ವಿಜಯಪುರ: ಬಿಜೆಪಿ (BJP) ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಸಮರ್ಥ ಪಾಟೀಲ್ ವಿರುದ್ಧ ಗಾಂಧಿ ಚೌಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲೆಯ ಬಬಲೇಶ್ವರ (Babaleshwar) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ದಿನ ಅವರ ಪುತ್ರ ಸಮರ್ಥ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಆರೋಪಿಸಿದ್ದರು. ಇದರ ವಿಸ್ತೃತ ವರದಿಯನ್ನು ‘ಪಬ್ಲಿಕ್ ಟಿವಿ’ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಸಮರ್ಥ ವಿರುದ್ಧ ಪ್ರಕರಣ ದಾಖಲಿಸಿದೆ. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಘಟನೆಯ ವಿರುದ್ಧ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಗುಂಡು ಹಾರಿಸುವುದು ಸರಿಯಾದ ವರ್ತನೆಯಲ್ಲ ಎಂಬ ಆರೋಪವನ್ನು ಕಾಂಗ್ರೆಸ್ (Congress) ಮುಖಂಡರು ಮಾಡಿದ್ದರು. ಅಲ್ಲದೇ ಬಿಜೆಪಿ ಅಭ್ಯರ್ಥಿಯ ಪುತ್ರನ ಮೇಲೆ ಕೇಸ್ ದಾಖಲಿಸುವಂತೆ ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದರು.
ವಿಜಯಪುರ: ಇಲ್ಲಿನ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ (Congress Candidate) ಪ್ರಚಾರ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮಹಿಳಾ ಕಾರ್ಯಕರ್ತೆ ಶಾಂತಾಗೆ ತಲೆಗೆ ಕಲ್ಲು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ತಂದೆಗೆ ಟಿಕೆಟ್ ಸಿಕ್ಕಿದ್ದಕ್ಕೆ ಬಿಜೆಪಿ (BJP) ಅಭ್ಯರ್ಥಿ ವಿಜುಗೌಡ ಪಾಟೀಲ್ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡುತ್ತಿರುವ ವೀಡೀಯೋವೊಂದನ್ನು ಕಾಂಗ್ರೆಸ್ (Congress) ಮುಖಂಡರು ಬಿಡುಗಡೆ ಗೊಳಿಸಿದ್ದಾರೆ.
ವಿಜಯಪುರ (Vijayapura) ಕೆಪಿಸಿಸಿ ಪ್ರಚಾರ ಸಮೀತಿ ವಕ್ತಾರ ಸಂಗಮೇಶ ಬಬಲೇಶ್ವರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ವೀಡಿಯೋವನ್ನು ಬಿಡುಗಡೆಗೊಳಿಸಿದ್ದಾರೆ. ವೀಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಪುತ್ರ ಸಮರ್ಥ ವಿಜುಗೌಡ ಪಾಟೀಲ್ ಗಾಳಿಯಲ್ಲಿ 2 ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ಗುಂಡಾಗಿರಿ ಮಾಡುತ್ತಿದ್ದಾರೆ. ಜನರಿಗೆ ಕರೆ ಮಾಡಿ ಬೆದರಿಸಿ ಮತ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಪುತ್ರ ಸಮರ್ಥ ವಿಜುಗೌಡ ಪಾಟೀಲ್ ಗಾಳಿಯಲ್ಲಿ ಎರಡು ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಿದರು. ಇದನ್ನೂ ಓದಿ: ಇದು ಮುಸ್ಲಿಂ ಲೀಗ್ ಪ್ರಣಾಳಿಕೆ – ವೇದಿಕೆಯಲ್ಲೇ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟ ಈಶ್ವರಪ್ಪ
ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿಯಾದ (Bus Overturn) ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ನಡೆದಿದೆ.
ಬಸ್‌ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 40 ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅಪಘಾತದ ಹಿನ್ನೆಲೆ 15 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಜಯಪುರ: ಹಾಳು ಬಾವಿಯಲ್ಲಿ ವೃದ್ಧೆಯ ಶವ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಶೇಖವ್ವ ತಾಯಿ ನರಳು ಮೃತ ದುರ್ದೈವಿ. ದೇವರಹಿಪ್ಪರಗಿ ಪಟ್ಟಣದ ಉಪ್ಪಳೇ ಅವರ ಹಾಳು ಬಾವಿಯಲ್ಲಿ ಶವ ಪತ್ತೆಯಾಗಿದೆ. ಬೆಳಗ್ಗೆ ಗ್ರಾಮಸ್ಥರು ಬಾವಿ ಸಮೀಪ ಹೋದಾಗ ವಿಷಯ ತಿಳಿದಿದೆ. ಇವರ ಸಾವಿಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಮಾನಸಿಕ ಖಿನ್ನತೆಯಿಂದಾಗಿ ನೇಣಿಗೆ ಶರಣಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್
ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಟ್ಟಡದ 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಬಸವನಾಡಿನಿಂದಲೇ ಪ್ರಧಾನಿ ಮೋದಿ (Narendra Modi) ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಖಾಡಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಮೊದಲ ಹಂತವಾಗಿ ಬಸವಣ್ಣನ ಕರ್ಮಭೂಮಿ ಬೀದರ್‌ನಿಂದ ಚುನಾವಣೆಗೆ ಮೋದಿ ಕೇಸರಿ ರಣ ಕಹಳೆ ಮೊಳಗಿಸಲಿದ್ದಾರೆ. ಕಲ್ಯಾಣದ ಅನುಭವ ಮಂಟಪವನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಲಿಂಗಾಯತರ ಒಲೈಕೆ ಹಾಗೂ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ. ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿರುವ ಮೋದಿ ಶತಾಯಗತಾಯ 25+ ಸೀಟು ಗೆಲ್ಲಲು ರಣತಂತ್ರ ರೂಪಿಸಿದ್ದಾರೆ.
ಬೆಳಗ್ಗೆ 8:20ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ. 10:20ಕ್ಕೆ ಬೀದರ್ ಏರಬೇಸ್‌ಗೆ ಆಗಮಿಸಲಿದ್ದಾರೆ. 10:25ಕ್ಕೆ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್‌ಗೆ ಬರಲಿದ್ದಾರೆ. ಬೆಳಗ್ಗೆ 11ಕ್ಕೆ ಬೃಹತ್ ಬಹಿರಂಗ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ನಂತರ ಹುಮ್ನಾಬಾದ್‌ನಿಂದ ವಿಜಯಪುರಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಸೈನಿಕ್ ಶಾಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗಿ ಆಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8 ಮತಕ್ಷೇತ್ರಗಳಿದ್ದು, ಅದರಲ್ಲಿ ಬಹುತೇಕ ಧರ್ಮ ಆಧಾರಿತ ಚುನಾವಣೆ ನಡೆಯಲಿದೆ. ಅದೇ ಕಾರಣಕ್ಕೆ ಮೋದಿ ಆಗಮನ ಬಿಜೆಪಿಗರಲ್ಲಿ ಸಂತಸ ತಂದಿದೆ. ಇನ್ನು 8 ಮತಕ್ಷೇತ್ರದಲ್ಲಿ 7 ಮತಕ್ಷೇತ್ರಗಳಲ್ಲಿ ಬಿಜೆಪಿ ಧ್ವಜ ಹಾರಿಸಲು ಮೋದಿ ಮತ್ತು ಟೀಮ್ ಪ್ಲಾನ್ ಮಾಡಿದೆ.
ಬಿಜೆಪಿ ತೊರೆದಿರುವ ಲಕ್ಷ್ಮಣ ಸವದಿಗೆ ಕಡಿವಾಣ ಹಾಕುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಮೋದಿ ರಣತಂತ್ರ ರೂಪಿಸಿದ್ದಾರೆ. ವಿಜಯಪುರ ನಂತರ ಬೆಳಗಾವಿಗೆ ತೆರಳಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2:45 ಕ್ಕೆ ಯಬರಟ್ಟಿಗೆ ಆಗಮಿಸಿ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಯಬರಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಮೋದಿ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ – 27 ಜನರ ಉಚ್ಚಾಟನೆ
ಬೆಂಗಳೂರಲ್ಲಿ ಮೆಗಾ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಬರೋಬ್ಬರಿ 5.5 ಕಿ.ಮೀ ಉದ್ದದ ರೋಡ್ ಶೋ ಮಾಡಲಿದ್ದಾರೆ. ರೋಡ್ ಶೋಗೆ ಯಶವಂತಪುರದಲ್ಲಿ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದೆ. ನೈಸ್ ಜಂಕ್ಷನ್‌ನಿAದ ಸುಮನಹಳ್ಳಿ ಬ್ರಿಡ್ಜ್ ತನಕ ಮೋದಿ ರೋಡ್ ಶೋ ಇರಲಿದೆ. ಯಶವಂತಪುರ, ಹೆಬ್ಬಾಳ, ಮಲ್ಲೇಶ್ವರಂ, ಮಹಾಲಕ್ಷ್ಮಿಲೇಔಟ್, ದಾಸರಹಳ್ಳಿ, ಆರ್.ಆರ್. ನಗರ, ಯಲಹಂಕ, ಬ್ಯಾಟರಾಯನಪುರ, ಪುಲಿಕೇಶಿನಗರ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಒಟ್ಟು ಒಂಭತ್ತು ಕ್ಷೇತ್ರಗಳಿಂದ 1.5 ಲಕ್ಷಕ್ಕೂ ಹೆಚ್ಚು ಜನ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಕೋಲಾರ, ಹಾಸನ, ರಾಮನಗರ ಮೈಸೂರಿನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.
ವಿಜಯಪುರ: ವಿವಾಹಿತ ಮಹಿಳೆ (Woman) ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ (Blackmail) ಬೇಸತ್ತು ಮೊಬೈಲಿನಲ್ಲಿ ವೀಡಿಯೊ (Video) ಆನ್ ಮಾಡಿ ನೇಣಿಗೆ ಶರಣಾಗಿರುವ ಭಯಾನಕ ಘಟನೆ ವಿಜಯಪುರದ (Vijayapura) ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಸುಹಾನಾ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ. ಆಕೆಗೆ ಪ್ರಿಯಕರ ಅಲ್ತಾಫ್ ಸುಲೈಮಾನ್ ಗಂಡನನ್ನು ಬಿಟ್ಟು ನನ್ನೊಂದಿಗೆ ಬಾ, ಇಲ್ಲವೆಂದರೆ ನನ್ನೊಂದಿಗಿರುವ ಫೋಟೋವನ್ನು ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಇದರಿಂದ ಮರ್ಯಾದೆಗೆ ಹೆದರಿ ಸುಹಾನಾ ಆತ್ಮಹತ್ಯೆ ಮಾಡಕೊಂಡಿದ್ದಾಳೆ.
ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೈಮಾನ್ 1 ವರ್ಷದ ಹಿಂದೆ ಸುಹಾನಾಳೊಂದಿಗೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್‌ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾಗೆ ಪೋಷಕರು ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿಕೊಟ್ಟಿದ್ದರು.
ಪ್ರಿಯಕರನ ಬ್ಲ್ಯಾಕ್‌ಮೇಲ್‌ನೊಂದಿಗೆ ಸುಹಾನಾಳಿಗೆ ಇನ್ನೂ ಕೆಲವರು ಕಿರುಕುಳ ನೀಡಿರುವುದಾಗಿ ವೀಡಿಯೋದಲ್ಲಿ ಉಲ್ಲೇಖಿಸಿದ್ದಾಳೆ. ಇನ್ನೂಸ್ ಪಾರ್ಥನಲ್ಲಿ ಹಾಗೂ ದಸ್ತಗಿರಸಾಬ ಮುಳವಾಡ ಜೊತೆಗೆ ತನ್ನ ತಂದೆ ಅಸ್ಲಂ ಮುಲ್ಲಾಗೆ ರಾಜಕೀಯ ದ್ವೇಷವಿತ್ತು. ದಸ್ತಗಿರಸಾಬ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟಿತ್ತು. ಇದಕ್ಕೆ ಸಂಬಂಧಿಸಿದಂತೆ ಸುಹಾನಾಳಿಗೆ ಮೂವರು ಸೇರಿ ಬೆನ್ನುಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ವಿಮಾನದಲ್ಲಿ ಬಾಟಲಿ ಹಿಡಿದು ಬಡಿದಾಟ; ಫ್ಲೈಟ್ ತುರ್ತು ಭೂಸ್ಪರ್ಶ – ಇಬ್ಬರು ಮಹಿಳೆಯರು ಸೇರಿ ನಾಲ್ವರು ಅರೆಸ್ಟ್
ವಿಜಯಪುರ: ಏನು ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದ ಯುವಕನಿಗೆ ಮಾಜಿ ಸಚಿವ ಎಂ.ಬಿ ಪಾಟೀಲ್ (MB Patil) ಕಪಾಳ ಮೋಕ್ಷ ಮಾಡಿದ ಘಟನೆ ಬಬಲೇಶ್ವರ ಕ್ಷೇತ್ರದಲ್ಲಿ ನಡೆದಿದೆ.
ಶನಿವಾರ ತಡರಾತ್ರಿ ಪ್ರಚಾರಕ್ಕೆ ಬಂದಾಗ ವಿಜಯಪುರದ (Vijayapura) ದೇವಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂಬಿ ಪಾಟೀಲ್ ಪ್ರಚಾರಕ್ಕೆಂದು ಆಗಮಿಸಿದ್ದರು. ಈ ವೇಳೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ತುಪ್ಪದ ಮೇಲೆ ಕಪಾಳ ಮೋಕ್ಷ ಮಾಡಿದ್ದಾರೆ. ಇದನ್ನೂ ಓದಿ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, 22 ಜನರಿಗೆ ಗಾಯ
ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ, ಎಲೆಕ್ಷನ್ ಬರ್ತಿದ್ದಂತೆ 5 ವರ್ಷದ ನಂತರ ಗ್ರಾಮಕ್ಕೆ ಆಗಮಿಸಿದ್ದೀರಿ, ನಮ್ಮ ಗ್ರಾಮಕ್ಕೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದಾಗಿ ಕೋಪಗೊಂಡ ಎಂ.ಬಿ. ಪಾಟೀಲ್ ತುಂಬಿದ ಸಭೆಯಲ್ಲೇ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎಂ.ಬಿ ಪಾಟೀಲ್ ಕೃತ್ಯಕ್ಕೆ ಮತದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ: ಬೊಮ್ಮಾಯಿ ಆರೋಪ
ವಿಜಯಪುರ: ಬಿಜೆಪಿ (BJP) ನಿಮ್ಮನ್ನು ಸಚಿವರು, ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟೆಲ್ಲಾ ಅನುಭವಿಸಿ ಈಗ ಕಾಂಗ್ರೆಸ್‌ಗೆ (Congress) ಹೋಗುತ್ತೀರಲ್ಲ ನಿಮಗೆ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಎಸ್‌ಡಿಪಿಐ (SDPI) ಸಂಘಟನೆ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ಹೋಗಲು ನಿಮಗೆ ನಾಚಿಕೆ ಆಗುತ್ತೋ ಇಲ್ವೋ ಎಂದು ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Laxman Savadi) ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಕಿಡಿಕಾರಿದರು.
ವಿಜಯಪುರದಲ್ಲಿ (Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದಲಿತರು, ಮುಸ್ಲಿಮರು, ಮರಾಠರು, ಬ್ರಾಹ್ಮಣರಿಗೆ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಅನುಕೂಲ ಮಾಡಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ (Guarantee Card) ಮೋಸ ಮಾಡುವ ಯೋಜನೆಯಾಗಿದ್ದು, ಪಿಎಫ್‌ಐನ (PFI) ಸ್ವರೂಪವಾದ ಎಸ್‌ಡಿಪಿಐ ಜೊತೆಗೆ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದೆ. 2047ಕ್ಕೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡಲು ಹುನ್ನಾರ ನಡೆದಿದೆ. 2047ಕ್ಕೆ ಭಾರತದ ಹಿಂದೂಗಳನ್ನು ಮತಾಂತರ ಮಾಡುವುದು, ನಿರ್ನಾಮ ಮಾಡುವುದು ಎಸ್‌ಡಿಪಿಐ ಕೆಲಸವಾಗಿದೆ. ಪಿಎಫ್‌ಐ ಸಂಘಟನೆಯು ಕರ್ನಾಟಕವನ್ನು ಇಸ್ಲಾಂ (Islam) ರಾಜ್ಯವನ್ನಾಗಿಸುವ ಪ್ಲಾನ್ ಹಾಕಿಕೊಂಡಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ
ಪಿಎಫ್‌ಐ ಹಾಗೂ ಎಸ್‌ಡಿಪಿಐ ಭಯೋತ್ಪಾದಕರ ಮೇಲಿದ್ದ 1700ಕ್ಕೂ ಹೆಚ್ಚು ಕೇಸ್‌ಗಳನ್ನು ಸಿದ್ದರಾಮಯ್ಯ (Siddaramaiah) ಸರ್ಕಾರ ಹಿಂಪಡೆದಿದೆ. ಆದರೆ ಹಿಂದೂಪರ ಸಂಘಟನೆಗಳ ಮೇಲಿನ ಕೇಸ್ ವಾಪಸ್ ತೆಗೆದುಕೊಳ್ಳಲಿಲ್ಲ. ಗೋಹತ್ಯೆ ಮಾಡಿದವರನ್ನು ರಕ್ಷಣೆ ಮಾಡಿದ್ದಾರೆ, ಗೋರಕ್ಷಣೆ ಮಾಡಿದವರನ್ನು ಮಾಡಲಿಲ್ಲ. ಗೋಹತ್ಯೆಗೆ ಬೆಂಬಲ ಕೊಟ್ಟವರಿಗೆ 5 ಲಕ್ಷ, 10 ಲಕ್ಷ ಪರಿಹಾರವನ್ನು ಕೊಟ್ಟಂತಹ ದುರ್ದೈವ ಸಂಗತಿ ನಮ್ಮ ರಾಜ್ಯದಲ್ಲಿ ನಡೆದಿದೆ. ರಾಜ್ಯದಲ್ಲಿ ಕೋಮು ಗಲಭೆ ಹಾಗೂ ಅಶಾಂತಿ ಉಂಟುಮಾಡುವ ಸಲುವಾಗಿ ಕಾಂಗ್ರೆಸ್ ಎಸ್‌ಡಿಪಿಐ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್
ಬಿಜೆಪಿ ಲಿಂಗಾಯತರನ್ನು ಮುಗಿಸುವ ಯತ್ನ ಮಾಡ್ತಿದೆ ಎಂದು ಆರೋಪಿಸುತ್ತಿದ್ದೀರಿ. ನೀವೆಲ್ಲಾ ಹುದ್ದೆಗಳನ್ನು ಅನುಭವಿಸಿದ್ದು ಇದೇ ಲಿಂಗಾಯತ ಆಧಾರದ ಮೇಲೆ ಎಂಬುದು ನೆನಪಿರಲಿ. ಲಿಂಗಾಯತರನ್ನು ಕಡೆಗಣಿಸಿದ್ದಾರೆ ಎಂದು ಮಾತನಾಡುತ್ತಿದ್ದೀರಲ್ಲ. ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ (D.K.Shivakumar) ಏನು ಹೇಳಿದ್ದಾರೆ? ಕಾಂಗ್ರೆಸ್ ಬಂದ ಕೂಡಲೇ ಮೀಸಲಾತಿ (Reservation) ತೆಗೆದು ಹಾಕುತ್ತೇವೆ ಎಂದಿದ್ದಾರೆ. ಹಾಗಾದರೆ ಲಿಂಗಾಯತರಿಗೆ, ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾತಿ ಸಿಕ್ಕಿದ್ದು ಸಮಾಧಾನ ಇಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈ ದೇಶದಲ್ಲಿ ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ – ಮಲ್ಲಿಕಾರ್ಜುನ ಖರ್ಗೆ
ನೀವು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೀರಿ. ಇನ್ನೂ ಕಾಲ ಮಿಂಚಿಲ್ಲ. ಈಗಲೂ ವಾಪಸ್ ಬಂದು ಬಿಜೆಪಿಗೆ ಶರಣಾಗತಿಯಾಗಿ. ನಿಮಗೆಲ್ಲಾ ಅನ್ಯಾಯ ಆಗಿದೆ ಎಂದು ನನಗೆ ಕೆಲವೊಮ್ಮೆ ಅನಿಸುತ್ತದೆ. ನನ್ನನ್ನೂ ಸಚಿವನನ್ನಾಗಿ ಮಾಡಲಿಲ್ಲ. ನನಗೂ ಅನ್ಯಾಯ ಆಗಿದೆ ಎಂದು ಅನಿಸುತ್ತದೆ ಎಂದರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ
ವಿಜಯಪುರ: ನಿಷೇಧಿತ ಸಿಡಿ ಆಡುವ ಸೇವೆಯ ವೇಳೆ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿದ (Death) ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂಡಿ ತಾಲೂಕಿನ ತಾಂಬಾ ಗ್ರಾಮದ ಮಹಾಲಕ್ಷ್ಮೀ ದೇಗುಲದಲ್ಲಿ ಈ ಘಟನೆ ನಡೆದಿದ್ದು, ಸಿಡಿಯಾಡುವ ವೇಳೆ ಲಕ್ಷ್ಮೀಬಾಯಿ ಪೂಜಾರಿ ಎಂಬ ಮಹಿಳೆ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ. ಇದನ್ನೂ ಓದಿ: ಮುಂಬೈ-ಪುಣೆ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 12 ಸಾವು
ಏನಿದು ಸಿಡಿ ಆಚರಣೆ?
ಸಿಡಿ ಆಚರಣೆಯು ಮೌಢ್ಯಾಚರಣೆಯ ವ್ಯಾಪ್ತಿಯಲ್ಲಿ ಬರುವ ಆಚರಣೆಯಾಗಿದೆ. ಇದೊಂದು ರೀತಿಯ ಹರಕೆಯಾಗಿದ್ದು, ಭಕ್ತರು ಹರಕೆ ತೀರಿಸುವ ಸಲುವಾಗಿ ತಮ್ಮ ಬಾಯಿ ಮತ್ತು ಬೆನ್ನಿಗೆ ಕಬ್ಬಿಣದ ಸಲಾಕೆಗಳನ್ನು ಚುಚ್ಚಿಕೊಳ್ಳುತ್ತಾರೆ. ಬಳಿಕ ಇವರನ್ನು ಮೇಲಕ್ಕೆ ಎತ್ತಿ ಸುತ್ತಿಸಲಾಗುತ್ತದೆ. ಈ ಸೇವೆಯನ್ನು ನಿಷೇಧಿಸಲಾಗಿದೆಯಾದರೂ ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದ ಮಹಾಲಕ್ಷ್ಮೀ ದೇಗುಲದಲ್ಲಿ ಪ್ರತಿ ಶುಕ್ರವಾರ ಸಿಡಿ ಆಡುವ ಕಾರ್ಯಕ್ರಮ ನಡೆಯುತ್ತದೆ. ಇದನ್ನೂ ಓದಿ: ಪ್ರೇಯಸಿಯ ಬರ್ತ್‌ಡೇ ಕೇಕ್ ಕತ್ತರಿಸಿ ಬಳಿಕ ಕತ್ತನ್ನೂ ಕೊಯ್ದ ಪಾಗಲ್ ಪ್ರೇಮಿ