Tag: ವಿಕ್ರಾಂತ್ ರೋಣಾ

  • ವಿಕ್ರಾಂತ್ ರೋಣಾದಲ್ಲಿ ಜಾಕ್ವೆಲಿನ್ ಫಸ್ಟ್ ಲುಕ್ ರಿಲೀಸ್‍ಗೆ ದಿನಾಂಕ ನಿಗದಿ

    ವಿಕ್ರಾಂತ್ ರೋಣಾದಲ್ಲಿ ಜಾಕ್ವೆಲಿನ್ ಫಸ್ಟ್ ಲುಕ್ ರಿಲೀಸ್‍ಗೆ ದಿನಾಂಕ ನಿಗದಿ

    ಬೆಂಗಳೂರು: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ವಿಕ್ರಾಂತ್ ರೋಣಾ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ತಿಳಿದಿರುವ ವಿಚಾರ. ಸಿನಿಮಾದಲ್ಲಿ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲು ಚಿತ್ರತಂಡ ದಿನಾಂಕ ನಿಗದಿಪಡಿಸಿದೆ.

    ವಿಕ್ರಾಂತ್ ರೋಣಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಪಾತ್ರದ ಕುರಿತು ತಿಳಿಸಲಿದ್ದೇವೆ. ಈಗ ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜಾಕ್ವೆಲಿನ್ ಪಾತ್ರದ ಫಸ್ಟ್ ಲುಕ್‍ನ್ನು ಜುಲೈ 31ರಿಂದ ಜಿಆರ್ ಅನ್ನೋ ಹೆಸರು ಚಾಲ್ತಿಗೆ ಬರಲಿದೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

     ಜಾಕ್ವೆಲಿನ್ ಫರ್ನಾಂಡಿಸ್ ಅವರು ಮುಖ್ಯ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಅದನ್ನು ಘೋಷಿಸುವುದಕ್ಕೆ ಈಗ ದಿನಾಂಕ ನಿಗದಿಯಾಗಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ನಟ ಕಿಚ್ಚ ಸುದೀಪ್, ನಿರ್ದೇಶಕ ಅನೂಪ್ ಭಂಡಾರಿ ಅವರು ಜಾಕ್ವೆಲಿನ್ ಜೊತೆಗಿನ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ನೀವು ಕೆಟ್ಟವರಲ್ಲ, ಸಮಾಜ ಕೆಟ್ಟದ್ದು : ಜಾಕ್ವೆಲಿನ್ ಫರ್ನಾಂಡಿಸ್

    ಕನ್ನಡದ ಬಹುನಿರೀಕ್ಷೆಯ ವಿಕ್ರಾಂತ್ ರೋಣಾ ಚಿತ್ರದ ಚಿತ್ರೀಕರಣದ ಮುಕ್ತಾಯದ ಬೆನ್ನಲ್ಲೇ ಚಿತ್ರತಂಡ ಮುಂದಿನ ಕೆಲಸಗಳಲ್ಲಿ ತೊಡಗಿಕೊಂಡಿದೆ. ಇತ್ತೀಚೆಗಷ್ಟೇ ಬಾಲಿವುಡ್ ತಾರೆ ಜಾಕ್ವೆಲಿನ್ ಫರ್ನಾಂಡಿಸ್ ವಿಕ್ರಾಂತ್ ರೋಣಾ ತಂಡವನ್ನು ಸೇರಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಒಂದು ಹಾಡು ಮತ್ತು ಕೆಲವು ದೃಶ್ಯಗಳಲ್ಲಿ ಜಾಕ್ವೆಲಿನ್ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಚಿತ್ರತಂಡ ಹೇಳಿತ್ತು. ಜಾಕ್ವೆಲಿನ್ ಕಾಣಿಸಿಕೊಳ್ಳುತ್ತಿರುವ ಹಾಡಿಗೆ ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅದ್ಭುತವಾದ ಸೆಟ್ ಹಾಕಿದ್ದರು. 250 ಮಂದಿ ನೃತ್ಯ ಕಲಾವಿದರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಖ್ಯಾತ ಕೊರಿಯಾಗ್ರಾಫರ್ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ.

     

    View this post on Instagram

     

    A post shared by Anup Bhandari (@anupsbhandari)

    ವಿಕ್ರಾಂತ್ ರೋಣಾ 3ಡಿಯಲ್ಲಿ ಸಿದ್ಧವಾಗುತ್ತಿರುವ ಕನ್ನಡ ಸಿನಿಮಾವಾಗಿದ್ದು, 14 ಭಾಷೆಗಳಲ್ಲಿ 55 ದೇಶಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಈ ಸಿನಿಮಾಗೆ ವಿಲಿಯಂ ಡೇವಿಡ್ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ. ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಬಹು ತಾರಾಬಳಗ ಸಿನಿಮಾದಲ್ಲಿದೆ. ಈ ಸಿನಿಮಾದ ಶೇ. 90ರಷ್ಟು ಭಾಗ ಚಿತ್ರೀಕರಣ ಸೆಟ್‍ನಲ್ಲಿ ಆಗಿದೆ. ಜಾಕ್ವೆಲಿನ್ ನಟಿಸಿರುವ ದೃಶ್ಯ, ಹಾಡಿನ ಚಿತ್ರೀಕರಣಕ್ಕೆ ಮತ್ತು ಸಂಭಾವನೆ ಸೇರಿ 5 ಕೋಟಿ ರೂಪಾಯಿ ಖರ್ಚು ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.