ವಿಜಯಪುರ: ಕಾಂಗ್ರೆಸ್ (Congress) ಪಕ್ಷದ ಅಂತ್ಯ ಮದ್ದೂರಿನಿಂದಲೇ ಪ್ರಾರಂಭ, ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳೇ ಸಾಕ್ಷಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ತಮ್ಮ ವಿರುದ್ಧ ಮದ್ದೂರಿನಲ್ಲಿ ದಾಖಲಾಗಿರುವ ಎಫ್‌ಐಆರ್ (FIR) ವಿಚಾರವಾಗಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ಕಾರ ಅದೆಷ್ಟೇ ಎಫ್‌ಐಆರ್ ದಾಖಲಿಸಿದರೂ ಕೂಡ ನಾನು ವಿಚಲಿತನಾಗುವುದಿಲ್ಲ. ಹಿಂದೂಗಳ ಉತ್ಸವ, ಆಚರಣೆಗಳನ್ನು ಗುರಿಯಾಗಿಸಿಕೊಂಡು ಶಾಂತಿ ಕದಡುತ್ತಿರುವ ದುಷ್ಟ ಶಕ್ತಿಗಳ ಹೆಡೆಮುರಿಕಟ್ಟಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ಹಿಂದೂಗಳ ಹಕ್ಕುಗಳನ್ನು ಪ್ರತಿಪಾದಿಸಿದ ನಮ್ಮಂತವರ ಮೇಲೆ ಕೇಸು ಹಾಕುತ್ತಿದೆ. ಹೆದರಿಸುವ, ಬೆದರಿಸುವ ಪ್ರಯತ್ನಕ್ಕೆ ಜಗ್ಗುವ ಮಾತೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ:ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್
ಎಕ್ಸ್‌ನಲ್ಲಿ ಏನಿದೆ?
ಮದ್ದೂರಿನಲ್ಲಿ ಮಾಡಿದ ಭಾಷಣಕ್ಕಾಗಿ ನನ್ನ ಮೇಲೆ ರಾಜ್ಯ ಸರ್ಕಾರ ಎಫ್‌ಐಆರ್ ದಾಖಲಿಸಿದೆ. ಸರ್ಕಾರ ಅದೆಷ್ಟೇ ಎಫ್‌ಐಆರ್‌ಗಳನ್ನು ಹಾಕಿದರೂ ಸಹ ನಾನು ವಿಚಲಿತನಾಗುವುದಿಲ್ಲ. ಗೋಮಾತೆಯ ಕೆಚ್ಚಲನ್ನು ಕತ್ತರಿಸಿದಾಗ, ಗಣೇಶ ವಿಸರ್ಜನೆ ನಡೆಯುತ್ತಿರುವಾಗ ಕಲ್ಲು ತೂರಾಟ ನಡೆಸಿದವರ ಮೇಲೆ, ಮಸೀದಿಯಲ್ಲಿ ಕಲ್ಲು ಶೇಖರಣೆ ಮಾಡಿ ಗಣೇಶನ ಮೆರವಣಿಗೆ ಹೋಗುತ್ತಿರುವಾಗ ಕಲ್ಲು ತೂರಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಲಿ.
ಹಿಂದೂಗಳ ಉತ್ಸವ, ಆಚರಣೆಗಳನ್ನು ಗುರಿಯಾಗಿಸಿಕೊಂಡು ಶಾಂತಿ ಕದಡುತ್ತಿರುವ ದುಷ್ಟ ಶಕ್ತಿಗಳ ಹೆಡೆಮುರಿಕಟ್ಟಲು ಆಗದ ರಾಜ್ಯ ಸರ್ಕಾರ ಹಿಂದೂಗಳ ಹಕ್ಕುಗಳನ್ನು ಪ್ರತಿಪಾದಿಸಿದ ನಮ್ಮಂತವರ ಮೇಲೆ ಕೇಸು ಹಾಕುತ್ತಿದೆ. ಕಾಂಗ್ರೆಸ್ ಪಕ್ಷದ ಅಂತ್ಯ ಮದ್ದೂರಿನಿಂದಲೇ ಪ್ರಾರಂಭವಾಗಲಿದೆ. ಇದಕ್ಕೆ ಮೊನ್ನೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳೇ ಸಾಕ್ಷಿ. ಹೆದರಿಸುವ, ಬೆದರಿಸುವ ಪ್ರಯತ್ನಕ್ಕೆ ಜಗ್ಗುವ ಮಾತೆ ಇಲ್ಲ. ಜೈ ಶ್ರೀರಾಮ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಪಾಕಿಸ್ತಾನಕ್ಕೆ ಜೈ ಎಂದವರ ಬಾಯಿಗೆ ಗುಂಡು ಹೊಡೆಯಬೇಕು: ಯತ್ನಾಳ್ ಕಿಡಿ
ವಿಜಯಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ (Gandhi Chowk) ಹೋಗುವ ಮಾರ್ಗದಲ್ಲಿ ನಡೆದಿದೆ.
ವಿಜಯಪುರ: ಈದ್‌ಮಿಲಾದ್ (Eid Milad) ಮೆರವಣಿಗೆ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಎಂಬ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸ್ (Suo Moto Case) ದಾಖಲಿಸಿಕೊಂಡಿದ್ದಾರೆ.
ವಿಜಯಪುರ (Vijayapura) ನಗರದಲ್ಲಿ ಸೆ.5 ರಂದು ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆದಿತ್ತು. ಈ ಮೆರವಣಿಗೆಯಲ್ಲಿ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ (15 ಮಿನಿಟ್ ಕೆಲಿಯೆ ಪೊಲೀಸಕೋ ಹಠಾಲೋ) ಎಂಬ ಹಾಡನ್ನು ಪ್ರಸಾರ ಮಾಡಲಾಗಿತ್ತು. ಇದೀಗ ಪೊಲೀಸರು ಈ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಈ ಹಾಡು ಪ್ರಸಾರ ಮಾಡಿದ ಡಿಜೆ ವಾಹನದ ಮಾಲೀಕ, ಡಿಜೆ ಆಪರೇಟರ್, ಹಾಗೂ ಇದನ್ನ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಎಂ.ಟಿ ತೌಸಿಫ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಂಧಿಚೌಕ್ ಪೊಲೀಸ್ (Gandhi Chowk Police) ಠಾಣೆಯಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಿರುವ ಜಿ.ಕೆ ದೇವಕರ್ ಅವರು ಮೂವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದಾರೆ.
ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ.ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಗೆ ಶನಿವಾರ ಬಾಗಿನ ಅರ್ಪಣೆ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ ಎಂದರು. ಇದನ್ನೂ ಓದಿ: ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ರೆ ಭಾರತ, ಪಾಕ್ ಆಗುತ್ತೆ: ಕಲ್ಲಡ್ಕ ಪ್ರಭಾಕರ ಭಟ್
ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದು ಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟೇ ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲ ಎಂದು ಶಾಸಕರಾದ ಯಶವಂತರಾಯ ಗೌಡ ಪಾಟೀಲರು ಅಭಿಪ್ರಾಯ ತಿಳಿಸಿದ್ದಾರೆ. ಶಿವಾನಂದ ಪಾಟೀಲರು, ಎಂ.ಬಿ.ಪಾಟೀಲರು ಸಹ ತಮ್ಮ ಸಲಹೆಗಳನ್ನು ನೀಡಿದ್ದಾರೆ. ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ, ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ನಾವು ಎಲ್ಲಾ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡನನ್ನು ಹೊಡೆದು ಕೊಲ್ಲುವಾಗ ಎದುರಲ್ಲೇ ಇದ್ದ ಸೋನಮ್ – ಹನಿಮೂನ್ ಕೊಲೆ ಕೇಸ್ ಚಾರ್ಜ್‌ಶೀಟ್‌ನಲ್ಲೇನಿದೆ?
ಈ ವಿಚಾರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಜಲಶಕ್ತಿ ಸಚಿವರನ್ನು ಮುಖ್ಯಮಂತ್ರಿಯವರು, ನಾನು ಹಾಗೂ ಸಣ್ಣ ನೀರಾವರಿ ಸಚಿವರು ಮನವಿ ಮಾಡಿದ್ದೆವು. ನಾನು ಸುಮಾರು ಐದು ಬಾರಿ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪ್ರಧಾನಿಯವರ ಗಮನಕ್ಕೂ ಇದನ್ನು ತರಲಾಗಿತ್ತು. ಎರಡು ಬಾರಿ ಇದರ ಬಗ್ಗೆ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯಲಾಗಿತ್ತು. ಆಂಧ್ರಪ್ರದೇಶದವರು ಒಮ್ಮೆ ಮಹಾರಾಷ್ಟ್ರದವರು ಮತ್ತೊಮ್ಮೆ ಸಭೆಯನ್ನು ಮುಂದಕ್ಕೆ ಹಾಕಿಸಿದರು ಎನ್ನುವ ಮಾಹಿತಿಯಿದೆ ಎಂದು ಹೇಳಿದರು. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರು ಯುವಕರ ಬಂಧನ
ಈ ಬಗ್ಗೆ ಮತ್ತೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದಾಗ ಅವರು ‘ಗಾಬರಿಯಾಗಬೇಡಿ, ತಾಂತ್ರಿಕ ವಿಚಾರದ ಕಾರಣಕ್ಕೆ ಸಭೆ ಮುಂದಕ್ಕೆ ಹಾಕಲಾಯಿತು. ಮತ್ತೊಮ್ಮೆ ಸಭೆ ಕರೆಯುವುದಾಗಿ’ ಆಶ್ವಾಸನೆ ನೀಡಿದ್ದಾರೆ. ಅಣೆಕಟ್ಟು ಎತ್ತರ ಹೆಚ್ಚಳ ಕುರಿತಂತೆ ಯಾವುದೇ ತಕರಾರುಗಳು ಇಲ್ಲವೆಂದು ಮಹಾರಾಷ್ಟ್ರದವರು ಈ ಹಿಂದೆ ತಿಳಿಸಿದ್ದರು ಎಂದು ಎಂ.ಬಿ.ಪಾಟೀಲರು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಅಂತ ಹೇಳಲಿ: ಬೊಮ್ಮಾಯಿ
ರೈತರ ಭೂಮಿ ಸ್ವಾಧೀನಕ್ಕೆ ಒಳಪಡಿಸಿಕೊಳ್ಳುವ ಬಗ್ಗೆ ಅನೇಕ ಸಭೆಗಳನ್ನು ನಡೆಸಲಾಗಿದೆ. ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಇಂತಿಷ್ಟು ಪರಿಹಾರವೆಂದು ನಿಗದಿ ಮಾಡಲಾಗಿತ್ತು. ಇದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲ ಎಂದು ಅನೇಕ ಜನಪ್ರತಿನಿಧಿಗಳು ಒತ್ತಡ ಹಾಕಿ ಇದನ್ನು ನಿಲ್ಲಿಸಿದರು. ಇತ್ತೀಚೆಗೆ ಆಲಮಟ್ಟಿ ಭಾಗದ ಜನಪ್ರತಿನಿಧಿಗಳ, ಸಚಿವರ, ರೈತರ ಸಭೆ ನಡೆಸಿ ಅದರ ತೀರ್ಮಾನವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ರೈತರ ಸ್ವಾಗತ – 1.5 ಕೋಟಿಯಿಂದ 2.5 ಕೋಟಿ ರೂ. ಪರಿಹಾರಕ್ಕೆ ಸಂತಸ
ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ. ಈ ವರ್ಷ 100 ಟಿಎಂಸಿಗೂ ಹೆಚ್ಚು ನೀರು, ಕೆಲವೊಮ್ಮೆ 400 ಟಿಎಂಸಿಗೂ ಹೆಚ್ಚು ನೀರು ಸಮುದ್ರ ಸೇರಿದ ಉದಾಹರಣೆಯಿದೆ. ವರುಣನ ಕೃಪೆಯಿಂದ ಆಲಮಟ್ಟಿ ಅಣೆಕಟ್ಟು ತುಂಬಿ ಎಲ್ಲರಿಗೂ ಸಂತಸ ಉಂಟು ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್
ಕಳೆದ ಸೆ.3 ರ ಬೆಳಗ್ಗೆ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿಕ್ಕಿ ಭೀಮನಗೌಡ ಹತ್ಯೆ ಮಾಡಲಾಗಿತ್ತು. ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೆಳಗ್ಗೆ ಕಟಿಂಗ್ ಶಾಪ್‌ಗೆ ಬಂದಿದ್ದ ಭೀಮನಗೌಡನನ್ನ ನಾಲ್ವರು ಆರೋಪಿಗಳು ಕೃತ್ಯ ಎಸಗಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಕಂಟ್ರೀ ಪಿಸ್ತೂಲ್‌ನಿಂದ ಗುಂಡುಗಳನ್ನು ಹಾರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ಘಟನೆ ನಡೆದ ದಿನವೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಜೀವುಲ್ಲಾ ಮಕಾನದಾರ್, ವಾಸೀಂ ಮನಿಯಾರ್, ಫಿರೋಜ್ ಶೇಖ್ ಹಾಗೂ ಮೌಲಾಸಾಬ್ ಬಂಧಿತ ಆರೋಪಿಗಳಾಗಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕೊಪ್ಪಳ ನಗರದಲ್ಲಿ ಕಳೆದ ತಿಂಗಳು ಯತ್ನಾಳ್ ವಿವಾದಾತ್ಮಕ ಘೋಷಣೆಯೊಂದನ್ನು ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಮೂರು ದೂರುಗಳು ದಾಖಲಾಗಿದ್ದವು. ವಿಜಯಪುರ, ಕಲಬುರ್ಗಿ ಹಾಗೂ ಕೊಪ್ಪಳದಲ್ಲಿ ದೂರುಗಳು ದಾಖಲಾಗಿದ್ದವು.
ವಿಜಯಪುರ, ಕಲಬುರಗಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪೊಲೀಸ್ ಇಲಾಖೆ ಕೊಪ್ಪಳಕ್ಕೆ ವರ್ಗಾಯಿಸಿತ್ತು. ಈ ದೂರುಗಳ ರದ್ದತಿ ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಯತ್ನಾಳ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಇದನ್ನೂ ಓದಿ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್ ಘೋಷಣೆ
-ಗುಂಡು ಹಾರಿಸಿ, ತಲವಾರ್‌ನಿಂದ ಹಲ್ಲೆ ಮಾಡಿ ಗ್ರಾಮ ಪಂಚಾಯಿತಿ ಎದುರೇ ಕೊಲೆ
ವಿಜಯಪುರ: ಬೆಳ್ಳಂಬೆಳಗ್ಗೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷನ ಮೇಲೆ ಗುಂಡು ಹಾರಿಸಿ, ತಲವಾರ್‌ನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಚಡಚಣ (Chadachan) ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ (Bhimanagouda Biradar) ಎಂದು ಗುರುತಿಸಲಾಗಿದ್ದು, ಭೀಮಾತೀರದ ಮಹಾದೇವ ಸಾಹುಕಾರ್ ಭೈರಗೊಂಡ ಅವರ (Mahadeva Bhairagond) ಪರಮಾಪ್ತ, ಬಲಗೈ ಬಂಟನಾಗಿದ್ದರು ಎಂದು ತಿಳಿದುಬಂದಿದೆ.ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್
ಬುಧವಾರ (ಸೆ.3) ಬೆಳಗ್ಗೆ ಮೃತ ಭೀಮನಗೌಡ ಅವರು ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್‌ಗೆ ಆಗಮಿಸಿದ್ದರು. ಈ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಬಂದು ಕಟಿಂಗ್ ಮಾಡುವವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಭೀಮನಗೌಡ ಅವರ ಮೇಲೆ ಫೈರಿಂಗ್ ನಡೆಸಿ, ತಲವಾರ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಸದ್ಯ ಭೀಮನಗೌಡ ಅವರ ಮೃತದೇಹವನ್ನು ವಿಜಯಪುರದ (Vijayapura) ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಆಪ್ತನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಹಾದೇವ ಭೈರಗೊಂಡ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಚಡಚಣ ಪೊಲೀಸರು (Chadachan) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಹಾಸನ | ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ
ವಿಜಯಪುರ: ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ (Current Shock) ಓರ್ವ ಯುವಕ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ವಿಜಯಪುರ (Vijayapura) ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ.
7ನೇ ದಿನ ಗಣೇಶನ ವಿಸರ್ಜನೆಗೆ ಮೂರ್ತಿಯನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆ (Ganesha Procession) ವೇಳೆ ಯುವಕರು ಡಿಜೆ ಬಾಕ್ಸ್ ಮೇಲೆ ಕುಳಿತು ಕೋಲಿನಿಂದ ವಿದ್ಯುತ್ ತಂತಿಯನ್ನು ಎತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಶುಭಂ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್ ಕೊಟ್ಟ ರಷ್ಯಾ
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಜಯಪುರ: ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ (Dharmasthala) ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರದಲ್ಲಿ ನಾವು ಮೊದಲು ಎಸ್‌ಐಟಿ (SIT) ರಚಿಸಿದಾಗ ಬಿಜೆಪಿಯವರು (BJP) ಸ್ವಾಗತ ಮಾಡಿದ್ದರು. ಆದರೆ ಮುಸುಕುಧಾರಿ ತೋರಿಸಿದ ಜಾಗದಲ್ಲಿ ಏನೂ ಸಿಗದೇ ಇದ್ದ ಕಾರಣ ಇದೀಗ ತಿರುಗಿ ಬಿದ್ದಿದ್ದಾರೆ. ವಿಜಯೇಂದ್ರನಿಗೆ ಬೇರೆ ಬಂಡವಾಳ ಇಲ್ಲ. ಅಪಪ್ರಚಾರ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದರು.ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆಗೈದ 52ರ ವ್ಯಕ್ತಿ
ನಮ್ಮ ಜಾಗದಲ್ಲಿ ಬಿಜೆಪಿಯವರೇನಾದರೂ ಇದ್ದರೆ ಅವರೂ ಎಸ್‌ಐಟಿ ರಚಿಸುತ್ತಿದ್ದರು. ಆದರೆ ಇದೀಗ ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ. ನಾವು ಎಸ್‌ಐಟಿ ರಚನೆ ಮಾಡುವ ಮೂಲಕ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ಸನ್ನಿಧಾನ ಹಾಗೂ ಧರ್ಮದರ್ಶಿಗಳ ಮೇಲೆ ಇದ್ದಂತಹ ಕಳಂಕವನ್ನು ತೆಗೆದುಹಾಕಿದ್ದೇವೆ. ಜನರ ನಂಬಿಕೆಯನ್ನು ಹೆಚ್ಚಿಸಿದ್ದೇವೆ. ಎಸ್‌ಐಟಿ ಅವರು ಈಗಲೂ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ದೆಹಲಿಗೆ ಹೋಗಿ ಯಾರೆಲ್ಲ ಇದ್ದಾರೆ ಎನ್ನುವ ತನಿಖೆ ಮಾಡ್ತಿದೆ ಎಂದು ಹೇಳಿದರು.ಇದನ್ನೂ ಓದಿ: ಪರಮ ಸುಂದರಿಯಾದ ರಮ್ಯಾ!
ವಿಜಯಪುರ: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯ ವಿರುದ್ದ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿ ಕಾರಿದ್ದಾರೆ. ಒಂದು ಕೋಮಿನ ಹಬ್ಬದ ತಿಳುವಳಿಕೆ ವಿಷಯವನ್ನು ಕೂಡಲೆ ತೆಗೆದು ಹಾಕಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ (21 Day Activity Guide) ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ (Congress) ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕು ಎಂದರು. ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳನ್ನೂ ಬಿಡದ ಸೈಬರ್ ವಂಚಕರು – ಕೆಜಿಎಫ್ ಎಸ್ಪಿ ಫೇಸ್‌ಬುಕ್, ಇನ್‌ಸ್ಟಾ ಖಾತೆ ನಕಲು
21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ ಓಲೈಕೆಗೆ ಅವರ ಹಬ್ಬದ… pic.twitter.com/vBxQ8fbASW
— Basanagouda R Patil (Yatnal) (@BasanagoudaBJP) August 31, 2025
ಯಾವುದೋ ಒಂದು ಕೋಮಿನ ಓಲೈಕೆಗೆ ಅವರ ಹಬ್ಬದ ಬಗ್ಗೆ ತಿಳುವಳಿಕೆ ನೀಡುವುದರಿಂದ ಮಕ್ಕಳ ಜ್ಞಾನವಾಗಲಿ, ಬೌದ್ಧಿಕ ಮಟ್ಟವಾಗಲಿ ಸುಧಾರಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸರ್ಕಾರ ಈ ರೀತಿಯಾದ ಓಲೈಕೆ ರಾಜಕಾರಣವನ್ನು ಬಿಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: 22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವಂತಹ ಪಠ್ಯಕ್ರಮವನ್ನು, ವಿಷಯಗಳನ್ನು ಪರಿಚಯಿಸಲಿ. ಚಟುವಟಿಕೆ ಮಾರ್ಗದರ್ಶಿಯಲ್ಲಿ ಕೂಡಲೇ ಒಂದು ಕೋಮಿನ ಹಬ್ಬದ ತಿಳುವಳಿಕೆ ವಿಷಯವನ್ನು ತೆಗೆದು ಹಾಕಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಚಿನ್ನಯ್ಯ ಈಗ ಡಬಲ್ ಗೇಮ್ ಆಡುತ್ತಿದ್ದಾನೆ: ಜಯಂತ್