಶಿಕ್ಷಕಿ ಹುದ್ದೆಗಾಗಿ ವಿಕಲಚೇತನೆಯ ಒಂಟಿ ಹೋರಾಟ

    ರಾಯಚೂರು: ಅಂಗನವಾಡಿ ಶಿಕ್ಷಕಿ ಹುದ್ದೆಗೆ ಅಕ್ರಮ ನೇಮಕಾತಿ ಮಾಡುವ ಮೂಲಕ ನನಗೆ ಅನ್ಯಾಯವಾಗಿದೆ ಅಂತ ರಾಯಚೂರಿನಲ್ಲಿ ವಿಕಲಚೇತನ ಮಹಿಳೆ ಒಂಟಿ ಹೋರಾಟ ನಡೆಸಿದ್ದಾರೆ.

    ಜಿಲ್ಲೆಯ ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮದ ಹಂಪಮ್ಮ ಹುಟ್ಟುತ್ತಲೇ ಅಂಗವೈಕಲ್ಯ ಹೊಂದಿದ್ದರು. ಬೆಳವಣಿಗೆ ಇಲ್ಲದೆ ಈಗಲೂ ಕುಳ್ಳಗೆ ಇದ್ದಾರೆ. ಆದರೆ ವಿಷಯ ಅದೊಂದೇ ಅಲ್ಲಾ. ಅಂಗನವಾಡಿ ಶಿಕ್ಷಕಿ ಹುದ್ದೆಗೆ ನೇಮಕಾತಿ ಮಾಡಬೇಕಾದರೆ ಸ್ಥಳೀಯರಿಗೆ ಪ್ರಾಶಸ್ತ್ಯ ನೀಡಬೇಕು. ಆದರೆ ಸ್ಥಳೀಯರಲ್ಲದವರನ್ನು ನಕಲಿ ದಾಖಲೆಗಳ ಮೂಲಕ ಆಯ್ಕೆ ಮಾಡಿ ಸ್ಥಳೀಯರಿಗೆ ಅನ್ಯಾಯ ಮಾಡಲಾಗಿದೆ ಎಂದು ಹಂಪಮ್ಮ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ.

    ಮಸ್ಕಿ ತಾಲೂಕಿನ ಹಿರೆದಿನ್ನಿ ಗ್ರಾಮದ ಸುಧಾಕಲಾ ಎಂಬುವವರನ್ನು ಗೋರ್ಕಲ್ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಿಕ್ಷಕಿಯಾಗಿ ನೇಮಕ ಮಾಡಲಾಗಿದೆ. ಆದರೆ ತವರು ಮನೆ, ಗಂಡನ ಮನೆ ಎರಡೂ ಹಿರೆದಿನ್ನಿ ಆಗಿದ್ದರು, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಎಲ್ಲವೂ ಹಿರೆದಿನ್ನಿ ವಿಳಾಸದಲ್ಲಿದ್ದರೂ ಕಂದಾಯ ಇಲಾಖೆ ಅಧಿಕಾರಿಗಳು ಸುಳ್ಳು ವಾಸಸ್ಥಳ ಪ್ರಮಾಣ ಪತ್ರ ಕೊಟ್ಟು ವಂಚನೆ ಮಾಡಿದ್ದಾರೆ. ಸುಳ್ಳು ದಾಖಲೆಗಳ ಮೂಲಕ ಶಿಕ್ಷಕಿಯಾಗಿ ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿರುವ ಸುಧಾಕಲಾರನ್ನು ಬೇರೆಡೆ ವರ್ಗಾವಣೆ ಮಾಡಿ ಸ್ಥಳೀಯಳಾದ ನನಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವಿವಾಹಿತ ಮಹಿಳೆ ಹಂಪಮ್ಮ ಮನವಿ ಮಾಡಿದ್ದಾರೆ.

    ಶಿಶುಅಭಿವೃದ್ಧಿ ಯೋಜನೆ ಅಧಿಕಾರಿಗಳು ಶಿಕ್ಷಕಿ ಹುದ್ದೆಗೆ ಅರ್ಜಿ ಆಹ್ವಾನಿಸಿದಾಗ ನಾನೂ ಅರ್ಜಿ ಸಲ್ಲಿಸಿದ್ದು, ಸ್ಥಳೀಯಳಾಗಿ ನಾನು ಎಲ್ಲಾ ಅರ್ಹತೆ ಹೊಂದಿದ್ದರೂ ಬೇರೆ ಗ್ರಾಮದವರಿಗೆ ಮನ್ನಣೆ ನೀಡಿರುವುದು ಅಕ್ರಮ ಎಂದು ಹಂಪಮ್ನ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.