Tag: ವಿಜಯಪುರ

  • ಬರೀ ಭಾಷಣ ಮಾಡಿದ್ರೆ ನಡೆಯಲ್ಲ, ಕದನ ವಿರಾಮದ ಬಗ್ಗೆ ಮೋದಿ ಉತ್ತರಿಸಬೇಕು – ಕೃಷ್ಣಬೈರೇಗೌಡ

    ಬರೀ ಭಾಷಣ ಮಾಡಿದ್ರೆ ನಡೆಯಲ್ಲ, ಕದನ ವಿರಾಮದ ಬಗ್ಗೆ ಮೋದಿ ಉತ್ತರಿಸಬೇಕು – ಕೃಷ್ಣಬೈರೇಗೌಡ

    ವಿಜಯಪುರ: ಮೋದಿಯವರು ಬರೀ ಭಾಷಣ ಮಾಡಿದರೆ ನಡೆಯಲ್ಲ, ಕದನ ವಿರಾಮದ ಬಗ್ಗೆ ಉತ್ತರ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byregowda) ಒತ್ತಾಯಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ಕೊಟ್ಟಿದ್ದೇವೆ. ಪಾಕಿಸ್ತಾನಕ್ಕೆ (Pakistan) ಸರಿಯಾಗಿ ಪಾಠ ಕಲಿಸಬೇಕು ಎನ್ನುವ ಕಾರಣಕ್ಕೆ ಬೆಂಬಲ ಕೊಟ್ಟಿದ್ದೆವು. ಆದರೆ ಕದನ ವಿರಾಮ ಘೋಷಣೆ ಮಾಡುವಾಗ ಯಾವ ಉದ್ದೇಶದಿಂದ, ಯಾವ ಗುರಿ ಇಟ್ಟುಕೊಂಡು ಕದನ ಮಾಡಿದ್ದೇವೆ ಆ ಗುರಿ ಈಡೇರಿದೆಯಾ ಎನ್ನುವ ಪ್ರಶ್ನೆಗೆ ಉತ್ತರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ಕಾಂಗ್ರೆಸ್‌ನಿಂದ ಇಂದಿರಾಗಾಂಧಿ ಪೋಸ್ಟರ್ – ಬಿಜೆಪಿ ಕಿಡಿ

    ಪಾಕಿಸ್ತಾನಕ್ಕೆ ಯಾವ ಪಾಠ ಕಲಿಸಲು ಹೊರಟಿದ್ದೇವೆ. ಅದನ್ನು ಕಲಿಸಿದ್ವಾ? ನಾಲ್ಕೈದು ದಿನ ಯುದ್ಧ ಮಾಡಿ ಬಿಟ್ಟರೆ, ಇದು ಸರಿಯಾ? ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? ಅಮೆರಿಕ ಹೇಳಿದೆ ಎಂದು ಕದನ ವಿರಾಮ ಘೋಷಣೆ ಮಾಡಿದ್ರಾ? ಅಮೆರಿಕ ನಮ್ಮ ಆಂತರಿಕ ವಿಷಯಗಳ ಬಗ್ಗೆ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ಬಗ್ಗೆ ಏನು ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

    ಕಾಶ್ಮೀರ ವಿಷಯವನ್ನು ನಾವು ಬಗೆಹರಿಸುತ್ತೇವೆ ಎಂದು ಹೇಳುತ್ತಾರೆ ಅಂದರೆ ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆ ಮತ್ತೊಂದಿಲ್ಲ. ಕಾಶ್ಮೀರ ವಿಷಯ ಸೆಟಲ್ ಆಗಿದಿಯಾ ಅಥವಾ ರೀ ಓಪನ್ ಆಗಿದೆಯಾ? ಈ ಎಲ್ಲ ಪ್ರಶ್ನೆಗಳಿಗೆ ಇವತ್ತು ಉತ್ತರ ಇಲ್ಲದಂತಾಗಿದೆ. ಬರೀ ಭಾಷಣ ಮಾಡಿದರೆ ಉತ್ತರ ಸಿಗಲ್ಲ. ಈ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ

  • Vijayapura | ತೆರೆದ ಬಾವಿಗೆ ಬಿದ್ದು ಮಗು ಸಾವು

    Vijayapura | ತೆರೆದ ಬಾವಿಗೆ ಬಿದ್ದು ಮಗು ಸಾವು

    ವಿಜಯಪುರ: ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ (Open Well) ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ (Muddebihala) ಪಟ್ಟಣದಲ್ಲಿ ನಡೆದಿದೆ.

    ಮೂರು ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಮಗು. ಶುಕ್ರವಾರ ಮಗು ಮನೆಯಿಂದ ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗಳೂರು ಪೋರ್ಟ್‌ ಧ್ವಂಸ ಮಾಡಿದ್ದೇವೆ – ಮತ್ತೆ ಪಾಕ್‌ ಫುಲ್‌ ಟ್ರೋಲ್‌

    ಕುಟುಂಬಸ್ಥರು ಮಗುವನ್ನು ತೆರೆದ ಬಾವಿಯ ಆಸುಪಾಸಲ್ಲಿ ಆಡಲು ಬಿಟ್ಟಾಗ ಅನಾಹುತ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್

  • ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕ್‌ಗೆ ಭಾರತ ತಕ್ಕ ಪಾಠ ಕಲಿಸುತ್ತೆ – ಯತ್ನಾಳ್

    ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕ್‌ಗೆ ಭಾರತ ತಕ್ಕ ಪಾಠ ಕಲಿಸುತ್ತೆ – ಯತ್ನಾಳ್

    ವಿಜಯಪುರ: ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ಭಾರತೀಯ ಸೇನೆಯಿಂದ ನಡೆದ ಏರ್‌ಸ್ಟ್ರೈಕ್‌`ಆಪರೇಷನ್ ಸಿಂಧೂರ’ ಪ್ರತೀಕಾರದ ದಾಳಿಯನ್ನು ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿಯವರ (PM Modi) ನೇತೃತ್ವದಲ್ಲಿ ಭಾರತೀಯ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆಗಳು ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದೆ ಎಂದು ಉಲ್ಲೇಖಿಸಿದ್ದಾರೆ.ಇದನ್ನೂ  ಓದಿ: ಯೋಧರ ಹೋರಾಟ ಶುರುವಾಗಿದೆ: ‘ಆಪರೇಷನ್ ಸಿಂಧೂರ’ಗೆ ಜೈ ಎಂದ ತಲೈವಾ

    ಏ.22 ರಂದು ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಲಾಮ್‌ನ (Pahalgam) ಬೈಸರನ್ ಕಣಿವೆಯಲ್ಲಿ ನಡೆದಿದ್ದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರವನ್ನು ಭಾರತೀಯ ಸೇನೆ ತೆಗೆದುಕೊಂಡಿದೆ. ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ. ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ. ಭಾರತ ಮಾತೆಗೆ ಜಯವಾಗಲಿ, ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.

    ಎಕ್ಸ್‌ನಲ್ಲಿ ಎನಿದೆ?
    ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ಭಾರತದ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ ಪಹಲ್ಗಾಮ್ ನಲ್ಲಿ ನಡೆದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರ ತೆಗೆದುಕೊಂಡಿದೆ. ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ ಹಾಗೂ ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ.

    ಭಾರತ ಮಾತೆಗೆ ಜಯವಾಗಲಿ
    ಜೈ ಹಿಂದ್.ಇದನ್ನೂ  ಓದಿ: ಭಾರತೀಯರಿಗೆ ಇಂದು ಸಮಾಧಾನ ತಂದ ದಿನ: ಹೆಚ್.ಕೆ ಪಾಟೀಲ್

  • ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್‌ಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ – ಮಾವಳ್ಳಿ ಶಂಕರ್

    ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್‌ಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ – ಮಾವಳ್ಳಿ ಶಂಕರ್

    ವಿಜಯಪುರ: ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್‌ಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ ಎಂದು ದಲಿತ ಮುಖಂಡ ಮಾವಳ್ಳಿ ಶಂಕರ್ ವಾಗ್ದಾಳಿ ನಡೆಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದಿದ್ದ ಕಾಂತರಾಜು ಆಯೋಗ ಜಾರಿಗೆ ವಿರೋಧ ಮಾಡಿದ್ದ ವಿಚಾರವಾಗಿ ಪ್ರತಿಕ್ರಿಯಿಸಿ, ಇವರಿಗೆ ಬಸವಾದಿ ಶರಣರಲ್ಲಿ ನಂಬಿಕೆಯಿದ್ದರೆ ಅವರ ವಿಚಾರಗಳ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು. ನೈತಿಕವಾಗಿ ಅವರ ತತ್ವಗಳಲ್ಲಿ, ವಿಚಾರಗಳಲ್ಲಿ ನಂಬಿಕೆಯಿದ್ದರೆ ಇದನ್ನೆಲ್ಲ ಬಿಡಬೇಕು. ಬಸವಣ್ಣನವರ ಹೆಸರು ಹೇಳಲು ಇವರಿಗೆ ಯಾವುದೇ ಯೋಗ್ಯತೆ ಇಲ್ಲ ಎಂದು ಟಾಂಗ್ ನೀಡಿದರು.ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದವರ ವಿರುದ್ಧ ಕ್ರಮ: ಬೋಸರಾಜು

    ಇವರೆಲ್ಲ ಬಸವಣ್ಣನವರ ಬಗ್ಗೆ ಹೇಳುತ್ತಾ, ಅವರ ವಿಚಾರಗಳಿಗೆ ವಿರುದ್ಧವಾಗಿ ಮಾತನಾಡುತ್ತಾರೆ. ಕಾಂಗ್ರೆಸ್‌ನವರು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂತರಾಜು ಸಮೀಕ್ಷಾ ವರದಿ ಜಾರಿ ಮಾಡುವುದಾಗಿ ಹೇಳಿದ್ದರು. ಆದರೆ ಈಗ ಯಾವ ಬಾಯಿಂದ ವಿರೋಧ ಮಾಡುತ್ತಾರೆ ಎಂದು ಕಿಡಿಕಾರಿದರು.

    ಎಸ್ಸಿ-ಎಸ್ಟಿ, ಒಬಿಸಿ, ದಲಿತರು, ಅಲ್ಪಸಂಖ್ಯಾತರಿಂದಲೇ ಇವತ್ತು ಕಾಂಗ್ರೆಸ್ ಹಿಂದೆ ಇದ್ದಾರೆ. ಯಾವ ರೀತಿ ದೇವರಾಜ ಅರಸು ಅವರು ಏಕಾಂಗಿಯಾಗಿ ಹಾವನೂರು ಅವರ ವರದಿ ಜಾರಿ ಮಾಡಿದರೋ, ಅದೇ ರೀತಿ ಇಚ್ಛಾಶಕ್ತಿ, ಬದ್ಧತೆಯನ್ನು ಸಿದ್ಧರಾಮಯ್ಯನವರು ತೋರಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಮಹದಾಯಿ ಬಗ್ಗೆ ಇಲ್ಲಿವರೆಗೆ ಕಾಂಗ್ರೆಸ್‌ನವರು ಏನು ಮಾಡಿದ್ದೀರಿ: ಜೋಶಿ ಪ್ರಶ್ನೆ

  • ಜಮೀರ್ ಸುಮ್ಮನಿದ್ರೆ ಅದೇ ದೊಡ್ಡ ಸೇವೆ: ಜೋಶಿ

    ಜಮೀರ್ ಸುಮ್ಮನಿದ್ರೆ ಅದೇ ದೊಡ್ಡ ಸೇವೆ: ಜೋಶಿ

    -ಬಾಂಬ್‌ ಕಟ್ಟಿಕೊಂಡು ಯುದ್ಧಕ್ಕೆ ಪಾಕ್‌ ಗಡಿಗೆ ಹೋಗ್ತೀನಿ ಅಂದಿದ್ದ ಜಮೀರ್‌ಗೆ ಟಾಂಗ್‌ 

    ವಿಜಯಪುರ: ಬಾಂಬ್ ಕಟ್ಟಿಕೊಂಡು ಪಾಕ್ (Pakistan) ಗಡಿಗೆ ಹೋಗುತ್ತೇನೆ ಎಂದ ಸಚಿವ ಜಮೀರ್ ಅಹ್ಮದ್ (Zameer Ahmed) ಶಾಂತವಾಗಿದ್ದರೆ ಸಾಕು. ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ಸುಮ್ಮನಿರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಜಮೀರ್‌ಗೆ ಟಾಂಗ್ ಕೊಟ್ಟಿದ್ದಾರೆ.

    ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮ್ಮ ಭಾಷಣ ಬೇಡ, ನೀವು ಹೋಗುವುದೂ ಬೇಡ. ಸೈನ್ಯದ ಶಕ್ತಿ, ಸೈನಿಕರು, ಇಂಟಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಹೇಳಿಕೆಗಳನ್ನ ಕೊಡದೇ ಬಾಯಿ ಮುಚ್ಚಿಕೊಂಡಿದ್ದರೆ ಸಾಕು. ಜಮೀರ್ ಶಾಂತವಾಗಿರೋದೇ ದೇಶಕ್ಕೆ ಮಾಡುವ ದೊಡ್ಡ ಸೇವೆ. ಜಮೀರ್ ದೊಡ್ಡ ತ್ಯಾಗಕ್ಕೆ ಹೊರಟಿದ್ದಾರೆ, ಅವರಂತಹ ದೊಡ್ಡ ತ್ಯಾಗದವರು ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಶಿವಾನಂದ ಪಾಟೀಲ್ ಅವರೇ ನನಗೆ ಹೇಳೋಕೆ ನೀವ್ಯಾರು? – ಎಂ.ಬಿ ಪಾಟೀಲ್ ಗರಂ

    ನೀವು ನಿಮ್ಮ ಪಕ್ಷದವರು ಶಾಂತಿಯಿಂದ ಇರಿ. ಜಮೀರ್, ಸಂತೋಷ್ ಲಾಡ್, ಖರ್ಗೆ, ಸಿದ್ದರಾಮಯ್ಯ ಸುಮ್ಮನಿದ್ದರೆ ಸಾಕು. ಡಿಕೆ ಶಿವಕುಮಾರ್ ಟೆರೆರಿಸ್ಟ್‌ಗಳನ್ನು ಬ್ರದರ್ ಎನ್ನದಿದ್ದರೆ ಸಾಕು. ಸೇನೆ ಎಲ್ಲವನ್ನೂ ನಿಭಾಯಿಸುತ್ತದೆ. ಸೈನ್ಯದ, ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸದೇ ಸುಮ್ಮನಿದ್ದರೆ ಸಾಕು ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ನಿರ್ಬಂಧ ವಿಧಿಸಿದ ಭಾರತ

  • ಪಾಕಿಸ್ತಾನಕ್ಕೆ ಜೈಕಾರ ಹಾಕೋರಿಗೆ ಚಪ್ಪಲಿಯಿಂದ ಹೊಡೆಯಿರಿ – ಯತ್ನಾಳ್

    ಪಾಕಿಸ್ತಾನಕ್ಕೆ ಜೈಕಾರ ಹಾಕೋರಿಗೆ ಚಪ್ಪಲಿಯಿಂದ ಹೊಡೆಯಿರಿ – ಯತ್ನಾಳ್

    ವಿಜಯಪುರ: ಪಾಕಿಸ್ತಾನಕ್ಕೆ (Pakistan) ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ, ಅವರ ಪರವಾಗಿ ನಾನು ಇರುತ್ತೇನೆ. ಅವರ ವಕಾಲತ್ತು ನಾನು ನೋಡಿಕೊಳುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವ ಜಯಂತಿಯನ್ನು ಬಸವಣ್ಣನ ಜನ್ಮಭೂಮಿ ಬಸವನ ಬಗೇವಾಡಿಯಲ್ಲಿ ಮಾಡಬೇಕೆಂಬ ಒತ್ತಾಯ ವಿಚಾರವಾಗಿ, ಸರ್ಕಾರ ಬಸವನ ಬಾಗೇವಾಡಿ, ಕೂಡಲಸಂಗಮ, ಬಸವ ಕಲ್ಯಾಣ ಮೂರು ಕಡೆ ಬಸವ ಜಯಂತಿ ಮಾಡಬೇಕಿದೆ. ಅದು ಸರ್ಕಾರಕ್ಕೆ ದೊಡ್ಡ ಕೆಲಸವಲ್ಲ. ಈ ಬಾರಿ ಕೂಡಲಸಂಗಮದಲ್ಲಿ ಮಾಡುವುದರ ಬಗ್ಗೆ ಆಕ್ಷೇಪಣೆ ಇಲ್ಲ. ಬಸವನ ಬಾಗೇವಾಡಿಯಲ್ಲಿ ಮಾಡದಿರಲು ಅಯೋಗ್ಯ ನಾಲಾಯಕರ ಬಗ್ಗೆ ಧಿಕ್ಕಾರ ಇದೆ. ಶಿವಾನಂದ ಪಾಟೀಲ್ ಅಂತಹವರಿಂದ ಧರ್ಮದ ಕೆಲಸ ಆಗಲ್ಲ. ಆತ ಲೂಟಿ ಮಾಡುವ ಶಾಸಕ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ:ಪಾಕ್‌ಗೆ ಜೈ ಎಂದವರ ಕೃತ್ಯ ಖಂಡಿಸಿದ ಹಿಂದೂ ಯುವಕರಿಗೆ ಪೊಲೀಸರಿಂದ ಕಿರುಕುಳ: ಸುನಿಲ್ ಕುಮಾರ್ ಆಕ್ರೋಶ

    ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ್ದ ಸಚಿವ ಹಾಗೂ ಶಾಸಕರ ವಿಚಾರವಾಗಿ ಮಾತನಾಡಿ, ಅವನು ಶಿವಾನಂದ ಪಾಟೀಲ್ ಅಲ್ಲ, ಅವನು ಶಿವಾನಂದ ಹಚಡದ. ಅವನಿಗೆ ತಾಕತ್ ಇದ್ದರೆ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ನನ್ನ ವಿರುದ್ಧ ಸ್ಪರ್ಧಿಸಲಿ. ಮುಂದಿನ ಶುಕ್ರವಾರದೊಳಗೆ ರಾಜೀನಾಮೆ ಕೊಡಲಿ, ನಿಮ್ಮ ಮತಕ್ಷೇತ್ರದಲ್ಲೇ ಪಕ್ಷೇತರವಾಗಿ ನಿಂತು ಆರಿಸಿ ಬರುತ್ತೇನೆ ಎಂದು ಕಿಡಿಕಾರಿದರು.

    ನನ್ನ ವಿರುದ್ಧ ನಡೆಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಯಾರಾದರೂ ಭಾರತ ಮಾತಾಕಿ ಜೈ ಅಂದ್ರಾ, ಪಾಕಿಸ್ತಾನಕ್ಕೆ ಧಿಕ್ಕಾರ ಕೂಗಿದ್ದಾರಾ? ಕಾಂಗ್ರೆಸ್ ಸಚಿವ, ಶಾಸಕರನ್ನು ಮುಸ್ಲಿಂ ಮುಖಂಡರು ಬ್ಲಾö್ಯಕ್‌ಮೇಲ್ ಮಾಡಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ. ಅವರ ಪರವಾಗಿ ನಾನು ಇರುತ್ತೇನೆ. ಅವರ ವಕಾಲತ್ತು ನಾನು ನೋಡಿಕೊಳುತ್ತೇನೆ ಎಂದರು.ಇದನ್ನೂ ಓದಿ: ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ‌’ಕೊತ್ತಲವಾಡಿ’ ಚಿತ್ರದ ಪೋಸ್ಟರ್‌ ಔಟ್

  • ವಿಜಯಪುರ | ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆ

    ವಿಜಯಪುರ | ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆ

    -ಸಿಡಿಲು ಬಡಿದು ಎಮ್ಮೆ, ಹಸು ಸಾವು

    ವಿಜಯಪುರ: ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ.ಇದನ್ನೂ ಓದಿ: ಬೆಂಗಳೂರಿಗಿಂತ ಚೆನ್ನಾಗಿ 10,000 ಎಕ್ರೆ ಜಾಗದಲ್ಲಿ ಉತ್ತಮ ಸಿಟಿ ಮಾಡ್ತೀವಿ: ಡಿಕೆಶಿ

    ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳು ಮುಳುಗುವಷ್ಟು ನೀರು ನಿಂತಿದ್ದು, ಅಂಗಡಿ ಮುಂಗಟ್ಟುಗಳ ಜಲಾವೃತಗೊಂಡಿದೆ. ಏಕಾಏಕಿ ಸುರಿದ ಮಳೆಗೆ ಜನರು ಕಕ್ಕಾಬಿಕ್ಕಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಸಿಡಿಲು ಬಡಿದು ಎಮ್ಮೆ, ಹಸು ಸಾವು:
    ಜಿಲ್ಲೆಯಲ್ಲಿ ಸುರಿದ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಲ್ಲಿ ಬಸವರಾಜ ಸದಾಶಿವ ಮಣ್ಣೂರ ಎಂಬುವವರಿಗೆ ಸೇರಿದ ಎಮ್ಮೆಯೊಂದು ಸಿಡಿಲು ಬಡಿದು ಸಾವನ್ನಪ್ಪಿದೆ. ಜೊತೆಗೆ ನಾಗೂರು ಗ್ರಾಮದಲ್ಲಿ ಬಸಪ್ಪ ಕ್ವಾಟಿ ಎಂಬುವವರಿಗೆ ಸೇರಿದ ಹಸುವೊಂದು ಸಾವನ್ನಪ್ಪಿದೆ.ಇದನ್ನೂ ಓದಿ: ತಮನ್ನಾಗೆ ಬಿಗ್ ಚಾನ್ಸ್- ಬಾಲಿವುಡ್‌ನ ಹೊಸ ಚಿತ್ರಕ್ಕೆ ಮಿಲ್ಕಿ ಬ್ಯೂಟಿ ನಾಯಕಿ

  • 225 ಪ್ರಕರಣದಲ್ಲಿ 345 ಆರೋಪಿಗಳ ಬಂಧನ – 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

    225 ಪ್ರಕರಣದಲ್ಲಿ 345 ಆರೋಪಿಗಳ ಬಂಧನ – 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

    ವಿಜಯಪುರ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, 225 ಕೇಸ್‌ನಲ್ಲಿದ್ದ 345 ಆರೋಪಿಗಳನ್ನು ಬಂಧಿಸಿದ್ದಾರೆ.

    ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಬೇಧಿಸಿ, ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಸೇರಿದಂತೆ ಒಟ್ಟು 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.ಇದನ್ನೂ ಓದಿ: ಹೊಸ ಚಿತ್ರಕ್ಕಾಗಿ ಕುಮಟಾದಲ್ಲಿ ಬೀಡುಬಿಟ್ಟ ಜ್ಯೂ.ಎನ್‌ಟಿಆರ್‌, ಪ್ರಶಾಂತ್‌ ನೀಲ್

    ಒಟ್ಟು 5,145.02 ಗ್ರಾಂ ಚಿನ್ನದ ಆಭರಣ ಮತ್ತು 1,723 ಗ್ರಾಂ ಬೆಳ್ಳಿ ಆಭರಣ, 1,06,72,000 ರೂ. ಮೌಲ್ಯದ 73 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. 1,32,41,000 ರೂ. ಮೌಲ್ಯದ 12 ಕಾರುಗಳನ್ನು ವಶಕ್ಕೆ ಪಡೆದು, 19 ಜನರನ್ನು ಬಂಧಿಸಿದ್ದಾರೆ. 19,00,000 ರೂ. ಮೌಲ್ಯದ 2 ಟಿಪ್ಪರ್ ವಶಕ್ಕೆ ಪಡೆದು, 5 ಜನರನ್ನು ಬಂಧಿಸಿದ್ದಾರೆ.

    ಇನ್ನೂ ನಗದು ಕಳ್ಳತನ ಪ್ರಕರಣ ಬೇಧಿಸಿದ್ದು, 19 ಪ್ರಕರಣಗಳಲ್ಲಿನ 31 ಆರೋಪಿಗಳನ್ನು ಬಂಧಿಸಿ, 1,91,89,404 ರೂ. ನಗದು ಹಣ ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕು: ಆರ್.ಅಶೋಕ್

  • ಜಾತಿ ಜನಗಣತಿ ಮಂಡನೆ ಹಿಂದೆ ಸಿದ್ದರಾಮಯ್ಯ ಷಡ್ಯಂತ್ರ: ಜಗದೀಶ್ ಶೆಟ್ಟರ್ ಆರೋಪ

    ಜಾತಿ ಜನಗಣತಿ ಮಂಡನೆ ಹಿಂದೆ ಸಿದ್ದರಾಮಯ್ಯ ಷಡ್ಯಂತ್ರ: ಜಗದೀಶ್ ಶೆಟ್ಟರ್ ಆರೋಪ

    – ಸಿಎಂ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿಗಣತಿ ತರ್ತಾರೆ

    ವಿಜಯಪುರ: ಜಾತಿ ಜನಗಣತಿ (Caste Census Report) ಮಂಡನೆ ಹಿಂದೆ ಸಿದ್ದರಾಮಯ್ಯ (Siddaramaiah) ಷಡ್ಯಂತ್ರ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಗಂಭೀರ ಆರೋಪ ಮಾಡಿದ್ದಾರೆ.

    ಜಾತಿಗಣತಿ ವರದಿ ಕುರಿತು ವಿಜಯಪುರದಲ್ಲಿ ಮಾತನಾಡಿದ ಅವರು, ಷಡ್ಯಂತ್ರ, ಹುನ್ನಾರ ಹಿನ್ನೆಲೆ ಸಿದ್ದರಾಮಯ್ಯ ಜಾತಿ ಜನಗಣತಿ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿ ಜನಗಣತಿ ತರುತ್ತಾರೆ. ಅಧಿಕಾರದಿಂದ ಇಳಿಯುವ ಸಮಯ ಬಂದಾಗಲೆಲ್ಲ ಹೀಗೆ ಮಾಡುತ್ತಾರೆ ಎಂದರು. ಇದನ್ನೂ ಓದಿ: 3 ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರ ಅಂತ್ಯ

    ಲಿಂಗಾಯತ, ಒಕ್ಕಲಿಗರು, ದಲಿತರನ್ನು ಒಡೆಯುವ ಹುನ್ನಾರ ಇದು. ಮುಸ್ಲಿಮರನ್ನು ಪ್ರೊಜೆಕ್ಟ್ ಮಾಡಲು ಜಾತಿ ಗಣತಿ ಮಂಡನೆ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಯುದ್ಧ ನಡೆಯುತ್ತದೆ. ಸಿದ್ದರಾಮಯ್ಯ ಬಳಿಕ ಡಿಕೆಶಿ ಪಟ್ಟ ಏರಲು ಕಾಯುತ್ತಿದ್ದಾರೆ. ನವೆಂಬರ್, ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟವಾಗಲಿದೆ. ಟೈಂ ಬಾಂಬ್ ಸ್ಫೋಟವಾಗಲಿದೆ. ಅಧಿಕಾರದಲ್ಲಿ ಮುಂದುವರೆಯಲು ಗೊಂದಲ ಸೃಷ್ಟಿಸಿದ್ದಾರೆ. ಡಿಕೆಶಿ ನವೆಂಬರ್, ಡಿಸೆಂಬರ್‌ಗೆ ಟೈಂ ಬಾಂಬ್ ಫಿಕ್ಸ್ ಮಾಡಿದ್ದಾರೆ. ಅದು ಸ್ಫೋಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: Waqf Act| ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು – ಸುಪ್ರೀಂ ವಿಚಾರಣೆಗೆ ಮಾನದಂಡ ಏನು?- ವಕೀಲ ವಿಷ್ಣು ಶಂಕರ್‌ ಜೈನ್‌

    ಈ ಹಿಂದೆಯೆ ಜಾತಿ ಜನಗಣತಿ ಮಂಡನೆ ಮಾಡಬೇಕಿತ್ತು. ಅಂದಿನಿಂದಲೂ ವಿವಾದಾಸ್ಪದ ವರದಿ ಇದು. ಆಯೋಗ ಮಾಡಿದ್ದೇ ಸಿದ್ದರಾಮಯ್ಯ. ಅಂದು ಯಾಕೆ ಸ್ವೀಕಾರ ಮಾಡಲಿಲ್ಲ? ಅಂದೆ ಕ್ಯಾಬಿನೆಟ್‌ನಲ್ಲಿ ಇಡಬೇಕಿತ್ತು ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

  • ಸ್ನೇಹಿತರ ಕ್ರೆಡಿಟ್ ಕಾರ್ಡ್‍ನಿಂದ ಲಕ್ಷ ಲಕ್ಷ ಸಾಲ – ಲೋನ್ ಕಟ್ಟು ಎಂದ್ರೆ ಲಾಸ್ಟ್ ಆಪ್ಷನ್ ಅಂತ ವಿಷ ಕುಡಿದ!

    ಸ್ನೇಹಿತರ ಕ್ರೆಡಿಟ್ ಕಾರ್ಡ್‍ನಿಂದ ಲಕ್ಷ ಲಕ್ಷ ಸಾಲ – ಲೋನ್ ಕಟ್ಟು ಎಂದ್ರೆ ಲಾಸ್ಟ್ ಆಪ್ಷನ್ ಅಂತ ವಿಷ ಕುಡಿದ!

    ವಿಜಯಪುರ: ವ್ಯಕ್ತಿಯೊಬ್ಬ 13 ಜನ ಸ್ನೇಹಿತರ ಕ್ರೆಡಿಟ್ ಕಾರ್ಡ್ (Credit Card) ಬಳಸಿ ಲಂಕ್ಷಾಂತರ ರೂ. ಸಾಲ (Loan) ಮಾಡಿ, ಸಾಲ ತೀರಿಸು ಎಂದಾಗ ವಿಡಿಯೋ ಮಾಡಿ ಕೀಟನಾಶಕ ಸೇವಿಸಿರುವುದು ವಿಜಯಪುರದಲ್ಲಿ (Vijayapura) ನಡೆದಿದೆ.

    ಆದರ್ಶ ನಗರದ ನಿವಾಸಿ ಶೋಭಿತ ಬಳ್ಳೊಳಗಿಡದ್ ಎಂಬಾತ ಗೆಳೆಯರ ಕ್ರೆಡಿಟ್ ಕಾರ್ಡ್ ಬಳಸಿ ದುಬಾರಿ ಬೆಲೆಯ ಮೊಬೈಲ್, ಗ್ಯಾಜೆಟ್ಸ್ ಖರೀದಿಸುತ್ತಿದ್ದ. ಹೀಗೆ ಗೆಳೆಯರ ಕ್ರೆಡಿಟ್ ಕಾರ್ಡ್ ಬಳಸಿ 50 ಲಕ್ಷ ರೂ. ಸಾಲ ಮಾಡಿದ್ದ. ಇದರಿಂದ ಸ್ನೇಹಿತರು ಸಾಲ ಕಟ್ಟುವಂತೆ ಆತನಿಗೆ ಹಾಗೂ ಆತನ ಕುಟುಂಬದವರಿಗೆ ಹೇಳಿದ್ದರು. ಇದನ್ನೂ ಓದಿ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ | ರಸ್ತೆಗಿಳಿಯದ ಲಾರಿಗಳು – ಯಾವೆಲ್ಲಾ ಸೇವೆಯಲ್ಲಿ ವ್ಯತ್ಯಯ?

    ಇದೇ ವಿಚಾರಕ್ಕೆ ಆತ ವಿಡಿಯೋ ಮಾಡಿ, ಎಲ್ಲರ ಬಳಿ ಕ್ರೆಡಿಟ್ ಕಾರ್ಡ್ ಪಡೆದಿದ್ದೆ. ಈಗ ಎಲ್ಲರೂ ಮನೆಯವರಿಗೆ ಟಾರ್ಚರ್ ಮಾಡ್ತಿದ್ದಾರೆ. ನನ್ನಿಂದ ಯಾರಿಗೂ ಟಾರ್ಚರ್ ಆಗಬಾರದು. ಎಲ್ಲರೂ ಆರಾಮ್ ಆಗಿರಿ, ಇದು ನನಗೆ ಲಾಸ್ಟ್ ಆಪ್ಷನ್ ಎಂದು ಕ್ರಿಮಿನಾಶಕದ ಬಾಟೆಲ್ ತೋರಿಸಿದ್ದಾನೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಸಂಬಂಧ ಶೋಭಿತನ ತಂದೆ, ಆದರ್ಶ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ 13 ಜನ ಗೆಳೆಯರ ಹೆಸರನ್ನು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 5 ಕೋಟಿ ಮೌಲ್ಯದ ಮಾದಕ ವಸ್ತು ವಶ – ಇಬ್ಬರು ಅರೆಸ್ಟ್