ನವದೆಹಲಿ: ಭೂ, ಜಲ, ವಾಯು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಭಾರತ ಮತ್ತು ಪಾಕಿಸ್ತಾನ (India Pakistan) ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.
ಜಗತ್ತನ್ನು ಆತಂಕಕ್ಕೀಡು ಮಾಡಿದ ನಾಲ್ಕು ದಿನಗಳ ಉದ್ವಿಗ್ನತೆ ನಂತರ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ. ಇಂದು ಸಂಜೆ 5 ಗಂಟೆಯಿಂದಲೇ ಎಲ್ಲಾ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ
![]()
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಕ್ಸ್ ಖಾತೆಯಲ್ಲಿ, ಭಾರತ ಮತ್ತು ಪಾಕ್ ನಡುವಿನ ಸಂಧಾನದ ಬಗ್ಗೆ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಭಾರತವು ಕದನ ವಿರಾಮವನ್ನು ದೃಢಪಡಿಸಿತು.
ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸಂಜೆ 5 ಗಂಟೆಯಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ
ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಮಿಶ್ರಿ ಮಾಹಿತಿ ನೀಡಿದ್ದಾರೆ.


