Tag: ವಿಜಯ್ ಕಿರಗಂದೂರು

  • ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ನ್ನಡದಲ್ಲಿ ಸೂಪರ್ ಹಿಟ್ ಆಗಿ, ಸದ್ಯ ಹಿಂದಿಯಲ್ಲಿ (Hindi) ಬಿಡುಗಡೆ ಆಗಿರುವ, ನಾಳೆ ತಮಿಳು ಮತ್ತು ತೆಲುಗಿನಲ್ಲೂ ಅಬ್ಬರಿಸಲಿರುವ ಕಾಂತಾರ (Kantara) ಸಿನಿಮಾ ತುಳು ಭಾಷೆಗೂ ಡಬ್ ಆಗಲಿದೆ. ಇಂಥದ್ದೊಂದು ಖುಷಿ ಸಂಗತಿಯನ್ನು ಕೊಡಲು ಚಿತ್ರತಂಡ ನಿರ್ಧರಿಸಿದೆ. ಕರಾವಳಿಯ ಭಾಷೆ, ಆಚಾರ ವಿಚಾರ, ಅಲ್ಲಿನ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಅಲ್ಲದೇ ಕೆಲ ಕಡೆ ತುಳು (Tulu) ಭಾಷೆಯನ್ನೂ ಬಳಸಲಾಗಿದೆ. ಹೀಗಾಗಿ ಕಾಂತಾರ ಮುಂದಿನ ದಿನಗಳಲ್ಲಿ ತುಳು ಭಾಷೆಯಲ್ಲೇ ನೋಡಬಹುದಾಗಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಮೊನ್ನೆ ತುಟಿ, ಈಗ ಮಚ್ಚೆ ನೋಡಿ ಭವಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ (Rishabh Shetty) ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ: ಬಾಲಿವುಡ್‌ನಲ್ಲಿ ಧೂಳ್, ತಮಿಳಿನ ಟ್ರೇಲರ್‌ಗೂ ಸಖತ್ ರೆಸ್ಪಾನ್ಸ್

    ಕಾಂತಾರ: ಬಾಲಿವುಡ್‌ನಲ್ಲಿ ಧೂಳ್, ತಮಿಳಿನ ಟ್ರೇಲರ್‌ಗೂ ಸಖತ್ ರೆಸ್ಪಾನ್ಸ್

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ (Kantara) ಸಿನಿಮಾ ಇಂದಿನಿಂದ ಹಿಂದಿಯಲ್ಲಿ (Hindi) ರಿಲೀಸ್ ಆಗಿದೆ. ನಾಳೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ತಮಿಳಿನಲ್ಲಿ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಹಿಂದಿಯಲ್ಲಿ 2500ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಕಾಂತಾರ ಪ್ರದರ್ಶನ ಕಾಣುತ್ತಿದ್ದು, ತೆಲುಗು ಮತ್ತು ತಮಿಳಿನಲ್ಲೂ ನೂರಾರು ಚಿತ್ರಮಂದಿರಗಳು ಕಾಂತಾರಗಾಗಿ ಕಾಯುತ್ತಿವೆ.

    ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ (Bollywood), ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಗೆಲುವಿನ ರುಚಿಕಂಡಿರುವ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿಗೆ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ:ಟ್ರೋಲಿಗರಿಗೆ ಖಡಕ್ ಉತ್ತರ ಕೊಟ್ಟ ಜಾಹ್ನವಿ ಕಪೂರ್

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ (Release) ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ.

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು ಕನ್ನಡ, ತೆಲುಗು (Telugu), ತಮಿಳು (Tamil) ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದಿಯಲ್ಲಿ ಕಾಂತಾರ ಸಿನಿಮಾಗೆ 2500 ಥಿಯೇಟರ್ : ಬೆಚ್ಚಿಬಿತ್ತು ಬಾಲಿವುಡ್

    ಹಿಂದಿಯಲ್ಲಿ ಕಾಂತಾರ ಸಿನಿಮಾಗೆ 2500 ಥಿಯೇಟರ್ : ಬೆಚ್ಚಿಬಿತ್ತು ಬಾಲಿವುಡ್

    ನ್ನಡದ ಕಾಂತಾರ (Kantara) ಸಿನಿಮಾ ನಾಳೆಯಿಂದ ಹಿಂದಿಯಲ್ಲಿ (Hindi) 2500 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್, ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಗೆಲುವಿನ ರುಚಿಕಂಡಿರುವ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿಗೆ ಸಿದ್ಧತೆ ಮಾಡಿಕೊಂಡಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಅಕ್ಟೋಬರ್ 14 ರಂದು ಹಿಂದಿಯಲ್ಲಿ, 15 ರಂದು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ (Release) ಆಗುತ್ತಿದೆ. ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ತಮಿಳು ಬಿಗ್ ಬಾಸ್‌ಗೆ ಕಾಲಿಟ್ಟ ಕನ್ನಡತಿ ರಚಿತಾ ಮಹಾಲಕ್ಷ್ಮಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ (Rishabh Shetty) ಬಾಲಿವುಡ್ (Bollywood) ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್‌ನ 2,500 ಸ್ಕ್ರೀನ್‌ಗಳಲ್ಲಿ ಹಿಂದಿಯ ಕಾಂತಾರ ರಿಲೀಸ್

    ಬಾಲಿವುಡ್‌ನ 2,500 ಸ್ಕ್ರೀನ್‌ಗಳಲ್ಲಿ ಹಿಂದಿಯ ಕಾಂತಾರ ರಿಲೀಸ್

    ಳ್ಳೆಯ ಕಥಾವಸ್ತುವುಳ್ಳ ಚಿತ್ರವನ್ನು ಚಿತ್ರರಸಿಕರು ಮೆಚ್ಚಿಕೊಳ್ಳುತ್ತಾರೆ ಎನ್ನುವುದಕ್ಕೆ “ಕಾಂತಾರ” (Kantara) ಚಿತ್ರದ ಯಶಸ್ಸೇ ಸಾಕ್ಷಿ. ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮನಮುಟ್ಟುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಇಂತಹ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು  ಹಾಗೂ ನಿರ್ದೇಶಿಸಿರುವ ರಿಷಬ್ ಶೆಟ್ಟಿ (Rishabh Shetty) ಅವರಿಗೆ ನಿಜಕ್ಕೂ ಅಭಿನಂದನೆ ಸಲ್ಲಬೇಕು.

    ಸ್ಯಾಂಡಲ್‌ವುಡ್‌ನಲ್ಲಿ ಈಗ ಎಲ್ಲಿ ನೋಡಿದರೂ “ಕಾಂತಾರ”ದ್ದೇ ಮಾತು. ನಿರೀಕ್ಷೆಗೂ ಮೀರಿದ ಯಶಸ್ಸು ಕೂಡ. ಇಂತಹ ಅದ್ಭುತ ಚಿತ್ರ ಬೇರೆ ಬೇರೆ ರಾಜ್ಯಗಳಲ್ಲಿ, ಅಯಾ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಅಕ್ಟೋಬರ್ 14ರ ಶುಕ್ರವಾರ ಹಿಂದಿ (Hindi) ಭಾಷೆಯಲ್ಲೂ “ಕಾಂತಾರ” ಚಿತ್ರ ತೆರೆ ಕಾಣುತ್ತಿದೆ. ಮುಂಬೈ ಸೇರಿದಂತೆ ವಿವಿಧೆಡೆ ಸುಮಾರು 2,500ಕ್ಕೂ ಅಧಿಕ ಸ್ಕೀನ್‌ಗಳಲ್ಲಿ “ಕಾಂತಾರ” ಪ್ರದರ್ಶನವಾಗಲಿದೆ. ಇದನ್ನೂ ಓದಿ:`ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡಿದ ಅಣ್ಣಾವ್ರ ಕುಟುಂಬ

    ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ “ಕೆ.ಜಿ.ಎಫ್ 2” ಬಾಲಿವುಡ್ (Bollywood) ನಲ್ಲಿ ದಾಖಲೆ ಮಟ್ಟದ ಯಶಸ್ಸು ಗಳಿಸಿದ್ದು ಗಮನಾರ್ಹ. ಈಗ “ಕಾಂತಾರ” ಚಿತ್ರವನ್ನು ಅಧಿಕ ಸಂಖ್ಯೆಯ ಚಿತ್ರಮಂದಿಗಳಲ್ಲಿ ಬಿಡುಗಡೆ ಮಾಡುವ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವ ಹಾಗೆ ಮಾಡುತ್ತಿದ್ದಾರೆ ಕನ್ನಡದ ಹೆಮ್ಮೆಯ ನಿರ್ಮಾಪಕ (Vijay Kirgandur) ವಿಜಯ್ ಕಿರಗಂದೂರು.

    Live Tv
    [brid partner=56869869 player=32851 video=960834 autoplay=true]

  • ಕಿಚ್ಚನಿಗಾಗಿ ಸಿನಿಮಾ ಮಾಡುತ್ತಾ ಹೊಂಬಾಳೆ ಫಿಲ್ಮ್ಸ್: ಮಧ್ಯರಾತ್ರಿ  ಫೋಟೋ ಅಪ್ ಲೋಡ್

    ಕಿಚ್ಚನಿಗಾಗಿ ಸಿನಿಮಾ ಮಾಡುತ್ತಾ ಹೊಂಬಾಳೆ ಫಿಲ್ಮ್ಸ್: ಮಧ್ಯರಾತ್ರಿ ಫೋಟೋ ಅಪ್ ಲೋಡ್

    ಕಿಚ್ಚ ಸುದೀಪ್ (Sudeep) ಮತ್ತು ಹೊಂಬಾಳೆ ಫಿಲ್ಮ್ಸ್ (Hombale Films) ಕಾಂಬಿನೇಷನ್ ನಲ್ಲಿ ಸಿನಿಮಾ ಬರತ್ತಾ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇದೆ. ಕನ್ನಡದ ಬಹುತೇಕ ಸ್ಟಾರ್ ನಟರ ಜೊತೆ ಸಿನಿಮಾ ಮಾಡುವ ಸಂಕಲ್ಪ ಹೊಂದಿರುವ ನಿರ್ಮಾಪಕ ವಿಜಯ್ ಕಿರಗಂದೂರ್ (Vijay Kirgandur), ಕಿಚ್ಚನಿಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಅದೀಗ ನಿಜವಾಗಿಯೂ ಕಾಲ ಕೂಡ ಬಂದಿದೆಯಾ ಎನ್ನುವ ಅನುಮಾನ ಮೂಡಿದೆ.

    ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದ ‘ಕಾಂತರ’ (Kantara) ಸಿನಿಮಾದ ಬಗ್ಗೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಮೆಚ್ಚುಗೆಯನ್ನು ಸೂಚಿಸಿದ್ದರು. ಅದರಲ್ಲೂ ಸುದೀಪ್ ಪುತ್ರಿ ಸಾನ್ವಿ ತುಸು ಹೆಚ್ಚೇ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಈ ನಡುವೆ ಅದೇ ಹೊಂಬಾಳೆ ಫಿಲ್ಮ್ಸ್ ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ (Karthik Gowda) ಅವರು ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಈ ವಿಷಯವನ್ನು ಅವರು ಮಧ್ಯರಾತ್ರಿ 11.42ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ.

    ಸುದೀಪ್ ಮತ್ತು ಕಾರ್ತಿಕ್ ಭೇಟಿಯ ಹಿಂದಿನ ವಿಚಾರವನ್ನು ಕಾರ್ತಿಕ್ ಹಂಚಿಕೊಳ್ಳದೇ ಕೇವಲ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಅಲ್ಲದೇ, ಫೋಟೋ ಜೊತೆ ‘ಹೊಸ ಆರಂಭಕ್ಕೆ ಸುದೀಪ್ ಸರ್’ ಎಂದು ಬರೆದುಕೊಂಡಿದ್ದಾರೆ. ಈ ಬರಹವೇ ನಾನಾ ಚರ್ಚೆಗೆ ಕಾರಣವಾಗಿದೆ. ಹೊಸ ಆರಂಭ ಎನ್ನುವುದು ಕಿಚ್ಚನ ಸಿನಿಮಾಗೆ ಮುನ್ನುಡಿಯಾ ಎನ್ನುವ ಪ್ರಶ್ನೆ ಕೂಡ ಹುಟ್ಟು ಹಾಕಿದೆ. ಇದನ್ನೂ ಓದಿ:ಗೊಬ್ಬರಗಾಲ ಮೈ ಮೇಲೆ ದೆವ್ವ: ಹೆದರಿ ಓಡಿದ ನವಾಜ್, ರೂಪೇಶ್ ರಾಜಣ್ಣ

    ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಮತ್ತೊಂದು ಸಿನಿಮಾ ಒಪ್ಪಿಕೊಂಡಿಲ್ಲ. ಮತ್ತೆ ಅನೂಪ್ ಭಂಡಾರಿ ಅವರೇ ಕಿಚ್ಚನಿಗಾಗಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈವರೆಗೂ ಆ ಸಿನಿಮಾದ ಕುರಿತು ಅಧಿಕೃತ ಮಾಹಿತಿ ಹೊರ ಬಂದಿಲ್ಲ. ಈ ಮಧ್ಯೆ ಸುದೀಪ್ ಮತ್ತು ಕಾರ್ತಿಕ ಭೇಟಿ ಕುತೂಹಲವನ್ನಂತೂ ಮೂಡಿಸಿದೆ. ಮುಂದಿನ ದಿನಗಳಲ್ಲಿ ಫೋಟೋ ಹಿಂದಿನ ಸತ್ಯ ಕೂಡ ಹೊರ ಬೀಳಲಿದೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಚಿತ್ರಕ್ಕೆ ಹಣ ಹೂಡುತ್ತಾ ಹೊಂಬಾಳೆ ಫಿಲ್ಮ್ಸ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಗುಸುಗುಸು

    ಶಾರುಖ್ ಖಾನ್ ಚಿತ್ರಕ್ಕೆ ಹಣ ಹೂಡುತ್ತಾ ಹೊಂಬಾಳೆ ಫಿಲ್ಮ್ಸ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಗುಸುಗುಸು

    ಕೆಜಿಎಫ್ ಸಿನಿಮಾದ ಮೂಲಕ ಭಾರತೀಯ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿರುವ, ಕನ್ನಡದ ಹೊಂಬಾಳೆ ಫಿಲ್ಮ್ಸ್ (Hombale Films) ಈಗಾಗಲೇ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದೆ. ತೆಲುಗು, ತಮಿಳು ಮತ್ತು ಮಲೆಯಾಳಂ ಸಿನಿಮಾ ರಂಗದಲ್ಲೂ ಹಣ ಹೂಡಿಕೆ ಮಾಡುತ್ತಿದೆ. ಇದೀಗ ಬಾಲಿವುಡ್ (Bollywood) ನತ್ತ ಮುಖ ಮಾಡಿದೆ. ಮುಂದಿನ ದಿನಗಳಲ್ಲಿ ನೇರವಾಗಿ ಹಿಂದಿಯಲ್ಲೂ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಮಾಡಲಿದ್ದು, ಅಂಥದ್ದೊಂದು ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದೆ.

    ಹೊಂಬಾಳೆ ಬ್ಯಾನರ್ ನಿಂದ ಮೂಡಿ ಬಂದಿರುವ ಕಾಂತಾರ, ರಾಘವೇಂದ್ರ ಸ್ಟೋರ್ಸ್ ಸೇರಿದಂತೆ ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಈ ನಡುವೆ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಗಾಗಿ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಮಾಡಲು ಹೊರಟಿದೆಯಂತೆ. ಈ ಕುರಿತು ಶಾರುಖ್ (Shah Rukh Khan) ಜೊತೆ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದಿಂದಲೇ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಅಧಿಕೃತವಾಗಿ ಹೊಂಬಾಳೆ ಫಿಲ್ಮಸ್ ಆಗಲಿ, ಶಾರುಖ್ ಖಾನ್ ಆಗಲಿ ಹೇಳದೇ ಇದ್ದರೂ, ಮಾತುಕತೆ ಆಗಿದ್ದಂತೂ ಪಕ್ಕಾ ಅನ್ನುತ್ತವೆ ಮೂಲಗಳು. ಈ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್. ಆದರೆ, ಸಿನಿಮಾ (Cinema) ಮಾಡುವುದು ಪಕ್ಕಾ ಎಂದೇ ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಹುಶಃ ಮತ್ತಷ್ಟು ವಿಷಯಗಳು ಆಚೆ ಬರಬಹುದು. ಅಥವಾ ಹೊಂಬಾಳೆಯವರೆ ಹೊಸ ಅಪ್ ಡೇಟ್ ನೀಡಬಹುದು.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಹೊಂಬಾಳೆ ಜೊತೆ ಯಶ್ ಸಿನಿಮಾ: ವೈರಲ್ ಆಯ್ತು ಮಲಯಾಳಂ ನಟ ಪೃಥ್ವಿರಾಜ್ ಮಾತು

    ಮತ್ತೆ ಹೊಂಬಾಳೆ ಜೊತೆ ಯಶ್ ಸಿನಿಮಾ: ವೈರಲ್ ಆಯ್ತು ಮಲಯಾಳಂ ನಟ ಪೃಥ್ವಿರಾಜ್ ಮಾತು

    ಹೊಂಬಾಳೆ ಫಿಲ್ಮಸ್ ಬ್ಯಾನರ್ ನಲ್ಲಿ ಮೂಡಿ ಬಂದ ಕೆಜಿಎಫ್ ಸಿನಿಮಾ ಕನ್ನಡದ ನಟ ಯಶ್ (Yash) ಅವರಿಗೆ ಜಾಗತಿಕವಾಗಿ ದೊಡ್ಡ ಹೆಸರು ತಂದು ಕೊಟ್ಟಿತ್ತು. ಇದೀಗ ಯಶ್ ಕೇವಲ ಸ್ಯಾಂಡಲ್ ವುಡ್ ನಟನಾಗಿ ಉಳಿದುಕೊಂಡಿಲ್ಲ. ಭಾರತೀಯ ಸಿನಿಮಾ ರಂಗದ ಟಾಪ್ ನಟನಾಗಿ ಬೆಳೆದಿದ್ದಾರೆ. ಕೆಜಿಎಫ್ 2 ಸಿನಿಮಾದ ಮೂಲಕ ಸಾವಿರಾರು ಕೋಟಿ ಹಣವನ್ನು ನಿರ್ಮಾಪಕರಿಗೆ ತಂದುಕೊಟ್ಟ ಯಶ್, ಇದೀಗ ಮತ್ತೆ ಹೊಂಬಾಳೆ ಬ್ಯಾನರ್ ನಲ್ಲಿ ಸಿನಿಮಾ ಮಾಡಲಿದ್ದಾರಂತೆ. ಹಾಗಂತ ಇದು ಗಾಸಿಪ್ ಅಲ್ಲ. ಮಲಯಾಳಂ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರೇ ಆಡಿದ ಮಾತು.

    ಈಗಾಗಲೇ ಹೊಂಬಾಳೆ ಫಿಲ್ಮಸ್ (Hombale Films) ಮತ್ತು ಪೃಥ್ವಿರಾಜ್ ಜಂಟಿಯಾಗಿ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಟೈಸನ್ ಎಂದು ಹೆಸರು ಕೂಡ ಇಡಲಾಗಿದೆ. ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ ಎಂದು ಹೇಳಲಾಗಿತ್ತು. ಈ ನಡುವೆ ಪೃಥ್ವಿರಾಜ್ ಅವರು ಯಶ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ನಿಮ್ಮ ಮುಂದಿನ ಸಿನಿಮಾ ಯಾವುದು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ  ಅವರು, ‘ಸದ್ಯ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮಾಡುತ್ತಿದ್ದೇನೆ. ಯಶ್ ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ’ ಎಂದು ಮಾತನಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ : ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ಎಕ್ಸ್‌ಕ್ಲೂಸಿವ್ ಸೆಲೆಬ್ರಿಟಿಗಳು

    ಅಂದುಕೊಂಡಂತೆ ಆಗಿದ್ದರೆ ಯಶ್ ಅವರ ಮುಂದಿನ ಸಿನಿಮಾ (Cinema)  ಅನೌನ್ಸ್ ಆಗಬೇಕಿತ್ತು. ನರ್ತನ್ ನಿರ್ದೇಶನದಲ್ಲಿ ಯಶ್ ಅವರ 19ನೇ ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಈಗ ಅದು ಆಗುತ್ತಿಲ್ಲ ಎನ್ನುವ ಸುದ್ದಿಯೂ ಇದೆ. ಅಲ್ಲದೇ, ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಜೊತೆಯೂ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇದು. ಸದ್ಯ ಶಂಕರ್ ಬೇರೆ ಸಿನಿಮಾವನ್ನು ಮಾಡುತ್ತಿರುವುದರಿಂದ ಸದ್ಯಕ್ಕೆ ಅದು ಸಾಧ್ಯವಿಲ್ಲ. ಇದೀಗ ಪೃಥ್ವಿರಾಜ್ ಹೆಸರು ತಳುಕು ಹಾಕಿಕೊಂಡಿದೆ.

    ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಅವರನ್ನು ಕೇಳಿದಾಗ, ‘ಅವಸರ ಏನೂ ಅಲ್ಲ. ಸಮಯ ಬಂದಾಗ ಹೇಳುತ್ತೇನೆ’ ಎಂದು ಹೇಳಿ ಜಾರಿ ಬಿಡುತ್ತಾರೆ. ಈವರೆಗೂ ಅವರು ತಮ್ಮ 19ನೇ ಸಿನಿಮಾದ ಯಾವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಆದರೂ, ಹಲವು ನಿರ್ದೇಶಕರ ಹೆಸರು ಕೇಳಿ ಬರುತ್ತಲೇ ಇದೆ. ಇದೀಗ ಪೃಥ್ವಿರಾಜ್ ಮಾತು ಮತ್ತಷ್ಟು ಪುಷ್ಠಿ ನೀಡಿದೆ. ಯಶ್ ಅವರ 19ನೇ ಸಿನಿಮಾ ಮಾಡುತ್ತಾರಾ? ಅಥವಾ ಮುಂದಿನ ಯೋಜನೆಯಾ ಅನ್ನುವುದನ್ನು ಅವರೇ ಸ್ಪಷ್ಟ ಪಡಿಸಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಸಂತೋಷ್ ಆನಂದ್ ರಾಮ್  ಮತ್ತು ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್ ನಲ್ಲಿ 5ನೇ ಸಿನಿಮಾ

    ಸಂತೋಷ್ ಆನಂದ್ ರಾಮ್ ಮತ್ತು ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್ ನಲ್ಲಿ 5ನೇ ಸಿನಿಮಾ

    ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಮೂಲಕ ಈಗಾಗಲೇ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ ಸಂತೋಷ್ ಆನಂದ್ ರಾಮ್. ನಾಲ್ಕನೇ ಸಿನಿಮಾ ಕೂಡ ಇದೇ ಬ್ಯಾನರ್ ನಲ್ಲೇ ಸೆಟ್ಟೇರಲಿ. ಈ ಸಿನಿಮಾ ಇನ್ನೂ ಚಿತ್ರೀಕರಣವನ್ನೇ ಪ್ರಾರಂಭಿಸಿಲ್ಲ. ಆಗಲೇ ಸಂತೋಷ್ ಆನಂದ್ ರಾಮ್ ಜೊತೆ ಮತ್ತೊಂದು ಸಿನಿಮಾ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಹೇಳಿದ್ದಾರೆ. ಈ ಸರ್ ಪ್ರೈಸ್ ವಿಷಯವನ್ನು ಸ್ವತಃ ಸಂತೋಷ್ ಆನಂದ್ ರಾವ್ ಅವರೇ ಹಂಚಿಕೊಂಡಿದ್ದಾರೆ.

    ಮೊನ್ನೆಯಷ್ಟೇ ಸಂತೋಷ್ ಆನಂದ್ ರಾಮ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ವಿಜಯ್ ಕಿರಗಂದೂರು ಅವರು ಈ ಗಿಫ್ಟ್ ಅನ್ನು ಸಂತೋಷ್ ಅವರಿಗೆ ನೀಡಿದ್ದಾರಂತೆ. ಹಾಗಾಗಿ ಸಂತೋಷ್ ಆನಂದ್ ರಾವ್ ಮತ್ತು ಹೊಂಬಾಳೆ ಕಾಂಬಿನೇಷನ್ ನಲ್ಲಿ 5ನೇ ಸಿನಿಮಾ ಕೂಡ ಮೂಡಿ ಬರಲಿದೆ. ಸತತವಾಗಿ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಐದು ಚಿತ್ರಗಳನ್ನು ಮಾಡಿದ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಸಂತೋಷ್ ಆನಂದ್ ರಾಮ್ ಕಾರಣರಾಗಲಿದ್ದಾರೆ.  ಇದನ್ನೂ ಓದಿ:ಸಿನಿಮಾ ಸೋಲಿಗೆ ಪನ್ನಿರಿಗೆ ಕಟ್ಟುತ್ತಿರುವ ಜಿ.ಎಸ್.ಟಿ ಕಾರಣ: ನಿರ್ದೇಶಕ ಅನುರಾಗ್ ಕಶ್ಯಪ್

    ಹೊಂಬಾಳೆ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಬಂದ ಮೊದಲ ಸಿನಿಮಾ ‘ರಾಜಕುಮಾರ್’. ಪುನೀತ್ ರಾಜ್ ಕುಮಾರ್ ಈ ಸಿನಿಮಾದ ನಾಯಕರು. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದ ಚಿತ್ರವಿದು. ಹಾಗಾಗಿ ಇದೇ ಕಾಂಬಿನೇಷನ್ ನಲ್ಲಿ ಯುವರತ್ನ ಚಿತ್ರ ಮಾಡಿದರು. ನಂತರ ಬಂದಿದ್ದು ಜಗ್ಗೇಶ್ ಗಾಗಿ ಮಾಡಿದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ. ಇದು ಇನ್ನೂ ತೆರೆ ಕಾಣಬೇಕು. ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಗಾಗಿ ಸಂತೋಷ್ ಒಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಇದು ಇನ್ನೂ ಸೆಟ್ಟೇರಬೇಕು. ಇದಾದ ನಂತರ ಮತ್ತೊಂದು ಸಿನಿಮಾ ಸಂತೋಷ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ಶಿವರಾಜ್ ಕುಮಾರ್ ಹೀರೋ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ನಟಿಸಲಿದ್ದಾರೆ ಮಾಜಿ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ನಟಿಸಲಿದ್ದಾರೆ ಮಾಜಿ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್

    ಚ್ಚರಿಯ ಮೇಲೆ ಅಚ್ಚರಿ ನೀಡುತ್ತಿದೆ ಹೊಂಬಾಳೆ ಫಿಲ್ಮ್ಸ್. ಈಗಾಗಲೇ ತೆಲುಗು, ಮಲಯಾಳಂ, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ಕೆಜಿಎಫ್ 2 ಸಾವಿರಾರು ಕೋಟಿ ಗಳಿಸಿದ ನಂತರ ಭಾರತೀಯ ಸಿನಿಮಾ ರಂಗವನ್ನೇ ಹೊಂಬಾಳೆ ಫಿಲ್ಮ್ಸ್ ಆವರಿಸಿಕೊಳ್ಳುತ್ತಿದೆ. ಈ ನಡುವೆ ಮತ್ತೊಂದು ಅಚ್ಚರಿಯ ಸುದ್ದಿ ಸಿಕ್ಕಿದೆ. ನಿನ್ನೆಯಷ್ಟೇ ಸದ್ದಿಲ್ಲದೇ ಹೊಂಬಾಳೆ ಫಿಲ್ಮ್ಸ್ ಕಚೇರಿಗೆ ಮಾಜಿ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಭೇಟಿ ನೀಡಿದ್ದಾರೆ.

    ಇತ್ತೀಚೆಗಷ್ಟೇ ಮಾನುಷಿ ನಟನೆಯ ಚೊಚ್ಚಲು ಸಿನಿಮಾ ‘ಸಾಮ್ರಾಟ್ ಪೃಥ್ವಿರಾಜ್’ ತೆರೆ ಕಂಡಿದೆ. ಬಾಕ್ಸ್ ಆಫೀಸಿನಲ್ಲಿ ಹೇಳಿಕೊಳ್ಳುವಂತಹ ಕಮಾಯಿ ಏನೂ ಮಾಡದೇ ಇದ್ದರೂ, ಮಾನುಷಿ ನಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿರುವ ಮಾನುಷಿ, ಹೊಂಬಾಳೆ ಫಿಲ್ಮ್ಸ್ ನಿರ್ಮಾಪಕ ವಿಜಯ್ ಕಿರಗಂದೂರು ಭೇಟಿ ಮಾಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಹಲವಾರು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ, ಅವರು ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಸದ್ಯ ಹೊಂಬಾಳೆ ಫಿಲ್ಮ್ಸ್ ಬಳಿ ಎರಡು ಮೆಗಾ ಪ್ರಾಜೆಕ್ಟ್ ಗಳಿವೆ. ಒಂದು ಸಿನಿಮಾವನ್ನು ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡುತ್ತಿದ್ದಾರೆ. ಮತ್ತೊಂದು ಸಿನಿಮಾ ಬಾಲಿವುಡ್ ನಲ್ಲಿ ಮಾತುಕತೆ ನಡೆದಿದೆ. ಈ ಎರಡು ಸಿನಿಮಾದಲ್ಲಿ ಯಾವುದಾದರೂ ಒಂದು ಸಿನಿಮಾದಲ್ಲಿ ಮಾನುಷಿ ನಟಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಒಟ್ಟಿನಲ್ಲಿ ಮಾನುಷಿ ಬೆಂಗಳೂರು ಆಫೀಸಿನಲ್ಲಿ ವಿಜಯ್ ಕಿರಗಂದೂರು ಅವರನ್ನು ಭೇಟಿ ಮಾಡಿದ ಫೋಟೋವನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹೊಂಬಾಳಿ ಫಿಲ್ಮ್ಸ್ ಪೋಸ್ಟ್ ಮಾಡಿ, ಕುತೂಹಲ ಹೆಚ್ಚಿಸಿದೆ.

    Live Tv

  • ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ

    ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕೆಜಿಎಫ್ 2 ಸಿನಿಮಾ ಐವತ್ತು ವರ್ಷ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿದೆ ಸಂಸ್ಥೆ. ಈ ಹಿಂದೆ ಇದೇ ಬ್ಯಾನರ್ ನಲ್ಲಿ ಮೂಡಿ ಬಂದ ರಾಘವೇಂದ್ರ ಸ್ಟೋರ್ಸ್ ಚಿತ್ರದ ದಿನಾಂಕ ಕೂಡ ಗೊತ್ತು ಮಾಡಿತ್ತು. ಇದನ್ನೂ ಓದಿ:`ಜವಾನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಶಾರುಖ್ ಖಾನ್ ಎಂಟ್ರಿ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದ ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಸೆಪ್ಟಂಬರ್ 30ರಂದು ದೇಶಾದ್ಯಂತ ರಿಲೀಸ್ ಆಗಲಿದೆ. ದಸರಾ ಹಬ್ಬದಂದು ಕಾಂತಾರವನ್ನು ವೀಕ್ಷಿಸಬಹುದಾಗಿದೆ. ಕೆಜಿಎಫ್ 2 ಸಿನಿಮಾ ರಿಲೀಸ್ ದಿನವೇ ಈ ಸಿನಿಮಾ ಟೀಸರ್ ಕೂಡ ಬಿಡುಗಡೆ ಆಗಿತ್ತು. ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ಕರಾವಳಿ ಕಥೆಯನ್ನು ಹೇಳುವುದರಲ್ಲಿ ಫೇಮಸ್ ಆಗಿರುವ ರಿಷಭ್ ಶೆಟ್ಟಿ, ಈ ಸಿನಿಮಾದಲ್ಲೂ ಅಂಥದ್ದೇ ಒಂದು ವಿಭಿನ್ನ ಕಥೆಯನ್ನು ತೆರೆಗೆ ತರುತ್ತಿದ್ದಾರೆ. ಕಂಬಳವನ್ನು ಹಿನ್ನೆಲೆಯಾಗಿಟ್ಟುಕೊಂಡು ಹೊಸ ಬಗೆಯ ಕಥೆಯನ್ನು ಈ ಚಿತ್ರದಲ್ಲಿ ಹೇಳಲಿದ್ದಾರಂತೆ ನಿರ್ದೇಶಕರು. ಈಗಾಗಲೇ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾಗೆ ಜನರು ಹೇಗೆ ಪ್ರತಿಕ್ರಿಯೆ ನೀಡುತ್ತಾರೋ ಕಾದುನೋಡಬೇಕು.