Tag: ವಿಕಾಸ ಸೌಧ

  • ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಹಾಯವಾಣಿ ಆರಂಭ – ಸಕ್ಕರೆ ಇಲಾಖೆ ತೀರ್ಮಾನ

    ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಹಾಯವಾಣಿ ಆರಂಭ – ಸಕ್ಕರೆ ಇಲಾಖೆ ತೀರ್ಮಾನ

    ಬೆಂಗಳೂರು: ರೈತರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಸಹಾಯವಾಣಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ (Shankar Patil Munenakoppa) ತಿಳಿಸಿದರು.

    2022-23ನೇ ಹಂಗಾಮಿಗೆ ಕಬ್ಬು ಬೆಲೆ ನಿಗದಿ ಹಾಗೂ ಇತರೇ ಸಮಸ್ಯೆಗಳ ಕುರಿತು ಚರ್ಚೆಗಾಗಿ ಕಬ್ಬು ನಿಯಂತ್ರಣ ಮಂಡಳಿ ಜೊತೆ ವಿಕಾಸ ಸೌಧದಲ್ಲಿ ಸಭೆ ನಡೆಸಿದರು. ಇಲಾಖೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದರೂ ಈ ಕಾಲ್ ಸೆಂಟರ್ ಮೂಲಕ ಇಲಾಖೆಗೆ ಹೋಗಿ, 24 ಗಂಟೆಗಳೊಳಗೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

    ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಫ್‍ಆರ್‌ಪಿಯಲ್ಲಿ ರಾಜ್ಯ ಸರ್ಕಾರ ಕೂಡ ಒಂದಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ಸೇರಿಸಿ ನೀಡಬೇಕೆಂಬುದು ರೈತ ಮುಖಂಡರ ಬೇಡಿಕೆಯಾಗಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು ಸಭೆಯ ಪ್ರಮುಖ ಅಂಶಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳನ್ನು ಶೀಘ್ರದಲ್ಲೇ ಭೇಟಿಯಾಗುವುದಾಗಿ ಸಚಿವರು ತಿಳಿಸಿದರು.

    ಸಕ್ಕರೆ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಮುತುವರ್ಜಿ ವಹಿಸಿ ಶೀಘ್ರದಲ್ಲೇ ನೇಮಕಾತಿ ಆರಂಭ ಮಾಡುವ ಭರವಸೆ ನೀಡಿದರು. ಇದನ್ನೂ ಓದಿ:  ಬೆಳಕಿನ ಹಬ್ಬ ದೀಪಾವಳಿಗೆ ʻಅವಂತ್ರ ಬೈ ಟ್ರೆಂಡ್ಸ್‌ʼ ವಿಶಿಷ್ಟ ಸಂಗ್ರಹ – 399 ರೂ.ರಿಂದ 39,999 ರೂ. ತನಕ ಸಿಗುತ್ತೆ ಸೀರೆಗಳು

    ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ 72 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯವನ್ನು ಕೈಗೊಂಡಿರುತ್ತವೆ. ಸದರಿ ಹಂಗಾಮಿಗೆ 622.26 ಲಕ್ಷ ಮೆ.ಟನ್ ಕಬ್ಬನ್ನು ನುರಿಸಿ, 59,78 ಲಕ್ಷ ಮೆ.ಟನ್ ಸಕ್ಕರೆಯನ್ನು ಉತ್ಪಾದಿಸಿ, ಸಕ್ಕರೆ ಕಾರ್ಖಾನೆಗಳು, 19,919.90 ಕೋಟಿ ರೂ. ಪಾವತಿಸಿದೆ. ಬಾಕಿ ಮೊತ್ತ 2.49 ಕೋಟಿಗಳಷ್ಟು ಇರುತ್ತದೆ. ಈ ತಿಂಗಳ ಅಂತ್ಯಕ್ಕೆ ಒಂದು ಕಾರ್ಖಾನೆ ಹಣವನ್ನು ಬಾಕಿ ಉಳಿಸಿಕೊಂಡಿದ್ದು, ಈ ತಿಂಗಳ ಅಂತ್ಯದಲ್ಲಿ ಹಣ ಪಾವತಿಸುವುದಾಗಿ ಸರ್ಕಾರಕ್ಕೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ಹಂಗಾಮು ಪ್ರಾರಂಭವಾಗುವ ಮೊದಲೇ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಶೇ.100ರಷ್ಟು ಹಣ ಪಾವತಿಸಲು ಕ್ರಮವಹಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರ ಮತ್ತು ಸರ್ಕಾರದ ಸಾಧನೆಗೆ ಸಭೆಯಲ್ಲಿದ್ದ ಮಂಡಳಿಯ ಸದಸ್ಯರು ಅಭಿನಂದಿಸಿದರು.

    ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರಿಗೆ ಸಮನ್ವಯ ಸಾಧಿಸಿ ಕಾರ್ಖಾನೆಗಳು ಜರುಗಿಸುತ್ತಿರುವ ವ್ಯವಹಾರಗಳಲ್ಲಿ ಪಾರದರ್ಶಕತೆ ಮತ್ತು ಸಮರ್ಥತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಕ್ಕರೆ ಇಲಾಖೆಯಲ್ಲಿ ಮಾಹಿತಿ ಸಂಗ್ರಹಿಸಿ, ಕ್ರೋಢೀಕರಿಸಿ ರೈತರಿಗೆ ಅನುಗುಣವಾಗುವಂತೆ ಹೊಸ ಆ್ಯಪ್‍ನ್ನು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಇದೇ ವೇಳೆ ಬಿಡುಗಡೆ ಮಾಡಿದರು. ಇದನ್ನೂ ಓದಿ: ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್, ಡೆಂಗ್ಯೂ ರೋಗಿ ಸಾವು – ತನಿಖೆಗೆ ಆದೇಶ

    ಸಕ್ಕರೆ ಕಾರ್ಖಾನೆಗಳು ಸತತವಾಗಿ ಪಾವತಿಸುತ್ತಿರುವ ಕಬ್ಬಿನ ಬಿಲ್ಲು, ಸಕ್ಕರೆ ಇಳುವರಿ, ಬಾಕಿ ಇರುವ ಕಬ್ಬಿನ ಬಿಲ್ಲಿನ ಮೊತ್ತ, ಕಬ್ಬು ಪ್ರದೇಶ, ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಹಾಗೂ ಇತರ ಉಪಉತ್ಪನ್ನಗಳಿಂದ ಬರುವ ಆದಾಯ ಹಾಗೂ ಆದಾಯ ಹಂಚಿಕೆ ವಿವರ, ಸಕ್ಕರೆ ಮತ್ತು ಕಾಕಂಬಿ ದಾಸ್ತಾನು ವಿವರಗಳನ್ನು ನಿಖರವಾಗಿ ಮತ್ತು ತ್ವರಿತವಾಗಿ ಪಡೆಯಲು ಆಪ್ ಹಾಗೂ ಸಾಫ್ಟ್‌ವೇರ್ ಬಿಡುಗಡೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ: ಸಚಿವ ನಾಗೇಶ್

    ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ: ಸಚಿವ ನಾಗೇಶ್

    – ಮೊಬೈಲ್ ವೈನ್ ಶಾಪ್ ಗಳಿಗೆ ಸರ್ಕಾರ ಚಿಂತನೆ

    ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ ಮಾಡಲಾಗಿದೆ. ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ. ಇಂಥಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಯೋಚನೆ ಮಾಡಲಾಗಿದ್ದು, ಮನೆ ಬಾಗಿಲಿಗೆ ಮದ್ಯ ಪೂರೈಸೋ ಚಿಂತನೆ ಕೂಡ ಇಲಾಖೆ ಮುಂದಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

    ಇಂದು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಬೈಲ್ ವೈನ್ ಶಾಪ್‍ಗಳಿಗೆ ಸರ್ಕಾರ ಚಿಂತನೆ ಮಾಡಿದೆ. ಎಲ್ಲೆಲ್ಲಿ ವೈನ್ ಶಾಪ್‍ಗಳಿವೆ. ಅಲ್ಲಿ ಸಂಚಾರಿ ವೈನ್ ಶಾಪ್‍ಗಳ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಆದಾಯ ಬರುತ್ತೆ ಎಂಬುದು ಸರ್ಕಾರದ ಚಿಂತನೆ. ತಾಂಡಾಗಳಲ್ಲಿ ಸಂಚಾರಿ ವೈನ್ ಶಾಪ್‍ಗಳ ವ್ಯವಸ್ಥೆ ಮಾಡಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.

    ಗುಣಮಟ್ಟದ ಮದ್ಯ ಕೊಡಬೇಕು ಅನ್ನೋದು ನಮ್ಮ ಉದ್ದೇಶ. 2018-19 ರಲ್ಲಿ 19,750 ಸಾವಿರ ಕೋಟಿ ರೂ ಸಂಗ್ರಹ ಗುರಿ ನಿಗದಿ ಪಡಿಸಲಾಗಿತ್ತು. 19,943 ಕೋಟಿ ಗುರಿ ಸಾಧಿಸಿದ್ದೇವೆ. 2019-20 ನೇ ಸಾಲಿನಲ್ಲಿ 21 ಸಾವಿರ ಕೋಟಿ ಗುರಿ ನಿಗದಿ ಪಡಿಸಿದ್ದೇವೆ. ಪಾರ್ಟಿಗಳಲ್ಲಿ ಬೇರೆ ಕಡೆಯಿಂದ ಮದ್ಯ ತಂದು ಉಪಯೋಗಿಸುತ್ತಾರೆ. ಆಗಾಗಿ ಅಂತಹಾ ಪಾರ್ಟಿಗಳ ಮೇಲೆ ನಮ್ಮ ಅಧಿಕಾರಿಗಳು ದಾಳಿ ಮಾಡುತ್ತಾರೆ. ಗಾಂಜಾ ಮತ್ತು ಮಾದಕವಸ್ತುಗಳ ಬಳಕೆಗೆ ಕಡಿವಾಣ ಹಾಕುತ್ತೇವೆ ಎಂದು ಹೇಳಿದರು.

    ಮದ್ಯಪಾನ ನಿಷೇಧದ ಬಗ್ಗೆ ಸರ್ಕಾರದ ಮುಂದೆ ಯಾವುದೇ ಚಿಂತನೆ ಇಲ್ಲ. ಈ ಹಿಂದೆ ಮಹಿಳೆಯರು ಪ್ರತಿಭಟನೆ ಮಾಡಿದ್ದು ನನಗೆ ಗೊತ್ತಿಲ್ಲ. ನಾನು ಬಹುಶಃ ಬಾಂಬೆಯಲ್ಲಿದ್ದೆ. ಆಗ ನನ್ನ ಫೋನ್ ಸ್ವಿಚ್ ಆಫ್ ಇತ್ತು ಎಂದು ಹೇಳಿದರು. ಇದೇ ವೇಲೆ ಡಿಕೆಶಿ ಬಗ್ಗೆ ಕೇಳಿದಾಗ, ಈ ಬಗ್ಗೆ ಸಿಎಂ ಆಗಲೇ ಮೂವರು ಸಚಿವರಿಗೆ ಹೇಳಿಕೆ ಕೊಡದಂತೆ ವಾರ್ನ್ ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ನಾನೇನು ಹೇಳಲ್ಲ ಎಂದು ತಿಳಿಸಿದರು.

  • ಲೋಕಾಯುಕ್ತರ ಮೇಲೆ ಚೂರಿ ಇರಿತದ ಬಳಿಕ ಎಚ್ಚೆತ್ತು ಭದ್ರತೆ ಬಿಗಿಗೊಳಿಸಿದ ಸರ್ಕಾರ

    ಲೋಕಾಯುಕ್ತರ ಮೇಲೆ ಚೂರಿ ಇರಿತದ ಬಳಿಕ ಎಚ್ಚೆತ್ತು ಭದ್ರತೆ ಬಿಗಿಗೊಳಿಸಿದ ಸರ್ಕಾರ

    ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಇರಿತ ಪ್ರಕರಣದವಾದ ಬಳಿಕ ಎಚ್ಚೆತ್ತು ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಿದೆ.

    ಈ ಸಂಬಂಧ ಭದ್ರತೆಯನ್ನು ಬಿಗಿಗೊಳಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಇದು ಸರ್ಕಾರ ಏನ್ರೀ? ಮೊದಲು ಈ ಸರ್ಕಾರ ತೊಲಗಬೇಕು: ಮಾಜಿ ಉಪಲೋಕಾಯುಕ್ತ ಚಂದ್ರಶೇಖರಯ್ಯ

    ಸುತ್ತೋಲೆಯಲ್ಲಿ ಏನಿದೆ?
    ಪ್ರಸ್ತುತ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಿಗೆ ಪ್ರವೇಶ ಬಯಸುವ ಸಾರ್ವಜನಿಕರನ್ನು ತಪಾಸಣೆಗೊಳಪಡಿಸಿ ಅವರುಗಳ ಬ್ಯಾಗ್ ಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ. ಮಾರ್ಚ್ 7ರಂದು ಲೋಕಾಯುಕ್ತರ ಕಛೇರಿಯಲ್ಲಿ ನಡೆದ ಘಟನೆಯಿಂದಾಗಿ ಭದ್ರತಾ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಆದ್ದರಿಂದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿನ ಸಚಿವಾಲಯದ ಎಲ್ಲ ಕಛೇರಿಗಳೂ ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಗಧಿತ ಸಂದರ್ಶಕರ ಭೇಟಿ ಸಮಯಕ್ಕೆ ಮಿತಿಗೊಳಿಸತಕ್ಕದ್ದು. ಅಷ್ಟೇ ಅಲ್ಲದೇ ಭೇಟಿ ಪಡೆಯುವ ಪ್ರತಿಯೊಬ್ಬ ಸಾರ್ವಜನಿಕರನ್ನು ಕೂಲಂಕುಷ ತಪಾಸಣೆಗೊಳಪಡಿಸಿ ಹಾಗೂ ಅವರುಗಳ ಬ್ಯಾಗೇಜ್ ಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಲೋಹ ತಪಾಸಣಾ ಯಂತ್ರದ ಮೂಲಕ ಹಾದು ಹೋಗಲೇಬೇಕೆಂಬ ಪದ್ಧತಿಯನ್ನು ಅನುಸರಿಸಬೇಕು. ಈ ಬಗ್ಗೆ ಯಾವುದೇ ಲೋಪವಾದಲ್ಲಿ ಪೊಲೀಸ್ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಲಾಗುವುದು ಎಂದು ಈ ಮೂಲಕ ಸೂಚನೆಗಳಮನ್ನು ನೀಡಲಾಗಿದೆ. ಇದನ್ನೂ ಓದಿ: ದೂರುಗಳ ಮೇಲೆ ದೂರು ಕೊಟ್ಟರೂ ಪ್ರಯೋಜನ ಆಗಿಲ್ಲ- ಪೊಲೀಸ್ ಮುಂದೆ ತಪ್ಪೊಪ್ಪಿಕೊಂಡ ತೇಜರಾಜ್

     

  • ವಾಸ್ತು ಸರಿ ಇಲ್ಲದ್ದಕ್ಕೆ ಸಚಿವ ರಮೇಶ್ ಕುಮಾರ್ ವಿಕಾಸ ಸೌಧಕ್ಕೆ ಶಿಫ್ಟ್!

    ವಾಸ್ತು ಸರಿ ಇಲ್ಲದ್ದಕ್ಕೆ ಸಚಿವ ರಮೇಶ್ ಕುಮಾರ್ ವಿಕಾಸ ಸೌಧಕ್ಕೆ ಶಿಫ್ಟ್!

    ಬೆಂಗಳೂರು: ಕೋಲಾರದಲ್ಲಿ ನವಜಾತ ಶಿಶುಗಳ ಮರಣ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಗುರುವಾರವೇ ವಿಧಾನ ಸೌಧದಿಂದ ವಿಕಾಸ ಸೌಧಕ್ಕೆ ಆರೋಗ್ಯ ಸಚಿವ ರಮೇಶ್‍ಕುಮಾರ್ ಶಿಫ್ಟ್ ಆಗಿದ್ದಾರೆ.

    ಹೌದು. ವಿಧಾನಸೌಧದ ಮೂರನೇ ಮಹಡಿಯ 343ರ ಕೊಠಡಿ ಸಂಖ್ಯೆಯಲ್ಲಿ ಸಚಿವ ರಮೇಶ್‍ಕುಮಾರ್ ಅವರ ಕಚೇರಿ ಇತ್ತು. ಆದರೆ ಈಗ ವಿಕಾಸಸೌಧದ ಮೊದಲನೇ ಮಹಡಿಯ 143 ರ ಕೊಠಡಿಗೆ ಶಿಫ್ಟ್ ಆಗಿದ್ದಾರೆ.

    ವಾಸ್ತು ಸರಿ ಇಲ್ಲ ಎಂದು ಹೇಳಿ ವಿಧಾನಸೌಧವನ್ನೇ ತೊರೆದ ಸಚಿವ ರಮೇಶ್ ಕುಮಾರ್ ಅವರ ನಡೆಯ ಬಗ್ಗೆ ವಿಧಾನ ಸೌಧದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

     

    https://youtu.be/sZPG6H46X98

    https://youtu.be/54XS1Azy9pM