Tag: ವಿಜಯಪುರ

  • ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ – ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಮುಕ್ತಾಯ

    ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ – ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಮುಕ್ತಾಯ

    ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ (Raft) ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ.

    ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್ ಶವಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿತ್ತು. ಇಂದು 30 ಜನ ಸಿಬ್ಬಂದಿ ಹಾಗೂ ಐದು ಬೋಟ್‌ಗಳ ಸಹಾಯದಿಂದ ಶೋಧಕಾರ್ಯ ಪ್ರಾರಂಭಿಸಿದ್ದು, ರಫೀಕ್ ಆಲಮೇಲ (40) ಹಾಗೂ ಮೆಹಬೂಬ್ ವಾಲಿಕಾರ್ (35) ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ

    ಜುಲೈ 2ರ ಮಂಗಳವಾರ ಸಂಜೆ 4:30ರ ಸುಮಾರಿಗೆ ಘಟನೆ ನಡೆದಿತ್ತು. ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಏಳು ಜನ ನೀರುಪಾಲಾಗಿದ್ದರು. ಈ ಪೈಕಿ ಓರ್ವ ಈಜಿ ದಡ ಸೇರಿದ್ದರೆ ಮತ್ತೊರ್ವನನ್ನು ರಕ್ಷಣೆ ಮಾಡಲಾಗಿತ್ತು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

  • ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು – ಓರ್ವನ ಮೃತದೇಹ ಪತ್ತೆ

    ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು – ಓರ್ವನ ಮೃತದೇಹ ಪತ್ತೆ

    ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ ಮುಗುಚಿ ಜನರು ನೀರುಪಾಲಾಗಿರುವ ದುರ್ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ಕಾರ್ಯಾಚರಣೆ ವೇಳೆ ಓರ್ವನ ಮೃತದೇಹ ಪತ್ತೆಯಾಗಿದೆ.

    ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಆರು ಮಂದಿ ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

    ನದಿ ಆಚೆಯ ನಡುಗಡ್ಡೆಗೆ ತೆರಳಿ ವಾಪಸ್‌ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಕೊಲ್ಹಾರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್‌ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

  • ಬರೋಬ್ಬರಿ 18 ಲಕ್ಷಕ್ಕೆ ವಿಜಯಪುರದ ಎತ್ತು ಮಾರಾಟ

    ಬರೋಬ್ಬರಿ 18 ಲಕ್ಷಕ್ಕೆ ವಿಜಯಪುರದ ಎತ್ತು ಮಾರಾಟ

    ವಿಜಯಪುರ: ದಾಖಲೆ ಪ್ರಮಾಣದ ಮೊತ್ತಕ್ಕೆ ಎತ್ತು (Ox) ಮಾರಾಟವಾದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಒಂದೇ ಎತ್ತು 18 ಲಕ್ಷ 1 ಸಾವಿರ ರೂ.ಗೆ ಮಾರಾಟವಾಗಿದೆ.

    ಜಾನುವಾರು ಮಾರಾಟದ ವಿಚಾರದಲ್ಲಿ ದಾಖಲೆ ಮೊತ್ತಕ್ಕೆ ಮಾರಾಟವಾದ ಎತ್ತು ಇದಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಗ್ರಾಮದ ರಾಮನಗೌಡ ಪಾಟೀಲ್ ಎಂಬವರ ಎತ್ತು ಈ ದಾಖಲೆ ಬರೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದು ಶಾಸಕರು: ನರೇಂದ್ರಸ್ವಾಮಿ

    ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಿಟ್ನಾಳ ಗ್ರಾಮದ ಸದಾಶಿವ ಎಂಬವರು ಎತ್ತನ್ನು ಖರೀದಿಸಿದ್ದಾರೆ. ಎಲ್ಲರೂ ಹುಬ್ಬೇರಿಸೋ ಮೊತ್ತಕ್ಕೆ ಎತ್ತು ಮಾರಾಟವಾಗಿದ್ದು, ತೆರ ಬಂಡಿ ಎಳೆಯುವುದರಲ್ಲಿ ಈ ಎತ್ತು ಪ್ರಸಿದ್ಧಿಯಾಗಿತ್ತು. ಇದನ್ನೂ ಓದಿ: ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಉತ್ತರ ಕರ್ನಾಟಕ ಭಾಗದಲ್ಲಿ ತೆರಬಂಡಿ ಸ್ಪರ್ಧೆಯಲ್ಲಿ ಅನೇಕ ಬಹುಮಾನಗಳನ್ನು ಈ ಎತ್ತು ತಂದುಕೊಟ್ಟಿದೆ. ಹಿಂದೂಸ್ಥಾನ ಹೆಚ್‌ಪಿ ಎಂಬ ಹೆಸರಿನಿಂದ ಮಾಲೀಕರು ಈ ಎತ್ತನ್ನು ಕರೆಯುತ್ತಿದ್ದರು. ಇಲ್ಲಿವರೆಗೆ ಈ ಎತ್ತು 40 ಗ್ರಾಂ ಚಿನ್ನ, ಎರಡು ಬೆಳ್ಳಿ ಗದೆ, 4 ಬೈಕ್ ಗೆದ್ದುಕೊಟ್ಟಿದೆ. ಇದನ್ನೂ ಓದಿ: ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಐದೂವರೆ ಅಡಿ ಎತ್ತರವಿರೋ ಎತ್ತಿಗೆ ಮನೆಯವರು ನಿತ್ಯ ಪೌಷ್ಟಿಕಾಂಶ ಆಹಾರ ನೀಡುತ್ತಿದ್ದರು. ಹಾಲು, ದವಸ, ಧಾನ್ಯ ಆಹಾರವಾಗಿ ನೀಡುತ್ತಿದ್ದರು. ಈ ಎತ್ತು ದಾಖಲೆ ಮೊತ್ತಕ್ಕೆ ಮಾರಾಟವಾಗಿದ್ದು ವಿಜಯಪುರ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಬೀದರ್‌ | ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಬಂದ್‌

  • ದರ್ಶನ್ ಕೇಸ್‌ನಲ್ಲಿ ನನ್ನ ಪಾತ್ರ ಇಲ್ಲ: ಜಮೀರ್

    ದರ್ಶನ್ ಕೇಸ್‌ನಲ್ಲಿ ನನ್ನ ಪಾತ್ರ ಇಲ್ಲ: ಜಮೀರ್

    ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ (Renukaswamy Murder Case) ದರ್ಶನ್ (Darshan) ಜೈಲುಪಾಲಾದ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ (Zameer Ahmed Khan) ಪ್ರತಿಕ್ರಿಯಿಸಿದ್ದು, ದರ್ಶನ್ ಕೇಸಲ್ಲಿ ನನ್ನ ಪಾತ್ರ ಇಲ್ಲ. ನಾನು ಯಾರಿಗೂ ಒತ್ತಡ ಹಾಕಲು ಹೋಗಿಲ್ಲ ಎಂದಿದ್ದಾರೆ.

    ಈ ಕುರಿತು ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನಾನೇ ಒತ್ತಡ ಹಾಕಿದ್ದು ಎನ್ನುವ ರೀತಿಯಲ್ಲಿ ಸುದ್ದಿ ಬಂತು. ಯಾರು ಹೆಸರು ಹೇಳಿಲ್ಲ, ಪರೋಕ್ಷವಾಗಿ ನಾನೇ ಸಪೋರ್ಟ್ ಮಾಡಿದ್ದೆ ಎನ್ನುವ ಹಾಗೇ ಇತ್ತು. ನಾನು ದರ್ಶನ್ ಸ್ನೇಹಿತರು, ಇಲ್ಲ ಅಂತ ಅಲ್ಲ. ಆದರೆ ಈ ರೀತಿ ಮಾಡಿದಾಗ ಯಾರು ಸಪೋರ್ಟ್ ಮಾಡುತ್ತಾರೆ. ಅವರ ಜೊತೆ ಯಾರು ನಿಲ್ಲುತ್ತಾರೆ ಹೇಳಿ ಎಂದರು. ಇದನ್ನೂ ಓದಿ: ಡಾ.ಸೂರಜ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲು

    ಯಾರು ಮಾಡಿದರೂ ತಪ್ಪು ತಪ್ಪೇ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ದರ್ಶನ್ ಇರಲಿ, ಯಾರೇ ಇರಲಿ ಇದು ತಪ್ಪು. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಇನ್ನು ಕಾಂಗ್ರೆಸ್ ಶಾಸಕ ಸಮರ್ಥನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಅವರ ಅಭಿಪ್ರಾಯ. ನಾನು ನನ್ನ ಅಭಿಪ್ರಾಯ ಹೇಳಿದ್ದೀನಿ. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

  • ಮೃತ ನವಜಾತ ಶಿಶುವನ್ನು ಮನೆಯ ಬಳಿ ಇಟ್ಟು ದುಷ್ಟರು ಪರಾರಿ

    ಮೃತ ನವಜಾತ ಶಿಶುವನ್ನು ಮನೆಯ ಬಳಿ ಇಟ್ಟು ದುಷ್ಟರು ಪರಾರಿ

    ವಿಜಯಪುರ: ನವಜಾತ ಶಿಶುವನ್ನು ಮನೆಯ ಬಳಿ ಇಟ್ಟು ದುಷ್ಟರು ಪರಾರಿಯಾದ ಘಟನೆ ವಿಜಯಪುರ (Vijayapura) ಚಾಲುಕ್ಯನಗರದಲ್ಲಿ ನಡೆದಿದೆ.

    ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ ಪೊಲೀಸ್ (BG Police) ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ಮಗುವನ್ನಿಟ್ಟು ಎಸ್ಕೇಪ್ ಆಗಿದ್ದಾರೆ. ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗುವನ್ನು ಇಟ್ಟು ಪರಾರಿಯಾಗಿದ್ದಾರೆ.

    ಮೃತಪಟ್ಟಿರುವ ಗಂಡು ಮಗು ಇದಾಗಿದ್ದು, ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಕಂಡುಬಂದಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?

    ಮನೆಯಲ್ಲಿ ಬಾಡಿಗೆ ಇರುವ ವಿದ್ಯಾರ್ಥಿನಿಯರು (Students) ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪತಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ಮಧ್ಯಪ್ರದೇಶ ಹೈಕೋರ್ಟ್‌

  • ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್

    ವಿಜಯೇಂದ್ರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಲಿ, ನಾನು ರಾಜ್ಯಾಧ್ಯಕ್ಷ ಆಗ್ತೀನಿ: ಯತ್ನಾಳ್

    – ಸಕ್ಕರೆ ಸಚಿವರ ಹಗರಣ ಶೀಘ್ರವೇ ಬಯಲಿಗೆ ಬರುತ್ತೆ: ಬಿಜೆಪಿ ಶಾಸಕ ಹೊಸ ಬಾಂಬ್‌

    ವಿಜಯಪುರ: ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ (Basanagouda Patil Yatnal) ತಿಳಿಸಿದರು.

    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಅಗುವಂತೆ ಮನವೊಲಿಕೆ ಯತ್ನ ವಿಚಾರವಾಗಿ ವಿಜಯಪುರದಲ್ಲಿ (Vijayapura) ಯತ್ನಾಳ್ ಪ್ರತಿಕ್ರಿಯಿಸಿ, ಅಂಥ ಪ್ರಯತ್ನಗಳು ನಡೆಯುತ್ತವೆ. ನಾನು ಕಾಂಪಿಟೇಟರ್ ಇದ್ದೇನೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವುದಾಗಿ ನನಗೆ ಹೇಳಿದರು. ವಿಜಯೇಂದ್ರನೇ (Vijayendra) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ – ಜೆಡಿಎಸ್ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ: ವಿಜಯೇಂದ್ರ

    ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿಕೆಶಿ ಅಥವಾ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುವ ಸಾಧ್ಯತೆ ಕುರಿತು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ಚುನಾವಣಾ ಆಯೋಗ ಕೆಲ ಕಾಯ್ದೆಗಳನ್ನ ಮಾರ್ಪಾಡು ಮಾಡಬೇಕು. ಒಂದು ಕ್ಷೇತ್ರದಲ್ಲಿ ಸಂಸದ, ಶಾಸಕರಾಗಿದ್ದವರು ಮತ್ತೊಂದು ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ಕುರಿತು ಹೊಸ ಕಾನೂನು ಜಾರಿ ಮಾಡಬೇಕೆಂದು ಒತ್ತಾಯಿಸಿದರು.

    ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೂ ಕೂಡ ಬಾಗಲಕೋಟೆ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಹೇಳಲಾಗಿತ್ತು. ನಾನು ಸ್ಪರ್ಧೆ ಮಾಡಲಿಲ್ಲ. ಒಂದು ಕ್ಷೇತ್ರದಲ್ಲಿ ಶಾಸಕರಾಗಿದ್ದವರು, ಸಚಿವರಾಗಿದ್ದರೂ ಕೂಡ ಉಪ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವಂತಾಗಬಾರದು. ಈ ನಿಟ್ಟಿನಲ್ಲಿಯೂ ಕೂಡ ಕಾನೂನು ಜಾರಿಯಾಗಬೇಕು. ಉಪ ಚುನಾವಣೆ ನಡೆಯುವುದರಿಂದ ನೀತಿ ಸಂಹಿತೆ ಎರಡು ತಿಂಗಳು ಜಾರಿಯಲ್ಲಿರುತ್ತದೆ. ಇದರಿಂದ ಅಭಿವೃದ್ಧಿ ಕೆಲಸ ಕಾಮಗಾರಿಗಳು ಆಗಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹಾವೇರಿಯಲ್ಲಿ ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ದೊಡ್ಡ ದುರಂತ!

    ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಈಗ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳು ಜೀವಂತವಾಗಿರಲು ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಬೆಲೆ ಏರಿಕೆ ಮಾಡದಿದ್ದರೆ ಸರ್ಕಾರಿ ನೌಕರರ ಸಂಬಳ‌ ನೀಡಲು ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ಕಾಂಗ್ರೆಸ್ ಸಚಿವರು‌, ಶಾಸಕರು ಅಭಿವೃದ್ಧಿಗೆ ಅನುದಾನ‌ ನೀಡುತ್ತಿಲ್ಲ ಎನ್ನುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಬೇಡವೆಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿದರೆ ಕಾಂಗ್ರೆಸ್‌ ಮೇಲೆ ಮತ್ತಷ್ಟು ಪರಿಣಾಮ ಬೀರಲಿದೆ ಎಂದು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಮದ್ಯದ ದರವನ್ನು ಏರಿಕೆ‌ ಮಾಡುತ್ತಿದ್ದಾರೆ. ಮದ್ಯದ ದರ ಏರಿಕೆ‌ ಮಾಡಿದರೆ ಮಾಡಲಿ ಎಂದರು.

    ರಾಜ್ಯ ಸರ್ಕಾರ ವ್ಯಾಪಕ‌ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಎಲ್ಲ ಮಂತ್ರಿಗಳು‌ ಲೂಟಿ ಮಾಡುತ್ತಿದ್ದಾರೆ. ಕಂದಾಯ ಸಚಿವರ ಕ್ಷೇತ್ರದಲ್ಲಿಯೇ ಇಬ್ಬರು ಸಚಿವರು ಜಮೀನು ನುಂಗುವ ಹುನ್ನಾರ ನಡೆಸಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿನ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಜಮೀನು ನುಂಗುವ ಹುನ್ನಾರ ನಡೆದಿದೆ. 20 ಎಕರೆ ಜಮೀನನ್ನು ಬೇನಾಮಿಯಾಗಿ ಕಬಳಿಸಲು ನಕಲಿ ಕಾಗದ ಪತ್ರ ಮಾಡಿ ಕಬಳಿಸಲು ಮುಂದಾಗಿದ್ದಾರೆ. ಸಕ್ಕರೆ ಸಚಿವ ಶಿವಾನಂದ‌ ಪಾಟೀಲರ ಹಗರಣ ಶೀಘ್ರವೇ ಬಯಲಿಗೆ ಬರಲಿದೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

  • ಭೀಮಾತೀರದಲ್ಲಿ ಚೆಲ್ಲಿದ ರಕ್ತ – ರೌಡಿಶೀಟರ್ ಮೇಲೆ ಗುಂಡಿನ ದಾಳಿ

    ಭೀಮಾತೀರದಲ್ಲಿ ಚೆಲ್ಲಿದ ರಕ್ತ – ರೌಡಿಶೀಟರ್ ಮೇಲೆ ಗುಂಡಿನ ದಾಳಿ

    ವಿಜಯಪುರ: ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ನಡೆದಿದೆ.

    ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದೆ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ಅಶೋಕ್ ಇತ್ತೀಚೆಗಷ್ಟೇ ಪೆರೋಲ್ ಮೇಲೆ ಆಚೆ ಬಂದಿದ್ದ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‌ಝೈಮರ್ಸ್‌ಗೆ ಹೊಸ ಮದ್ದು; ‘ಡೊನಾನೆಮಾಬ್‌’ ಔಷಧಿ ಆತಂಕದ ಮಧ್ಯೆ ಆಶಾವಾದ – ಪ್ರಯೋಜನವೇನು? ಅಪಾಯಗಳೇನು?

    ಅಶೋಕ್ ಮೇಲಿನ ಹಳೆಯ ದ್ವೇಷದಿಂದ ಕೃತ್ಯ ಎಸಗಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆಯಾಗಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗುಜರಾತ್‌ ಗಲಭೆ, ಬಾಬ್ರಿ ಮಸೀದಿ ಧ್ವಂಸದ ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿಲ್ಲ: NCERT ನಿರ್ದೇಶಕ 

  • ವಿಜಯಪುರ: ಸತತ ನಾಲ್ಕನೇ ಬಾರಿಗೆ ಗೆದ್ದು ಬೀಗಿದ ರಮೇಶ್‌ ಜಿಗಜಿಣಗಿ

    ವಿಜಯಪುರ: ಸತತ ನಾಲ್ಕನೇ ಬಾರಿಗೆ ಗೆದ್ದು ಬೀಗಿದ ರಮೇಶ್‌ ಜಿಗಜಿಣಗಿ

    ವಿಜಯಪುರ: ಬಿಜೆಪಿ ಹಾಲಿ ಸಂಸದ ರಮೇಶ್‌ ಜಿಗಜಿಣಗಿ (Ramesh Jigajinagi) ಲೋಕಸಭಾ ಚುನಾವಣೆಯಲ್ಲಿ ವಿಜಯಪುರ (Vijayapura) ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಜಯ ಸಾಧಿಸಿದ್ದಾರೆ.

    ಜಿಗಜಿಣಗಿ ಒಟ್ಟು 6,72,781 ಹಾಗೂ ಕಾಂಗ್ರೆಸ್‌ನ (Congress) ರಾಜು ಅಲಗೂರ್‌ (Raju Alagur) 5,95,552 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಬಿಜೆಪಿ ಸಂಸದ 77,229 ಮತಗಳ ಅಂತರದಿಂದ ಗೆದ್ದಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಕೈ ಹಿಡಿದ ಮಹಾದೇವಪುರ – ಸತತ 4ನೇ ಬಾರಿ ಪಿಸಿ ಮೋಹನ್‌ಗೆ ಜಯ

    ವಿಜಯಪುರ ಕ್ಷೇತ್ರ ಬಿಜೆಪಿ ಭದ್ರಕೋಟೆ. 2009 ರಿಂದ ಸತತವಾಗಿ ರಮೇಶ್‌ ಜಿಗಜಿಣಗಿ ಗೆದ್ದು ಬೀಗಿದ್ದಾರೆ. 2019 ರಲ್ಲಿ ಜೆಡಿಎಸ್‌ನ ಡಾ. ಸುನಿತಾ ಚವ್ಹಾಣ ಅವರನ್ನು 2,56,526 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.

    ಚುನಾವಣೆ ಹೊತ್ತಲ್ಲೇ ರಮೇಶ್‌ ಜಿಗಜಿಣಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: Elections Results: ಶಿವಮೊಗ್ಗದಲ್ಲಿ 4ನೇ ಬಾರಿಗೆ ರಾಘವೇಂದ್ರ ಜಯಭೇರಿ – ಠೇವಣಿ ಕಳೆದುಕೊಂಡ ಈಶ್ವರಪ್ಪ

    ಇಲ್ಲಿ ಬಿಜೆಪಿ ಪಕ್ಷದ ಪಾರುಪತ್ಯ ಮಾತ್ರ ನಡೆಯುತ್ತದೆ. ಕಾಂಗ್ರೆಸ್‌ನಲ್ಲಿ ಯಾರದೇ ಪಾರುಪತ್ಯ ಇಲ್ಲಿ ಲೆಕ್ಕಕ್ಕಿಲ್ಲ. ಕೇವಲ ಪ್ರಧಾನಿ ಅಭ್ಯರ್ಥಿ ಮೇಲೆ ಮತ ಚಲಾವಣೆ ಆಗುತ್ತೆ. ಆದ್ದರಿಂದ ಈ ಬಾರಿಗೂ ಬಿಜೆಪಿ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.

  • ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ ಪ್ರಕರಣ – ಚಾಲಕನೇ ಮಾಸ್ಟರ್ ಮೈಂಡ್

    ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ ಪ್ರಕರಣ – ಚಾಲಕನೇ ಮಾಸ್ಟರ್ ಮೈಂಡ್

    – ಐವರು ದರೋಡೆಕೋರರು ಅರೆಸ್ಟ್

    ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ಇತ್ತೀಚೆಗೆ ಕ್ಯಾಂಟರ್ ಅಡ್ಡಗಟ್ಟಿ ಚಾಲಕ ಮತ್ತು ಕ್ಲೀನರ್ ಮೇಲೆ ಹಲ್ಲೆ ನಡೆಸಿ 32 ಲಕ್ಷ ರೂ. ಹಣ ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ವಿಜಯಪುರ ಪೊಲೀಸರು (Vijayapur Police) ಬಂಧಿಸಿದ್ದಾರೆ. ಇದೀಗ ತನಿಖೆ ವೇಳೆ ದರೋಡೆಯಲ್ಲಿ ವಾಹನ ಚಾಲಕನ ಪಾತ್ರ ಇರುವುದು ಬೆಳಕಿಗೆ ಬಂದಿದೆ.

    ಬಂಧಿತ ಆರೋಪಿಗಳನ್ನು ಮಹಾಂತೇಶ್ ತಳವಾರ, ಧರೇಶ್ ದಳವಾಯಿ, ಶಿವಪ್ಪ ಮಾಶ್ಯಾಳ, ಸುನೀಲ್ ವಡ್ಡರ, ಶಿವಾನಂದ್ ದಳವಾಯಿ ಎಂದು ಗುರುತಿಸಲಾಗಿದೆ. ಆರೋಪಿಗಳು ಶನಿವಾರ (ಮೇ 18) ಕೊಲ್ಹಾರದ ಹೊರವಲಯದಲ್ಲಿ ಕ್ಯಾಂಟರ್ ವಾಹನ ತಡೆದು, ಚಾಲಕ ಮತ್ತು ಕ್ಲೀನರ್ ಮೇಲೆ ಹಲ್ಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದರು. ಇದೀಗ ವಿಚಾರಣೆ ವೇಳೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ವಾಹನ ಚಾಲಕ ಸಹ ಭಾಗಿಯಾಗಿದ್ದಾನೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮದುವೆಗೆ ಹೆಣ್ಣು ಸಿಗದೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ

    ಮೇ 18ರಂದು ಜೀವರ್ಗಿಯ ಹತ್ತಿ ವ್ಯಾಪಾರಿ ಚಂದ್ರಕಾಂತ್ ಕುಂಬಾರ ಎಂಬವರಿಗೆ ಸೇರಿದ ಹತ್ತಿಯನ್ನು ಧಾರವಾಡದಲ್ಲಿ ಮಾರಾಟ ಮಾಡಿ ವಾಪಸ್ ಹಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ದರೋಡೆ ನಡೆದಿತ್ತು. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಚಾಲಕನನ್ನು ವಿಚಾರಣೆ ನಡೆಸಿದಾಗ ದರೋಡೆಯ ಹಿಂದಿನ ಸಂಚು ಬಯಲಾಗಿದೆ.

    ಬಂಧಿತರಿಂದ ಕೃತ್ಯಕ್ಕೆ ಬಳಸಿದ ವಾಹನ, ಬಡಿಗೆ, ರಾಡ್ ಹಾಗೂ ಸುಲಿಗೆಯಾದ ಹಣದ ಪೈಕಿ 31,04,364 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮದುವೆ ಪಲ್ಲಕ್ಕಿಯಲ್ಲಿ ಹೋಗಬೇಕಿದ್ದವಳು ಶವದ ಪೆಟ್ಟಿಗೆಯಲ್ಲಿ ಹೋದಳು: ಅಪಘಾತಕ್ಕೆ ಬಲಿಯಾದ ಯುವತಿ ತಾಯಿ ಕಣ್ಣೀರು

  • ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಅರೆಸ್ಟ್‌

    ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಅರೆಸ್ಟ್‌

    ವಿಜಯಪುರ: ಅನ್ಯಕೋಮಿನ ಯುವಕನೊಬ್ಬ Youth) ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ.

    ಅನ್ಯಕೋಮಿನ ಯುವಕ ಸೋಹೇಲ್ ಹೊನಮುರಗಿಯಿಂದ ಅಪ್ರಾಪ್ತೆ (Minor Girl) ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಅಪ್ರಾಪ್ತೆಯನ್ನು ಪುಸಲಾಯಿಸಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಆರೋಪಿ ಇದೇ ತಿಂಗಳ ಮೇ 13ರಂದು ಅಪ್ರಾಪ್ತೆಯನ್ನ ಮಹಾರಾಷ್ಟ್ರಕ್ಕೆ (Maharashtra) ಕರೆದುಕೊಂಡು ಹೋಗಿದ್ದಾನೆ, ಮೇ 17ರಂದು ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಮಗಳು ನಾಲ್ಕು ದಿನಗಳಿಂದ ಮನೆಗೆ ಬಾರದಿದ್ದನ್ನು ಕಂಡು ಪೋಷಕರು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Indi Rural Police Station) ದೂರು ದಾಖಲಿಸಿದ್ದಾರೆ.

    ಪೋಷಕರು ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಸೋಹೇಲ್ ವಿರುದ್ಧ ಕಲಂ 366, 376(2) (IPC), ಮತ್ತು ಐಪಿಸಿ ಸೆಕ್ಷನ್‌ 4, 6, 12, ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ – ಬರೋಬ್ಬರಿ 5.38 ಕೋಟಿ ಸಂಗ್ರಹಿಸಿದ BMRCL