Tag: ವಿಜಯಪುರ

  • ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು: ಯತ್ನಾಳ್

    ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು: ಯತ್ನಾಳ್

    – ದೇಶದಲ್ಲಿ ವಕ್ಫ್ ವಿರುದ್ಧ ಹೋರಾಟ ಆರಂಭವಾಗಿದ್ದೇ ವಿಜಯಪುರದಿಂದ
    – ಎಲ್ಲರೂ ಗಟ್ಟಿಯಾದರೆ ರೈತರ, ಮಠಗಳ ಆಸ್ತಿ ಉಳಿಯುತ್ತೆ

    ವಿಜಯಪುರ: ವಕ್ಫ್ ವಿರುದ್ಧದ ಹೋರಾಟದಲ್ಲಿ ಎಲ್ಲಾ ಸ್ವಾಮೀಜಿಗಳು ಕೈಜೋಡಿಸಬೇಕು. ಆದರೆ ನಮ್ಮ ಸ್ವಾಮೀಜಿಗಳು ಹೋರಾಟ ಮಾಡುತ್ತಿಲ್ಲ. ವಕ್ಫ್ ವಿರುದ್ಧ ದೊಡ್ಡ ಹೋರಾಟ ನಡೆಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.

    ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಈ ಹೋರಾಟದಲ್ಲಿ ಕನ್ಹೇರಿ ಸ್ವಾಮಿಜಿ ಮುಂಚೂಣಿ ವಹಿಸಿಕೊಂಡಿದ್ದರೆ, ಇತರೆ ಸ್ವಾಮೀಜಿಗಳು ಕೊಂಕು ಹೇಳುತ್ತಿದ್ದಾರೆ. ಮಠಗಳಿಗೆ ದಾನ ನೀಡುವವರು ಹಿಂದೂಗಳು, ಮುಸ್ಲಿಂರಲ್ಲ. ಮುಸ್ಲಿಂರೆಲ್ಲ ಸ್ವಾಮೀಜಿಗಳಿಗೆ ನಮಸ್ಕಾರ ಮಾಡಲ್ಲ ಎಂದರು.

    ಕೇಂದ್ರ ಸಚಿವೆ ಕರಂದ್ಲಾಜೆ (Shobha Karandlaje), ನಾನು ಇತರರು ಸೇರಿ ಅಹೋರಾತ್ರಿ ಹೋರಾಟ ಮಾಡುತ್ತೇವೆ. ವಕ್ಫ್ ಹೋಗುವವರೆಗೂ ಹೋರಾಟ ನಿಲ್ಲಲ್ಲ, ಇದು ಕೂಡ ಚರ್ಚೆಗೆ ಗ್ರಾಸವಾಗಲಿದೆ. ಮುಂದೆ ರಾಜ್ಯದಲ್ಲಿ ನಮ್ಮದೇ ಕಾಂಬಿನೇಷನ್ ನಾಯಕತ್ವ ಎಂದರು.ಇದನ್ನೂ ಓದಿ: ಮೈಸೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ – ಕೇಸ್ ದಾಖಲು

    ದೇಶದಲ್ಲಿ ವಕ್ಫ್ ವಿರುದ್ಧ ಹೋರಾಟ ಆರಂಭವಾಗಿದ್ದೇ ವಿಜಯಪುರದ (Vijayapura) ಪವಿತ್ರ ಭೂಮಿಯಿಂದ. ವಕ್ಫ್ ಕರಾಳ ಶಾಸನದ ಅನುಭವ ಆಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟದ ಅವಶ್ಯಕತೆಯಿದೆ. ಎಲ್ಲರೂ ಗಟ್ಟಿಯಾದರೆ ರೈತರ ಜಮೀನು, ಮಠಗಳು ಉಳಿಯುತ್ತವೆ. ಯಾರ ಪಹಣಿಯೂ ಸಿಗದಂತೆ ಸರ್ವರ್ ಡೌನ್ ಮಾಡಿದ್ದಾರೆ. ಇದರಿಂದ ಸರ್ಕಾರವೇ ಡೌನ್ ಆಗಲಿದೆ. ಜನರೇ ಬುತ್ತಿ ಕಟ್ಟಿಕೊಂಡು ಹೋರಾಟ ಮಾಡೋಣ. ಮುಂದೆ ಧರ್ಮಯುದ್ಧ ಆಗುತ್ತದೆ. ಎಲ್ಲರೂ ಹೋರಾಟದಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಿದರು.

    ನಮ್ಮ ದೇವರ ಕೈಯಲ್ಲಿ ಅಸ್ತ್ರಗಳು ಇವೆ. ಶಿವನ ಕೈಯ್ಯಲ್ಲಿ ಏನಿದೆ? ಚಾಮುಂಡಿ ಕೈಯ್ಯಲ್ಲಿ ಏನಿದೆ? ಬಾಂಗ್ಲಾದಲ್ಲಿ ಹಿಂದೂ ಸರ್ಕಾರಿ ನೌಕರರು ರಾಜೀನಾಮೆ ತೆಗೆದುಕೊಳ್ಳುತ್ತಿದ್ದಾರೆ. ನ.3 ರಂದು ದೆಹಲಿಯಲ್ಲಿ ಮುಸ್ಲಿಂ ಮೌಲ್ವಿಗಳು ಸಭೆ ನಡೆಸಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ. ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರಿಗೂ ಮೋದಿ ಅವರು ಜಾರಿಗೆ ತರುವ ಕಾಯ್ದೆಯನ್ನು ಬೆಂಬಲಿಸಬಾರದು. ಆಂಧ್ರದಲ್ಲಿ ಐದು ಲಕ್ಷ ಜನರು ಸೇರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಪಾರ್ಟಿಷನ್ ಆಫ್ ಪಾಕಿಸ್ತಾನ ಎಂಬ ಪುಸ್ತಕ ಅಂಬೇಡ್ಕರ್ ಬರೆದಿದ್ದರು. ಭಾರತ ಪಾಕಿಸ್ತಾನ ವಿಭಜನೆ ಬೇಡ ಎಂದಿದ್ದರು. ವಿಭಜನೆ ಮಾಡಿದರೆ ಪಾಕಿಸ್ತಾನದ ಹಿಂದೂಗಳನ್ನು ಇಲ್ಲಿಗೆ ಇಲ್ಲಿರುವ ಮುಸ್ಲಿಂಮರನ್ನು ಪಾಕಿಸ್ತಾನಕ್ಕೆ ರವಾನೆ ಮಾಡಬೇಕೆಂದು ಹೇಳಿದ್ದರು ಎಂದು ತಿಳಿಸಿದರು.

    ಜಮೀರ್ ಖಬರಸ್ಥಾನ್ ಹರಾ ರಂಗ್ ಎನ್ನುತ್ತಾರೆ ಎಂದು ಜಮೀರ್ ಮಾತನಾಡುವ ರೀತಿಯನ್ನು ಮಿಮಿಕ್ರಿ ಮಾಡಿದರು. ಸಿಎಂ ಭೇಟಿಗೆ ಹೋಗಿದ್ದಾಗ ಜಮೀರ್ ಮತ್ತು ನನ್ನ ಮಧ್ಯೆ ವಾಗ್ವಾದ ಆಯ್ತು. ಖಬರಸ್ಥಾನ್‌ಗೆ ಹಸಿರು ಬಣ್ಣ ಹಾಕಬೇಕೆಂದು ಜಮೀರ್ ಹೇಳ್ತಾರೆ. ಸೈತಾನ್‌ಗೆ ಅದು ಕಾಣಿಸಬೇಕೆಂದು ಹೇಳುತ್ತಾರೆ. ಖಾವಿ ಹಾಕಿದವರು ನಾವೇ ಸೈತಾನಗಳಾ? ರಾಜ್ಯದಲ್ಲಿ ಒಂದು ಲಕ್ಷ ಎಕರೆ ಭೂಮಿ ಮಾತ್ರ ಇದೆ ಎನ್ನುತ್ತಾರೆ. ಆದರೆ ಜಮೀರ್ ಐದು ಲಕ್ಷಕ್ಕೂ ಅಧಿಕ ಜಮೀನು ಕಬಳಿಸಲು ಮುಂದಾಗಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಜನ್ನತ್ ಕುರಿತು ಮುಸ್ಲಿಂ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ದೇಶ, ಧರ್ಮ ದೊಡ್ಡದು ನಂತರ ನಮ್ಮ ಪಾರ್ಟಿ. ದೇಶ ಉಳಿದರೆ ಎಲ್ಲ ಉಳಿದಂತೆ. ದೇಶಕ್ಕಿಂತ ಕುರಾನ್ ದೊಡ್ಡದು ಎಂದು ಮುಸ್ಲಿಂಮರು ಹೇಳುತ್ತಾರೆ. ಆದರೆ ನಾವು ಸಂವಿಧಾನ ದೊಡ್ಡದು ಎನ್ನುತ್ತೇವೆ. ನಮ್ಮ ಜಿಲ್ಲೆಯಲ್ಲಿ ಶಂಶುದ್ದೀನ್ ಪಟೇಲ್ ಎಂಬ ಮಂತ್ರಿ ಇದ್ದಾನೆ. ಹಾವೇರಿಯಲ್ಲಿ ಮುಗ್ದ ಮುಸ್ಲಿಂ ಮೇಲೆ ಹಿಂದೂಗಳು ಹಲ್ಲೆ ಮಾಡಿದರು ಎಂದು ಹೇಳಿದ್ದಾನೆ ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಉತ್ತಮ ಗಾಳಿ ಇರುವ ಟಾಪ್ 10 ಸಿಟಿಗಳಲ್ಲಿ ಚನ್ನರಾಯಪಟ್ಟಣ ನಂ.1!

  • ಉಡುಪಿಯಲ್ಲಿ ಸುಲ್ತಾನಪುರ ಎಂದು ಒಂದು ಹಳ್ಳಿಯನ್ನೆ ನಿರ್ಮಾಣ ಮಾಡಿದ್ದಾರೆ: ಶೋಭಾ ಕರಂದ್ಲಾಜೆ

    ಉಡುಪಿಯಲ್ಲಿ ಸುಲ್ತಾನಪುರ ಎಂದು ಒಂದು ಹಳ್ಳಿಯನ್ನೆ ನಿರ್ಮಾಣ ಮಾಡಿದ್ದಾರೆ: ಶೋಭಾ ಕರಂದ್ಲಾಜೆ

    ವಿಜಯಪುರ: ಉಡುಪಿಯಲ್ಲಿ (Udupi) ಸುಲ್ತಾನಪುರ ಎಂದು ಒಂದು ಹಳ್ಳಿಯನ್ನೆ ನಿರ್ಮಾಣ ಮಾಡಿದ್ದಾರೆ. ಇದು ಖಂಡನೀಯ ಎಂದು ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಶಾಂಕ ಆಪ್‌ನಲ್ಲಿ ಹಿಂದೂ ಹಳ್ಳಿ ಸುಲ್ತಾನಪುರ ಎಂದು ಕಾಣಿಸುತ್ತಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಏನು ಮಾಡುವುದಕ್ಕೆ ಹೊರಟಿದೆಯೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಪಟಾಕಿ ನಿಷೇಧ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದೆ: ದೆಹಲಿ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ ಕೋರ್ಟ್‌

    1974ರ ವಕ್ಫ್ ನೋಟಿಫಿಕೇಶನ್ ರದ್ದಾಗಬೇಕು. ಇದಕ್ಕಾಗಿ ಬಿಜೆಪಿ ಸುಮ್ಮನಿರಲ್ಲ, ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲಿ ನೋಡಿದರೂ ವಕ್ಫ್ ಆಸ್ತಿ ಎಂದೇ ಆಗಿ ಬಿಟ್ಟಿದೆ. ವಕ್ಫ್ ಆಸ್ತಿ (Waqf Board) ವಿವಾದ ಇದು ಕಾಂಗ್ರೆಸ್ ನಡೆಸುತ್ತಿರುವ ಲ್ಯಾಂಡ್ ಟೆರರಿಸಂ, ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

    ಹಿಂದೂ ದೇವಾಲಯಗಳು, ಮಠಗಳು, ರೈತ ಜಮೀನು ಒಂದು ಉಳಿದಿಲ್ಲ. ಇದರ ವಿರುದ್ಧ ವಿಜಯಪುರದಿಂದಲೇ ನಾನು ವಕ್ಫ್ ಹೋರಾಟ ಪ್ರಾರಂಭಿಸುತ್ತಿದ್ದೇನೆ. ಇಂದು ರೈತರೊಂದಿಗೆ ಹೋರಾಟದಲ್ಲಿ ಭಾಗಿಯಾಗುತ್ತೇನೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಅವಧಿಯ ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್‌ ವಿವಾದ ಮತ್ತೆ ಮುನ್ನೆಲೆಗೆ – ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಯುವತಿ ಅರೆಸ್ಟ್‌

  • Waqf Land Row | ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌

    Waqf Land Row | ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌

    – ನೋಟಿಸ್ ಹಿಂಪಡೆಯುವಂತೆ ಸಂಸದ ರಮೇಶ್‌ ಜಿಗಜಿಣಗಿ ಆಗ್ರಹ

    ವಿಜಯಪುರ: ಸ್ಮಾರಕಗಳೂ ಸೇರಿದಂತೆ ವಿಜಯಪುರ (Vijayapura) ಜಿಲ್ಲೆಯ 43 ಪ್ರವಾಸಿ ತಾಣಗಳು (Tourist Place) ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಇತ್ತೀಚೆಗಷ್ಟೇ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಭೂಮಿ ವಕ್ಫ್‌ ಆಸ್ತಿ ಎಂದು ಮಂಡಳಿ ಹೊನವಾಡ ಗ್ರಾಮದ 15 ರೈತರಿಗೆ ವಕ್ಫ್‌ ಮಂಡಳಿ (Waqf Board) ನೋಟಿಸ್ ನೀಡಿತ್ತು. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಕಳೆದ ಒಂದು ದಿನದ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ವಿಜಯಪುರದಲ್ಲಿ ಪ್ರವಾಸಿ ತಾಣಗಳಿಗೆ ನೋಟಿಸ್‌ ನೀಡಿರುವುದು ಬೆಳಕಿಗೆ ಬಂದಿದೆ.

    ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌ ನೀಡಿದ್ದು, ಇದಕ್ಕೆ ಸಂಸದ ರಮೇಶ್‌ ಜಿಗಜಿಣಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ

    ಪ್ರವಾಸಿ ತಾಣಗಳು, ಸ್ಮಾರಕಗಳಿಗೆ ನೀಡಿರುವ ವಕ್ಫ್‌ ನೋಟಿಸ್‌ಗಳನ್ನು ಹಿಂಪಡೆಯುವಂತೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

  • ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಅಂತೀವಿ – ಜಮೀರ್

    ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಅಂತೀವಿ – ಜಮೀರ್

    ವಿಜಯಪುರ: ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಎನ್ನುತ್ತೇವೆ ಎಂದು ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ (Zameer Ahmed) ಕಿಡಿಕಾರಿದ್ದಾರೆ.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿಯನ್ನು (Waqf Board) ಅಲ್ಲಾನ ಆಸ್ತಿ ಎನ್ನುತ್ತೇವೆ. ಅದು ದಾನಿಗಳು ದಾನ ಮಾಡಿರುವ ಆಸ್ತಿ, ಯಾರೂ ಸರ್ಕಾರದಿಂದ ಕೊಟ್ಟಿರುವುದಲ್ಲ. ಬಿಜೆಪಿಯವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಇಷ್ಟು ದಿನ ಮುಡಾದ ಬಗ್ಗೆ ಮಾತನಾಡಿದರು. ಅದರಲ್ಲಿ ಏನೂ ಎಲ್ಲ ಎಂದು ಗೊತ್ತಾದ ಮೇಲೆ ಈಗ ವಕ್ಫ್‌ನ್ನು ಹಿಡಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮೂರು ಕಡೆ ಉಪಚುನಾವಣೆ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಚುನಾವಣೆ ಇದೆ. ಆದ್ದರಿಂದ ರಾಜಕೀಯ ಗಿಮಿಕ್‌ಗೋಸ್ಕರ ಸುಮ್ಮನೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ: ವಕ್ಫ್ ನೋಟಿಸ್ ಅನ್ನೋದೆ ಕಾನೂನು ಬಾಹಿರ: ಸಿ.ಟಿ ರವಿ

    ಜಿಲ್ಲೆಯ ಹೊನವಾಡದಲ್ಲಿ (Honawad) ಕೇವಲ 11 ಎಕರೆ ಮಾತ್ರ ಇದೆ. ಅಲ್ಲಿ 1,200 ಎಕರೆ ಇದೆ ಎಂದು ಹೇಳಿದ್ದಾರೆ. ವಕ್ಫ್ ವಿಚಾರದಲ್ಲಿ ಬಿಜೆಪಿಯವರು ಅನವಶ್ಯಕ ಗೊಂದಲ ಸೃಷ್ಟಿ ಮಾಡಿದ್ದಾರೆ. ಅಲ್ಲಿ ಯಾರಿಗೂ ನಾವು ನೋಟಿಸ್ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲೂ ವಕ್ಫ್ ಆಸ್ತಿ ಅತಿಕ್ರಮಿಸಿದ ಸಾವಿರಾರು ಜನರಿಗೆ ನೋಟಿಸ್ ನೀಡಿದೆ. ವಕ್ಫ್‌ನಲ್ಲಿ ಒಂದು ಇಂಚು ಸರ್ಕಾರದ ಆಸ್ತಿ ಇಲ್ಲ. ವಕ್ಫ್ ಆಸ್ತಿ ಸಾಕಷ್ಟು ಒತ್ತುವರಿಯಾಗಿದೆ. ಅದನ್ನು ಸರಿಪಡಿಸುವ ಕೆಲಸ ನಾನು ಮಾಡುತ್ತಿದ್ದೇನೆ ಎಂದರು.

    ಗೋಲಗುಂಬಜ್ ಅವರಿಗೆ ಬಿಟ್ಟು ಕೊಟ್ಟಿದ್ದೇವೆ. ಅದನ್ನು ಕೇಂದ್ರದವರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಅದಕ್ಕೆ ಬಿಟ್ಟುಕೊಟ್ಟಿದ್ದೇವೆ. ವಕ್ಫ್ ಆಸ್ತಿಯನ್ನ 90% ನಷ್ಟು ಮುಸ್ಲಿಮರೇ ಒತ್ತುವರಿ ಮಾಡಿಕೊಂಡಿದ್ದಾರೆ. ಆ ಆಸ್ತಿಯನ್ನ ಮರಳಿ ಪಡೆಯುವ ಕೆಲಸ ಮಾಡುತ್ತೇನೆ. ಒತ್ತುವರಿ ಮಾಡಿರುವವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಸಿದ್ದರಾಮಯ್ಯ ನಿಮ್ಮ ನಾಲಗೆ ಹದ್ದುಬಸ್ತಿನಲ್ಲಿಡಿ: ಜೋಶಿ ಕಿಡಿ

  • ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ವಿಜಯೇಂದ್ರನನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೀಬೇಕು: ಯತ್ನಾಳ್

    ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ವಿಜಯೇಂದ್ರನನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೀಬೇಕು: ಯತ್ನಾಳ್

    – ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಸಾವಿರಾರು ಕೋಟಿ ದುಡ್ಡು ತಿಂದಿದ್ದಾರೆ ಎಂದ ಶಾಸಕ

    ವಿಜಯಪುರ: ಬಿಎಸ್‌ವೈ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ತಿಂದಿದ್ದಾರೆ. ಈ ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನ (BY Vijayendra) ತೆರವುಗೊಳಿಸಬೇಕು. ಬಿ.ಎಸ್ ಯಡಿಯೂರಪ್ಪ (BS Yediyurappa) ಅವರನ್ನ ಯಾವುದೇ ವೇದಿಕೆಗಳಲ್ಲಿ ಕೂರಿಸಬಾರದು ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಬಾಂಬ್ ಸಿಡಿಸಿದ್ದಾರೆ.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನನ್ನನ್ನು ಸ್ಟಾರ್ ಮಾಡುವ ಅವಶ್ಯಕತೆಯಿಲ್ಲ. ಈ ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ. ನೀವು ಹೀರೋ ಆಗಬೇಕು ಅಂದರೆ ಖರ್ಚು ಮಾಡಿ. `ಬಿಜೆಪಿ ಕರ್ನಾಟಕ’ ಎಂದು ಒಂದು ಎಕ್ಸ್ ಖಾತೆ ಇದೆ. ಅದನ್ನು `ಬಿವೈವಿ ಕರ್ನಾಟಕ’ ಮಾಡಿದರೆ ಒಳ್ಳೆಯದು. ಯಾಕಂದರೆ ಅದರಲ್ಲಿ ಯಡಿಯೂರಪ್ಪನವರ ಗುಣಗಾನ ಬಿಟ್ಟರೆ ಏನು ಇಲ್ಲ. ಅಭ್ಯರ್ಥಿಗಳಿಗೆ ಹಿಂದೂಗಳ ವೋಟು ಎಂದು ಕರೆಯಲಿ ಆದರೆ ಸಾಬ್ರೂ ನಿಮಗೆ ವೋಟು ಹಾಕುತ್ತಾರೆ ಎಂದು ಮಾತ್ರ ಹೇಳಬೇಡಿ ಎಂದರು.ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ

    ಬಿಎಸ್‌ವೈ ಸಿಎಂ ಇದ್ದಾಗ ಮಂತ್ರಿಯಾಗು ಎಂದಿದ್ದರು ಆದರೆ ನಾನು ಆಗಿರಲಿಲ್ಲ. ಅವರು ಸಿಎಂ ಇದ್ದಾಗ ಸಾಕಷ್ಟು 1,000 ಕೋಟಿ ರೂ. ಹಣ ತಿಂದಿದ್ದಾರೆ. ಭ್ರಷ್ಟ ಸಿಎಂ ಮಂತ್ರಿಮAಡಲದಲ್ಲಿ ನಾನು ಇರಲ್ಲ ಎಂದು ತಿರಸ್ಕರಿಸಿದ್ದೇನೆ. ಪ್ರತಿ ನಿತ್ಯ ಅಪ್ಪ, ಮಗ ನಡ್ಡಾ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ತೆಗೆಯಿರಿ. ವಿಜಯೇಂದ್ರನನ್ನು ಸಿಎಂ ಮಾಡಿ ಎಂದು ಗೋಳಾಡುತ್ತಾರೆ ಎಂದು ವ್ಯಂಗ್ಯವಾಡಿದರು.

    ಶಕ್ತಿ ಯೋಜನೆ ಪರಿಷ್ಕರಣೆ ವಿಚಾರ:
    ಸಿದ್ದರಾಮಯ್ಯ (CM Siddaramaiah) ಸರ್ಕಾರದ ಗ್ಯಾರಂಟಿ ಮುಗಿದಿದೆ. ಇನ್ನಾರು ತಿಂಗಳಲ್ಲಿ ನೌಕಕರಿಗೆ ಕೊಡಲು ಹಣವಿರುವುದಿಲ್ಲ. ರಾಮಲಿಂಗಾರೆಡ್ಡಿ (Ramalinga Reddy) ಅವರು ಸಾರಿಗೆ ಇಲಾಖೆ ಲಾಭದಲ್ಲಿದೆ ಎಂದು ಹೇಳುತ್ತಾರೆ. ಎಲ್ಲಿದೆ? ಸುಮ್ಮನೇ ಬೋಗಸ್ ಯೋಜನೆಗಳನ್ನು ಘೋಷಣೆ ಮಾಡಬೇಡಿ. ನಿಮ್ಮ ಬಜೆಟ್ ಎಷ್ಟಿದೆ? ಅಷ್ಟನ್ನು ಮಾತ್ರ ಘೋಷಣೆ ಮಾಡಿ. ಇಲ್ಲವಾದರೆ ಜನರು ಹೊಡಿಯುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ದೀಪಾವಳಿ ಆಚರಣೆ ವೇಳೆ ಎರಡು ಗುಂಪಿನ ನಡುವೆ ಘರ್ಷಣೆ- ಒಂದೇ ಕುಟುಂಬದ ಮೂವರು ಬಲಿ

  • ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ – ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

    ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ – ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

    – ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗಲು ಬಿಡಬಾರದು ಎಂದ ಶಾಸಕ

    ವಿಜಯಪುರ: ವಕ್ಫ್ ಬೋರ್ಡ್‌ನಿಂದ (Waqf Board ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನ ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ (Basangouda Patil Yatnal)  ಪ್ರಧಾನಿ ಮೋದಿಗೆ (Narendra Modi) ಪತ್ರ ಬರೆದಿದ್ದಾರೆ.

    ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ. ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ ಎಂದು ಪತ್ರದಲ್ಲಿ ಶಾಸಕರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗುವುದಕ್ಕೆ ನಾವು ಬಿಡಬಾರದು. ಅದಕ್ಕಾಗಿ ನಾನು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

    ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ಬುದ್ನಿ ಎಂಬುವವರು ಕಳೆದ ವರ್ಷ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು!

    ಉಪ್ಪಿನಬೆಟಗೇರಿ ಗ್ರಾಮದ ಅನೇಕ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಹೆಸರು ಉಲ್ಲೇಖಿಸಲಾಗಿತ್ತು. ಇದಕ್ಕಾಗಿ ರೈತರು ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದಾಗಿ ಕೃಷ್ಣಪ್ಪ ಪ್ರಧಾನಿ ಮೋದಿ ಗಮನಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ ಮುಗಿಸಿ ಹಿಂತಿರುಗುವ ವೇಳೆ ಕಾರು ಡಿಕ್ಕಿ- ತಂದೆ, ಮಗಳು ಸಾವು
    ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಹಾಗೂ ಯಾವ ಮಾನದಂಡದ ಮೇಲೆ ಹೀಗೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿ ಕೃಷ್ಣಪ್ಪ ಪತ್ರ ಬರೆದಿದ್ದರು. 2023ರ ನ.28ರಂದು ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಡಿ.2ರಂದು ಪತ್ರ ಪ್ರಧಾನಿ ಕಚೇರಿ ತಲುಪಿದ್ದು, ಡಿ.8ರಂದು ಕೃಷ್ಣಪ್ಪಗೆ ಪಿಎಂ ಕಚೇರಿಯಿಂದ ಕರೆ ಬಂದಿತ್ತು. ಪತ್ರ ಬರೆದು, ದೂರು ಕೊಡುತ್ತಿರುವುದು ನೀವೆನಾ? ಎಂದು ಸಿಬ್ಬಂದಿ ಪ್ರಶ್ನಿಸಿ, ಖಚಿತಪಡಿಸಿಕೊಂಡಿದ್ದರು. ಜೊತೆಗೆ ನಿಮ್ಮ ದೂರು ಪ್ರಧಾನಿಗಳ ಗಮನಕ್ಕೆ ತರುವುದಾಗಿ ಸಿಬ್ಬಂದಿ ತಿಳಿಸಿದ್ದರು.  ಇದನ್ನೂ ಓದಿ: Canada | ಗಾಯಕ ಎಪಿ ಧಿಲ್ಲೋನ್ ಮನೆ ಎದುರು ಗುಂಡು ಹಾರಿಸಿದ್ದ ವಿಡಿಯೋ ವೈರಲ್
  • 130 ಇದ್ದ ಬಿಯರ್‌ ಬಾಟಲ್‌ ಬೆಲೆ 270 ರೂ. ಆಗಿದೆ – ಹೆಚ್‌. ವಿಶ್ವನಾಥ್‌

    130 ಇದ್ದ ಬಿಯರ್‌ ಬಾಟಲ್‌ ಬೆಲೆ 270 ರೂ. ಆಗಿದೆ – ಹೆಚ್‌. ವಿಶ್ವನಾಥ್‌

    ವಿಜಯಪುರ: 130 ರೂ. ಇದ್ದ ಬಿಯರ್‌ ಬಾಟಲ್‌ ಬೆಲೆ 270 ರೂ.ಗಳಿಗೆ ಏರಿಕೆಯಾಗಿದೆ. ಗಂಡನಿಗೆ ಕುಡಿಸಿ ಹೆಂಡತಿಗೆ ಗ್ಯಾರಂಟಿ ಕೊಡುವುದಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಎಂಎಲ್‌ಸಿ ಹೆಚ್.ವಿಶ್ವನಾಥ್‌ (H.Vishwanath) ವಾಗ್ದಾಳಿ ನಡೆಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ (Congress) ಗ್ಯಾರಂಟಿ ವಿಚಾರವಾಗಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕಾಗಿ 1 ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡಬಹುದಿತ್ತು. ಉಚಿತ ಆರೋಗ್ಯ ತಪಾಸಣೆ ಕೊಡಬಹುದಿತ್ತು. ತೋಚಿದ್ದನ್ನು ಮಾಡಿದ್ದಾರೆ. ಅದು ಜನರಿಗೆ ಬೇಕಾ? ಬೇಡವಾ? ಎಂಬುವುದನ್ನು ಯೋಚಿಸಿಲ್ಲ. ಒಂದು ಬಿಯರ್ ಬಾಟಲು 130 ರೂ. ಇದ್ದಿದ್ದು 270 ರೂ. ಆಗಿದೆ. ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ಗ್ಯಾರಂಟಿ ಕೊಡುವುದಾ? ನಿಮಗೆ ಗ್ಯಾರಂಟಿ ಕೇಳಿದ್ದು ಯಾರು? ಎಂದು ಗುಡುಗಿದರು.ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಜಟಾಪಟಿ – 1,000, 300 ರೂ. ಪಾಸ್‌ ಮಾರಾಟಕ್ಕೆ ಮರುಚಾಲನೆ

    ನಾನು ರಾತ್ರಿ 11:30ರವರೆಗೂ ಸಿದ್ದರಾಮಯ್ಯನವರಿಗೆ ಕಾದು ಹೇಳಿದ್ದೆ. ಒಂದು ಸಂಸಾರಕ್ಕೆ ಏನು ಸಮಸ್ಯೆ ಇದೆ? ಎನ್ನುವುದನ್ನು ತಿಳಿದು ಮೊದಲು ಅದನ್ನು ಬಗೆಹರಿಸಬೇಕಿದೆ. ದೇವರಾಜ ಅರಸು ಅಕ್ಕಿ ಕೊಡಲಿಲ್ಲ. ಅಕ್ಕಿ ಬೆಳೆಯುವ ಭೂಮಿ ಕೊಟ್ಟಿದ್ದರು. ಸಿದ್ದರಾಮಯ್ಯನವರ ಈ ಗ್ಯಾರಂಟಿ ಯೋಜನೆಯ ನಿರ್ಣಯ ಒಳ್ಳೆಯದಲ್ಲ ಎಂದರು.

    ಕನ್ನಡ ರಾಜ್ಯೋತ್ಸವವನ್ನು ಸರ್ಕಾರ 50 ವರ್ಷದ ಸುವರ್ಣ ಮಹೋತ್ಸವ ಎಂದು ಕಾರ್ಯಕ್ರಮ ಮಾಡಲು ಹೊರಟಿರುವುದು ಸಂತೋಷವಾಗಿದೆ. ಕನ್ನಡ ವಿಚಾರವಾಗಿ ಬರೀ ಭಾಷಣ ಮಾಡಿಕೊಂಡು ಹೊರಟಿದ್ದಾಗಿದೆ. ಕನ್ನಡದ ಬಗೆಗಿನ ಸಾರ್ಥಕತೆ, ಅದರ ಬಗ್ಗೆ ಧೈರ್ಯವಾಗಿ ಹೇಳುವುದು ಆಗಲಿಲ್ಲ. ಕರ್ನಾಟಕ ರಾಜ್ಯ ಸರ್ಕಾರ ಕನ್ನಡವನ್ನು ಆಡಳಿತ ಭಾಷೆಯಾಗಿ ಮಾಡುತ್ತೇವೆ ಎಂದು ವಿಧಾನಸಭೆಯಲ್ಲಿ ಸರ್ವಾನು ಮತದಿಂದ ನಿರ್ಣಯ ಮಾಡಿ ರಾಷ್ಟ್ರಾಧ್ಯಕ್ಷರಿಗೆ ಕಳಿಸಿದ್ದರು. ಆದರೆ ಅವರು ಸ್ಪಷ್ಟನೆ ಕೇಳಿದರು. ಈ ವಿಚಾರವಾಗಿ ಏನಾಯಿತು ಎಂಬುದು ಇನ್ನೂ ತಿಳಿಸಿಲ್ಲ ಎಂದು ಅಸಮಾಧಾನ ಹೊರಹಾಕಿದರು.

    ಇನ್ನೂ ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಯಲ್ಲಿ ಕನ್ನಡ ಕಡ್ಡಾಯ ಮಾಡಬೇಕು. ಆದಿಲ್ ಶಾಹಿ ಆಡಳಿತ ಮಾಡಿದ್ದ ಈ ಜಾಗದಲ್ಲಿ ಮುಸ್ಲಿಂರು ಸಹಿತ ಕನ್ನಡ ಚೆನ್ನಾಗಿ ಮಾತನಾಡುತ್ತಿದ್ದರು. ಕನ್ನಡದ ವಿಚಾರವಾಗಿ ಸುಮ್ಮನೆ ಮಾತನಾಡುತ್ತಾರೆ. ರಾಜ್ಯೋತ್ಸವಕ್ಕೆ ಬರೀ ಡಂಗುರ ಇರುತ್ತದೆ. ಆದರೆ ಕೃತಿಯಲ್ಲಿ ಯಾವುದೂ ಆಗಲ್ಲ. ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಆಡಳಿತ ಭಾಷೆಯಾಗಿ ಕನ್ನಡ ಜಾರಿ ಮಾಡುವುದನ್ನು ಉಳಿಸಿಕೊಳ್ಳಿ ಎಂದು ಹೇಳುತ್ತೇನೆ. ಒಂದರಿಂದ ಐದನೇ ತರಗತಿವರೆಗೆ ಕನ್ನಡ ಜಾರಿ ಮಾಡಿ ಎಂದು ಸಿಎಂ ಹಾಗೂ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: 2200ಕ್ಕೂ ಅಧಿಕ ಪೊಲೀಸರ ನಿಯೋಜನೆ!

  • ವಿಜಯಪುರ ವಕ್ಫ್ ವಿವಾದ – ರೈತರ ಹೋರಾಟಕ್ಕೆ ಜಯ, ನೋಟಿಸ್ ಹಿಂಪಡೆದ ಜಿಲ್ಲಾಡಳಿತ

    ವಿಜಯಪುರ ವಕ್ಫ್ ವಿವಾದ – ರೈತರ ಹೋರಾಟಕ್ಕೆ ಜಯ, ನೋಟಿಸ್ ಹಿಂಪಡೆದ ಜಿಲ್ಲಾಡಳಿತ

    – 44 ರೈತರ ಇಂದೀಕರಣ ರದ್ದು

    ವಿಜಯಪುರ: ವಕ್ಫ್ ವಿವಾದದ (Waqf Board) ವಿಚಾರವಾಗಿ ಕರಾಳ ದೀಪಾವಳಿ ಆಚರಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ (Farmers) ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ರೈತರಿಗೆ ನೀಡಿದ್ದ ನೋಟಿಸ್ (Notice) ಅನ್ನು ಜಿಲ್ಲಾಡಳಿತ (District Administration) ಹಿಂಪಡೆದಿದೆ.

    ವಕ್ಫ್ ದಂಗಲ್ ವಿಚಾರವಾಗಿ ವಿಜಯಪುರ ರೈತರು ನೋಟಿಸ್ ಹಿಂಪಡೆಯುವಂತೆ ಕರಾಳ ದೀಪಾವಳಿ ಆಚರಿಸುತ್ತಿದ್ದರು. ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿಸಿ ಭೂಬಾಲನ್ ರೈತರ ಸಮಸ್ಯೆ ಆಲಿಸಿ ಪಹಣಿಯಲ್ಲಿನ ವಕ್ಫ್ ಹೆಸರು ತೆಗೆಯೋದಾಗಿ ಭರವಸೆ ನೀಡಿದ್ದು, ಈಗಾಗಲೇ ಇಂಡಿ ತಾಲೂಕಿನ 41 ರೈತರ ಜಮೀನು ಇಂದೀಕರಣ ರದ್ದು ಮಾಡಿದ್ದೇವೆ ಎಂದರು. ಇದನ್ನೂ ಓದಿ: ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ

    ನೋಟಿಸ್ ಹಿಂಪಡೆದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿ, ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದಿದ್ದು, 44 ರೈತರ ಇಂದೀಕರಣ ರದ್ದು ಮಾಡಿದ್ದೇವೆ. ಇನ್ನು ಮುಂದೆ ನೋಟಿಸ್ ನೀಡಲ್ಲ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ರೈತರ ದಾಖಲಾತಿ ಸರಿ ಪಡೆಸಲು ಟಾಸ್ಕ್‌ಫೋರ್ಸ್ ಇದೆ. ಈಗಾಗಲೇ ಟಾಸ್ಕ್‌ಫೋರ್ಸ್ ಕೆಲಸ ಶುರು ಮಾಡಿದೆ. ಉಳುಮೆ ಮಾಡುವ ರೈತರ ಫೈಲ್‌ಗಳನ್ನು ನಾವೇ ರೆಡಿ ಮಾಡಿ, ವಕ್ಫ್ ಬೋರ್ಡ್‌ನಿಂದ ಕೈ ಬಿಡಲು ನಾವೇ ಅಹವಾಲು ಇಡುತ್ತೇವೆ. ರೈತರು ಗಾಭರಿಯಾಗಬೇಡಿ. ಆತಂಕ ಪಡದೆ ದೀಪಾವಳಿ ಆಚರಿಸಿ ಎಂದು ತಿಳಿಸಿದ್ದಾರೆ. ನೋಟಿಸ್ ವಾಪಸ್ ಪಡೆಯುತ್ತಲೇ ರೈತರು ಹೋರಾಟ ಹಿಂಪಡೆದಿದ್ದಾರೆ. ಇದನ್ನೂ ಓದಿ: ಬ್ರಿಟನ್‌ ಕಿಂಗ್ ಚಾರ್ಲ್ಸ್ ದಂಪತಿಯಿಂದ ಬೆಂಗಳೂರಿಗೆ 4 ದಿನದ ರಹಸ್ಯ ಭೇಟಿ – ಇಂದು ವಾಪಸ್

  • ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

    ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

    – ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ರೈತರು

    ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ನಡೆಸಿದ್ದು, ಯಶಸ್ವಿಯಾಗಿ ಮುಂದುವರಿದಿದೆ.

    ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಎದುರೇ ಠಿಕಾಣಿ ಹೂಡಿರುವ ರೈತರು ರಾತ್ರಿಯಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.

    ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದರೆ, ವಿಜಯಪುರ ರೈತರು ಕರಾಳ ದೀಪಾವಳಿ ಆಚರಿಸುತ್ತಿದ್ದಾರೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರೈತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಇದನ್ನೂ ಓದಿ: ಇಂದು ಬೆಳಗ್ಗೆ 10:30ಕ್ಕೆ ದರ್ಶನ್‌ ಜಾಮೀನು ಭವಿಷ್ಯ ಪ್ರಕಟ

    ನಗರದ ಗಾಂಧಿಚೌಕ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ ಅಹ್ಮದ್ ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಯೇ ಅಡುಗೆ, ಊಟ ಮಾಡಿ ಅಲ್ಲಿಯೇ ಮಲಗಿ ಅಹೋರಾತ್ರಿ ಅನಿರ್ದಿಷ್ಟ ಹೋರಾಟ ಪ್ರಾರಂಭಿಸಿದ್ದಾರೆ.

    ರಾಜ್ಯ ಸರ್ಕಾರ ಕೇವಲ ಯಾವುದೋ ಒಂದು ಆದೇಶ ಪ್ರತಿ ತೋರಿಸಿ ನಮ್ಮನ್ನ ಯಾಮಾರಿಸಲು ಸಾಧ್ಯವಿಲ್ಲ. ಎಲ್ಲಿಯವರೆಗೂ ರೈತರ ಪಹಣಿಯಲ್ಲಿರುವ ವಕ್ಫ್ ಬೋರ್ಡ್ ಹೆಸರು ತೆಗೆದು ಹಾಕುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಸಿದ್ದಾರೆ.

    ಸರ್ಕಾರ ಈ ಹೋರಾಟಕ್ಕೆ ಜಗ್ಗದಿದ್ದರೆ ಶವಸಂಸ್ಕಾರ, ತಿಥಿ ಕಾರ್ಯಕ್ರಮ, ಕತ್ತೆ ಚಳವಳಿ ಸೇರಿದಂತೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅನ್ನದಾತರ ಪಾಲಿಗೆ ಈ ಬಾರಿ ರಾಜ್ಯ ಸರ್ಕಾರ ಕರಾಳ ದೀಪಾವಳಿಯನ್ನು ಉಡುಗೊರೆಯಾಗಿ ನೀಡಿದೆ. ಇನ್ನೂ ಸ್ಥಳಕ್ಕೆ ಇಂದು (ಅ.30) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡುವಂತೆ ರೈತರು ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ. ಇದು ಅನ್ನದಾತರ ಹೋರಾಟ. ಇದಕ್ಕೆ ಯಾರೇ ಬೆಂಬಲ ನೀಡಿದರು ನಾವು ಸ್ವಾಗತ ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.

    ಈ ಹೋರಾಟವನ್ನು ಕೈಬಿಡಲು ರಾತ್ರೋರಾತ್ರಿ ಎಡಿಸಿ ಸೋಮಲಿಂಗ ಗೆಣ್ಣೂರ ಬಂದು ರೈತರಿಗೆ ಇಂಡಿ ಎಸಿ ಆದೇಶದ ಕಾಪಿ ತೋರಿಸಿ ಹೋರಾಟ ಕೈ ಬಿಡಲು ಮನವಿ ಮಾಡಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಸೇರಿದಂತೆ ಪೊಲೀಸ್ ಸಿಬ್ಬಂದಿ ರೈತರಿಗೆ ಹೋರಾಟ ಕೈಬಿಡಲು ಒತ್ತಾಯಿಸಿದರು. ಆದರೆ ರೈತರು ಇದ್ಯಾವುದಕ್ಕೂ ಒಪ್ಪಲಿಲ್ಲ. ಡಿಸಿ ಕಚೇರಿ ಎದುರು ಸ್ಥಳ ಖಾಲಿ ಮಾಡಿ ನಿಮಗೆ ಬೇರೆ ಜಾಗ ಕೊಡುತ್ತೇವೆ ಅಲ್ಲಿ ಹೋರಾಟ ಮುಂದುವರೆಸಿ ಎಂದು ತಿಳಿಸಿದರು. ಪೊಲೀಸ್ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟು, ರೈತರು ಇಂದು (ಬುಧವಾರ) ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 30-10-2024

  • ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಮುಸ್ಲಿಂ: ಜಮೀರ್ ಅಹ್ಮದ್

    ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಮುಸ್ಲಿಂ: ಜಮೀರ್ ಅಹ್ಮದ್

    – ನಾವು ಅನ್ನದಾತರ ಆಸ್ತಿ ಮುಟ್ಟೋಕೆ ಸಾಧ್ಯನಾ?

    ಹುಬ್ಬಳ್ಳಿ: ಮುಜರಾಯಿ ವಕ್ಫ್ ಎರಡೂ ಒಂದೇ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ. ಅಲ್ಲಾ ನಮ್ಮ ನಂಬಿಕೆ, ಜೋಶಿ ಏನಾದರೂ ಹೇಳಲಿ. ನಾನು ಮೊದಲು ಹಿಂದೂಸ್ತಾನಿ. ಆಮೇಲೆ ಮುಸ್ಲಿಂ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಆಸ್ತಿಗೆ ನಾವು ನೋಟಿಸ್ ಕೊಟ್ಟಿದ್ದೇವೆ. ಬೇರೆಯವರ ಆಸ್ತಿ ತೆಗೆದುಕೊಳ್ಳಲು ನಾವು ಯಾರು? ರೈತರು ಅನ್ನದಾತರು, ನಾವು ಅವರ ಆಸ್ತಿ ಮುಟ್ಟೋದಕ್ಕೆ ಸಾಧ್ಯನಾ? ವಕ್ಫ್ ಆಸ್ತಿ 1.12 ಲಕ್ಷ ಎಕರೆ ಇದೆ. ನಮ್ಮ ಬಳಿ ದಾಖಲೆ ಇದೆ. ಮುಜರಾಯಿ ವಕ್ಫ್ ಎರಡೂ ಒಂದೇ ಆಗಿದೆ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ ಎಂದು ಹೇಳಿದರು. ಇದನ್ನೂ ಓದಿ: ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ ಹೃದಯಾಘಾತದಿಂದ ಸಾವು

    ಬಿಜೆಪಿಯವರು (BJP) ಈ ತರಹ ರಾಜಕಾರಣ ಮಾಡಬಾರದು. ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ ಅವರು ನಾಲಾಯಕ್. ನಾವು ಜಾತಿ ನೋಡಿದ್ರೆ ನಿರ್ನಾಮ ಆಗುತ್ತೇವೆ. ಬಿಜೆಪಿಯವರ ಕಾಲದಲ್ಲಿ ನೋಟಿಸ್ ಕೊಟ್ಟಿದ್ದಾರೆ. ನಾನು ಅದಕ್ಕೆ ದಾಖಲೆ ಕೊಡುತ್ತೇನೆ. ಇದಕ್ಕೆ ಮಾನ್ಯ ಯತ್ನಾಳ್ ಏನು ಹೇಳುತ್ತಾರೆ? ಮುಜರಾಯಿ ಇಲಾಖೆ ಆಸ್ತಿ ಕೂಡಾ ಒತ್ತುವರಿ ಆಗಿದೆ. ಅದನ್ನು ಉಳಿಸೋಣ ನಡೀರಿ. ನನಗೆ ಹಿಂದೂ ಬ್ರದರ್ಸ್ ಮತ ಕೊಟ್ಟಿದ್ದಾರೆ. ನನಗೆ ಎಲ್ಲ ಸಮಾಜ ಒಂದೇ. ಎಲ್ಲ ಸಮಾಜವನ್ನು ಜೊತೆಗೆ ತೆಗೆದುಕೊಂಡು ಹೋಗುವವರೇ ರಾಜಕಾರಣಿ ಎಂದರು. ಇದನ್ನೂ ಓದಿ: ತುಮಕೂರು| ಅಂತಾರಾಜ್ಯ ಕಳ್ಳನ ಬಂಧನ – 42 ಬೈಕ್ ಜಪ್ತಿ
    ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಇಲ್ಲವೇ ಇಲ್ಲ. ಇರೋದು ಕೇವಲ 12 ಎಕರೆ. ಅಲ್ಲಿ 11 ಎಕರೆ ಸ್ಮಶಾನ ಇದೆ. ನಾವು ಒಂದಿಂಚೂ ಜಾಗ ತೆಗೆದುಕೊಂಡಿಲ್ಲ. ನಮಗೆ 1.12 ಲಕ್ಷ ಎಕರೆ ದಾನ ಮಾಡಿದ್ದಾರೆ. ನಾನು 11 ಜಿಲ್ಲೆಯಲ್ಲಿ ವಕ್ಫ್ ಅದಾಲತ್ ಮಾಡಿದ್ದೇನೆ. ಅಧಿಕಾರಿಗಳ ಸಭೆ ಮಾಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಸಭೆ ಮಾಡಿದಾಗ ಯತ್ನಾಳ್‌ಗೆ ಆಹ್ವಾನ ಕೊಟ್ಟಿದ್ದೆವು. ರೈತರಿಗೆ ಅನ್ಯಾಯ ಆದ್ರೆ ಯತ್ನಾಳ್ ಯಾಕೆ ಸಭೆಗೆ ಬರಲಿಲ್ಲ? ರೈತರ ಆಸ್ತಿ ತೆಗೆದುಕೊಳ್ಳಲು ಸಾಧ್ಯನಾ? ಅಧಿಕಾರಿಗಳು ಅಷ್ಟು ಸುಲಭವಾಗಿ ಮಾಡ್ತಾರಾ? ರೈತರ ಆಸ್ತಿಯನ್ನು ಮುಟ್ಟೋಕೆ ಆಗಿಲ್ಲ. ಇದೊಂದು ರಾಜಕೀಯ ಪಿತೂರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬೆಂಗಳೂರಿನ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲೂ ರಾಜಕೀಯ – ಜಯನಗರಕ್ಕಿಲ್ಲ ಫಂಡ್; ಆಕ್ರೋಶ