Tag: ವಿಜಯಪುರ

  • ವಿಜಯಪುರ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ

    ವಿಜಯಪುರ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ

    – ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ವಿಜಯಪುರ: ಸರ್ಕಾರಿ ಬಸ್ (Government Bus) ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ (Vijayapura)ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.

    ವಿಶ್ವನಾಥ ಶಂಕರಯ್ಯ (38) ಚಲಿಸುತ್ತಿದ್ದ ಬಸ್ ಕೆಳಗೆ ಆತ್ಮಹತ್ಯೆ ಮಾಡಿಕೊಂಡ‌ ವ್ಯಕ್ತಿ. ಬಸ್‌ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್‌ (Mobile) ಎಸೆದು ಏಕಾಏಕಿ ಬಸ್‌ ಚಕ್ರದ ಕೆಳಗೆ ಬಿದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಇದನ್ನೂ ಓದಿ: ಪತ್ನಿಯ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ – ಕೊಂದೇಬಿಟ್ಟೆನೆಂದು ಪತಿ ಆತ್ಮಹತ್ಯೆ

    ವಿಶ್ವನಾಥ ಮೂಲತಃ ಹಾಸನ‌ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದವರು. ಆದ್ರೆ ಬಸ್‌ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನ!

    ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಸ್ಥರ ಮೊಬೈಲ್ ಸಂಖ್ಯೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಂಕ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಪಟ್ಟಿ ಕನ್ನಡದಲ್ಲೂ ಇರುತ್ತೆ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ

  • ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು

    ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು

    ವಿಜಯಪುರ: ಮಹಾನಗರ ಪಾಲಿಕೆ ಮೇಯರ್‌ ಹುದ್ದೆ ಮತ್ತೆ ಕಾಂಗ್ರೆಸ್ (Congress) ಪಾಲಾಗಿದೆ. 21ನೇ ಅವಧಿಯ ಮೇಯರ್‌ ಆಗಿ ಕಾಂಗ್ರೆಸ್‌ನ ಮೆಹಜಬೀನ್ ಹೊರ್ತಿ ಆಯ್ಕೆಯಾಗಿದ್ದಾರೆ.

    ಸಾಮಾನ್ಯ ವರ್ಗಕ್ಕೆ (General Category) ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಒಟ್ಟು 22 ಮತಗಳನ್ನು ಪಡೆದು ಮೇಯರ್ ಆಗಿ ಮಹೆಜಬೀನ್ ಹೊರ್ತಿ ಆಯ್ಕೆಯಾದರು.

    10 ಕಾಂಗ್ರೆಸ್ ಸದಸ್ಯರು, ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಠೋಡ್ ಮತಗಳ ಬೆಂಬಲದೊಂದಿಗೆ ಗೆಲವು ಸಾಧಿಸಿದ್ದಾರೆ.  ಇದನ್ನೂ ಓದಿ: ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    ಬಿಜೆಪಿಯ (BJP) 17 ಸದಸ್ಯರ ಪೈಕಿ ಓರ್ವ ಬಿಜೆಪಿ ಸದಸ್ಯ ನಿಧನರಾಗಿದ್ದು, ಬಿಜೆಪಿ ಬಲ ಕುಸಿದಿತ್ತು. 16 ಸದಸ್ಯರ ಜೊತೆಗೆ ನಗರ ಶಾಸಕ ಯತ್ನಾಳ್ ಹಾಗೂ ಸಂಸದ ರಮೇಶ ಜಿಗಜಿಣಗಿ ಮತ ಸೇರಿ ಒಟ್ಟು 18 ಮತಗಳು ಮಾತ್ರ ಬಿಜೆಪಿ ಕೈಯ್ಯಲ್ಲಿತ್ತು. ಓರ್ವ ಸದಸ್ಯ ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಬಾರದು ಎಂದು ಬಿಜೆಪಿ ಮನವಿ ಮಾಡಿತ್ತು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗ್ಳೂರು, ಮಂಡ್ಯ ಸೇರಿ ರಾಜ್ಯದ 30 ಕಡೆ ದಾಳಿ

    ಉಪಮೇಯರ್ ಸ್ಥಾನ ಎಸ್‌ಟಿ ಸಮಾಜಕ್ಕೆ ಮೀಸಲಾಗಿದ್ದ ಕಾರಣ ಯಾರು ಪ್ರತಿಸ್ಪರ್ಧಿ ಇರಲಿಲ್ಲ. ಹೀಗಾಗಿ ಉಪ‌ ಮೇಯರ್ ಆಗಿ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾದರು.

    ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿಸಿ ಬಿಜೆಪಿಯ 16 ಸದಸ್ಯರು ಹಾಗೂ ನಗರ ಶಾಸಕ ಯತ್ನಾಳ್‌ ಹೊರ ನಡೆದ ಪ್ರಸಂಗ ನಡೆಯಿತು. ಇದು ಅಕ್ರಮದ ಚುನಾವಣೆಯಾಗಿದ್ದು ಸರ್ಕಾರದ ಅಣತಿಯಂತೆ ಚುನಾವಣಾಧಿಕಾರಿಗಳು ನಡೆದುಕೊಂಡಿದ್ದಾರೆ. ಈ ಚುನಾವಣೆಯ ಬಗ್ಗೆ ನಾವು ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಯತ್ನಾಳ್ ಕಿಡಿಕಾರಿದರು.

    ಸಚಿವ ಎಂಬಿ ಪಾಟೀಲ್‌ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಬಿಜೆಪಿ ಮೊದಲೇ ಸೋಲು ಒಪ್ಪಿಕೊಂಡಿತ್ತು. ಎಲ್ಲರ ಸಹಾಯದಿಂದ ಕಾಂಗ್ರೆಸ್ ಚುಕ್ಕಾಣಿ ಹಿಡಿದಿದೆ. ನಗರದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ ಎಂದು ಹೇಳಿದರು. ಗೆಲವು ಸಾಧಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆಯ ಆವರಣದಲ್ಲೇ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.‌ ಕಾಂಗ್ರೆಸ್‌ ಸದಸ್ಯರು ರಾಜಹಂಸ ಬಸ್‌ ಮೂಲಕ ಚುನಾವಣೆಗೆ ಆಗಮಿಸಿದ್ದು ವಿಶೇಷವಾಗಿತ್ತು.

     

  • ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

    ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

    ವಿಜಯಪುರ: ತನಗೆ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

    ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಅಡಿವೆಪ್ಪ ಘಾಯಿ (43) ಎಂದು ಗುರುತಿಸಲಾಗಿದೆ.

    ಮಾನಸಿಕವಾಗಿ ಮನನೊಂದು ವ್ಯಕ್ತಿ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವ್ಯಕ್ತಿ ಕಂಬಳಿಯಲ್ಲಿ ಕುಳಿತು ಪೂಜೆ ಮಾಡಿ, ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ಸೂಸೈಡ್‌ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: MBA ಓದಲು ಇಟಲಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

    ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿ ಮದ್ಯಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ.

    ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ವಿಜಯಪುರ: ಎರಡು ಸರ್ಕಾರಿ ಬಸ್‍ಗಳ (Bus) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಲ್ಲಿನ (Vijayapura) ಮದಭಾವಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಸಿಂದಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ವೇಗವಾಗಿ ಬಂದ ಎರಡು ಬಸ್‍ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿದ ಬಸ್ – ಓರ್ವ ಸಾವು, 25 ಮಂದಿ ಗಂಭೀರ

    ಡಿಕ್ಕಿಯ ರಭಸಕ್ಕೆ ಎರಡೂ ಬಸ್‍ಗಳ ಮುಂಭಾಗ ಭಾರೀ ಪ್ರಮಾಣದಲ್ಲಿ ಜಖಂ ಆಗಿದೆ. ಮುಂಭಾಗದಲ್ಲಿದ್ದವರಿಗೆ ತೀವ್ರ ಪೆಟ್ಟಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಎರಡು ಕಾರು, ಲಾರಿ ಮಧ್ಯೆ ಸರಣಿ ಅಪಘಾತ – ನಾಲ್ವರು ದುರ್ಮರಣ

  • ಭಯ ಹುಟ್ಟಿಸುವವರು ಭಯೋತ್ಪಾದಕರು: ಹರಿಪ್ರಸಾದ್ ಹೇಳಿಕೆಗೆ ಪೇಜಾವರ ಶ್ರೀ ಕೆಂಡ

    ಭಯ ಹುಟ್ಟಿಸುವವರು ಭಯೋತ್ಪಾದಕರು: ಹರಿಪ್ರಸಾದ್ ಹೇಳಿಕೆಗೆ ಪೇಜಾವರ ಶ್ರೀ ಕೆಂಡ

    ವಿಜಯಪುರ: ಯಾರು ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೆಳಿಕೆಗಳಿಂದ ಭಯ ಹುಟ್ಟಿಸುವವರು ಭಯೋತ್ಪಾದಕರು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ (B. K. Hariprasad) ವಿರುದ್ಧ ಪೇಜಾವರ ಶ್ರೀಗಳು (Pejavara shree) ಕಿಡಿಕಾರಿದ್ದಾರೆ.

    ನಗರದಲ್ಲಿ ( Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡುತ್ತಿಲ್ಲ? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ? ಕೇಳಿದ್ರೆ ಹೇಳುತ್ತೇವೆ ಎನ್ನುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂದಂತೆ ಅಲ್ಲವೇ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ ರಕ್ಷಣೆ ಮಾಡ್ತಿದ್ದಾರಾ ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ. ಇದನ್ನೂ ಓದಿ: ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಬಿ.ಕೆ.ಹರಿಪ್ರಸಾದ್‌

    ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿ ಮಾತನಾಡಬಾರದು. ಈಗ ಭಯ ಹುಟ್ಟಿದೆ, ಈಗ ಭಯೋತ್ಪಾದಕರು ಯಾರು? ಯಾರು ಹೇಳ್ತಿದ್ದಾರೋ ಅವರು ಸ್ವತಃ ಭಯೋತ್ಪಾದಕರು ಎಂದು ಆಕ್ರೋಶ ಹೊರಹಾಕಿದ್ದಾರೆ.

    ರಾಮ ಭಕ್ತರನ್ನ ಹೆದರಿಸುವ ನೆಪದಲ್ಲಿ ಇಡೀ ದೇಶವನ್ನು ಹೆದರಿಸುತ್ತಿದ್ದಾರೆ. ಕೃತ್ಯ ನಡೆದರೆ ರಾಮಭಕ್ತರ ಮೇಲಷ್ಟೇ ಅಲ್ಲ, ಎಲ್ಲರ ಮೇಲೂ ಪರಿಣಾಮ ಬೀರಲಿದೆ. ತಮಗೆ ಮಾಹಿತಿ ಇದ್ದರೆ ಅದನ್ನು ಬಹಿರಂಗಪಡಿಸಬೇಕು. ಸಂಬಂಧಪಟ್ಟವರಿಗೆ ಹೋಗಿ ಮಾಹಿತಿ ಕೊಡಬೇಕು. ಅದನ್ನು ಬಿಟ್ಟು ಹೀಗೆ ಆಗಲಿದೆ ಎಂದು ಭಯ ಹುಟ್ಟಿಸುವುದಲ್ಲ. ಇವರು ಯಾರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ? ರಾಮಭಕ್ತರಿಗೋ, ದುಷ್ಕರ್ಮಿಗಳಿಗೋ ಎಂದು ಪ್ರಶ್ನಿಸಿದ್ದಾರೆ.

    ಇನ್ನೂ ಹುಬ್ಬಳ್ಳಿ ಕರಸೇವಕನ ಬಂಧನ ಪ್ರಕರಣದ ವಿಚಾರವಾಗಿ, ತಪ್ಪು ಮಾಡಿದ್ರೆ ತಪ್ಪಿತಸ್ಥರಿದ್ದರೆ ಶಿಕ್ಷೆ ಕೊಡುವುದು ಸರಿ. ಇಂತಹ ಸಮಯ ಸಂದರ್ಭದಲ್ಲಿ ಈ ಘಟನೆ ನಡೆಯುತ್ತಿರುವಂತಹದು ಸರಿಯಲ್ಲ. ಇದು ತಪ್ಪು ಸಂದೇಶ ಕೊಡುತ್ತಿದೆ. ಹಾಗಾಗಿ ಈ ಬಗ್ಗೆ ಸರ್ಕಾರ ಜಾಗೃತವಾಗಿರಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್‌ಗೆ ಮಂಪರು ಪರೀಕ್ಷೆ ಮಾಡಿಸಬೇಕು: ಸಂಗಣ್ಣ ಕರಡಿ

  • ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

    ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

    ಬೆಂಗಳೂರು: ವಿಜಯಪುರದ (Vijapura) ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾಡಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿ ಸಿದ್ದರಾಮಯ್ಯನವರು ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ. ಆದರೆ ದೇವಿ ದರ್ಶನ ಮಾಡಲು ಸಮಯವಿಲ್ಲ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿದೆ.

    ಬಿಜೆಪಿ ಪೋಸ್ಟ್‌ನಲ್ಲಿ ಏನಿದೆ?
    ಅಲ್ಪಸಂಖ್ಯಾತರಿಗೆ (Minorities) 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ (Ram Mandir) ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು.

    ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ.

    ಸಿಎಂ ಸಿದ್ದರಾಮಯ್ಯನವರೇ ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ?

    ವಿಡಿಯೋದಲ್ಲಿ ಏನಿದೆ?
    ಸಿದ್ದರಾಮಯ್ಯ ಮತ್ತು ಎಂಬಿ ಪಾಟೀಲ್‌ ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿ ದೇವಸ್ಥಾನಕ್ಕೆ ಬಂದಿರುತ್ತಾರೆ. ದೇವಸ್ಥಾನದ ಒಳಗಡೆ ಎಂಬಿ ಪಾಟೀಲ್‌ ಹೋದ ಬಳಿಕ ಅವರು ಮುಖ್ಯಮಂತ್ರಿಗಳನ್ನು ಒಳಗೆ ಬನ್ನಿ ಎಂದು ಕರೆಯುತ್ತಾರೆ. ಇದಕ್ಕೆ ಸಿಎಂ ಬರಲ್ಲ ಎಂದು ಹೇಳುತ್ತಾರೆ. ಈ ವೇಳೆ ಎಂಬಿ ಪಾಟೀಲ್‌ ಕೈ ಮುಗಿದು ಬನ್ನಿ ಬನ್ನಿ ಎಂದು ಮನವಿ ಮಾಡುತ್ತಾರೆ. ಇದಕ್ಕೆ ಸಿದ್ದರಮಯ್ಯ ಕೈ ಸನ್ನೆಯ ಮೂಲಕ ನಾನು ಬರುವುದಿಲ್ಲ ಎಂದು ಹೇಳುತ್ತಾರೆ.

     

  • BSY ವಿರುದ್ಧ ಆರೋಪದ ನಡುವೆಯೇ ವಿಜಯಪುರಕ್ಕೆ ವಿಜಯೇಂದ್ರ ಭೇಟಿ- ಜಿಲ್ಲಾ ಬಿಜೆಪಿಯಲ್ಲಿ ಸಂಚಲನ

    BSY ವಿರುದ್ಧ ಆರೋಪದ ನಡುವೆಯೇ ವಿಜಯಪುರಕ್ಕೆ ವಿಜಯೇಂದ್ರ ಭೇಟಿ- ಜಿಲ್ಲಾ ಬಿಜೆಪಿಯಲ್ಲಿ ಸಂಚಲನ

    ವಿಜಯಪುರ: ಕಳೆದ ವಿಧಾನಸಭೆ ಚುನಾವಣೆಗೆ ಮುಂಚೆ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪಗಳ ಸುರಿಮಳೆ ಸುರಿಸಿದರು. ಬಳಿಕ ಚುನಾವಣೆ ವೇಳೆ ಯಡಿಯೂರಪ್ಪ ನಮ್ಮ ಹಿರಿಯರು ಅಂತಾ ಹೇಳಿ ಆಶ್ಚರ್ಯ ಮೂಡಿಸಿದರು. ರಾಜ್ಯ ಬಿಜೆಪಿಯ (BJP) ಚುಕ್ಕಾಣಿಯನ್ನ ವಿಜಯೇಂದ್ರ (BY Vijayendra) ಹಿಡಿಯುತ್ತಿದಂತೆ ಇದೀಗ ಮತ್ತೆ ಯತ್ನಾಳ್ ಯಡಿಯೂರಪ್ಪ (B S Yediyurappa) ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಅಂತರ್ ಯುದ್ಧದ ಮಧ್ಯೆ ವಿಜಯೇಂದ್ರ ಅವರು ಯತ್ನಾಳ್ ಅಡ್ಡಾಕ್ಕೆ ಲಗ್ಗೆ ಇಡುತ್ತಿದ್ದಾರೆ.

    ಹೌದು. ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿದ ಮೇಲೆ ಪ್ರಥಮ ಬಾರಿಗೆ ವಿಜಯಪುರ ನಗರಕ್ಕೆ ವಿಜಯೇಂದ್ರ ಪಾದಾರ್ಪಣೆ ಮಾಡುತ್ತಿದ್ದಾರೆ. ಶನಿವಾರ ವಿಜಯಪುರ ನಗರಕ್ಕೆ ವಿಜಯೇಂದ್ರ ಆಗಮಿಸುತ್ತಿದ್ದು, ನಗರದ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಲಿದ್ದಾರೆ. ಬಿಜೆಪಿ ನಾಯಕರ ಸಭೆ ನಡೆಸಿ ಜಿಲ್ಲಾ ಬಿಜೆಪಿಯ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಂತರ ನಗರದ ಆಶ್ರಮದಲ್ಲಿರುವ ಶ್ರೀ ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಲಿಂಗೈಕ್ಯದ ಹಿನ್ನೆಲೆ ನಡೆಯುತ್ತಿರುವ ಗುರುನಮನ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

    ಸಹಜವಾಗಿಯೇ ಬಿಜೆಪಿ ರಾಜ್ಯಧ್ಯಕ್ಷರ ವಿಜಯಪುರ ಭೇಟಿಯಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿದ್ರೆ, ಇನ್ನೊಂದೆಡೆ ಯತ್ನಾಳ್ ವಿರೋಧಿಗಳಲ್ಲಿ ಕುತೂಹಲ ಕೂಡ ಮೂಡಿದೆ. ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿರುವ ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ವಿಜಯೇಂದ್ರ ಘೋಷಿಸಿಸುತ್ತಾರಾ ಎಂಬ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಕೋವಿಡ್‌ ವೇಳೆ 40 ಸಾವಿರ ಕೋಟಿ ಅವ್ಯವಹಾರ, 45 ರೂ. ಮಾಸ್ಕ್‌ಗೆ 485 ರೂ. ಬಿಲ್‌: ಯತ್ನಾಳ್‌ ಬಾಂಬ್‌

    ಯತ್ನಾಳ್ ಆರೋಪ ಏನು..?: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ನಡೆದಿದೆ. ಕೊರೋನಾ ವೇಳೆ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ. ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ, ತನಿಖೆ ಮಾಡಿಸುವೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ 45 ರೂಪಾಯಿ ಮಾಸ್ಕ್‍ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್‍ಗಳ ಬಾಡಿಗೆ ಬಿಲ್‍ನಲ್ಲಿ ಬೆಡ್ ಖರೀದಿ ಮಾಡಿದ್ರೆ, ಎರಡು ಬೆಡ್ ಬರ್ತಿದ್ವು. ಒಂದು ಬೆಡ್‍ಗೆ 20 ಸಾವಿರ ಬಾಡಿಗೆ, 20 ಸಾವಿರದಲ್ಲಿ ಹೊಸ ಬೆಡ್ ಬರುತ್ತಿತ್ತು. ಮಾಸ್ಕ್, ಬೆಡ್‍ಗಳಲ್ಲಿಯು ಭ್ರಷ್ಟಾಚಾರ ನಡೆದಿದೆ ಎಂದು ಸ್ವಪಕ್ಷದ ನಾಯಕನ ವಿರುದ್ಧವೇ ಗಂಭೀರ ಆರೋಪ ಮಾಡಿದ್ದರು. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಿ ಅಥವಾ ನೋಟಿಸ್ ನೀಡಲಿ ಅವರ ಬಗ್ಗೆ ಉಚ್ಚಾಟನೆ ಮಾಡಿದ ಮರುದಿನ ಎಲ್ಲಾ ಹೇಳ್ತೀನಿ. ದಾಖಲೆ ಬಿಡುಗಡೆ ಮಾಡೋದಾಗಿ ಬಹಿರಂಗ ಸವಾಲ್ ಹಾಕಿದ್ದರು.

  • ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್

    ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್

    ವಿಜಯಪುರ: ಯತ್ನಾಳ್ (Basangouda Patil Yatnal) ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ವಿಜಯಪುರದಲ್ಲಿ  (Vijayapura) ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದು, ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ಕಿಡಿಕಾರಿದ್ದಾರೆ.

    ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ. ಅದಕ್ಕೆ ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ತಕರಾರು ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು ಎಂದು ಹರಿಹಾಯ್ದರು. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

    ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ದೂರು ಕೊಟ್ಟಿದ್ದಾರೆ. ಕಂಪ್ಲೆಂಟ್ ಕೊಟ್ಟಿದ್ದಾರೆ. ಆದರೆ ಏನೂ ನಡೆಯುತ್ತಿಲ್ಲ. ಯತ್ನಾಳ್‌ಗೆ ನೋಟಿಸ್ ಕೊಡಲಿಲ್ಲ. ಮರ್ಯಾದೆ ಹೋಗಬಾರದು ಎಂದು ಈ ಹೇಳಿಕೆ ಕೊಡುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು

  • ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶಿವಾನಂದ್ ಪಾಟೀಲ್

    ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶಿವಾನಂದ್ ಪಾಟೀಲ್

    ವಿಜಯಪುರ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ತಮ್ಮ ಹೇಳಿಕೆ ಕುರಿತು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ (Shivanand Patil) ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಹೇಳುವ ಮೂಲಕ ಸಚಿವರು ಪರೋಕ್ಷವಾಗಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ನಾನು ರೈತರ ವಿರೋಧಿ ಅಲ್ಲ, ರೈತರ ವಿರೋಧವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಮೂರು ವರ್ಷಕ್ಕೊಮೆ ರೈತರ ಬೆಳೆಗಳಿಗೆ ಬೆಲೆ ಬರುತ್ತದೆ. ಉಳಿದ ಎರಡು ಬೆಲೆ ಇಲ್ಲದೆ ಕಂಗಾಲಾಗಿರುತ್ತಾರೆ. ಹಾಗಾಗಿ ರೈತರು ಸಾಲಮನ್ನಾ ಆಗಲಿ ಎಂದು ಆಶಯ ವ್ಯಕ್ತಪಡಿಸುತ್ತಾರೆ ಎಂದಿದ್ದೇನೆ ಅಂದರು.

    ಇತ್ತೀಚೆಗೆ ಕೇಂದ್ರದ ಯೋಜನೆಗಳು ರೈತರಿಗೆ (Farmers) ಮುಳುವಾಗಿವೆ. ನನಗೆ ಮದ ಏರಿದೆ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ ಇದೆಲ್ಲ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು. ಅಲ್ಲದೆ ಬಿಜೆಪಿ ನಾಯಕರಿಗೆ ರೈತರ ಮೇಲೆ ಕರುಣೆ ಇದ್ದರೆ ಕೇಂದ್ರ ಸರ್ಕಾರದ ನೀತಿಗಳನ್ನು ಬದಲಾಯಿಸಲಿ. ವಿರೋಧ ಪಕ್ಷದ ನಾಯಕರು ರೈತರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತರಲಿ ಎಂದು ಇದೇ ವೇಳೆ ಶಿವಾನಂದ್ ಪಾಟೀಲ್ ಒತ್ತಾಯಿಸಿದರು. ಇದನ್ನೂ ಓದಿ: ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

    ಸಚಿವರು ಹೇಳಿದ್ದೇನು..?: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಆಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದರು.

    ಸಚಿವರ ಹೇಳಿಕೆ ವೈರಲ್ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ರೈತರ ಬಗ್ಗೆ ಈ ರೀತಿಯಾಗಿ ಹೇಳಿಕೆ ಕೊಟ್ಟಿರುವುದನ್ನು ಖಂಡಿಸುವುದಾಗಿ ಬಿಜೆಪಿ ನಾಯಕರು ವಾಗ್ದಾಳಿಗಳನ್ನು ನಡೆಸಿದ್ದಾರೆ.

  • ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ ಆಗ್ತಿದ್ದಾರೆ: ಯತ್ನಾಳ್ ಕಿಡಿ

    ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ ಆಗ್ತಿದ್ದಾರೆ: ಯತ್ನಾಳ್ ಕಿಡಿ

    – ಕೇಂದ್ರಕ್ಕೆ ಹೋಗಲ್ಲ ಎಂದು ಶಾಸಕರು ಸ್ಪಷ್ಟನೆ

    ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ (Hijab Ban) ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದ್ದಾರೆ.

    ಹಿಜಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದು ಎಚ್ಚರಿಸಿದರು.

    ಈ ರೀತಿ ಆದ್ರೆ ಶ್ರೀಮಂತರ ಒಳ್ಳೆಯ ಬಟ್ಟೆ, ಬಂಗಾರ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳಿಗೆ ಹೇಗೆ ಅನಿಸುತ್ತೆ, ಬೇಜಾರಾಗುತ್ತೆ. ಹಿಂದೂಗಳು ಗೋಮಾಂಸ ತಿನ್ನಬಾರದು ಅಂತಾ ಇದೆ, ಅದಕ್ಕೆ ನಾವು ತಿನ್ನಲ್ಲ. ಮುಸ್ಲಿಮರು ಹಂದಿ ತಿನ್ನಬಾರದು ಅಂತಾ ಇದೆ, ಅದಕ್ಕೆ ಅವರು ತಿನ್ನಲ್ಲ. ತಿನ್ನುವುದರ ಬಗ್ಗೆ ಯಾರೂ ಏನೂ ಹೇಳಿಲ್ಲ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ಮುಸ್ಲಿಮರ ಪುಷ್ಟೀಕರಣಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾನು ಲೋಕಸಭೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬಾಗಲಕೋಟೆಯಿಂದ ನಾನೇಕೆ ಸ್ಪರ್ಧೆ ಮಾಡಲಿ. ಅಲ್ಲಿ ಹಾಲಿ ಗದ್ದಿಗೌಡ್ರು ಇದ್ದಾರೆ, ಅನೇಕ ಸಮರ್ಥರು ಇದ್ದಾರೆ. ಬೀದರ್‍ನಿಂದ ಕೂಡ ಸ್ಪರ್ಧೆಗೆ ಇಳಿಯಲು ಕೆಲವರು ಮನವಿ ಮಾಡಲು ಬಂದಿದ್ದರು. ಅಲ್ಲೂ ಕೂಡ ಅನೇಕ ಸಮರ್ಥರಿದ್ದಾರೆ. ನಾನು ಇಲ್ಲಿಯೇ ರಾಜ್ಯದಲ್ಲಿಯೇ ಆರಾಮಾಗಿ ಇದ್ದೇನೆ. ಕೇಂದ್ರಕ್ಕೆ ಹೋಗುವ ಅವಶ್ಯಕತೆ ನನಗಿಲ್ಲ ಎಂದು ಸ್ಪಷ್ಟನೆ ನೀಡಿದರು.