Tag: ವಿಜಯಪುರ

  • ವಿಜಯಪುರ | ಕಲುಷಿತ ನೀರು ಕುಡಿದು 30ಕ್ಕೂ ಅಧಿಕ ಜನ ಅಸ್ವಸ್ಥ

    ವಿಜಯಪುರ | ಕಲುಷಿತ ನೀರು ಕುಡಿದು 30ಕ್ಕೂ ಅಧಿಕ ಜನ ಅಸ್ವಸ್ಥ

    ವಿಜಯಪುರ: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ನಿಡಗುಂದಿ (Nidagundi) ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ನಡೆದಿದೆ.

    ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ಕಳೆದ ಮೂರು ದಿನಗಳಿಂದ ೩೦ಕ್ಕೂ ಅಧಿಕ ಜನ ಅಸ್ವಸ್ಥಗೊಂಡು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ವೈದರ ತಂಡವೊಂದು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಎರಡು ಅಂಬುಲೆನ್ಸ್ ಕೂಡ ಅಲ್ಲಿಯೇ ಇವೆ.ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

    ಅಲ್ಲದೇ ಕೆಲವರು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.

    ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.ಇದನ್ನೂ ಓದಿ: ವಾಂಖೆಡೆಯಲ್ಲಿ 6.5 ಲಕ್ಷ ಮೌಲ್ಯದ 261 ಐಪಿಎಲ್ ಜೆರ್ಸಿ ಕಳವು – ಸೆಕ್ಯುರಿಟಿ ಗಾರ್ಡ್ ಅರೆಸ್ಟ್

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

    ವಿಜಯಪುರ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ ಎಂದು ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

    ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ಎಸ್‌ಐಟಿ (SIT) ರಚನೆಯಾಗಿದೆ, ಪೊಲೀಸರು ಕೆಲಸ ಮಾಡ್ತಿದ್ದಾರೆ, ಮಾಡಲು ಬಿಡಿ. ಪ್ರಕರಣದ ತನಿಖೆಯನ್ನ ರಾಜಕೀಕರಣಗೊಳಿಸಬೇಡಿ. ಅಡ್ವಾನ್ಸ್ ಜಡ್ಜ್ಮೆಂಟ್ ಬರೆಯುವ ಅವಶ್ಯಕತೆ ಇಲ್ಲ. ತನಿಖೆ ಮಾಡಲಿ, ಏನು ಸತ್ಯಾಂಶವಿದೆ, ಅದು ಹೊರಗೆ ಬರುತ್ತದೆ ಎಂದರು. ಇನ್ನೂ ಈ ಕುರಿತು ಬಿಜೆಪಿಯವರು ಏನಾದರೂ ಹಬ್ಬಿಸೋದು ಕಾಮನ್. ಚುನಾವಣೆ ಸಮಯದಲ್ಲಿಯೂ 6 ತಿಂಗಳು ಇರುವಾಗ ಶುರು ಮಾಡುತ್ತಾರೆ. ಆದರೆ ಈಗ ಮೂರು ವರ್ಷ ಮುಂಚೆಯೇ ಶುರು ಮಾಡಿದ್ದಾರೆ. ಇದೇನು ಹೊಸದಲ್ಲ, ಹಿಂದೆ ಕರಾವಳಿಯಲ್ಲಿ ಹಿಂದೂಗಳ ಹತ್ಯೆ ಎಂದಿದ್ದರು. ಸಿಬಿಐ, ಎಸ್‌ಐಟಿ ರಚನೆ ಮಾಡಿದ್ದರು. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದರು.ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್‌ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ

    ಇದೇ ವೇಳೆ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರಿಗೆ 25 ಕೋಟಿ ರೂ. ಕೊಟ್ಟಿದ್ದೇವೆ. ಬಿಜೆಪಿಯವರು ನಮಗೆ ಕೇವಲ 5 ಕೋಟಿ ರೂ. ಕೊಟ್ಟಿದ್ದರು. ನಾವು ಅವರಿಗಿಂತ ಹೆಚ್ಚಿಗೆ ಕೊಟ್ಟಿದ್ದೇವೆ ಎಂದು ಟಾಂಗ್ ಕೊಟ್ಟರು.

    ಕೆಪಿಸಿಸಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಅದು ನಮ್ಮ ಹಂತದಲ್ಲಿ ಇಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಮಯ ಬಂದಾಗ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುತ್ತಾರೆ. ಸೂಕ್ತ ಸಮಯದಲ್ಲಿ ವರಿಷ್ಠರು ನಿರ್ಧಾರ ಮಾಡುತ್ತಾರೆ. ಇದನ್ನು ನಾವು ಹೇಳೋಕೆ ಆಗಲ್ಲ. ಕಾದು ನೋಡೋಣ ಎಂದರು.

    ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ವಿಚಾರವಾಗಿ ಮಾತನಾಡಿ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡಬೇಕು. ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಜಾಗ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ. ಅವರೇ ಹೊಂದಾಣಿಕೆ ಆಗಿದ್ದಾರೆ, ನಾವೇನು ಹೇಳಬೇಕು ಎಂದು ತಿಳಿಸಿದರು.ಇದನ್ನೂ ಓದಿ: ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

  • ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ದರ್ಪ

    ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ದರ್ಪ

    ವಿಜಯಪುರ: ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿರುವ ಅಮಾನವೀಯ ಘಟನೆ ಜಿಲ್ಲೆಯ ಚಡಚಣ (Chadachan) ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿದೆ.

    ಕುಮಾರ್‌ಗೌಡ ಬಿರಾದಾರ್ ಎಂಬಾತ ಓರ್ವ ವ್ಯಕ್ತಿಯ ಕಾಲಿಗೆ ಸರಪಳಿ ಕಟ್ಟಿ ಅಮಾನುಷವಾಗಿ ನಡೆದುಕೊಂಡಿದ್ದಾನೆ.ಇದನ್ನೂ ಓದಿ: ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

    ಕುಮಾರ್‌ಗೌಡನ ಬಳಿ ವ್ಯಕ್ತಿಯೋರ್ವ 20 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಸಾಲದ ಹಣವನ್ನು ವಾಪಸ್ ಕೊಡದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಕಂಬಕ್ಕೆ ಕಟ್ಟಿ ಹಾಕಿದ್ದಾನೆ. ಕುಮಾರ್ ಗೌಡನ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

  • ಭೀಮಾತೀರದ ಹಂತಕನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಕೇಸ್ – ಪರಾರಿಯಾಗಿದ್ದ ನಾಲ್ವರು ಅರೆಸ್ಟ್

    ಭೀಮಾತೀರದ ಹಂತಕನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಕೇಸ್ – ಪರಾರಿಯಾಗಿದ್ದ ನಾಲ್ವರು ಅರೆಸ್ಟ್

    ವಿಜಯಪುರ: ಭೀಮಾತೀರದ ಹಂತಕ ಬಾಗಪ್ಪ ಹರಿಜನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಪರಾರಿಯಾಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

    ಗೌತಮ್ ಆಲಮೇಲಕರ, ನಾರಾಯಣ ಜಾಧವ್, ಬಸವರಾಜ್ ಮುನ್ನಾಳ, ಪ್ರಜ್ವಲ ಹಳಿಮನಿ ಬಂಧಿತ ಆರೋಪಿಗಳು. ಇದಕ್ಕೂ ಮುನ್ನ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಿದ್ದರು.ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ

    ಈ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಹತ್ಯೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳ ಪೈಕಿ ಅಪ್ರಾಪ್ತ ಸೇರಿ ಇಬ್ಬರನ್ನು ಇತ್ತೀಚಿಗೆ ಬಂಧಿಸಲಾಗಿತ್ತು. ಇದೀಗ ಇನ್ನುಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ ಬಂಧಿತರಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳು, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಏನಿದು ಘಟನೆ?
    ಜು.14ರಂದು ವಿಜಯಪುರ ನಗರದ ಎಸ್‌ಎಸ್ ಕಾಂಪ್ಲೆಕ್ಸ್‌ನಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಸುಶೀಲ್ ಕಾಳೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ದೃಶ್ಯಗಳು ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಸುಶೀಲ್ ಕಾಳೆಯನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು, ಎಲ್ಲಿಗೂ ತಪ್ಪಿಸಿಕೊಂಡು ಹೋಗದಂತೆ ಬಿಡದೇ ಕೊನೆಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಎಳನೀರು ಕೊಚ್ಚುವ ಮಚ್ಚಿನಿಂದ ಬೆನ್ನು, ತಲೆ, ಕುತ್ತಿಗೆ ಸೇರಿ ಹಲವೆಡೆ ಕೊಚ್ಚಿದ್ದರು. ಕೊನೆಗೆ ಮಚ್ಚನ್ನು ಸುಶೀಲ್ ಕಾಳೆ ದೇಹದ ಮೇಲೆ ಬಿಟ್ಟು ಪರಾರಿಯಾಗಿದ್ದರು.ಇದನ್ನೂ ಓದಿ: India’s Cleanest City: ದೇಶದ ‘ಸ್ವಚ್ಛ ನಗರ’ ಪಟ್ಟಿಯಲ್ಲಿ ಇಂದೋರ್‌ ನಂ.1 – ಮೈಸೂರಿಗೆ 3ನೇ ಸ್ಥಾನ

  • ವಿಜಯಪುರ | ಹೃದಯಾಘಾತಕ್ಕೆ 18 ವರ್ಷದ ಯುವಕ ಬಲಿ

    ವಿಜಯಪುರ | ಹೃದಯಾಘಾತಕ್ಕೆ 18 ವರ್ಷದ ಯುವಕ ಬಲಿ

    ವಿಜಯಪುರ: 18 ವರ್ಷದ ಯುವಕ ಹೃದಯಾಘಾತಕ್ಕೆ (Heartattack) ಬಲಿಯಾಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಶಿವಣಗಿ ಗ್ರಾಮದಲ್ಲಿ ಘಟನೆ ನಡೆದಿದೆ.

    ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಸಿದ್ದಾರ್ಥ್ ಬಸವರಾಜ ಬಡಿಗೇರ (18) ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಸಿದ್ದಾರ್ಥ್ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದಾಗ ಹೃದಯಾಘಾತ ಸಂಭವಿಸಿದೆ. ಇದನ್ನೂ ಓದಿ: ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್

    ಮನೆಯವರು ಸಂತೆಗೆಂದು ಹೊರಗೆ ಹೋಗಿದ್ದ ವೇಳೆ ಸಿದ್ದಾರ್ಥ್ಗೆ ಹೃದಯಾಘಾತ ಉಂಟಾಗಿದೆ. ಸಂತೆಯಿಂದ ಬಂದ ಬಳಿಕ ತಾಯಿ ಚಹಾ ಕುಡಿಯಲು ಮಗನನ್ನು ಎಬ್ಬಿಸಿದಾಗ ಆತ ಮೇಲೇಳಲೇ ಇಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಕೂಡಲೇ ಸ್ಥಳೀಯ ವೈದ್ಯರನ್ನು ಕರೆಯಿಸಿ ತಪಾಸಣೆ ಮಾಡಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

    ಸಿದ್ದಾರ್ಥ್, ಇಡೀ ದಿನ ತಂದೆಯ ಜೊತೆ ಬಡಿಗತನ ಕೆಲಸಕ್ಕೆ ಸಹಾಯ ಮಾಡಿದ್ದ ಎನ್ನಲಾಗಿದೆ. ಕೆಲಸದಿಂದ ದಣಿದಿದ್ದ ಸಿದ್ದಾರ್ಥ್, ಮಧ್ಯಾಹ್ನ ವಿಶ್ರಾಂತಿಗಾಗಿ ಮಲಗಿದ್ದಾಗ ಹೃದಯಾಘಾತ ಸಂಭವಿಸಿದೆ.

  • ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ

    ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ

    ವಿಜಯಪುರ: ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಂತಾಪ ಸೂಚಿಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಡು ಕಂಡಂತಹ ಪ್ರತಿಭಾವಂತೆ. ಅವರು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ. ಅವರು ಒಬ್ಬ ಅಪ್ರತಿಮ ಕಲಾವಿದೆ. ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಅವರ ಸಾವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದರು.ಇದನ್ನೂ ಓದಿ: ಪುದುಚೆರಿಯಲ್ಲಿ ಖ್ಯಾತ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ

    ಇದೇ ವೇಳೆ ಶಕ್ತಿ ಯೋಜನೆಯ ಬಗ್ಗೆ ಮಾತನಾಡಿ, 5 ಗ್ಯಾರಂಟಿ ಯೋಜನೆಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದ್ದೆವು. ನಾವು ಕ್ಯಾಬಿನೆಟ್ ಸಭೆ ಮಾಡಿ ಕೂಡಲೇ ಅವುಗಳನ್ನು ಜಾರಿಗೆ ತರುತ್ತೇವೆ ಎಂದು ತೀರ್ಮಾನೆ ಮಾಡಿದ್ದೆವು. ಅದರಂತೆ 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಬಳಿಕ ಜೂ.11ಕ್ಕೆ ಶಕ್ತಿ ಯೋಜನೆಯನ್ನು ಜಾರಿಗೆ ತಂದೆವು. ಅಂದಿನಿಂದ ಈವರೆಗೂ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳು ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂದು 500 ಕೋಟಿ ಮಹಿಳೆಯರು ಸಂಚರಿಸಿದ್ದಾರೆ. ಇದಕ್ಕೆ ಸಾಂಕೇತಿಕವಾಗಿ ಟಿಕೆಟ್ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದರು.

    ಸಿಗಂದೂರು ಸೇತುವೆ ವಿಚಾರವಾಗಿ ನಿತಿನ್ ಗಡ್ಕರಿಗೆ ಪತ್ರ ಬರೆದ ಬಗ್ಗೆ ಮಾತನಾಡಿ, ಇಂದು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯಾರು ಭಾಗಿಯಾಗಿಲ್ಲ, ನನಗೆ ಆಹ್ವಾನಿಸಿಲ್ಲ, ಹಾಗಾಗಿ ಗಡ್ಕರಿಯವರಿಗೆ ಕರೆ ಮಾಡಿದೆ. ಆಗ ಅವರು ಕಾರ್ಯಕ್ರಮ ಮುಂದಕ್ಕೆ ಹಾಕುವುದಾಗಿ ತಿಳಿಸಿದರು. ಬಳಿಕ ಪತ್ರ ಬರೆದೆ. ಬಿಜೆಪಿ ನಾಯಕರು ಒತ್ತಾಯಿಸಿರಬಹುದು, ನನಗೆ ಏನು ಹೇಳದೇ ಮಾಡಿದ್ದಾರೆ. ಸದ್ಯ ನಾನು ಇಂಡಿ ತಾಲೂಕಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಹೊರಟಿದ್ದೇನೆ. ಸದ್ಯ ಸಿಗಂದೂರು ಕಾರ್ಯಕ್ರಮಕ್ಕೆ ನಾವ್ಯಾರು ಹೋಗುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ

  • ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

    ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

    ಬೆಂಗಳೂರು/ಶಿವಮೊಗ್ಗ: ದೇಶದ ಎರಡನೇ ಅತಿ ದೊಡ್ಡ ಕೇಬಲ್‌ ಬ್ರಿಡ್ಜ್‌ ಸಿಗಂದೂರು ಸೇತುವೆ (Sigandur Bridge) ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ (Nitin Gadkari) ಪತ್ರ ಬರೆದಿದ್ದಾರೆ.

    ಜುಲೈ 11ರಂದೇ ಸಿಎಂ ಸಿದ್ದರಾಮಯ್ಯ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮದ ಆಹ್ವಾನ ಮುಂಚಿತವಾಗಿ ತಿಳಿಸಿಲ್ಲ. ಬೇರೊಂದು ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವ ಕಾರಣ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಬೇರೊಂದು ದಿನಾಂಕವನ್ನು ನಿಗದಿ ಮಾಡುವಂತೆ ಕೋರಿದ್ದರು.

    ನಿತಿನ್‌ ಗಡ್ಕರಿ ಅವರಿಗೆ ಬರೆದ ಪತ್ರವನ್ನು ಸಿಎಂ ಸಿದ್ದರಾಮಯ್ಯನವರ ಕಚೇರಿ ಈಗ ಬಿಡುಗಡೆ ಮಾಡಿದೆ. ಇದನ್ನೂ ಓದಿ: 2019 ರಲ್ಲಿ ಶಂಕು, ಇಂದು ಲೋಕಾರ್ಪಣೆ – ಸಿಗಂದೂರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಗಡ್ಕರಿ

    ಸಿಎಂ ಪತ್ರದಲ್ಲಿ ಏನಿದೆ?
    ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ‌ ಅಧ್ಯಕ್ಷತೆಯಲ್ಲಿ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

    ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ. ಇದನ್ನೂ ಓದಿ60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

    ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ.

  • 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – 12 ಆರೋಪಿಗಳು ಅರೆಸ್ಟ್

    10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – 12 ಆರೋಪಿಗಳು ಅರೆಸ್ಟ್

    ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಪ್ರಕರಣದ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು (Vijayapura Police) ಯಶಸ್ವಿಯಾಗಿದ್ದಾರೆ.

    ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೈ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸುಸೈರಾಜ್ ಡ್ಯಾನಿಯಲ್, ಬಾಬುರಾವ್ ಮಿರಿಯಾಲ್, ಮಹಮ್ಮದ್ ಆಸೀಫ್ ಕಲ್ಲೂರ, ಅನಿಲ್ ಮಿರಿಯಾಲ್, ಮೋಹನಕುಮಾರ, ಸುಲೇಮನ್‌ವೇಸ್ಲಿ ಪಲುಕುರಿ, ಮರಿಯಾದಾಸ ಗೋನಾ ಎಂಬ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ: 5 ಮಾಡೆಲ್‌ Y ವಾಹನಗಳು ಈಗಾಗಲೇ ಮುಂಬೈಗೆ ಎಂಟ್ರಿ

    ಇನ್ನು ಬಂಧಿತರೆಲ್ಲರು ಹುಬ್ಬಳ್ಳಿ (Hubballi) ಮೂಲದವರಾಗಿದ್ದು, ಇಲ್ಲಿವರೆಗೆ ಬಂಧಿತರಿಂದ ಒಟ್ಟು 39 ಕೆಜಿ ಗಟ್ಟಿ ಬಂಗಾರ, 1.16 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಒಂದು ಲಾರಿ, 5 ಕಾರು ಸೇರಿದಂತೆ 39.26 ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ:  ತಮಿಳುನಾಡು ಲಾಕಪ್ ಡೆತ್ ಪ್ರಕರಣ – ಕ್ಷಮೆಯಾಚಿಸಿದ ಪೊಲೀಸ್ ಮುಖ್ಯಸ್ಥ

    ಏನಿದು ಪ್ರಕರಣ?
    ಕಳೆದ ಮೇ 25ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದಲ್ಲಿನ ಕೆನೆರಾ ಬ್ಯಾಂಕ್ ಕಳ್ಳತನ ಮಾಡಲಾಗಿತ್ತು. ದರೋಡೆಕೊರರು ಕೋಟಿ ಕೋಟಿ ಬೆಲೆ ಬಾಳುವ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದರು.

    ಇದರಿಂದ ಬ್ಯಾಂಕ್‌ನ ಗ್ರಾಹಕರು ಕಂಗಾಲಾಗಿದ್ದರು. ಅಲ್ಲದೆ ಜಿಲ್ಲಾ ಪೊಲೀಸರಿಗೆ ಈ ಪ್ರಕರಣ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆದರೆ ಕೇವಲ 45 ದಿನದಲ್ಲೇ ಪ್ರಕರಣವನ್ನ ಜಿಲ್ಲಾ ಪೊಲೀಸರು ಬೇಧಿಸಿದ್ದಾರೆ. ಪ್ರಕರಣದ ಮೂರು ಪ್ರಮುಖ ಆರೋಪಿತರನ್ನು ಕಳೆದ ಜೂ. 26ರಂದು ಬಂಧಿಸಲಾಗಿತ್ತು. ಇದನ್ನೂ ಓದಿ: ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ – ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

    ವಿಜಯಕುಮಾರ ಮೋಹನರಾವ ಮಿರಿಯಾಲ (41), ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38), ಸುನೀಲ್ ನರಸಿಂಹಲು ಮೋಕಾ (40) ಆರೋಪಿಗಳನ್ನ ಬಂಧಿಸಲಾಗಿತ್ತು. ಬಂಧಿತರಿಂದ 10 ಕೋಟಿ 75 ಲಕ್ಷ ರೂ ಮೌಲ್ಯದ 10.5 ಕೆಜಿ ಬಂಗಾರದ ಆಭರಣಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದನ್ನೂ ಓದಿ: ಮತಾಂತರ ಮಾಸ್ಟರ್‌ಮೈಂಡ್‌ ಛಂಗುರ್ ಬಾಬಾನ 5 ಕೋಟಿ ಮೌಲ್ಯದ ಮನೆ ಉಡೀಸ್‌ – ಬುಲ್ಡೋಜರ್‌ನಿಂದ ನೆಲಸಮ

    ವಿಜಯಕುಮಾರ ಮಿರಿಯಾಲ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿದ್ದು, ಈತ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ ಬ್ಯಾಂಕ್‌ಗೆ ನುಗ್ಗಿ ದರೋಡೆ ಮಾಡಿದ್ದರು. ಅಲ್ಲದೆ ಪೊಲೀಸರ ದಿಕ್ಕು ತಪ್ಪಿಸಲು ಒಂದು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು. ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ 8 ತಂಡಗಳನ್ನ ರಚಿಸಿದ್ದರು. ಎಲ್ಲಾ ತಂಡಗಳು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಿ ಆರೋಪಿತರನ್ನು ಪತ್ತೆ ಮಾಡಿದ್ದಾರೆ.

    ಸದ್ಯ ಪ್ರಕರಣ ಬಹುತೇಕ ಆರೋಪಿಗಳ ಪತ್ತೆಯಾಗಿದ್ದು, ಪೊಲೀಸರ ತನಿಖೆ ಮುಂದುವರೆದಿದೆ. ವಿಜಯಪುರ ಪೊಲೀಸರ ಈ ಕಾರ್ಯಕ್ಕೆ ಬ್ಯಾಂಕ್ ಗ್ರಾಹಕರು, ಸಾರ್ವಜನಿಕರು ಮೆಚ್ವುಗೆ ವ್ಯಕ್ತಪಡಿಸಿದ್ದಾರೆ.

  • ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

    ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

    – ಜುಲೈ 24ರವರೆಗೆ ನ್ಯಾಯಾಂಗ ಬಂಧನ

    ವಿಜಯಪುರ: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದ ಬಾಂಬ್ ಬ್ಲಾಸ್ಟ್‌ನಲ್ಲಿ (Coimbatore Bomb Blast) ಪ್ರಮುಖ ಪಾತ್ರವಹಿಸಿದ್ದ ಆರೋಪಿಯನ್ನು ಕೊಯಮತ್ತೂರು ಪೊಲೀಸರು ವಿಜಯಪುರದಲ್ಲಿ (Vijayapura) ಬಂಧಿಸಿದ್ದಾರೆ.

    ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿ ಕಳೆದ 12 ವರ್ಷಗಳಿಂದ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ.

    ಬ್ಲಾಸ್ಟ್ ಬಳಿಕ ತಮಿಳುನಾಡಿನಿಂದ ತಲೆ ಮರೆಸಿಕೊಂಡಿದ್ದ ಸಿದ್ದಿಕಿ ರಾಜ್ ಕಳೆದ 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. ಬೇರೆ ಬೇರೆ ಸ್ಥಳಗಳಲ್ಲಿ ಅಡಗಿದ್ದ ಆರೋಪಿ ಸಿದ್ದಿಕಿ ರಾಜ್ ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದ. ಆರೋಪಿ ಸಿದ್ದಿಕಿ ರಾಜ್‌ನನ್ನು ಪತ್ತೆ ಮಾಡಿದ ಕೊಯಮತ್ತೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಬಂಧಿತ ಸಿದ್ದಿಕಿಯನ್ನು ಐದನೇ ಕ್ರಿಮಿನಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ವರ್ಜಿನ್ ವೆಸ್ಟಾ ಅವರು ಅಲ್ ಉಮ್ಮಾ ಚಳವಳಿಯ ಸದಸ್ಯ ಟೈಲರ್ ರಾಜಾನನ್ನು ಜುಲೈ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಬಳಿಕ ಆತನನ್ನು ಬಿಗಿ ಭದ್ರತೆಯಲ್ಲಿ ಕೊಯಮತ್ತೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

    ಕೊಯಮತ್ತೂರು ಬಾಂಬ್ ಬ್ಲಾಸ್ಟ್:
    1998ರ ಫೆಬ್ರವರಿ 14 ರಂದು ಕೊಯಮತ್ತೂರಿನ ಆರ್.ಎಸ್. ಪುರಂನಲ್ಲಿ ಬಿಜೆಪಿ ಸಾರ್ವಜನಿಕ ಸಭೆಯನ್ನು ಆಯೋಜಿಸಿತ್ತು. ಪಕ್ಷದ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಬೇಕಿತ್ತು. ಆ ಸಮಯದಲ್ಲಿ, ಸಾರ್ವಜನಿಕ ಸಭೆಯ ವೇದಿಕೆಯಿಂದ 100 ಮೀಟರ್ ದೂರದಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿತ್ತು.

    ಅಡ್ವಾಣಿ ಅವರು ಬರಬೇಕಿದ್ದ ವಿಮಾನ ವಿಳಂಬವಾದ ಕಾರಣ ಸ್ಫೋಟ ಘಟನೆಯಿಂದ ತಪ್ಪಿಸಿಕೊಂಡು ಬದುಕುಳಿದಿದ್ದರು. ನಂತರ ಕೊಯಮತ್ತೂರಿನ ವಿವಿಧ ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆದು, ಇದರಲ್ಲಿ 58 ಜನರು ಸಾವಿಗೀಡಾಗಿದ್ದರು. 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

  • ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ವಿಜಯಪುರ: ಮಾರಕಾಸ್ತ್ರ ಬಳಸಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಡೆದಿದೆ.

    ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ.ಇದನ್ನೂ ಓದಿ: Rajasthan | ಐಎಎಫ್ ಜಾಗ್ವಾರ್ ಯುದ್ಧ ವಿಮಾನ ಪತನ – ಇಬ್ಬರು ಪೈಲೆಟ್ ದುರ್ಮರಣ

    ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಈವರೆಗೂ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪೊಲೀಸರು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ ನಡೆಸಲಾಗಿದೆ. ಸದ್ಯ ಗಾಂಧಿಚೌಕ್ ಪೊಲೀಸ್ ಠಾಣೆ (Gandhi Chowk Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.