Tag: ವಿಜಯಪುರ

  • ಯತ್ನಾಳ್ ಕಾಲು ಹಿಡಿದು  ಭೇಟಿಗೆ ಸಮಯ ಕೇಳಿದ ರಮೇಶ್ ಜಿಗಜಿಣಗಿ ಅಣ್ಣ

    ಯತ್ನಾಳ್ ಕಾಲು ಹಿಡಿದು ಭೇಟಿಗೆ ಸಮಯ ಕೇಳಿದ ರಮೇಶ್ ಜಿಗಜಿಣಗಿ ಅಣ್ಣ

    ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ಅಂದ್ರೆ ಹಾವು, ಮುಂಗುಸಿ ಇದ್ದಂತೆ ಇರುತ್ತಾರೆ. ಅಂಥದ್ರಲ್ಲಿ ರಮೇಶ್ ಜಿಗಜಿಣಗಿ ಸ್ವಂತ ಅಣ್ಣ ಸಿದ್ರಾಮ ಜಿಗಜಿಣಗಿ (Sidrama Jigajinagi) ಅವರು ನಡುರಸ್ತೆಯಲ್ಲೆ ಯತ್ನಾಳ್ ಕಾಲು ಹಿಡಿದು ಭೇಟಿಗೆ ಸಮಯ ಕೇಳಿರುವುದು ಅಚ್ಚರಿ ಮೂಡಿಸಿದೆ.

    ವಿಜಯಪುರದ ವಾಟರ್ ಟ್ಯಾಂಕ್ ಬಳಿ ಈ ಘಟನೆ ನಡೆದಿದೆ. ಕಾಲು ಮುಗಿದು ಭೇಟಿಗೆ ಸಮಯ ಕೇಳಿದ ಸಿದ್ರಾಮ ಜಿಗಜಿಣಗಿ ಅವರಿಗೆ ಸಂಜೆ 5:30 ಕ್ಕೆ ಭೇಟಿಗೆ ಕಛೇರಿಗೆ ಬರುವಂತೆ ಯತ್ನಾಳ್ ಸೂಚಿಸಿದ್ದಾರೆ. ಇದನ್ನೂ ಓದಿ:   ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಚಿವರಿಂದ ಸ್ಥಳ ಪರಿಶೀಲನೆ

    ಇತ್ತ ತನ್ನ ಹಿಂಬಾಲಕರ ಜೊತೆ ಮಾತನಾಡುತ್ತಾ, ಇವರ ಅಣ್ಣ ಇವರದ್ದೇ 5 ಎಕರೆ ಜಮೀನು ಕಬಳಿಸಿದ್ದು, ಇವರು ಇವರು ಸಂಸದ ರಮೇಶ ಜಿಗಜಿಣಗಿ ಅಣ್ಣ ಅಂತಾ ಹೇಳಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದೇಶ್ವರ ಶ್ರೀಗಳ ಅಸ್ಥಿ ಸಂಗ್ರಹ- ಭಾನುವಾರ ಕೂಡಲಸಂಗಮ, ಗೋಕರ್ಣದ ಸಾಗರದಲ್ಲಿ ವಿಸರ್ಜನೆ

    ಸಿದ್ದೇಶ್ವರ ಶ್ರೀಗಳ ಅಸ್ಥಿ ಸಂಗ್ರಹ- ಭಾನುವಾರ ಕೂಡಲಸಂಗಮ, ಗೋಕರ್ಣದ ಸಾಗರದಲ್ಲಿ ವಿಸರ್ಜನೆ

    ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರ ಮುಗಿದು ಮೂರು ದಿನ ಕಳೆದಿದೆ. ಶ್ರೀಗಳ ಅಸ್ಥಿ ಭಸ್ಮವನ್ನಿಂದು ತೆಗೆದು ಸಂಗ್ರಹಿಸಿ ಇಡಲಾಯಿತು. ವೀಶೇಷ ಪೂಜೆ ಪುನಸ್ಕಾರ ಮಾಡಿ ಅಸ್ಥಿ ಸಂಗ್ರಹ ಕಾರ್ಯಕ್ರಮ ಜರುಗಿತು.

    ಗುರುವಾರ ಬೆಳಗ್ಗೆ 4 ಗಂಟೆಗೆ ಶ್ರೀಗಳ ಅಸ್ಥಿ (Ash) ಜಾಗದಲ್ಲಿ ಅಸ್ಥಿ ಸಂಗ್ರಹಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಯಿತು. ನಂತರ 6 ಗಂಟೆಗೆ ರಾಮಕೃಷ್ಣ ಆಶ್ರಮದ ಗುರುಗಳು ಸೇರಿದಂತೆ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮಿಜಿ ನೇತೃತ್ವದಲ್ಲಿ ಚಿತೆಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ಮೊದಲು ಅಸ್ಥಿ ಇರುವ ಜಾಗಕ್ಕೆ ನೀರು ಸಿಂಪಡಿಸಲಾಯಿತು. ನಂತರ ಚಿತೆಗೆ ನೀರು, ತುಪ್ಪಾ, ಹಾಲು ಹಾಕಲಾಯಿತು. ತದನಂತರ ಊದಿನ ಕಡ್ಡಿ ಬೆಳಗಿ ಕರ್ಪೂರದ ಆರತಿ ಮಾಡಲಾಯಿತು. ಚಿತೆಯ ಸುತ್ತ ಕರ್ಪೂರ ಹಚ್ಚಿ ಮಂತ್ರಘೋಷ, ಭಜನೆ, ಪ್ರಾರ್ಥನೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ಜನವರಿ 8 ಭಾನುವಾರದಂದು ಶ್ರೀಗಳು ನಮ್ಮನ್ನಗಲಿ 7ನೇ ದಿನವಾಗುತ್ತೆ. ಅಂದು ಅಸ್ಥಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ನಂತರ ಗೋಕರ್ಣದ ಸಾಗರದಲ್ಲಿ ಅಸ್ಥಿ ವಿಸರ್ಜನೆ ಮಾಡೋದಾಗಿ ತಿಳಿಸಿದರು.

    ಸಿದ್ದೇಶ್ವರ ಶ್ರೀಗಳ ಅಸ್ಥಿ ಪೂಜೆಯಲ್ಲಿ ಭಕ್ತರು ಭಾಗಿಯಾಗಿ ಕೈ ಮುಗಿದು ಪುನೀತರಾದ್ರು. ಓಂ ನಮ: ಶಿವಾಯ ಅಂತಾ ಜಪಿಸುತ್ತಾ ಭಕ್ತರು ಶ್ರೀಗಳನ್ನ ನೆನದು ಕಣ್ಣೀರಿಟ್ಟರು. ಇದನ್ನೂ ಓದಿ: ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ- ಭಕ್ತರಿಗೆ ಕೊಡಲ್ಲ ಪೂಜ್ಯರ ಚಿತಾಭಸ್ಮ

    ಇಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ- ಭಕ್ತರಿಗೆ ಕೊಡಲ್ಲ ಪೂಜ್ಯರ ಚಿತಾಭಸ್ಮ

    ವಿಜಯಪುರ: ಸರಳತೆಯ ಸ್ವರೂಪ ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳ ಚಿತೆಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರಿಗೆ ಚಿತೆಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

    ವಿಜಯಪುರ (Vijayapura) ದ ಜ್ಞಾನ ಯೋಗಾಶ್ರಮದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರದ ಸ್ಥಳದ ದರ್ಶನಕ್ಕೆ ಭಕ್ತರು ಸಾಲು ಗಟ್ಟಿ ಆಗಮಿಸುತ್ತಿದ್ದಾರೆ. ಇತ್ತ ಶ್ರೀಗಳ ಚಿತಾಭಸ್ಮವನ್ನು ವಿಸರ್ಜಿಸುವ ಬಗ್ಗೆ ಇತರೆ ಶ್ರೀಗಳು ಚರ್ಚೆ ನಡೆಸುತ್ತಿದ್ದಾರೆ. ಗುರುವಾರ ಮೂರನೇ ದಿನದ ಕಾರ್ಯಕ್ರಮ ನಡೆಯಲಿದೆ. ಚಿತೆಗೆ ಹಾಲು, ನೀರು ಹಾಕಿ ಮಂತ್ರಗಳೊಂದಿಗೆ ಪೂಜೆ ಸಲ್ಲಿಸಿ ಮುಂದಿನ ಕಾರ್ಯಕ್ರಮ ಮಾಡಲಾಗುತ್ತೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀ ಲೀನ

    ಮೂರನೇ ದಿನವಾದ ಇಂದು (ಗುರುವಾರ) ಮುಂದಿನ ವಿಧಿ-ವಿಧಾನ ಕಾರ್ಯಕ್ರಮಗಳು ನಡೆಯಲಿವೆ. ಚಿತೆಯನ್ನ ಯಾವ ನದಿಯಲ್ಲಿ ಬಿಡುವುದು, ಯಾವಾಗ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು. ಅಲ್ಲದೆ ಶ್ರೀಗಳ ಚಿತೆಯ ಭಸ್ಮವನ್ನ ಭಕ್ತರಿಗೆ ನೀಡುತ್ತೇವೆ ಅಂತಾ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳು ಹೇಳಿದ್ದರು. ಆದ್ರೆ ಯಾರಿಗೂ ಚಿತಾ ಭಸ್ಮವನ್ನ ಕೊಡಲ್ಲ. ವಿಭೂತಿಯನ್ನ ಭಕ್ತರು ತಂದು ಚಿತೆಯ ಹತ್ತಿರ ಇಟ್ಟು ಅದನ್ನೇ ಅವರು ಮನೆಗಳಲ್ಲಿ ಪೂಜಿಸಬೇಕು ಅಂತಾ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

    ಒಟ್ಟಾರೆ ಶ್ರೀಗಳ ಚಿತೆಯ ಸ್ಥಳದ ದರ್ಶನಕ್ಕೆ ಭಕ್ತ ಸಾಗರ ಹರಿದು ಬರ್ತಿದ್ದು, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗ್ತಿದೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಂಚಭೂತಗಳಲ್ಲಿ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀ ಲೀನ

    ಪಂಚಭೂತಗಳಲ್ಲಿ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀ ಲೀನ

    ವಿಜಯಪುರ: ಶತಮಾನದ ಸರಳ ಸಂತ, ನಡೆದಾಡುವ ದೇವರು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ (Siddeshwar Swamiji) ಅಂತ್ಯಕ್ರಿಯೆ (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ನೆರವೇರಿಸಲಾಯಿತು.

    ಜ್ಞಾನಯೋಗಾಶ್ರಮದ ಆವರಣದಲ್ಲಿ ಕಟ್ಟೆಯನ್ನು ಕಟ್ಟಿ, ಅದರ ಮೇಲೆ 6 ಅಡಿ ಅಗಲ ಹಾಗೂ 9 ಅಡಿ ಉದ್ದ ಹಾಗೂ ಒಂದುವರೆ ಎತ್ತರದ ಗದ್ದುಗೆಯನ್ನು ನಿರ್ಮಾಣ ಮಾಡಲಾಗಿತ್ತು. ಅಲ್ಲದೇ ಶ್ರೀಗಳು ತಮ್ಮ ಇಚ್ಛೆಯಂತೆಯೇ ಅಂತ್ಯಕ್ರಿಯೆ ಆಗಬೇಕು ಎಂದಿರುವ ಹಿನ್ನೆಲೆಯಲ್ಲಿ ಗದ್ದುಗೆ ಮೇಲೆ ಶ್ರೀಗಳಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ಸುತ್ತೂರು ಶ್ರೀಗಳು, ಕನ್ನೇರಿ ಶ್ರೀಗಳು ಮತ್ತು ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿಗಳು ಸಿದ್ದೇಶ್ವರರ ಅಂತಿಮ ಸಂಕಲ್ಪವನ್ನು ಪೂರೈಸಿದರು. ಈ ಮೊದಲು ಪಾರ್ಥಿವ ಶರೀರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಚಿವರಾದ ಮುರುಗೇಶ್ ನಿರಾಣಿ, ಶ್ರೀರಾಮುಲು, ಶಶಿಕಲಾ ಜೊಲ್ಲೆ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಈ ಮೊದಲು ಸರ್ಕಾರದಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ಸೆಟ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ಆ ಬಳಿಕ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಿದರು. ಇದನ್ನೂ ಓದಿ: ಸ್ವಾಮೀಜಿ ದರ್ಶನ ಮಾಡೋ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವಾಗ್ತಿದೆ: ಜಮೀರ್

    ಸೈನಿಕ ಶಾಲೆ ಆವರಣದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಗೌರವ ವಂದನೆ ಬಳಿಕ ಪಾರ್ಥಿವ ಶರೀರವನ್ನು ಯೋಗಾಶ್ರಮದ ಅಂಗಲದವರೆಗೆ ಸುಮಾರು 5 ಕಿ.ಮೀ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ವೇಳೆ ಭಕ್ತವೃಂದ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅಂತಿಮ ದರ್ಶನ ಪಡೆದುಕೊಂಡರು. ಯೋಗಾಶ್ರಮದ ಸುತ್ತ ಜನ ಸೇರಿದ್ದರು. ಭಕ್ತರಿಗೆ LED ಮೂಲಕ ಅಂತ್ಯಸಂಸ್ಕಾರ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.

    ಬದುಕಿನುದ್ದಕ್ಕೂ ಸರಳವಾಗಿ ಜೀವನ ಸಾಗಿಸಿ, ಸಾರ್ಥಕತೆಯ ಬದುಕು ನಡೆಸಿ ಲಕ್ಷಾಂತರ ಜನರಿಗೆ ಆದರ್ಶವಾಗಿದ್ದ ಶ್ರೀಗಳ ಪಾರ್ಥಿವ ಶರೀರವನ್ನು ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಬೆಳಗ್ಗೆಯಿಂದಲೇ ಅವಕಾಶ ಮಾಡಿಕೊಡಲಾಗಿತ್ತು. ಆದ್ರೂ ಕ್ಷಣ ಕ್ಷಣಕ್ಕೂ ಭಕ್ತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಿತ್ತು. ಹೀಗಾಗಿ ಸಂಜೆ 5 ಗಂಟೆವರೆಗೆ ಅಂತಿಮ ದರ್ಶನಕ್ಕೆ ವಿಜಯಪುರ ಜಿಲ್ಲಾಡಳಿತ ಸಮಯ ವಿಸ್ತರಿಸಿತ್ತು. ನಡೆದಾಡುವ ದೇವರನ್ನು ನೆನೆದು ಭಕ್ತರ ಕಣ್ಣೀರು, ಗೋಳಾಟ ಮುಗಿಲುಮುಟ್ಟಿತ್ತು. ನಮ್ಮ ದೇವರಿಗೆ ಸಾವಿಲ್ಲ… ಮತ್ತೆ ಹುಟ್ಟಿ ಬನ್ನಿ ಸಿದ್ದಪ್ಪಾಜಿ ಅನ್ನೋ ಘೋಷಣೆಗಳು ಮೊಳಗಿದವು. 20 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆದರು. ಬಳಿಕ ಶ್ರೀಗಳ ಇಚ್ಛೆಯಂತೆ ಅವರು ಮಾಡಿದ ವಿಲ್ ಪ್ರಕಾರ ಅಗ್ನಿ ಸ್ಪರ್ಶ ಮಾಡಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದನ್ನೂ ಓದಿ: ಮಣ್ಣಿನಲ್ಲಿ ಮೂಡಿದ ಸರಳತೆಯ ಸಾಕಾರ ಮೂರ್ತಿ

    ಅಂತ್ಯಸಂಸ್ಕಾರದಲ್ಲಿ ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ, ಚಿತ್ರನಟ ಡಾಲಿ ಧನಂಜಯ್, ಸೇರಿದಂತೆ ಅನೇಕ ಮಂದಿ ಅಂತಿಮ ದರ್ಶನ ಪಡೆದರು. ಬಳಿಕ ನಡೆದ ಅಂತ್ಯಸಂಸ್ಕಾರದಲ್ಲಿ ಸಿ.ಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿ.ಎಂ ಯಡಿಯೂರಪ್ಪ,  ಸಚಿವರಾದ ಶ್ರೀರಾಮುಲು, ಮುರುಗೇಶ್‌ ನಿರಾಣಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದರು.

    ಪ್ರವಚನ ಚೇತನರಾಗಿ, ಭಕ್ತರ ಸಿದ್ದಾಪಾಜಿಯಾಗಿ ವಿಜಯಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಪ್ರಸಿದ್ದಿಯಾಗಿದ್ರು. ಇಂತಹ ಸಂತನ ಅಗಲಿಕೆಗೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. ಅಂತಿಮ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು. ಪ್ರವಚನಗಳಿಂದಲೇ ಕೋಟ್ಯಂತರ ಭಕ್ತರ ಬಾಳು ಬೆಳಗಿದ್ದ ಸಿದ್ದಪ್ಪಾಜಿಯ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ಪ್ರವಾಹೋಪಾದಿಯಲ್ಲಿ ಜನ ಬಂದಿದ್ದರು. ಕಣ್ಣು ಹಾಯಿಸಿದ್ದು ಕಿಲೋ ಮೀಟರ್‌ಗಟ್ಟಲೇ ಜನರ ದಂಡೇ ಕಾಣಿಸುತ್ತಿತ್ತು. ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕೆ ಬ್ಯಾರಿಕೇಡ್‍ಗಳನ್ನೇ ಮುರಿದು ಭಕ್ತರು ಒಳನುಗ್ಗಲು ಯತ್ನಿಸಿದ್ರು. ಕೆಲಕಾಲ ತಳ್ಳಾಟ ನೂಕಾಟವೇ ಆಯ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

    ಸಿದ್ದೇಶ್ವರರು ಹೊಂದಿದ್ದ ಜನಪ್ರಿಯತೆಯನ್ನು ಹಿಂದೂ-ಮುಸ್ಲಿಮ್-ಕ್ರಿಶ್ಚಿಯನ್ ಎನ್ನದೇ ಎಲ್ಲಾ ವರ್ಗದ ಜನ ಹೆಣ್ಣು-ಗಂಡೆಂಬ ಬೇಧವಿಲ್ಲದೇ, ವಯಸ್ಸಿನ ಅಂತರವಿಲ್ಲದೇ ಭಕ್ತಜನ ಸ್ವಾಮೀಜಿ ಅಂತಿಮ ದರ್ಶನಕ್ಕೆ ಬಂದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ವಿಜಯಪುರ: ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿರುವ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.

    ವಿಜಯಪುರ (Vijayapura) ದ ಜ್ಞಾನಯೋಗಾಶ್ರಮದಲ್ಲಿ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀಗಳ ಇಚ್ಛೆಯಂತೆ ಅವರು ಮಾಡಿದ ವಿಲ್ ಪ್ರಕಾರ ಅಗ್ನಿ ಸ್ಪರ್ಷ ಮಾಡಿ ಅಂತ್ಯಸಂಸ್ಕಾರ (Funeral) ನೆರವೇರಿಸಲಾಗುತ್ತಿದೆ. ಇದನ್ನೂ ಓದಿ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    ಅಂತ್ಯಸಂಸ್ಕಾರದ ಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಅಂತ್ಯಸಂಸ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೊಶಿ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ಗಣ್ಯರಿಗೆ 500 ಆಸನ, ಸ್ವಾಮಿಜಿಗಳಿಗೆ 150 ಆಸನ ಹಾಗೂ ಕುಟುಂಬಸ್ಥರಿಗೆ 100 ಆಸನಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 3 ಗಂಟೆಗೆ ಅಂತಿಮ ದರ್ಶನ ಪುರ್ಣಗೊಳಿಸಿ ನಗರದ ಪ್ರಮುಖ ಬೀದಿಗಳಲ್ಲಿ ಪಾದಾಯಾತ್ರೆ ಮೂಲಕ ಪಾರ್ಥಿವ ಶರೀರ ಆಶ್ರಮಕ್ಕೆ ಬರಲಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಸುತ್ತೂರು ಶ್ರೀ ಗಳು ಅಂತ್ಯಸಂಸ್ಕಾರದ ಬಗ್ಗೆ ಮಾಹಿತಿ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!

    ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!

    ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀ (Siddeshwara Sri) ಗಳು ಲಿಂಗೈಕ್ಯ ಹಿನ್ನೆಲೆಯಲ್ಲಿ ಭಕ್ತರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅಂತೆಯೇ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯಕ್ತಿಯೊಬ್ಬರು ತಮ್ಮ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದಿದ್ದಾರೆ. ಈ ಮೂಲಕ ವೃದ್ಧೆಗೆ ಶ್ರೀಗಳ ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ.

    ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ. ವಿಜಯಪುರ (Vijayapura) ದ ನಾಗಠಾಣ ಗ್ರಾಮದ 85 ವರ್ಷದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು. ಬಬಲೇಶ್ವರ ಗ್ರಾಮದ ಶಿವಾನಂದ ಅವರು ಅಜ್ಜಿಯ ಪರದಾಟ ನೋಡಿ ಭುಜದ ಮೇಲೆ ಹೊತ್ತು ತಂದಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿ ವೈದ್ಯರ ತಂಡ ಚಿಕಿತ್ಸೆಯಲ್ಲಿ ನಿರತವಾಗಿತ್ತು. ಆಶ್ರಮದ ಕೊಠಡಿಯಲ್ಲೇ ಚಿಕಿತ್ಸೆ ಮುಂದುವರಿದಿತ್ತು. ಜಿಲ್ಲಾಧಿಕಾರಿ ಡಾ. ವಿಜಯ ಮಾಂತೇಶ ದಾನಮನ್ನವರ, ಎಸ್ಪಿ ಎಚ್. ಡಿ.ಆನಂದ್ ಕುಮಾರ್ ಹಾಗೂ ಹಲವು ಮಠಾಧೀಶರು ಆಶ್ರಮದ ಆವರಣದಲ್ಲಿ ಬೀಡು ಬಿಟ್ಟಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸೋಮವಾರ ಸಂಜೆ 6:05ಕ್ಕೆ ಸ್ವಾಮೀಜಿ ಲಿಂಗೈಕ್ಯರಾದರು.

    ಸದ್ಯ ಸೈನಿಕ ಶಾಲೆ (Sainika School) ಯಲ್ಲಿ ಶ್ರೀಗಳಿಗೆ ತ್ರಿವರ್ಣ ಧ್ವಜ ಹೊದಿಸಿ, ಗಾಜಿನ ಮಂಟಪದಲ್ಲಿ ಪಾರ್ಥೀವ ಶರೀರವನ್ನಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ನಸುಕಿನ ಜಾವದಲ್ಲೇ ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಭಕ್ತರಿಗಾಗಿ ವಿಜಯಪುರ ಬಸ್ ನಿಲ್ದಾಣದಿಂದ ಸೈನಿಕ ಶಾಲೆಗೆ 25 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    ಸುಮಾರು 6 ಲಕ್ಷ ಭಕ್ತರಿಗೆ ಪ್ರಸಾದ, ನೀರು, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯೇ 30 ಸಾವಿರಕ್ಕೂ ಹೆಚ್ಚು ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ರಾಜ್ಯದ ಪ್ರಮುಖ ಮಠಗಳ ಮಠಾಧೀಶರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಸಹ ಭಾಗವಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು

    ವಿಜಯಪುರ: ನಾವು ನಮ್ಮ ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನವನ್ನೂ ಕೇಳುತ್ತಿದ್ದೆವು. ಶ್ರೀಗಳ ಚಿಂತನೆ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ ಎಂದು ಸಿದ್ದೇಶ್ವರ ಸ್ವಾಮೀಜಿಯವರ (Siddheshwar Swamiji) ಮುಸ್ಲಿಂ (Muslim) ಭಕ್ತರು ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

    ಸೋಮವಾರ ಸಂಜೆ 6 ಗಂಟೆ ವೇಳೆಗೆ ನಡೆದಾಡುವ ದೇವರು ಸಿದ್ದೇಶ್ವರ ಮಹಾಸ್ವಾಮಿ ಲಿಂಗೈಕ್ಯರಾಗಿರುವ ಹಿನ್ನೆಲೆ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಭಕ್ತರ ದಂಡು ವಿಜಯಪುರಕ್ಕೆ (Vijayapura) ಆಗಮಿಸಿದೆ. ಇದೇ ವೇಳೆ ಅವರ ಅಂತಿಮ ದರ್ಶನಕ್ಕೆಂದು ಬಂದಿದ್ದ ಮುಸ್ಲಿಂ ಭಕ್ತರು ತಮಗಿದ್ದ ಅವರ ಮೇಲಿನ ಭಕ್ತಿ ಬಗ್ಗೆ ಗದ್ಗದಿತರಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದಾರೆ.

    “ನಾವು ಶ್ರೀಗಳು ಬದುಕಿದ್ದಾಗ ಅವರ ಮಠಕ್ಕೆ ಹೋಗಿ ಅವರ ಪ್ರವಚನ ಕೇಳಬೇಕೆಂದು ಬಹಳ ಬಾರಿ ಅಂದುಕೊಂಡಿದ್ದೆವು. ಆದರೆ ನಾವು ಇಂದು ಅವರು ನಮ್ಮೊಂದಿಗೆ ಇಲ್ಲದಿರುವಾಗ ಭೇಟಿಯಾಗುತ್ತೇವೆ ಎಂದುಕೊಂಡಿರಲಿಲ್ಲ. ಅವರ ಬಗೆಗಿನ ಒಂದು ನಿಜ ವಿಚಾರ ಏನೆಂದರೆ, ಅವರಿಗೆ ಮರಣ ಇಲ್ಲ ಎಂದು ಭಾವನಾತ್ಮಕವಾಗಿ ತಮ್ಮ ನೋವನ್ನು ತೋಡಿಕೊಂಡರು. ಇದನ್ನೂ ಓದಿ: ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ಕಳೆದ 5 ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಸೋಮವಾರ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‌ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಎಂದು ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ 6:05ಕ್ಕೆ ಅವರು ಲಿಂಗೈಕ್ಯರಾಗಿದ್ದಾರೆ.

    ಅವರ ಅಂತಿಮ ದರ್ಶನಕ್ಕಾಗಿ ನಗರದ ಸೈನಿಕ ಶಾಲೆ ಮೈದಾನದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಧರ್ಮದ ಎಲ್ಲೆಯನ್ನು ಮೀರಿ ಶ್ರೀಗಳ ದರ್ಶನ ಪಡೆಯಲು ಸಾವಿರಾರು ಜನರು ಹರಿದು ಬಂದಿದ್ದಾರೆ. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಸ್ವಾಮಿಗಳ ಅಗಲಿಕೆಗೆ ಸ್ಯಾಂಡಲ್ ವುಡ್ ನಿಂದ ಕಂಬನಿ

    ಸಿದ್ದೇಶ್ವರ ಸ್ವಾಮಿಗಳ ಅಗಲಿಕೆಗೆ ಸ್ಯಾಂಡಲ್ ವುಡ್ ನಿಂದ ಕಂಬನಿ

    ಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ವಿಜಯಪುರದ ಜ್ಞಾನಯೋಗಾಶ್ರಮದ ಗುರುಗಳಾದ ಸಿದ್ದೇಶ್ವರ ಸ್ವಾಮಿಗಳ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಸಾಕಷ್ಟು ಕಲಾವಿದರು, ನಿರ್ದೇಶಕರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. ಅಗಲಿದ ಚೇತನನ ಗುಣಗಾನ ಮಾಡಿದ್ದಾರೆ. ನಾಡಿನ ಏಳಿಗೆಗಾಗಿ ಮಹಾತ್ಮ ಮತ್ತೆ ಹುಟ್ಟಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.

    ಸಿದ್ದೇಶ್ವರ ಸ್ವಾಮಿ ಅಗಲಿಕೆಯ ಕುರಿತು ಟ್ವಿಟ್ ಮಾಡಿರುವ ನಟ ಧನಂಜಯ್, ‘ಶತಮಾನದ ಸಂತ, ನಾಡು ಕಂಡ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರುವುದು ತುಂಬಾ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಜ್ಞಾನದ ಬೆಳಕು ನಮ್ಮನ್ನು ಸದಾ ಕಾಯುತ್ತಿರಲಿ’ ಎಂದು ಬರೆದಿದ್ದಾರೆ.

    ಹಿರಿಯ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಕೂಡ ಕಂಬನಿ ಮಿಡಿದಿದ್ದು, ‘ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ಉಳಿದಿರುವ, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ ಅಪಾರ ನೋವು ತಂದಿದೆ. ನಿಮ್ಮ ಸಾಮಾಜಿಕ ಸೇವೆ ಯಾವಾಗಲೂ ಹೃದಯದಲ್ಲಿ ಇರತ್ತೆ. ನಿಮಗೆ ಅನಂತ ನೋವಿನ ಅಶ್ರುತರ್ಪಣೆ’ ಎಂದು ಟ್ವಿಟ್ ಮಾಡಿದ್ದಾರೆ.

    ನಿರ್ದೇಶಕ, ನಟ ರಿಷಬ್ ಶೆಟ್ಟಿ ಕೂಡ ಅಗಲಿದ ಸ್ವಾಮೀಜಿಗಳನ್ನು ನೆನಪಿಸಿಕೊಂಡಿದ್ದು, ‘ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ನಿಮ್ಮ ಅಗಲಿಕೆ ಸಹಿಸಲಸಾಧ್ಯ. ನಮಗಾಗಿ ಇನ್ನಷ್ಟು ವರ್ಷ ಬದುಕಬೇಕಿತ್ತು ನೀವು. ನಿಮ್ಮ ಬದುಕೇ ನಮಗೊಂದು ಆದರ್ಶ. ಹೋಗ್ಬನ್ನಿ ಗುರುವರ್ಯರೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ನಿರ್ದೇಶಕ ಗುರು ದೇಶಪಾಂಡೆ ಗುರುಗಳ ಲಿಂಗೈಕ್ಯಕ್ಕೆ ಅಂತಿಮ ನಮಗಳನ್ನು ಸಲ್ಲಿಸಿದ್ದು, ‘ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ, ಕಾಯಕಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದುಕೊಂಡಿದ್ದಾರೆ. ಇವರುಗಳ ಜೊತೆಗೆ ಇನ್ನೂ ಅನೇಕ ಕಲಾವಿದರು, ತಂತ್ರಜ್ಞರು, ನಿರ್ದೇಶಕರು ಸೇರಿದಂತೆ ಅನೇಕರು ಕಂಬಿನಿ ಮಿಡಿದು, ಅಗಲಿದ ದೇವರಿಗೆ ನಮನ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ವಿಜಯಪುರ: ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddheshwar Swamiji) ಅವರನ್ನು ಕರ್ನಾಟಕ, ಭಾರತದ ಅತ್ಯುತ್ತಮ ಆಧ್ಯಾತ್ಮಿಕ ಚಿಂತಕರು ಮತ್ತು ಪ್ರೇರಕ ಭಾಷಣಕಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿತ್ತು ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತಿತ್ತು.

    ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು 1948ರಲ್ಲಿ ವಿಜಯಪುರ (Vijayapura) ಜಿಲ್ಲೆಯ ತಾಳ ಬಿಜ್ಜರಗಿಯಲ್ಲಿ ಜನಿಸಿದರು. ಸ್ವಾಮೀಜಿಯನ್ನು ಉತ್ತರ ಕರ್ನಾಟಕದ ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದರು. 19ನೇ ವಯಸ್ಸಿನಲ್ಲಿ, ಸ್ವಾಮೀಜಿಯವರು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತತ್ವ ಶಿರೋಮಣಿ ಪುಸ್ತಕವನ್ನು ಬರೆದರು.

    ನಡೆದಾರುವ ನಾರಾಯಣ ಎಂದು ಕರೆಯಲ್ಪಡುವ ಸ್ವಾಮೀಜಿ ದೈವಭಕ್ತಿಯ ನಿಜವಾದ ಮತ್ತು ಜೀವಂತ ಉದಾಹರಣೆಯಾಗಿದ್ದರು. ಈ ಹೆಸರಿನ ಅರ್ಥ ಜೀವಂತ ದೇವರು ಹಾಗೂ ಸ್ವಾಮೀಜಿ ಸಮಾಜದ ಉನ್ನತಿ ಮತ್ತು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದರು. ದಕ್ಷ ಶಿಕ್ಷಕ, ನಿಜವಾದ ಆಧ್ಯಾತ್ಮಿಕ ಆತ್ಮ, ಮಾನವತಾವಾದಿ ಮತ್ತು ಅನೇಕ ಉಪನ್ಯಾಸಗಳಲ್ಲಿ ವಿದ್ವಾಂಸರಾಗಿದ್ದ ಸಿದ್ದೇಶ್ವರ ಸ್ವಾಮೀಜಿ ಅವರು ಈ ಯುಗದ ಅತ್ಯಂತ ಜನಪ್ರಿಯ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರಾಗಿದ್ದರು.

    ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ: 4ನೇ ತರಗತಿವರೆಗೆ ಓದಿದ ಬಳಿಕ ಮಲ್ಲಿಕಾರ್ಜುನ ಸ್ವಾಮೀಜಿ ಬಳಿ ಬಂದಿದ್ದರು. ಮಲ್ಲಿಕಾರ್ಜುನ ಸ್ವಾಮೀಜಿ ಬೆಳೆಯುವ ಅವರೆಕಾಯಿಯ ಬೇರಿನಲ್ಲಿ ಇದ್ದುದರಿಂದ ಅವರ ಚಾಣಾಕ್ಷತನ ತಡವಾಗಲಿಲ್ಲ. ಅವರು ಸಿದ್ದೇಶ್ವರನನ್ನು ಬೋಧಿಸಬಹುದಾದ ಸ್ಥಳಗಳಿಗೆ ಕರೆದೊಯ್ದರು.

    ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಚಿಕ್ಕ ವಯಸ್ಸಿನಲ್ಲೇ ಆಧ್ಯಾತ್ಮಿಕತೆಯತ್ತ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು 20 ವರ್ಷವಾದಾಗ, ಅವರು ಮನೆಯಿಂದ ಹೊರಟು ಕರ್ನಾಟಕದ ಗದಗ ಜಿಲ್ಲೆಯ ನಾಗನೂರು ಕಡೆಗೆ ತೆರಳಿದರು. ಅಲ್ಲಿ ಶ್ರೀ ಶಿವಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಶಿಷ್ಯರನ್ನಾಗಿ ಸ್ವೀಕರಿಸಿದರು. ಗದಗಿನ ಸದಾಶಿವ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದರು.

    ಅದೇ ಸಮಯದಲ್ಲಿ, ಅವರ ಗುರುಗಳು ಅವರಿಗೆ ವೇದಾಂತ, ಯೋಗ, ಶರಣ ತತ್ವಶಾಸ್ತ್ರ ಮತ್ತು ಇನ್ನೂ ಅನೇಕ ಸಾಂಪ್ರದಾಯಿಕ ಅಭ್ಯಾಸಗಳನ್ನು ಕಲಿಸಿದರು. ಎಲ್ಲಾ ಸಂಪ್ರದಾಯಗಳಲ್ಲಿ ಚೆನ್ನಾಗಿ ಪಾರಂಗತರಾದ ಅವರು 1925ರಿಂದ ಪ್ರವಚನಗಳನ್ನು ನೀಡಲು ಪ್ರಾರಂಭಿಸಿದರು. ಅವರು ಅಚಲವಾದ ಧ್ವನಿಯಿಂದ ಆಶೀರ್ವದಿಸಲ್ಪಟ್ಟಿದ್ದರಿಂದ, ಅವರು ತಮ್ಮ ಗಾಯನ ಸಾಮಥ್ರ್ಯಗಳಿಗೆ ಹೆಸರುವಾಸಿಯಾಗಿದ್ದರು.

    ತಮ್ಮ ಆಧ್ಯಾತ್ಮಿಕ ಚಟುವಟಿಕೆಯ ಜೊತೆಗೆ, ಸಿದ್ದೇಶ್ವರರು ಕಾಲೇಜಿನಲ್ಲಿ ತಮ್ಮ ಅಧ್ಯಯನವನ್ನು ಮುಂದುವರಿಸಿದರು. ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ನಂತರ, ಸಿದ್ದೇಶ್ವರರು ಕೊಲ್ಲಾಪುರ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂಎ (ಮಾಸ್ಟರ್ ಆಫ್ ಆಟ್ರ್ಸ್) ಪದವಿಯನ್ನು ಮುಗಿಸಿದ್ದರು.

    ಅದಾದ ಬಳಿಕ ವರ್ಷಗಳಲ್ಲಿ, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದಾದ್ಯಂತ ಪ್ರವಚನಗಳನ್ನು ತಲುಪಿಸಲು ಅವರನ್ನು ಆಹ್ವಾನಿಸಲಾಯಿತು. 1982ರ ವರೆಗೆ, ಅವರು ತಮ್ಮ ಜೀವನದುದ್ದಕ್ಕೂ ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ಹೆಚ್ಚಾಗಿ ಕೃಷ್ಣಾ ನದಿಯ ದಡದ ಸುತ್ತಲೂ ಎಲ್ಲರಿಗೂ ಪ್ರಯೋಜನಕ್ಕಾಗಿ ಪ್ರವಚನಗಳನ್ನು ತಲುಪಿಸಿದರು. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    ಜ್ಞಾನಯೋಗಾಶ್ರಮದ ಸಂಸ್ಥಾಪಕರು: ಸಿದ್ದೇಶ್ವರ ಸ್ವಾಮೀಜಿ ವಿಜಯಪುರದಲ್ಲಿ ಜ್ಞಾನಯೋಗಾಶ್ರಮದ ಸಂಸ್ಥಾಪಕರು. ಸ್ವಾಮೀಜಿಯವರ ಮಾತು ಮತ್ತು ನಡೆಯ ಮೂಲಕ ಸಾವಿರಾರು ಜನರ ಬದುಕನ್ನು ಹಸನುಗೊಳಿಸಿದ್ದರು. ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಕಠಿಣವಾದ ವಿಷಯಗಳನ್ನು ಬಹಳ ಸಂವೇದನಾಶೀಲ ಮತ್ತು ಆನಂದದಾಯಕ ರೀತಿಯಲ್ಲಿ ಉಪದೇಶಿಸುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಅವರ ಉಪನ್ಯಾಸಗಳು ಉತ್ತರ ಕರ್ನಾಟಕದ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇದನ್ನೂ ಓದಿ: ಶ್ರೀಗಳು ವೀಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    Live Tv
    [brid partner=56869869 player=32851 video=960834 autoplay=true]

  • ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್

    ವಿಜಯಪುರ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದರು.

    ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ (Siddheshwar Swamiji) ಲಿಂಗೈಕ್ಯ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಮಾತನಾಡಿದ ಅವರು, ಶ್ರೀಗಳು ಈ ಶತಮಾನ ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ. ಸಿದ್ದೇಶ್ವರ ಶ್ರೀಗಳಿಂದಲೇ ವಿಜಯಪುರ (Vijayapura) ಜಿಲ್ಲೆಗೆ ಒಂದು ಉನ್ನತ ಸ್ಥಾನವಿತ್ತು ಅಂತಹ ಶ್ರೀಗಳು ಇನ್ನಿಲ್ಲ. ಶ್ರೀಗಳನ್ನು ಕಳೆದುಕೊಂಡ ವಿಜಯಪುರ ಜನ ಬಡವರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

    ಇನ್ನು ಶ್ರೀಗಳ ದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಬಂದಂತಹ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    ಕಳೆದ ಐದು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಸೋಮವಾರ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    Live Tv
    [brid partner=56869869 player=32851 video=960834 autoplay=true]