Tag: ವಿಜಯಪುರ

  • ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

    ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

    ವಿಜಯಪುರ: ಮಹಿಳೆಯರಿಗೆ ಉಚಿತ ಬಸ್ (Free Bus Travel) ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 ಕಿ.ಮೀ ವರೆಗೆ ಸರ್ಕಾರಿ ಬಸ್‌ನ್ನು ಸ್ವಾಮೀಜಿ ಚಲಾಯಿಸಿದ್ದಾರೆ. ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ್ ಸ್ವಾಮೀಜಿ ಬಸ್ ಚಲಾಯಿಸಿ ಅಚಾತುರ್ಯ ಎಸಗಿದ್ದಾರೆ. ಇದನ್ನೂ ಓದಿ: ಉಚಿತ ಬಸ್‌ ಪ್ರಯಾಣದ ಮೊದಲ ಟಿಕೆಟ್‌ ಪಡೆದ ಅದೃಷ್ಟಶಾಲಿ ಮಹಿಳೆ ಇವರೇ..!

    ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲೇ ಬಸ್ ತೆಗೆದುಕೊಂಡು ಹೋಗಿ ಕೊಲ್ಹಾರ ಪಟ್ಟಣದಲ್ಲಿ ಸ್ವಾಮೀಜಿ ಸುತ್ತಾಡಿಸಿದ್ದಾರೆ. ಸ್ವಾಮೀಜಿ ಬಸ್ ಜಲಾಯಿಸುತ್ತಿದ್ದಂತೆ ಆತಂಕದಲ್ಲೇ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

    ನಿಯಮದಂತೆ ಸರ್ಕಾರಿ ಚಾಲಕ ಬಿಟ್ಟು ಬೇರೆಯವರು ಸರ್ಕಾರಿ ಬಸ್ ಚಲಾಯಿಸುವಂತಿಲ್ಲ. ಬಸ್ ಚಲಾಯಿಸುವವರು ಕಡ್ಡಾಯವಾಗಿ ಹೇವಿ ಲೈಸನ್ಸ್ ಪಡೆದಿರಬೇಕು. ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರಿ ಬಸ್‌ನ್ನು ಕಲ್ಲಿನಾಥ ಸ್ವಾಮೀಜಿ ಚಲಾಯಿಸಿದ್ದಾರೆ. ಸ್ವಾಮೀಜಿಯ ಅಚಾತುರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ- ಮಂಜುನಾಥನ ಸನ್ನಿಧಿಗೆ ಮೊದಲ ಬಸ್ ಪ್ರಯಾಣ

  • ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

    ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

    ವಿಜಯಪುರ: ಯಾರೇ ಮಾತಾಡಿದ್ರು ಜೈಲಿಗೆ (Jail) ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.

    ಚಕ್ರವರ್ತಿ ಸೂಲಿಬೆಲೆಗೆ (Chakravarti Sulibele) ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದ ವಿಚಾರವಾಗಿ ಟ್ವೀಟ್ ಮೂಲಕ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಇದು ತಾಲಿಬಾನ್ ಅಲ್ಲ ಕರ್ನಾಟಕ ಎಂದ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕೆ ಇದು ತಾಲಿಬಾನ್ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು. ಎಫ್‌ಐಆರ್ ಮಾಡಿಸ್ತೀವಿ, ಜೈಲಿಗೆ ಕಳಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರಾ? ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಂತ್ರಿಗಳು iಟಿಣoಟeಡಿಚಿಟಿಣ ಆಗಬಾರದು ಎಂದು ಟ್ವೀಟ್ ಮಾಡುವ ಮೂಲಕ ಯತ್ನಾಳ್ ಕಾಂಗ್ರೆಸ್ ಸರ್ಕಾರದ ಮಂತ್ರಿಗಳ ಕಾಲೆಳೆದಿದ್ದಾರೆ. ಇದನ್ನೂ ಓದಿ: ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಆಟೋ ಚಾಲಕರಿಗೆ ಹೆಚ್ಚಾಯ್ತು ಆತಂಕ

  • ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನಿಗೆ ಮಹಿಳೆಯಿಂದ ಚಪ್ಪಲಿ ಸೇವೆ

    ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನಿಗೆ ಮಹಿಳೆಯಿಂದ ಚಪ್ಪಲಿ ಸೇವೆ

    ವಿಜಯಪುರ: ಮದ್ಯಪಾನ ಮಾಡಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರ್ (Car) ಚಲಾಯಿಸಿ ಅಪಘಾತ ಮಾಡಿದ ವ್ಯಕ್ತಿಗೆ ಮಹಿಳೆಯೊಬ್ಬಳು (Woman) ಚಪ್ಪಲಿ ಸೇವೆ ಮಾಡಿರುವ ಘಟನೆ ವಿಜಯಪುರದಲ್ಲಿ (Vijaypura) ನಡೆದಿದೆ.

    ನಗರದ ಸ್ಟೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ 2 ಆಟೋ ಹಾಗೂ 1 ಬೈಕ್‌ಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ 1 ಆಟೋ ಪಲ್ಟಿಯಾಗಿದೆ. ಪಲ್ಟಿಯಾದ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕಾರ್ ಚಾಲಕನಿಗೆ (Driver) ಚಪ್ಪಲಿಯಿಂದ (Slipper) ಥಳಿಸಿದ್ದಾಳೆ.

    ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿರುವುದಕ್ಕೆ ಆಕ್ರೋಶಗೊಂಡ ಮಹಿಳೆ ಚಪ್ಪಲಿ ಏಟು ನೀಡಿದ್ದಾಳೆ. ಆಟೋಗಳಲ್ಲಿ ಹಾಗೂ ಬೈಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಕಾರ್ ಚಾಲಕನಿಗೆ ಚಪ್ಪಲಿ ಏಟು ನೀಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮಸ್ಕತ್‌ನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 2.28 ಕೋಟಿ ರೂ. ಮೌಲ್ಯದ ಚಿನ್ನದ ಧೂಳು ವಶ

    ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

  • ಪಾಕಿಸ್ತಾನ ಜಿಂದಾಬಾದ್‌.. ಓನ್ಲಿ ಮುಸ್ಲಿಂ ರಾಷ್ಟ್ರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಯುವಕ ಬಂಧನ

    ಪಾಕಿಸ್ತಾನ ಜಿಂದಾಬಾದ್‌.. ಓನ್ಲಿ ಮುಸ್ಲಿಂ ರಾಷ್ಟ್ರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಯುವಕ ಬಂಧನ

    ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಮ್ ರಾಷ್ಟ್ರ ಎಂದು ಇನ್‌ಸ್ಟಾಗ್ರಾಂನ ಸ್ಟೇಟಸ್ ಹಾಕಿದ್ದ ಯುವಕ ಇದೀಗ ಅರೆಸ್ಟ್ ಆಗಿದ್ದಾನೆ.

    ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಬಂಧನಕ್ಕೊಳಗಾಗಿರುವ ಯುವಕ. ಈತ ವಿಜಯಪುರ (Vijayapura) ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದವ. ಈತನ ಇನ್‌ಸ್ಟಾಗ್ರಾಂ ವೀಕ್ಷಿಸಿದ ಸ್ಥಳೀಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕತಾವಾದಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮುಜಾಹಿದ್ದೀನ್‌ ಉಗ್ರರು 33 ವರ್ಷಗಳ ಬಳಿಕ ಅರೆಸ್ಟ್‌

    ಸ್ವಯಂಪ್ರೇರಿತ ದೂರನ್ನು ತಾಳಿಕೋಟೆ ಪೊಲೀಸರು ದಾಖಲಿಸಿಕೊಂಡಿದ್ದರು. ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾನನ್ನು ಬಂಧಿಸಿದ ತಾಳಿಕೋಟೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ದಿ ಕೇರಳ ಸ್ಟೋರಿ ಉಚಿತ ಶೋಗೆ ಯತ್ನಾಳ್ ವ್ಯವಸ್ಥೆ

    ದಿ ಕೇರಳ ಸ್ಟೋರಿ ಉಚಿತ ಶೋಗೆ ಯತ್ನಾಳ್ ವ್ಯವಸ್ಥೆ

    ವಿಜಯಪುರ: ವಿಧಾನಸಭೆ ಚುನಾವಣೆ ಬಿಟ್ಟರೆ ತಿಂಗಳಿಂದ ಸದ್ದು ಮಾಡುತ್ತಿರುವ ವಿಷಯ ದಿ ಕೇರಳ ಸ್ಟೋರಿ (The Kerala Story) ಸಿನಿಮಾ. ಅದಾ ಶರ್ಮಾ ನಟನೆಯ ಚಿತ್ರ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ತನ್ನ ಹವಾ ಮುಂದುವರಿಸುತ್ತಿದೆ. ಇದೀಗ ಕೇರಳ ಸ್ಟೋರಿ ನೋಡಲು ವಿಜಯಪುರ (Vijayapura) ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಉಚಿತ ವ್ಯವಸ್ಥೆ ಮಾಡಿದ್ದಾರೆ.

     

    ವಿಜಯಪುರ ನಗರದ ಅಪ್ಸರಾ ಚಿತ್ರಮಂದಿರದಲ್ಲಿ 12 ಗಂಟೆಯ ಶೋವನ್ನು ಪ್ರೇಕ್ಷಕರು ಉಚಿತವಾಗಿ ನೋಡಬಹುದಾಗಿದೆ. ಮಂಗಳವಾರ, ಬುಧವಾರ ಹಾಗೂ ಶುಕ್ರವಾರ 3 ದಿನಗಳ ಕಾಲ ಉಚಿತವಾಗಿ ಪ್ರೇಕ್ಷಕರು ವೀಕ್ಷಿಸಲು ಅನುವು ಮಾಡಿ ಕೊಡಲಾಗಿದೆ. ಇದರಿಂದ ಪ್ರೇಕ್ಷಕರು ಖುಷ್ ಆಗಿದ್ದಾರೆ.

    ಸೋಮವಾರ ಉಡುಪಿಯ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಚಾರ ಕಾರ್ಯ ಭಿನ್ನವಾಗಿ ನಡೆದಿದೆ. ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳದ ಭಕ್ತರೇ ಹೆಚ್ಚು. ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ಚಿತ್ರ ನೋಡಿ ಎಂದು ಬರೆಯಲಾದ ಬೋರ್ಡ್ ಪ್ರವಾಸಿಗರ ಗಮನ ಸೆಳೆದಿದೆ. ಇದನ್ನೂ ಓದಿ: ಮುಂದಿನ ಪೀಳಿಗೆಯೂ ಕೊಲ್ಲೂರಿಗೆ ಬರಬೇಕಂದ್ರೆ ‘ದಿ ಕೇರಳ ಸ್ಟೋರಿ’ ಮೂವಿ ನೋಡಿ

    ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಿತ್ರಕ್ಕೆ ಅಡೆತಡೆ ಮಾಡಿದ್ದರೂ, ಇತರ ರಾಜ್ಯಗಳು ದಿ ಕೇರಳ ಸ್ಟೋರಿ ಕೈ ಹಿಡಿದಿವೆ. ಈಗಾಗಲೇ ನೂರಾರು ಕೋಟಿ ಗಳಿಕೆ ಮಾಡಿ, ಹಲವು ಕಡೆ ಇನ್ನೂ ತುಂಬಿದ ಪ್ರದರ್ಶನ ಕಾಣುತ್ತಿದೆ. ಇದನ್ನೂ ಓದಿ: ದಿ ಕೇರಳ ಸ್ಟೋರಿ 2 ನಿರ್ದೇಶನಕ್ಕೆ ತೆರೆಮರೆಯಲ್ಲಿ ತಯಾರಿ : ಸ್ಟೋರಿ ಏನು?

  • ವಿಜಯಪುರದ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 6 ಸ್ಥಾನ – ಬಿಜೆಪಿ, ಜೆಡಿಎಸ್‌ಗೆ ಒಂದೊಂದು ಸೀಟ್

    ವಿಜಯಪುರದ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 6 ಸ್ಥಾನ – ಬಿಜೆಪಿ, ಜೆಡಿಎಸ್‌ಗೆ ಒಂದೊಂದು ಸೀಟ್

    ವಿಜಯಪುರ: ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ವಿಜಯಪುರ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಒಂದೊಂದು ಸ್ಥಾನಗಳನ್ನು ಪಡೆದುಕೊಂಡಿದೆ.

    ವಿಜಯಪುರ ನಗರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಗೆಲುವಾಗಿದೆ. ಕಾಂಗ್ರೆಸ್‌ನ ಹಮೀದ್ ಮುಶ್ರೀಫ್ ಹಾಗೂ ಜೆಡಿಎಸ್‌ನ ಬಂದೇನವಾಜ್ ಹುಸೇನಸಾಬ್ ಮಹಾಬರಿ ಅವರಿಗೆ ಸೋಲಾಗಿದೆ.

    ಇಂಡಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡಾ ಪಾಟೀಲ್ ಅವರಿಗೆ ಗೆಲುವಾಗಿದ್ದು, ಜೆಡಿಎಸ್‌ನ ಬಿಡಿ ಪಾಟೀಲ್ ಹಾಗೂ ಬಿಜೆಪಿಯ ಕಾಸಗೌಡ ಬಿರಾದಾರಗೆ ಸೋಲಾಗಿದೆ.

    ನಾಗಠಾಣ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ್ ಕಟಕಧೋಂಡ ಅವರಿಗೆ ಗೆಲುವಾಗಿದೆ. ಬಿಜೆಪಿಯ ಸಂಜೀವ ಐಹೂಳೆ ಹಾಗೂ ಜೆಡಿಎಸ್‌ನ ದೇವಾನಂದ ಚವ್ಹಾಣ್‌ಗೆ ಸೋಲಾಗಿದೆ.

    ಸಿಂದಗಿ: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಗೆ ಗೆಲುವಾಗಿದ್ದು, ಬಿಜೆಪಿಯ ರಮೇಶ್ ಭೂಸನೂರ್ ಹಾಗೂ ಜೆಡಿಎಸ್‌ನ ವಿಶಾಲಾಕ್ಷಿ ಪಾಟೀಲ್‌ಗೆ ಸೋಲಾಗಿದೆ.

    ದೇವರಹಿಪ್ಪರಗಿ: ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ್ ಅವರಿಗೆ ಗೆಲುವಾಗಿದ್ದು, ಬಿಜೆಪಿಯ ಸೋಮನಗೌಡ ಪಾಟೀಲ್ ಸಾಸನೂರ್ ಹಾಗೂ ಕಾಂಗ್ರೆಸ್‌ನ ಶರಣಪ್ಪ ಸಿ ಸುಣಗಾರ್ ಸೋತಿದ್ದಾರೆ. ಇದನ್ನೂ ಓದಿ: ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು

    ಮುದ್ದೇಬಿಹಾಳ: ಕಾಂಗ್ರೆಸ್‌ನ ಅಪ್ಪಾಜಿ ನಾಡಗೌಡ ಮುದ್ದೇಬಿಹಾಳ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಬಿಜೆಪಿಯ ಎಎಸ್ ಪಾಟೀಲ್ ನಡಹಳ್ಳಿ ಹಾಗೂ ಜೆಡಿಎಸ್‌ನ ಬಸವರಾಜ್ ಭಜಂತ್ರಿ ಸೋತಿದ್ದಾರೆ.

    ಬಸವನಬಾಗೇವಾಡಿ: ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಕಂಡಿದ್ದಾರೆ. ಜೆಡಿಎಸ್‌ನ ಸೋಮನಗೌಡ ಪಾಟೀಲ್ ಹಾಗೂ ಬಿಜೆಪಿಯ ಎಸ್‌ಕೆ ಬೆಳ್ಳುಬ್ಬಿ ಅವರಿಗೆ ಸೋಲಾಗಿದೆ.

    ಬಬಲೇಶ್ವರ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂಬಿ ಪಾಟೀಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವಿಜಯಕುಮಾರ್ ಪಾಟೀಲ್ ಹಾಗೂ ಜೆಡಿಎಸ್‌ನ ಬಸವರಾಜ್ ಹೊನವಾಡ ಎಂಬಿ ಪಾಟೀಲ್ ವಿರುದ್ಧ ಸೋಲುಂಡಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

  • ಮತಯಂತ್ರಗಳನ್ನು ಒಡೆದು ದಾಂಧಲೆ ಪ್ರಕರಣ – 30 ಜನ ಪೊಲೀಸರ ವಶಕ್ಕೆ

    ಮತಯಂತ್ರಗಳನ್ನು ಒಡೆದು ದಾಂಧಲೆ ಪ್ರಕರಣ – 30 ಜನ ಪೊಲೀಸರ ವಶಕ್ಕೆ

    ವಿಜಯಪುರ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ಮತದಾನದ ವೇಳೆ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 25-30 ಜನರನ್ನು ವಶಕ್ಕೆ ಪಡೆದಿದ್ದಾರೆ.

    ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‌ಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಅವುಗಳನ್ನು ಚುನಾವಣಾ ಸಿಬ್ಬಂದಿ ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ 25-30 ಜನರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್‌ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಸ್‌ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು

    ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಗ್ರಾಮಸ್ಥರು ಮತ ಯಂತ್ರ ಒಡೆದು ಹಾಕಿದ್ದಾರೆ. ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು

    ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು

    ವಿಜಯಪುರ: ತಪ್ಪು ಮಾಹಿತಿಯಿಂದ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

    ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಮತ ಚಲಾಯಿಸಲು ಬಂದಿದ್ದ ವ್ಯಕ್ತಿ, ಮಹಿಳೆ ಪ್ರತ್ಯೇಕ ಮತದಾನ ಕೇಂದ್ರದಲ್ಲಿ ಸಾವು

    ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಇದನ್ನೂ ಓದಿ: Karnataka Election 2023: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯಿಂದ ಮತದಾನ

  • ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ ಪ್ರಕರಣ – ನಾಪತ್ತೆಯಾದ ಐವರ ವಿರುದ್ಧ ಕೇಸ್

    ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ ಪ್ರಕರಣ – ನಾಪತ್ತೆಯಾದ ಐವರ ವಿರುದ್ಧ ಕೇಸ್

    ವಿಜಯಪುರ: ಮಹಾನಗರ ಪಾಲಿಕೆ (Municipal Corporation) ಸದಸ್ಯೆಯ ಪತಿ, ರೌಡಿಶೀಟರ್ ಹೈದರ್ ಅಲಿ ನದಾಫ್ ಹತ್ಯೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿರುದ್ಧ ಜಲನಗರ‌ (Jalnagar) ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    ನಗರದ ಶೇಖ್ ಅಹ್ಮದ್ ಸುನೇನ್‍ಸಾಬ್ ಮೋದಿ, ಎಸ್.ಎಸ್ ಖಾದ್ರಿ, ತನ್ವೀರ್‌ಪಿರ್, ಇಕ್ಬಾಲ್‍ಪೀರ್ ಪೀರ್‌ಜಾದ್, ವಾಜೀದ್‍ಪೀರ್ ಹಾಗೂ ಶಾನ್‍ವಾಜ್ ದಫೇದಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ತನಿಖೆಯ ನಂತರ ಕೊಲೆಯ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ಶನಿವಾರ ಹಾಡ ಹಗಲೇ ದುಷ್ಕರ್ಮಿಗಳು ವಿಜಯಪುರ ನಗರದ ಚಾಂದಪುರ (Chandapura) ಕಾಲೋನಿಯಲ್ಲಿ ಗುಂಡು ಹಾರಿಸಿ ಹೈದರ್ ಅಲಿ ನದಾಫ್‍ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಆರೋಪಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದರು. ಪ್ರಕರಣ ನಡೆದ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಅವರು ತಿಳಿಸಿದ್ದರು.

    ಮೃತನ ಪತ್ನಿ ನಿಶಾತ್ ಹೈದರ್ ನದಾಫ್ ಅವರು ವಿಜಯಪುರದ (Vijayapura) ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆಯಾಗಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ

  • ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ವಿಜಯಪುರ: ಮಹಾನಗರಪಾಲಿಕೆ (Municipal Corporation) ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ (Vijayapura) ಶನಿವಾರ ನಡೆದಿದೆ.

    ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್ ನದಾಫ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ವ್ಯಕ್ತಿ. ನಗರದ ಚಾಂದಪುರ (Chandapur) ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಡಹಗಲೇ ಈ ಶೂಟೌಟ್ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಘಟನೆ ಜಲನಗರ (Jalnagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೃತನ ಕುಟಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಜಮೀನು ರಸ್ತೆ ವಿವಾದ, ಎರಡು ಕುಟುಂಬಗಳ ಮಾರಾಮಾರಿ – ಕೊಲೆಯಲ್ಲಿ ಅಂತ್ಯ