Tag: ವಿಚಾರಣಾಧೀನ ಕೈದಿ

  • ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸ್ ವಶಕ್ಕೆ

    ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸ್ ವಶಕ್ಕೆ

    ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಪೊಲೀಸರು ತುಮಕೂರಿನಲ್ಲಿ(Tumakuru) ವಶಕ್ಕೆ ಪಡೆದಿದ್ದಾರೆ.

    ಕೈದಿ ಚಂದ್ರಶೇಖರ್ ವಿಕ್ಟೋರಿಯಾ ಟ್ರಾಮಾ ಸೆಂಟರ್‌ನಿಂದ ತಪ್ಪಿಸಿಕೊಂಡಿದ್ದ. ಕೈದಿ ಹುಡುಕಾಟದಲ್ಲಿದ್ದ ಪೊಲೀಸರಿಗೆ ಭಾನುವಾರ ರಾತ್ರಿ 8.20ರ ಸುಮಾರಿಗೆ ತುಮಕೂರು ಬಸ್ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: `ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

    ವಿವಿ ಪುರಂ ಹಾಗೂ ಜೈಲು ಪೊಲೀಸರು ಕೈದಿಯನ್ನು ಪತ್ತೆ ಹಚ್ಚಿದ್ದು, ಆತನನ್ನು ತುಮಕೂರಿನಿಂದ ಬೆಂಗಳೂರಿಗೆ ಕರೆತಂದರು. ಇದನ್ನೂ ಓದಿ: ಮನೆಗೆ ತಡವಾಗಿ ಬರ್ತಿದ್ದಕ್ಕೆ ಪೋಷಕರಿಂದ ಬುದ್ಧಿವಾದ – ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

    ಘಟನೆ ಸಂಬಂಧ ವಿವಿ ಪುರಂ ಠಾಣೆಯಲ್ಲಿ(VV Puram Police Station) ಕೇಸ್ ದಾಖಲಾಗಿತ್ತು. ಸದ್ಯ ಕೈದಿ ಚಂದ್ರಶೇಖರ್‌ನನ್ನು ವಿವಿ ಪುರಂ ಠಾಣೆಯಲ್ಲಿರಿಸಲಾಗಿದೆ.

  • ವಿಚಾರಣಾಧೀನ ಕೈದಿಯ ಮಗುವಿಗೆ ಜೈಲಿನಲ್ಲೇ ನಾಮಕರಣ ಮಾಡಿದ ಹಾವೇರಿ ಜಿಲ್ಲಾಧಿಕಾರಿ!

    ವಿಚಾರಣಾಧೀನ ಕೈದಿಯ ಮಗುವಿಗೆ ಜೈಲಿನಲ್ಲೇ ನಾಮಕರಣ ಮಾಡಿದ ಹಾವೇರಿ ಜಿಲ್ಲಾಧಿಕಾರಿ!

    ಹಾವೇರಿ: ವಿಚಾರಣಾಧೀನ ಕೈದಿಯೋರ್ವರಿಗೆ ಜನಿಸಿದ ನವಜಾತ ಶಿಶುವಿಗೆ ಜಿಲ್ಲಾಧಿಕಾರಿ ಕೇಂದ್ರ ಕಾರಾಗೃಹದಲ್ಲಿ ನಾಮಕರಣ ಮಾಡಿದ ಅಪರೂಪದ ಕಾರ್ಯಕ್ರಮ ಜರುಗಿತು.

    ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವ್ಹಿ.ವೆಂಕಟೇಶ್ ಮಗುವನ್ನ ತೊಟ್ಟಿನಲ್ಲಿ ಹಾಕಿ ಶಿಶುವಿಗೆ ಹರ್ಷಿತಾ ಎಂದು ನಾಮಕರಣ ಮಾಡಿದ್ರು. ಕಳ್ಳತನ ಪ್ರಕರಣ ಒಂದರಲ್ಲಿ ಜಿಲ್ಲಾ ಕಾರಾಗೃಹದಲ್ಲಿ, ಕೈದಿಯಾಗಿರುವ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಹಾಲಿಂಗಪೂರ ಮೂಲದ 26 ವರ್ಷದ ಮಹಿಳೆ, ಕಳೆದ ಜನವರಿ 4 ರಂದು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.

    19 ದಿನಗಳ ಈ ನವಜಾತ ಶಿಶುವಿಗೆ ಮಹಿಳಾ ಕೈದಿಗಳ ಸೆಲ್‍ನಲ್ಲಿ ಕಾರಾಗೃಹದ ಸಿಬ್ಬಂದಿ ನಾಮಕರಣ ಕಾರ್ಯಕ್ರಮ ಆಯೋಜನೆ ಮಾಡಿದ್ರು. ಜೈಲಿನ ಮಹಿಳಾ ಅಧಿಕಾರಿಗಳು ಒಳಗೊಂಡಂತೆ 11 ಜನ ಮಹಿಳಾ ಕೈದಿಗಳು ಹೆಣ್ಣು ಮಗುವಿನ ತಾಯಿಯ ಸಂಪ್ರದಾಯದಂತೆ ತೊಟ್ಟಿಲು ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ತೊಟ್ಟಿಲು ಅಲಂಕಾರ, ಜೈಲು ಮಹಿಳಾ ಸೆಲ್‍ನ ಅಲಂಕಾರ ಮನೆಯ ವಾತಾವರಣದಂತೆ ಕಂಗೊಳಿಸಿ ಎಲ್ಲರ ಗಮನಸೆಳೆಯಿತು.

    ಕಂಕಣ ಧರಿಸಿದ ಜಿಲ್ಲಾಧಿಕಾರಿಗಳು ಅಲಂಕರಿಸಿದ ತೊಟ್ಟಿನಲ್ಲಿ ನವಜಾತ ಶಿಶುವನ್ನು ಮಲಗಿಸಿ ನೂಲು ಹಿಡಿದು ಕಿವಿಯಲ್ಲಿ ಮೂರುಭಾರಿ ಹರ್ಷಿತಾ, ಹರ್ಷಿತಾ, ಹರ್ಷಿತಾ.. ಎಂದು ಕರೆಯುವುದರ ಮೂಲಕ ಕೈದಿಯ ಮಗಳಿಗೆ ನಾಮಕರಣಮಾಡಿದ ಅಪರೂಪದ ಪ್ರಸಂಗ ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳು ಅಪರೂಪದ ಕಾರ್ಯಕ್ರಮದಲ್ಲಿ ಭಾಗವಹಿಸಿ ಖುಷಿ ವ್ಯಕ್ತಪಡಿಸಿದ್ರು.