Tag: ವಿಜಯಪುರ

  • 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    ವಿಜಯಪುರ/ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಕೇಸ್‌ಗೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದ್ದು, ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇಲ್ಲದೇ ಇರೋದು ಗೊತ್ತಾಗಿದೆ.

    ಮೇ 25 ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ದರೋಡೆ ನಡೆದಿತ್ತು. ತನಿಖೆ ವೇಳೆ ಈ ಕೇಸ್‌ಗೆ ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇರುವುದು ಗೊತ್ತಾಗಿದ್ದು, ಶಾಲೆಯ ಚೇರಮನ್ ಆಗಿರುವ ಆರೋಪಿ ಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೇಶ್ವಾಪುರದಲ್ಲಿರುವ ಮನೆ ಹಾಗೂ ಗದಗ ರಸ್ತೆಯಲ್ಲಿನ ತನ್ನ ಶಾಲೆಯೊಂದರಲ್ಲಿ ಚಿನ್ನ ಕರಗಿಸಿರುವುದು ತಿಳಿದುಬಂದಿದೆ.ಇದನ್ನೂ ಓದಿ: ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ

    ಸದ್ಯ ಪೊಲೀಸರು ಶಾಲೆ ಸೇರಿದಂತೆ ಕೆಲವು ಸ್ಥಳಗಳಲ್ಲಿ ಮಹಜರು ಮಾಡಿದ್ದು, ಚಿನ್ನ ಕರಗಿಸಲು ಬಳಸಿದ ಕೆಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.

    ಘಟನೆ ಏನು?
    ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿ, ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು. ಪರಾರಿಯಾಗಿದ್ದ ಮೂವರನ್ನು ಬಂಧಿಸಿದ್ದರು.ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ

  • ನೆಹರೂ ಕೈಯಿಂದ್ಲೇ RSS ಬ್ಯಾನ್‌ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್‌

    ನೆಹರೂ ಕೈಯಿಂದ್ಲೇ RSS ಬ್ಯಾನ್‌ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್‌

    ವಿಜಯಪುರ: ಜವಾಹರಲಾಲ್‌ ನೆಹರೂ ಅವರಿಂದಲೇ ಆರ್‌ಎಸ್‌ಎಸ್‌ ನಿಷೇಧ ಮಾಡೋಕೆ ಆಗಲಿಲ್ಲ. ಇನ್ನು ಪ್ರಿಯಾಂಕ್‌ ಖರ್ಗೆಯಿಂದ ಸಾಧ್ಯನಾ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಗುಡುಗಿದರು.

    ಖರ್ಗೆ ಯಾವ ದಲಿತರನ್ನ ಉದ್ದಾರ ಮಾಡಿದ್ದಾರೆ ತೋರಿಸಲಿ. ಇವರು ಅಂಬೇಡ್ಕರ್ ಅನುಯಾಯಿ ಅಲ್ಲ. ಸೋನಿಯಾ ಗಾಂಧಿ ಅನುಯಾಯಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ – ರಾಜಶೇಖರ ಹಿಟ್ನಾಳ್

    ನಮ್ಮ ತಂಡದವರಿಗೆ ಪಕ್ಷದಲ್ಲಿ ಸ್ಥಾನ ನೀಡಿದರೆ ನನಗೆ ಸಂತೋಷ. ಮೊದಲು ನಮ್ಮ ತಂಡದವರು ಒಳಗೆ ಹೋಗಲಿ. ಆ ಬಳಿಕ ಯತ್ನಾಳ್ ವಾಪಸ್ ಕರೆತರುವ ಬಗ್ಗೆ ಅವರೇ ಮಾತಾಡ್ತಾರೆ ಎಂದು ಯತ್ನಾಳ್ ಟೀಂ ಒಡೆಯಲು ಯತ್ನಾಳ್ ಟೀಂಗೆ ಪಕ್ಷದಲ್ಲಿ ಹುದ್ದೆ ನೀಡುವ ಬಗ್ಗೆ ಬಿಜೆಪಿ ನಾಯಕರ ಚಿಂತನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.

    ನಾನು ಈ ಹಿಂದೆ ಕೋರ್ ಕಮಿಟಿ ಸದಸ್ಯನಾಗಿದ್ದೆ. ಆ ಸಮಯದಲ್ಲಿ ಟಿಕೆಟ್ ವಂಚಿತರ ಪರವಾಗಿ ಸಭೆಯಲ್ಲಿ ವಾದ ಮಾಡಿದ್ದೆ. ಅದೇ ರೀತಿ ಈಗಲೂ ಮೊದಲು ನಮ್ಮ ತಂಡದವರು ಒಳಗೆ ಕಾಲಿಡಲಿ. ಆ ಬಳಿಕ ಅವರೇ ನನ್ನನ್ನು ವಾಪಸ್‌ ಕರೆಸುವ ಬಗ್ಗೆ ಸಭೆಯಲ್ಲಿ ಮಾತಾಡ್ತಾರೆ. ನಮ್ಮ ತಂಡದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: I Stand By My Words, ಡಿಕೆಶಿಗೂ ಅವಕಾಶ ಸಿಗಲಿ – ಇಕ್ಬಾಲ್ ಹುಸೇನ್

  • ವಿಜಯಪುರದ MBBS ವಿದ್ಯಾರ್ಥಿ ತಮಿಳುನಾಡಿನಲ್ಲಿ ಹೃದಯಾಘಾತದಿಂದ ಸಾವು

    ವಿಜಯಪುರದ MBBS ವಿದ್ಯಾರ್ಥಿ ತಮಿಳುನಾಡಿನಲ್ಲಿ ಹೃದಯಾಘಾತದಿಂದ ಸಾವು

    ವಿಜಯಪುರ: 26 ವರ್ಷದ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ವಿಜಯಪುರ (Vijayapura) ಜಿಲ್ಲೆಯ ಆಲಮೇಲ (Almel) ತಾಲೂಕಿನ ಕುಮಸಗಿ (Kumasagi) ಗ್ರಾಮದ ವೈಭವ ಕುಲಕರ್ಣಿ (26) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಾಸನ| ಇಂದು ಒಂದೇ ದಿನ ಗೃಹಿಣಿ, ಪ್ರೊಫೆಸರ್‌, ಸರ್ಕಾರಿ ನೌಕರ ಹೃದಯಾಘಾತಕ್ಕೆ ಬಲಿ

    ಮೃತ ವೈಭವ ಬಾಗಲಕೋಟೆಯ (Bagalkote) ವಿವಿಎಸ್ ಮೆಡಿಕಲ್ ಕಾಲೇಜಿನಲ್ಲಿ (VVS Medical College)  ಎಂಬಿಬಿಎಸ್ (MBBS) ಓದುತ್ತಿದ್ದ. ಕೊನೆಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವೈಭವ ತಮಿಳುನಾಡು (Tamilnadu) ಪ್ರವಾಸಕ್ಕೆಂದು ಹೋಗಿದ್ದ. ಪ್ರವಾಸದಿಂದ ವಾಪಸ್ ಬರುವಾಗ ಉಸಿರಾಟದ ತೊಂದರೆಯಾಗಿತ್ತು. ಹೀಗಾಗಿ ಆತನ ಗೆಳೆಯರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

    ಸದ್ಯ ಸಂಬಂಧಿಕರು ಮೃತದೇಹವನ್ನು ಆಲಮೇಲ ತಾಲೂಕಿನ ಸ್ವಗ್ರಾಮ ಕುಮಸಗಿಗೆ ಕೊಂಡೊಯ್ಯುತ್ತಿದ್ದಾರೆ.ಇದನ್ನೂ ಓದಿ: ನಾನೂ ಸುರ್ಜೇವಾಲಾ ಭೇಟಿಗೆ ಸಮಯ ಕೇಳಿದ್ದೇನೆ: ಪರಮೇಶ್ವರ್

  • ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

    ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

    – ಮಗನನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಿ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಬೇಕು ಎಂದ ಶಾಸಕ

    ವಿಜಯಪುರ: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ (Vijayendra) ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತೆ ಗುಡುಗಿದರು.

    ಯಡಿಯೂರಪ್ಪ (Yadiyurappa) ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ. ಮಗನನ್ನ ಅಧ್ಯಕ್ಷ ಸ್ಥಾನದಿಂದ ಇಳಿಸಿ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಬೇಕು. ವಿಜಯೇಂದ್ರ ಹಾಗೂ ಯಡಿಯೂರಪ್ಪ ಮೇಲೆ ಹಲವು ಕೇಸ್ ಇವೆ. ಇ.ಡಿ ವಿಚಾರಣೆಗೂ ಹಾಜರಾಗಿದ್ದಾರೆ. ಇಂದಿಲ್ಲ ನಾಳೆ ಜೈಲಿಗೆ ಹೋಗ್ತಾರೆ ಎಂದರು. ಇದನ್ನೂ ಓದಿ: ಆರ್‌ಎಸ್‌ಎಸ್ ಪ್ರ.ಕಾರ್ಯದರ್ಶಿ ಹೊಸಬಾಳೆ ಹೇಳಿಕೆ ಸಮಂಜಸವಲ್ಲ: ಪರಂ

    ಪೊಲೀಸ್ ಇಲಾಖೆಯಲ್ಲಿ ಸಲೀಂ, ಮುಶ್ರಫ್‌ರಂತಹವರನ್ನ ತಂದ್ರೆ ನಮ್ಮ ಮೇಲೆ ಕೇಸ್ ಆಗ್ತಾವೆ‌. ಮೊನ್ನೆ ವಿಜಯಪುರದಲ್ಲಿ ನನ್ನ ಮೇಲೆ ಕೇಸ್ ಹಾಕಿಸಿದ್ರು. ಸಲೀಂ ಪೊಲೀಸ್ ಇಲಾಖೆಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಯತ್ನಾಳ್ ಮೇಲೆ ಎಷ್ಟು ಕೇಸ್ ಆಗಿವೆ ಎಂದು ಮಾಹಿತಿ ಪಡೆದಿದ್ದಾರೆ. ರಾಜ್ಯದಲ್ಲಿ ಸೂಲಿಬೆಲೆ, ಪ್ರತಾಪ್ ಸಿಂಹ, ಮುತಾಲಿಕ್ ಟಾರ್ಗೆಟ್ ಆಗಿದ್ದಾರೆ ಎಂದು ದೂರಿದರು.

    ಮತ್ತೆ ಬಿಜೆಪಿ ಭಿನ್ನಮತೀಯರ ಸಭೆ ಆಗಲಿದೆ. ನಮ್ಮ ಟೀಂ ದೊಡ್ಡದಿದೆ. ತಟಸ್ಥ ಟೀಂ ಸಹ ವಿಜಯೇಂದ್ರ ವಿರುದ್ಧ ಇದೆ. ವಾರದಲ್ಲಿ ಬೆಳಗಾವಿಯಲ್ಲಿ ಸೇರ್ತಿದ್ದೇವೆ. ಅತೃಪ್ತ ಬಣದಿಂದ ಮತ್ತೊಂದು ಸಭೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಇಲ್ಲದಿದ್ರೆ ರಾಜಕೀಯ ಬಿಡ್ತೀನಿ: ರಾಜಣ್ಣ

    ದತ್ತಾತ್ರೇಯ ಹೊಸಬಾಳೆ ಹೇಳಿದ್ದು ಸತ್ಯ. ನಾವು ಅವರ ಬೆಂಬಲಕ್ಕೆ ಇದ್ದೇವೆ. ಡಾ. ಅಂಬೇಡ್ಕರ್ ಬರೆದದ್ದನ್ನ ನೂರಾರು ಸಲ ಕಾಂಗ್ರೆಸ್ ತಿದ್ದಿದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅಪಮಾನಿಸಿದೆ. ಹೆಚ್ಚು ಅಪಮಾನ ಮಾಡಿದ್ದೆ ಕಾಂಗ್ರೆಸ್. ಮೂಲ ಸಂವಿಧಾನದಲ್ಲಿ ಅಂಬೇಡ್ಕರ್ ಬರೆದ ಮೂಲ ಬರಹಗಳೇ ಇರಬೇಕು ಎಂದು RSSನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯನ್ನ ಸಮರ್ಥಿಸಿಕೊಂಡರು.

  • ಆಲಮಟ್ಟಿ ಡ್ಯಾಂಗೆ 1.15 ಲಕ್ಷ ಕ್ಯೂಸೆಕ್ ಒಳಹರಿವು

    ಆಲಮಟ್ಟಿ ಡ್ಯಾಂಗೆ 1.15 ಲಕ್ಷ ಕ್ಯೂಸೆಕ್ ಒಳಹರಿವು

    ವಿಜಯಪುರ: ಮಹಾರಾಷ್ಟ್ರದಲ್ಲಿ (Maharashtra) ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.

    ಜಿಲ್ಲೆಯ ಆಲಮಟ್ಟಿಯ ಲಾಲ್‌ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. 123.081 ಟಿಎಂಸಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 82.265 ಟಿಎಂಸಿ ನೀರಿದೆ.

    ಸದ್ಯ ಜಲಾಶಯದಲ್ಲಿ 1,15,339 ಅಧಿಕ ಒಳಹರಿವು ದಾಖಲಾಗಿದ್ದು, ನಾರಾಯಣಪುರ ಜಲಾಶಯಕ್ಕೆ 70,420 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಜಿಲ್ಲೆಯ ಕೃಷ್ಣಾ ನದಿ ತಟದಲ್ಲಿರುವ ಜನರಿಗೆ ಜಿಲ್ಲಾಡಳಿತ ಹೈಲರ್ಟ್ ಘೋಷಿಸಿದೆ. ಜನರನ್ನು ನದಿ ಪಾತ್ರಕ್ಕೆ ಹೋಗದಂತೆ ಸೂಚಿಸಿದೆ.

  • ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

    ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

    ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ (Vijayapura) ಪೊಲೀಸರು ಬಂಧಿಸಿದ್ದಾರೆ.

    ಹೌದು, ಮೇ 25ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿತ್ತು. ಸ್ವತಃ ಬ್ಯಾಂಕ್ ಮ್ಯಾನೇಜರ್ ದರೋಡೆಗೆ ಸ್ಕೆಚ್ ಹಾಕಿದ್ದ. ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಇದರಿಂದ ಬ್ಯಾಂಕ್‌ನ ಗ್ರಾಹಕರು ಕಂಗಾಲಾಗಿದ್ದರು. ಆರೋಪಿಗಳನ್ನು ಪತ್ತೆಹಚ್ಚುವುದೇ ಜಿಲ್ಲಾ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ

    ಆರೋಪಿಗಳ ಪತ್ತೆಗಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ 8 ತಂಡಗಳನ್ನ ರಚಿಸಿದ್ದರು. ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಿ, ಒಂದೇ ತಿಂಗಳಲ್ಲಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಿಜಯಕುಮಾರ್ (41), ಚಂದ್ರಶೇಖರ್ (38), ಸುನೀಲ್ (40) ಬಂಧಿತ ಆರೋಪಿಗಳು. ಜೊತೆಗೆ 10.5 ಲಕ್ಷ ರೂ. ಮೌಲ್ಯದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಸದ್ಯ ಪ್ರಕರಣ ಭೇದಿಸಿದ್ದಕ್ಕೆ ಬ್ಯಾಂಕ್‌ನಲ್ಲಿ ಚಿನ್ನಾಭರಣ ಇಟ್ಟಿದ್ದ ಗ್ರಾಹಕರು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.

    ಘಟನೆ ಏನು?
    ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು.ಇದನ್ನೂ ಓದಿ: ಡಾಕಿಂಗ್‌ ನಂತರದ ಪ್ರಕ್ರಿಯೆ ಶುರು – ಸಂಜೆ 6 ಗಂಟೆ ವೇಳೆಗೆ ಬಾಹ್ಯಾಕಾಶ ನಿಲ್ದಾಣದೊಳಕ್ಕೆ ಅಧಿಕೃತ ಎಂಟ್ರಿ

  • ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

    ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

    ವಿಜಯಪುರ: ಸಿದ್ದರಾಮಯ್ಯನವರೇ (Siddaramaiah) ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ತಪ್ಪಿಯೂ ಕರ್ನಾಟಕವನ್ನ ಡಿಕೆಶಿ (DK Shivakumar) ಕೈಗೆ ಕೊಡಬೇಡಿ. ಮಾರಿಕೊಂಡು ಹೋಗ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ತಿಳಿಸಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಎಲ್ಲ ಶಾಸಕರು ರೊಚ್ಚಿಗೆದ್ದಿದ್ದಾರೆ. ಸದ್ಯ ರಾಜ್ಯದ ಮಂತ್ರಿಗಳು ಲೂಟಿಗೆ ಇಳಿದಿದ್ದಾರೆ. ಸಿಎಂ ಡೀಲಿಂಗ್‌ನ್ನು ಅವರ ಮಗ ಮಾಡ್ತಿದ್ದಾನೆ, ಬೈರತಿ ಸುರೇಶ್ (Byrathi Suresh) ಅವರು ಡೀಲಿಂಗ್ ಮಾಡುತ್ತಾರೆ. ಡಿಕೆಶಿ ಇಬ್ಬರು ಅಣ್ಣ, ತಮ್ಮ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಸರ್ಕಾರ ಯಾವಾಗ ಹೋಗುತ್ತೆ ಗೊತ್ತಿಲ್ಲ, ಅಷ್ಟರಲ್ಲಿ ನಾವು ಹಣ ಮಾಡಿಕೊಂಡು ಪಾರಾಗಬೇಕು ಎಂದು ಎಲ್ಲ ಮಂತ್ರಿಗಳಿಗೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ: ರೋಡ್ ರೇಜ್ ಕೇಸ್ – ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್, ಡ್ರೈವರ್‌ಗೆ ಜಾಮೀನು

    ಇನ್ನು ಗ್ಯಾರಂಟಿಗಳ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಬಾದಾಮಿಯಲ್ಲಿ, ನಾವು ಬಾದಾಮಿಯ ಸಂಪೂರ್ಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಯಾಕೆಂದರೆ ನಮ್ಮ ಹತ್ತಿರ ದುಡ್ಡಿಲ್ಲ, ಅದಕ್ಕೆ ನರೇಂದ್ರ ಮೋದಿ ಅವರು ಕೊಡಬೇಕು ಎಂದಿದ್ದಾರೆ. ಕಾಂಗ್ರೆಸ್‌ನವರು ಗ್ಯಾರಂಟಿ ಹೆಸರಲ್ಲಿ ಪುಕ್ಕಟೆ ಹಂಚುತ್ತಾ ಹೋಗುತ್ತಾರೆ. ಗ್ಯಾರಂಟಿ ಒಂದು ನೆಪ ಅಷ್ಟೇ, ಇವರು ಲೂಟಿ ಮಾಡುತ್ತಿದ್ದಾರೆ. ಬಡವರಿಗೆ ಅಷ್ಟು ಕೊಟ್ಟಿದ್ದೇವೆ, ಇಷ್ಟು ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಮಾಡಬಹುದು. ಕರ್ನಾಟಕದಲ್ಲಿ ಸಾಕಷ್ಟು ಸಂಪನ್ಮೂಲ ಇದೆ. ಬಡವರಿಗೆ ಕೊಡುವುದನ್ನು ಕೊಟ್ಟು, ಬಳಿಕ ಬೇರೆ ಅಭಿವೃದ್ಧಿ ಕೆಲಸ ಮಾಡಬಹುದು ಎಂದರು.

    ಇನ್ನೂ ಸಿದ್ದರಾಮಯ್ಯ ಅವರಿಗೆ ಗುರಿ ಇಲ್ಲ, ದಿನೇ ದಿನೇ ಕಾಂಗ್ರೆಸ್‌ನ ಶಾಸಕರು ಜಾಗೃತರಾಗುತ್ತಿದ್ದಾರೆ. ಎಲ್ಲವನ್ನು ಅಲ್ಪಸಂಖ್ಯಾತರಿಗೆ ಕೊಟ್ಟರೆ ಹೇಗೆ ಎನ್ನುತ್ತಿದ್ದಾರೆ. ಇದರಿಂದ ಸಿಎಂಗೆ ತಲೆನೋವಾಗಿದೆ. ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ತಪ್ಪಿಯೂ ಕರ್ನಾಟಕವನ್ನ ಡಿಕೆಶಿ ಕೈಗೆ ಕೊಡಬೇಡಿ. ನೀವು ಸ್ವಲ್ಪ ಲೂಟಿ ಮಾಡಿದ್ದೀರಾ, ಡಿಕೆಶಿ ಕೈಯಲ್ಲಿ ಕೊಟ್ರೆ ಇಡೀ ಕರ್ನಾಟಕವನ್ನೇ ಮಾರಾಟ ಮಾಡಿಕೊಂಡು ಹೋಗುತ್ತಾರೆ. ಹೀಗಾಗಿ ರಾಜ್ಯ ಸರ್ಕಾರ ವಿಸರ್ಜನೆಯಾಗಬೇಕು, ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತ – ವಿದ್ಯಾರ್ಥಿನಿ ಸಾವು

  • 1 ಲಕ್ಷಕ್ಕೆ ಸಮೀಪಿಸಿದ ಆಲಮಟ್ಟಿ ಜಲಾಶಯದ ಒಳಹರಿವು – ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಣೆ

    1 ಲಕ್ಷಕ್ಕೆ ಸಮೀಪಿಸಿದ ಆಲಮಟ್ಟಿ ಜಲಾಶಯದ ಒಳಹರಿವು – ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಣೆ

    – 70 ಸಾವಿರ ಕ್ಯುಸೆಕ್ ಹೊರಹರಿವು

    ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.ಇದನ್ನೂ ಓದಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಒಬ್ಬೊಬ್ಬರೇ ಬಾಯಿ ಬಿಡ್ತಾರೆ – ಬಿಎಸ್‌ವೈ

    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯಕ್ಕೆ 98,611 ಕ್ಯುಸೆಕ್ ನೀರಿನ ಒಳಹರಿವು ಇದೆ.

    ಜಲಾಶಯದಿಂದ ಬಸವಸಾಗರ ಡ್ಯಾಂಗೆ 70 ಸಾವಿರ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. 519.60 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 516.21 ಅಡಿ ನೀರಿದೆ. 123.081 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಇಂದು 75.248 ಟಿಎಂಸಿ ನೀರಿದೆ.ಇದನ್ನೂ ಓದಿ: ಮೈದುಂಬಿ ಹರಿಯುತ್ತಿದ್ದಾಳೆ ಕಪಿಲಾ – ಮುಳುಗಡೆಯ ಭೀತಿಯಲ್ಲಿ ನಂಜನಗೂಡಿನ ಸ್ನಾನ ಘಟ್ಟ

  • ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದ್ದು, ಸದ್ಯ ಐಸಿಯುಲ್ಲಿದೆ – ಯತ್ನಾಳ್

    ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದ್ದು, ಸದ್ಯ ಐಸಿಯುಲ್ಲಿದೆ – ಯತ್ನಾಳ್

    ವಿಜಯಪುರ: ರಾಜ್ಯ ಬಿಜೆಪಿಯಲ್ಲಿ (BJP) ಅಸಮಾಧಾನ ತುಂಬಿ ತುಳುಕುತ್ತಿದ್ದು ಸದ್ಯ ಐಸಿಯುನಲ್ಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಾಗ್ದಾಳಿ ನಡೆಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಒಂದು ಹೋರಾಟ ಮಾಡಬೇಕೆಂದರೆ ಜನ ಸೇರುವುದಿಲ್ಲ. ಇದಕ್ಕೆ ಕಾರಣ ಎಂದರೆ ರಾಜ್ಯ ಬಿಜೆಪಿ ನಾಯಕತ್ವ. ಇನ್ನೂ ಕುಮಾರಸ್ವಾಮಿಯವರ ಜೊತೆ ಕೂಡ ಹೊಂದಾಣಿಕೆ ಇಲ್ಲ. ಜೆಡಿಎಸ್ (JDS) ನಮ್ಮ ಮಿತ್ರ ಪಕ್ಷವಾಗಿದ್ದರೂ ಕೂಡ ಅದನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಈಗಲಾದರೂ ಅಮಿತ್ ಶಾ ಅವರು ತಿಳಿದುಕೊಳ್ಳಬೇಕು.ಯಡ್ಡಿಯೂರಪ್ಪ ಕುಟುಂಬದ ಬಗ್ಗೆ, ಯಡ್ಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ತಿಳಿದುಕೊಳ್ಳಬೇಕು. ಈಗಲೂ ಯಡ್ಡಿಯೂರಪ್ಪನನ್ನ ಜೀ,ಜೀ ಅಂದರೆ ಕರ್ನಾಟಕದಲ್ಲಿ ಬಿಜೆಪಿಗೆ ಬಹಳ ಕಷ್ಟ ಆಗುತ್ತದೆ ಎಂದರು.ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

    ಯಡ್ಡಿಯೂರಪ್ಪ ಕುಟುಂಬವನ್ನ ಬಿಜೆಪಿಯಿಂದ ಮುಕ್ತ ಮಾಡಬೇಕು. ಪ್ರತಿನಿತ್ಯ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಇವರು ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಅಹ್ಮದ್ ಜೊತೆ ಸಂತೋಷವಾಗಿದ್ದಾರೆ. ಇದು ಕಾರ್ಯಕರ್ತರಿಗೆ ಏನು ಸಂದೇಶ ಕೊಡುತ್ತದೆ. ಅವರೊಂದಿಗೆ ನಿಮಗೆ ಅಷ್ಟೊಂದು ಆತ್ಮೀಯತೆ ಇದ್ದರೆ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಿ. ಹಿಂದೂ ಕಾರ್ಯಕರ್ತರನ್ನು ಬಲಿ ತಗೆದುಕೊಳ್ಳಬೇಡಿ ಎಂದು ಕಿಡಿಕಾರಿದರು.

    ಅಲ್ಪಸಂಖ್ಯಾತರಿಗೆ ವಸತಿಯಲ್ಲಿ 5% ಏರಿಕೆ ವಿಚಾರವಾಗಿ ಮಾತನಾಡಿದ ಅವರು, ಜೈನ್, ಸಿಖ್, ಕ್ರೈಸ್ತರು ಅಲ್ಪಸಂಖ್ಯಾತರಿದ್ದಾರೆ. ಅವರಿಗೆ 10% ಮಾತ್ರ, ಮುಸ್ಲಿಂರಿಗೆ 80% ಕೊಡುತ್ತಾರೆ. ಬೆಳಗಾವಿ ಅಧಿವೇಶನದಲ್ಲಿ ನನಗೆ ಹಾಗೂ ಜಮೀರ್‌ಗೆ ಇದೇ ವಿಷಯದಿಂದ ಜಗಳವಾಗಿತ್ತು. ಮುಸ್ಲಿಂರಿಗೆ 80% ಹಂಚಿಕೆ ಮಾಡಲು ಇರ‍್ಯಾರು? ಹಿಂದೂಗಳಿಗೆ ಇಲ್ಲಿ ಏನಿಲ್ಲ. ಸಿದ್ದರಾಮಯ್ಯ, ಡಿಕೆಶಿ ಬಹುತೇಕ ಮೂರು ವರ್ಷದಲ್ಲಿ ಕರ್ನಾಟಕವನ್ನ ಮತ್ತೊಂದು ಕೇರಳ, ಪಶ್ಚಿಮ ಬಂಗಾಳನಂತೆ ಮುಸ್ಲಿಂ ರಾಜ್ಯ ಮಾಡುತ್ತಾರೆ. ಸಿದ್ದರಾಮಯ್ಯ ತಮ್ಮ ಸಮುದಾಯಕ್ಕೆ ಕೊಡುಗೆ ಕೊಡಲಿ. ಕುರಿಗಾಹಿಗಳಿಗೆ 5 ಲಕ್ಷ ರೂ, ಕೊಡಲಿ. ಮುಸ್ಲಿಂರಿಗೆ ಬಿಟ್ಟು ಬೇರೆ ಯಾರಿಗೂ ಕೊಡುತ್ತಿಲ್ಲ. ಕೇವಲ ಸಾಬ್ರೂ, ಸಾಬ್ರೂ ಎನ್ನುತ್ತಾರೆ. ರಾಜ್ಯದಲ್ಲಿ ಸಾಬ್ರೂ ಬಿಟ್ರೇ ಬೇರೆ ಯಾರು ಇಲ್ವಾ? ಎಂದು ಆಗ್ರಹಿಸಿದರು.ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ – ಹಲವೆಡೆ ಭೂಕುಸಿತ

     

  • ಮಹಾರಾಷ್ಟ್ರದಲ್ಲಿ ವರುಣಾರ್ಭಟ – ಆಲಮಟ್ಟಿ ಜಲಾಶಯಕ್ಕೆ 80 ಸಾವಿರ ಕ್ಯುಸೆಕ್ ಒಳಹರಿವು

    ಮಹಾರಾಷ್ಟ್ರದಲ್ಲಿ ವರುಣಾರ್ಭಟ – ಆಲಮಟ್ಟಿ ಜಲಾಶಯಕ್ಕೆ 80 ಸಾವಿರ ಕ್ಯುಸೆಕ್ ಒಳಹರಿವು

    ವಿಜಯಪುರ: ಮಹಾರಾಷ್ಟದಲ್ಲಿ (Maharashtra) ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿ (Krishna river) ಮೈದುಂಬಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) 80 ಸಾವಿರ ಕ್ಯುಸೆಕ್ ಒಳಹರಿವು ಹೆಚ್ಚಾಗಿದೆ.ಇದನ್ನೂ ಓದಿ: ಮಹಿಳೆಗೆ ಕಾರುಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್

    ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಳೆದ ನಾಲ್ಕು ದಿನದ ಹಿಂದೆ ಕೇವಲ 15 ಸಾವಿರ ಕ್ಯುಸೆಕ್ ಇದ್ದ ಒಳಹರಿವು, ಇದೀಗ 80 ಸಾವಿರ ದಾಡಿದೆ. ಸದ್ಯ ಜಲಾಶಯದಿಂದ 58,799 ಕ್ಯುಸೆಕ್ ಹೊರಹರಿವಿದೆ.

    519.60 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 515.55 ಅಡಿ ನೀರಿದೆ. ಇನ್ನೂ 123.081 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಇಂದು 68.343 ಟಿಎಂಸಿ ನೀರಿದೆ. ಜೂನ್ ತಿಂಗಳಲ್ಲೇ ಒಳಹರಿವು ಜಾಸ್ತಿಯಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ.ಇದನ್ನೂ ಓದಿ: ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – 25 ಗೇಟ್‌ಗಳಿಂದ ಕೃಷ್ಣಾ ನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ