Tag: ವಿಜಯಪುರ

  • ಹೊಸ ವರ್ಷಾಚರಣೆಗೆ ಕ್ಷಣಗಣನೆ – ಸುಪ್ರಸಿದ್ಧ ಗೋಲಗುಂಬಜ್‌ನಲ್ಲಿ ಜನವೋ ಜನ

    ಹೊಸ ವರ್ಷಾಚರಣೆಗೆ ಕ್ಷಣಗಣನೆ – ಸುಪ್ರಸಿದ್ಧ ಗೋಲಗುಂಬಜ್‌ನಲ್ಲಿ ಜನವೋ ಜನ

    ವಿಜಯಪುರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಜಿಲ್ಲೆಯ ಸುಪ್ರಸಿದ್ಧ ಗೋಲಗುಂಬಜ್‌ನಲ್ಲಿ (Golgumbaz) ಪ್ರವಾಸಿಗರ ದಂಡು ಬರುತ್ತಿದೆ.ಇದನ್ನೂ ಓದಿ: New Year 2025: ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಜಾತ್ರೆ – ಮಸಾಲೆ ಹಚ್ಚಿಕೊಂಡು ಕಾಯುತ್ತಿರುವ ತಾಜಾ ಮೀನು

    2025ನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿರುವ ಜನರು, ಕುಟುಂಬ ಸಮೇತರಾಗಿ ಬಂದು ಗೋಲಗುಂಬಜ್ ವೀಕ್ಷಿಸುತ್ತಿದ್ದಾರೆ.

    ಸ್ಥಳೀಯರು ಮಾತ್ರವಲ್ಲದೇ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಿದ್ದಾರೆ. ಇನ್ನೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕೆಲ ಶಾಲೆಗಳಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಗೋಲಗುಂಜ್ ವೀಕ್ಷಣೆಗೆ ಬರುತ್ತಿದ್ದಾರೆ.ಇದನ್ನೂ ಓದಿ: ಅಂಗನವಾಡಿಗೆ ತೆರಳಿದ್ದ 3ರ ಬಾಲಕಿಗೆ ಹಾವು ಕಚ್ಚಿ ಸಾವು

     

  • ಕೋಲಾರ, ವಿಜಯಪುರದಲ್ಲಿ KPSC ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಲೋಪ – ಪರೀಕ್ಷಾರ್ಥಿಗಳ ಆಕ್ರೋಶ

    ಕೋಲಾರ, ವಿಜಯಪುರದಲ್ಲಿ KPSC ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಲೋಪ – ಪರೀಕ್ಷಾರ್ಥಿಗಳ ಆಕ್ರೋಶ

    ಕೋಲಾರ: ಕೆಪಿಎಸ್‌ಸಿ ಇಂದು (ಭಾನುವಾರ) ನಡೆಸಿರುವ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಲೋಪ ಕಂಡುಬಂದಿದೆ. ಕೋಲಾರದ (Kolara) ಹಾಗೂ ವಿಜಯಪುರದ ಕೆಲವು ಪರೀಕ್ಷಾ ಕೇಂದ್ರಗಳ ಮುಂದೆ ನಿಂತು ಪರೀಕ್ಷಾರ್ಥಿಗಳು ಸರ್ಕಾರ (Karnataka Government) ಹಾಗೂ ಕೆಪಿಎಸ್‌ಸಿ (KPSC) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಕೋಲಾರ ನಗರದ ಸರ್ಕಾರಿ ಬಾಲಕರ ಕಾಲೇಜು ಪರೀಕ್ಷಾ ಕೇಂದ್ರ, ಮಹಿಳಾ ಕಾಲೇಜು ಪರೀಕ್ಷಾ ಕೇಂದ್ರ ಸೇರಿದಂತೆ ವಿವಿಧೆಡೆ ದೂರುಗಳು ಕೇಳಿಬಂದಿದೆ. ಕೆಪಿಎಸ್‌ಸಿಯಿಂದ ನೀಡಲಾಗಿದ್ದ ಪ್ರವೇಶ ಪತ್ರದ ಸಂಖ್ಯೆಗೂ ಹಾಗೂ ಓಎಂಆರ್ ನಂಬರಿಗೂ ತಾಳೆಯಾಗದೇ, ಗೊಂದಲ ಸೃಷ್ಟಿಯಾಗಿತ್ತು. ಅಲ್ಲದೇ 10 ಗಂಟೆಗೆ ಆರಂಭವಾಗಬೇಕಾದ ಪರೀಕ್ಷೆ 1 ಗಂಟೆ ತಡವಾಗಿ ಆರಂಭವಾಗಿದೆ. ಈ ವೇಳೆ ಪರೀಕ್ಷಾ ಕೇಂದ್ರದಲ್ಲೇ ಪ್ರಶ್ನೆ ಮಾಡಿದಕ್ಕೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಧಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!

    ಕೆಲ ಕಾಲ ಪರೀಕ್ಷಾರ್ಥಿಗಳು ಕೆಪಿಎಸ್‌ಸ್‌ಯಿಂದ ಈ ಬಾರಿಯೂ ಮತ್ತೆ ಯಾರದೊ ಪರೀಕ್ಷೆಯನ್ನು ಮತ್ತೆ ಯಾರದೊ ಕೈಯಲ್ಲಿ ಬರೆಸುತ್ತಿದ್ದಾರಾ ಅನ್ನೋ ಅನುಮಾನ ಶುರುವಾಗಿದೆ. ಕಾರಣ ಪ್ರವೇಶ ಪತ್ರದಲ್ಲಿರುವ ಸಂಖ್ಯೆ ಪರೀಕ್ಷಾರ್ಥಿಗಳಿಗೆ ನೀಡಲಾಗಿದ್ದ ಓಎಂಆರ್ ಶೀಟ್‌ನಲ್ಲೂ ಇರಬೇಕು. ಆದ್ರೆ ಪ್ರವೇಶ ಪತ್ರದ ಸಂಖ್ಯೆ ಓಎಂಆರ್ ಶ್ರೀಟ್‌ನಲ್ಲಿ ಇರಲಿಲ್ಲ ಇದನ್ನು ಪ್ರಶ್ನೆ ಮಾಡಿದಾಗ ಪರೀಕ್ಷಾ ಕೇಂದ್ರದ ಅಭ್ಯರ್ಥಿಗಳು ಅದನ್ನು ಸರಿಮಾಡಿಕೊಂಡು ಬರೆಯಿರಿ ಇಲ್ಲಾ ಎದ್ದು ಹೋಗಿ ಎಂದು ಧಮ್ಕಿ ಹಾಕಿರುವ ಆರೋಪ ಕೂಡಾ ಕೇಳಿ ಬಂದಿದೆ.

    ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಡೆದ ಪರೀಕ್ಷೆ ನಂತರ ಪರೀಕ್ಷೆ ನಂತರ ಪರೀಕ್ಷಾ ಕೇಂದ್ರದಿಂದ ಹೊರ ಬಂದ ಪರೀಕ್ಷಾರ್ಥಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕೆಪಿಎಸ್‌ಸಿ ಈ ಬಾರಿಯೂ ಎಡವಟ್ಟು ಮಾಡಿದ್ದು ಸರಿಯಾದ ಪರೀಕ್ಷೆ ನಡೆಸುವಲ್ಲಿ ವಿಫಲವಾಗಿದೆ. ಇನ್ನು ಕೋಲಾರ ಜಿಲ್ಲೆಯಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ 5,718 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಪ್ರೇಮ – ಬಾಲಕಿ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

    ಈ ಪೈಕಿ ನಾಲ್ಕೈದು ಪರೀಕ್ಷಾ ಕೇಂದ್ರಗಳಲ್ಲಿ ಇದೇ ಸಮಸ್ಯೆ ಆಗಿದ್ದು ನೂರಾರು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಪರೀಕ್ಷಾರ್ಥಿಗಳ ಸಮಸ್ಯೆಯನ್ನು ಆಲಿಸುವ ಯಾರೊಬ್ಬ ಅಧಿಕಾರಿಗಳು ಇಲ್ಲದ ಕಾರಣ ಪರೀಕ್ಷಾರ್ಥಿಗಳು ನಮಗೆ ಅನ್ಯಾಯವಾಗಿದೆ ಮತ್ತೊಮ್ಮ ಮರು ಪರೀಕ್ಷೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಕೆಪಿಎಸ್ ಸಿ ಹಾಗೂ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

    ವಿಜಯಪುರದಲ್ಲೂ ಅವಾಂತರ:
    ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಎಡವಟ್ಟಾದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಸಮಸ್ಯೆಯಾಗಿದೆ. ಒಎಂಅರ್ ಶೀಟ್‌ನಲ್ಲಿ ನೋಂದಣಿ ಸಂಖ್ಯೆ ಅದಲು ಬದಲಾಗಿ ಸಮಸ್ಯೆ ಉಂಟಾಗಿತ್ತು. ನಗರದ ಸಿಕ್ಯಾಬ್ ಸಂಸ್ಥೆಯ 2 ಕೇಂದ್ರಗಳು, ಮರಾಠಿ ವಿದ್ಯಾಲಯ, ವಿಕಾಸ ವಿದ್ಯಾಲಯದಲ್ಲಿನ 4 ಕೇಂದ್ರಗಳಲ್ಲಿ ಒಎಂಆರ್ ನಂಬರ್ ಹಾಗೂ ನೋಂದಣಿ ನಂಬರ್ ಬದಲಾಗಿ ತೊಂದರೆ ಆಗಿತ್ತು. ಕಾರಣ ಪರೀಕ್ಷಾ ಕೇಂದ್ರಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಾಗೂ ಜಿಲ್ಲಾ ಪಂಚಾಯತಿ ಸಿಇಒ ರಿಶಿ ಆನಂದ ಭೇಟಿ ನೀಡಿದ್ದರು. ಪರೀಕ್ಷಾರ್ಥಿಗಳ ಸಮಸ್ಯೆ ಆಲಿಸಿದ ಅಧಿಕಾರಿಗಳು ಕೆಪಿಎಸ್‌ಸಿ ಅಧಿಕಾರಿಗಳ ಜೊತೆಗೆ ಮಾತನಾಡಿದ ಎಡಿಸಿ ಹಾಗೂ ಜಿಪಂ ಸಿಇಓ ಪರೀಕ್ಷಾರ್ಥಿಗಳ ನೋಂದಣಿ ಸಂಖ್ಯೆಯನ್ನು ಓಎಂಆರ್ ಶೀಟ್‌ನಲ್ಲಿ ಪ್ರತ್ಯೇಕವಾಗಿ ನೋಂದಾಯಿಸಿಲು ಸಲಹೆ ನೀಡಿದ್ದಾರೆ. ಅಲ್ಲದೇ ಪರೀಕ್ಷೆ ಎಷ್ಟು ವಿಳಂಭವಾಗಿದೆಯೋ ಅಷ್ಟು ಹೆಚ್ಚುವರಿ ಸಮಯ ನೀಡೋದಾಗಿ ಹೇಳಿ ಪರೀಕ್ಷಾರ್ಥಿಗಳ ಸಮಸ್ಯೆ ಈ ಮೂಲಕ ಬಗೆಹರಿಸಿ ಪರೀಕ್ಷೆ ಬರೆಯುವಂತೆ ಮನವೋಲಿಕೆ ಮಾಡಿದ್ದಾರೆ. ಇನ್ನು ಅಧಿಕಾರಿಗಳ ಸ್ಪಷ್ಟನೆಗೆ ಒಪ್ಪಿ ಪರೀಕ್ಷೆ ಬರೆಯಲು ಪರೀಕ್ಷಾರ್ಥಿಗಳು ತೆರಳಿದ್ದು, ಸಮಸ್ಯೆ ಬಗೆ ಹರಿದಿದೆ.

  • ಕಾರು ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ – ಉದ್ಯಮಿ ಚಂದ್ರಮ್ ತಂದೆಯೂ ನಿಧನ

    ಕಾರು ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ – ಉದ್ಯಮಿ ಚಂದ್ರಮ್ ತಂದೆಯೂ ನಿಧನ

    ವಿಜಯಪುರ: ಡಿ.22 ರಂದು ನೆಲಮಂಗಲದಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ (Nelamangala Car Accident) ಮಗ, ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಉದ್ಯಮಿ ಚಂದ್ರಮ್ ಅವರ ತಂದೆ ಸಹ ನಿಧನರಾಗಿದ್ದಾರೆ.

    ಈರಗೊಂಡ ಏಗಪ್ಪಗೊಳ (80) ನಿಧನರಾದವರು. ಅವರು ಕುಟುಂಬ ಸದಸ್ಯರ ಸಾವಿನಿಂದ‌ ಆಘಾತಕ್ಕೊಳಕ್ಕಾಗಿದ್ದರು. ಅವರು ಶನಿವಾರ ಸಂಜೆ ಮಹಾರಾಷ್ಟ್ರದ ಸಾಂಗ್ಲಿ‌ಯ ಮೊರಬಗಿ ಗ್ರಾಮದಲ್ಲಿ ನಿಧನರಾಗಿದ್ದಾರೆ.

    ನೆಲಮಂಗಲದಲ್ಲಿ ಕಾರಿನ ಮೇಲೆ ಕಂಟೈನರ್‌ ಬಿದ್ದು ಏಗಪ್ಪಗೊಳ ಅವರ ಮಗ ಚಂದ್ರಮ್ ಸೇರಿದಂತೆ ಕುಟುಂಬದ ಸದಸ್ಯರಾದ ಗೌರಾಬಾಯಿ,‌ ದೀಕ್ಷಾ, ಧ್ಯಾನ್,‌‌ ವಿಜಯಲಕ್ಷ್ಮಿ ಹಾಗೂ ಆರ್ಯ ಸಾವನ್ನಪ್ಪಿದ್ದರು. ಇದಾದ ಬಳಿಕ ಅನಾರೋಗ್ಯದಲ್ಲಿದ್ದ ಅವರು ತೀವ್ರ ನೊಂದುಕೊಂಡಿದ್ದರು.

  • ವಿಜಯಪುರ | ಈಜಲು ಹೋಗಿ ನೀರು ಪಾಲಾದ ವಿದ್ಯಾರ್ಥಿ – ಮೃತನಿಗಾಗಿ ಶೋಧ

    ವಿಜಯಪುರ | ಈಜಲು ಹೋಗಿ ನೀರು ಪಾಲಾದ ವಿದ್ಯಾರ್ಥಿ – ಮೃತನಿಗಾಗಿ ಶೋಧ

    ವಿಜಯಪುರ: ಈಜಲು ಹೋಗಿ ವಿದ್ಯಾರ್ಥಿಯೋರ್ವ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ನಗರದ ಬೇಗಂ ತಲಾಬ್‌ನಲ್ಲಿ (Begum Talab) ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಹವೇಲಿ ಗಲ್ಲಿಯ ನಿವಾಸಿ ಅನಿರುದ್ದ ಕಲ್ಯಾಣಕುಮಾರ ಸಾಮ್ರಾಣಿ (20) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – 42 ಭಕ್ತಾಧಿಗಳ ಸ್ಥಿತಿ ಗಂಭೀರ

    ಇಂದು (ಡಿ.27) ರಜೆಯ ಹಿನ್ನೆಲೆ ಅನಿರುದ್ದ ತನ್ನ ಸಹೋದರ ಹಾಗೂ ಗೆಳೆಯರೊಂದಿಗೆ ಬೇಗಂ ತಲಾಬ್‌ಗೆ ತೆರಳಿದ್ದರು. ಈ ವೇಳೆ ಅನಿರುದ್ದ ಈಜಲು ಕೆರೆಗೆ ಇಳಿದಿದ್ದ. ಸಹೋದರ ಹಾಗೂ ಗೆಳೆಯರು ಎಷ್ಟೇ ಬೇಡ ಹೇಳಿದರೂ ಕೇಳದೇ ನೀರಿಗೆ ಇಳಿದಿದ್ದಾನೆ. ಬಳಿಕ ನೀರು ಪಾಲಾಗಿದ್ದಾನೆ.

    ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತನ ಶವಕ್ಕಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಬೋಟ್ ಮೂಲಕ ನೀರಿನಲ್ಲಿ ಹುಡುಕಾಟ ನಡೆಸಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಲನಗರ (Jalanagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಅತ್ಮಹತ್ಯೆ ಕೇಸ್‌ – ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಸಸ್ಪೆಂಡ್‌

  • ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ – ಸ್ವಗ್ರಾಮದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

    ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ – ಸ್ವಗ್ರಾಮದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

    ವಿಜಯಪುರ: ನೆಲಮಂಗಲ ಭೀಕರ ಅಪಘಾತದಲ್ಲಿ ಸಾವೀಗೀಡಾಗಿದ್ದ 6 ಜನರ ಮೃತದೇಹಗಳು ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತಲುಪಿದ್ದು, ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.

    ಇಂದು (ಡಿ.22) ಬೆಳಿಗ್ಗೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೃತದೇಹಗಳು ರವಾನೆಯಾಗಿವೆ. ಮೂರು ಅಂಬುಲೆನ್ಸ್ ಮೂಲಕ ಆರು ಮೃತದಹೇಗಳನ್ನು ಕರೆತರಲಾಗಿದೆ. ಮೃತದೇಹಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃತ ಚಂದ್ರಮ್ ಅವರ ಜಮೀನಿನಲ್ಲಿ ಲಿಂಗಾಯತ ಸಮಾಜದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.  ಮೃತದೇಹಗಳಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದ ಬಳಿಕ ಬೆಂಕಿ ಸ್ಪರ್ಶಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?

    ಘಟನೆ ಏನು?
    ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್, ವೋಲ್ವೋ ಕಾರಿನ ಮೇಲೆ ಉರುಳಿದ್ದ ಪರಿಣಾಮ ಕಾರಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಬಲಿ ಆಗಿದ್ದರು. ಮೃತರನ್ನು 48 ವರ್ಷದ ಐಟಿ ಉದ್ಯಮಿ ಚಂದ್ರಮ್ ಯೇಗಪ್ಪಗೋಳ್, 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, ಜ್ಞಾನ್ ಏಗಪ್ಪ, 36 ವರ್ಷದ ವಿಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

    ವೀಕೆಂಡ್ ಇದ್ದ ಕಾರಣ ಚಂದ್ರಮ್ ಕುಟುಂಬ ಇತ್ತೀಚಿಗಷ್ಟೇ ಖರೀದಿಸಿದ್ದ ಹೊಸ ವೋಲ್ವೋ ಕಾರಿನಲ್ಲಿ ತಮ್ಮ ಊರಿಗೆ ಹೊರಟಿತ್ತು. ಆದರೆ ಟೀ.ಬೇಗೂರು ಸಮೀಪ ಕಂಟೇನರ್ ಉರುಳಿ, ಕಾರಲ್ಲಿಯೇ ಎಲ್ಲರೂ ಸಾವನ್ನಪ್ಪಿದ್ದಾರೆ. ದಾಬಸ್‌ಪೇಟೆಯಿಂದ ಬೆಂಗಳೂರಿಗೆ ಕಂಟೇನರ್ ಬರುತ್ತಿತ್ತು. ತನ್ನ ಮುಂದಿನ ಕಾರನ್ನು ಸೇಫ್ ಮಾಡಲು ಹೋಗಿ ಹೀಗಾಗಿದೆ ಎಂದು ಚಾಲಕ ಹೇಳಿಕೊಂಡಿದ್ದಾನೆ. ಈ ಅಪಘಾತದ ಪರಿಣಾಮ ವೋಲ್ವೋ ಮುಂದಿದ್ದ ವಾಹನಗಳು ಸಡನ್ ಬ್ರೇಕ್ ಹಾಕಿದಕ್ಕೆ ಹಲವು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. 2 ಲಾರಿ, 2 ಕಾರು, ಸ್ಕೂಲ್ ಬಸ್ ಒಂದಕ್ಕೊಂದು ಟಚ್ ಆಗಿವೆ.

    ಸರಣಿ ಅಪಘಾತದಿಂದಾಗಿ ಬೆಂಗಳೂರು-ತುಮಕೂರು ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ಸವಾರರು ಪರದಾಡಿದರು. ಇನ್ನೂ ಮೃತ ಉದ್ಯಮಿ ಚಂದ್ರಮ್ ಮೂಲತಃ ಮಹಾರಾಷ್ಟ್ರದ ಜತ್ ತಾಲೂಕಿನ ಮೊರಬಗಿ ಗ್ರಾಮದವರು. ಬೆಂಗಳೂರಿನಲ್ಲಿ ಐಎಎಸ್‌ಟಿ ಎಂಬ ಸಂಸ್ಥೆ ಸ್ಥಾಪಿಸಿ, 300 ಜನಕ್ಕೆ ಕೆಲಸ ಕೊಟ್ಟಿದ್ದರು. ಇದೀಗ ಸಂಸ್ಥೆ ಸಿಬ್ಬಂದಿ ದಿಕ್ಕು ತೋಚದಂತಾಗಿದ್ದು, ಕುಟುಂಬಸ್ಥರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ.ಇದನ್ನೂ ಓದಿ: ಅಕಸ್ಮಾತ್ ಹುಂಡಿಗೆ ಬಿದ್ದ ಐಫೋನ್ ದೇವಸ್ಥಾನದ ಪಾಲು – ವಾಪಸ್ ಕೊಡಲ್ಲ ಎಂದ ಮಂಡಳಿ

  • ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ವಿಜಯಪುರ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ನಗರದ ಹೊರವಲಯದ ಇಂಡಿ ಬೈಪಾಸ್ (Indi Bypass) ಬಳಿ ನಡೆದಿದೆ.ಇದನ್ನೂ ಓದಿ: ಮಾರ್ಚ್ ಅಂತ್ಯಕ್ಕೆ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್?

    ಮೃತ ಬೈಕ್ ಸವಾರನನ್ನು ಜಿಲ್ಲೆಯ ಗಡಗಿ ಲೇಔಟ್ ನಿವಾಸಿ ಮಾಳು ಗುಂಡಣ್ಣನವರ (38) ಎಂದು ಗುರುತಿಸಲಾಗಿದೆ.

    ಗುಂಡಣ್ಣನವರ ಖಾಸಗಿ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಗರದ ಹೊರವಲಯದ ಸೊಲಾಪುರ ಬೈಪಾಸ್‌ನಿಂದ ಬರುವಾಗ ಇಂಡಿ ಬೈಪಾಸ್ ಬಳಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ವಿಜಯಪುರ ನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

  • ನಾವು 2ಎ ಮೀಸಲಾತಿ ಕೇಳಿಲ್ಲ, ಕಾಂಗ್ರೆಸ್ ಮಾಜಿ ಶಾಸಕನ ಅವಾಂತರ ಇದು – ಯತ್ನಾಳ್ ಕಿಡಿ

    ನಾವು 2ಎ ಮೀಸಲಾತಿ ಕೇಳಿಲ್ಲ, ಕಾಂಗ್ರೆಸ್ ಮಾಜಿ ಶಾಸಕನ ಅವಾಂತರ ಇದು – ಯತ್ನಾಳ್ ಕಿಡಿ

    – ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ಪ್ರಿಯಾಂಕ್ ಯಾಕೆ ಮಾತನಾಡುತ್ತಿಲ್ಲ

    ವಿಜಯಪುರ: ನಾವು 2ಎ ಮೀಸಲಾತಿ ಕೇಳಿಲ್ಲ, ಕಾಂಗ್ರೆಸ್ (Congress) ಮಾಜಿ ಶಾಸಕ ಮಾಡಿದ ಅವಾಂತರ ಇದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

    ಜಿಲ್ಲೆಯಲ್ಲಿ ಮಾತನಾಡಿದ ಅವರು, ನಾವು ಆರಂಭದಿಂದಲೂ 2ಎ ಮೀಸಲಾತಿ ಕೇಳಿಲ್ಲ. ಕಾಂಗ್ರೆಸ್ ಮಾಜಿ ಶಾಸಕ, ಈಗ ಹಾಲಿ ಶಾಸಕ ಕೇಳಿದ್ದ. 2ಎದಲ್ಲಿ ಹೋದರೆ ಹಲವು ಸಮುದಾಯದಕ್ಕೆ ಅನ್ಯಾಯ ಆಗುತ್ತದೆ. ಮುಸ್ಲಿಮರಿಗೆ ನೀಡಿದ ಮೀಸಲಾತಿ ಆಸಂವಿಧಾನಿಕವಾಗಿದೆ. 7%ನಲ್ಲಿ ನಾವು ಹಂಚಿಕೊಂಡು ತಿನ್ನುತ್ತೇವೆ ಎಂದು ಹೇಳಿದ್ದೇವೆ. ಇನ್ನೂ ಮೇಲೆ ನಾವು 2ಎನಲ್ಲಿ ಮೀಸಲಾತಿ ಕೇಳುವುದಿಲ್ಲ. ಕಾಂಗ್ರೆಸ್ ಮಾಜಿ ಶಾಸಕ ಮಾಡಿದ ಅವಾಂತರ ಇದು. ಕಾಂಗ್ರೆಸ್ ಮಾಡಿದ ಕೆಲಸ ಇದಾಗಿದೆ. 2ಎ ದಲ್ಲಿ ಮೀಸಲಾತಿ ಕೇಳಿ ಕೈ-ಕಾಲು ಹಿಡಿಯುವುದು ಬೇಡ. ಬೇರೆ ಸಮುದಾಯದಕ್ಕೆ ನೀಡಿದ ಅಸಂವಿಧಾನಿಕ ಮೀಸಲಾತಿಯಲ್ಲಿ ನೀಡಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

    ಅದರಲ್ಲಿ ಕೇವಲ 7% ಇದೆ. ಅದು ಕೇವಲ ಪಂಚಮಸಾಲಿ, ಲಿಂಗಾಯತರಿಲ್ಲ, ಅದರಲ್ಲಿ ಮರಾಠರಿದ್ದಾರೆ, ವೈಷ್ಣವರಿದ್ದಾರೆ, ಕ್ರಿಶ್ಚಿಯನ್‌ರಿದ್ದಾರೆ, ಜೈನರಿದ್ದಾರೆ, ಕುರುಬರಿದ್ದಾರೆ. ನಾವು ತಕರಾರು ಮಾಡಿಲ್ಲ ಇರುವ 7%ನಲ್ಲಿ ನಾವು ಹಂಚಿಕೊಂಡು ತಿನ್ನುತ್ತೇವೆ ಎಂದು ಹೇಳಿದ್ದೇವೆ. ಈ ಕೈ ಹಿಡಿಯುವುದು, ಕಾಲು ಹಿಡಿಯುವಂತಹ ಹೇಳಿಕೆಗಳನ್ನ ನೀಡುತ್ತಿರುವುದು ಸಿದ್ದರಾಮಯ್ಯ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಮೀಸಲಾತಿ ಕೊಡುವುದಿಲ್ಲ ಎನ್ನುವುದಕ್ಕಿಂತ ನಾವು ಬಿಟ್ಟು ಬಿಟ್ಟಿದ್ದೇವೆ. ಇನ್ನೂ ಮೇಲೆ ಸಿದ್ದರಾಮಯ್ಯ ಬಳಿ ನಾವು ಹೋಗುವುದಿಲ್ಲ ಎಂದು ಗುಡುಗಿದರು.

    ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿಳಂಬ ಪ್ರತಿಭಟನೆ ಮೇಲೆ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿ ಪ್ರಶ್ನೆಪತ್ರಿಕೆ ಎಷ್ಟೊತ್ತಿಗೆ ತೆಗೆದುಕೊಂಡು ಬರುತ್ತಾರೆ ಎಂದು ನಾನು ವಿಡಿಯೋ ಸಮೇತ ಟ್ವೀಟ್ ಮಾಡಿದ್ದೇನೆ. ಉದ್ದೇಶಪೂರ್ವಕವಾಗಿ ತಮಗೆ ಬೇಕಾದವರನ್ನು ನೇಮಕಾತಿ ಮಾಡಲು ಇಡೀ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣ ಎಲ್ಲಿ ಹೋಯ್ತು? ಪ್ರಿಯಾಂಕ ಖರ್ಗೆ ಎಷ್ಟು ಜಿಗಿದಾಡುತ್ತಿದ್ದರು. ಈಗೇಕೆ ಪಿಎಸ್‌ಐ ಹಗರಣದ ಬಗ್ಗೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

    ಇದರಲ್ಲಿ ಪ್ರಿಯಾಂಕ ಖರ್ಗೆ (Priyank Kharge) ಕೈ ಇರಬೇಕು ಎಂದು ನನಗೆ ಅನ್ನಿಸುತ್ತಿದೆ. ಅವರಿಗೆ ಸೇರಿದವರು ನೇಮಕಾತಿ ಆಗಿದ್ದಾರೆ ಎಂದು ನಮಗೂ ಗೊತ್ತಿದೆ. ಅದಕ್ಕೆ ಈಗ ಅವರು ಸುಮ್ಮನಿದ್ದಾರೆ. 150 ಕೋಟಿ ರೂ. ಬಗ್ಗೆ ಈಗ ಎಬ್ಬಿಸಿಕೊಂಡಿದ್ದಾರೆ. ಇದನ್ನು ತನಿಖೆ ಮಾಡಲ್ಲ, ತನಿಖೆಗೆ ಕೊಡಲ್ಲ ಸುಮ್ಮನೆ. ಅಷ್ಟೇ ಸಬ್ ಗೋಲ್‌ಮಾಲ್ ಹೈ ಎಂದರು.ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತ ಸುಮಯಾ ಕುಟುಂಬಕ್ಕೆ 5 ಲಕ್ಷ ಚೆಕ್‌ ವಿತರಣೆ

  • ಬಿಜೆಪಿ ಸರ್ಕಾರ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ – ಸಿದ್ದರಾಮಯ್ಯ

    ಬಿಜೆಪಿ ಸರ್ಕಾರ ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ – ಸಿದ್ದರಾಮಯ್ಯ

    – ಕಾನೂನು ಕೈಗೆ ತಗೊಂಡ್ರೆ ನಮ್ಮ ಸರ್ಕಾರ ಸುಮ್ಮನಿರಲ್ಲ ಎಂದ ಸಿಎಂ

    ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಬಿಜೆಪಿಯವರು ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರತಿಭಟನೆಗೆ ಲಿಂಗಾಯ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ವಿಚಾರವಾಗಿ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಬಿಜೆಪಿಯವರು (BJP) ಪಂಚಮಸಾಲಿಗರಿಗೆ ಟೋಪಿ ಹಾಕಿ ಹೋಗಿದೆ. ಇವರು 2ಎ ಕೇಳಿದ್ದರೆ, ಅವರು 2ಡಿ ಮಾಡಿದ್ದಾರೆ ಎಂದರು.ಇದನ್ನೂ ಓದಿ: ಬೆಂಗಳೂರು| ಗಂಡನನ್ನು ಬಿಟ್ಟು ತನ್ನ ಜೊತೆ ಇರುವಂತೆ ಒತ್ತಾಯ – ಒಪ್ಪದಿದ್ದಕ್ಕೆ ವಿವಾಹಿತ ಮಹಿಳೆ ಕೊಂದು ಪ್ರಿಯಕರ ಆತ್ಮಹತ್ಯೆ

    ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ತಕರಾರು ಇಲ್ಲ. ಸಂವಿಧಾನ ಪರವಾಗಿ ಹೋರಾಟ ಇರಬೇಕು. ಹೈಕೋರ್ಟ್‌ಗೆ ಅಪಡೇಟ್ ಹಾಕಿದವರು ಯಾರು? ಇದೆಲ್ಲ ಮಾಡಿದ್ದು ಬಿಜೆಪಿ ಸರ್ಕಾರದವರು. ಇದೇ ಸ್ವಾಮೀಜಿಗಳು ಇದ್ದರಲ್ಲ, ರಸೂಲ್ ಎಂಬಾತ ಸುಪ್ರೀಂ ಕೋರ್ಟ್‌ಗೆ  ಹೋದರು. ಆಗಿನ ಅಡ್ವಕೇಟ್ ಜನರಲ್ ಇದರಲ್ಲಿ ಬದಲಾವಣೆ ಮಾಡಲ್ಲ ಎಂದಿದ್ದರು.

    ಟ್ರ್ಯಾಕ್ಟರ್‌ ತೆಗೆದುಕೊಂಡು ಹೋರಾಟ ಮಾಡುತ್ತೀವಿ ಎಂದರು. ಆಗ ಕೋರ್ಟ್ ಶಾಂತಿಯುತವಾಗಿ ಮಾಡುವುದಕ್ಕೆ ಹೇಳಿತ್ತು. ಆದರೂ ಕಾನೂನು ಕೈಗೆ ತೆಗೆದುಕೊಂಡರು. ನಾನು ಮೂರು ಜನ ಮಂತ್ರಿಗಳನ್ನು ಕಳಿಸಿದ್ದೆ. ಮಂತ್ರಿಗಳು ಕರೆದಾಗ ಅವರು ಸಿಎಂಗೆ ಮಾತಾಡಿಸುತ್ತೇವೆ ಎಂದರು. ಆದರೆ ನಾನು ಎಲ್ಲ ಕಡೆಗೂ ಹೋಗುವುದಕ್ಕೆ ಆಗುವುದಿಲ್ಲ. ಆದರೂ ನಾನು ಅವರನ್ನು ಮಾತನಾಡಿಸಲು ಕರೆದರೂ ಅವರು ಬರಲಿಲ್ಲ. ಆಗ ಸುವರ್ಣಸೌಧಕ್ಕೆ ನುಗ್ಗಲು ಯತ್ನ ಮಾಡಿದರು. ಕಲ್ಲು ತೂರಾಟ ಮಾಡಿದರು, ಪೊಲೀಸರಿಗೆ ಗಾಯಗೊಂಡಿದ್ದಾರೆ. ನಮ್ಮ ಬಳಿ ಪ್ರೂಫ್ ಇವೆ, ಫೋಟೋ ಬೇಕಾದರೂ ತೋರಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸುಮ್ಮನಿರಲ್ಲ. ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

    ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ಸ್ವಾಮೀಜಿ ಆರೋಪ ವಿಚಾರವಾಗಿ ಮಾತನಾಡಿ, ಸ್ವಾಮೀಜಿ ಬಗ್ಗೆ ಮಾತನಾಡಲ್ಲ, ಸ್ವಾಮೀಜಿ ಮಾತನಾಡಿರುವುದರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದರು.ಇದನ್ನೂ ಓದಿ: `ಒಂದು ದೇಶ ಒಂದು ಚುನಾವಣೆ’ – ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌ – ಡಿಕೆಶಿ

  • `ಒಂದು ದೇಶ ಒಂದು ಚುನಾವಣೆ’ – ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌ – ಡಿಕೆಶಿ

    `ಒಂದು ದೇಶ ಒಂದು ಚುನಾವಣೆ’ – ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌ – ಡಿಕೆಶಿ

    ವಿಜಯಪುರ: ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ (BJP) ಪ್ಲ್ಯಾನ್‌ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು `ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಕಿಡಿಕಾರಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ (One Nation One Election) ಎನ್ನುವುದು ಕಾಂಗ್ರೆಸ್ (Congress) ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್‌ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್‌ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಚಿಕ್ಕಬಳ್ಳಾಪುರ | ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ – ಚುಮುಚುಮು ಚಳಿಯೊಂದಿಗೆ ತುಂತುರು ಮಳೆ!

    ಕೃಷ್ಣಾ ನದಿಗಾಗಿ 40,000 ಕೋಟಿ ರೂ. ಕೊಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಎರಡು ವರ್ಷ ಕಳೆದರೂ ಸರ್ಕಾರ ಬಿಡಿಗಾಸನ್ನು ಕೊಟ್ಟಿಲ್ಲ. ಜೊತೆಗೆ 5 ವರ್ಷದಲ್ಲಿ ರಾಜ್ಯಕ್ಕೆ 2 ಲಕ್ಷ ಕೋಟಿ ರೂ. ಹಾಗೂ ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 75 ಸಾವಿರ ಕೋಟಿ ರೂ. ಕೊಡುವುದಾಗಿ ಸರ್ಕಾರ ತಿಳಿಸಿತ್ತು. ಇದುವರೆಗೂ ಯೋಜನೆಗೆ ಬಿಡಿಗಾಸನ್ನು ಕೊಟ್ಟಿಲ್ಲ ಎಂದು ಕೇಳಿದಾಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿ ಜಾರಿಕೊಂಡರು.

    ಆಲಮಟ್ಟಿ ಸಂತ್ರಸ್ತರ ಹೋರಾಟ ವಿಚಾರವಾಗಿ ಮಾತನಾಡಿದ ಅವರು, 524 ಮೀ ಎತ್ತರವಿದೆ ಏನು ಮಾಡಬೇಕು ಅದನ್ನು ನಾವು ಮಾಡುತ್ತೇವೆ. ಅದರ ಭೂಸ್ವಾಧೀನ ನೋಟಿಫಿಕೇಷನ್ ಆಗಬೇಕಿದೆ. ನೋಟಿಫಿಕೇಷನ್ ಮುಂಚೆಯೇ ಅಲ್ಲಿ ಕೆಲಸ ಮಾಡಬೇಕಾ? ಬೇಡವಾ? ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಇಷ್ಟೊಂದು ಬೆಲೆ ಇಲ್ಲ. ಭೂಸ್ವಾಧೀನಕ್ಕೆ ಈ ಮೊದಲು ಬೊಮ್ಮಾಯಿ ಸರ್ಕಾರ ಕೊಟ್ಟ ರೇಟ್‌ಗೆ ತಕರಾರಿಲ್ಲ, ನಾವು ಕೊಡಲು ಸಿದ್ಧರಿದ್ದೇವೆ. ಇದೇ ವಿಚಾರಕ್ಕೆ ಬರುವ ಸೋಮವಾರ ಸಿಎಂ ಅವರು ಸಂಬಂಧಿಸಿದ ಕೆಲವರನ್ನು ಕರೆದಿದ್ದಾರೆ, ಅವರು ಅದರ ವಿಚಾರ ಮಾಡುತ್ತಾರೆ. ಸಂತ್ರಸ್ತರು ನೂರು ಬೇಡಿಕೆ ಇಡಲಿ, ಆದರೆ ಕಾನೂನು ಚೌಕಟ್ಟಿನಲ್ಲಿ ಏನು ಮಾಡಲು ಸಾಧ್ಯವಿದೆಯೊ ಅದನ್ನು ನಾವು ಮಾಡುತ್ತೇವೆ. ಅದಕ್ಕೂ ಮೊದಲು ಕೇಂದ್ರ ಗೆಜೆಟ್ ನೋಟಿಫಿಕೇಷನ್ ಮಾಡಬೇಕಿದೆ. ಕೇಂದ್ರ 16 ಸಾವಿರ ಕೋಟಿ ರೂ. ಮಾತ್ರ ಕೊಟ್ಟಿದೆ ಎಂದು ಹೇಳಿದರು.ಇದನ್ನೂ ಓದಿ: ಅಂಜನಾದ್ರಿಯಲ್ಲಿ ಇಂದು ಹನುಮಮಾಲಾ ವಿಸರ್ಜನೆ – ದೇಶದ ನಾನಾ ಭಾಗಗಳಿಂದ ಭಕ್ತರ ದಂಡು

  • ರೈಲ್ವೆ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ಉಂಡೆನಾಮ

    ರೈಲ್ವೆ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ಉಂಡೆನಾಮ

    ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಕೆಟ್‌ ಕಲೆಕ್ಟರ್ ಕೆಲಸ (Railway Tticket collector Job) ಕೊಡಿಸುವುದಾಗಿ ಹೇಳಿ ಖದೀಮರು ಲಕ್ಷ ಲಕ್ಷ ಹಣ ವಂಚಿಸಿರುವ ಘಟನೆ ನಡೆದಿದೆ.

    ಘಟನೆ ಸಂಬಂಧ ವಿಜಯಪುರದ (Vijayapura) ಡಾ.ಲಕ್ಷ್ಮಿಕಾಂತ್ ಹೊಸಮನಿ, ಮುರುಳಿ, ಭೀಮರಾವ ಎಂಟಮನಿ, ಬಸು ಕಾಸಪ್ಪ, ಕೂಲಪ್ಪ ಸಿಂಗೆ, ಸಂತೋಷ್, ಶ್ರೀಧರ್ ಸೇರಿ ಒಟ್ಟು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ರಾಜ್ಯಕ್ಕೂ ತಟ್ಟಿದ ಸೈಕ್ಲೋನ್ ಎಫೆಕ್ಟ್ – ಚುಮುಚುಮು ಚಳಿಯೊಂದಿಗೆ ತುಂತುರು ಮಳೆ!

    ಆನ್‌ಲೈನ್‌ ಮೂಲಕ ತರಬೇತಿಗೆ ನಕಲಿ ಆರ್ಡರ್‌ ಕಾಪಿ ಕೊಟ್ಟಿದ್ದ ಖದೀಮರು ಮುಂಬೈ ಹಾಗೂ ಕಾನ್ಪುರದಲ್ಲಿ ಫೇಕ್ ಟ್ರೈನಿಂಗ್ ಕೂಡ ಕೊಡಿಸಿದ್ರು. ಇದನ್ನು ನಂಬಿದ್ದ ಉದ್ಯೋಗಾಕಾಂಕ್ಷಿಗಳು ನೇಮಕಾತಿ ಪತ್ರ ಹಿಡಿದು ಉದ್ಯೋಗಕ್ಕೆ ಜಾಯಿನ್‌ ಆಗಲು ಹೋದಾಗ ನಾಯಕ ಬಯಲಾಗಿದೆ. ಬಳಿಕ ವಂಚನೆ ಬಗ್ಗೆ ವಿಜಯಪುರದ ಹುಸನಪ್ಪ ಮಾಡ್ಯಾಳ್ ಸಿಸಿಬಿಗೆ ದೂರು‌ ನೀಡಿದ್ದು, 7 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

    ಎಫ್‌ಐಆರ್‌ನಲ್ಲಿ ಏನಿದೇ?
    ರೈಲ್ವೆ ಇಲಾಖೆಯಲ್ಲಿ ಟಿಸಿ ಹುದ್ದೆ ಕೊಡಿಸುವುದಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಇದನ್ನೇ ನಂಬಿದ್ದ ವಿಜಯಪುರದ ಹುಸನಪ್ಪ ಮಾಡ್ಯಾಳ್, ಶಿವಕುಮಾರ್, ಅಶೋಕ್ ಹಾಗೂ ಇತರರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬಳಿಕ ಬೆಂಗಳೂರು, ವಿಜಯಪುರ ಸೇರಿ ಹಲವು ಕಡೆ ಕರೆಸಿ ಒಬ್ಬೊಬರಿಂದ ಹಂತಹಂತವಾಗಿ 20 ರಿಂದ 25 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

    ಹಣ ಪಡೆದುಕೊಂಡು ಆನ್‌ಲೈನ್‌ ಮೂಲಕ ನಕಲಿ ಟ್ರೈನಿಂಗ್‌ ಆರ್ಡರ್‌ ಕಾಫಿ ಕೂಡ ಕೊಟ್ಟಿದ್ದರು. ನಂತರ ಮುಂಬೈ ಹಾಗೂ ಕಾನ್ಪುರದಲ್ಲಿ ಫೇಕ್‌ ಟ್ರೈನಿಂಗ್ ಕೂಡ ಕೊಡಿಸಿದ್ದರು. ಟ್ರೈನಿಂಗ್ ಮುಗಿದ ಕೆಲ ದಿನಗಳ ನಂತರ ಡ್ಯೂಟಿಗೆ ಜಾಯಿನ್ ಆಗಲು ಹೇಳಿದ್ದಾರೆ. ಕೆಲಸ ಸಿಕ್ಕೇ ಬಿಡ್ತು ಎಂಬ ಖುಷಿಯಲ್ಲಿದ್ದರಿಗೆ ತಿಂಗಳು ಉರುಳಿದ್ರು ನೇಮಕಾತಿ ಪತ್ರ ಬರಲಿಲ್ಲ. ಇದರಿಂದ ಅನುಮಾನಗೊಂಡ ಆಕಾಂಕ್ಷಿಗಳು ಪರಿಶೀಲಿಸಿದಾಗ ಮೋಸ ಹೋಗಿದ್ದು ಗೊತ್ತಾಗಿದೆ. ಮೋಸ ಹೋದವರು ವಂಚಕರ ಬಳಿ ಕೇಳಿದಾಗ ಪ್ರಾಣ ಬೆದರಿಕೆ ಹಾಕಿದ್ದಾರೆ. ಆ ಬಳಿಕವೇ ಆಕಾಂಕ್ಷಿಗಳು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಣ ವಾಪಸ್ ಕೇಳಿದಾಗ ಕೊಡಲ್ಲ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.