Tag: ವಿಜಯ್ ಕಿರಗಂದೂರು

  • Kantara 2 : ಜೂನ್ ನಿಂದ ಶೂಟಿಂಗ್, ಏಪ್ರಿಲ್ 2024ಕ್ಕೆ ರಿಲೀಸ್ ಎಂದ ವಿಜಯ್ ಕಿರಗಂದೂರು

    Kantara 2 : ಜೂನ್ ನಿಂದ ಶೂಟಿಂಗ್, ಏಪ್ರಿಲ್ 2024ಕ್ಕೆ ರಿಲೀಸ್ ಎಂದ ವಿಜಯ್ ಕಿರಗಂದೂರು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿ ಬಂದ ‘ಕಾಂತಾರ’ ಸಿನಿಮಾ ದೊಡ್ಡ ಗೆಲುವು ಕಂಡ ಬೆನ್ನಲ್ಲೇ ‘ಕಾಂತಾರ 2’ ಸಿನಿಮಾ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಕೆಲ ದಿನಗಳ ಹಿಂದೆಯೇ ಕಾಂತಾರ 2 ಚಿತ್ರದ ಬಗ್ಗೆ ಸುದ್ದಿ ಆಗಿತ್ತು. ಆದರೆ, ಇನ್ನೂ ಆ ಕುರಿತು ಯೋಚಿಸಿಯೇ ಇಲ್ಲವೆಂದು ರಿಷಬ್ ಶೆಟ್ಟಿ ಹೇಳಿದ್ದರು. ಈ ಕುರಿತು ಅವರನ್ನು ಏನೇ ಕೇಳಿದರೂ, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸುತ್ತಿದ್ದರು.

    ಆದರೆ, ಈ ಕುರಿತು ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಸಾಕಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಾಂತಾರ 2 ಸಿನಿಮಾ ಮಾಡುವ ಕುರಿತಾಗಿ ಮಾತನಾಡಿದ್ದಲ್ಲದೇ, ಸಿನಿಮಾ ಶೂಟಿಂಗ್ ಮತ್ತು ರಿಲೀಸ್ ದಿನಾಂಕವನ್ನೂ ಅವರು ಘೋಷಿಸಿ ಬಿಟ್ಟಿದ್ದಾರೆ. ಜೊತೆಗೆ ಈಗಾಗಲೇ ರಿಷಬ್ ಮತ್ತು ಟೀಮ್ ಕಥೆ ಮಾಡುವುದರಲ್ಲಿ ತೊಡಗಿದೆ ಎನ್ನುವ ವಿಷಯವನ್ನೂ ಬಹಿರಂಗ ಪಡಿಸಿದ್ದಾರೆ. ಚಿತ್ರೀಕರಣದ ಸ‍್ಥಳ ಹುಡುಕಲು ಕಾಡು ಮೇಡು ಅಲೆಯುತ್ತಿರುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಬೀಚ್ ಫೋಟೋ: ದೇವರಕೊಂಡ ಕ್ಲಿಕ್ಕಿಸಿದ್ದಾ ಎಂದ ನೆಟ್ಟಿಗರು

    ವಿಜಯ್ ಕಿರಗಂದೂರು ಅವರೇ ಹೇಳಿದಂತೆ ಈ ವರ್ಷ ಜೂನ್ ನಿಂದ ಚಿತ್ರೀಕರಣ ಶುರುವಾಗಲಿದೆ. ಏಪ್ರಿಲ್ ಅಥವಾ ಮೇ 2024ರಂದು ಕಾಂತಾರ 2 ಚಿತ್ರ ತೆರೆಗೆ ಬರಲಿದೆಯಂತೆ. ಪಕ್ಕಾ ಪ್ಲ್ಯಾನ್ ಜೊತೆಯೇ ಈ ಬಾರಿ ಚಿತ್ರೀಕರಣಕ್ಕೆ ಇಳಿಯಲಿದೆ ಚಿತ್ರತಂಡ. ಕಾಂತಾರ ಸಿನಿಮಾ ಶೂಟ್ ಮಾಡುವಾಗ ಹಲವು ತೊಂದರೆಗಳನ್ನು ಅವರು ಎದುರಿಸಬೇಕಾಯಿತು. ಹಾಗಾಗಿ ಬಜೆಟ್ ಕೂಡ ಹೆಚ್ಚಾಯಿತು. ಈ ಬಾರಿ ಎಲ್ಲ ಮುನ್ನೆಚ್ಚರಿಕೆಗಳನ್ನು ತಗೆದುಕೊಂಡು ಶೂಟಿಂಗ್ ಗೆ ಇಳಿಯುವುದಾಗಿ ನಿರ್ಮಾಪಕರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ಕಾಂತಾರ 2 ಕಥೆ ಏನು, ಯಾರೆಲ್ಲ ಇರುತ್ತಾರೆ, ಯಾವ ಸ್ಥಳದಲ್ಲಿ ಶೂಟ್ ಮಾಡುತ್ತಾರೆ, ಅಚ್ಚರಿ ಎನ್ನುವಂತಹ ಕಲಾವಿದರು ಇರುತ್ತಾರಾ ಈ ಕುರಿತು ಅವರು ಯಾವುದೇ ಮಾಹಿತಿಯನ್ನೂ ಹಂಚಿಕೊಂಡಿಲ್ಲ. ಆದರೆ, ಕಾಂತಾರ 2 ಸೆಟ್ಟೇರುವ ಮತ್ತು ಚಿತ್ರೀಕರಣ ಹಾಗೂ ಬಿಡುಗಡೆ ದಿನಾಂಕವನ್ನೂ ಈಗಲೇ ಘೋಷಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ ಹೊಂಬಾಳೆ ಫಿಲ್ಮ್ಸ್ ಮಾಲೀಕ ವಿಜಯ ಕಿರಗಂದೂರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

    ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

    ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಸುಧೀಂದ್ರ ಅವರ ನಂತರ ಸುಧೀಂದ್ರ ವೆಂಕಟೇಶ್ ಈ ಸಂಪ್ರದಾಯವನ್ನು ಮುಂದುವರೆಸಿದ್ದು, 2022ನೇ ಸಾಲಿನ ವಾರ್ಷಿಕ 11 ಪ್ರಶಸ್ತಿಗಳನ್ನು ನೀಡುವುದರ ಜೊತೆಗೆ ಈ ಬಾರಿ ಇನ್ನೂ ಮೂರು ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.

    2022ರಲ್ಲಿ ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರಗಳೆಂದರೆ ಅದು ‘ಕೆಜಿಎಫ್ 2’ ಮತ್ತು ‘ಕಾಂತಾರ’. ಈ ಎರಡೂ ಚಿತ್ರಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ಹಾರಿಸಿದ ಹೊಂಬಾಳೆ ಫಿಲಂಸ್ ನ ಶ್ರೀ ವಿಜಯ್ ಕಿರಗಂದೂರು ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯಿಂದ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ. ಇದನ್ನೂ ಓದಿ: ಉದ್ಯಮಿ ವಿಶಾಲ್‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಕಳೆದ ವರ್ಷ ಬಿಡುಗಡೆಯಾದ ‘ಗಂಧದ ಗುಡಿ’ಯನ್ನು ಒಂದು ಚಿತ್ರ ಎನ್ನುವುದಕ್ಕಿಂತ ಅದ್ಭುತವಾದ ಅನುಭವ ಎಂದರೆ ತಪ್ಪಿಲ್ಲ. ಕನ್ನಡ ನಾಡಿನ ಪ್ರಾಕೃತಿಕ ಸಂಪತ್ತನ್ನು ತಮ್ಮ ಕಣ್ಣುಗಳ ಮೂಲಕ ಕನ್ನಡಿಗರಿಗೆ ತೋರಿಸಿದವರು ದಿವಂಗತ ಪುನೀತ್ ರಾಜಕುಮಾರ್. ಇಂಥದ್ದೊಂದು ಅಪೂರ್ವವಾದ ಅನುಭವವನ್ನು ಕಟ್ಟಿಕೊಟ್ಟ ಪುನೀತ್ ಮತ್ತು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದ ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಈ ಪ್ರಶಸ್ತಿ ಸಂದಾಯವಾಗಿದೆ.

    ಇನ್ನು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ಶ್ರೀಮತಿ  ತಾರಾ ಅನೂರಾಧ ಅವರ ಅಭಿನಯ, ಪಾತ್ರಗಳು ಮತ್ತು ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆಯನ್ನು ಸ್ಮರಿಸಿ, ಅವರಿಗೂ ಈ ಬಾರಿ ವಿಶೇಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಂಸ್ಥೆಯ ಸ್ಥಾಪಕರಾದ ಶ್ರೀ ಡಿ.ವಿ. ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25) ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಐದು ವರ್ಷದಲ್ಲಿ ಮೂರು ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಗೆ ಜೈ ಎಂದ ಚಿತ್ರೋದ್ಯಮ

    ಐದು ವರ್ಷದಲ್ಲಿ ಮೂರು ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಗೆ ಜೈ ಎಂದ ಚಿತ್ರೋದ್ಯಮ

    ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ ಎಂದು ಹೊಂಬಾಳೆ ಫಿಲಮ್ಸ್ (Hombale Films)ನ ವಿಜಯ್ ಕಿರಗಂದೂರು ಘೋಷಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವೀಟರ್ ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ನಾಡಿನ ಜನತೆಗೆ ಹೊಸವರ್ಷದ ಶುಭಾಶಯ ಕೋರಿರುವ ವಿಜಯ್ ಕಿರಗಂದೂರು (Vijay Kirgandur), ಕಳೆದ ವರ್ಷ ನಮ್ಮನ್ನು ಬೆಂಬಲಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ನಾಡಿನ ಸಮಸ್ತ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನೂತನ ವರ್ಷದಲ್ಲಿ ನವ ಸಂಕಲ್ಪದೊಂದಿಗೆ ಬೃಹತ್ ಯೋಜನೆಗಳನ್ನು ಘೋಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ನಡೆಗೆ ಭಾರತೀಯ ಸಿನಿಮಾ ರಂಗದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ನಿರ್ದೇಶಕರಾದ ಪ್ರಶಾಂತ್ ನೀಲ್ (Prashant Neel), ಪವನ್ ಕುಮಾರ್, ನಟಿ ರಮ್ಯಾ (Ramya), ಅಶ್ವಿನಿ ಪುನೀತ್ ರಾಜ್ ಕುಮಾರ್, ವಿತರಕ ಜಯಣ್ಣ ಸೇರಿದಂತೆ ಸಾಕಷ್ಟು ಮಂದಿ ಹೊಂಬಾಳೆ ಫಿಲ್ಮ್ಸ್ ಬಗ್ಗೆ ಹಾಡಿ ಹೊಗಳಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗಕ್ಕೆ ಹೊಂಬಾಳೆ ಫಿಲ್ಮಸ್ ಕೊಟ್ಟಿರುವ ಕೊಡುಗೆಯನ್ನು ಎಲ್ಲರೂ ಸ್ಮರಿಸಿದ್ದಾರೆ. ಮೂರು ಸಾವಿರ ಕೋಟಿ ಬಂಡವಾಳ ಹೂಡುತ್ತಿರುವ ಸಂಸ್ಥೆಗೆ ದೊಡ್ಡಮಟ್ಟದ ಗೆಲುವು ಸಿಗಲಿ ಎಂದು ಎಲ್ಲರೂ ಹಾರೈಸಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಚಿತ್ರ ಪ್ರೇಮಿಗಳ  ಪ್ರೀತಿ ಮತ್ತು ಪ್ರೋತ್ಸಾಹದ ಫಲವಾಗಿ ಹೊಂಬಾಳೆ ಫಿಲಮ್ಸ್ ಅತ್ಯಂತ ಯಶಸ್ವಿ ಚಲನಚಿತ್ರಗಳನ್ನು  ಕೊಡುಗೆಯಾಗಿ ನೀಡಿದ್ದು, ಈ ಯಶಸ್ವೀ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದೇವೆ ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.. ಅದರ ಭಾಗವಾಗಿ ಮುಂದಿನ 5 ವರ್ಷದಲ್ಲಿ  ಮನರಂಜನಾ ಕ್ಷೇತ್ರದಲ್ಲಿ 3 ಸಾವಿರ ಕೋಟಿ ಹೂಡಲು ಯೋಜನೆ ಸಿದ್ದವಾಗಿದೆ ಎಂದು ಘೋಷಿಸಿದ್ದಾರೆ.

    ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ  ಎಂಬ ಹೆಗ್ಗಳಿಕೆ ಪಡೆದಿರುವುದು  ಚಿತ್ರ ಪ್ರೇಮಿಗಳ ಬೆಂಬಲದಿಂದ ಎಂದು ವಿಜಯ್ ಸ್ಮರಿಸಿದ್ದಾರೆ. ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ , ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ  ಎಂದು ವಿಜಯ್ ಕಿರಗಂದೂರು ತಿಳಿಸಿದ್ದಾರೆ.

    ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ  ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

    ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ ಎಂದು ವಿಜಯ್ ಹೇಳಿದ್ದಾರೆ. ಹೊಸವರ್ಷ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸುತ್ತಾ, ನಾಡಿನ ಜನತೆಯ ಪ್ರೀತಿ-ವಿಶ್ವಾಸ, ಬೆಂಬಲ ಪ್ರೋತ್ಸಾಹ  ಹೀಗೆ ಇರಲಿ ಎಂದು ವಿಜಯ್ ಕಿರಗಂದೂರು ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Live Tv
    [brid partner=56869869 player=32851 video=960834 autoplay=true]

  • ಸಿನಿಮಾಗಳಿಗೆ 3 ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಅಧಿಕೃತ ಘೋಷಣೆ

    ಸಿನಿಮಾಗಳಿಗೆ 3 ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಅಧಿಕೃತ ಘೋಷಣೆ

    ಕೆಜಿಎಫ್, ಕಾಂತಾರ (Kantara) ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲ್ಮಸ್ (Hombale Films) ಮುಂದಿನ ಐದು ವರ್ಷಗಳಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ಬಂಡವಾಳವನ್ನು ಚಿತ್ರರಂಗದಲ್ಲಿ ಹೂಡಲಿದೆ ಎಂದು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಇದೀಗ ಸ್ವತಃ ಹೊಂಬಾಳೆ ಫಿಲ್ಮ್ಸ್ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಭಾರತೀಯ ಸಿನಿಮಾ ರಂಗಕ್ಕೆ ಬಿಗ್ ನ್ಯೂಸ್ ನೀಡಿದ್ದಾರೆ.

    ಒಂದು ಮೂಲದ ಪ್ರಕಾರ ಈಗಾಗಲೇ ಅವರು ಸಾವಿರ ಕೋಟಿಯಷ್ಟು ಹಣವನ್ನು ಚಿತ್ರೋದ್ಯಮದಲ್ಲಿ ಹೂಡಿಕೆ ಮಾಡಿದ್ದಾರೆ. ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಅವರು ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿ ಕೊಡಲಿದ್ದಾರೆ. ಈಗಾಗಲೇ ಶಾರುಖ್ ಖಾನ್ ಸಿನಿಮಾ ಮಾಡುವ ಕುರಿತು ಮಾತುಕತೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಕನ್ನಡ ನಿರ್ಮಾಣ ಸಂಸ್ಥೆಯೊಂದು ಸಿನಿಮಾ ರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಪ್ರಮಾಣದ ಹಣವನ್ನು ಹೂಡಿಕೆ ಮಾಡುತ್ತಿದೆ. ಅಲ್ಲದೇ, ಭಾರತೀಯ ಬಹುತೇಕ ಭಾಷೆಯ ಚಿತ್ರಗಳಲ್ಲಿ ಸಿನಿಮಾ ಮಾಡುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿಯೇ ದಕ್ಷಿಣದ ಅಷ್ಟೂ ಭಾಷೆಗಳಲ್ಲಿ ಈಗಾಗಲೇ ಚಿತ್ರ ನಿರ್ಮಾಣವನ್ನು ಮಾಡಲಾಗುತ್ತಿದೆ. ಸದ್ಯದಲ್ಲೇ ಬಾಲಿವುಡ್ ನಲ್ಲೂ ಸಿನಿಮಾ ಮಾಡುವ ಯೋಜನೆಯೊಂದು ಬಹಿರಂಗಗೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್ ಚಿತ್ರಕ್ಕೆ 4 ವರ್ಷಗಳ ಸಂಭ್ರಮ – ಮೈಲಿಗಲ್ಲು ಸೃಷ್ಟಿಸಿದ ದಿನದ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಮೆಲುಕು

    ಕೆಜಿಎಫ್ ಚಿತ್ರಕ್ಕೆ 4 ವರ್ಷಗಳ ಸಂಭ್ರಮ – ಮೈಲಿಗಲ್ಲು ಸೃಷ್ಟಿಸಿದ ದಿನದ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಮೆಲುಕು

    ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಯಶ್ ನಟನೆಯ `ಕೆಜಿಎಫ್’ (KGF 1) ಸಿನಿಮಾಗೆ 4 ವರ್ಷಗಳ ಸಂಭ್ರಮವಾಗಿದ್ದು, ಈ ಸುದಿನದ ಬಗ್ಗೆ ಹೊಂಬಾಳೆ ಫಿಲ್ಮ್ಸ್(Homabale Films) ಮೆಲುಕು ಹಾಕಿದೆ. ಈ ಕುರಿತು ಹೊಂಬಾಳೆ ಸಂಸ್ಥೆ ವಿಶೇಷ ಪೋಸ್ಟ್‌ವೊಂದನ್ನ ಶೇರ್ ಮಾಡಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ


    `ಉಗ್ರಂ’ ಚಿತ್ರದ ನಂತರ ಕೆಲ ವರ್ಷಗಳ ಸ್ಕ್ರಿಪ್ಸ್ ವರ್ಕ್ ಮಾಡಿ, ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಕಲ್ಪನೆಯಂತೆ ಕೆಜಿಎಫ್ ಚಾಪ್ಟರ್ 1 ತೆರೆಯ ಮೇಲೆ ತೋರಿಸುವಲ್ಲಿ ಯಶಸ್ವಿಯಾಗಿದ್ದರು. ಡಿ. 21, 2018ರಂದು ತೆರೆಯ ಮೇಲೆ ಯಶ್ (Yash) ಸಿನಿಮಾ ಅಬ್ಬರಿಸಿತ್ತು. ಈ ವಿಶೇಷ ದಿನವನ್ನ ನೆನೆದು ಹೊಂಬಾಳೆ ಫಿಲ್ಮ್ಸ್ ಚಿತ್ರದ ಕುರಿತು ಪೋಸ್ಟ್ ಮಾಡಿದ್ದಾರೆ. ಸಿನಿಮಾ ಬೆಂಬಲಿಸಿದ, ಸಿನಿಮಾ ಕನಸಿಗೆ ಸಾಥ್ ಕೊಟ್ಟಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

    ಕನ್ನಡ ಚಿತ್ರರಂಗದಲ್ಲೇ ಈ ಸಿನಿಮಾ ನೂರಾರು ಕೋಟಿ ಬಿಸ್ನೆಸ್ ಮಾಡಿತು. ಬಾಲಿವುಡ್‌ನಲ್ಲೂ ಈ ಸಿನಿಮಾ ರಿಲೀಸ್ ಮಾಡಲಾಯಿತು. ಹಿಂದಿಯಲ್ಲಿ ಈ ಚಿತ್ರ 44 ಕೋಟಿ ರೂಪಾಯಿ ಬಾಚಿತ್ತು. ಕನ್ನಡದ ಸಿನಿಮಾವೊಂದು ಬಾಲಿವುಡ್‌ನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಅದೇ ಮೊದಲಾಗಿತ್ತು. ಹೀಗೆ ಈ ಚಿತ್ರದಿಂದ ದೊಡ್ಡ ಇತಿಹಾಸವೇ ಸೃಷ್ಟಿ ಆಯಿತು.

     

    View this post on Instagram

     

    A post shared by Hombale Films (@hombalefilms)

    ‌ʻಕೆಜಿಎಫ್ʼ (Kgf) ಚಿತ್ರದಲ್ಲಿ ಯಶ್ ಪಾತ್ರ ಸಖತ್ ಹೈಲೈಟ್ ಆಯಿತು. ರಾಕಿ ಆಗಿ ಅವರು ಮಿಂಚಿದರು. ಶ್ರೀನಿಧಿ ಶೆಟ್ಟಿ (Srinidhi Shetty) ಅವರು ಚೊಚ್ಚಲ ಚಿತ್ರದಲ್ಲೇ ಗಮನ ಸೆಳೆದರು. ಈ ವಿಶೇಷ ದಿನಕ್ಕೆ ಈಗ ನಾಲ್ಕು ವರ್ಷ ತುಂಬಿದೆ. ಈ ವಿಶೇಷ ದಿನವನ್ನು ಹೊಂಬಾಳೆ ಫಿಲ್ಮ್ಸ್ ನೆನಪಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ಪ್ಯಾನ್ ಇಂಡಿಯಾ ಮಟ್ಟದಲ್ಲಿ `ಕೆಜಿಎಫ್ 2′ (Kgf 2) ಮತ್ತು `ಕಾಂತಾರ’ (Kantara)  ಎಂಬ ಎರಡು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್(Hombale Films) ರೂವಾರಿ ವಿಜಯ್ ಕಿರಗಂದೂರು, ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು (Tamil Films) ನಿರ್ಮಿಸುತ್ತಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಮೊದಲ ತಮಿಳು ಚಿತ್ರದ ಹೆಸರು `ರಘುತಥಾ’. ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕೀರ್ತಿ ಸುರೇಶ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಈ ಹಿಂದೆ, `ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʻರಘುತಥಾʼ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ತಿಸಲಾಗಿದೆ. ಇದನ್ನೂ ಓದಿ: ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

     

    View this post on Instagram

     

    A post shared by Hombale Films (@hombalefilms)

    ಈ ಚಿತ್ರದ ಕುರಿತು ಮಾತನಾಡುವ ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು, ಇದೊಂದು ಕಾಮಿಡಿ ಡ್ರಾಮಾ ಚಿತ್ರವಾಗಿದ್ದು, ಸಮಾಜದ ವಿರುದ್ದ ಸವಾಲೆಸೆಯುವ ಒಬ್ಬ ಗಟ್ಟಿಗಿತ್ತಿ ಯುವತಿಯ ಸುತ್ತ ಸುತ್ತುತ್ತದೆ. ತನ್ನ ಸಿದ್ಧಾಂತಗಳನ್ನು ಎತ್ತಿಹಿಡಿಯುವುದರ ಜೊತೆಗೆ, ಸಮಾಜದ ವಿರುದ್ಧ ಹೋರಾಡುತ್ತಲೇ, ಆಕೆ ಹೇಗೆ ಎಲ್ಲರಿಗೂ ಸ್ಫೂರ್ತಿಯಾಗುತ್ತಾಳೆ ಎಂಬುದು ಚಿತ್ರದ ಕಥೆ. ಇಂಥದ್ದೊಂದು ಕಥೆ ಮತ್ತು ಪಾತ್ರಕ್ಕೆ ಕೀರ್ತಿ ಸುರೇಶ್ ಅವರು ಅದ್ಭುತವಾದ ಆಯ್ಕೆಯಾಗಿದ್ದು, ಅವರೊಂದಿಗೆ ಕೆಲಸ ಮಾಡಲು ಹೊಂಬಾಳೆ ಸಂಸ್ಥೆ ಹೆಮ್ಮೆ ಪಡುತ್ತದೆ. ಇದೊಂದು ಕಾಮಿಡಿ ಚಿತ್ರವಾಗಿದ್ದು, ಜನ ನಗುತ್ತಲೇ ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವ ವಿಭಿನ್ನ ಪ್ರಯತ್ನ ಇದಾಗಲಿದೆ ಎಂದು ಹೇಳಿದ್ದಾರೆ.

    ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʻಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. `ರಘುತಥಾ’ (Raghuthatha) ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ‘ಧೂಮಂ’ ಸೆಟ್ ಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು

    ‘ಧೂಮಂ’ ಸೆಟ್ ಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು

    ಹೊಂಬಾಳೆ ಫಿಲಂಸ್​ನಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿಜಯ್ ಕುಮಾರ್​ ಕಿರಗಂದೂರು, ರಿಷಭ್​ ಶೆಟ್ಟಿ, ಸಪ್ತಮಿ ಗೌಡ ಮುಂತಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್​ ಫಾಸಿಲ್​, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು ಅವರೊಂದಿಗೆ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ.

    ‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ. ಇದನ್ನೂ ಓದಿ: ಅಭಿಷೇಕ್ ಮದುವೆ ಸುಳ್ಳು ಸುಳ್ಳು: ಸುಮಲತಾ ಅಂಬರೀಶ್ ಸ್ಪಷ್ಟನೆ

    ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಒಂದು ವಾರಗಳಿಂದ ಸತತವಾಗಿ ಚಿತ್ರೀಕರಣವಾಗುತ್ತಿದ್ದು, ಫಹಾದ್ ಫಾಸಿಲ್ ಸೇರಿದಂತೆ ಹಲವು ಕಲಾವಿದರು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ನಡೆದ ಕಾಂತಾರ ಸಿನಿಮಾದ 50 ದಿನದ ಸಂಭ್ರಮದಲ್ಲೂ ಫಾಸಿಲ್ ಭಾಗಿಯಾಗಿದ್ದರು. ಅಲ್ಲದೇ, ಸಿನಿಮಾದ ಬಗ್ಗೆ ಈ ಹಿಂದೆಯೂ ಅವರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್‌ಗೆ ಹಾರಿದ ಹೊಂಬಾಳೆ ಫಿಲ್ಮ್ಸ್ : ಸದ್ಯದಲ್ಲೇ ಹಿಂದಿ ಸಿನಿಮಾ ಘೋಷಣೆ

    ಬಾಲಿವುಡ್‌ಗೆ ಹಾರಿದ ಹೊಂಬಾಳೆ ಫಿಲ್ಮ್ಸ್ : ಸದ್ಯದಲ್ಲೇ ಹಿಂದಿ ಸಿನಿಮಾ ಘೋಷಣೆ

    ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.

    ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು

     

    ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್‌ಕುಮಾರ್‌ಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.

    ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್‌ನಲ್ಲಿ ಕಾಂತಾರ: ಶುಭ ಕೋರಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

    ಬಾಲಿವುಡ್‌ನಲ್ಲಿ ಕಾಂತಾರ: ಶುಭ ಕೋರಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

    ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡದವರು ಕನ್ನಡವಲ್ಲದೆ ಹಿಂದಿ ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಮತ್ತು ಹೊಂಬಾಳೆ ತಂಡದವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ, ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ‘ಹೊಂಬಾಳೆ ಫಿಲಂಸ್ ತಂಡದವರನ್ನು ಭೇಟಿ ಮಾಡಿ, ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದೇನೆ. ಭಾರತವನ್ನು ಜಗತ್ತಿನ ಸಿನಿಮಾ ಹಬ್ ಮಾಡುವ ಹೊಂಬಾಳೆ ಫಿಲಂಸ್‌ನವರ ಯೋಜನೆಗಳನ್ನು ಕೇಳಿ ಸಂತೋಷವಾಗಿದೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಸಮಂತಾ ಬದುಕಿನಲ್ಲಿ ಮತ್ತೆ ಬ್ರೇಕಪ್ ಬಿರುಗಾಳಿ

    ಸಭೆಯ ನಂತರ ತಮ್ಮ ಅನಿಸಿಕೆ ಹಂಚಿಕೊಂಡಿರುವ ವಿಜಯ್ ಕುಮಾರ್ ಕಿರಗಂದೂರು, ‘ಕೇಂದ್ರ ಸಚಿವ ಅನುರಾಗ ಠಾಕೂರ್ ಅವರೊಂದಿಗೆ ಬಹಳ ಅದ್ಭುತವಾದ ಮೀಟಿಂಗ್ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. ನಮ್ಮ ಸಂಸ್ಖತಿಯನ್ನು ಸಿನಿಮಾಗಳ ಮೂಲಕ ಸಾರುವ ಮತ್ತು ಭಾರತವನ್ನು ವಿಶ್ವದ ಸಿನಿಮಾ ಹಬ್ ಮಾಡುವ ವಿಷಯಗಳೂ ಸೇರಿದಂತೆ ಸಾಕಷ್ಟು ವಿಷಯಗಳನ್ನು ಅವರೊಂದಿಗೆ ಚರ್ಚಿಸಲಾಯಿತು’ ಎಂದು ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೆ ಚೆಲುವೇ ಗೌಡ ಹಾಗೂ ಕಾರ್ತಿಕ್ ಗೌಡ ಸಹ ಹಾಜರಿದ್ದರು.

    ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಇಂದಿನಿಂದ ತಮಿಳು ಮತ್ತು ತೆಲುಗಿನಲ್ಲಿ ಪ್ರದರ್ಶನ ಕಾಣುತ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ ರಿಲೀಸ್ (Release) ಆಗಿರುವ ಚಿತ್ರವನ್ನು ಕಣ್ತುಂಬಿಕೊಳ್ಳಲು ತೆಲುಗು ಹಾಗೂ ತಮಿಳು ಪ್ರೇಕ್ಷಕರು ತುದಿಗಾಲಲ್ಲಿ ಕಾಯುತ್ತಿದ್ದರು. ಎರಡೂ ಸಿನಿಮಾ ರಂಗದ ಅನೇಕ ಕಲಾವಿದರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರಿಂದ ಸಹಜವಾಗಿಯೇ ಸಿನಿಮಾದ ಬಗ್ಗೆ ಕ್ರೇಜ್ ಕ್ರಿಯೇಟ್ ಆಗಿತ್ತು. ಇಂದು ಕುತೂಹಲಕ್ಕೆ ತೆರೆ ಬಿದ್ದಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ನಿನ್ನೆ ಹಿಂದಿಯಲ್ಲಿ (Hindi), ಇಂದು ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]