Tag: ವಿಜಯಪುರ

  • ಗಸ್ತು ವೇಳೆ ಹಫ್ತಾ ಪಡೆಯೋದು ಬಿಟ್ಟಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು: ಯತ್ನಾಳ್ ಕಿಡಿ

    ಗಸ್ತು ವೇಳೆ ಹಫ್ತಾ ಪಡೆಯೋದು ಬಿಟ್ಟಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು: ಯತ್ನಾಳ್ ಕಿಡಿ

    ವಿಜಯಪುರ: ಮೈಸೂರು ಹಾಗೂ ಮಂಡ್ಯದಲ್ಲಿ (Mandya) ನಡೆದ ಹೆಣ್ಣು ಭ್ರೂಣ ಹತ್ಯೆ (Foeticide) ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆಕ್ರೋಶ ಹೊರಹಾಕಿದ್ದಾರೆ.

     

    ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಅಸಹಾಯಕ ಮಾತುಗಳನ್ನು ನಿರೀಕ್ಷಿಸರಲಿಲ್ಲ. ಗೃಹ, ಪೊಲೀಸ್ ಹಾಗೂ ಬೇಹುಗಾರಿಕೆ ಇಲಾಖೆಯ ಸಾಮೂಹಿಕ ವೈಫಲ್ಯವೇ ಭ್ರೂಣ ಹತ್ಯೆಗೆ ಕಾರಣವಾಗಿದೆ. ಈ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಭ್ರೂಣ ಹತ್ಯೆ ತಡೆಯಬಹುದಿತ್ತು ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ

    ಸೊಪ್ಪು, ಹಣ್ಣು ಮಾರುವವರನ್ನು ಎತ್ತಂಗಡಿ ಮಾಡುವುದನ್ನು ಬಿಟ್ಟು, ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು, ಕೊಟ್ಟಿರುವ ಗಸ್ತು ವಾಹನದಲ್ಲಿ ವಸೂಲಿ, ಹಫ್ತಾ ತೆಗೆಯುವುದು ಬಿಟ್ಟು, ಕಟ್ಟು ನಿಟ್ಟಾಗಿ ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು ಎಂದು ಅವರು ಕಿಡಿಕಾರಿದ್ದಾರೆ.

    ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್ ಮಾಡುತ್ತಿದ್ದರು. ಪತ್ತೆಗೆ 25ರಿಂದ 30,000 ರೂ. ಹಾಗೂ ಹತ್ಯೆಗೆ ಮತ್ತೆ 30,000 ರೂ. ಸೇರಿದಂತೆ ಒಟ್ಟು 60,000 ರೂ. ಪ್ಯಾಕೇಜ್ ರೀತಿಯಲ್ಲಿ ದಂಧೆ ನಡೆಸುತ್ತಿದ್ದರು. ಪ್ರಕರಣದಲ್ಲಿ 9 ಜನರನ್ನು ಬಂಧಿಸಲಾಗಿದ್ದು, ಇನ್ನೂ ಇಬ್ಬರು ಮಧ್ಯವರ್ತಿಗಳು ಸಿಗಬೇಕಿದೆ. ಅವರು ಸಿಕ್ಕಮೇಲೆ ಇತರೆ ಮಾಹಿತಿಗಳು ಸಿಗಬೇಕಿದೆ ಎಂದು ಮಾಹಿತಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಹಸುಗೂಸುಗಳ ಮಾರಾಟ ದಂಧೆ- ಕೊಂಡವರು, ಮಾರಾಟ ಮಾಡಿದವರ ಪತ್ತೆಗೆ ಸಿಸಿಬಿ ಶೋಧ

  • ವಿಜಯೇಂದ್ರ ನನ್ನನ್ನು ಭೇಟಿಯಾಗೋ ನಾಟಕ ಮಾಡೋದು ಬೇಡ: ಯತ್ನಾಳ್

    ವಿಜಯೇಂದ್ರ ನನ್ನನ್ನು ಭೇಟಿಯಾಗೋ ನಾಟಕ ಮಾಡೋದು ಬೇಡ: ಯತ್ನಾಳ್

    ವಿಜಯಪುರ: ಬಿಜೆಪಿಯಲ್ಲಿನ (BJP) ಆಂತರಿಕ ಬೇಗುದಿ ಮುಂದುವರಿದಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುನಿಸು ಕಂಟಿನ್ಯೂ ಆಗಿದೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ (Basanagouda Patil Yatnal), ವಿಜಯೇಂದ್ರ ಬಂದು ನನ್ನ ಭೇಟಿ ಆಗುವ ನಾಟಕ ಮಾಡುವುದು ಬೇಡ. ಎಲ್ಲ ಸರಿಯಾಗಿದೆ ಎಂದು ಹೇಳಿ ಹೋಗುವುದು ಬೇಡ. ವಿಜಯೇಂದ್ರ ಮೊದಲು ಏನೇನು ನನಗೆ ಅಡೆತಡೆ ಮಡಿದ್ದಾರೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಗೆ ಬಂದ ಅನುದಾನವನ್ನು ವಾಪಸ್ ಪಡೆದರು. ಈಗ ಸರಿ ಮಾಡೋಣ ಅಂದ್ರೆ ಆಗಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಎಲ್ಲಾ ನಿರ್ಧಾರ ಆಗುತ್ತೆ ಎಂದು ಯತ್ನಾಳ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಬಿ.ವೈ ವಿಜಯೇಂದ್ರ ಅವನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದ ಬಳಿಕ ಕೆಲವು ನಾಯಕರುಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

    ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ ವಿಜಯೇಂದ್ರ ಮಾತುಕತೆ ನಡೆಸಿದ್ದರು. ಬಳಿಕ ಮಾತಾಡಿದ ವಿಜಯೇಂದ್ರ ಅವರು, ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದಿದ್ದರು.

  • ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

    ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

    ವಿಜಯಪುರ: ಯತ್ನಾಳ್‌ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು.

    ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕದ ಯಾರಿಗಾದರೂ ವಿಪಕ್ಷ ನಾಯಕ ಸ್ಥಾನ ನೀಡಬೇಕಿತ್ತು. ಬಿಜೆಪಿ ಮೊದಲಿನಿಂದಲೂ ಪಂಚಮಸಾಲಿ ಸಮುದಾಯದ ನಾಯಕರನ್ನ ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ ಎಂದು ಬೇಸರಿಸಿದರು. ಇದನ್ನೂ ಓದಿ: ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

    ಪಂಚಮಸಾಲಿ ಹೋರಾಟದಲ್ಲಿ ಇದ್ದವರನ್ನೇ ಟಾರ್ಗೆಟ್ ಮಾಡಿದ್ದಾರೆ. ಹೋರಾಟ ವಿರೋಧಿಸಿದ ಸಮಾಜದ ಕೆಲವರೊಟ್ಟಿಗೆ ಸೇರಿ ಒಳಸಂಚು ಮಾಡಿ ಯತ್ನಾಳ್ (Basanagouda Patil Yatnal) ಅವರಿಗೆ ಸಿಗಬೇಕಿದ್ದ ವಿಪಕ್ಷ ನಾಯಕ ಸ್ಥಾನವನ್ನ ತಪ್ಪಿಸಿದ್ದಾರೆ ಎಂದು ದೂರಿದರು.

    ಬೆಳಗಾವಿ (Belagavi) ಚಳಿಗಾಲದ ಅಧಿವೇಶನದ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ‌ ನೀಡಿ. ಮೀಸಲಾತಿ ಘೋಷಿಸದಿದ್ದರೆ ಅಧಿವೇಶನದಲ್ಲಿ ಲಿಂಗ ಪೂಜೆ ಮಾಡುತ್ತೇವೆ‌. ಜಾತ್ಯತೀತ ಅಂತ ಹೇಳುವ ಸಿಎಂ‌ ಸಿದ್ದರಾಮಯ್ಯ ನಮ್ಮ‌ ಸಮುದಾಯಕ್ಕೆ ಮೀಸಲಾತಿ ನೀಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ಧರಧರನೇ ಎಳೆದೊಯ್ದು ಠಾಣೆಯಲ್ಲಿ ಕೂರಿಸಿದ್ದರು- ನೆನಪು ಮೆಲುಕು ಹಾಕಿಕೊಂಡ ಸಿಎಂ

    ತಮ್ಮ‌ ಸಮುದಾಯ ಮೀಸಲಾತಿಗೆ ಶಿಫಾರಸು ಮಾಡಿದ್ದಾರೆ. ಅದೇ ರೀತಿ ಪಂಚಮಸಾಲಿ ಸಮುದಾಯದ ಮೀಸಲಾತಿಗೂ ಶಿಫಾರಸು ಮಾಡಲಿ. ಕಾಂಗ್ರೆಸ್ (Congress) ಪಕ್ಷದಲ್ಲಿರುವ ನಮ್ಮವರು ಇದಕ್ಕೆ ಒತ್ತಾಯ ಮಾಡಿದ್ದಾರೆ ಎಂದರು.

  • ವಿಜಯಪುರ‌ದ 40 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ – ಡಿಸಿ ಮೆಚ್ಚುಗೆ

    ವಿಜಯಪುರ‌ದ 40 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ – ಡಿಸಿ ಮೆಚ್ಚುಗೆ

    ವಿಜಯಪುರ: ಪ್ರಸಕ್ತ ವರ್ಷದಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿಯು ವಿಜಯಪುರ (Vijayapura) ಜಿಲ್ಲೆಯ 40 ಸರ್ಕಾರಿ ಆಸ್ಪತ್ರೆಗಳಿಗೆ (Government Hospitals) ಲಭಿಸಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

    ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ 2015 ರಿಂದ ಕಾಯಕಲ್ಪ ಪ್ರಶಸ್ತಿ (Kayakalp Award) ನೀಡಲು ಪ್ರಾರಂಭಿಸಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆಸ್ಪತ್ರೆಗಳಿಗೆ, 2020-21ನೇ ಸಾಲಿನಲ್ಲಿ 20 ಆರೋಗ್ಯ ಸಂಸ್ಥೆಗಳಿಗೆ ಪ್ರಶಸ್ತಿ ದೊರಕಿದ್ದು, ಪ್ರಸಕ್ತ 2023ನೇ ಸಾಲಿನಲ್ಲಿ ಜಿಲ್ಲೆಯ 40 ಆರೋಗ್ಯ ಸಂಸ್ಥೆಗಳಿಗೆ ಕಾಯಕಲ್ಪ ಪ್ರಶಸ್ತಿ ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿಯಂತಹ ನಾಯಕ ದೇಶಕ್ಕೆ ಅನಿವಾರ್ಯ.. ಮತ್ತೊಮ್ಮೆ ಮೋದಿ ನಾಯಕತ್ವ ಬೇಕು ಅನ್ನೋದು ತಪ್ಪಲ್ಲ: ಮಂತ್ರಾಲಯ ಶ್ರೀ

    ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳ ವಿಭಾಗದಲ್ಲಿ ತಾಲೂಕಿನ ಬ.ಬಾಗೇವಾಡಿ ಆಸ್ಪತ್ರೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದರೆ, ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ತಿಕೋಟಾ ಅತ್ಯುತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಶಸ್ತಿಗೆ ಭಾಜನವಾಗಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಬಾಗಲಕೋಟೆ ಮತ್ತು ವಿಜಯಪುರ ಕ್ಲಸ್ಟರ್ ಮಟ್ಟದಲ್ಲಿ ದರ್ಗಾ ಅತ್ಯುತ್ತಮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಶಸ್ತಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ವಿಭಾಗದಲ್ಲಿ SC-HWC ಕಗ್ಗೋಡ ಜಿಲ್ಲೆಗೆ ಪ್ರಥಮ ಸ್ಥಾನ, ಯಂಬತ್ನಾಳ ದ್ವಿತೀಯ ಸ್ಥಾನ (ರನ್ನರ್‌ಅಪ್) ಕಾಯಕಲ್ಪ ಪ್ರಶಸ್ತಿ ಪಡೆದಿದೆ. ಇದನ್ನೂ ಓದಿ: World Cup 2023: ಸಿಕ್ಸರ್‌, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್‌

    ಜಿಲ್ಲಾ ಆಸ್ಪತ್ರೆ ವಿಭಾಗದಲ್ಲಿ ವಿಜಯಪುರ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿ ಪಡೆದಿದೆ. ತಾಲೂಕು ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ ವಿಭಾಗದಲ್ಲಿ ಬ.ಬಾಗೇವಾಡಿ ಆಸ್ಪತ್ರೆಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದರೆ, ಸಮುದಾಯ ಆರೋಗ್ಯ ಕೇಂದ್ರಗಳಾದ ಚಡಚಣ, ಕಾಳಗಿ, ತಡವಲಗಾ, ನಾಲತವಾಡ ಮತ್ತು ನಿಡಗುಂದಿ ಸಮಾಧಾನಕರ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡಿವೆ. ಇನ್ನೂ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ತಿಕೋಟಾ ಪ್ರಥಮ ಸ್ಥಾನ ಪಡೆದರೆ, ಹೂ.ಹಿಪ್ಪರಗಿ, ಮುಳವಾಡ, ರೋಣಿಹಾಳ, ತೆಲಗಿ, ಗೊಳಸಂಗಿ, ಹೊರ್ತಿ, ಇಂಚಗೇರಿ, ಲಚ್ಯಾಣ, ಚಿಕ್ಕಬೇವನೂರು, ಹೊನವಾಡ, ಹೊನ್ನೂಟಗಿ, ನಾಗಠಾಣ, ಶಿವಣಗಿ ಮತ್ತು ಇನಚಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತವೆ ಎಂದು ಹೇಳಿದ್ದಾರೆ.

    ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಬಾಗಲಕೋಟೆ, ವಿಜಯಪುರ ಕ್ಲಸ್ಟರ್ ಮಟ್ಟದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ದರ್ಗಾ ಅತ್ಯುತ್ತಮ ನ.ಪ್ರಾ.ಆ.ಕೇಂದ್ರ ಮತ್ತು ಶಾಂತಿನಗರ ಸಮಾಧಾನಕರ ಪ್ರಶಸ್ತಿ ಪಡೆದಿದೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ವಿಭಾಗದಲ್ಲಿ SC-HWC ಕಗ್ಗೋಡ ಜಿಲ್ಲೆಗೆ ಪ್ರಥಮ ಸ್ಥಾನ, ಯಂಬತ್ನಾಳ, ಇಂಗಳಗೇರಿ ಮತ್ತು ಹಿತ್ನಳ್ಳಿ ಎಲ್.ಟಿ ಕೇಂದ್ರಗಳು ರನ್ನರ್‍ಅಪ್ ಪ್ರಶಸ್ತಿ ಪಡೆದಿವೆ. ಡೋಣೂರ, ಹೆಬ್ಬಾಳ, ಯಾರನಾಳ, ಶಿರನಾಳ, ಜುಮನಾಳ, ಮಖನಾಪುರ, ಐನಾಪುರ, ಯಲಗುರ್, ರೂಡಗಿ, ಹುಳ್ಳುರ್, ಬಳಬಟ್ಟಿ ಮತ್ತು ಗಂಗನಳ್ಳಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಸಮಾಧಾನಕರ ಪ್ರಶಸ್ತಿಯನ್ನು ಪಡೆದಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 23ನೇ ವಯಸ್ಸಿಗೆ ಸಚಿನ್‌ ದಾಖಲೆ ಸರಿಗಟ್ಟಿದ ಬೆಂಗಳೂರು ಯುವಕ ರಚಿನ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿವೈಡರ್‌ನಲ್ಲಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ – ನಾಲ್ವರು ಸ್ಥಳದಲ್ಲೇ ಸಾವು

    ಡಿವೈಡರ್‌ನಲ್ಲಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ – ನಾಲ್ವರು ಸ್ಥಳದಲ್ಲೇ ಸಾವು

    ವಿಜಯಪುರ: ನಗರದ ಹೊರಭಾಗದಲ್ಲಿ ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ದುರ್ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ ಗೇಟ್ ಬಳಿಯ ಟ್ರಕ್ ಬೈಲೈನ್ ಬಳಿ ದುರ್ಘಟನೆ ನಡೆದಿದೆ. ಟ್ರಕ್ ಬೈಲ್ ಬಳಿಯ ಸರ್ವಿಸ್ ರಸ್ತೆಯ ಡಿವೈಡರ್ (Divider) ಮೇಲೆ ಕುಳಿತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದು ಪರಾರಿಯಾಗಿದೆ.

    ಘಟನೆಯಲ್ಲಿ ಶಿವಾನಂದ ಚೌಧರಿ (25), ಸುನೀಲ್ ಖಾನಾಪೂರ (26), ಈರಣ್ಣ ಕೋಲಾರ (26) ಹಾಗೂ ಪ್ರವೀಣ್ ಪಾಟೀಲ್ (30) ಮೃತಪಟ್ಟಿದ್ದಾರೆ. ಮೃತರೆಲ್ಲರೂ ವಿಜಯಪುರ ನಗರದ ವಜ್ರ ಹನುಮಾನ್ ನಗರದ ವಾಸಿಗಳು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಮಳೆ ಮುನ್ಸೂಚನೆ – ಎಲ್ಲೆಲ್ಲಿ ಜಾಸ್ತಿ ಮಳೆಯಾಗಲಿದೆ?

    ಅಪರಿಚಿತ ವಾಹನ ನಾಲ್ವರ ಮೇಲಲ್ಲದೇ ಅವರ ಬೈಕ್‌ಗಳ ಮೇಲೂ ಹರಿದಿದೆ. ಇದರಿಂದ 2 ಬೈಕ್‌ಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ವಿಜಯಪುರ (Vijaypur) ಗ್ರಾಮೀಣ ವಿಭಾಗದ ಡಿವೈಎಸ್‌ಪಿ ಗಿರಿನಲ್ಲ ತಳಕಟ್ಟಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್‌ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಇಬ್ರಾಹಿಂ ಎಲ್ಲೂ ಹೋಗಲ್ಲ, ಜೆಡಿಎಸ್‌ನಲ್ಲೇ ಇರ್ತಾರೆ: ಜಿ.ಟಿ ದೇವೇಗೌಡ

    ಸಿಎಂ ಇಬ್ರಾಹಿಂ ಎಲ್ಲೂ ಹೋಗಲ್ಲ, ಜೆಡಿಎಸ್‌ನಲ್ಲೇ ಇರ್ತಾರೆ: ಜಿ.ಟಿ ದೇವೇಗೌಡ

    ವಿಜಯಪುರ: ಸಿಎಂ ಇಬ್ರಾಹಿಂ ಜೆಡಿಎಸ್ ಬಿಡೋದಿಲ್ಲ. ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿದ್ದಾರೆ, ನೀವೆ ನೋಡಿದ್ದೀರಿ ಎಂದು ವಿಜಯಪುರದಲ್ಲಿ (Vijayapura) ಜೆಡಿಎಸ್ ಹಿರಿಯ ನಾಯಕ ಜಿ. ಟಿ ದೇವೆಗೌಡ (GT  Deve Gowda) ಹೇಳಿಕೆ ನೀಡಿದ್ದಾರೆ.

    ಸಿ.ಎಂ ಇಬ್ರಾಹಿಂ (CM Ibrahim) ಜೆಡಿಎಸ್ (JDS) ಪಕ್ಷದಿಂದ ಒಂದು ಕಾಲು ಹೊರಗಿಟ್ಟ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ ಇಬ್ರಾಹಿಂ ಅವರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಅನ್ನೋದು ಇಬ್ರಾಹಿಂ ಸಲಹೆ ಇದೆ. ದೊಡ್ಡ ಗೌಡರ ಜೊತೆಗೆ ಸಲಹೆ ಹಂಚಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು, ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಲಹೆ ಇಬ್ರಾಹಿಂ ಅವರದ್ದು. ಬಿಜೆಪಿ ಜೊತೆ ಹೋಗಲು ಯಾವುದೇ ವಿರೋಧವಿಲ್ಲ ಎಂಬ ನಿಲುವನ್ನು ಇಬ್ರಾಹಿಂ ವ್ಯಕ್ತಪಡಿಸಿದ್ದಾರೆ ಎಂದರು. ಇದನ್ನೂ ಓದಿ: ಧಾರ್ಮಿಕ ಜಿಲ್ಲೆ ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ

    ಶಾಸಕರ ಅನುದಾನ ಕಡಿತ ಹಿನ್ನೆಲೆ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಬಿ ಆರ್ ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಭೀಕರವಾದ ಬರಗಾಲದಲ್ಲೂ ಸರ್ಕಾರ ರೈತರ ಕಡೆಗೆ ನೋಡುತ್ತಿಲ್ಲ. ರೈತರಿಗೆ ನೀಡಬೇಕಾದ ಅನುದಾನ ನೀಡತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆ ಅನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಜನರಿಗೆ ಕೊರಗು ಉಂಟಾಗಿದೆ. ಕಾಂಗ್ರೆಸ್ ತಂದು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಮನದಟ್ಟಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ಇದನ್ನೂ ಓದಿ: ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

    ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಬೇಕಿದೆ. ಇದಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಹೋಗಬೇಕು. ಮುಂದೆ ನರೇಂದ್ರ ಮೋದಿ ನಾಯಕತ್ವ ದೇಶಕ್ಕೆ ಅಗತ್ಯವಾಗಿದೆ. ಅವರನ್ನು ಉಳಿಸುವ ನಿರ್ಣಯ ಮಾಡಿದ್ದೇವೆ ಎಂದರು. ಕಾಂಗ್ರೆಸ್ ಸರ್ಕಾರದ ಬದಲಾವಣೆ ಬಗ್ಗೆ ಹೆಚ್‌ಡಿಕೆ ಹೇಳಿಕೆ ವಿಚಾರಕ್ಕೆ ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ ಎಂಬ ಜಮೀರ್ ಅಹ್ಮದ್ ಹೇಳಿಕೆ ಕುರಿತು ಮಾತನಾಡಿದ ಅವರು, ಹಗಲುಕನಸು ನಾವು ಕಾಣುತ್ತಿಲ್ಲ. ರಾಜಣ್ಣ ಏನು ಹೇಳಿದ್ರು? ಲೋಕಸಭೆಯಲ್ಲಿ ಗೆಲ್ಲದೇ ಹೋದರೆ ರಾಜೀನಾಮೆ ಕೊಡಬೇಕು ಎಂದು ಅವರೇ ಹೇಳಿದ್ದು, ನಾವು ಹೇಳಿದ್ದಾ? ಕಾಂಗ್ರೆಸ್ ಶಾಸಕರೇ ಬಾಯಿ ಬಡ್ಕೋತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆಮ್ ಆದ್ಮಿಯನ್ನು ಕೊನೆಗಾಣಿಸಲು ಬಿಜೆಪಿ ಅಭಿಯಾನ ಆರಂಭಿಸಿದೆ: ಕೇಜ್ರಿವಾಲ್ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆಯ ತೀವ್ರ ಕೊರತೆ- ಹೆಚ್ಚಿನ ನೆರವು ಕೋರಿ ಕೇಂದ್ರಕ್ಕೆ ಎಂ.ಬಿ ಪಾಟೀಲ್ ಪತ್ರ

    ಮಳೆಯ ತೀವ್ರ ಕೊರತೆ- ಹೆಚ್ಚಿನ ನೆರವು ಕೋರಿ ಕೇಂದ್ರಕ್ಕೆ ಎಂ.ಬಿ ಪಾಟೀಲ್ ಪತ್ರ

    ವಿಜಯಪುರ: ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿನಲ್ಲಿ 60%ಕ್ಕಿಂತಲೂ ಹೆಚ್ಚಿನ ಮಳೆಯ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಆಧರಿಸಿ ರೈತ ಸಮುದಾಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಜಿಲ್ಲಾ ಉಸ್ತುವಾರಿ ಮತ್ತು ಭಾರೀ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (M.B Patil) ಅವರು ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡಕ್ಕೆ ಶುಕ್ರವಾರ ಪತ್ರ ಬರೆದು ಆಗ್ರಹಿಸಿದ್ದಾರೆ.

    ಸಚಿವರು ಅಮೆರಿಕ ಪ್ರವಾಸದಲ್ಲಿ ಇರುವ ಕಾರಣ ಅವರ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಬರ ಅಧ್ಯಯನ ತಂಡಕ್ಕೆ ನೀಡಲಾಯಿತು. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ತಿಕೋಟಾ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ತಾಲೂಕಿನಲ್ಲಿ ಮುಂಗಾರಿನಲ್ಲಿ ಕೇವಲ ಒಂದು ದಿನ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೆ.1ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜೊತೆಗೆ ತಾವೂ ಸಹ ವೈಯಕ್ತಿಕವಾಗಿ ಸೆ.14ರಂದು ಮುಖ್ಯಮಂತ್ರಿಗಳಿಗೆ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದು ಈ ವಿಚಾರವನ್ನು ಗಮನಕ್ಕೆ ತಂದಿದ್ದೇನೆ. ಹೀಗಾಗಿ ಕೇಂದ್ರ ತಂಡವು ಈ ವಾಸ್ತವಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ವಿವರಿಸಿದ್ದಾರೆ.  ಇದನ್ನೂ ಓದಿ: Asian Games 2023: ಜಪಾನ್‌ ಮಣಿಸಿ ಚಿನ್ನದ ಹಾರ ʻಹಾಕಿʼಕೊಂಡ ಭಾರತ – ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಗ್ರೀನ್‌ ಸಿಗ್ನಲ್‌!

    ಜಿಲ್ಲೆಯಲ್ಲಿ ರೈತರು ಉತ್ತಮ ಮಳೆಯನ್ನು ನಿರೀಕ್ಷಿಸಿ ಮೆಕ್ಕೆಜೋಳ, ಶೇಂಗಾ, ಕಡಲೆ, ಹತ್ತಿ, ತೊಗರಿ, ಸಜ್ಜೆ, ಮೆಣಸಿನಕಾಯಿ, ಕಬ್ಬು ಮತ್ತು ಅಕ್ಕಡಿ ಕಾಳುಗಳ ಬಿತ್ತನೆ ಮಾಡಿದ್ದರು. ಆದರೆ ಮಳೆ ತೀವ್ರವಾಗಿ ಕೈಕೊಟ್ಟು, ಬೆಳೆಗಳೆಲ್ಲವೂ ಮೊಳಕೆಯಲ್ಲೇ ಮುರುಟಿ ಹೋಗಿವೆ. ಕೊಳವೆ ಬಾವಿ ಮತ್ತು ತೆರೆದ ಬಾವಿಗಳು ಕೂಡ ಬತ್ತಿ ಹೋಗಿದ್ದು, ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಪರಿಸ್ಥಿತಿ ಇದೆ ಎಂದು ಅವರು ಕೇಂದ್ರ ತಂಡದ ಗಮನ ಸೆಳೆದಿದ್ದಾರೆ.

    ಜಿಲ್ಲೆಯ ಎಲ್ಲ 13 ತಾಲೂಕುಗಳಲ್ಲೂ ಈ ಬಾರಿ ಮಳೆಯ ತೀವ್ರ ಕೊರತೆ ಎದುರಾಗಿದೆ. ಇದರಿಂದಾಗಿ ರೈತರು, ಕೂಲಿ ಕಾರ್ಮಿಕರು ಮತ್ತು ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವು ಇವರೆಲ್ಲರ ನೆರವಿಗೆ ನಿಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ನೈಜ ಸ್ಥಿತಿ ಮತ್ತು ರೈತರ ಮನವಿಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗುವಂತೆ ವರದಿ ನೀಡಬೇಕು ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೋರಾಟಗಾರರದ್ದೆಲ್ಲ ದೊಡ್ಡ ರಿಯಲ್ ಎಸ್ಟೇಟ್ ದಂಧೆಗಳಿವೆ: ಯತ್ನಾಳ್ ಕಿಡಿ

    ಹೋರಾಟಗಾರರದ್ದೆಲ್ಲ ದೊಡ್ಡ ರಿಯಲ್ ಎಸ್ಟೇಟ್ ದಂಧೆಗಳಿವೆ: ಯತ್ನಾಳ್ ಕಿಡಿ

    ವಿಜಯಪುರ: ಅವರೆಲ್ಲ ಕರ್ನಾಟಕದ ಸಲುವಾಗಿ ಹೋರಾಡುತ್ತಾರೆ. ಅವರನ್ನು ಹೀರೋ ಮಾಡಬೇಕು ಎಂದು ಹೇಳುತ್ತೀರಿ. ಆದರೆ ಅವರದ್ದೆಲ್ಲ ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ದಂಧೆಗಳಿವೆ ಎಂದು ಬಿಜೆಪಿ (BJP) ನಾಯಕ ಬಸವನಗೌಡ ಪಾಟೀಲ್ (Basavanagowda Patil Yatnal) ಯತ್ನಾಳ್ ಕಿಡಿಕಾರಿದ್ದಾರೆ.

    ವಿಜಯಪುರದಲ್ಲಿ (Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟಗಾರರು ಎನಿಸಿಕೊಂಡವರು ಮಿನಿಸ್ಟರ್ ಮನೆಯಲ್ಲೇ ಇರ್ತಾರೆ. ಹೋರಾಟ ಮಾಡ್ತಿನಿ ಎಂದು ಅವರು ರಾಜಕಾರಣಿಗಳ ಮನೆಯಲ್ಲಿದ್ದರೆ ಹೇಗೆ? ಹೋರಾಟದ ಅಸ್ತಿತ್ವ ಎಲ್ಲಿ ಉಳಿದಿದೆ? ಎಂದು ಕಾವೇರಿ ಹೋರಾಟದ ವೇಳೆ ಕರವೇ ನಾಯಕ ಕೆಪಿಸಿಸಿ ಕಚೇರಿಗೆ ಹೋದ ವಿಚಾರಕ್ಕೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪತ್ರ ಬರೆದು ಬೆದರಿಕೆ ಹಾಕಿದ್ದರೆ ಪ್ರಗತಿಪರರು ಸುಮ್ಮನಾಗುತ್ತಿದ್ದರು: ಶಿವಾಜಿರಾವ್‌ ಜಾಧವ್‌ ಹೇಳಿದ್ದೇನು?

    ಕೆಲವೊಂದು ಸಂಘಟನೆಗಳು 10 ಜನರನ್ನ ಕರೆದುಕೊಂಡು ಒಂದು ಜಂಡಾ ಹಿಡಿದು ಹೋಗ್ತಾರೆ. ನೋಡಿ ಅವರೆಲ್ಲಾ ಬುಕ್ ಆಗಿದ್ದಾರೆ. ನೀವು ಮಾತ್ರ ಅವರನ್ನು ಕರ್ನಾಟಕದ ಸಲುವಾಗಿ ಹೋರಾಡುತ್ತಾರೆ. ಹೀರೋ ಮಾಡಬೇಕು ಎನ್ನುತ್ತೀರಿ. ಅವರು ಹೀರೋ ಆಗೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಹೋರಾಟಗಾರರು ಎಂದು ಹೇಳಿಕೊಂಡು ಸಿಎಂ ಮನೆಯಲ್ಲಿ, ಡಿಸಿಎಂ ಮನೆಯಲ್ಲಿ ಇರ್ತಾರೆ. ಜೈಲಿನಿಂದ ಬಂದ ಮೇಲೆ ಡಿಸಿಎಂನ್ನು ಮಾತನಾಡಿಸಲು ಹೋಗ್ತಾರೆ. ಏನು ಸ್ವಾತಂತ್ರ್ಯ ಹೋರಾಟಕ್ಕೋ ಅಥವಾ ಪಾಕಿಸ್ತಾನ ಯುದ್ಧ ಗೆದ್ದು ಬಂದವರಂತೆ ಅವರ ಮನೆಗೆ ಮಾತಾಡಿಸೋಕೆ ಹೋಗ್ತಾರೆ. ಅವರು ಜೈಲಿಗೆ ಹೋಗಿದ್ದು ಭ್ರಷ್ಟಾಚಾರದಿಂದ. ಇಂಥವರ ಮನೆಗೆ ಮಾತಾಡಲು ಹೋಗ್ತಾರೆ ಎಂದರೆ ನೈತಿಕತೆ ಎಲ್ಲಿದೆ ಎಂದು ಕೆಲವು ಹೋರಾಟಗಾರರು ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದು ಸಂಪುಟದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೂದಲು ವ್ಯಾಪಾರಕ್ಕೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ

    ಕೂದಲು ವ್ಯಾಪಾರಕ್ಕೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ

    ವಿಜಯಪುರ: ಕೂದಲು ವ್ಯಾಪಾರಕ್ಕೆ (Hair Business) ತೆರಳಿದ್ದ ಬಾಲಕನನ್ನು (Boy) ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಹಾರೋಗೇರಿಯಲ್ಲಿ ನಡೆದಿದೆ.

    ಕಾಮಪ್ಪಾ (16) ಹತ್ಯೆಯಾದ ಬಾಲಕ. ಕಳೆದ ಮೂರು ದಿನದ ಹಿಂದೆ ಹಾರೋಗೇರಿಗೆ ಕೂದಲು ಮಾರಾಟ ಮಾಡಲು ವಿಜಯಪುರದಿಂದ ಕಾಮಪ್ಪಾ ಮತ್ತು ರೋಹಿತ್ ಎಂಬ ಬಾಲಕರು ತೆರಳಿದ್ದರು. ಈ ವೇಳೆ ವ್ಯಾಪಾರಕ್ಕೆ ಹಾರೋಗೇರಿಗೆ ಬಂದಿದ್ಯಾಕೆ ಎಂದು ತಗಾದೆ ತಗೆದು ಬಡಿಗೆ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿ ಕಾಮಪ್ಪಾನನ್ನು ಹತ್ಯೆ ಮಾಡಿದ್ದಾರೆ. ನಂತರ ಕಾಮಪ್ಪಾ ಮೃತದೇಹವನ್ನು ಬಾವಿಯಲ್ಲಿ ಎಸೆದಿದ್ದಾರೆ. ಇದನ್ನೂ ಓದಿ: ಅಂತರಗಂಗೆ ಬೆಟ್ಟದಲ್ಲಿ ಪಾಕ್ ಬಾವುಟ ಹೋಲುವ ಪೇಂಟಿಂಗ್ – ಆರೋಪಿ ಅರೆಸ್ಟ್

    ಗಂಗಪ್ಪಾ ಹಾಗೂ ಅವನ ತಂದೆ ಸೇರಿದಂತೆ 15 ಜನರಿಂದ ಹಲ್ಲೆ ಹಾಗೂ ಹತ್ಯೆ ನಡೆದಿರುವ ಆರೋಪವನ್ನು ಕುಟುಂಬಸ್ಥರು ಮಾಡುತ್ತಿದ್ದಾರೆ. ಸದ್ಯ ಬಾವಿಯಲ್ಲಿ ಕಾಮಪ್ಪಾ ಮೃತ ದೇಹ ಪತ್ತೆಯಾಗಿದ್ದು, ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಲು ಕಾಮಪ್ಪಾ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಸಂಘಟನೆಯಲ್ಲಿ ಹೆಂಡತಿ ಬ್ಯುಸಿ – ಬೇಸತ್ತ ಪತಿಯಿಂದ ಪತ್ನಿ, ಅತ್ತೆಯ ಭೀಕರ ಹತ್ಯೆ

    ಮಹಿಳಾ ಸಂಘಟನೆಯಲ್ಲಿ ಹೆಂಡತಿ ಬ್ಯುಸಿ – ಬೇಸತ್ತ ಪತಿಯಿಂದ ಪತ್ನಿ, ಅತ್ತೆಯ ಭೀಕರ ಹತ್ಯೆ

    ವಿಜಯಪುರ: ಸದಾ ಮಹಿಳಾ ಸಂಘಟನೆ ಕೆಲಸದಲ್ಲಿ ನಿರತಳಾಗಿ ಮನೆ ಹಾಗೂ ಮಕ್ಕಳನ್ನು ನಿರ್ಲಕ್ಷಿಸಿದ್ದ ಪತ್ನಿ ಹಾಗೂ ಅತ್ತೆಯನ್ನು ವ್ಯಕ್ತಿಯೋರ್ವ ಕೊಲೆಗೈದ (Murder) ಪ್ರಕರಣ ನಗರದ (Vijayapura) ನವಭಾಗ್ ಪ್ರದೇಶದಲ್ಲಿ ನಡೆದಿದೆ.

    ರೂಪಾ ಮೇತ್ರಿ (32) ಹಾಗೂ ಆಕೆಯ ತಾಯಿ ಕಲ್ಲವ್ವ (55) ಕೊಲೆಯಾದ ಮಹಿಳೆಯರು. ಕೊಲೆಗೈದ ಆರೋಪಿಯನ್ನು ಮಲ್ಲಿಕಾರ್ಜುನ ಮೇತ್ರಿ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ, ಮೂವರು ಮಕ್ಕಳು ಹಾಗೂ ಅತ್ತೆಯೊಂದಿಗೆ ನವಭಾಗ್‍ನ ಭಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಆರು ತಿಂಗಳಿಂದ ಬಾಡಿಗೆಗೆ ಇದ್ದರು. ಹತ್ಯೆಯಾದ ರೂಪಾ ಹೆಚ್ಚಿನ ಸಮಯ ಮಹಿಳಾ ಸಂಘಟನೆ ಒಂದರ ಕೆಲಸದ ಮೇಲೆ ಮನೆಯಿಂದ ಹೊರಗೆ ಇರುತ್ತಿದ್ದಳು. ಇದೇ ಕಾರಣಕ್ಕೆ ಅವರಿಬ್ಬರ ನಡುವೆ ಆಗಾಗ ಜಗಳ ಸಹ ನಡೆಯುತ್ತಿತ್ತು ಎನ್ನಲಾಗಿದೆ. ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡದಿಂದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ಯುವಕ!

    ಅಲ್ಲದೇ ಪತ್ನಿ, ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಮನೆಯಲ್ಲಿ ಕೆಲಸ ಮಾಡುತ್ತಿರಲಿಲ್ಲ ಎಂದು ಆರೋಪಿ ಮಲ್ಲಿಕಾರ್ಜುನ ಹೇಳಿಕೊಂಡಿದ್ದಾನೆ. ಇದೇ ವಿಚಾರಕ್ಕೆ ಇಬ್ಬರು ಮಲಗಿದ್ದ ವೇಳೆ ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆಗೈದಿದ್ದಾನೆ. ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

    ಈ ಸಂಬಂಧ ಗಾಂಧಿಚೌಕ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಂಚನೆ ಕೇಸಲ್ಲಿ ಚೈತ್ರಾ ಲಾಕ್; ಹರಕೆ ಈಡೇರಿತು ಅಂತ 101 ಈಡುಗಾಯಿ ಹೊಡೆದ ಮಲೆನಾಡಿಗರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]