Tag: ವಿಕ್ರಮ್ ಕಿರ್ಲೋಸ್ಕರ್

  • ಟೊಯೋಟ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ಹೃದಯಾಘಾತದಿಂದ ನಿಧನ

    ಟೊಯೋಟ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ಹೃದಯಾಘಾತದಿಂದ ನಿಧನ

    ಬೆಂಗಳೂರು: ಆಟೋ ಮೊಬೈಲ್ ಕ್ಷೇತ್ರದ ದಿಗ್ಗಜ, ಟೊಯೋಟ ಕಿರ್ಲೋಸ್ಕರ್ ಮೋಟಾರ್‌ನ (Toyota Kirloskar) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) (64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಕಿರ್ಲೋಸ್ಕರ್‌ ಅವರಿಗೆ ಮಂಗಳವಾರ ತಡರಾತ್ರಿ ಹೃದಯಾಘಾತ ಸಂಭವಿಸಿದೆ. ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಅಗ್ನಿ ಅವಘಡ – 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

    ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿಸಲು ದುಃಖವಾಗಿದೆ ಎಂದು ವಾಹನ ತಯಾರಕರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

    ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ಟೊಯೊಟಾ ಇನ್ನೋವಾ ಹೈಕ್ರಾಸ್ ಅನಾವರಣದಲ್ಲಿ ಕಿರ್ಲೋಸ್ಕರ್ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಹತೋಟಿಗೆ ಸಿಐಐ ಸಹಯೋಗದಲ್ಲಿ ಟಾಸ್ಕ್ ಫೋರ್ಸ್ 

    ಕೋವಿಡ್ ಹತೋಟಿಗೆ ಸಿಐಐ ಸಹಯೋಗದಲ್ಲಿ ಟಾಸ್ಕ್ ಫೋರ್ಸ್ 

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯನ್ನು ಸಮರ್ಥವಾಗಿ ಹತೋಟಿಗೆ ತರಲು ಕಾನ್ಫಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಸಹಯೋಗದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

    ಸಚಿವ ಡಾ.ಕೆ.ಸುಧಾಕರ್, ಸಿಐಐ ಪ್ರತಿನಿಧಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಐಐ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಟಾಸ್ಕ್ ಫೋರ್ಸ್  ರಚಿಸಲಾಗುತ್ತದೆ. ಈ ಸಮಿತಿಯು ವೈದ್ಯಕೀಯ ಹಾಗೂ ಇತರೆ ಮೂಲಸೌಕರ್ಯಗಳನ್ನು ಬಲಪಡಿಸುವ ಕಾರ್ಯ ಮಾಡಲಿದೆ. ಕೊರೊನಾ ಕುರಿತ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಕಾಲ್ ಸೆಂಟರ್, ಮಾಡ್ಯೂಲರ್ ಐಸಿಯುಗಳ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳಲ್ಲಿ ಟಾಸ್ಕ್ ಫೋರ್ಸ್  ಮುಂದಾಳತ್ವ ವಹಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

    ಆರೋಗ್ಯ ವಲಯದಲ್ಲಿ ತಂತ್ರಜ್ಞಾನ ಬಳಕೆ, ಔಷಧಿಗಳ ಪೂರೈಕೆ, ವೈದ್ಯಕೀಯ ಸಾಧನ, ಉಪಕರಣಗಳ ಪೂರೈಕೆ, ತಂತ್ರಾಂಶ ಒದಗಿಸುವುದು ಸೇರಿದಂತೆ ಹಲವು ರೀತಿಯಲ್ಲಿ ಟಾಸ್ಕ್ ಫೋರ್ಸ್  ರಾಜ್ಯ ಸರ್ಕಾರಕ್ಕೆ ನೆರವು ನೀಡಲಿದೆ.

    ಕಾಲ್ ಸೆಂಟರ್:
    ಕೋವಿಡ್ ನಿರ್ವಹಣೆ ಮಾಡಲು ಕೆಲ ಸಹಾಯವಾಣಿಗಳಿವೆ. ಆದರೆ ಇದರಿಂದಾಗಿ ಜನರಿಂದ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಇದಕ್ಕಾಗಿ ಒಂದು ಬೃಹತ್ ಕಾಲ್ ಸೆಂಟರ್ ನಿರ್ಮಿಸಿ ಎಲ್ಲವನ್ನೂ ಸಮನ್ವಯಗೊಳಿಸುವ ವ್ಯವಸ್ಥೆ ತರಬೇಕಿದೆ. ಈ ಕಾರ್ಯವನ್ನು ಟಾಸ್ಕ್ ಫೋರ್ಸ್ಗೆ ವಹಿಸಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರು ಸಹಾಯವಾಣಿ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ.

    ಸಭೆಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಈ ಟಾಸ್ಕ್ ಫೋರ್ಸ್ ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಕುರಿತಾಗಿ ಸರ್ಕಾರಕ್ಕೆ ನೆರವು ನೀಡಲಿದೆ. ಕೋವಿಡ್ ರೋಗಿಗಳಿಗಾಗಿ ರಾಜ್ಯದಲ್ಲಿ 3,000-5,000 ಮಾಡ್ಯೂಲರ್ ಐಸಿಯು ಹಾಸಿಗೆ ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೂ ಟಾಸ್ಕ್ ಫೋರ್ಸ್ ನೆರವಾಗಲಿದೆ. ಕೆಲ ಕಂಪನಿಗಳು ಕೇವಲ 7-10 ದಿನಗಳಲ್ಲಿ ಇಂತಹ ಐಸಿಯು ರೂಪಿಸುವುದಾಗಿ ತಿಳಿಸಿವೆ ಎಂದು ತಿಳಿಸಿದರು.

    ಕಂಪನಿಗಳ ಸಿಎಸ್ ಆರ್ ಅನುದಾನವನ್ನು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಎಲ್ಲ ಉದ್ಯಮಗಳು ಸಿಎಸ್ ಆರ್ ಅನುದಾನವನ್ನು ಕೊರೊನಾ ನಿಯಂತ್ರಣಕ್ಕೆ ನೀಡಬೇಕು. ಅದಕ್ಕಿಂತ ಹೆಚ್ಚಾಗಿ ತಂತ್ರಜ್ಞಾನದ ನೆರವು ನೀಡಬೇಕು. 95% ರೋಗಿಗಳು ಮನೆ ಆರೈಕೆಯಲ್ಲಿದ್ದು, ಅವರಿಗೆ ತಂತ್ರಜ್ಞಾನದ ಮೂಲಕ ಮಾರ್ಗದರ್ಶನ ನೀಡಲು ತಂತ್ರಜ್ಞಾನ ಅಗತ್ಯ. ಹಾಗೆಯೇ ರೆಮ್ ಡಿಸಿವಿರ್, ಟೊಸಿಲಿಜುಮಾಬ್ ಔಷಧಿಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲು ನೆರವಾಗಬೇಕು ಎಂದು ಸಚಿವರು ಮನವಿ ಮಾಡಿದರು.

    ಸಿಐಐ ಮಾಜಿ ಅಧ್ಯಕ್ಷರಾದ ಕ್ರಿಸ್ ಗೋಪಾಲಕೃಷ್ಣನ್, ವಿಕ್ರಮ್ ಕಿರ್ಲೋಸ್ಕರ್, ಖ್ಯಾತ ವೈದ್ಯ ಡಾ.ದೇವಿಶೆಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.