Tag: ವಿಕ್ರಾಂತ್

  • ಒಟಿಟಿಯಲ್ಲಿ ಬಂತು ‘ಸ್ಪಾರ್ಕ್ ಲೈಫ್’ ಸಿನಿಮಾ

    ಒಟಿಟಿಯಲ್ಲಿ ಬಂತು ‘ಸ್ಪಾರ್ಕ್ ಲೈಫ್’ ಸಿನಿಮಾ

    ಯುವ ನಾಯಕ ವಿಕ್ರಾಂತ್ (Vikrant), ಮೆಹ್ರೀನ್ ಫಿರ್ಜಾದಾ ಮತ್ತು ರುಕ್ಸಾರ್ ಧಿಲ್ಲೋನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಸ್ಪಾರ್ಕ್ L.I.F.E’ (Spark Life) ನವೆಂಬರ್ 17ರಂದು ರಿಲೀಸ್ ಆಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ‘ಸ್ಪಾರ್ಕ್ L.I.F.E’ ಮೂಲಕ ವಿಕ್ರಾಂತ್ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದರು. ಜೊತೆಗೆ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಸಹ ಬರೆದಿದ್ದರು. ಇದೀಗ ‘ಸ್ಪಾರ್ಕ್ L.I.F.E’ ಅಮೇಜಾನ್ ಪ್ರೈಮ್ ನಲ್ಲಿ  (OTT) ಸ್ಟ್ರೀಮಿಂಗ್ ಆಗಿದೆ.

    ತೆಲುಗು ಜೊತೆ ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಹಿಂದಿ ಭಾಷೆಯಲ್ಲಿ ಚಿತ್ರ ಅಮೇಜಾನ್ ಒಟಿಟಿಯಲ್ಲಿ ಲಭ್ಯವಿದೆ. ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ‘ಹೃದಯಂ’ ಮತ್ತು ಕುಶಿ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿದ್ದಾರೆ. ಮಲಯಾಳಂನ ಹಿರಿಯ ನಟ ಗುರು ಸೋಮಸುಂದರಂ ಖಳನಾಯಕನಾಗಿ ನಟಿಸಿದ್ದಾರೆ.

    ಸೈಕಲಾಜಿಕಲ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್ L.I.F.E’ ಚಿತ್ರದಲ್ಲಿ ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಬ್ರಹ್ಮಾಜಿ, ಶ್ರೀಕಾಂತ್ ಅಯ್ಯಂಗಾರ್, ಅನ್ನಪೂರ್ಣಮ್ಮ, ಚಮ್ಮಕ್ ಚಂದ್ರ, ರಾಜಾ ರವೀಂದ್ರ ಮುಂತಾದವರಿದ್ದಾರೆ. ಥಿಯೇಟರ್ ನಲ್ಲಿ ‘ಸ್ಪಾರ್ಕ್ L.I.F.E’ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ವೀಕ್ಷಿಸಬಹುದು.

  • ವಿಕ್ರಾಂತ್‌, ಮೆಹ್ರೀನ್‌ ನಟನೆಯ ‌’ಸ್ಪಾರ್ಕ್‌ ಲೈಫ್’ ಟ್ರೈಲರ್‌ ಔಟ್

    ವಿಕ್ರಾಂತ್‌, ಮೆಹ್ರೀನ್‌ ನಟನೆಯ ‌’ಸ್ಪಾರ್ಕ್‌ ಲೈಫ್’ ಟ್ರೈಲರ್‌ ಔಟ್

    ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ (Spark Life) ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಸದ್ಯದಲ್ಲೇ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಈಗಾಗಲೇ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸ್ಪಾರ್ಕ್ ಲೈಫ್ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಾಗಿತ್ತು.

    ಈ ವೇಳೆ ಮಾತನಾಡಿದ ನಾಯಕ ವಿಕ್ರಾಂತ್ (Vikranth), ಸ್ಪಾರ್ಕ್ ಸಿನಿಮಾ ನನ್ನ ಮೂರು ವರ್ಷದ ಕನಸು. ಎಲ್ಲರಿಗೂ ಟ್ರೈಲರ್ ಇಷ್ಟವಾಗಿದೆ ಎಂದು ಭಾವಿಸುತ್ತೇನೆ. ಈ ಚಿತ್ರಕ್ಕಾಗಿ ಒಂದುವರೆ ವರ್ಷ ಕಥೆ ಬರೆದೆ. ಇನ್ನೊಂದುವರೆ ವರ್ಷ ನಿರ್ಮಾಣದಲ್ಲಿ ತೊಡಗಿಸಿಕೊಂಡೆ. ಮೇಕಿಂಗ್ ನಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಕಾಮಿಡಿ, ಪ್ರೀತಿ, ಥ್ರಿಲ್ಲಿಂಗ್ ಎಲಿಮೆಂಟ್ ಎಲ್ಲವೂ ಸಿನಿಮಾದಲ್ಲಿದೆ. ನಾನು ನಾಯಕನಾಗಿಯೂ ಬಣ್ಣ ಹಚ್ಚಿದ್ದೇನೆ ಎಂದರು.

    ಮೆಹ್ರೀನ್ ಪಿರ್ಜಾದಾ (Mehreen Pirzada), ರುಕ್ಷಾರ್ ಧಿಲ್ಲೋನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಮಲಯಾಳಂನ ಹಿರಿಯ ನಟ ಗುರು ಸೋಮಸುಂದರಂ ಖಳನಾಯಕನಾಗಿ ನಟಿಸಿದ್ದಾರೆ. ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಬ್ರಹ್ಮಾಜಿ, ಶ್ರೀಕಾಂತ್ ಅಯ್ಯಂಗಾರ್, ಚಮ್ಮಕ್ ಚಂದ್ರ, ಅನ್ನಪೂರ್ಣಮ್ಮ, ರಾಜಾ ರವೀಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಾಂತ್ ನಾಯಕನಾಗಿ ನಟಿಸುವುದರ ಜೊತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ‘ಹೃದಯಂ’ ಮತ್ತು ಕುಶಿ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿದ್ದಾರೆ. ಇದನ್ನೂ ಓದಿ:ಪತಿ ರಣ್‌ಬೀರ್, ರಶ್ಮಿಕಾ ಮಂದಣ್ಣ ಲಿಪ್‌ಲಾಕ್‌ಗೆ ಆಲಿಯಾ ಭಟ್ ಪ್ರತಿಕ್ರಿಯೆ

    ಆ್ಯಕ್ಷನ್ ದೃಶ್ಯಗಳ ಜೊತೆಗೆ ಎಮೋಷನ್ಸ್, ಲವ್ ಮುಂತಾದ ಅಂಶಗಳನ್ನು ಇಟ್ಟುಕೊಂಡು ‘ಸ್ಪಾರ್ಕ್ ಲೈಫ್’ ಸಿನಿಮಾ ಮಾಡಲಾಗಿದೆ. ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗಿರುವ ಈ ಸಿನಿಮಾ. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಕ್ರಾಂತ್ ನಟನೆಯ  ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ಗಂತೂ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಬಹುತೇಕ ಸಿನಿಮಾ ರಂಗಗಳಲ್ಲಿಯೂ ಸಾಲು ಸಾಲು ಪ್ಯಾನ್ ಇಂಡಿಯಾ ಚಿತ್ರಗಳು ಅನೌನ್ಸ್ ಆಗುತ್ತಲೇ ಇವೆ. ಅದರ ಮುಂದುವರೆದ ಭಾಗವಾಗಿ ತೆಲುಗಿನಲ್ಲಿ ‘ಸ್ಪಾರ್ಕ್ ಲೈಫ್’ (Spark Life) ಎಂಬ ಸಿನಿಮಾ ತಯಾರಾಗ್ತಿದ್ದು, ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ.

    ಎರಡು ನಿಮಿಷ ಎರಡು ಸೆಕೆಂಡ್ ಇರುವ ಈ ಟೀಸರ್ ಕಂಪ್ಲೀಟ್ ಸಾಹಸಮಯ ದೃಶ್ಯಗಳಿಂದ ಕೂಡಿದೆ. ಯುವ ಪ್ರತಿಭೆ ವಿಕ್ರಾಂತ್ (Vikrant) ನಾಯಕನಾಗಿ ನಟಿಸಿದ್ದು, ಮೆಹ್ರೀನ್ ಫಿರ್ಜಾದಾ (Mehreen Firzad) ಹಾಗೂ ರುಕ್ಸಾರ್ ಧಿಲ್ಲೋನ್ (Ruksar Dhillon) ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್- ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ಧಗಧಗಿಸುವ ಬೆಂಕಿ, ಹೆಣಗಳ ರಾಶಿ, ರಕ್ತಪಾತದಿಂದ ಆರಂಭವಾಗುವ ಟೀಸರ್ ನಲ್ಲಿ ನಾಯಕನನ್ನು ಭರ್ಜರಿ ಆಕ್ಷನ್ ಮೂಲಕ ಪರಿಚಯಿಸಲಾಗಿದೆ, ಪ್ರೀತಿ, ಪ್ರೇಮ, ತನಿಖೆ ಸುತ್ತ ಟೀಸರ್ ಸಾಗುತ್ತದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಸೈಕಾಲಜಿಕಲ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್ ಲೈಫ್ ಸಿನಿಮಾಗೆ ಡೆಫ್ ಫ್ರಾಗ್ ಪ್ರೊಡಕ್ಷನ್ ಆಕ್ಷನ್ ಕಟ್ ಹೇಳಿದ್ದು, ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಮಲಯಾಳಂ ನಟ ಗುರು ಸೋಮಸುಂದರಂ ಮತ್ತು ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಶ್ರೀಕಾಂತ್ ಅಯ್ಯಂಗಾರ್, ಅನ್ನಪೂರ್ಣಮ್ಮ, ರಾಜಾ ರವೀಂದ್ರ ತಾರಾಬಳಗದಲ್ಲಿದ್ದಾರೆ. ಹೃದಯಂ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನವಿರುವ ಸ್ಪಾರ್ಕ್ ಲೈಫ್ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫಸ್ಟ್‌ ಟೈಂ ಕಾರವಾರಕ್ಕೆ ಬಂತು ಐಎನ್‌ಎಸ್‌ ವಿಕ್ರಾಂತ್‌ – ನಿಲುಗಡೆಯಾಗುತ್ತಿರುವುದು ಯಾಕೆ?

    ಫಸ್ಟ್‌ ಟೈಂ ಕಾರವಾರಕ್ಕೆ ಬಂತು ಐಎನ್‌ಎಸ್‌ ವಿಕ್ರಾಂತ್‌ – ನಿಲುಗಡೆಯಾಗುತ್ತಿರುವುದು ಯಾಕೆ?

    ಕಾರವಾರ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಎಂದೇ ಹೆಗ್ಗುರುತಿಗೆ ಪಾತ್ರವಾಗಿರುವ ಐಎನ್ಎಸ್ ವಿಕ್ರಾಂತ್ (INS Vikrant) ಕದಂಬ ನೌಕಾನೆಲೆಯ ಜಟ್ಟಿಗೆ (ಬರ್ತಿಂಗ್ ಜಾಗ) ಮೊದಲ ಬಾರಿ ಆಗಮಿಸಿದೆ.

    ಈ ಹಿಂದೆ ವಿಕ್ರಾಂತ್ ಹಡಗು ಕೊಚ್ಚಿಯಲ್ಲಿಯೇ ಇದ್ದು ನಂತರ ಅರಬ್ಬಿ ಸಮುದ್ರದಲ್ಲಿ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಿತ್ತು. ಇದೀಗ ಕಾರವಾರದ ಕದಂಬ ನೌಕಾ ನೆಲೆಯಲ್ಲಿ (INS Kadamba Naval Base) ಯಶಸ್ವಿಯಾಗಿ ನಿಲುಗಡೆಯಾಗಿರುವ ವಿಕ್ರಾಂತ್‌ ಒಂದು ತಿಂಗಳ ಕಾಲ ಇಲ್ಲಿಯೇ ಇರಲಿದೆ. ನಂತರ ಇಂಧನ, ಆಹಾರ ತುಂಬಿಕೊಂಡು ಪೂರ್ವ ಹಾಗೂ ಪಶ್ಚಿಮ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸಲಿದೆ.

    ಏಷ್ಯಾದ ಅತೀ ದೊಡ್ಡ ನೌಕಾ ನೆಲೆ ಎಂದೇ ಪ್ರಸಿದ್ಧಿ ಪಡೆದಿರುವ ಕದಂಬದಲ್ಲಿ ಈಗಾಗಲೇ 40 ಯುದ್ದ ಹಡಗುಗಳು, ಜಲಾಂತರ್ಗಾಮಿ ನೌಕೆ ನಿಲ್ಲುವಷ್ಟು ವ್ಯವಸ್ಥೆ ಕಲ್ಪಿಸಲಾಗಿದೆ. ದೇಶದ ಮೊದಲ ಹಡಗುಗಳನ್ನು ರಿಪೇರಿ ಮಾಡಲು ಸಮುದ್ರದಿಂದಲೇ ಮೇಲೆತ್ತಿ ದಡಕ್ಕೆ ತರುವ  ʼಟ್ರಾಲಿ ಶಿಪ್ಟಿಂಗ್ ಸಿಸ್ಟಮ್ʼತಂತ್ರಜ್ಞಾನ ಇಲ್ಲಿರುವುದು ವಿಶೇಷ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ

    ಸೀ ಬರ್ಡ್‌ ಸ್ಟೇಜ್ -1 ರಲ್ಲಿ ಮೂರು ಜಟ್ಟಿಗಳು ನಿರ್ಮಾಣಗೊಂಡಿದ್ದವು. ಆದರೆ ಸ್ಟೇಜ್-2 ನಲ್ಲಿ ಮತ್ತೆ ಮೂರು ಜಟ್ಟಿಗಳನ್ನು ನಿರ್ಮಾಣ ಮಾಡಲಾಗಿದ್ದು ಎರಡು ಜಟ್ಟಿಯಲ್ಲಿ ಏಷ್ಯಾದ ಅತೀ ದೊಡ್ಡ ಯುದ್ಧ ಹಡಗು ನಿಲುಗಡೆ ಮಾಡಬಹುದಾಗಿದೆ. ಈ ಕಾರಣಕ್ಕೆ ವಿಕ್ರಮಾದಿತ್ಯ ಹಾಗೂ ವಿಕ್ರಾಂತ್ ಯುದ್ದ ವಿಮಾನ ವಾಹಕಗಳಿಗೆ ಇಲ್ಲಿ ಸ್ಥಳಾವಕಾಶ ಮಾಡಿಕೊಡಲಾಗಿದೆ.

    ಐಎನ್ಎಸ್ ವಿಕ್ರಾಂತ್ ವಿಶೇಷತೆ ಏನು?
    ಕೊಚ್ಚಿಯ ಹಡಗು ಕಾರ್ಖಾನೆಯಲ್ಲಿ 2000 ತಂತ್ರಜ್ಞರು, 13 ವರ್ಷಗಳಿಂದ ಕೆಲಸ ಮಾಡಿ ನಿರ್ಮಾಣ ಮಾಡಿದ ಯುದ್ಧನೌಕೆ ಇದಾಗಿದ್ದು, ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಿದ್ದರು.

    40 ಸಾವಿರ ಟನ್‌ ತೂಕದ 23 ಸಾವಿರ ಕೋಟಿ ರೂ. ಹಣ ವ್ಯಯಿಸಿ ಯುದ್ಧವಿಮಾನ ವಾಹಕ ನೌಕೆಯನ್ನು ಸ್ವದೇಶಿ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಿಸುವ ಮೂಲಕ ವಿಶ್ವದ 6 ಪ್ರಮುಖ ರಾಷ್ಟ್ರಗಳ ಸಾಲಿಗೆ ಭಾರತ ಸೇರಿದೆ. ಈ ಹಿಂದೆ ಅಮೆರಿಕ, ರಷ್ಯಾ, ಚೀನಾ, ಫ್ರಾನ್ಸ್‌, ಇಂಗ್ಲೆಂಡ್‌, ಇಟಲಿ ಮಾತ್ರವೇ ಈ ಸಾಧನೆಗೈದಿದ್ದವು. ಇದನ್ನೂ ಓದಿ: ವೇದಿಕೆಯಲ್ಲೇ ಎಂ.ಬಿ ಪಾಟೀಲ್‌ಗೆ ಗದರಿದ ಡಿಕೆಶಿ – ಮುಜುಗರಕ್ಕೆ ಒಳಗಾಗಿ ಸುಮ್ಮನೆ ಕುಳಿತ MBP

    ಉದ್ದ 262 ಮೀಟರ್‌, ಅಗಲ 62 ಮೀಟರ್‌, ಎತ್ತರ- 59 ಮೀಟರ್‌ ಹೊಂದಿರುವ ಯುದ್ಧ ನೌಕೆಯಲ್ಲಿ 18 ಮಹಡಿಗಳಿದ್ದು 2,400 ವಿಭಾಗಗಳು ಇವೆ. ಒಂದೇ ಬಾರಿಗೆ 1600 ನೌಕಾ ಸಿಬ್ಬಂದಿಯನ್ನು ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನಿಯೋಜಿಸಬಹುದಾಗಿದೆ.

    ಮಿಗ್‌- 29 ಕೆ, ಕಮೋವ್‌- 31 ಹೆಲಿಕಾಪ್ಟರ್‌ಗಳು, ಅಮೆರಿಕ ನಿರ್ಮಿತ ಎಫ್‌-18ಎ ಸೂಪರ್‌ ಹಾರ್ನೆಟ್‌, ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು, ಫೈಟರ್‌ ಜೆಟ್‌ ಎಂಎಚ್‌- 60 ರೋಮಿಯೊ ಮಲ್ಟಿರೋಲ್‌ ಹೆಲಿಕಾಪ್ಟರ್‌ಗಳು,  32 ಮಧ್ಯಮ ಶ್ರೇಣಿಯ ಮೇಲ್ಮೈಯಿಂದ ಚಿಮ್ಮುವ ವಾಯು ಕ್ಷಿಪಣಿಗಳು ಮತ್ತು ಎಕೆ- 630 ಫಿರಂಗಿ ಗನ್‌ಗಳೂ ವಿಕ್ರಾಂತ್‌ ಬತ್ತಳಿಕೆಯಲ್ಲಿದೆ.

    ಇದರ ರನ್‌ ವೇ 262 ಮೀಟರ್‌ಗಳಷ್ಟು ಉದ್ದವಿದೆ. ಬರೋಬ್ಬರಿ 2 ಫುಟ್ಬಾಲ್‌ ಮೈದಾನದಷ್ಟು ದೊಡ್ಡದಾಗಿದೆ.  2 ಒಲಿಂಪಿಕ್ಸ್‌ ಈಜುಕೊಳಗಳನ್ನು ನಿರ್ಮಿಸಬಹುದಾದಷ್ಟು ಉದ್ದವಾದ ರನ್‌ವೇ ಹೊಂದಿದೆ.

    2,500 ಕಿ.ಮೀ. ಉದ್ದದ ವಿದ್ಯುತ್‌ ಕೇಬಲ್‌ ವಿಕ್ರಾಂತ್‌ನ ಒಡಲೊಳಗಿದೆ. ಇದರ ಅಡುಗೆಮನೆಯಲ್ಲಿ ಒಂದೇ ದಿನದಲ್ಲಿ 4,800 ಜನರಿಗೆ ಅಡುಗೆ ಸಿದ್ಧಪಡಿಸಬಹುದು. 1 ಗಂಟೆಯಲ್ಲಿ 3 ಸಾವಿರ ಚಪಾತಿ ಮಾಡುವ, ಇಡ್ಲಿ ಬೇಯಿಸುವ ಅತ್ಯಾಧುನಿಕ ಯಂತ್ರಳಿವೆ.

    ಈ ನೌಕೆ ಗಂಟೆಗೆ 33 ಕಿ.ಮೀ. ವೇಗದಲ್ಲಿ ಚಲಿಸಿ, ಒಂದೇ ಬಾರಿಗೆ 7,500 ನಾಟಿಕಲ್‌ ಮೈಲು ಕ್ರಮಿಸಬಲ್ಲದು. 250 ಟ್ಯಾಂಕರ್‌ಗಳಷ್ಟು ಇಂಧನ ಇದರಲ್ಲಿರುತ್ತದೆ. ಸಿಬ್ಬಂದಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು 16 ಬೆಡ್‌ಗಳ ಆಸ್ಪತ್ರೆ ಕೂಡ ಇದೆ.

    2025ಕ್ಕೆ ದೇಶಕ್ಕೆ ಸಮರ್ಪಣೆ
    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಕದಂಬ ನೌಕಾನೆಲೆಯು ಏಷ್ಯಾದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಭೂ ಪ್ರದೇಶ ವೈರಿಗಳಿಗೆ ಚಿತ್ತ ಕಾಣದಂತೆ ಮಾಡಿ ಶತ್ರುಗಳ ಮೇಲೆ ಮುಗಿಬೀಳಲು ಸುವ್ಯವಸ್ಥಿತ ನೌಕಾ ತಾಣವಾಗಿ ಮಾರ್ಪಡುತಿದ್ದು ಇದೀಗ ನೌಕಾ ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿದೆ. ಒಂದು ಲಕ್ಷ ಸಿಬ್ಬಂದಿಗೆ ವಸತಿ ನಿಲಯ ,ಕಚೇರಿ ಸಂಕೀರ್ಣ, ರಿಪೇರಿ ಯಾರ್ಡ್‌ಗಳು ಈಗಾಗಲೇ ನಿರ್ಮಾಣದ ಅಂತಿಮ ಹಂತ ತಲುಪಿದ್ದು ನೌಕಾ ದಳದ ಮಾಹಿತಿ ಪ್ರಕಾರ 2025ರ ವೇಳೆಗೆ ದೇಶಕ್ಕೆ ಸಮರ್ಪಣೆಗೊಳ್ಳಲಿದೆ.

  • ಅಪ್ಪನಿಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ ರಜನಿಕಾಂತ್ ಪುತ್ರಿ ಐಶ್ವರ್ಯ: ಲಾಲ್ ಸಲಾಮ್ ಚಿತ್ರದಲ್ಲಿ ರಜನಿ

    ಅಪ್ಪನಿಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ ರಜನಿಕಾಂತ್ ಪುತ್ರಿ ಐಶ್ವರ್ಯ: ಲಾಲ್ ಸಲಾಮ್ ಚಿತ್ರದಲ್ಲಿ ರಜನಿ

    ಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಲಾಲ್ ಸಲಾಮ್ (Lal Salaam) ಹೆಸರಿನಲ್ಲಿ ಇವರು ಚಿತ್ರ ಮಾಡುತ್ತಿದ್ದು, ಈ ಸಿನಿಮಾದಲ್ಲಿ ರಜನಿಕಾಂತ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸಿನಿಮಾದ ನಿರ್ಮಾಪಕರೇ ಘೋಷಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

    ಲಾಲ್ ಸಲಾಮ್ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ನಟಿಸುತ್ತಿದ್ದು, ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಶ್ರೀಧರ್ ಪಿಲ್ಲೈ ಅವರು ಚಿತ್ರಕ್ಕೆ ಹಣ ಹೂಡಿದ್ದಾರೆ. ಅವರೇ ಟ್ವಿಟ್ ಮೂಲಕ ತಮ್ಮ ಸಿನಿಮಾದಲ್ಲಿ ರಜನಿಕಾಂತ್ (Rajinikanth) ವಿಶೇಷ ಪಾತ್ರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ

    ಇದೊಂದು ಕ್ರಿಕೆಟ್ ಹಿನ್ನೆಲೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿಯೇ ಕ್ರಿಕೆಟ್ ಬಲ್ಲಂತಹ ನಟರಾದ ವಿಕ್ರಾಂತ್ (Vikrant) ಮತ್ತು ವಿಷ್ಣು ವಿಶಾಲ್ (Vishnu Vishal) ಅವರನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ಇಬ್ಬರೂ ಕಲಾವಿದರು ಉತ್ತಮ ಕ್ರಿಕೆಟ್ ಪಟುಗಳು ಎನ್ನುವುದು ವಿಶೇಷ. ಈ ಸಿನಿಮಾದಲ್ಲಿ ಇನ್ನೂ ಹಲವು ಅಚ್ಚರಿಯ ವಿಷಯಗಳಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ಹೇಳುವುದಾಗಿಯೂ ನಿರ್ಮಾಣ ಸಂಸ್ಥೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಮೋದಿ ಚಾಲನೆ

    ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಮೋದಿ ಚಾಲನೆ

    ತಿರುವನಂತಪುರಂ: ಭಾರತದಲ್ಲೇ ತಯಾರಾದ ಮೊದಲ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ವಿಕ್ರಾಂತ್ ಅನ್ನು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಿದ್ದಾರೆ.

    ಭಾರತ ಇದೀಗ ನಮ್ಮದೇ ಆದ ವಿಮಾನವಾಹಕ ನೌಕೆಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಮತ್ತೊಂದು ಹೆಜ್ಜೆ ಇಟ್ಟಿದೆ. ವಿಕ್ರಾಂತ್ ವಿಮಾನ ವಾಹಕ ನೌಕೆ ಒಂದು ದೊಡ್ಡ, ಭವ್ಯ, ವಿಭಿನ್ನ ಹಾಗೂ ವಿಶೇಷ ಎಂದು ಮೋದಿ ಬಣ್ಣಿಸಿದರು.

    ವಿಕ್ರಾಂತ್ ನೌಕಾಪಡೆಯನ್ನು ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (ಡಬ್ಲ್ಯುಡಿಬಿ) ವಿನ್ಯಾಸಗೊಳಿಸಿದೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇದನ್ನು ನಿರ್ಮಿಸಿದೆ. ವಿಕ್ರಾಂತ್ ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ನ್ಯಾವಿಗೇಷನ್ ಮತ್ತು ಯಾಂತ್ರೀಕೃತಗೊಂಡ ವಿಶೇಷತೆಗಳನ್ನು ಹೊಂದಿದೆ. ಇದು ಭಾರತದ ಕಡಲ ಇತಿಹಾಸದಲ್ಲಿ ನಿರ್ಮಿಸಲಾದ ಅತಿದೊಡ್ಡ ಹಡಗು ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ.

    ವಿಕ್ರಾಂತ್ ನಿರ್ಮಾಣವನ್ನು 2009ರ ಫೆಬ್ರವರಿ 28ರಿಂದ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಪ್ರಾರಂಭಿಸಲಾಯಿತು. 2020ರ ಡಿಸೆಂಬರ್‌ನಲ್ಲಿ ಸಿಎಸ್‌ಎಲ್ ನಡೆಸಿದ ಜಲಾನಯನ ಪ್ರಯೋಗಗಳಲ್ಲಿ ವಿಮಾನವಾಹಕ ನೌಕೆ ಸಂಪೂರ್ಣವಾಗಿ ಯಶಸ್ವಿಯಾಗಿದೆ. 40 ಸಾವಿರ ಟನ್ ತೂಕದ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಎಲ್ಲಾ 4 ಸಮುದ್ರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದನ್ನೂ ಓದಿ: ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಐಸಿಯುಗೆ ಶಿಫ್ಟ್

    ಮೊದಲ ಪರೀಕ್ಷೆಯು ಕಳೆದ ವರ್ಷ ಆಗಸ್ಟ್ 21ರಂದು ಪೂರ್ಣಗೊಂಡಿತು. 2ನೇಯದು ಅಕ್ಟೋಬರ್ 21ರಂದು ಮತ್ತು 3ನೇ ಪರೀಕ್ಷೆಯು ಈ ವರ್ಷ ಜನವರಿ 22 ರಂದು ಪೂರ್ಣಗೊಂಡಿತು. ವಿಕ್ರಾಂತ್ ಕೊನೆಯ ಮತ್ತು 4ನೇ ಸಮುದ್ರ ಪ್ರಯೋಗಗಳು ಮೇ ತಿಂಗಳಲ್ಲಿ ಪ್ರಾರಂಭವಾಗಿದ್ದು, ಇದು ಆಗಸ್ಟ್ ತಿಂಗಳ ಆರಂಭದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿತು.

    ಇದು MiG-29K ಫೈಟರ್ ಜೆಟ್‌ಗಳು, Kamov-31, MH-60R ಬಹು-ಪಾತ್ರ ಹೆಲಿಕಾಪ್ಟರ್‌ಗಳ ಜೊತೆಗೆ ಸ್ಥಳೀಯವಾಗಿ ನಿರ್ಮಿಸಲಾದ ಲಘು ಹೆಲಿಕಾಪ್ಟರ್‌ಗಳು (ALH) ಮತ್ತು ಲಘು ಯುದ್ಧ ವಿಮಾನ (ಐಅಂ) ಸೇರಿದಂತೆ ಸುಮಾರು 30 ವಿಮಾನಗಳನ್ನು ಸಾಗಿಸಬಲ್ಲ ಸಾಮರ್ಥ್ಯ ಹೊಂದಿದೆ. ಇದು Kamov Ka-31 ಏರ್‌ಬೋರ್ನ್ ಅರ್ಲಿ ವಾರ್ನಿಂಗ್ ಅನ್ನು ಅಳವಡಿಸಲಾಗಿದೆ. ವಿಕ್ರಾಂತ್ ಅನ್ನು ಸೇನೆಗೆ ಸೇರಿಸುವ ಮೂಲಕ ಭಾರತವು ಸ್ಥಳೀಯವಾಗಿ ವಿಮಾನನೌಕೆ ವಿನ್ಯಾಸಗೊಳಿಸುವ ಮತ್ತು ಸ್ಥಾಪಿಸುವ ಸಾಮರ್ಥ್ಯ ಹೊಂದಿರುವ ರಾಷ್ಟ್ರಗಳ ಗುಂಪಿಗೆ ಸೇರಿದೆ. ಇದನ್ನೂ ಓದಿ: ಸರ್ಕಾರದ ‘ಪುಣ್ಯಕೋಟಿ’ ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್

    ವಿಶೇಷತೆ ಏನು?
    * ಹಿಂದೂ ಮಹಾಸಾಗರ ಪ್ರದೇಶದಲ್ಲಿ (ಐಓಆರ್) ಭಾರತದ ಸ್ಥಾನವನ್ನು ಮತ್ತು ನೀಲಿಜಲ ನೌಕಾಪಡೆಯ ಅನ್ವೇಷಣೆಯನ್ನು ಹೆಚ್ಚಿಸಲು ಕಾರ್ಯನಿರ್ವಹಿಸುತ್ತದೆ.
    * 2,300 ವಿಭಾಗಗಳನ್ನು ಹೊಂದಿದ್ದು, ಮಹಿಳಾ ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷ ಕ್ಯಾಬಿನ್‌ಗಳನ್ನು ಒಳಗೊಂಡಂತೆ 1,700 ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾಗಿದೆ.
    * ನೌಕೆಯು 262 ಮೀಟರ್ ಉದ್ದ, 62 ಮೀಟರ್ ಅಗಲ ಮತ್ತು 59 ಮೀಟರ್ ಎತ್ತರವಿದೆ. ಇದರ ನಿರ್ಮಾಣಕಾರ್ಯ 2009ರಲ್ಲಿ ಆರಂಭಗೊಂಡಿತ್ತು.
    * 8 ಪವರ್ ಜನರೇಟರ್‌ಗಳನ್ನು ಒಳಗೊಂಡಿದ್ದು, ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುವ ಆಸ್ಪತ್ರೆಯನ್ನೂ ಇದೇ ಸಂಕಿರ್ಣದಲ್ಲಿ ನಿರ್ಮಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ ನೌಕಾಪಡೆಗೆ ಅಧಿಕೃತ ಸೇರ್ಪಡೆ

    ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ ನೌಕಾಪಡೆಗೆ ಅಧಿಕೃತ ಸೇರ್ಪಡೆ

    ನವಹದೆಲಿ: ದೇಶವು ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ‘ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಮೊದಲ ವಿಮಾನವಾಹಕ ಯುದ್ಧನೌಕೆ ‘ವಿಕ್ರಾಂತ್‌’ ಅನ್ನು ಸೆಪ್ಟೆಂಬರ್‌ 2ರಂದು ಪ್ರಧಾನಿ ನರೇಂದ್ರ ಮೋದಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಿದ್ದಾರೆ.

    ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾದ ಯುದ್ಧ ನೌಕೆ ವಿಕ್ರಾಂತ್‌ ಅನ್ನು ಈಗಾಗಲೇ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದ್ದು, ಅಂದು ಪ್ರಧಾನಿ ಅಧೀಕೃತವಾಗಿ ಸೇರ್ಪಡೆಗೊಳಿಸಲಿದ್ದಾರೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಸ್ಥಾನವನ್ನು ಗಮನಾರ್ಹವಾಗಿ ಬಲಪಡಿಸುವ ನಿಟ್ಟಿನಲ್ಲಿ ಈ ನೌಕೆ ಕಾರ್ಯ ನಿರ್ವಹಿಸಲಿದೆ. ವಿಕ್ರಾಂತ್‌ ಕಳೆದ ಜುಲೈನಲ್ಲಿ ತನ್ನ ಅಂತಿಮ ಹಂತದ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ವಿಕ್ರಾಂತ್ ನಿರ್ಮಾಣವನ್ನು 2009ರ ಫೆಬ್ರವರಿ 28ರಿಂದ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಪ್ರಾರಂಭಿಸಲಾಯಿತು. 2020ರ ಡಿಸೆಂಬರ್ ನಲ್ಲಿ ಸಿಎಸ್ಎಲ್ ನಡೆಸಿದ ಜಲಾನಯನ ಪ್ರಯೋಗಗಳಲ್ಲಿ ವಿಮಾನವಾಹಕ ನೌಕೆ ಸಂಪೂರ್ಣವಾಗಿ ಯಶಸ್ವಿಯಾಗಿದೆ. 40 ಸಾವಿರ ಟನ್ ತೂಕದ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಎಲ್ಲಾ 4 ಸಮುದ್ರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮೊದಲ ಪರೀಕ್ಷೆಯು ಕಳೆದ ವರ್ಷ ಆಗಸ್ಟ್ 21ರಂದು ಪೂರ್ಣಗೊಂಡಿತು. 2ನೇಯದು ಅಕ್ಟೋಬರ್ 21ರಂದು ಮತ್ತು 3ನೇ ಪರೀಕ್ಷೆಯು ಈ ವರ್ಷ ಜನವರಿ 22 ರಂದು ಪೂರ್ಣಗೊಂಡಿತು. ವಿಕ್ರಾಂತ್ ಕೊನೆಯ ಮತ್ತು 4ನೇ ಸಮುದ್ರ ಪ್ರಯೋಗಗಳು ಮೇ ತಿಂಗಳಲ್ಲಿ ಪ್ರಾರಂಭವಾಗಿದ್ದು ಇದು ಈ ತಿಂಗಳ ಆರಂಭದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿತು.

    ಇದು MiG-29K ಫೈಟರ್ ಜೆಟ್‌ಗಳು, Kamov-31, MH-60R ಬಹು-ಪಾತ್ರ ಹೆಲಿಕಾಪ್ಟರ್‌ಗಳ ಜೊತೆಗೆ ಸ್ಥಳೀಯವಾಗಿ ನಿರ್ಮಿಸಲಾದ ಲಘು ಹೆಲಿಕಾಪ್ಟರ್‌ಗಳು (ALH) ಮತ್ತು ಲಘು ಯುದ್ಧ ವಿಮಾನ (LCA) ಸೇರಿದಂತೆ ಸುಮಾರು 30 ವಿಮಾನಗಳನ್ನು ಸಾಗಿಸಬಲ್ಲ ಸಾಮರ್ಥ್ಯ ಹೊಂದಿದೆ. ಇದು Kamov Ka-31 ಏರ್‌ಬೋರ್ನ್ ಅರ್ಲಿ ವಾರ್ನಿಂಗ್ ಅನ್ನು ಅಳವಡಿಸಲಾಗಿದೆ. ವಿಕ್ರಾಂತ್‌ ಅನ್ನು ಸೇನೆಗೆ ಸೇರಿಸುವ ಮೂಲಕ ಭಾರತವು ಸ್ಥಳೀಯವಾಗಿ ವಿಮಾನನೌಕೆ ವಿನ್ಯಾಸಗೊಳಿಸುವ ಮತ್ತು ಸ್ಥಾಪಿಸುವ ಸಾಮರ್ಥ್ಯ ಹೊಂದಿರುವ ರಾಷ್ಟ್ರಗಳ ಗುಂಪಿಗೆ ಸೇರಿದೆ.

    ವಿಕ್ರಾಂತ್‌ ವಿಶೇಷತೆ ಏನು?

    • ಹಿಂದೂ ಮಹಾಸಾಗರ ಪ್ರದೇಶದಲ್ಲಿ (ಐಓಆರ್) ಭಾರತದ ಸ್ಥಾನವನ್ನು ಮತ್ತು ನೀಲಿಜಲ ನೌಕಾಪಡೆಯ ಅನ್ವೇಷಣೆಯನ್ನು ಹೆಚ್ಚಿಸಲು‌ ಕಾರ್ಯನಿರ್ವಹಿಸುತ್ತದೆ.
    • 2,300 ವಿಭಾಗಗಳನ್ನು ಹೊಂದಿದ್ದು, ಮಹಿಳಾ ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷ ಕ್ಯಾಬಿನ್‌ಗಳನ್ನು ಒಳಗೊಂಡಂತೆ 1,700 ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾಗಿದೆ.
    • ನೌಕೆಯು 262 ಮೀಟರ್‌ ಉದ್ದ, 62 ಮೀಟರ್‌ ಅಗಲ ಮತ್ತು 59 ಮೀಟರ್ ಎತ್ತರವಿದೆ. ಇದರ ನಿರ್ಮಾಣಕಾರ್ಯ 2009ರಲ್ಲಿ ಆರಂಭಗೊಂಡಿತ್ತು.
    • 8 ಪವರ್‌ ಜನರೇಟರ್‌ಗಳನ್ನು ಒಳಗೊಂಡಿದ್ದು, ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುವ ಆಸ್ಪತ್ರೆಯನ್ನೂ ಇದೇ ಸಂಕಿರ್ಣದಲ್ಲಿ ನಿರ್ಮಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • INS ವಿಕ್ರಾಂತ್ ಕೇಸ್ – ಬಿಜೆಪಿ ಮುಖಂಡ ಕಿರಿತ್ ಸೋಮಯ್ಯಗೆ ಮಧ್ಯಂತರ ಜಾಮೀನು

    INS ವಿಕ್ರಾಂತ್ ಕೇಸ್ – ಬಿಜೆಪಿ ಮುಖಂಡ ಕಿರಿತ್ ಸೋಮಯ್ಯಗೆ ಮಧ್ಯಂತರ ಜಾಮೀನು

    ಮುಂಬೈ: ಐಎನ್‌ಎಸ್ ವಿಕ್ರಾಂತ್ ಹೆಸರಲ್ಲಿ ಸಂಗ್ರಹಿಸಿದ್ದ ದೇಣಿಗೆಯನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಅಡಿಯಲ್ಲಿ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಅವರನ್ನು ಬಂಧಿಸದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಒಂದು ವೇಳೆ ಸೋಮಯ್ಯ ಅವರನ್ನು ಬಂಧಿಸಿದಲ್ಲಿ, 50,000 ರೂ. ವೈಯಕ್ತಿಕ ಬಾಂಡ್ ಮೇಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರ ಏಕಸದಸ್ಯ ಪೀಠ ಆದೇಶಿಸಿದೆ. ಇದನ್ನೂ ಓದಿ: ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    KIRIT SOMAYYA

    ಕಿರಿತ್ ಸೋಮಯ್ಯ ಅವರ ವಿರುದ್ಧ ಮಾಡಲಾದ ಆರೋಪಗಳು ಮಾಧ್ಯಮದ ವರದಿಗಳನ್ನು ಆಧರಿಸವೆ ಎಂದು ಎಫ್‌ಐಆರ್ ಸೂಚಿಸುತ್ತದೆ. 57 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿರುವ ಆರೋಪ ಇದ್ದರೂ ದೂರುದಾರರು ಯಾವ ಆಧಾರದ ಮೇಲೆ ಅಂಕಿ ಅಂಶಗಳನ್ನು ಬರೆದಿದ್ದಾರೆ ಎಂಬುದಕ್ಕೆ ದಾಖಲೆಗಳಿಲ್ಲ. 2013ರಲ್ಲಿ ಹಣ ಸಂಗ್ರಹಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಈ ವರೆಗೆ ಯಾವುದೇ ದೂರು ದಾಖಲಾಗಿಲ್ಲ. 9 ವರ್ಷಗಳ ನಂತರ ದಾಖಲಾಗಿರುವ ಒಂದು ದೂರು ಸಹ ಅಸ್ಪಷ್ಟವಾಗಿದೆ. ಇದರಲ್ಲಿ ನಿಖರ ಆಧಾರವಿಲ್ಲ ಎಂದು ಏಕಸದಸ್ಯದ ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ

    ಪ್ರಕರಣ ಕುರಿತ ತನಿಖೆಗೆ ಸಹಕರಿಸಬೇಕು. ಏ.18ರಿಂದ ನಾಲ್ಕು ದಿನಗಳ ಕಾಲ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂದು ಸೋಮಯ್ಯ ಅವರಿಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಏ.28ಕ್ಕೆ ಮುಂದೂಡಿದ್ದಾರೆ. ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಟ್ರಾಂಬೆ ಪೊಲೀಸರಿಗೆ ನಿರ್ದೇಶನ ನೀಡಿದೆ.

    ರಾಜ್ಯಸರ್ಕಾರದ ಪರ ಹಿರಿಯ ವಕೀಲ ಶಿರೀಶ್ ಗುಪ್ತೆ ಅವರು ಸೋಮಯ್ಯ ಅವರು ಜಾಮೀನಿಗೆ ಸಲ್ಲಿಸಿದ ಅರ್ಜಿಯನ್ನು ವಿರೋಧಿಸಿದ್ದಾರೆ. ತಂದೆ-ಮಗ ಇಬ್ಬರೂ ನಗರದಲ್ಲಿ ಇತರರೊಂದಿಗೆ ಹಲವಾರು ಕ್ಯಾಂಪೇನ್‌ಗಳನ್ನು ನಡೆಸಿದ್ದರಿಂದ ನಿಖರವಾದ ಮೊತ್ತ ಪತ್ತೆಹಚ್ಚಲು ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸುವುದು ಅವಶ್ಯವಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    KIRITH

    ಹಿನ್ನೆಲೆ ಏನು?
    ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಸಲುವಾಗಿ ಕಿರೀಟ್ ಸೋಮೈಯ ಅವರು 57 ಕೋಟಿ ಸಂಗ್ರಹಿಸಿದ್ದರು. ಈ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸೇನೆಯ ಮಾಜಿ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 6ರಂದು ದೂರು ದಾಖಲಿಸಿದ್ದರು. ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಸೋಮಯ್ಯ ಹಾಗೂ ಪುತ್ರನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 406 (ನಂಬಿಕೆಗೆ ವಂಚಿಸಿ ಅಪರಾಧ), 420 (ಆಸ್ತಿ ವಿತರಣೆ ವಂಚನೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

  • ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    ನವದೆಹಲಿ: ಐಎನ್‌ಎಸ್ ವಿಕ್ರಾಂತ್ ಉಳಿಸಲು ಕ್ರೌಡ್ ಫಂಡಿಂಗ್ ಅಭಿಯಾನಕ್ಕೆ ಸಂಬಂಧಿಸಿದಂತೆ ಶಿವಸೇನೆ ಹಾಗೂ ಬಿಜೆಪಿ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ಹೊತ್ತಿನಲ್ಲೇ ಐಎನ್‌ಎಸ್ ವಿಕ್ರಾಂತ್ ಹೆಸರಲ್ಲಿ ಸಂಗ್ರಹಿಸಿದ್ದ ದೇಣಿಗೆಯನ್ನು ದುರುಪಯೊಗ ಪಡಿಸಿಕೊಂಡ ಆರೋಪದ ಅಡಿಯಲ್ಲಿ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

    ಮಾಜಿ ಸೇನಾ ಸಿಬ್ಬಂದಿ ಬುಧವಾರ ಸಂಜೆ ಉಪನಗರ ಮನ್‌ಖುರ್ದ್ ನಲ್ಲಿರುವ ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ೫೭ ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗ ಮಾಡಿಕೊಂಡಿರುವುದಾಗಿ ಆರೋಪಿಸಿ, ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 406 (ನಂಬಿಕೆಗೆ ವಂಚಿಸಿ ಅಪರಾಧ), 420 (ಆಸ್ತಿ ವಿತರಣೆ ವಂಚನೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಟ್ರಾಂಬೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: XE ರೂಪಾಂತರಿ ಮುಂಬೈನಲ್ಲಿ ಪತ್ತೆಯಾಗಿಲ್ಲ: ಮಹಾರಾಷ್ಟ್ರ ಸ್ಪಷ್ಟನೆ

    SANJAY RAwath

    1961 ರಲ್ಲಿ ಕಾರ್ಯಾರಂಭ ಮಾಡಿದ ಭಾರತೀಯ ನೌಕಾಪಡೆಯ ಮೆಜೆಸ್ಟಿಕ್-ಕ್ಲಾಸ್ ವಿಮಾನವಾಹಕ ನೌಕೆ ಎಎನ್‌ಎಸ್ ವಿಕ್ರಾಂತ್, 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪೂರ್ವ ಪಾಕಿಸ್ತಾನದ ನೌಕಾ ದಿಗ್ಬಂಧನವನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದನ್ನು 1997ರಲ್ಲಿ ರದ್ದುಗೊಳಿಸಲಾಯಿತು. ಜನವರಿ 2014ರಲ್ಲಿ, ಹಡಗನ್ನು ಆನ್‌ಲೈನ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು ಮತ್ತು ಅದೇ ವರ್ಷದ ನವೆಂಬರ್‌ನಲ್ಲಿ ರದ್ದುಗೊಳಿಸಲಾಯಿತು. ಆದ್ದರಿಂದ INS ವಿಕ್ರಾಂತ್ ಗೆ ನಿಧಿ ಸಂಗ್ರಹಿಸಲು ಕಿರಿತ್ ಸೋಮಯ್ಯ ಅಭಿಯಾನ ಆರಂಭಿಸಿದ್ದರು ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

    ಹಡಗು ಉಳಿಸಲು ಕಿರಿತ್ ಸೋಮಯ್ಯ ಅವರಿಗೆ ದೇಣಿಗೆ ನೀಡಿದ್ದೇನೆ ಮತ್ತು ಬಿಜೆಪಿ ನಾಯಕರು ಇದೇ ಉದ್ದೇಶಕ್ಕಾಗಿ 57 ಕೋಟಿಗೂ ಹೆಚ್ಚು ಸಂಗ್ರಹಿಸಿದ್ದಾರೆ. ಆದರೆ, ಮೊತ್ತವನ್ನು ಮಹಾರಾಷ್ಟ್ರ ರಾಜಭವನಕ್ಕೆ ಠೇವಣಿ ಮಾಡದೇ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ ಪ್ರಕರಣ ಪತ್ತೆ

    ಈ ಆರೋಪವನ್ನು ತಳ್ಳಿಹಾಕಿದ ಕಿರಿತ್ ಸೋಮಯ್ಯ, ವಿಕ್ರಾಂತ್ ನಿಧಿ ಸಂಗ್ರಹದಲ್ಲಿ ಯಾವುದೇ ಹಗರಣ ನಡೆದಿಲ್ಲ, ನಾನು ಯಾವುದೇ ತಪ್ಪು ಮಾಡಿಲ್ಲ. ಸಂಜಯ್ ರಾವತ್ ಆರೋಪ ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಿಲ್ಲ. ಎಫ್‌ಐಆರ್ ಪ್ರತಿಯನ್ನೂ ನಾನು ಸ್ವೀಕರಿಸಿಲ್ಲ. ನಾನು ತನಿಖೆ ಎದುರಿಸಲು ಸಿದ್ಧನಿದ್ದೇನೆ. ರಾವತ್ ಅವರ ಬಳಿ ಸಾಕ್ಷ್ಯವಿದ್ದರೆ ಅದನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಹಸ್ತಾಂತರಿಸಲಿ ಎಂದು ತಿರುಗೇಟು ನೀಡಿದ್ದಾರೆ.

    ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ತನಿಖೆಗೆ ಒಳಪಟ್ಟಿರುವ ಸಂಜಯ್ ರಾವುತ್ ಅವರು ಬುಧವಾರ ಸೋಮಯ್ಯ ಅವರ ವಿರುದ್ಧ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಮಾಡಿದ್ದರು.