Tag: ವಿಜಯಪುರ

  • ಪ್ರಕಾಶ್ ರಾಜ್‌ರನ್ನು ಹಂದಿಗೆ ಹೋಲಿಸಿದ ಶಾಸಕ ಯತ್ನಾಳ್

    ಪ್ರಕಾಶ್ ರಾಜ್‌ರನ್ನು ಹಂದಿಗೆ ಹೋಲಿಸಿದ ಶಾಸಕ ಯತ್ನಾಳ್

    ವಿಜಯಪುರ: ನಟ ಪ್ರಕಾಶ್ ರಾಜ್ (Prakash Raj) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಹಂದಿ ಇದ್ದ ಹಾಗೇ. ಪ್ರಕಾಶ್ ರಾಜ್ ಎನ್ನುವ ಹಂದಿ ನಮ್ಮ ರಾಜ್ಯದಲ್ಲಿದೆ ಎಂದು ಕಿಡಿಕರಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ, ಕಣ್ಣು ಕಿತ್ತುಹಾಕಬೇಕು: ಗಜೇಂದ್ರ ಸಿಂಗ್‌ ಶೇಖಾವತ್‌

    ವಾಗ್ದಾಳಿ ಯಾಕೆ..?; ಇತ್ತೀಚೆಗೆ ಕಲಬುರಗಿಯಲ್ಲಿ ಮಾತನಾಡಿದ್ದ ಪ್ರಕಾಶ್ ರಾಜ್, ಸನಾತನ ಧರ್ಮದ ಬಗ್ಗೆ ಮಾತನಾಡುವವರನ್ನು ಕಾಗೆಗಳಿಗೆ ಹೋಲಿಕೆ ಮಾಡಿದ್ದರು. ಸನಾತನ ಧರ್ಮ ಅಂದ್ರೆ ಏನು ಅಂತಾ ಪ್ರಶ್ನಿಸಿದಾಗ, ಮನುಷ್ಯ ಬದಲಾಗುವುದಿಲ್ಲ ನಾನು ಎನ್ನುವುದು ಪ್ರಕೃತಿಗೆ ವಿರುದ್ಧ ನಾನೇ ಶ್ರೇಷ್ಠ ಅಂತಾನೆ. ಸದ್ಯ ಕಾಗೆಗಳು ಹೆಚ್ಚಾಗಿ ಸೇರಿಕೊಂಡು ಕೋಗಿಲೆ, ನವಿಲು ಸಹ ನಮ್ಮ ಮಾತು ಕೇಳಬೇಕು ಎನ್ನುವ ಮಾತು ಆಡುತ್ತಿದ್ದಾರೆ. ಈ ಮೂಲಕ ಸನಾತನ ಧರ್ಮದ ಬಗ್ಗೆ ಇವರು ದಾರಿ ತಪ್ಪಿಸಲು ತರುತ್ತಿದ್ದಾರೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಯತ್ನಾಳ್

    ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಯತ್ನಾಳ್

    ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಏನು ಪಾಕಿಸ್ತಾನದ ಮುಖ್ಯಮಂತ್ರಿನಾ? ಮುಖ್ಯಮಂತ್ರಿ ಎಂದರೆ ಶಾಸಕರು ಅವರ ಬಳಿ ಹೋಗೋದು ಸಹಜ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಕಾರ್ನಾರ್ ವ್ಯಕ್ತಪಡಿಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆ. ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು ಎಂದರು. ಇದನ್ನೂ ಓದಿ: ಲೇಟ್ ಆದ್ರೂ ಲೇಟೆಸ್ಟ್ ಆಗಿ ಒಂದೆರಡು ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ರಾಜೂ ಗೌಡ

    ಯಾಕೋ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಬಹಳ ಸೈಲೆಂಟ್ ಆಗಿದ್ದಾರೆ. ಯಾಕೆ ಸೈಲೆಂಟ್ ಆಗಿದ್ದೀರಾ ಎಂದು ನಾನು ಸಿದ್ದರಾಮಯ್ಯ ಅವರಿಗೆ ಕೇಳಿದ್ದೆ. ಏನು ಮಾಡೋದು ಯತ್ನಾಳ್ ಇದು ಕೊನೆದಿದೆ. ಯಾರು ಏನೇ ಹೇಳಿದರೂ ತಲೆ ಕೊಡಿಸಿಕೊಳ್ಳಲ್ಲ. ಜನರಿಗೆ ಉತ್ತಮ ಆಡಳಿತ ನೀಡುತ್ತೇನೆ ಅಂದಿದ್ದರು ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರು ಕ್ರಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗು – ಸಚಿವ ಎಂ‌.ಬಿ ಪಾಟೀಲ್‌ ಟೀಕೆ

    ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗು – ಸಚಿವ ಎಂ‌.ಬಿ ಪಾಟೀಲ್‌ ಟೀಕೆ

    ವಿಜಯಪುರ: ನಾವು ಯಾವುದೇ ಆಪರೇಷನ್ ಹಸ್ತ ಮಾಡುತ್ತಿಲ್ಲ. ನಾವು ಆಪರೇಷನ್‌ ಕಮಲವನ್ನೇ ವಿರೋಧ ಮಾಡಿದವರು. ಬಿಜೆಪಿ ವಿಶೇಷವಾಗಿ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು. ಅವರಾಗಿಯೇ ಬಿಜೆಪಿ (BJP) ಬಿಟ್ಟು ಬರುತ್ತಿದ್ದಾರೆ ಅವರನ್ನ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಟೀಕಿಸಿದ್ದಾರೆ.

    ವಿಜಯಪುರದ (Vijayapura) ತಾವರಖೇಡನಲ್ಲಿ ಮಾತನಾಡಿದ ಅವರು, ಯಾವುದೇ ಕಂಡೀಷನ್ ಇಲ್ಲದೇ ಯಾರು ಸೇರುತ್ತಿದ್ದಾರೆ ಅವರನ್ನ ಸೇರಿಸಿಕೊಳ್ಳುತ್ತಿದ್ದೇವೆ. ಬರುವವರಿಗೆ ನಾವು ಬೇಡ ಅನ್ನೋದಕ್ಕೆ ಆಗಲ್ಲ. ನಾವಾಗಿಯೇ ಏನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ತಮಿಳುನಾಡು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ

    ಸಾಹಿತಿಗಳಿಗೆ ಜೀವ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅನೇಕ ಸಾಹಿತಿಗಳು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದಲ್ಲಿ ಅವರಿಗೆ ಹಕ್ಕು ಕೊಟ್ಟಿದೆ. ಆ ಟೀಕೆ, ಟಿಪ್ಪಣಿಗಳಿಗೆ ಬೇಕಿದ್ರೆ ಉತ್ತರ ಕೊಡಬಹುದು. ಅವರಿಗೆ ಆದ ಪ್ಲಾಟ್ ಫಾರಂ ಇರುತ್ತೆ ಅಲ್ಲಿ ಅದಕ್ಕೆ ಭಿನ್ನಾಭಿಪ್ರಾಯ, ಪ್ರತ್ಯುತ್ತರ ಕೊಡಬಹುದು. ಆದ್ರೆ ಯಾರೋ ಒಬ್ಬ ವ್ಯಕ್ತಿ ಹತ್ಯೆ ವರೆಗೆ ಹೋಗುತ್ತಲ್ಲ ಅದು ಕಟ್ಟದಾದಂತಹದು. ಅವರು ಸಿಎಂ ಅವರನ್ನ ಭೇಟಿ ಮಾಡಿ ರಕ್ಷಣೆ ಕೇಳಿದ್ದಾರೆ. ಅವರಿಗೆ ಸೂಕ್ತ ರಕ್ಷಣೆ ಕೊಡ್ತೆವೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿ ಮೊದಲ ಹಂತದ ಶೂಟಿಂಗ್ ಮುಗಿಸಿದ ‘ವೃಷಭ’: ಮೋಹನ್ ಲಾಲ್ ಸಿನಿಮಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಆಲಮಟ್ಟಿ’ ಭರ್ತಿಯಾದ್ರೂ ಬಾಗಿನ ಅರ್ಪಿಸದ ಸಿಎಂ – ಮೈಸೂರಿಗೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಎಂದು ಜನಾಕ್ರೋಶ

    `ಆಲಮಟ್ಟಿ’ ಭರ್ತಿಯಾದ್ರೂ ಬಾಗಿನ ಅರ್ಪಿಸದ ಸಿಎಂ – ಮೈಸೂರಿಗೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಎಂದು ಜನಾಕ್ರೋಶ

    ವಿಜಯಪುರ: ವಿಜಯಪುರದಲ್ಲಿ (Vijayapura) ಉತ್ತಮ ಮಳೆಯಾಗದಿದ್ದರೂ ಮಹಾರಾಷ್ಟ್ರದಲ್ಲಿ ಮಳೆರಾಯ ಅಬ್ಬರಿಸಿದ್ದರಿಂದ ಕೃಷ್ಣಾ ನದಿ ತುಂಬಿ ಆಲಮಟ್ಟಿ ಜಲಾಶಯ (Almatti Dam) ಆಗಸ್ಟ್ ಮೊದಲ ವಾರದಲ್ಲೇ ತುಂಬಿದೆ. ಆದರೆ ಈವರೆಗೂ ಸಿಎಂ ಬಾಗಿನ ಅರ್ಪಿಸಲು ಬಂದಿಲ್ಲ. ಸರ್ಕಾರ ಮೈಸೂರು ಭಾಗಕ್ಕೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಅನುಸರಿಸುತ್ತಿದ್ದಾರೆ ಎಂದು ಜಿಲ್ಲೆಯ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅವಳಿ ಜಿಲ್ಲೆಗಳ ಜನ, ಜಾನುವಾರು ಸೇರಿದಂತೆ ಜಮೀನುಗಳಿಗೂ ಆಲಮಟ್ಟಿ ಜಲಾಶಯವೇ ಆಶಾಕಿರಣವಾಗಿದೆ. ಮುಂಗಾರು ಮಳೆ ಕೈ ಕೊಟ್ಟರು ಜಲಾಶಯ ತುಂಬಿದ್ದು, ಅವಳಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್ – ಇಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ

    ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಒರೆಸುವ ಕೆಲಸ ಮಾಡುತ್ತಿದೆ. ಇದನ್ನು ಬಿಟ್ಟು ಈ ಕೂಡಲೆ ಸಿಎಂ ಸಿದ್ದರಾಮಯ್ಯ (Siddaramaiah) ಬಂದು ಅವಳಿ ಜಿಲ್ಲೆಗಳ ಜೀವನದಿ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ. ಅಲ್ಲದೆ ಸಿಎಂ ಇದಕ್ಕೆ ಹಿಂದೇಟು ಹಾಕಿದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಲಕ್ಷ್ಮಿಯರಿಗೆ ದೇಗುಲದಲ್ಲಿ ಸಿಗಲಿದೆ ಸ್ಪೆಷಲ್ ಗಿಫ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CT ರವಿ ಸೋಲಿನಿಂದ ಇನ್ನೂ ಹೊರಬಂದಿಲ್ಲ, ಅದಕ್ಕೆ ಆರೋಪ ಮಾಡ್ತಿದ್ದಾರೆ: ಎಂ.ಬಿ ಪಾಟೀಲ್

    CT ರವಿ ಸೋಲಿನಿಂದ ಇನ್ನೂ ಹೊರಬಂದಿಲ್ಲ, ಅದಕ್ಕೆ ಆರೋಪ ಮಾಡ್ತಿದ್ದಾರೆ: ಎಂ.ಬಿ ಪಾಟೀಲ್

    ವಿಜಯಪುರ: ಪಾಪ ಸಿ.ಟಿ ರವಿ (CT Ravi) ಸೋತಿದ್ದಾರೆ, ಅದಕ್ಕೆ ಏನ್ ಮಾಡೋಕೆ ಆಗುತ್ತೆ? ಇನ್ನೂ ಅವರು ಸೋಲಿನಿಂದ ಹೊರಗೆ ಬಂದಿಲ್ಲ. ಅದಕ್ಕಾಗಿ ಕೈ ಶಾಸಕರು (Congress MLA) ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಅಂತಾ ಆರೋಪ ಮಾಡ್ತಿದ್ದಾರೆ. ಅವರು ನನ್ನ ಆತ್ಮೀಯ ಸ್ಮೇಹಿತರು ಸೋತಿರುವ ಮತ್ತು ಅಧಿಕಾರ ಕಳೆದುಕೊಂಡ ಮೇಲೆ ಕೆಲವರು ಅದನ್ನು ಹೇಳಲೇಬೇಕಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎನ್ನುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಹೇಳಿಕೆಗೆ ಪ್ರತಿಕ್ರಿಯಿಸಿ, 136 ಸೀಟ್ ಕೊಟ್ಟು ನಮ್ಮನ್ನ ಅಧಿಕಾರಕ್ಕೆ ತಂದಿದ್ದು ಈ ರಾಜ್ಯದ ಜನತೆ. ಯಾವುದೇ ಸರ್ಕಾರ ಇರೋದು ಬಿಡೋದು ಜನತೆ ಮೇಲಿರುತ್ತದೆ. ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಅದು ಸರ್ಕಾರದ ಮೇಲೆ ಪರಿಣಾಮ ಬಿರೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ – ಶಾಸಕ ಯತ್ನಾಳ್ ಭವಿಷ್ಯ

    ವಿಜಯಪುರ ಮಹಾನಗರ ಪಾಲಿಕೆಗೆ ಆಯುಕ್ತರ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಗೌರವಾನ್ವಿತ ಶಾಸಕರಿಗೆ (ಯತ್ನಾಳ್) ಹೇಳ್ತೆನೆ, ಮಹಾನಗರ ಪಾಲಿಕೆ ಅಧಿಕಾರಿಗಳು ಲೋವರ್ ಕೆಟಗೆರಿ ಅವರನ್ನು ನೇಮಿಸಿದ್ದಾರೆ ಎಂದು ಆರೋಪಿಸ್ತಾರೆ. ಶಾಸಕರು ಸ್ವಲ್ಪ ಹಿಂದೆ ಹೋಗಿ ನೆನಪು ಮಾಡಿಕೊಳ್ಳಲಿ. ಈ ಹಿಂದೆ ವಿಜಯಕುಮಾರ ಮೆಕ್ಕಳಕಿ ಅವರನ್ನ ಮುಂದುವರಿಸಬೇಕು ಎಂದು ಸಿಎಂಗೆ ಪತ್ರ ಕೊಟ್ಟಿದ್ದರು ಅವರೇ. ಅವರು ಯಾವ ಕೆಡರ್‌ನವರು ಇಬ್ರೂ ಸೇಮ್ ಕೆಡರ್‌ನವರೇ ಇದ್ದಾರೆ. ಮೊದಲು ಅದನ್ನ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ ಗುತ್ತಿಗೆ ನೌಕರ ಸಾವು

    ಇನ್ನೂ ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸುಪ್ರೀಂ ಮೊರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ನೀರಾವರಿ ಸಚಿವರಾಗಿದ್ದೆ. ಯಾವಾಗ ಸಂಕಷ್ಟ ಬರುತ್ತೆ, ಡಿಸ್ಟೆನ್ಸ್ ಫಾರ್ಮುಲಾ ಅಂತಾರೆ. ನಮ್ಮಲ್ಲಿ ನೀರು ಇದ್ದಾಗ ನೀರು ಹಂಚಿಕೊಳ್ತೀವಿ. ಮಳೆ ಕಡಿಮೆ ಆಗಿದೆ, ಡಿಸ್ಟೆನ್ಸ್ ಹಂಚಿಕೊಳ್ಳಬೇಕಾಗುತ್ತೆ. ನನಗೆ ಒಂದು ಮಾಹಿತಿ ಬಂದಿದೆ. ಸಿಎಂ, ಡಿಸಿಎಂ ಜೊತೆಗೆ ಮಾತನಾಡ್ತೀನಿ. ತಮಿಳುನಾಡಿನಲ್ಲಿ ಯಾವ ಯಾವ ಡ್ಯಾಂಗಳಲ್ಲಿ ಎಷ್ಟೆಷ್ಟು ನೀರು ಇದೆ ಅನ್ನೋದರ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ಎಲ್ಲವನ್ನು ಪರಿಶೀಲಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯರ ಅಶ್ಲೀಲ ವೀಡಿಯೋ ಅಪ್ಲೋಡ್ – ಆರೋಪಿ ಅರೆಸ್ಟ್

    ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯರ ಅಶ್ಲೀಲ ವೀಡಿಯೋ ಅಪ್ಲೋಡ್ – ಆರೋಪಿ ಅರೆಸ್ಟ್

    ವಿಜಯಪುರ: ಸಾಮಾಜಿಕ ಜಾಲತಾಣಗಳ (Social Media) 12 ನಕಲಿ ಖಾತೆಗಳನ್ನು ತೆರೆದು ಅಪ್ರಾಪ್ತ ಬಾಲಕಿಯರ ಅಶ್ಲೀಲ ಫೋಟೋ ಹಾಗೂ ವೀಡಿಯೋ ಅಪ್ಲೋಡ್ ಮಾಡುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು (Police) ಬಂಧಿಸಿದ್ದಾರೆ.

    ನಗರದ ಹವೇಲಿಗಲ್ಲಿಯ ಅಬ್ದುಲ್ ಗೌರ್ ಬಂಧಿತ ಆರೋಪಿ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಅಶ್ಲೀಲ ವೀಡಿಯೋ ವಿಚಾರವಾಗಿ ವಿಜಯಪುರ (vijayapura) ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಒತ್ತಡದ ಬದುಕಿನಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಬಹುಮುಖ್ಯ: ದಿನೇಶ್ ಗುಂಡೂರಾವ್

    ತನಿಖೆ ವೇಳೆ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ 12 ನಕಲಿ ಖಾತೆಗಳನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಅಕೌಂಟ್‍ಗಳಿಗೆ ವಿಚಿತ್ರ ಹೆಸರುಗಳನ್ನು ಇಟ್ಟುಕೊಂಡಿದ್ದ. ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಬಳಕೆ ಮಾಡಿಕೊಂಡು ಆರೋಪಿ ಕೃತ್ಯ ಎಸಗುತ್ತಿದ್ದ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ಮೋದಿ ಭಾಷಣದ ಮಧ್ಯೆ ಸಭಾತ್ಯಾಗ ಮಾಡಿದ ವಿಪಕ್ಷಗಳ ಸಂಸದರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ದಲಿತ ಸಾಹಿತ್ಯ ಅಧ್ಯಯನ ಗ್ರಂಥ ಪ್ರಕಟ: ಎಂಬಿ ಪಾಟೀಲ್

    ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ದಲಿತ ಸಾಹಿತ್ಯ ಅಧ್ಯಯನ ಗ್ರಂಥ ಪ್ರಕಟ: ಎಂಬಿ ಪಾಟೀಲ್

    ವಿಜಯಪುರ: ವಚನಪಿತಾಮಹ ಡಾ.ಪ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಿಂದ (Dr. P.G. Halakatti Research Centre) ದಲಿತ ಸಾಹಿತ್ಯ ಅಧ್ಯಯನ ಗ್ರಂಥ (Dalit Literature Study Book) ಪ್ರಕಟಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (M.B.Patil) ಹೇಳಿದ್ದಾರೆ.

    ನಗರದಲ್ಲಿ ಗದುಗಿನ ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಣ್ಣ ಸಂಭ್ರಮ ಮತ್ತು 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ಹಳಕಟ್ಟಿ ಸಂಶೋಧನೆ ಕೇಂದ್ರದಿಂದ ಈಗಾಗಲೇ ಹಳಕಟ್ಟಿ, ಕಾಕಾ ಕಾರ್ಖಾನೀಸ್, ಅಮೋಘಸಿದ್ಧರು, ಆದಿಲ್ ಶಾಹಿ ಡಾ.ಎಂ.ಎಂ.ಕಲಬುರ್ಗಿ, ಕಾಕಾ ಕಾರ್ಖಾನೀಸ್ ಮುಂತಾದವರ ಕುರಿತು ಗ್ರಂಥಗಳನ್ನು ಪ್ರಕಟಿಸಲಾಗಿದೆ. ಅಲ್ಲದೇ ದಾಸ ಸಾಹಿತ್ಯ ಪ್ರಕಟಣೆ ಕೆಲಸ ಪ್ರಗತಿಯಲ್ಲಿದೆ. ಇನ್ನು ಮುಂದೆ ದಲಿತ ಸಾಹಿತ್ಯ ಅಧ್ಯಯನ ಗ್ರಂಥ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಉಡುಪಿ ವೀಡಿಯೋ ಪ್ರಕರಣ – ಗೌಪ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯರ ವಿಚಾರಣೆ

    ಸಮುದಾಯದ ನೋವು ಮತ್ತು ನಲಿವಿನ ಭಾವನೆಗಳನ್ನು ದಲಿತ ಸಾಹಿತ್ಯ ಒಳಗೊಂಡಿರುವ ಅರ್ಥಪೂರ್ಣ ಮತ್ತು ಹೃದಯದಿಂದ ಬಂದಿರುವ ನೈಜ ಮತ್ತು ಶ್ರೇಷ್ಠ ಸಾಹಿತ್ಯ ಇದಾಗಿದೆ ಎಂದು ಹೇಳಿದ ಅವರು, ಬೌದ್ಧರು, ಬಸವಾದಿ ಶರಣರ ಸಮಾಜ ನಿರ್ಮಾಣವಾಗಬೇಕು. ಈ ಮೂಲಕ ಜಾತಿ ಪದ್ಧತಿ ತೊಲಗಿಸಬೇಕು. ಬಸವ ಧರ್ಮ ಜಾತಿ ರಹಿತ ಧರ್ಮವಾಗಿದೆ. ಬಸವಾದಿ ಶರಣರ ಸಿದ್ಧಾಂತ, ಅನುಭವ ಮಂಟಪದ ಸಾರವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನಮಗೆ ನೀಡಿದ್ದಾರೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರು ಎರಡು ಕಣ್ಣುಗಳಿದ್ದಂತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸುಧಾಕರ್ ನಮ್ಮೂರ ಹುಡ್ಗ, ಬೇರೆ ಕ್ಷೇತ್ರ ನೋಡಿಕೊಂಡ್ರೆ ಮುಂದಿನ ಸಲ ವಿಧಾನಸೌಧಕ್ಕೆ ಬರ್ತಾರೆ: ಪ್ರದೀಪ್ ಈಶ್ವರ್ ಟಾಂಗ್

    ಬಸವಣ್ಣ, ಅಂಬೇಡ್ಕರ್ ಬಯಸಿದ ಸಮಾಜ ನಿರ್ಮಾಣವಾಗದೇ ಪ್ರಬುದ್ಧ ಭಾರತ ಆಗಲು ಸಾಧ್ಯವಿಲ್ಲ. ಪ್ರಬುದ್ಧ ಭಾರತ ನಿರ್ಮಾಣದ ಅಗತ್ಯವಿದೆ. ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳಾಗಿವೆ. ದಲಿತ ಸಾಹಿತ್ಯ ಪರಿಷತ್ತು ಆರಂಭವಾಗಿ 25 ವರ್ಷಾಗಳಾಗಿವೆ. ಆದರೆ ಸಮಾಜದಲ್ಲಿ ಇನ್ನೂ ಗಣನೀಯ ಬದಲಾವಣೆಯಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಉಡುಪಿ ವೀಡಿಯೋ ಚಿತ್ರೀಕರಣ ಕೇಸ್‌ – ತನಿಖಾಧಿಕಾರಿ ಬದಲಾವಣೆ

    ಹಳಕಟ್ಟಿ ಸಂಶೋಧನಾ ಕೇಂದ್ರ ಆರಂಭಿಸಿದ ನಂತರ ನಾನು ಹೆಚ್ಚಾಗಿ ಸಾಹಿತ್ಯ ಚಟುವಟಿಕಯಲ್ಲಿ ತೊಡಗಿಸಿಕೊಂಡಿದ್ದೇನೆ. ಸಿಎಂ ಅವರನ್ನು ಭೇಟಿಯಾಗಿ ದಲಿತ ಸಾಹಿತ್ಯ ಪರಿಷತ್ತಿಗೆ ನೀಡಬೇಕಿರುವ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಮದುವೆ ಯಾವಾಗ? – ಸೋನಿಯಾ ಗಾಂಧಿ ಹೇಳಿದ್ದೇನು?

    ಕಾರ್ಯಕ್ರಮಕ್ಕೂ ಮೊದಲು ಸಚಿವರು ಬುದ್ಧ, ಬಸವ ಮತ್ತು ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಅಲ್ಲದೇ, ರಮಾ ಸಾಹೇಬಾ ಕಿರುಚಿತ್ರ ಹಾಗೂ ಪರಿಷತ್ತಿನ ಗ್ರಂಥಗಳನ್ನು ಬಿಡುಗಡೆ ಮಾಡಿದರು. ಈ ಸಂದರ್ಭ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ವಿಧಾನ ಪರಿಷತ್ ಮಾಜಿ ಸದಸ್ಯ ಡಿಎಸ್ ವೀರಯ್ಯ, ಸಮ್ಮೇಳನದ ಸರ್ವಾಧ್ಯಕ್ಷ ಎಚ್‌ಟಿ ಪೋತೆ, ಪರಿಷತ್ ಅಧ್ಯಕ್ಷ ಅರ್ಜುನ ಗೊಳಸಂಗಿ, ಬುದ್ಧವಿಹಾರದ ಸಂಘಪಾಲ ಬಂತೇಜಿ, ಮಲ್ಲೆಪುರಂ ಜಿ.ವೆಂಕಟೇಶ, ವೈಎಂ ಭಜಂತ್ರಿ, ಎಚ್‌ಡಿ ಕೋಲಕಾರ, ಡಿಎಸ್‌ಎಸ್ ಮುಖಂಡ ಡಿಜಿ ಸಾಗರ, ಅಲ್ಲಾಗಿರಿರಾಜ, ತುಕಾರಾಮ ಚಂಚಲಕರ, ಶ್ರೀನಾಥ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲಿಸಿದ ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ – ಲೋಕಾಯುಕ್ತ ಅಧಿಕಾರಿ ಸಾವು

    ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ – ಲೋಕಾಯುಕ್ತ ಅಧಿಕಾರಿ ಸಾವು

    ವಿಜಯಪುರ: ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ (Heart Attack) ಲೋಕಾಯುಕ್ತ (Lokayukta) ಡಿವೈಎಸ್ಪಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ.

    ಬುಧವಾರ ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ತಡರಾತ್ರಿ ಸಾವಿಗೀಡಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದು, ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಕರಾವಳಿ, ಉತ್ತರ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

    ಮಗನೊಂದಿಗೆ ಬೆಂಗಳೂರಿನಲ್ಲೇ ಅರುಣ್ ನಾಯಕ್ ಪತ್ನಿ ವಾಸವಿದ್ದರು. ವಿಚಾರ ತಿಳಿಯುತ್ತಿದ್ದಂತೆ ಪತ್ನಿ ಹಾಗೂ ಪುತ್ರ ವಿಜಯಪುರಕ್ಕೆ ಆಗಮಿಸಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಮೃತರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಶಂಕಿತ ಉಗ್ರರಿಗೆ ಬೆಂಗಳೂರು ಮಾತ್ರವಲ್ಲ ಹಿಂದೂ ನಾಯಕರೂ ಟಾರ್ಗೆಟ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹಲವೆಡೆ ವರುಣನ ಎಂಟ್ರಿ- ಜನಜೀವನ ಅಸ್ತವ್ಯಸ್ತ

    ರಾಜ್ಯದ ಹಲವೆಡೆ ವರುಣನ ಎಂಟ್ರಿ- ಜನಜೀವನ ಅಸ್ತವ್ಯಸ್ತ

    ಬೆಂಗಳೂರು: ರಾಜ್ಯದ ಹಲವಡೆ ವರುಣನ ಆಗಮನವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಒಂದು ಗಂಟೆಯಿಂದ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಬಿರುಗಾಳಿ ಸಹಿತ ಧಾರಾಕಾರ ಮಳೆ (Rain) ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

    ಬೀದರ್, ಭಾಲ್ಕಿ, ಹುಮ್ನಾಬಾದ್, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಹುತೇಕ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬಿತ್ತನೆ ಮಾಡಿದ ವಿವಿಧ ಬೆಳೆಗಳು ಒಣಗಿ ಹೋಗಿತ್ತು. ಇದೀಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಳೆಗಳಿಗೆ ಈ ಮಳೆ ಸಂಜೀವಿನಿಯಾಗಿದೆ. ಧಾರಾಕಾರ ಮಳೆಯ ಜೊತೆಗೆ ದಟ್ಟ ಮೋಡಗಳು ಆವರಿಸಿದ್ದು ಇಂದು ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Delhi Rains: ಯಮುನೆ ಆರ್ಭಟ – ತಗ್ಗದ ಜನರ ಸಂಕಟ

    ಇನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನ ಕತ್ತಲೆ ಕಾಲನಿಯಲ್ಲಿ ಅಬ್ಬರದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಮರ ಉರುಳಿಬಿದ್ದಿದ್ದು, ನಾಲ್ಕು ಗಂಟೆ ಸಂಚಾರ ಬಂದ್ ಆಗಿದೆ. ಮರ ಬಿದ್ದ ಹಿನ್ನೆಲೆ ಹೊನ್ನಾವರ – ಬೆಂಗಳೂರು ಸಂಚಾರ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಬಳಿಕ ಉರುಳಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಒಂದು ವಾರಗಳ ಕಾಲ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನ 8 ವಲಯಗಳಲ್ಲಿ ಕುಡಿಯಲು ನೀರು ಯೋಗ್ಯವಲ್ಲ!

    ಅದೇ ರೀತಿ ಐತಿಹಾಸಿಕ ಜಿಲ್ಲೆ ವಿಜಯಪುರಕ್ಕೂ (Vijayapura) ವರುಣ ಎಂಟ್ರಿ ಕೊಟ್ಟಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದು, ಇದೀಗ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದೆ. ಈ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದು, ಜೂನ್‌ನಿಂದ ಮಳೆ ಇಲ್ಲದೆ ರೈತರು ಕಂಗೆಟ್ಟಿದ್ದರು. ತುಂತುರು ಮಳೆ ಪ್ರಾರಂಭವಾಗಿದ್ದು, ಜನರು ಸಂತಸದಿಂದಿದ್ದಾರೆ. ಇದನ್ನೂ ಓದಿ: ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ. ಮಂಜುನಾಥ್ ಮತ್ತೆ ಮುಂದುವರಿಕೆ

    ಇನ್ನು ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮುಂಗಾರು ಆರಂಭವಾಗಿದ್ದು, ಜಿಲ್ಲೆಯಲ್ಲಿ ಆವರಿಸಿದ್ದ ಬರದ ಛಾಯೆಯನ್ನು ಈ ಮಳೆ ಅಳಿಸುತ್ತಿದೆ. ಮಳೆಯಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದ್ದು, ಜಿಟಿ ಜಿಟಿ ಮಳೆಯಿಂದ ಇಳೆ ತಂಪೇರಿದೆ. ಹಾಗೆಯೇ ಹಾವೇರಿಯ ಜಿಲ್ಲೆಯ ಎಂಟು ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ರೈತರು ಹರ್ಷಗೊಂಡಿದ್ದಾರೆ. ಇದನ್ನೂ ಓದಿ: ಪತ್ನಿಯಿಂದ್ಲೇ IAS ಅಧಿಕಾರಿ ಆಕಾಶ್ ಶಂಕರ್ ವಿರುದ್ಧ ದೂರು!

    ಕಾದು ಕಬ್ಬಿಣದಂತಾಗಿದ್ದ ಯಾದಗಿರಿ (Yadgiri) ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗಿದ್ದು, ಜನ ಓಡಾಡಲು ಸಂಕಷ್ಟ ಎದುರಾಗಿದೆ. ಮಳೆಯಿಂದಾಗಿ ಜನರು ನಿತ್ಯದ ವ್ಯಾಪಾರ ವಹಿವಾಟಿಗೆ ತೆರಳಲು ಹಿಂದೇಟು ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಹರಕೆ ಒಪ್ಪಿಸಿದ ಅಭಿಮಾನಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್‌ ಮಂತ್ರಿಗಳ ಜೊತೆ ನಮ್ಮ ಅಡ್ಜಸ್ಟ್‌ಮೆಂಟ್‌ ರಾಜಕೀಯ ಇಲ್ಲ: ಯತ್ನಾಳ್‌

    ಕಾಂಗ್ರೆಸ್‌ ಮಂತ್ರಿಗಳ ಜೊತೆ ನಮ್ಮ ಅಡ್ಜಸ್ಟ್‌ಮೆಂಟ್‌ ರಾಜಕೀಯ ಇಲ್ಲ: ಯತ್ನಾಳ್‌

    ಬೆಂಗಳೂರು: ವಿಧಾನ ಸಭೆಯಲ್ಲಿ ಕಾಂಗ್ರೆಸ್‌ ಸರ್ಕಾರದ (Congress Government) ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ವಿಜಯಪುರದ (Vijayapura) ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮ ಅಡ್ಜಸ್ಟ್‌ಮೆಂಟ್‌ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗೂ ಸರ್ಕಾರದ ವೈಫಲ್ಯದ ಕುರಿತು ನಮ್ಮ ಎಲ್ಲಾ ಶಾಸಕ ಮಿತ್ರರು ಸಮರ್ಥವಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

    ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಹಾಗೂ ಆಯವ್ಯಯದ ಕುರಿತು ಚರ್ಚೆಗಳು ಬಾಕಿ ಇದೆ ಎಂದು ಯತ್ನಾಳ್‌ ಅಚ್ಚರಿಯ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಹೆಸರು ಲಕ್ಷ್ಮೀ, ಲಿಂಗ ಪುರುಷ ಅಂತ ಇರೋದನ್ನ ಕಂಡು ಕಕ್ಕಾಬಿಕ್ಕಿಯಾದ ಕಂಡಕ್ಟರ್

    ಮಂಗಳವಾರ ವಿಜಯಪುರ ಪಾಲಿಕೆಗೆ ಹೊಸ ಆಯುಕ್ತರ ವರ್ಗಾವಣೆ ವಿಚಾರ ಪ್ರಸ್ತಾಪಿಸಿ ಯತ್ನಾಳ್ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದರು. ವಿಜಯಪುರ ಪಾಲಿಕೆಗೆ ಅರ್ಹತೆಯಿಲ್ಲದ, ಐಎಎಸ್, ಕೆಎಎಸ್ ಕೇಡರ್ ಅಲ್ಲದ ಅಧಿಕಾರಿಯನ್ನು ವರ್ಗಾಯಿಸಲಾಗಿದೆ. ಆ ಅಧಿಕಾರಿ ಸೌಜನ್ಯಕ್ಕೂ ನನ್ನ ಬಂದು ಮಾತಾಡಿಸಿಲ್ಲ. ಈ ವರ್ಗಾವಣೆ ಮೂಲಕ ಸಚಿವರು ವ್ಯಾಪಾರ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಸಚಿವ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಸಹ ಸಹ ಸಿಟ್ಟಿಗೆದ್ದು ಯತ್ನಾಳ್ ಹೇಳಿಕೆ ಖಂಡಿಸಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]