Tag: ವಿಕ್ರಮ್‌ ಗೋಖಲೆ

  • ಬಾಲಿವುಡ್ ನಟ ವಿಕ್ರಮ್ ಗೋಖಲೆ ನಿಧನ

    ಬಾಲಿವುಡ್ ನಟ ವಿಕ್ರಮ್ ಗೋಖಲೆ ನಿಧನ

    ರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನ ಖ್ಯಾತ ಹಿರಿಯ ನಟ ವಿಕ್ರಮ್ ಗೋಖಲೆ ನಿಧನರಾಗಿದ್ದಾರೆ. ಕೆಲ ತಿಂಗಳಿಂದ  ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ನಿನ್ನೆಯಷ್ಟೇ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಹೇಳಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

    ಹಿಂದಿ, ಮರಾಠಿ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ವಿಕ್ರಮ್ ಗೋಖಲೆ (75 ವರ್ಷ) ಆರೋಗ್ಯ ಇತ್ತೀಚೆಗೆ ಏರುಪೇರಾಗಿದ್ದು, ತಕ್ಷಣ ಪೂಣೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟ ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ನಿನ್ನೆಯಷ್ಟೇ ಅವರು ಕಣ್ಣು ತೆರೆದು ಕುಟುಂಬದವರ ಬಳಿ ಮಾತನಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.  ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣದಿಂದ 48 ಗಂಟೆಗಳಲ್ಲಿ ವೆಂಟಿಲೇಟರ್‌ನಿಂದ ಹೊರತೆಗೆಯಲಾಗುವುದು ಎಂದು ವೈದ್ಯರು ತಿಳಿಸಿದ್ದರು. ಇನ್ನೇನು ಅವರು ಗುಣಮುಖರಾಗಲಿದ್ದಾರೆ ಎನ್ನುವ ಹೊತ್ತಿನಲ್ಲಿ ಅವರ ಸಾವು ಆಘಾತ ತರಿಸಿದೆ. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ಬಿಗ್ ಬಿ ಜೊತೆ ʻಅಗ್ನಿಪಥ್ʼ, ಸಲ್ಮಾನ್ ಖಾನ್ ಜೊತೆ ʻಹಮ್ ದಿಲ್ ದೇ ಚುಕೇ ಸನಮ್ʼ, ಶಿಲ್ಪಾ ಶೆಟ್ಟಿ ನಟನೆಯ `ನಿಕ್ಕಮ್ಮಾ’ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ವಿಕ್ರಮ್ ಗೋಖಲೆ ನಟಿಸಿದ್ದಾರೆ. ಹಿರಿಯ ನಟನ ಅಗಲಿಕೆಗೆ ಬಾಲಿವುಡ್ ಸಿನಿಮಾ ರಂಗ ಕಂಬನಿ ಮಿಡಿದಿದೆ. ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ವಿಕ್ರಮ್‌ ಗೋಖಲೆ ಆರೋಗ್ಯದಲ್ಲಿ ಚೇತರಿಕೆ

    ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್‌ ನಟ ವಿಕ್ರಮ್‌ ಗೋಖಲೆ ಆರೋಗ್ಯದಲ್ಲಿ ಚೇತರಿಕೆ

    ಬಾಲಿವುಡ್ ನಟ ವಿಕ್ರಮ್ ಗೋಖಲೆ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ತಿಂಗಳುಗಳಿಂದ ಅಂಗಾಂಗ ವೈಫಲ್ಯದಿಂದ ನಟ ಬಳಲುತ್ತಿದ್ದರು. ಚಿಕಿತ್ಸೆಯ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ಹಿಂದಿ, ಮರಾಠಿ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ವಿಕ್ರಮ್ ಗೋಖಲೆ (75 ವರ್ಷ) ಆರೋಗ್ಯ ಇತ್ತೀಚೆಗೆ ಏರುಪೇರಾಗಿದ್ದು, ತಕ್ಷಣ ಪೂಣೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟ ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕಣ್ಣು ತೆರೆದು ಕುಟುಂಬದವರ ಬಳಿ ಮಾತನಾಡುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. 48 ಗಂಟೆಗಳಲ್ಲಿ ವೆಂಟಿಲೇಟರ್‌ನಿಂದ ಹೊರತೆಗೆಯಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

    ಬಿಗ್ ಬಿ ಜೊತೆ ʻಅಗ್ನಿಪಥ್ʼ, ಸಲ್ಮಾನ್ ಖಾನ್ ಜೊತೆ ʻಹಮ್ ದಿಲ್ ದೇ ಚುಕೇ ಸನಮ್ʼ, ಶಿಲ್ಪಾ ಶೆಟ್ಟಿ ನಟನೆಯ `ನಿಕ್ಕಮ್ಮಾ’ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ವಿಕ್ರಮ್ ಗೋಖಲೆ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]