Tag: ವಿಜಯಪುರ

  • ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ

    ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ

    ವಿಜಯಪುರ: ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ (Micro Finance) ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.ಇದನ್ನೂ ಓದಿ: ಅತ್ತೆಯ ಕೊಲೆಗೆ ವೈದ್ಯರ ಬಳಿ ಮಾತ್ರೆ ಕೇಳಿದ್ದ ಸೊಸೆ ಕೊನೆಗೂ ಪತ್ತೆ

    ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಕೂಡ ಹೆಚ್ಚಾಗಿದೆ. ಹೀಗಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಬೆಳ್ಳಂಬೆಳಿಗ್ಗೆ ಮನೆಗಳ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

    ಜಿಲ್ಲೆಯ ಹಲವೆಡೆ ಪೋಲಿಸರು ದಾಳಿ ನಡೆಸಿದ್ದು, ದಾಳಿ ಮಾಡಿ ಅಕ್ರಮ ಹಣ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬಡ ಜನರು ಬೇಸತ್ತು ಹೋಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ:Champions Trophy 2025 | ಇಂದು ಭಾರತ-ಬಾಂಗ್ಲಾ ಮುಖಾಮುಖಿ – ಹಿಟ್‌ಮ್ಯಾನ್‌ ಪಡೆಗೆ ಗೆಲುವಿನ ತವಕ

     

  • ಕ್ರಿಕೆಟ್ ಆಡುವಾಗ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ

    ಕ್ರಿಕೆಟ್ ಆಡುವಾಗ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ

    – ಹಾಡು ಹೇಳು, ಡ್ಯಾನ್ಸ್ ಮಾಡು.. 4 ವರ್ಷ ಇಲ್ಲೇ ಇರ್ತೀಯಾ ಹುಷಾರ್ ಅಂತ ಧಮ್ಕಿ

    ವಿಜಯಪುರ: ನಗರದ ಅಥಣಿ ರಸ್ತೆಯ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆದಿರುವ ಆರೋಪ ಕೇಳಿ ಬಂದಿದೆ.

    ಮಂಗಳವಾರ ಸಂಜೆ ಕ್ರಿಕೆಟ್ ಆಟದ ವೇಳೆ ರ‍್ಯಾಗಿಂಗ್ ನಡೆದಿದೆ ಎನ್ನಲಾಗಿದೆ. 2022 ರ ಬ್ಯಾಚ್‌ನ ಜಮ್ಮು-ಕಾಶ್ಮೀರದ ಹಮೀಮ್ ಎಂಬ ಎಂಬಿಬಿಎಸ್ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿದ ಆರೋಪ ಕೇಳಿಬಂದಿದೆ. ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ವಿದ್ಯಾರ್ಥಿ ಇವನಾಗಿದ್ದು, 2019 ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ಆಗಿದೆ ಎಂದು ಆರೋಪಿಸಲಾಗಿದೆ.

    ರ‍್ಯಾಗಿಂಗ್ ಬಗ್ಗೆ ಹಮೀಮ್ ಪರಿಚಯದ ವ್ಯಕ್ತಿ ನಾಸಿರ್ ಹುಸೇನಿ ಟ್ವೀಟ್ ಮಾಡಿದ್ದಾನೆ. ನಿನ್ನೆ ಸಂಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ಕ್ರಿಕೆಟ್ ನಡೆದಿತ್ತು. ಹಮೀಮ್ 2012 ರ ಬ್ಯಾಚ್‌ನ ಕ್ಯಾಪ್ಟನ್ ಆಗಿದ್ದ. ಮ್ಯಾಚ್ ವೇಳೆ ಹಿರಿಯ ವಿದ್ಯಾರ್ಥಿಗಳ ಜೊತೆ ಗಲಾಟೆ ಆಯ್ತು. ಇದಾದ ಬಳಿಕ ಸಂಜೆ ಹಾಸ್ಟೆಲ್‌ಗೆ ತೆರಳಿ ಆತನೊಂದಿಗೆ ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ನಡೆದಿದೆ ಎಂದು ಆರೋಪಿಸಿದ್ದಾನೆ.

    ಹಾಡು ಹಾಡಲು, ಡ್ಯಾನ್ಸ್ ಮಾಡುವಂತೆ ರ‍್ಯಾಗಿಂಗ್ ಮಾಡಿದ್ದಾರೆ. ಬಳಿಕ ಇನ್ನೂ ನಾಲ್ಕು ವರ್ಷ ಇಲ್ಲೇ ಇರ್ತಿಯಾ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆಂದು ಆರೋಪಿಸಿದ್ದಾನೆ. ಈ ಬಗ್ಗೆ ನಾಸಿರ್ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ವೀಟ್ ಮಾಡಿದ್ದಾನೆ.

  • 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ

    422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ

    ವಿಜಯಪುರ: 422 ವಸ್ತುಗಳನ್ನು ಗುರುತಿಸುವ ಮೂಲಕ ವಿಜಯಪುರದಲ್ಲಿ (Vijayapura) 9 ತಿಂಗಳ ಪುಟ್ಟ ಮಗು ನೊಬೆಲ್ ವರ್ಲ್ಡ್ ರೆಕಾರ್ಡ್ ಬರೆದಿದ್ದಾಳೆ.

    ಹೌದು, ಈ ಮಗುವಿನ ಹೆಸರು ಐರಾ ಕತ್ತಿ, ಬರೋಬ್ಬರಿ 422 ವಸ್ತುಗಳನ್ನು ಗುರುತಿಸುವ ಮೂಲಕ ಅವಿಸ್ಮರಣೀಯ ಸಾಧನೆ ಮಾಡುವ ಮೂಲಕ ನೊಬೆಲ್ ವರ್ಲ್ಡ್ ರೆಕಾರ್ಡ್ನಲ್ಲಿ ತನ್ನ ಹೆಸರು ಬರೆದಿದ್ದಾಳೆ. ಈ ಪುಟ್ಟ ಮಗುವಿನ ಅಮೋಘ ಸಾಧನೆ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ. ಅಂಬೆಗಾಲಿಟ್ಟು ನಡೆಯುವ ವಯಸ್ಸಿಗೆ ತನಗೆ ಗೊತ್ತಿಲ್ಲದಂತೆಯೇ ವರ್ಲ್ಡ್ ರೆಕಾರ್ಡ್ ಪುಟ ಸೇರಿ ಸಾಧನೆ ಮಾಡಿದ್ದಾಳೆ.ಇದನ್ನೂ ಓದಿ: Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

    ನಗರದ ದೀಪಕ್ ಕತ್ತಿ ಹಾಗೂ ಅನುಷಾ ಕತ್ತಿ ದಂಪತಿಯ ಮಗಳು ಐರಾ. ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಅತೀ ಹೆಚ್ಚು ವಸ್ತುಗಳನ್ನು ಗುರುತಿಸಿದ ಅತೀ ಕಿರಿಯ ವಯಸ್ಸಿನ ಮಗು ಎನ್ನುವ ಗೌರವಕ್ಕೆ ಪಾತ್ರಳಾಗಿದ್ದು, ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ ಕೂಡ ಮಗುವನ್ನು ಕರೆದು ಆಕೆಯ ಸಾಧನೆಯನ್ನು ಮೆಚ್ಚಿ ಗೌರವಿಸಿದ್ದಾರೆ.

    ಐರಾ ಫ್ಲ್ಯಾಶ್ ಕಾರ್ಡ್ ಬಳಸಿ ವಿಭಿನ್ನ ಪ್ರಕಾರದ 422 ವಸ್ತುಗಳನ್ನು ಗುರುತಿಸಿದ್ದಾಳೆ. ಹಣ್ಣುಗಳು 24, ಕಾಡು ಪ್ರಾಣಿಗಳು 24, ದೇಹದ ಭಾಗಗಳು 24, ತರಕಾರಿ ಸೇರಿದಂತೆ ಹೀಗೆ 422 ವಸ್ತುಗಳನ್ನು ಗುರುತಿಸಿ ಸಾಧನೆ ಮಾಡಿದ್ದಾಳೆ. ಒಂಬತ್ತು ತಿಂಗಳು ಪುಟ್ಟ ಮಗು ಅದ್ಭುತ ಸಾಧನೆಗೆ ಅವಳ ಆಲೋಚನಾ ಶಕ್ತಿ, ಜ್ಞಾಪಕ ಶಕ್ತಿ ಅತ್ಯುತ್ತಮ ಕಲಿಕಾ ಸಾಮರ್ಥ್ಯ ತೋರಿಸುತ್ತದೆ. ಚಿಕ್ಕ ವಯಸ್ಸಿನಲ್ಲಿ ಮಗುವಿನ ಸಮರ್ಥವಾಗಿ ಪಾಲನೆ, ಕಲಿಕೆ ಮಾರ್ಗದರ್ಶನ ನೀಡಿದಾಗ ಇಂತಹ ಆಕರ್ಷಕ ಸಾಧನೆ ಮಾಡಲು ಐರಾ ಸಾಕ್ಷಿಯಾಗಿದ್ದಾಳೆ. ತಾಯಿ ಅನುಷಾ ಐರಾಳ ಸಾಧನೆಗೆ ಪ್ರೇರಣೆಯಾಗಿದ್ದು, ತಂದೆ ದೀಪಿಕ್ ಮಾರ್ಗದರ್ಶನ ಬೆಂಬಲ ಕಾರಣವಾಗಿದೆ. ಮಗಳ ಸಾಧನೆಗೆ ಪೋಷಕರು ಫುಲ್ ಖುಷಿಯಾಗಿ ಸಂತಸ ಹಂಚಿಕೊಂಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಕೂಡಿಸುತ್ತಾರೆ. ಇದರಿಂದ ಮಗುವಿನ ಬೌದ್ಧಿಕ ಬೆಳವಣಿಗೆ ಕೂಡಾ ಕುಂಠಿತ ಮಾಡುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆಯಂತೆ ಈ ಪುಟ್ಟ ಕಂದ ಐರಾಳ ಸಾಧನೆ ನಿಜಕ್ಕೂ ಶ್ಲಾಘನೀಯವೇ ಸರಿ. ಇನ್ನೂ ಮಗಳ ಈ ಸಾಧನೆಗೆ ಪೋಷಕರ ಪಾತ್ರ ಕೂಡಾ ಹೆಚ್ಚಾಗಿದೆ.ಇದನ್ನೂ ಓದಿ: ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

     

  • ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹತ್ಯೆ

    ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹತ್ಯೆ

    ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ನಟೋರಿಯಸ್ ಹಂತಕ ಬಾಗಪ್ಪನ ಬರ್ಬರವಾಗಿ ಹತ್ಯೆಯಾಗಿದೆ. ಕೊಡಲಿಯಿಂದ ಬಾಗಪ್ಪನ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹತ್ಯೆ ಮಾಡಿದ್ದಾರೆ.

    ಗುಂಡು ಸದ್ದು ಕೂಡ ಸ್ಥಳೀಯರಿಗೆ ಕೇಳಿಸಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಮದೀನಾ ನಗರದಲ್ಲಿ ಬಾಡಿಗೆಗೆ ಬಾಗಪ್ಪ ವಾಸವಿದ್ದ. ರಾತ್ರಿ 9:30 ರ ಸುಮಾರಿಗೆ ಆಟೋದಲ್ಲಿ ನಾಲ್ಕೈದು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.

    ಊಟ ಮಾಡಿ ಮನೆ ಎದುರು ಬಾಗಪ್ಪ ವಾಕಿಂಗ್ ಮಾಡ್ತಿದ್ದ ವೇಳೆ ಹತ್ಯೆಯಾಗಿದೆ. ಊಟ ಮಾಡಿಕೊಂಡು ಮನೆ ಎದುರು ಅಡ್ಡಾಡುತ್ತಿದ್ದ ವೇಳೆ ಮಾರಕಾಸ್ತ್ರ ಹಾಗೂ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

    ಎಷ್ಟು ಜನರು ಬಂದಿದ್ದರು ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಮನೆಯವರು ನೀಡಿದ ಮಾಹಿತಿ ಆಧರಿಸಿ ಹೇಳ್ತಿದ್ದೇನೆ. ಕರೆಂಟ್ ಕಟ್ ಮಾಡಿ ಹತ್ಯೆ ಮಾಡಿದ್ದ ಬಗ್ಗೆ ಮಾಹಿತಿ ಇಲ್ಲ. ಸಂಬಂಧಿಕರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.

    ಬಾಗಪ್ಪ ಮೇಲೆ 10 ಕೇಸ್‌ಗಳಿವೆ. ಈ ಪೈಕಿ 6 ಮರ್ಡರ್ ಕೇಸ್ ಇವೆ. 1993 ರಿಂದ ಬಾಗಪ್ಪನ ಕ್ರಿಮಿನಲ್ ಹಿಸ್ಟರಿ ಶುರುವಾಗಿದೆ. 2016-17ರಲ್ಲಿ ಬಾಗಪ್ಪನ ಮೇಲೆ ಸೆಕ್ಯೂರಿಟಿ ಕೇಸ್ ಹಾಕಲಾಗಿತ್ತು. ಸದ್ಯ ಎಲ್ಲ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ಟೀಂ ತಂಡವಾಗಿ ಕೆಲಸ ಮಾಡ್ತಿದೆ ಎಂದು ತಿಳಿಸಿದ್ದಾರೆ.

  • ಸುಳ್ಳು ಹೇಳಿ ಜನರ ಮನಸ್ಸು ಕದ್ದಿದ್ದ ದ್ರೋಹಿಗೆ ಸೋಲಾಗಿದೆ: ಕಾರಜೋಳ

    ಸುಳ್ಳು ಹೇಳಿ ಜನರ ಮನಸ್ಸು ಕದ್ದಿದ್ದ ದ್ರೋಹಿಗೆ ಸೋಲಾಗಿದೆ: ಕಾರಜೋಳ

    ವಿಜಯಪುರ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಪಕ್ಷಕ್ಕೆ ಹಾಗೂ ಪ್ರಧಾನಿ ಮೋದಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ (Govind Karjol) ಹೇಳಿದರು.

    ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ದೆಹಲಿಯ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ಬಹುಮತ ಸಾಧಿಸಿದೆ. ನಾನು ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿ ಅವರ ನಾಯಕತ್ವದಲ್ಲಿ 11 ವರ್ಷಗಳ ಆಡಳಿತ ಅತ್ಯುತ್ತಮವಾಗಿದೆ. ಇದಕ್ಕೆ ಶನಿವಾರ ಹೊರಬಂದಿರುವ ದೆಹಲಿ ಫಲಿತಾಂಶ ಸಾಕ್ಷಿಯಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಕಾಮುಕನಿಗೆ 20 ವರ್ಷ ಕಠಿಣ ಜೈಲು

    ಕೇಜ್ರಿವಾಲ್ ಆಮ್ ಆದ್ಮಿ ಮೂಲಕ ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದರು. ಸುಳ್ಳು ಹೇಳಿ ಜನರ ಮನಸ್ಸು ಕದ್ದಿದ್ದ ಮಹಾನ್ ದ್ರೋಹಿ ಅವನು. ಸ್ವಾತಂತ್ರö್ಯ ನಂತರ ಇಡೀ ದೇಶದಲ್ಲೇ ಯಾರೂ ಮಾಡದಷ್ಟು ಭ್ರಷ್ಟಾಚಾರವನ್ನು ಅರವಿಂದ್ ಕೇಜ್ರಿವಾಲ್ ಮಾಡಿದ್ದಾನೆ. ವ್ಯವಸ್ಥಿತವಾಗಿ, ಪಾರದರ್ಶಕವಾಗಿ ಬಂದ ವ್ಯವಸ್ಥೆಯನ್ನು ಹಾಳು ಮಾಡಿ, ದುರಾಡಳಿತ ಮಾಡಿದವನು ಎಂದು ಕಿಡಿಕಾರಿದರು.

    ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದರೂ ರಾಜೀನಾಮೆ ಕೊಡಲಿಲ್ಲ. ಅವನು ಸಂವಿಧಾನ ದ್ರೋಹಿ, ಜನರು ಅವನಿಗೆ ತಕ್ಕ ಪಾಠ ಕಲಿಸಿದ್ದಾರೆ. ದೆಹಲಿ ಕೇಂದ್ರಾಡಳಿತ ಪ್ರದೇಶ ಇದೆ. ಅದು ಹೆಚ್ಚಿನ ಮಧ್ಯಮ ವರ್ಗದವರು ಇರುವ ಊರು, ಅದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಹೆಚ್ಚು ಟ್ಯಾಕ್ಸ್ ಬರುವ ಪ್ರದೇಶದಲ್ಲಿ ಹೆಚ್ಚು ಅಭಿವೃದ್ಧಿ ಮಾಡಬೇಕಿತ್ತು. ಆದರೆ ಅಲ್ಲಿ ಓಡಾಡಲು ಆಗದ ಸ್ಥಿತಿ ಇದೆ. ದೇಶಕ್ಕೆ ಕೆಟ್ಟ ಪರಿಸ್ಥಿತಿ ತಂದಿದ್ದಾರೆ. ಕೇಜ್ರಿವಾಲ್ ಮತ್ತು ಕಾಂಗ್ರೆಸ್ ಅವರಿಗೆ ಪುಕ್ಕಟೆ ಕೊಟ್ಟು ಗೆಲ್ಲುವುದು ಒಂದು ಕೆಟ್ಟ ಸಂಪ್ರದಾಯವಾಗಿದೆ, ಇದಕ್ಕೆ ಇತಿಶ್ರೀ ಹಾಕಬೇಕಿತ್ತು ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಶಾರ್ಟ್‌ಕಟ್‌ ರಾಜಕೀಯಕ್ಕೆ ಜನರು ಶಾರ್ಟ್ ಸರ್ಕ್ಯೂಟ್ ನೀಡಿದ್ದಾರೆ – ಇದು ವಿಕಾಸದ ಗೆಲುವು ಎಂದ ಮೋದಿ

  • ವಿಜಯಪುರ | ಮುಸುಧಾರಿಗಳ ಖತರ್ನಾಕ್ ಗ್ಯಾಂಗ್ ಅರೆಸ್ಟ್

    ವಿಜಯಪುರ | ಮುಸುಧಾರಿಗಳ ಖತರ್ನಾಕ್ ಗ್ಯಾಂಗ್ ಅರೆಸ್ಟ್

    ವಿಜಯಪುರ: ಜಿಲ್ಲೆಯಲ್ಲಿ ಇತ್ತೀಚಿಗಷ್ಟೇ ಹಲ್ಲೆ ನಡೆಸಿದ್ದ ಖತರ್ನಾಕ್ ಮುಸುಧಾರಿಗಳ ಗ್ಯಾಂಗ್‌ನ್ನು ವಿಜಯಪುರದ (Vijayapura) ಗಾಂಧಿ ಚೌಕ ಪೊಲೀಸರು ಬಂಧಿಸಿದ್ದಾರೆ.

    ಬಂಧಿಸಿದ ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಜತ್‌ನ ಪಾರ್ದಿ ಗ್ಯಾಂಗ್‌ನ ವಿಠ್ಠಲ ಚೌಹಾಣ, ಸುರೇಶ್ ಚೌಹಾಣ, ಆಕಾಶ್ ರಾವತ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಕುರಿತ ದೇವೇಗೌಡರ ಹೇಳಿಕೆ ಸರಿಯಾಗಿದೆ: ಛಲವಾದಿ ನಾರಾಯಣಸ್ವಾಮಿ

    ವಿಜಯಪುರ ನಗರದ ಜೈನಾಪೂರ ಲೇಔಟ್, ರಾಜಕುಮಾರ್ ಲೇಔಟ್ ಸೇರಿದಂತೆ ನಗರದಲ್ಲಿ ಕೆಲವು ದಿನಗಳಿಂದ ಮುಸುಕುಧಾರಿಗಳ ಹಾವಳಿ ಹೆಚ್ಚಾಗಿತ್ತು. ಇತ್ತೀಚಿಗಷ್ಟೇ ಜೈನಾಪೂರ ಲೇಔಟ್‌ನಲ್ಲಿ ಮನೆ ದರೋಡೆ ಮಾಡಿ, ಐವರು ಮುಸುಕುಧಾರಿಗಳು ಸಂತೋಷ ಎಂಬುವವರಿಗೆ ಚಾಕು ಇರಿದು ಮೊದಲ ಮಹಡಿಯಿಂದ ಕೆಳಗೆ ಬಿಸಾಕಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಸಂತೋಷ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

    ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿ, ಐವರ ಪೈಕಿ ಮೂವರನ್ನ ವಶಕ್ಕೆ ಪಡೆದಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

    ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್: ವಿಜಯೇಂದ್ರ

  • ವಿಜಯಪುರ | ಮುಸುಕುಧಾರಿ ಗ್ಯಾಂಗ್ ದಾಳಿಗೆ ವ್ಯಕ್ತಿ ಬಲಿ

    ವಿಜಯಪುರ | ಮುಸುಕುಧಾರಿ ಗ್ಯಾಂಗ್ ದಾಳಿಗೆ ವ್ಯಕ್ತಿ ಬಲಿ

    ವಿಜಯಪುರ: ಮುಸುಕುಧಾರಿ ಗ್ಯಾಂಗ್ ದಾಳಿಯಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.

    ಸಾವಿಗೀಡಾದ ವ್ಯಕ್ತಿಯನ್ನು ನಗರದ ಜೈನಾಪುರ ಲೇಔಟ್‌ನ ಸಂತೋಷ್ ಕನ್ನಾಳ ಎಂದ ಗುರಿತಿಸಲಾಗಿದೆ. ಜ.16 ರಂದು ಸಂತೋಷ್‌ ಮನೆಗೆ ದರೋಡೆಕೋರರು ನುಗ್ಗಿದ್ದರು.‌ ಈ ವೇಳೆ ದರೋಡೆಕೊರರೊಂದಿಗೆ ಸಂತೋಷ್‌ ಹೋರಾಡಿದ್ದರು. ಈ ವೇಳೆ ದರೋಡೆಕೋರರು ಚಾಕುವಿನಿಂದ ಅವರ ಎದೆ ಹಾಗೂ ಬೆನ್ನಿಗೆ ಇರಿದು ಮೊದಲನೇ ಮಹಡಿ ಮೇಲಿಂದ ಕೆಳಗೆ ಎಸೆದಿದ್ದರು. ‌

    ಹಲ್ಲೆಯ ಬಳಿಕ ಪತ್ನಿ ಭಾಗ್ಯಜ್ಯೋತಿ ಕೊರಳಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ನಂತರ ಸಂತೋಷ್‌ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿಸಿತ್ತು. ಅವರ ಕಿಡ್ನಿಗೆ ಸೊಂಕು ತಗುಲಿದ ಹಿನ್ನೆಲೆ ಚಿಕತ್ಸೆಗಾಗಿ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಗಾಗಿ ಸುಮಾರು 20 ಲಕ್ಷ ರೂ. ಖರ್ಚು ಮಾಡಿದ್ರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

  • ವಿಜಯೇಂದ್ರನ ಕರ್ಮಕಾಂಡದ ಬಗ್ಗೆ ವಿವರಿಸಲು ದೆಹಲಿಗೆ ಹೊರಟಿದ್ದೇವೆ – ಯತ್ನಾಳ್ ಲೇವಡಿ

    ವಿಜಯೇಂದ್ರನ ಕರ್ಮಕಾಂಡದ ಬಗ್ಗೆ ವಿವರಿಸಲು ದೆಹಲಿಗೆ ಹೊರಟಿದ್ದೇವೆ – ಯತ್ನಾಳ್ ಲೇವಡಿ

    ವಿಜಯಪುರ: ಯಡಿಯೂರಪ್ಪ ಮಗನ ಕರ್ಮಕಾಂಡ ವಿವರಿಸಲು ಮಂಗಳವಾರ ಮಧ್ಯಾಹ್ನ ದೆಹಲಿಗೆ ಹೊರಟಿದ್ದೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ತಟಸ್ಥರಿದ್ದವರು ಇದೀಗ ನಮ್ಮ ನಿಷ್ಠಾವಂತರ ಗುಂಪು ಸೇರಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲು ಹೊರಟಿದ್ದೇವೆ. ವಂಶಪಾರಂಪರಿಕ, ಕುಟುಂಬಶಾಹಿ ವಿರುದ್ಧ ನಮ್ಮ ಹೋರಾಟ ಇದೆ. ಯಡ್ಡಿಯೂರಪ್ಪ ಅವರ ಮಗನ ಕರ್ಮಕಾಂಡದ ಬಗ್ಗೆ ವಿವರಿಸಲು ಹೊರಟಿದ್ದೇವೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಈ ವರ್ಷ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕ ಇಲ್ಲ: ಮಧು ಬಂಗಾರಪ್ಪ ಘೋಷಣೆ

    ಇನ್ನೂ ಕುಟುಂಬಶಾಹಿ ರಾಜಕಾರಣ ಬಿಜೆಪಿಯಲ್ಲಿ ಕೊನೆಗೊಳ್ಳಬೇಕು. ಭ್ರಷ್ಟಾಚಾರ ಕುಟುಂಬ ಈ ರಾಜ್ಯದಿಂದ ತೊಲಗಬೇಕು. ಹಿಂದುತ್ವದ ಪರ ಇರುವ ನಾಯಕತ್ವ ಬರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಯಾರು ಕೂಡ ಹಿಂದೂತ್ವದ ರಕ್ಷಣೆ ಮಾಡಲಿಲ್ಲ. ಹಿಂದೂಗಳ ಕೊಲೆಯಾದರೂ ಯಾರು ಕೇಳಲಿಲ್ಲ. ಕೇವಲ ಕಠಿಣ ಕ್ರಮ ಅನ್ನೋದನ್ನು ಬಿಟ್ಟರೆ ಏನು ಮಾಡಲಿಲ್ಲ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಹೀನಾಯ ಪರಿಸ್ಥಿತಿ ತಲುಪಿದೆ. ಅದಕ್ಕೆ ಕಾರಣ ಹಿಂದುತ್ವ ಕೈಬಿಟ್ಟು ರಾಜಕಾರಣ ಮಾಡಿದ್ದು. ನಮ್ಮ ಟೀಂ ಈಗ ಬಹಳ ದೊಡ್ಡದಾಗಿದೆ. ತಟಸ್ಥ ಎಂದು ಎರಡು ಕಡೆ ಆಟ ಆಡುತ್ತಿದ್ದರು. ಈಗ ಅವರಿಗೂ ಗೊತ್ತಾಗಿದೆ. ಅವರೆಲ್ಲ ನಿಷ್ಠಾವಂತರಾಗಿದ್ದಾರೆ ಎಂದರು.

    ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನಾಗಿ ಮುಂದುವರೆಸಿದ್ರೆ ಕರ್ನಾಟಕದಲ್ಲಿ ಹೀನಾಯ ಸ್ಥಿತಿ ಬರುತ್ತದೆ. ಮೊನ್ನೆ ವಿಜಯೇಂದ್ರನಿಗೆ ಬಗ್ಗೆ ಹೀನಾಯವಾಗಿ ಬೈದರೂ ಉತ್ತರ ಕೊಡಲಿಲ್ಲ. ಯಡ್ಡಿಯೂರಪ್ಪನಿಗೆ ಮತ್ತು ಮಗನಿಗೆ ಡಿಕೆಶಿ ಭಯಪಡಿಸಿಬಿಟ್ಟಿದ್ದಾರೆ. ನೀವೇನಾದರೂ ನಮ್ಮ ಹಗರಣ ಹೊರತೆಗೆದರೆ ನಿಮ್ಮ ಪೋಕ್ಸೋ ಕೇಸ್ ಇದೆ, ನಕಲಿ ಸಹಿ ಮಾಡಿದಿಯಾ, ಅವನೆಲ್ಲ ಹೊರತೆಗೆಯುತ್ತೇವೆ ಅಂತಾ ಹೆದರಿಸಿದ್ದಾರೆ. ಇಂತಹವರು ಬೇಕಾ ಅಂತಾ ನಾವು ಹೈಕಮಾಂಡ್‌ಗೆ ಕೇಳುತ್ತಿದ್ದೇವೆ ಎಂದರು.ಇದನ್ನೂ ಓದಿ: ಮಂಡ್ಯ | ವಿಸಿ ನಾಲೆಗೆ ಕಾರು ಪಲ್ಟಿ – ಓರ್ವ ಸಾವು, ಇಬ್ಬರು ನಾಪತ್ತೆ

     

  • ಕರ್ನಾಟಕದಲ್ಲಿ ರಾಜಕಾರಣ ಗಬ್ಬೆದ್ದು ಹೋಗಿದೆ: ಕೆ.ಎಸ್ ಈಶ್ವರಪ್ಪ

    ಕರ್ನಾಟಕದಲ್ಲಿ ರಾಜಕಾರಣ ಗಬ್ಬೆದ್ದು ಹೋಗಿದೆ: ಕೆ.ಎಸ್ ಈಶ್ವರಪ್ಪ

    ವಿಜಯಪುರ: ಕರ್ನಾಟಕದಲ್ಲಿ ರಾಜಕಾರಣ ಗಬ್ಬೆದ್ದು ಹೋಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (KS Eshwarappa) ಅಸಮಾಧಾನ ವ್ಯಕ್ತಪಡಿಸಿದರು.

    ವಿಜಯಪುರದಲ್ಲಿ (Vijayapura) ಮಾಧ್ಯಮಗಳೊಂದಿಗೆ ಮಾತನಾಡಿ, ಆ ಪಕ್ಷ ಈ ಪಕ್ಷ ಅಲ್ಲ, ಎಲ್ಲ ಪಕ್ಷಗಳು ಇದೆ ರೀತಿ ಆಗಿದೆ. ಎಲ್ಲ ಕಡೆ ಗುಂಪುಗಾರಿಕೆ ನಡೆದಿದೆ. ಹೈಕಮಾಂಡ್ ಏನು ಮಾಡುತ್ತಿದೆ ಗೊತ್ತಿಲ್ಲ. ಬಿಜೆಪಿ ಏನು ಮಾಡುತ್ತಿದೆ. ಹಿಂದುತ್ವದ ಅಡಿಯಲ್ಲಿ ಸಾಗಿತ್ತು. ಆದರೆ ಈಗ ಎಲ್ಲ ಜಾತಿ ಮೇಲೆ ನಡೆದಿದೆ. ಬಿಜೆಪಿ ಕಟ್ಟಿದ ಹಿರಿಯ ನಾಯಕರು ಈಗ ಸೈಡ್ ಲೈನ್ ಆಗಿದ್ದಾರೆ ಎಂದು ದೂರಿದರು.ಇದನ್ನೂ ಓದಿ: ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ವಂಚನೆ – 57 ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ಅಂದರ್

    ಕಾಂಗ್ರೆಸ್‌ನಲ್ಲಿ ಕೂಡ ಗುಂಪುಗಾರಿಕೆ ಇದೆ. ಒಂದು ಕಡೆ ಸಿದ್ದರಾಮಯ್ಯ, ಇನ್ನೊಂದೆಡೆ ಡಿಕೆಶಿಯವರ ಗುಂಪುಗಳಿವೆ. ಡಿಕೆಶಿಗೆ ಪಕ್ಷದಲ್ಲಿ ಯಾವುದೆ ಬೆಲೆ ಇಲ್ಲ ಎಂದರು.

    ಗಂಗೆಯಲ್ಲಿ ಮುಳುಗುವುದರಿಂದ ಬಡತನ ಹೋಗುವುದಿಲ್ಲ ಎಂಬ ಮಲ್ಲಿಕಾರ್ಜುನ ಹೇಳಿಕೆಗೆ ಪ್ರತಿಕ್ರಿಯಿಸಿ, 144 ವರ್ಷದ ನಂತರ ಮಹಾ ಕುಂಭಮೇಳದಲ್ಲಿ ನಡೆದಿದೆ. ಖರ್ಗೆಯವರೇ ಯಾಕೆ ಹಿಂದುಗಳ ಮನಸ್ಸು ನೋಯಿಸುತ್ತೀರಿ. ಹಿಂದು ಸಮಾಜವನ್ನು ಕೆಣಕಬೇಡಿ. ಕಾಂಗ್ರೆಸ್‌ನಿಂದ ಯಾರೆಲ್ಲ ಕುಂಭಮೇಳಕ್ಕೆ ಹೋಗಿದ್ದಾರೆ ಅವರನ್ನು ಕಿತ್ತು ಹಾಕಿ. ಖರ್ಗೆಯವರೇ ಬಾಯಿ ಮುಚ್ಕೊಂಡು ಇರಿ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಕೇಂದ್ರದಿಂದ ಬೋಗಸ್ ಬಜೆಟ್, ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ: ಡಿಕೆ ಸುರೇಶ್

     

  • ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ವಂಚನೆ – 57 ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ಅಂದರ್

    ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ವಂಚನೆ – 57 ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ಅಂದರ್

    ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಎಂದು ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಆರೋಪಿಯನ್ನು ಇದೀಗ ವಿಜಯಪುರ (Vijayapura) ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಮೂಲದ ಮುರಿಗೆಪ್ಪ ವಂಚಕ.ಇದನ್ನೂ ಓದಿ: ಲಕ್ಕಿ ಬಾಸ್ಕರ್ ಸಿನಿಮಾ ಸ್ಟೈಲ್‌ನಲ್ಲಿ 24 ಕೋಟಿ ವಂಚನೆ – ಸಿಸಿಬಿ ತನಿಖೆ ವೇಳೆ ಬಟಾಬಯಲು

    ಲೋಕಾಯುಕ್ತ ಡಿವೈಎಸ್ಪಿ ಎಂದು ನಂಬಿಸಿ, ಕೆಬಿಜೆಎನ್‌ಎಲ್‌ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಬಿರಾದಾರ ಅವರಿಗೆ ಕರೆ ಮಾಡಿ 70 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಜ.23ರಂದು ಪ್ರಕರಣ ದಾಖಲಾಗಿತ್ತು.

    ಈತನ ವಿರುದ್ಧ ಒಟ್ಟು 57 ಪ್ರಕರಣಗಳು ದಾಖಲಾಗಿದ್ದು, ಮೋಸ, ವಂಚನೆ ಹಾಗೂ ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಆರೋಪಿ ಕೃತ್ಯಗಳನ್ನು ಎಸಗಿರುವುದಾಗಿ ತಿಳಿದು ಬಂದಿದೆ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದ ಪೊಲೀಸರು ಮಹರಾಷ್ಟ್ರದ ಶಿರೋಳ ತಾಲೂಕಿನಲ್ಲಿ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ನವೆಂಬರ್ ಗೂಗ್ಲಿ ಹಾಕಿದ ಆರ್.ಅಶೋಕ್; ಕಾಂಗ್ರೆಸ್ ಸಚಿವರು ಕೆಂಡ, ಇತ್ತ ದೆಹಲಿಗೆ ಹೋಗ್ತಾರಾ ಪರಂ ಟೀಂ?