Tag: ವಿಜಯೇಂದ್ರ ಯಡಿಯೂರಪ್ಪ

  • ನಿಮಗೆ ಕೊಟ್ಟ ಕೆಲಸ ಮಾತ್ರ ಪೂರ್ಣ ಮಾಡಿ – ಟಾರ್ಗೆಟ್‌ 28 ಗೆಲ್ಲಲು ಶಾ ಕ್ಲಾಸ್‌

    ನಿಮಗೆ ಕೊಟ್ಟ ಕೆಲಸ ಮಾತ್ರ ಪೂರ್ಣ ಮಾಡಿ – ಟಾರ್ಗೆಟ್‌ 28 ಗೆಲ್ಲಲು ಶಾ ಕ್ಲಾಸ್‌

    ಮೈಸೂರು: ಜೆಡಿಎಸ್ (JDS) ವಿಶ್ವಾಸ ಕಾಪಾಡಿಕೊಂಡರೆ ಟಾರ್ಗೆಟ್ 28 (Target) ಸಾಧ್ಯವಾಗುತ್ತದೆ. ಹೋದಲ್ಲಿ, ಬಂದಲ್ಲಿ ಕಾರ್ಯಕರ್ತರ ಸಭೆ ಹಾಗೂ ಮೈತ್ರಿ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಲು ಹೋಗಬೇಡಿ ಎಂದು ಬಿಜೆಪಿ (BJP) ನಾಯಕರಿಗೆ ಗೃಹ ಸಚಿವ ಅಮಿತ್‌ ಶಾ (Amit Shah) ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ.

    ಕಳೆದ ವಿಧಾಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ (PM Narendra Modi) ಹಾಗೂ ಅಮಿತ್ ಶಾ ಅಬ್ಬರದ ಪ್ರಚಾರ ಮಾಡಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಜನ ಬಹುಮತ ನೀಡಿದರು. ಅದರಲ್ಲೂ ಮೈಸೂರು ಭಾಗದಲ್ಲಿ ಬಿಜೆಪಿಗೆ ನಿರೀಕ್ಷೆಯಷ್ಟು ಗೆಲುವಾಗಿರಲಿಲ್ಲ. ಹೀಗಾಗಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಮಿತ್ ಶಾ ಜೆಡಿಎಸ್ ಮೈತ್ರಿಯೊಂದಿಗೆ ಒಕ್ಕಲಿಗರ ಪ್ರಭಾವವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಬುನಾದಿಯನ್ನು ಭದ್ರಪಡಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ – ಕಾಂಗ್ರೆಸ್‌ ಮಾಜಿ ಸಚಿವ

     

    ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಹಾಗೂ ಲೋಕಸಭಾ ಕ್ಷೇತ್ರದ ಟಿಕೆಟ್‌ ಯಾರಿಗೆ ನೀಡಬೇಕೆಂಬ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ನಿಮಗೆ ವಹಿಸಿರುವ ಟಾಸ್ಕ್‌ ಮಾತ್ರ ಪೂರ್ಣ ಮಾಡಿ. ಮೈತ್ರಿ ಧರ್ಮ ಪಾಲನೆ ಸ್ವಲ್ಪ ಎಡವಟ್ಟಾದರೆ ಕಷ್ಟವಾಗುತ್ತದೆ ಎಂದು ಅಮಿತ್ ಶಾ  ಮೈಸೂರು ಕ್ಲಸ್ಟರ್‌ ಸಭೆಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ

    ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುವ ಮೂಲಕ ಅವುಗಳನ್ನು ಬಿಜೆಪಿ ಮತಗಳನ್ನಾಗಿ ಪರಿವರ್ತಿಸಲು ನಿಗಾವಹಿಸಿಬೇಕೆಂದು ಮುಖಂಡರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra Yediyurappa) ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್‌ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್‌

     

  • ಅಖಂಡ ಹೇಳಿಕೆಯಿಂದ ವಿಚಲಿತರಾಗಿ ಅಧಿಕಾರಿಗಳನ್ನು ಬೆದರಿಸೋ ಮಾರ್ಗ ತುಳಿದಿದ್ದೀರಿ: ವಿಜಯೇಂದ್ರ

    ಅಖಂಡ ಹೇಳಿಕೆಯಿಂದ ವಿಚಲಿತರಾಗಿ ಅಧಿಕಾರಿಗಳನ್ನು ಬೆದರಿಸೋ ಮಾರ್ಗ ತುಳಿದಿದ್ದೀರಿ: ವಿಜಯೇಂದ್ರ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾತನಾಡುತ್ತಾ ‘ಮಿಸ್ಟರ್ ಕಮಿಷನರ್ ಬೀ ಕೇರ್ ಫುಲ್’ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರರ್ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾನ್ಯ ಡಿಕೆಶಿ ಅವರೇ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂಬಂತೆ ಗಲಭೆಯ ಕ್ರೌರ್ಯಕ್ಕೆ ತುತ್ತಾದ ನಿಮ್ಮ ಶಾಸಕರೇ ‘ಇದು ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡ’ ಎಂದು ಹೇಳಿದ್ದಾರೆ. ಇದರಿಂದ ವಿಚಲಿತರಾಗಿರುವ ನೀವು ಇದೀಗ ಪೊಲೀಸ್ ಅಧಿಕಾರಿಗಳನ್ನು ಬೆದರಿಸುವ ಮಾರ್ಗ ತುಳಿದಿದ್ದೀರಿ. ಇದು ನಿಮ್ಮ ಹತಾಶೆ ಹಾಗೂ ಭಂಡತನವನ್ನು ಸಾಕ್ಷೀಕರಿಸುತ್ತಿದೆ ಎಂದು ಬರೆದುಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.

    ಡಿಕೆಶಿ ಹೇಳಿದ್ದೇನು..?
    ಗುರುವಾರ ದೇೀವರಾಜ್ ಅರಸರ ಜನ್ಮದಿನದಂದೇ ‘ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ್ದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದೀರಿ. ಕಾಂಗ್ರೆಸ್ ನಾಯಕರನ್ನು ಫಿಕ್ಸ್ ಮಾಡುವ ಕೆಲಸ ಮಾಡುತ್ತಿದ್ದೀರಿ. ಬಿಜೆಪಿ ಸಚಿವರಿಂದ ಇನ್ಫ್ಲೂಯೆನ್ಸ್ ಆಗಿ ಕೆಲಸ ಮಾಡುತ್ತಿದ್ದೀರಿ. ಪೊಲೀಸರು ಹೀಗೆ ಪಕ್ಷಪಾತ ಮಾಡಿದರೆ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಕೈಕಟ್ಟಿ ಕೂರಲ್ಲ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದರು.

    ಕಾಂಗ್ರೆಸ್ ಪಾರ್ಟಿಯನ್ನ ಫಿಕ್ಸ್ ಮಾಡಬೇಕು ಅಂತ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧ ನಾವು ಹೋರಾಟ ಆರಂಭ ಮಾಡುತ್ತೇವೆ. ಮಿಸ್ಟರ್ ಕಮಿಷನರ್ ಬಿ ಕೇರ್ ಪುಲ್. ಇದನ್ನ ಮನವಿಯಾದರೂ ಅನ್ಕೊಳ್ಳಿ ಎಚ್ಚರಿಕೆ ಅಂತ ಆದರೂ ಅಂದುಕೊಳ್ಳಿ. ಗಲಭೆಯನ್ನ ಪೊಲೀಸರು ನಿಯಂತ್ರಣ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದರು.

  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸ್ತಿದೆ – ವಿಜಯೇಂದ್ರ ಟಾಂಗ್

    ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸ್ತಿದೆ – ವಿಜಯೇಂದ್ರ ಟಾಂಗ್

    ಬೆಂಗಳೂರು: ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದುಕೊಳ್ಳಿ ಎಂದು ವಿಜಯೇಂದ್ರ ಯಡಿಯೂರಪ್ಪ ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ.

    ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ಪಕ್ಷದ ನಿಯೋಗ ಅಮಾಯಕರನ್ನು ಬಂಧಿಸದಂತೆ ಮನವಿ ಮಾಡಿತ್ತು. ಈ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ – ಕಾಂಗ್ರೆಸ್ ನಾಯಕರಿಗೆ ಕಮಿಷನರ್ ಕಮಲ್‍ಪಂತ್ ತಿರುಗೇಟು

    ಟ್ವೀಟ್‍ನಲ್ಲೇನಿದೆ?
    ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದುಕೊಳ್ಳಿ. ಅದನ್ನು ಬಿಟ್ಟು ‘ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ’ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ ಕರೆಯುವುದು ತಪ್ಪು ಎಂಬ ನಿಮ್ಮ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

    ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದ ಸಂಬಂಧ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಮುಸ್ಲಿಂ ಮುಖಂಡತ ನಿಯೋಗ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದರು. ಈ ವೇಳೆ ಘಟನೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಬೇಡಿ. ಈಗಾಗಲೇ ಬಂಧನವಾಗಿರುವ ಕೆಲ ಅಮಾಯಕರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದರು.