Tag: ವಿಕ್ರಮ್ ಲ್ಯಾಂಡರ್

  • ವಿಕ್ರಮ್ ಲ್ಯಾಂಡ್ ಆದ ಬಳಿಕ ಮೊದಲ ಚಿತ್ರ ರಿಲೀಸ್

    ವಿಕ್ರಮ್ ಲ್ಯಾಂಡ್ ಆದ ಬಳಿಕ ಮೊದಲ ಚಿತ್ರ ರಿಲೀಸ್

    ಬೆಂಗಳೂರು: ಕೋಟ್ಯಂತರ ಜನ ಹರಕೆ, ಪೂಜೆ ಈಡೇರಿದಂತಿದೆ. ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 (Chandrayaan-3) ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದೆ.  ಇದೀಗ ವಿಕ್ರಮ್ ಲ್ಯಾಂಡ್ ಆದ ಬಳಿಕದ ಮೊದಲ ಫೋಟೋವನ್ನು ಇಸ್ರೋ ರಿಲೀಸ್ ಮಾಡಿದೆ.

    ಇದಕ್ಕೂ ಮುನ್ನ ವಿಕ್ರಮ್‌ ಲ್ಯಾಂಡಿಂಗ್‌ ಆಗುತ್ತಿರುವಾಗ ಕಳುಹಿಸಿದ 4 ಫೋಟೋಗಳನ್ನು ಇಸ್ರೋ ರಿಲೀಸ್‌ ಮಾಡಿತ್ತು. ಇಸ್ರೋ ಲ್ಯಾಂಡರ್ (Vikram Lander) ಜೊತೆ ಸಂಪರ್ಕ ಸಂವಹನ ಸಾಧಿಸಿದೆ. ಬೆಂಗಳೂರಿನ ಪೀಣ್ಯ ಬಾಹ್ಯಾಕಾಶ ನೌಕೆ ನಿಯಂತ್ರಣ ಕೇಂದ್ರದಿಂದ ಸಂವಹನ ಯಶಸ್ವಿಯಾಗಿದೆ.  ಈ ಮೂಲಕ ಲಂಬವಾಗಿ ಲ್ಯಾಂಡಿಂಗ್ ಆಗುವ ವೇಳೆ ವಿಕ್ರಮ್ ಲ್ಯಾಂಡರ್ ನಾಲ್ಕು ಚಿತ್ರಗಳನ್ನು ಸೆರೆಹಿಡಿದು ಕಳುಹಿಸಿದೆ. ಈ ಮೂಲಕ ಲ್ಯಾಂಡರ್ ಜೊತೆಗೆ ಇಸ್ರೋ ಸಂವಹನ ಆರಂಭಗೊಳಿಸಿದೆ ಎಂದು ಇಸ್ರೋ ತಿಳಿಸಿತ್ತು. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    ಇಸ್ರೋ (ISRO) ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು. ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಸಾಧಾರಣ ಸಾಧನೆಯಲ್ಲ. ಚಂದ್ರನ ಮೇಲೆ ತಮ್ಮ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇರಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ ನಾಲ್ಕು ದೇಶಗಳ ಸಾಲಿಗೆ ಭಾರತವೂ ಸೇರಿದೆ. ಇದನ್ನೂ ಓದಿ: ಚಂದ್ರಯಾನ-3 ಯಶಸ್ವಿ: ಇಸ್ರೋಗೆ ನಾಸಾ ಆಡಳಿತಾಧಿಕಾರಿ ಅಭಿನಂದನೆ

    ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ. ಇದರ ಜೊತೆಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಾಲ್ಕನೇ ದೇಶ ಎನಿಸಿಕೊಂಡಿದೆ ಭಾರತ. ಆದರೆ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಮೊದಲ ದೇಶವಾಗಿ ಭಾರತ ಹೆಸರಾಗಿದೆ. ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದ್ದು, ಈಗ ಆರು ಚಕ್ರಗಳ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಒಂದು ಚಂದ್ರನ ದಿನ (ಭೂಮಿಯ 14 ದಿನ) ಪ್ರಯೋಗಗಳನ್ನು ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ ಬಾಹ್ಯಾಕಾಶ ಲೋಕದ ಲೀಡರ್ ಎನ್ನುವುದು ಸಾಬೀತು: ಲಕ್ಷ್ಮಿ ಹೆಬ್ಬಾಳ್ಕರ್

    ಭಾರತ ಬಾಹ್ಯಾಕಾಶ ಲೋಕದ ಲೀಡರ್ ಎನ್ನುವುದು ಸಾಬೀತು: ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಇಡೀ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿದ್ದ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿದ್ದಕ್ಕೆ ತೀವ್ರ ಹರ್ಷ ವ್ಯಕ್ತಪಡಿಸಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar), ಇದು ಭಾರತೀಯ ವಿಜ್ಞಾನಿಗಳ ತಾಕತ್ತು. ಅವರಿಗೆ ನನ್ನ ಕೋಟಿ ಕೋಟಿ ವಂದನೆಗಳು, ಅಭಿನಂದನೆಗಳು ಎಂದು ತಿಳಿಸಿದ್ದಾರೆ.

    ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟ ಕುರಿತು ಮಾತನಾಡಿದ ಅವರು, ಇಸ್ರೋ (ISRO) ಭಾರತದ ಹೆಮ್ಮೆಯ ಸಂಸ್ಥೆ. ಈ ಹಿಂದೆ ಕೂಡಾ ಹಲವಾರು ಮೈಲಿಗಲ್ಲುಗಳನ್ನು ಸಾಧಿಸಿದೆ. ಈಗ ಚಂದ್ರಯಾನದ ಯಶಸ್ಸು ಇಡೀ ವಿಶ್ವವೇ ಭಾರತವನ್ನು ಮತ್ತೊಮ್ಮೆ ಕೊಂಡಾಡುವಂತೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸಿದ ಜಗತ್ತಿನ ಮೊದಲ ದೇಶವಾಗಿ ಭಾರತಕ್ಕೆ ಇಸ್ರೋ ಹೆಮ್ಮೆ ತಂದು ಕೊಟ್ಟಿದೆ. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಭಾರತ ಬಾಹ್ಯಾಕಾಶ ಲೋಕದ ಲೀಡರ್ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ- 3 ಸಕ್ಸಸ್: ಇಸ್ರೋಗೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ

    ಚಂದ್ರಯಾನದ ಈ ಯಶಸ್ಸು ವಿಜ್ಞಾನ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಕ್ರಾಂತಿಕಾರಕ ಬೆಳವಣಿಗೆಗಳಿಗೆ ಕಾರಣೀಭೂತವಾಗಲಿದೆ. ಈ ಮಹತ್ಸಾಧನೆಗಾಗಿ ಮತ್ತೊಮ್ಮೆ ಎಲ್ಲಾ ವಿಜ್ಞಾನಿಗಳನ್ನು, ಇಡೀ ದೇಶದ ಜನತೆಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

    Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

    ಬೆಂಗಳೂರು: ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

    ಇಸ್ರೋ ಸಂಜೆ 6:04ರ ಹೊತ್ತಿಗೆ ವಿಕ್ರಮ್‌ ಲ್ಯಾಂಡರ್‌ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು. ದಕ್ಷಿಣ ಆಫ್ರಿಕಾದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದರು.

    ಉಡಾವಣೆಯಿಂದ ಲ್ಯಾಂಡಿಂಗ್‌ವರೆಗೆ ಚಂದ್ರಯಾನ-3 ಕಾರ್ಯಾಚರಣೆ ಹೇಗಿತ್ತು?
    ಜುಲೈ 14: ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಮಧ್ಯಾಹ್ನ 2:35 ರ ಹೊತ್ತಿಗೆ ಉಡಾವಣೆ. ಎಲ್‌ವಿಎಂ3 ಎಂ4 ಉಡ್ಡಯನ ವಾಹನವು ಚಂದ್ರಯಾನ-3 ಯೋಜನೆಯ ಉಪಕರಣಗಳನ್ನು ಹೊತ್ತು ನಿರ್ದಿಷ್ಟ ಕಕ್ಷೆಗೆ ಸೇರಿಸಿತು.

    ಜುಲೈ 15: ಭೂಮಿ ಸುತ್ತಲಿನ ಮೊದಲ ಹಂತದ ಕಕ್ಷೆಗೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ. 41,762 ಕಿಮೀx226 ಕಿಮೀ ಕಕ್ಷೆಗೆ.

    ಜುಲೈ 17: ಭೂಮಿ ಸುತ್ತಲಿನ ಎರಡನೇ ಹಂತದ ಕಕ್ಷೆಗೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ. 41,603 ಕಿಮೀx226 ಕಿಮೀ ಕಕ್ಷೆಗೆ.

    ಜುಲೈ 22: ಭೂಮಿ ಸುತ್ತಲಿನ 4ನೇ ಹಂತದ ಕ್ಷಕ್ಷೆಗೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ. 71,351 ಕಿಮೀx223 ಕಿಮೀ ಕಕ್ಷೆಗೆ.

    ಆಗಸ್ಟ್‌ 1: ಚಂದ್ರಯಾನ-3 ಚಂದ್ರನ ಸುತ್ತಲಿನ ಕಕ್ಷೆಗೆ ಯಶಸ್ವಿ ಸೇರ್ಪಡೆ.

    ಆಗಸ್ಟ್‌ 6: ಚಂದ್ರನ ಸುತ್ತಲಿನ ಕಕ್ಷೆಯನ್ನು ಕುಗ್ಗಿಸುವಲ್ಲಿ ಯಶಸ್ವಿ. 170 ಕಿಮೀ x 4,313 ಕಿಮೀ.

    ಆಗಸ್ಟ್‌ 9: ಚಂದ್ರನ ಸುತ್ತಲಿನ ಕಕ್ಷೆಯನ್ನು ಮತ್ತೊಂದು ಹಂತಕ್ಕೆ ಇಳಿಸುವಲ್ಲಿ ಯಶಸ್ವಿ. 174 ಕಿಮೀ x 1,437 ಕಿಮೀ.

    ಆಗಸ್ಟ್‌ 14: ಚಂದ್ರನ ಸಮೀಪ ತಲುಪಲು ಕಕ್ಷೆಯ ಮತ್ತೊಂದು ಸುತ್ತು ಇಳಿದ ನೌಕೆ. 150 ಕಿಮೀ x 177 ಕಿಮೀ.

    ಆಗಸ್ಟ್‌ 16: ಚಂದ್ರನ ಸುತ್ತ ಪರಿಭ್ರಮಣೆಯ ಕೊನೆಯ ಹಂತವನ್ನು ಯಶಸ್ವಿಯಾಗಿ ಪೂರೈಸಿದ ಇಸ್ರೋ. 163 ಕಿಮೀ x 153 ಕಿಮೀ.

    ಆಗಸ್ಟ್‌ 17: ಚಂದ್ರಯಾನ-3 ನೌಕೆಯಿಂದ ಪ್ರತ್ಯೇಕಗೊಂಡ ಪ್ರಜ್ಞಾನ್‌ ರೋವರ್‌ ಹೊತ್ತ ವಿಕ್ರಮ್‌ ಲ್ಯಾಂಡರ್‌.

    ಆಗಸ್ಟ್‌ 18: ಚಂದ್ರಯಾನ-3 ಯಶಸ್ವಿಯಾಗಿ ಡಿಬೂಸ್ಟಿಂಗ್‌ ಕಾರ್ಯಾಚರಣೆ ನಡೆಸಿ ಕಕ್ಷೆಯ ಅಂತರವನ್ನು 113 ಕಿಮೀ x 157 ಕಿಮೀಗೆ ಇಳಿಸಿದೆ.

    ಆಗಸ್ಟ್‌ 20: ಕೊನೆಯ ಹಂತದ ಕಕ್ಷೆಯನ್ನು ಹೊಂದಿಸುವ ಪ್ರಕ್ರಿಯೆ ಪೂರ್ಣ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ ಯಶಸ್ಸಿಗಾಗಿ ರುದ್ರಾಭಿಷೇಕ, ಮಹಾಮೃತ್ಯುಂಜಯ ಹೋಮ – ಶ್ರೀಶೈಲ ಜಗದ್ಗುರುಗಳಿಂದಲೂ ಶುಭಹಾರೈಕೆ

    ಚಂದ್ರಯಾನ ಯಶಸ್ಸಿಗಾಗಿ ರುದ್ರಾಭಿಷೇಕ, ಮಹಾಮೃತ್ಯುಂಜಯ ಹೋಮ – ಶ್ರೀಶೈಲ ಜಗದ್ಗುರುಗಳಿಂದಲೂ ಶುಭಹಾರೈಕೆ

    ಚಿಕ್ಕೋಡಿ: ಚಂದ್ರಯಾನ-3 (Chandrayaan-3) ಯಶಸ್ವಿಯಾಗಿ‌ ಚಿಕ್ಕೋಡಿ (Chikkodi) ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ಮಹಾಮೃತ್ಯುಂಜಯ ಹೋಮ, ಜಯಾದಿ ಹೋಮ ನೇರವರಿಸಲಾಯಿತು. ಮತ್ತೊಂದೆಡೆ ಶ್ರೀಶೈಲ ಜಗದ್ಗುರು 1008 ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳೂ ಶುಭಕೋರಿದರು.

    ಶ್ರೀಶೈಲ್ ಜಗದ್ಗುರು 1008 ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಮಾರ್ಗದರ್ಶನದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ‌ಯಡೂರ ಗ್ರಾಮದ ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಸಿದ್ದಲಿಂಗೇಶ್ವರ ವೈದಿಕ ಪಾಠ ಶಾಲೆಯ ಪ್ರಾಚಾರ್ಯರಾದ ಶ್ರೀಶೈಲ್ ‌ಹಿರೇಮಠ ಹಾಗೂ ವೇದಮೂರ್ತಿ ಮಲ್ಲಯ್ಯ ಜಡೆ ನೇತೃತ್ವದಲ್ಲಿ ಹಾಗೂ ವೈದಿಕ ಪಾಠಶಾಲೆಯ ವಿದ್ಯಾರ್ಥಿಗಳಿಂದ ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ದೇವಸ್ಥಾನದ ಸನ್ನಿದಾನದಲ್ಲಿ ರುದ್ರಾಭಿಷೇಕ, ಮಹಾಮೃತ್ಯುಂಜಯ ಹೋಮ,ಜಯಾದಿ ಹೋಮವು ಅತ್ಯಂತ ಭಕ್ತಿಭಾವದಿಂದ ಜರುಗಿತು.

    ಈ ಕುರಿತು ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಾತನಾಡಿದ ಶ್ರೀಗಳು, ಇಂದು ಶ್ರೀಶೈಲ್ ಮಲ್ಲಿಕಾರ್ಜುನ ಜ್ಯೋತಿರ್ಲಿಂಗಕ್ಕೆ ವಿಶೇಷಪೂಜೆ,ವಿಶೇಷ ಮಂಗಳಾರತಿ‌ ನೇರವರಿಸಲಾಗುವುದು. ಭವ್ಯಭಾರತ ಆಶಾಕಿರಣವಾದ ಚಂದ್ರಯಾನ-3 ಚಂದ್ರನ ಮೇಲೆ ಇಳಿಯಲಿದೆ. ಚಂದ್ರಯಾನ-2ರಂತೆ ಕೊನೇ ಘಳಿಗೆಯಂತೆ ವಿಫಲವಾಗದೇ ಚಂದ್ರಯಾನ-3 ಯಶಸ್ವಿಯಾಗಲಿ. ಚಂದ್ರಯಾನ-3 ಚಂದ್ರನನ್ನ ತಲುಪಿ ನಮ್ಮ ವಿಜ್ಞಾನಿಗಳು ಹೊಸ ಹೊಸ ಸಂಶೋಧನೆ ಮಾಡಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ಯೋಜನೆಗಳಿಗೆ ನೂರಾರು ಕೋಟಿ ವ್ಯಯ – ಭಾರತಕ್ಕೇನು ಲಾಭ?

    ಮತ್ತೊಂದೆಡೆ 108 ವೇದ ವಟುಗಳು ರುದ್ರ ಹಾಗೂ ಗಣ ಹೋಮ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹಿರೇಮಠದ ಯಾಗ ಶಾಲೆಯಲ್ಲಿ ಹೋಮ ಆಯೋಜನೆ ಮಾಡಲಾಗಿದ್ದು ಹುಕ್ಕೇರಿ ಹಿರೇಮಠದ 108 ವೇದ ವಟುಗಳಿಂದ ಚಂದ್ರಯಾನ ಯಶಸ್ವಿಗಾಗಿ ಹೋಮ ಹವನ ಮಾಡಲಾಯಿತು‌. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆದ ಹೋಮವನ್ನ ವೇದ ಗುರುವಾದ ಉದಯ ಶಾಸ್ತ್ರೀಗಳ ನೇತೃತ್ವದಲ್ಲಿ ನಡೆಸಲಾಯಿತು. ನಮ್ಮ ದೇಶದ ಧ್ವಜ ಹಿಡಿದು ಮಂತ್ರ ಪಠಣ ಹಾಗೂ ಹೋಮ ನೆರವೇರಿಸಿದ ವಟುಗಳು, ಗೋಮಾತೆಗೂ ಪೂಜೆ ಸಲ್ಲಿಸಿ ಚಂದ್ರಯಾನ ಯಶಸ್ವಿಗೆ ಪ್ರಾರ್ಥನೆ ಮಾಡಿದ್ದಾರೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಯಶಸ್ವಿಯಾಗಲಿ – ರಾಯಚೂರಿನ ಪುಟಾಣಿ ಮಕ್ಕಳಿಂದ ಶಿವಲಿಂಗಕ್ಕೆ ಹಾಲಿನ ಅಭಿಷೇಕ

    ಚಂದ್ರಯಾನ-3 ಯಶಸ್ವಿಯಾಗಲಿ – ರಾಯಚೂರಿನ ಪುಟಾಣಿ ಮಕ್ಕಳಿಂದ ಶಿವಲಿಂಗಕ್ಕೆ ಹಾಲಿನ ಅಭಿಷೇಕ

    ರಾಯಚೂರು: ಇಡೀ ವಿಶ್ವವೇ ಕಾತುರದಿಂದ ಎದುರು ನೋಡುತ್ತಿರುವ ಚಂದ್ರಯಾನ-3 (Chandrayaan-3) ಯಶಸ್ವಿಯಾಗಲೆಂದು ರಾಯಚೂರಿನಲ್ಲಿ (Raichur) ಪುಟಾಣಿ ಮಕ್ಕಳು ವಿಶೇಷ ಪೂಜೆ (Speical Pooja), ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವಲಿಂಗಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ಮಕ್ಕಳು ಪ್ರಾರ್ಥಿಸಿದ್ದಾರೆ.

    ನಗರದ NIG ಕಾಲೋನಿಯ ಕಾಶಿ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಪುಟಾಣಿ ಮಕ್ಕಳೇ ಪೂಜೆ ನೆರವೇರಿಸಿದ್ದಾರೆ. ಶಿವಲಿಂಗಕ್ಕೆ ಹಾಲಿನ ಅಭಿಷೇಕ ಮಾಡಿ ಶ್ಲೋಕಗಳನ್ನ ಹೇಳುತ್ತಾ ಇಸ್ರೋದ ಪ್ರಯತ್ನಕ್ಕೆ ಜಯ ಸಿಗಲಿ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಕ್ಕಳ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 (Chandrayaan-3) ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. ಪ್ರಗ್ಯಾನ್ ರೋವರ್ (Pragyan Rover) ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಇದನ್ನೂ ಓದಿ: ಟಾಟಾ ಸಮೂಹಕ್ಕೆ ಮಾಯಾ ಉತ್ತರಾಧಿಕಾರಿ – ಶೀಘ್ರದಲ್ಲೇ ಘೋಷಣೆ ಸಾಧ್ಯತೆ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    – ಐತಿಹಾಸಿಕ ಕ್ಷಣಕ್ಕೆ ಭಾರತ ಕಾತರ!

    ಬೆಂಗಳೂರು: ಚಂದ್ರನ ಅಂಗಳದಲ್ಲಿ ನಮ್ಮ ದೇಶದ ಗಗನನೌಕೆ ಇಳಿಯುವ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಕೊನೆಯ ಆ 20 ನಿಮಿಷಗಳು ಬಹುಶಃ ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 (Chandrayaan-3) ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆ. ಅದಕ್ಕಾಗಿ ವಿಜ್ಞಾನಿಗಳು (Scientists) ಮಾತ್ರವಲ್ಲ, ಜನಸಾಮಾನ್ಯರೂ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

    ಪ್ರಗ್ಯಾನ್ ರೋವರ್ (Pragyan Rover) ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕ.

    ಕೌತುಕಭರಿತ ಲ್ಯಾಂಡಿಂಗ್ ಆಪರೇಷನ್ ಪ್ರಕ್ರಿಯೆಯನ್ನ ಇಸ್ರೋ ಇಂದು ಸಂಜೆ 5 ಗಂಟೆ 20 ನಿಮಿಷದಿಂದ ಲೈವ್ ಟೆಲಿಕಾಸ್ಟ್ ಮಾಡಲಿದೆ. ನಿಮ್ಮ ಪಬ್ಲಿಕ್ ಟಿವಿ ಕೂಡ ಚಂದ್ರ ಚುಂಬನದ ಕ್ಷಣಕ್ಷಣದ ಮಾಹಿತಿಯನ್ನು ವಿಶ್ಲೇಷಣೆ ಸಹಿತ ನಿಮಗೆ ಒದಗಿಸಲಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಮುಗಿದ ಬಳಿಕ ಇಸ್ರೋ ವಿಜ್ಞಾನಿಗಳನ್ನು ಜೋಹನ್ಸ್‌ಬರ್ಗ್‌ನಲ್ಲಿರುವ ಪ್ರಧಾನಿ ಮೋದಿ ವರ್ಚೂವಲ್ ಆಗಿ ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲೇ ಮೊದಲ ಬಾರಿಗೆ ಮೊಬೈಲ್ ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ ಪರಿಚಯಿಸುತ್ತಿದೆ Reliance Jio

    ಆರಂಭದ ಪ್ರಯಾಣ ಹೇಗಿತ್ತು?
    ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಕೇಂದ್ರದ (ಇಸ್ರೋ) ಬಾಹುಬಲಿ ರಾಕೆಟ್ ಅಥವಾ ಉಡಾವಣಾ ವಾಹನ ಮಾರ್ಕ್-3, ಚಂದ್ರಯಾನ-3 ಅನ್ನು ಹೊತ್ತು ತಂದು ಕಕ್ಷೆಗೆ ಸೇರ್ಪಡೆ ಮಾಡಿತ್ತು. ಆಗಸ್ಟ್ 1ರಂದು ಚಂದ್ರನ ಕಡೆಗಿನ 3.84 ಲಕ್ಷ ಕಿಮೀ ಪ್ರಯಾಣ ಆರಂಭಿಸಿ, ಆಗಸ್ಟ್ 5ರಂದು ಚಂದ್ರಯಾನ ಉಪಗ್ರಹವು ಚಂದ್ರನ ಕಕ್ಷೆಗೆ ಪ್ರವೇಶಿಸಿತ್ತು. ಅನೇಕ ದಿನಗಳವರೆಗೆ ಅಲ್ಲಿಯೇ ಅದು ಸ್ಥಿರವಾಗಿ ನಿಂತಿತ್ತು. ಇದನ್ನೂ ಓದಿ: Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು…

    ಚಂದ್ರಯಾನದ ಒಂದೊಂದೇ ಪ್ರಕ್ರಿಯೆಗಳನ್ನು ಇಸ್ರೋ ಹಂತ ಹಂತವಾಗಿ ಮತ್ತು ಸೂಕ್ಷ್ಮವಾಗಿ ನೆರವೇರಿಸುತ್ತಾ ಬಂದಿದೆ. ಇದರಲ್ಲಿ ನಿರ್ಣಾಯಕ ಮತ್ತು ಕ್ಲಿಷ್ಟಕರ ಕಾರ್ಯವೆಂದರೆ ಆಗಸ್ಟ್ 17ರಂದು ನಡೆದ ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಪ್ರತ್ಯೇಕಿಸುವುದು. ಕಕ್ಷೆಯಲ್ಲಿ ಚಂದ್ರನಿಂದ 153*163 ಕಿಮೀ ದೂರದಲ್ಲಿ ಇರುವಾಗ ಡಿಬೂಸ್ಟಿಂಗ್ ಮಾಡುವ ಕಾರ್ಯ ಯಶಸ್ವಿಯಾಗಿತ್ತು. ನಿಯಂತ್ರಿತ ಅವರೋಹಣ ಕಾರ್ಯ ಆರಂಭಕ್ಕೂ ಮುನ್ನ ವಿಕ್ರಮ್ ಲ್ಯಾಂಡರ್ ಅನ್ನು 134*25 ಕಿಮೀ ದೀರ್ಘ ವೃತ್ತಾಕಾರದ ಕಕ್ಷೆಯಲ್ಲಿ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿ ಇಳಿಸಲಾಗಿತ್ತು. ಈವರೆಗೂ ಚಂದ್ರಯಾನ-3ರ ಎಲ್ಲಾ ಪ್ರಕ್ರಿಯೆಗಳೂ ಅಡೆತಡೆಯಿಲ್ಲದೆ ಸಫಲವಾಗಿ ನಡೆದಿದೆ. ಚಂದ್ರಯಾನ-2ರಲ್ಲಿಯೂ ಈವರೆಗಿನ ಹಂತಗಳು ಯಶಸ್ವಿಯಾಗಿದ್ದವು ಎನ್ನುವುದು ಗಮನಾರ್ಹ.

    ಚಂದ್ರಯಾನ-3 ಹಾದಿ
    * ಉಡಾವಣೆ – ಜುಲೈ 14
    * ವೆಚ್ಚ – 615 ಕೋಟಿ (ಅವತಾರ್ 2-1930 ಕೋಟಿ)
    * ತೂಕ – 3,900 ಕೆಜಿ (ಲ್ಯಾಂಡರ್, ರೋವರ್)
    * ಹಂತ – 3 ಹಂತಗಳಲ್ಲಿ ಕಕ್ಷೆ ಸೇರ್ಪಡೆ
    * ದೂರ – 3,84,400 ಕಿ.ಮೀ.
    * ಪಯಣ – 40 ದಿನ
    * ಲ್ಯಾಂಡರ್ – ವಿಕ್ರಮ್
    * ರೋವರ್ – ಪ್ರಗ್ಯಾನ್
    * ಲ್ಯಾಂಡಿAಗ್ – ಆಗಸ್ಟ್ 23, ಸಂಜೆ 6.04 ಗಂಟೆ
    * ಮೀಸಲು ದಿನ – ಆಗಸ್ಟ್ 27
    * ಉದ್ದೇಶ – ಚಂದ್ರನ ಮಣ್ಣು, ಮೇಲ್ಮೈ ಅಧ್ಯಯನ
    * ನಿರ್ವಹಣೆ – ಪೀಣ್ಯ, ಬೆಂಗಳೂರು ಇಸ್ರೋ ಕೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಂಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು…

    Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಂಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು…

    ಬೆಂಗಳೂರು: ಬುಧವಾರ (ಆ.23) ಕೊನೆಯ ಆ 20 ನಿಮಿಷಗಳು ಬಹುಶಃ ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 (Chandrayaan-3) ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆ. ಅದಕ್ಕಾಗಿ ವಿಜ್ಞಾನಿಗಳು (ISRO Scientist) ಮಾತ್ರವಲ್ಲ, ಜನಸಾಮಾನ್ಯರೂ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

    ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್, ದಕ್ಷಿಣ ಧ್ರುವದ ಮೇಲೆ ಸಂಜೆ 6.04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕ.

    ಆರಂಭದ ಪ್ರಯಾಣ ಹೇಗಿತ್ತು?

    ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಕೇಂದ್ರದ (ಇಸ್ರೋ) ಬಾಹುಬಲಿ ರಾಕೆಟ್ ಅಥವಾ ಉಡಾವಣಾ ವಾಹನ ಮಾರ್ಕ್-3, ಚಂದ್ರಯಾನ-3 ಅನ್ನು ಹೊತ್ತು ತಂದು ಕಕ್ಷೆಗೆ ಸೇರ್ಪಡೆ ಮಾಡಿತ್ತು. ಆಗಸ್ಟ್ 1ರಂದು ಚಂದ್ರನ ಕಡೆಗಿನ 3.84 ಲಕ್ಷ ಕಿಮೀ ಪ್ರಯಾಣ ಆರಂಭಿಸಿ, ಆಗಸ್ಟ್ 5ರಂದು ಚಂದ್ರಯಾನ ಉಪಗ್ರಹವು ಚಂದ್ರನ ಕಕ್ಷೆಗೆ ಪ್ರವೇಶಿಸಿತ್ತು. ಅನೇಕ ದಿನಗಳವರೆಗೆ ಅಲ್ಲಿಯೇ ಅದು ಸ್ಥಿರವಾಗಿ ನಿಂತಿತ್ತು.

    ಚಂದ್ರಯಾನದ ಒಂದೊಂದೇ ಪ್ರಕ್ರಿಯೆಗಳನ್ನು ಇಸ್ರೋ ಹಂತ ಹಂತವಾಗಿ ಮತ್ತು ಸೂಕ್ಷ್ಮವಾಗಿ ನೆರವೇರಿಸುತ್ತಾ ಬಂದಿದೆ. ಇದರಲ್ಲಿ ನಿರ್ಣಾಯಕ ಮತ್ತು ಕ್ಲಿಷ್ಟಕರ ಕಾರ್ಯವೆಂದರೆ ಆಗಸ್ಟ್ 17ರಂದು ನಡೆದ ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಪ್ರತ್ಯೇಕಿಸುವುದು. ಕಕ್ಷೆಯಲ್ಲಿ ಚಂದ್ರನಿಂದ 153*163 ಕಿಮೀ ದೂರದಲ್ಲಿ ಇರುವಾಗ ಡಿಬೂಸ್ಟಿಂಗ್‌ ಮಾಡುವ ಕಾರ್ಯ ಯಶಸ್ವಿಯಾಗಿತ್ತು. ನಿಯಂತ್ರಿತ ಅವರೋಹಣ ಕಾರ್ಯ ಆರಂಭಕ್ಕೂ ಮುನ್ನ ವಿಕ್ರಮ್ ಲ್ಯಾಂಡರ್ ಅನ್ನು 134*25 ಕಿಮೀ ದೀರ್ಘ ವೃತ್ತಾಕಾರದ ಕಕ್ಷೆಯಲ್ಲಿ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿ ಇಳಿಸಲಾಗಿತ್ತು. ಈವರೆಗೂ ಚಂದ್ರಯಾನ-3ರ ಎಲ್ಲಾ ಪ್ರಕ್ರಿಯೆಗಳೂ ಅಡೆತಡೆಯಿಲ್ಲದೆ ಸಫಲವಾಗಿ ನಡೆದಿದೆ. ಚಂದ್ರಯಾನ-2ರಲ್ಲಿಯೂ ಈವರೆಗಿನ ಹಂತಗಳು ಯಶಸ್ವಿಯಾಗಿದ್ದವು ಎನ್ನುವುದು ಗಮನಾರ್ಹ.

    ಕೊನೆಯ 20 ನಿಮಿಷದ ರೋಚಕತೆ ಹೇಗಿರುತ್ತೆ?

    ಇಸ್ರೋ ಪ್ರಸ್ತುತ ನಿಗದಿಪಡಿಸಿರುವ ಆ.23ರ ಸಂಜೆ 6.04ರ ವರೆಗಿನ 20 ನಿಮಿಷ ನಿಜಕ್ಕೂ ಆತಂಕ ಹಾಗೂ ರೋಚಕತೆಯಿಂದ ಕೂಡಿರುವ ಸಮಯ. ಬೆಂಗಳೂರಿನ ಇಸ್ರೋ ಕೇಂದ್ರದಿಂದ ವಿಕ್ರಮ್ ಲ್ಯಾಂಡರ್‌ಗೆ ನೀಡುವ ಆದೇಶಗಳಂತೆ ಅದು 25 ಕಿಮೀ ಎತ್ತರದಿಂದ ಚಂದಮಾಮನ ಅಂಗಳದ ಕಡೆಗೆ ಇಳಿಯಲು ಆರಂಭಿಸುತ್ತದೆ. ಚಾಲಿತ ಅವರೋಹಣದಲ್ಲಿ ವಿಕ್ರಮ್ ಲ್ಯಾಂಡರ್ ಪ್ರತಿ ಸೆಕೆಂಡ್‌ಗೆ 1.68 ಕಿಮೀ, ಅಂದರೆ ಗಂಟೆಗೆ 6,048 ಕಿಮೀ ವೇಗದಲ್ಲಿ ಚಂದ್ರನ ಕಡೆಗೆ ಧಾವಿಸುತ್ತದೆ. ಇದು ವಿಮಾನದ ವೇಗದ ಹತ್ತುಪಟ್ಟು ಅಧಿಕವಾಗಿರುತ್ತದೆ. ವಿಕ್ರಮ್ ಲ್ಯಾಂಡರ್‌ ಕ್ರಮೇಣ ನಿಧಾನವಾಗುತ್ತದೆ. ಆದರೆ ಲ್ಯಾಂಡರ್ ಚಂದ್ರನ ಮೇಲ್ಮೈಗೆ ಬಹುತೇಕ ಸಮತಲವಾಗಿಯೇ ಇರುತ್ತದೆ. ಇದನ್ನು ರಫ್ ಬ್ರೇಕಿಂಗ್ ಹಂತ (ವೇಗ ತಡೆಯುವ) ಎಂದು ಕರೆಯಲಾಗುತ್ತದೆ. ಇದು ಸುಮಾರು 11 ನಿಮಿಷ ನಡೆಯುತ್ತದೆ. ಕೆಲವು ಪ್ರಕ್ರಿಯೆಗಳ ಮೂಲಕ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈಗೆ ಲಂಬವಾಗಿ ಇರುವಂತೆ ಮಾಡಲಾಗುತ್ತದೆ. ಇದನ್ನು ‘ಫೈನ್ ಬ್ರೇಕಿಂಗ್ ಹಂತ’ ಎಂದು ಕರೆಯಲಾಗುತ್ತದೆ.

    2019ರಲ್ಲಿ ಚಂದ್ರಯಾನ-2ರಲ್ಲಿ ಈ ಫೈನ್ ಬ್ರೇಕಿಂಗ್ ಹಂತದಲ್ಲಿಯೇ ವಿಕ್ರಮ್ ಲ್ಯಾಂಡರ್ ನಿಯಂತ್ರಣ ಕಳೆದುಕೊಂಡಿತ್ತು. ಚಂದ್ರನ ಮೇಲ್ಮೈನ 800 ಮೀಟರ್ ಮೇಲ್ಭಾಗದಲ್ಲಿ ವೇಗವು ಶೂನ್ಯಕ್ಕೆ ಬರುತ್ತದೆ. ಆಗ ವಿಕ್ರಮ್ ಲ್ಯಾಂಡರ್, ಚಂದ್ರನ ಮೇಲ್ಮೈ ಮೇಲೆ ಇಳಿಯುವ ಭಾಗವನ್ನ ಸಮೀಕ್ಷೆ ಮಾಡುತ್ತದೆ. ನಂತರ ಮತ್ತೆ 150 ಮೀಟರ್‌ವರೆಗೂ ಇಳಿಯುವ ಲ್ಯಾಂಡರ್, ಯಾವುದಾದರೂ ಅಡೆತಡೆಗಳು ಇದೆಯೇ ಎಂದು ಪರಿಶೀಲಿಸಲು ಚಿತ್ರಗಳನ್ನ ತೆಗೆದುಕೊಳ್ಳುತ್ತದೆ ಮತ್ತು ಒಳ್ಳೆಯ ಲ್ಯಾಂಡಿಂಗ್ ಜಾಗಕ್ಕಾಗಿ ಹುಡುಕಾಡುತ್ತದೆ.

    ಚಂದ್ರನ ಅಂಗಳಕ್ಕೆ ಕಾಲಿಟ್ಟ ಬಳಿಕ ಮುಂದೇನು?

    ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಟ್ಟ ಮೇಲೆ ಧೂಳು ದೂರ ಸರಿದ ಬಳಿಕ ಲ್ಯಾಂಡರ್‌ ತೆರೆದುಕೊಳ್ಳುತ್ತದೆ. ಪ್ರಗ್ಯಾನ್ ರೋವರ್ ನಿಧಾನವಾಗಿ ಹೊರಗೆ ಬರುತ್ತದೆ. ಒಮ್ಮೆ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈಗೆ ತಲುಪಿದ ನಂತರ, ಅದು ಚಂದಿರನ ಅಂಗಳದ ಸುತ್ತಲೂ ಅಡ್ಡಾಡಲು ಮುಕ್ತವಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ 4ನೇ ದೇಶ ಎಂಬ ಕೀರ್ತಿಗೆ ಭಾರತ ಭಾಜನವಾಗಲಿದೆ. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿನ ಗಮನಾರ್ಹ ಸಾಧನೆಯಷ್ಟೇ ಅಲ್ಲ, ಜಗತ್ತಿನಲ್ಲೆಡೆ ಭಾರತದ ಹೆಸರನ್ನ ಮತ್ತಷ್ಟು ಪ್ರಜ್ವಲಿಸುವಂತೆ ಮಾಡಲಿದೆ.

    ಚಂದ್ರಯಾನ-3 ಹಾದಿ….

    * ಉಡಾವಣೆ – ಜುಲೈ 14
    * ವೆಚ್ಚ – 615 ಕೋಟಿ (ಅವತಾರ್ 2-1930 ಕೋಟಿ)
    * ತೂಕ – 3,900 ಕೆಜಿ (ಲ್ಯಾಂಡರ್, ರೋವರ್)
    * ಹಂತ – 3 ಹಂತಗಳಲ್ಲಿ ಕಕ್ಷೆ ಸೇರ್ಪಡೆ
    * ದೂರ – 3,84,400 ಕಿ.ಮೀ.
    * ಪಯಣ – 40 ದಿನ
    * ಲ್ಯಾಂಡರ್ – ವಿಕ್ರಮ್
    * ರೋವರ್ – ಪ್ರಗ್ಯಾನ್
    * ಲ್ಯಾಂಡಿಂಗ್ – ಆಗಸ್ಟ್ 23, ಸಂಜೆ 6.04 ಗಂಟೆ
    * ಮೀಸಲು ದಿನ – ಆಗಸ್ಟ್ 27
    * ಉದ್ದೇಶ – ಚಂದ್ರನ ಮಣ್ಣು, ಮೇಲ್ಮೈ ಅಧ್ಯಯನ
    * ನಿರ್ವಹಣೆ – ಪೀಣ್ಯ, ಬೆಂಗಳೂರು ಇಸ್ರೋ ಕೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

    ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್

    ಅಹಮದಾಬಾದ್: ವಿಕ್ರಮ್ ಲ್ಯಾಂಡರ್ (Vikram Lander) ಆಗಸ್ಟ್ 23ರಂದು ಲ್ಯಾಂಡ್ (Landing) ಆಗಲಿದ್ದು, ಲ್ಯಾಂಡರ್ ಮಾಡ್ಯೂಲ್‌ಗೆ (Lander Module) ಸಂಬಂಧಿಸಿದಂತೆ ಯಾವುದೇ ಅಂಶ ಪ್ರತಿಕೂಲವಾಗಿ ಕಂಡುಬಂದರೆ ಲ್ಯಾಂಡಿಂಗ್ ಅನ್ನು ಆಗಸ್ಟ್ 27ಕ್ಕೆ ಮಂದೂಡಲಾಗುವುದು ಎಂದು ಚಂದ್ರಯಾನ-3ರ (Chandrayaan-3) ಕುರಿತು ಇಸ್ರೋ (ISRO) ಮಹತ್ವದ ಹೇಳಿಕೆಯನ್ನು ನೀಡಿದೆ.

    ಲ್ಯಾಂಡರ್ ಮಾಡ್ಯೂಲ್‌ನ ಸ್ಥಿತಿ ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಹಮದಾಬಾದ್‌ನ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರ ಇಸ್ರೋದ ನಿರ್ದೇಶಕ ನೀಲೇಶ್ ಎಂ.ದೇಸಾಯಿ (Nilesh M Desai) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Welcome, buddy.. ಚಂದ್ರಯಾನ-3ಗೆ ಸ್ವಾಗತ ಕೋರಿದ ಚಂದ್ರಯಾನ-2 ಆರ್ಬಿಟರ್‌; ಇಸ್ರೋಗೆ ಇನ್ನಷ್ಟು ತಾಂತ್ರಿಕ ಬಲ

    ಲ್ಯಾಂಡಿಂಗ್ ಮೊದಲು ಮಾಡ್ಯೂಲ್‌ನ ಸ್ಥಿತಿ ಪರಿಶೀಲನೆ:
    ಆಗಸ್ಟ್ 23ರಂದು ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು ಲ್ಯಾಂಡರ್ ಮಾಡ್ಯೂಲ್‌ನ ಸ್ಥಿತಿ ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ಆ ಸಮಯದಲ್ಲಿ ಲ್ಯಾಂಡಿಂಗ್ ಸೂಕ್ತವೇ ಅಥವಾ ಇಲ್ಲವೇ ಎಂಬುದನ್ನು ನಾವು ನಿರ್ಧರಿಸುತ್ತೇವೆ. ಯಾವುದೇ ಅಂಶ ಅನುಕೂಲಕರವಾಗಿಲ್ಲ ಎಂದು ತೋರಿದರೆ ಆಗಸ್ಟ್ 27ರಂದು ಮಾಡ್ಯೂಲ್ ಅನ್ನು ಚಂದ್ರನ ಮೇಲೆ ಇಳಿಸುತ್ತೇವೆ. ಆಗಸ್ಟ್ 23ರಂದು ಲ್ಯಾಂಡಿಂಗ್ ವೇಳೆ ಯಾವುದೇ ಸಮಸ್ಯೆ ಎದುರಾಗದಿರಲಿ ಎಂದು ದೇಸಾಯಿ ಹೇಳಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡಿಂಗ್‌ ದಿನಾಂಕ, ಸಮಯ ಘೋಷಿಸಿದ ಇಸ್ರೋ – ಇಲ್ಲಿದೆ ನೋಡಿ ವಿವರ..

    ಇಸ್ರೋ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆ ಕಾರ್ಯದರ್ಶಿ ಎಸ್ ಸೋಮನಾಥ್ ಅವರು ಕೇಂದ್ರ ರಾಜ್ಯ ಸಚಿವ ವಿಜ್ಞಾನ ಮತ್ತು ತಂತ್ರಜ್ಞಾನ, ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ಜಿತೇಂದ್ರ ಸಿಂಗ್ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಚಂದ್ರಯಾನ-3ರ ಸ್ಥಿತಿ ಮತ್ತು ಸಿದ್ಧತೆಯ ಬಗ್ಗೆ ತಿಳಿಸಿದರು. ಇದನ್ನೂ ಓದಿ: ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆಯೂ ಯಶಸ್ವಿ – ಚಂದ್ರನ ಅಂಗಳಕ್ಕೆ ಇನ್ನೊಂದೇ ಹೆಜ್ಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Welcome, buddy.. ಚಂದ್ರಯಾನ-3ಗೆ ಸ್ವಾಗತ ಕೋರಿದ ಚಂದ್ರಯಾನ-2 ಆರ್ಬಿಟರ್‌; ಇಸ್ರೋಗೆ ಇನ್ನಷ್ಟು ತಾಂತ್ರಿಕ ಬಲ

    Welcome, buddy.. ಚಂದ್ರಯಾನ-3ಗೆ ಸ್ವಾಗತ ಕೋರಿದ ಚಂದ್ರಯಾನ-2 ಆರ್ಬಿಟರ್‌; ಇಸ್ರೋಗೆ ಇನ್ನಷ್ಟು ತಾಂತ್ರಿಕ ಬಲ

    ಬೆಂಗಳೂರು: ಚಂದ್ರಯಾನ-3 (Chandrayaan-3) ಸಕ್ಸಸ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಚಂದ್ರಯಾನ-3 ರಲ್ಲಿ ಕಳುಹಿಸಿರುವ ವಿಕ್ರಮ್‌ ಲ್ಯಾಂಡರ್, ಚಂದ್ರಯಾನ-2 ನಲ್ಲಿ ಕಳುಹಿಸಿದ್ದ ಆರ್ಬಿಟರ್ (Ch-2 orbiter) ಸಂಪರ್ಕ ಸಾಧಿಸಿದೆ. ಚಂದ್ರಯಾನ-2 ಆರ್ಬಿಟರ್‌ನೊಂದಿಗೆ ಸಂಪರ್ಕ ಸಾಧಿಸಿರುವ ಮಾಹಿತಿಯನ್ನು ಇಸ್ರೋ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

    2019ರಲ್ಲಿ ಇಸ್ರೋ (ISRO) ಚಂದ್ರಯಾನ-2 ಯೋಜನೆ ಆರಂಭಿಸಿದಾಗ ಅದರ ಆರ್ಬಿಟರ್‌ ಅನ್ನು ಚಂದ್ರನ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಲಾಗಿತ್ತು. ಆದರೆ, ಇದರ ಲ್ಯಾಂಡರ್‌ ಚಂದ್ರನ ಮೇಲೆ ಇಳಿಯಲು ವಿಫಲವಾಗಿದ್ದರಿಂದ ಸಂವಹನ ಕಡಿತಗೊಂಡಿತ್ತು. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ (Vikram Lander) ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು. ಈ ಎರಡರ ಸಂಪರ್ಕ ಇಸ್ರೋಗೆ ತಾಂತ್ರಿಕ ಬಲ ಸಿಕ್ಕಾಂತಾಗಿದೆ.

    ಎಲ್ಲವೂ ಅಂದುಕೊಂಡಂತೆ ನಡೆದರೆ ಬುಧವಾರ ಸಂಜೆ 6 ಗಂಟೆ 4 ನಿಮಿಷಕ್ಕೆ ಇಸ್ರೋ ಚಂದ್ರಯಾನ-3 ನೌಕೆಯ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಈ ಪ್ರಕ್ರಿಯೆ ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್‌ ಇಳಿಸಿದ ಜಗತ್ತಿನ 4ನೇ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಇದನ್ನೂ ಓದಿ: ವೀಸಾ ಅವಧಿ ಮುಗಿದರೂ ಗುಜರಾತ್‌ನಲ್ಲಿ ಅಕ್ರಮ ನೆಲೆ – 45 ಪಾಕಿಸ್ತಾನಿ ಹಿಂದೂಗಳ ಬಂಧನ

    ಚಂದ್ರ ಚುಂಬನಕ್ಕೆ‌ ಕ್ಷಣಗಣನೆ: ಇನ್ನೂ ತೀವ್ರ ಕುತೂಹಲ ಮೂಡಿಸಿರುವ ಚಂದ್ರಯಾನ-3ರ ವಿಕ್ರಮ್‌ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇದಕ್ಕೂ ಮೊದಲೇ ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿ ಇಸ್ರೋಗೆ ಕಳಿಹಿಸಿಕೊಟ್ಟಿದೆ. ಈ ಫೋಟೋಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. ಈ ಫೋಟೋದಲ್ಲಿ ಭೂಮಿಗೆ ಕಾಣಿಸದ ಚಂದ್ರನ ಮತ್ತೊಂದು ಮುಖ ಕಾಣಿಸಿದೆ. ಚಂದ್ರನ ಮಗ್ಗುಲಿನಲ್ಲಿ ಸಾಕಷ್ಟು ಕುಳಿಗಳು ಇರುವುದು ಫೋಟೋದಲ್ಲಿ ಕಂಡು ಬಂದಿದೆ.

    ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್‌ ಅವಾಯಿಡೆನ್ಸ್ ಕ್ಯಾಮೆರಾ ಮೂಲಕ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ. ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್‌ ಅವಾಯಿಡೆನ್ಸ್ ಕ್ಯಾಮೆರಾ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನ ಪತ್ತೆಹಚ್ಚಲು ನೆರವಾಗಲಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸ್ಥಳದಲ್ಲಿ ಇಳಿಯಲು ಇದು ನೆರವಾಗಲಿದೆ. ಇದನ್ನೂ ಓದಿ: ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇಯಲ್ಲಿ ಕಂಟೈನರ್ ಪಲ್ಟಿ; ಇಬ್ಬರು ಸಾವು, ನಾಲ್ವರಿಗೆ ಗಾಯ

     

    ವಿಕ್ರಮ್ ಸೆರೆ ಹಿಡಿದ ಫೋಟೋಗಳಲ್ಲಿ ಹೈನ್‌, ಬಾಸ್‌ ಎಲ್‌, ಮಾರ್‌ ಹಬ್ಲೊಲ್ಡಿಟಿನಿಯಮ್‌ ಮತ್ತು ಬೆಲ್‌ಕೊವಿಚ್‌ ಎಂಬ ಕುಳಿಗಳನ್ನ ಗುರುತಿಸಲಾಗಿದೆ. ಭೂಮಿಗೆ ಕಾಣಿಸದ ಚಂದ್ರನ ಭಾಗವು ಗೋಳಾರ್ಧವಾಗಿದೆ. ಚಂದ್ರನ ಕಕ್ಷೆಯಲ್ಲಿ ಸಿಂಕ್ರೊನಸ್‌ ಆಗಿ ತಿರುಗುವಿಕೆಯಿಂದಾಗಿ ಈ ಭಾಗ ಭೂಮಿಗೆ ಕಾಣಿಸುವುದೇ ಇಲ್ಲ. ಇದೀಗ ಇಸ್ರೋದ ಕ್ಯಾಮೆರಾವು ಆ ಭಾಗದ ಚಿತ್ರಗಳನ್ನು ತೆಗೆದಿದೆ.‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರನ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ರಷ್ಯಾದ ಲೂನಾ-25 ಲ್ಯಾಂಡರ್ ವಿಫಲ

    ಚಂದ್ರನ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ರಷ್ಯಾದ ಲೂನಾ-25 ಲ್ಯಾಂಡರ್ ವಿಫಲ

    ಮಾಸ್ಕೋ: ಭಾರತದ ಚಂದ್ರಯಾನ-3 ಗಿಂತ (Chandrayaan-3) ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ (Luna-25 Lander) ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ (Pre Moon Orbit) ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಂದ್ರನ ತನ್ನ ನಿಗದಿತ ಪೂರ್ವ-ಲ್ಯಾಂಡಿಂಗ್ ಕಕ್ಷೆಯನ್ನ ಪ್ರವೇಶಿಸುವಲ್ಲಿ ವಿಫಲವಾಗಿದೆ.

    ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಲೂನಾ-25 ಶನಿವಾರ ಕಕ್ಷೆ ಪ್ರವೇಶಿಸಬೇಕಿತ್ತು. ಆದರೆ ತುರ್ತು ಪರಿಸ್ಥಿತಿಗಳಿಂದಾಗಿ ಪೂರ್ವ ಲ್ಯಾಂಡಿಂಗ್ ಕಕ್ಷೆ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ನಿಗಮ ರೋಸ್ಕೋಸ್ಮಾಸ್ ತಿಳಿಸಿದೆ. ಈ ಬಗ್ಗೆ ರಷ್ಯಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ತಂಡ ಪರಿಶೀಲನೆ ಮಾಡುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದೆ ಎಂದು ಹೇಳಿದೆ. ಇದನ್ನೂ ಓದಿ: 7 ಶಿಶುಗಳನ್ನ ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ – ಭಾರತೀಯ ಮೂಲದ ವೈದ್ಯನಿಂದ ಸಿಕ್ಕಿಬಿದ್ದಳು ಹಂತಕಿ

    ಆಗಸ್ಟ್ 10 ರಂದು ರಷ್ಯಾ ಲೂನಾ-25 ಗಗನ ನೌಕೆಯನ್ನು ಉಡಾವಣೆ ಮಾಡುವ ಮೂಲಕ ನಾಸಾ ಹಾಗೂ ಇತರ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಸ್ಪರ್ಧೆಗಿಳಿದಿತ್ತು. ಆಗಸ್ಟ್ 21 ರಂದು ಚಂದ್ರನ ದಕ್ಷಿಣ ದ್ರುವದಲ್ಲಿ ಇಳಿದಲು ನಿರ್ಧರಿಸಲಾಗಿತ್ತು. ಆದರೆ ಪ್ರೀ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸುವಲ್ಲಿ ಲೂನಾ-25 ವಿಫಲವಾಗಿದೆ ಎಂದು ಹೇಳಲಾಗಿದೆ. ಸದ್ಯ ಯೋಜನೆ ನಿಂತಿದೆಯೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.  ಇದನ್ನೂ ಓದಿ: ಯುಎಸ್‌ ಅಧ್ಯಕ್ಷೀಯ ಸ್ಥಾನಕ್ಕೆ ಭಾರತೀಯ ಅಮೆರಿಕನ್‌ ಸ್ಪರ್ಧೆ – ಎಲೋನ್‌ ಮಸ್ಕ್‌ ಶ್ಲಾಘನೆ

    ಇನ್ನೂ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]