Tag: ವಿಕ್ರಂ ಗೌಡ

  • ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ – ನಕ್ಸಲ್‌ ವಿಕ್ರಂ ಗೌಡ ಸಹೋದರಿ ಮನವಿ

    ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ – ನಕ್ಸಲ್‌ ವಿಕ್ರಂ ಗೌಡ ಸಹೋದರಿ ಮನವಿ

    ಉಡುಪಿ: ಎನ್‌ಕೌಂಟರ್‌ (Encounter) ಆಗಿದೆ, ಜೀವವೂ ಹೋಗಿದೆ. ಜೀವ ವಾಪಸ್‌ ಕೊಡೋದಕ್ಕೆ ಸಾಧ್ಯವಿಲ್ಲ. ಸರೆಂಡರ್‌ ಕೊಡೋ ಪರಿಹಾರ ನಮಗೂ ಕೊಡಿ ಎಂದು ಮೃತ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡ (Vikram Gowda) ಸಹೋದರಿ ಸುಗುಣ ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ನಕ್ಸಲ್ ಶರಣಾಗತಿ ವಿಚಾರ ಚರ್ಚೆಯಲ್ಲಿರುವ ಸಂದರ್ಭ ಇತ್ತೀಚೆಗೆ ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡ ಸಹೋದರಿ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ, ಪರಿಹಾರ ಆದ್ರೂ ನೀಡಿ ಅಂತ ಮನವಿ ಮಾಡಿದ್ದಾರೆ.

    ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದಿದ್ದರೂ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ, ಎನ್‌ಕೌಂಟರ್ ಆಗಿದೆ ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡೋ ಪರಿಹಾರವನ್ನ ನಮಗೂ ಕೊಟ್ರೆ ಸಾಕು, ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಕೋರಿದ್ದಾರೆ.

    ಕಳೆದ ನವೆಂಬರ್‌ 19ರಂದು ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡನನ್ನು ಎನ್‌ಕೌಂಟರ್‌ (Encounter) ಮಾಡಿ ಹತ್ಯೆ ಮಾಡಲಾಗಿತ್ತು.

    3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌:
    ವಿಕ್ರಂ ಗೌಡ ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆಗಿದ್ದ. ಅಲ್ಲದೇ ವಿಕ್ರಂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು ಎಂದು ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ʻಪಬ್ಲಿಕ್‌ ಟಿವಿʼಗೆ ತಿಳಿಸಿದ್ದರು.

    ಸುಮಾರು 2002-03ರಿಂದ ಆತ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ. ‘ಕರ್ನಾಟಕ ವಿಮೋಚನಾ ಸಂಘ’ ಆರಂಭಿಸಿದಾಗ ಆತ ಅದರಲ್ಲಿ ಸೇರಿಕೊಂಡ. ಸಾಕೇತ್ ರಾಜನ್ ಬಂದ ನಂತರ ಅದು ನಕ್ಸಲ್‌ರ ಸಂಘ ಎನ್ನುವಂತದ್ದು ಗೊತ್ತಾಯಿತು. ಆರಂಭದಲ್ಲಿ ಅವರು ಲಾವಣಿ ಪದಗಳನ್ನು ಹಾಡುತ್ತಾ ಮನೆ ಮನೆಗೆ ಬರುತ್ತಿದ್ದರು. ತದನಂತರ ನಮ್ಮ ಊರಿನಲ್ಲಿ ಜನಾಭಿಪ್ರಾಯ ಸಂಗ್ರಹಿಸುತ್ತಿದ್ದರು. ನನ್ನನ್ನು ಒಮ್ಮೆ ಅವರ ಪ್ರತಿಭಟನೆಗೆ ಕರೆದಿದ್ದ ನಾನು ಹೋಗಿರಲಿಲ್ಲ. ಅದಕ್ಕಾಗಿ ನನ್ನ ಮೇಲೆ ದ್ವೇಷ ಇಟ್ಟಕೊಂಡು 2-3 ಬಾರಿ ನನ್ನ ಮನೆ ಮೇಲೆ ಪ್ರತಿಕಾರ ತೀರಿಸಲು ಮುಂದಾಗಿದ್ದ. 3-4 ಜನರ ತಂಡವನ್ನು ನಮ್ಮ ಮನೆಗೆ ದಾಳಿ ಮಾಡಲು ಕಳುಹಿಸುತ್ತಿದ್ದ. 2-3 ಬಾರಿ ನಮ್ಮ ಮನೆ ಮೇಲೆ ದಾಳಿ ಕೂಡ ಮಾಡಿದ್ದ ಎಂದು ವಿಕ್ರಮಾರ್ಜುನ ಹೇಳಿದ್ದರು.

  • ವಿಕ್ರಂ ಗೌಡನದ್ದು ಫೇಕ್ ಎನ್‌ಕೌಂಟರ್‌ – ಸಿಎಂ, ಗೃಹ ಸಚಿವರ ವಿರುದ್ಧ ಮಾಜಿ ನಕ್ಸಲ್ ಕಿಡಿ

    ವಿಕ್ರಂ ಗೌಡನದ್ದು ಫೇಕ್ ಎನ್‌ಕೌಂಟರ್‌ – ಸಿಎಂ, ಗೃಹ ಸಚಿವರ ವಿರುದ್ಧ ಮಾಜಿ ನಕ್ಸಲ್ ಕಿಡಿ

    – ಪೊಲೀಸರ ಕಥೆ ಗೊತ್ತಿರೋರು ಎನ್‌ಕೌಂಟರ್‌ ಅಂತ ಒಪ್ಪಲ್ಲ

    ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡನ (Vikram Gowda) ಹತ್ಯೆ ತೀವ್ರ ಖಂಡನೀಯ, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಎನ್‌ಕೌಂಟರ್‌ ಸಮರ್ಥಿಸಿಕೊಂಡಿರುವುದು ದುರಾದೃಷ್ಟಕರ ಎಂದು ಮಾಜಿ ನಕ್ಸಲ್ ನಿಲಗುಳಿ ಪದ್ಮನಾಭ್ (Nilaguli Padmanab) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚಿಕ್ಕಮಗಳೂರು (Chikkamagaluru) ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕ್ರಂ ಗೌಡನ ಹತ್ಯೆ ಅತ್ಯಂತ ಖಂಡನೀಯ, ಯಾರೂ ಒಪ್ಪುವಂತದ್ದಲ್ಲ. ಸತ್ಯವನ್ನು ತಿಳಿದುಕೊಳ್ಳದೆ ಒಮ್ಮುಖ ವರದಿ ನೋಡಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಹತ್ಯೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಯಾರೂ ಒಪ್ಪುವುದಿಲ್ಲ. ಪೊಲೀಸರ ಎನ್‌ಕೌಂಟರ್‌ (Police Encounter) ಕಥೆ ಗೊತ್ತಿರೋರು ಯಾರೂ ಇದನ್ನ ಎನ್‌ಕೌಂಟರ್‌ ಅಂತ ಒಪ್ಪಿಕೊಳ್ಳುವುದಿಲ್ಲ. ಇದನ್ನ ಪ್ರಜಾತಂತ್ರವಾದಿಯೂ ಒಪ್ಪುವ ವಿಚಾರವೇ ಅಲ್ಲ. ಹತ್ಯೆ ಕಪೋಲ ಕಲ್ಪಿತವಾಗಿ ಸೃಷ್ಟಿ ಮಾಡಿರುವ ಎನ್‌ಕೌಂಟರ್‌. ಎಲ್ಲೋ ಹಿಡಿದು ಹಿಂಸೆ ನೀಡಿ ಸಾಯಿಸಿ ಕೊನೆಗೆ ಉಡುಪಿಯ ಪೀತಬೈಲಿಗೆ ತಂದು ಮೃತದೇಹ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

    ಹತ್ಯೆ ಮಾಡಿ ಎಂದು ಸಂವಿಧಾನ ಹೇಳಿಲ್ಲ:
    ಹತ್ಯೆಯ ಬಗ್ಗೆ ಮಾಧ್ಯಮದವರಿಗೂ ತಿಳಿಯದಂತೆ ಯಾರಿಗೂ ಮುಖ ತೋರಿಸದೆ, ಎಲ್ಲಾ ವಿಚಾರವನ್ನು ವಂಚಿಸಿದ್ದಾರೆ. ಆರೋಪಿಯನ್ನು ಕೊಲೆ ಮಾಡಿ ಎಂದು ಸಂವಿಧಾನ (Constitution) ಕೂಡ ಹೇಳಿಲ್ಲ. ವಿಕ್ರಂ ಗೌಡನ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    ಸರ್ಕಾರದಿಂದ ಏನೂ ಪ್ರಯೋಜನ ಇಲ್ಲ:
    ಇನ್ನೂ ಸರ್ಕಾರ ನಕ್ಸಲರಿಗೆ (Naxal) ಮುಖ್ಯವಾಹಿನಿಗೆ ಬನ್ನಿ ಅನ್ನುತ್ತೆ. ಬಂದರೆ ಸರ್ಕಾರದಿಂದ ಏನೂ ಪ್ರಯೋಜನ ಇಲ್ಲ. ಕನ್ಯಾಕುಮಾರಿ ಮುಖ್ಯ ವಾಹಿನಿಗೆ ಬಂದು 8 ವರ್ಷವಾಯ್ತು. ನಾನು ಅತೀ ಕಷ್ಟದಲ್ಲಿದ್ದೇನೆ. ಮನೆ ಕೊಡಲಿಲ್ಲ, ನನ್ನ ಗುಡಿಸಲಿಗೆ ಕರೆಂಟ್ ಕೊಡ್ಲಿಲ್ಲ. ಕೇಸ್‌ಗಳು ಹಾಗೆಯೇ ಇವೆ. ವಾರಕ್ಕೆ ಮೂರು-ನಾಲ್ಕು ದಿನ‌ ಕೋರ್ಟ್‌ಗೆ ಅಲೆಯುತ್ತಿದ್ದೇನೆ. ಕನ್ಯಾಕುಮಾರಿ ಏಳೂವರೆ ವರ್ಷಗಳಿಂದ ಜೈಲಿನಲ್ಲಿದ್ದಾರೆ. ಇದು ಮುಖ್ಯವಾಹಿನಿನಾ? ಜೈಲಿನಲ್ಲಿರೋದು ಮುಖ್ಯವಾಹಿನಿಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

  • ಕೂಡ್ಲು ನದಿ ತಟದಲ್ಲಿ ನಟೋರಿಯಸ್ ನಕ್ಸಲ್ ವಿಕ್ರಂ ಗೌಡ ಅಂತ್ಯಸಂಸ್ಕಾರ

    ಕೂಡ್ಲು ನದಿ ತಟದಲ್ಲಿ ನಟೋರಿಯಸ್ ನಕ್ಸಲ್ ವಿಕ್ರಂ ಗೌಡ ಅಂತ್ಯಸಂಸ್ಕಾರ

    – ಸಹೋದರ, ಸಹೋದರಿ, ಕುಟುಂಬ, ಗ್ರಾಮಸ್ಥರು ಭಾಗಿ

    ಉಡುಪಿ: ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸಾವಿಗೀಡಾದ ನಕ್ಸಲ್ ನಾಯಕ ವಿಕ್ರಂ ಗೌಡ (Vikram Gowda) ಅಂತ್ಯಸಂಸ್ಕಾರವನ್ನು ಹುಟ್ಟೂರಾದ ಕೂಡ್ಲು ನದಿ ತಟದಲ್ಲಿ ಬುಧವಾರ ನೆರವೇರಿಸಲಾಯಿತು.

    ಕುಟುಂಬಸ್ಥರು, ಗ್ರಾಮಸ್ಥರು, ಆಪ್ತರು ಅಂತಿಮ ವಿಧಿವಿಧಾನದಲ್ಲಿ ಭಾಗಿಯಾದರು. ಈ ವೇಳೆ ಪೊಲೀಸರು ಉಪಸ್ಥಿತರಿದ್ದರು. ಕೂಡ್ಲು ನದಿಯ ತಟದಲ್ಲಿ ವಿಕ್ರಮ್ ಗೌಡ ಪಂಚಭೂತದಲ್ಲಿ ಲೀನವಾಗಿದ್ದಾನೆ. ಈ ಮೂಲಕ ಎರಡು ದಶಕದ ಹೋರಾಟದ ಅಧ್ಯಾಯ ಮುಗಿದಿದೆ. ಇದನ್ನೂ ಓದಿ: ವಿಕ್ರಂಗೌಡ ಎನ್‍ಕೌಂಟರ್ ಯಾವುದೇ ಪ್ಲ್ಯಾನ್ ಮಾಡಿ ಮಾಡಿಲ್ಲ, ಇದು ಪರ್ಫೆಕ್ಟ್‌: ಪ್ರಣಬ್ ಮೊಹಂತಿ

    ಸೋಮವಾರ ನಕ್ಸಲರು ಮತ್ತು ನಕ್ಸಲ್ ನಿಗ್ರಹ ಪಡೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಹತ್ಯೆಯಾಗಿದ್ದ. ಹೆಬ್ರಿ ತಾಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ.

    ನಕ್ಸಲ್ ನಾಯಕ ವಿಕ್ರಂ ಗೌಡ 61 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಪೀತಬೈಲ್‌ನಲ್ಲಿ ಆಹಾರ ಪದಾರ್ಥ ತೆಗೆದುಕೊಳ್ಳಲು ಬಂದಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಇದನ್ನೂ ಓದಿ: ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ

  • ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ

    ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ

    ಉಡುಪಿ: ಎನ್‌ಕೌಂಟರ್‌ನಲ್ಲಿ (Encounter) ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ (Vikram Gowda) ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್‌ (Ambulance) ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ.

    ಇಂದು ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ (KMC) ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್‌ ಮೂಲಕ ಸಾಗಿಸಲಾಗುತ್ತಿತ್ತು.

     

    ವೇಗವಾಗಿ ಸಾಗುತ್ತಿದ್ದಾಗ ದಿಢೀರ್‌ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್‌ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಬಳಿಕ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್‌ ಅನ್ನು ರಸ್ತೆಗೆ ತಂದು ಮೃತದೇಹವನ್ನು ಕೊಂಡೊಯ್ಯಲಾಗಿದೆ. ಇದನ್ನೂ ಓದಿ: ದಿನಸಿಗೆಂದು ಬಂದಿದ್ದ ವಿಕ್ರಂಗೌಡ ಉಡೀಸ್ – ಎನ್‌ಕೌಂಟರ್‌ಗೂ ಮುನ್ನ ಪೊಲೀಸರಿಂದ ಮನೆಯವರ ಶಿಫ್ಟ್

    ಮಧ್ಯಾಹ್ನ ವಿಕ್ರಂ ಗೌಡನ ಸ್ವಗ್ರಾಮ ಕೂಡ್ಲುಗೆ ಮೃತದೇಹ ತಲುಪಿದೆ. ಕುಟುಂಬಸ್ಥರು ಅಂತಿಮ ವಿಧಿ ವಿಧಾನ ನಡೆಸಿದ ಬಳಿಕ ಚಿತೆಗೆ ಅಗ್ನಿ ಸ್ಪರ್ಶ ನಡೆಯಲಿದೆ.

     

  • ವಿಕ್ರಂ ಗೌಡ ಎನ್‌ಕೌಂಟರ್‌| ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ: ಪರಮೇಶ್ವರ್‌

    ವಿಕ್ರಂ ಗೌಡ ಎನ್‌ಕೌಂಟರ್‌| ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ: ಪರಮೇಶ್ವರ್‌

    ಬೆಂಗಳೂರು: ವಿಕ್ರಂ ಗೌಡ ಎನ್‌ಕೌಂಟರ್‌ (Vikram Gowda) ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಗೃಹ ಪರಮೇಶ್ವರ್‌ (Parameshwar) ಸ್ಪಷ್ಟಪಡಿಸಿದ್ದಾರೆ.

    ಎನ್‌ಕೌಂಟರ್ (Encounter) ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್‌ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು.

    ಕಾಂಗ್ರೆಸ್ (Congress) ಬಂದ ಮೇಲೆ ನಕ್ಸಲ್ (Naxal) ಚಟುವಟಿಕೆ ಜಾಸ್ತಿಯಾಗಿದೆ ಎಂಬ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ, ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಸ್ಥಳ ಕಾರ್ಕಳದಲ್ಲೇ ಇದೆ. ನಕ್ಸಲ್ ನಿಗ್ರಹ ದಳ ಸತತವಾಗಿ ನಕ್ಸಲರ ಚಟುವಟಿಕೆ ಮೇಲೆ ನಿಗಾ ಇಟ್ಟುಕೊಂಡೇ ಬಂದಿತ್ತು. ಆದರೆ ಕಳೆದ 15 ದಿನಗಳ ಹಿಂದೆ ನಕ್ಸಲ್ ಮುಖಂಡರಾದ ಲತಾ ಹಾಗೂ ರಾಜು ಕಾಣಿಸಿಕೊಂಡರು. ಆಗ ಕೂಂಬಿಂಗ್ ಮಾಡುವುದಕ್ಕೆ ಶುರು ಮಾಡಿದರು ಎಂದು ತಿಳಿಸಿದರು. ಇದನ್ನೂ ಓದಿ: ದಿನಸಿಗೆಂದು ಬಂದಿದ್ದ ವಿಕ್ರಂಗೌಡ ಉಡೀಸ್ – ಎನ್‌ಕೌಂಟರ್‌ಗೂ ಮುನ್ನ ಪೊಲೀಸರಿಂದ ಮನೆಯವರ ಶಿಫ್ಟ್

    ಈ ಮಧ್ಯೆ ವಿಕ್ರಮ್ ಗೌಡ ತಂಡದಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕಿತು. ವಿಕ್ರಮ್ ಗೌಡನನ್ನು ಹಾಗೇ ಬಿಟ್ಟುಕೊಂಡು ಅವರು ಏನು ಮಾಡಿದರೂ ಸರಿ ಎನ್ನುವ ಪರಿಸ್ಥಿತಿ ಇರಲಿಲ್ಲ. ಅದಕ್ಕಾಗಿ ಎನ್‌ಕೌಂಟರ್ ಮಾಡಲಾಗಿದೆ. ಈ ಎನ್‌ಕೌಂಟರ್ ಮೇಲೆ ತನಿಖೆ ಆಗಬೇಕು ಅಂತ ಕೆಲವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಮಷಿನ್ ಗನ್ ಇಟ್ಟುಕೊಂಡಿದ್ದ 60 ಪ್ರಕರಣ ಇರುವ ವಿಕ್ರಮ್ ಗೌಡ ಎನ್‌ಕೌಂಟರ್ ಬಗ್ಗೆ ಯಾವ ದೃಷ್ಟಿಯಿಂದ ತನಿಖೆ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.

     

    ನಾವು ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಇಲ್ಲಿ ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲಿ ಬರಲ್ಲ, ಸುರಕ್ಷತೆ ಮುಖ್ಯ. ಈ ಹಿಂದೆಯೇ ಆತನಿಗೆ ಶರಣಾಗುವಂತೆ ಸೂಚಿಸಲಾಗಿತ್ತು. ಆದರೆ ಶರಣಾಗಿರಲಿಲ್ಲ ಎಂದು ಪರಮೇಶ್ವರ್‌ ಹೇಳಿದರು.

  • ನಕ್ಸಲ್ ನಾಯಕ ವಿಕ್ರಂ ಗೌಡ ಮೃತದೇಹ ಮಣಿಪಾಲಕ್ಕೆ – ಕೆಎಂಸಿಯ ಫೊರೆನ್ಸಿಕ್ ಮೆಡಿಸಿನ್‌ನಲ್ಲಿ ಮರಣೋತ್ತರ ಪರೀಕ್ಷೆ

    ನಕ್ಸಲ್ ನಾಯಕ ವಿಕ್ರಂ ಗೌಡ ಮೃತದೇಹ ಮಣಿಪಾಲಕ್ಕೆ – ಕೆಎಂಸಿಯ ಫೊರೆನ್ಸಿಕ್ ಮೆಡಿಸಿನ್‌ನಲ್ಲಿ ಮರಣೋತ್ತರ ಪರೀಕ್ಷೆ

    – ನ್ಯಾಯಾಧೀಶರ ಸಮ್ಮುಖದಲ್ಲಿ ನಡೆಯಲಿದೆ ಸಂಪೂರ್ಣ ಮಹಜರು; ಬುಧವಾರ ವಿಕ್ರಂ ಗೌಡ ಅಂತ್ಯಸಂಸ್ಕಾರ
    – ನಕ್ಸಲ್‌ ತಂಡ ರೇಷನ್‌ ತೆಗೆದುಕೊಳ್ಳಲು ಬಂದಿದ್ದಾಗ ಪೊಲೀಸರಿಂದ ದಾಳಿ

    ಉಡುಪಿ: ನಕ್ಸಲ್ ನಿಗ್ರಹದಳದ ಗುಂಡಿಗೆ ಬಲಿಯಾದ ವಿಕ್ರಂ ಗೌಡ ಮೃತದೇಹ ಘಟನಾ ಸ್ಥಳದಿಂದ ಮಣಿಪಾಲಕ್ಕೆ ಶಿಫ್ಟ್ ಆಗಿದೆ. ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.

    ನ್ಯಾಯಾಧೀಶರ ಸಮ್ಮುಖದಲ್ಲಿ ಇಂಕ್ವೆಸ್ಟ್ ನಡೆಯಲಿದೆ. ನಾಳೆ ವಿಕ್ರಂ ಗೌಡ ಅಂತ್ಯಸಂಸ್ಕಾರ ಕುಟುಂಬ ನಡೆಸಲಿದೆ.

    ವಿಕ್ರಂ ಗೌಡ ಕುಟುಂಬವನ್ನು ಪೊಲೀಸರು ಸಂಪರ್ಕಿಸಿದ್ದಾರೆ. ನಾಳೆ ವಿಕ್ರಂ ಗೌಡ ಸಹೋದರನಿಗೆ ಶವ ಹಸ್ತಾಂತರಿಸುವ ಸಾಧ್ಯತೆ ಇದೆ. ಅಂತ್ಯಸಂಸ್ಕಾರ ಎಲ್ಲಿ ನಡೆಸುವುದೆಂದು ನಿಗದಿಯಾಗಿಲ್ಲ. 21 ವರ್ಷಗಳಿಂದ ಮನೆಯವರೊಂದಿಗೆ ಸಂಪರ್ಕದಲ್ಲಿ ವಿಕ್ರಂ ಗೌಡ ಇರಲಿಲ್ಲ. ಆರಂಭದಲ್ಲಿ ಶವ ಪಡೆಯಲು ಕುಟುಂಬಸ್ಥರು ಹಿಂದೇಟು ಹಾಕಿದರು. ಪೊಲೀಸ್ ಇಲಾಖೆ ಮನವೊಲಿಸಿದ ಬಳಿಕ ಶವ ಪಡೆಯಲು ನಿರ್ಧರಿಸಿದ್ದಾರೆ.

    ಸೋಮವಾರ ಸಂಜೆ 6.15- 6.30 ನಡುವೆ ನಡೆದಿರುವ ನಕ್ಸಲ್ ಎನ್‌ಕೌಂಟರ್ ಪೀತಬೈಲಿನಲ್ಲಿ ಪ್ರೀತಂ ಗೌಡನ ಮೂವರು ಸಹೋದರರಾದ ನಾರಾಯಣ, ಜಯಂತ, ಸುಧಾಕರ ಮನೆಯಿದೆ. ನ.11 ರಂದು ಬಂದು ರೇಷನ್ ತೆಗೆದಿರಿಸುವಂತೆ ನಕ್ಸಲರ ತಂಡ ಹೇಳಿತ್ತು. ರೇಷನ್ ಪಡೆಯಲು ಸೋಮವಾರ ಬರುವುದಾಗಿ ತಿಳಿಸಿತ್ತು.

    ಈ ಬಗ್ಗೆ ಎಎನ್‌ಎಫ್‌ ಪೊಲೀಸರು ಖಚಿತ ಮಾಹಿತಿ ಪಡೆದಿದ್ದರು. ಬಳಿಕ ಜಯಂತ್ ಗೌಡ ಮನೆಯಲ್ಲಿ ಕುಳಿತಿದ್ದರು. ರೇಷನ್ ಪಡೆಯಲು ಬರುತ್ತಿದ್ದಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಜಯಂತ್ ಗೌಡ ಮನೆಯ ಹೊಸ್ತಿಲಲ್ಲಿ ಕುಸಿದು ಬಿದ್ದು ಪ್ರೀತಂ ಗೌಡ ಪ್ರಾಣ ಬಿಟ್ಟಿದ್ದಾನೆ.

  • ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

    ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

    ಉಡುಪಿ: ವಿಕ್ರಂ ಗೌಡ (Vikram Gowda) ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು ಎಂದು ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.

    ವಿಕ್ರಂಗೌಡನ ಬಗ್ಗೆ ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ನಕ್ಸಲ್‌ರ (Naxal) ಚಲನವಲನಗಳು ನಮ್ಮೂರಲ್ಲಿ ಇರಲಿಲ್ಲ. ವಿಕ್ರಂಗೌಡ ನಮ್ಮ ಊರಿನವನಾದ್ದರಿಂದ ಆತ ಹೆಚ್ಚಾಗಿ ಬರುತ್ತಿದ್ದಾನೆ ಅನ್ನುವುದು ಬಿಟ್ಟರೆ, ಬಂದ ಬಗ್ಗೆ ಖಚಿತ ಮಾಹಿತಿ ಇರಲಿಲ್ಲ. ಆತನ ತಂದೆ ತಾಯಿ ತೀರಿಕೊಂಡಿದ್ದರಿಂದ ನಮಗೆ ಆತ ಬರುವ ಹೋಗುವ ಬಗ್ಗೆ ಸುಳಿವು ಇರಲಿಲ್ಲ. ಅವನ ದೊಡ್ಡಪ್ಪ ನಮ್ಮ ಊರಿನಲ್ಲಿದ್ದಾರೆ. ಅವರು ಮಲೆಕುಡಿಯ ಸಮಾಜದಿಂದ ಬಂದವರು ಎಂದು ಹೇಳಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    ಸುಮಾರು 2002-03ರಲ್ಲಿ ಈ ಆತ ಇಂತಹ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ. ‘ಕರ್ನಾಟಕ ವಿಮೋಚನಾ ಸಂಘ’ ಎನ್ನುವಂತಹ ತಂಡವನ್ನು ಆರಂಭಿಸಿದಾಗ ಆತ ಅದರಲ್ಲಿ ಸೇರಿಕೊಂಡ. ಆ ನಂತರ ಸಾಕೇತ್ ರಾಜನ್ ಬಂದ ನಂತರ ಅದು ನಕ್ಸಲ್‌ರ ಸಂಘ ಎನ್ನುವಂತದ್ದು ಗೊತ್ತಾಯಿತು. ಆರಂಭದಲ್ಲಿ ಅವರು ಲಾವಣಿ ಪದಗಳನ್ನು ಹಾಡುತ್ತಾ ಮನೆ ಮನೆಗೆ ಬರುತ್ತಿದ್ದರು. ತದನಂತರ ನಮ್ಮ ಊರಿನಲ್ಲಿ ಜನಾಭಿಪ್ರಾಯವನ್ನು ಸಂಗ್ರಹಿಸುತ್ತಿದ್ದರು. ನನ್ನನ್ನು ಒಮ್ಮೆ ಅವರ ಪ್ರತಿಭಟನೆಗೆ ಕರೆದಿದ್ದ ನಾನು ಹೋಗಿರಲಿಲ್ಲ. ಅದಕ್ಕಾಗಿ ನನ್ನ ಮೇಲೆ ದ್ವೇಷ ಇಟ್ಟಕೊಂಡು 2-3 ಬಾರಿ ನನ್ನ ಮನೆ ಮೇಲೆ ಪ್ರತಿಕಾರವನ್ನು ತೀರಿಸಲು ಮುಂದಾಗಿದ್ದ. 3-4 ಜನರ ತಂಡವನ್ನು ನಮ್ಮ ಮನೆಗೆ ದಾಳಿ ಮಾಡಲು ಕಳುಹಿಸುತ್ತಿದ್ದ. 2-3 ಬಾರಿ ನಮ್ಮ ಮನೆ ಮೇಲೆ ದಾಳಿ ಕೂಡ ಮಾಡಿದ್ದ ಎಂದು ತಿಳಿಸಿದರು. ಇದನ್ನೂ ಓದಿ: ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್‌ – ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ

    ವಿಕ್ರಂಗೌಡ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು. ಅವರು ಆತನ ಮೆಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಆತ ಈ ತಂಡದಲ್ಲಿ ತೊಡಗಿಕೊಂಡು ಅಲ್ಲಿಂದ ಆತ ಆ ತಂಡದ ಜೊತೆಗೆ ಬೆಳೆದ. ವಿಕ್ರಂ ಸಾಧು ಸ್ವಭಾವದ ಹುಡುಗ. ಈ ಮಟ್ಟಕ್ಕೆ ನಕ್ಸಲ್ ನಾಯಕನಾಗುತ್ತಾನೆ ಎನ್ನುವುದು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. 5ನೇ ತರಗತಿ ತನಕ ಮಾತ್ರ ಓದಿದ್ದ. ಆಮೇಲೆ ಮುಂಬೈಗೆ ಹೋಗಿ ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ನಂತರ ಊರಿಗೆ ಬಂದು ಇಂತಹ ಕೆಲಸದಲ್ಲಿ ತೊಡಗಿಕೊಂಡ. ಆತನಿಗೆ ಅನೇಕ ಬಾರಿ ನಾನು ಬುದ್ಧಿವಾದ ಹೇಳಿದ್ದೆ ಆದರೂ ಆತ ಕೇಳಲಿಲ್ಲ ಎಂದರು.

    13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಎನ್‌ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್‌- ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ

    ಯಾರು ಈ ವಿಕ್ರಂ ಗೌಡ?
    ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ (Kerala Police) ಚಳ್ಳೆಹಣ್ಣು ತಿನ್ನಿಸಿದ್ದ.

    ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ. ಇದನ್ನೂ ಓದಿ: ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

  • ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

    ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

    ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು (Naxal) ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

    ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯರಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು. ಇದನ್ನೂ ಓದಿ: VRS ತೆಗೆದೊಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

    ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ತಿಳಿಸಿದರು. ಇದನ್ನೂ ಓದಿ: 75 ವರ್ಷದ ವೃದ್ಧೆ ಮೇಲೆ ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ಅತ್ಯಾಚಾರ

    ಪೊಲೀಸರ ಮೇಲೆ ವಿಕ್ರಂ ಗೌಡ ತಂಡ ದಾಳಿ ಮಾಡಿದೆ. ಹಾಗಾಗಿ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯಿತು. ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೇ ಈ ಥರ ಘಟನೆ ಆಗೋದು ಸಹಜ ಎಂದು ಹೇಳಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

  • Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    ಬೆಂಗಳೂರು/ ಉಡುಪಿ: 13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್‌ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

    ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ನಿಗ್ರಹ ಪಡೆ (ANF) ಎನ್‌ಕೌಂಟರ್‌ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ.  ಸೋಮವಾರ ಸಂಜೆ  ನಡೆದ  ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ (Forest) ಶೋಧ ಕಾರ್ಯ ನಡೆಯುತ್ತಿದೆ.

    ಯಾರು ಈ ವಿಕ್ರಂ ಗೌಡ?
    ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು.

    20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ.

    ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.