Tag: ವಿಕಾಸ್‌ ಕುಮಾರ್‌ ವಿಕಾಸ್‌

  • ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್- ವಿಕಾಸ್ ಕುಮಾರ್ ಸಸ್ಪೆಂಡ್ ಆದೇಶ ವಾಪಸ್

    ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್- ವಿಕಾಸ್ ಕುಮಾರ್ ಸಸ್ಪೆಂಡ್ ಆದೇಶ ವಾಪಸ್

    – ಕಾರಾಗೃಹ ಎಡಿಜಿಪಿಯಾಗಿ ಬಿ.ದಯಾನಂದ್ ನಿಯೋಜನೆ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ವಿಕಾಸ್ ಕುಮಾರ್‌ ವಿಕಾಸ್ ಮೇಲಿನ ಅಮಾನತನ್ನು ಸರ್ಕಾರ ವಾಪಸ್ ಪಡೆದಿದೆ.

    ವಿಕಾಸ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿ ಆಗಿ ನಿಯೋಜನೆ ಮಾಡಿದೆ. ಅಲ್ಲದೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್‌ಗೆ ಎಡಿಜಿಪಿ ಕಾರಾಗೃಹ, ಕೇಂದ್ರ ವಿಭಾಗ ಡಿಸಿಪಿಯಾಗಿದ್ದ ಶೇಖರ್‌ರಿಗೆ ಗುಪ್ತಚರ ಇಲಾಖೆ ಎಸ್ಪಿಯಾಗಿ ಸ್ಥಳ ನಿಯೋಜನೆ ಮಾಡಲಾಗಿದೆ.

    ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತವಾಗಿ 11 ಜನ ಸಾವನ್ನಪ್ಪಿದ್ದರು.

  • ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

    ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್ ವಿಕಾಸ್‌ಗೆ (Vikas Kumar Vikas) ಬಿಗ್‌ ರಿಲೀಫ್‌ ಸಿಕ್ಕಿದೆ.

    ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸ್‌ ಕುಮಾರ್‌ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶಿಸಿದೆ. ಇದನ್ನೂ ಓದಿ: ಬೆಂಗಳೂರು ಜನತೆಗೆ ಮತ್ತೆ ದರ ಏರಿಕೆ ಬಿಸಿ – ಹೊಸೂರು ರಸ್ತೆಯ ಎರಡು ಟೋಲ್ ದರ ಏರಿಕೆ

    ಸಿಎಟಿ ಆದೇಶದಿಂದ ಸರ್ಕಾರಕ್ಕೆ ಮುಖಭಂಗ ಆಗಿದೆ. ಇನ್ನಿಬ್ಬರು ಅಧಿಕಾರಿಗಳ ಅಮಾನತುನ್ನು ಗಮನಿಸುವಂತೆ ಸರ್ಕಾರಕ್ಕೆ ಸಿಎಟಿ ಆದೇಶಿಸಿದೆ. ಇನ್ನಿಬ್ಬರ ಅಮಾನತು ಅನ್ನು ವಾಪಸ್‌ ಪಡೆಯಬಹುದು ಎಂದು ಸಲಹೆ ನೀಡಿದೆ. ಇಬ್ಬರು ಅಧಿಕಾರಿಗಳು CATಗೆ ಹೋಗದಿದ್ದಕ್ಕೆ ಸರ್ಕಾರಕ್ಕೆ ಸಲಹೆ ನೀಡಿದೆ.

    ಜೂ.4 ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಮ್ಯಾಜಿಸ್ಟ್ರೇಟಿಯಲ್‌ಗೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಹಿಸಿತ್ತು. ಇದನ್ನೂ ಓದಿ: Hassan | ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

    ಪ್ರಕರಣದಲ್ಲಿ ಬೆಂಗಳೂರು ಕಮಿಷನರ್‌ ಆಗಿದ್ದ ದಯಾನಂದ್‌ ಸೇರಿದಂತೆ 6 ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ತಮ್ಮ ಅಮಾನತು ಆದೇಶ ಪ್ರಶ್ನಿಸಿ ವಿಕಾಸ್‌ ಕುಮಾರ್‌ ಅವರನ್ನು ಸಿಎಟಿ ಮೆಟ್ಟಿಲೇರಿದ್ದರು.