Tag: ವಿಜಯ್ ಕುಮಾರ್

  • ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ (Kuwait Fire Disaster) ಸಾವಿಗೀಡಾಗಿರುವ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯ್ ಕುಮಾರ್ (40) ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

    ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರು ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಮಹಾರಾಣಿ ವಿವಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದುರಂತದಲ್ಲಿ ಮೃತರ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅಸ್ವಸ್ಥ

  • ಜೀವದ ಹಂಗು ತೊರೆದು ಐವರನ್ನು ರಕ್ಷಿಸಿದ್ದ ಪಬ್ಲಿಕ್‌ ಟಿವಿಯ ವಿಜಯ್‌ ಕುಮಾರ್‌ಗೆ ಸನ್ಮಾನ

    ಜೀವದ ಹಂಗು ತೊರೆದು ಐವರನ್ನು ರಕ್ಷಿಸಿದ್ದ ಪಬ್ಲಿಕ್‌ ಟಿವಿಯ ವಿಜಯ್‌ ಕುಮಾರ್‌ಗೆ ಸನ್ಮಾನ

    ಬೆಂಗಳೂರು: ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು (Press Club Of Bangalore) ನೀಡುವ 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿಯ (PUBLiC TV) ಕಾರು ಚಾಲಕ ವಿಜಯ್‌ ಕುಮಾರ್‌ (Vijay Kumar) ಅವರನ್ನು ಸನ್ಮಾನಿಸಲಾಗಿದೆ.

    ಬೆಂಗಳೂರು ಮಳೆ ಪ್ರವಾಹದ ವೇಳೆ ಅಂಡರ್‌ಪಾಸ್‌ನಲ್ಲಿ ಸಿಲುಕಿದ್ದ ಕಾರಲ್ಲಿದ್ದವರನ್ನು ಜೀವದ ಹಂಗು ತೆರೆದು ರಕ್ಷಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ಅವರು ವಿಜಯ್‌ ಕುಮಾರ್‌ ಅವರನ್ನು ಗೌರವಿಸಿದ್ದಾರೆ.

    ಯಾಕೆ ಸನ್ಮಾನ?
    ಮೇ 21 ರಂದು ಬೆಂಗಳೂರಿನಲ್ಲಿ(Bengaluru) ಭಾರೀ ಮಳೆಯಾಗಿತ್ತು. ಆ ದಿನ ಸಂಜೆ ಮಳೆಯಿಂದ ಜಲಾವೃತವಾಗಿದ್ದ ಕೆಆರ್ ವೃತ್ತದ ಅಂಡರ್ ಪಾಸ್‍ನಲ್ಲಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದವರನ್ನು ವಿಜಯ್‌ ಕುಮಾರ್‌ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ್ದರು. ಇದನ್ನೂ ಓದಿ: ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ ಮತ್ತು `ಪಬ್ಲಿಕ್ ಟಿವಿ’ಯ ಈ ಇಬ್ಬರು ಹೀರೋಗಳು..!

    ವಿಜಯ್‍ ಕುಮಾರ್ ನೀರಿಗೆ ಇಳಿದು ಐವರನ್ನು ರಕ್ಷಣೆ ಮಾಡಿದ್ದರು. ಇದೇ ವೇಳೆ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಕ್ವಿಕ್ ರೆಸ್ಕ್ಯೂ ಟೀಂ ವಾಹನವನ್ನು ತಡೆದ ನಮ್ಮ ಪ್ರತಿನಿಧಿ ನಾಗೇಶ್ ಸಹಾಯಕ್ಕೆ ನೆರವಾಗುವಂತೆ ಮನವಿ ಮಾಡಿದ್ದರು. ಆದರೆ ಅದನ್ನು ನಂಬದ ಸಿಬ್ಬಂದಿಗೆ ಲೋಗೋ ತೋರಿಸಿ, ಕೂಡಲೇ ಬನ್ನಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ. ಆಗ ನೆರವಿಗೆ ಬಂದ ಕ್ವಿಕ್ ರೆಸ್ಕ್ಯೂ ಟೀಂ ರಕ್ಷಣಾ ಕಾರ್ಯ ನಡೆಸಿತು. ಕೆಳಗಿದ್ದವರನ್ನು ರಕ್ಷಿಸಲು ಮಹಿಳೆಯೊಬ್ಬರು ತಾವು ಧರಿಸಿದ್ದ ತಮ್ಮ ಸೀರೆಯನ್ನು ಬಿಚ್ಚಿ ಹಗ್ಗದಂತೆ ಬಳಸಲು ನೀಡಿದ್ದರು.

    ಇದಕ್ಕೆ ಸಂಬಂಧಿಸಿದ ದೃಶ್ಯಗಳು ವೈರಲ್ ಆಗುತ್ತಲೇ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿತ್ತು. ಪಬ್ಲಿಕ್ ಟಿವಿ ವತಿಯಿಂದ ಸನ್ಮಾನ ಮಾಡಲಾಗಿತ್ತು. ವಿಜಯ್ ಕುಮಾರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸಂಚಾರಿ ಇಲಾಖೆ ಜಂಟಿ ಆಯುಕ್ತ ಅನುಚೇತ್ ಸನ್ಮಾನಿಸಿ, 10 ಸಾವಿರ ರೂ. ನಗದು ಪುರಸ್ಕಾರ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದರು.

     

  • ಐವರ ಜೀವ ಕಾಪಾಡಿದ ‘ಪಬ್ಲಿಕ್’ ಹೀರೋ- ಪಬ್ಲಿಕ್ ಟಿವಿ ತಂಡಕ್ಕೆ ಪ್ರಶಂಸೆಗಳ ಮಹಾಪೂರ

    ಐವರ ಜೀವ ಕಾಪಾಡಿದ ‘ಪಬ್ಲಿಕ್’ ಹೀರೋ- ಪಬ್ಲಿಕ್ ಟಿವಿ ತಂಡಕ್ಕೆ ಪ್ರಶಂಸೆಗಳ ಮಹಾಪೂರ

    ಬೆಂಗಳೂರು: ಪಬ್ಲಿಕ್ ಟಿವಿ (Public TV) ಸುದ್ದಿಗಳನ್ನ ಬಿತ್ತರಿಸುವ ಜೊತೆ ಜೊತೆಗೆ ನಾಡಿನ ಮಂದಿ ಸಂಕಷ್ಟದಲ್ಲಿರುವಾಗ ಸಂಕಷ್ಟದಲ್ಲಿರೋರಿಗೆ ಹೆಗಲಾಗುವ ಕೆಲಸ ಮಾಡಿದೆ. ಅದಕ್ಕೆ ಸಾಕ್ಷಿ ಭಾನುವಾರ ನಡೆದ ಅಂಡರ್ ಪಾಸ್ (UnderPass) ದುರಂತದಲ್ಲಿದ್ದವರಿಗೆ ಹೆಗಲಾಗಿದ್ದು.

    ನಿಮ್ಮ ಪಬ್ಲಿಕ್ ಟಿವಿ ಮೊದಲಿನಿಂದಲೂ ಜನಪರ ಕೆಲಸಗಳನ್ನು ಮಾಡಿಕೊಂಡೇ ಬರುತ್ತಿದೆ. ನಿಮ್ಮ ಪಬ್ಲಿಕ್ ಟಿವಿ ಕೇವಲ ಸುದ್ದಿಯನ್ನು ಮಾತ್ರ ತಲುಪಿಸುವ ಕೆಲಸ ಮಾಡ್ತಿಲ್ಲ. ಬದಲಾಗಿ ನೊಂದವರ ಕಣ್ಣೀರು ಒರೆಸುವ, ಕಷ್ಟದಲ್ಲಿರುವವರಿಗೆ ನೆರವಾಗುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ನಮ್ಮ ಪ್ರತಿನಿಧಿಗಳು, ನಮ್ಮ ಸಿಬ್ಬಂದಿ ಈ ವಿಚಾರದಲ್ಲಿ ಸದಾ ಮುಂದಿರ್ತಾರೆ. ಈಗಲೂ ಹಾಗೆಯೇ ಆಗಿದೆ. ಭಾನುವಾರ ಸಂಜೆ ಮಳೆಯಿಂದ ಜಲಾವೃತವಾಗಿದ್ದ ಕೆಆರ್ ವೃತ್ತದ ಅಂಡರ್ ಪಾಸ್‍ನಲ್ಲಿ ಜೀವನ್ಮರಣದ ನಡುವೆ ಹೋರಾಟ ಮಾಡ್ತಿದ್ದವರನ್ನು ನಮ್ಮ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿ ವಾಹನ ಚಾಲಕ ವಿಜಯ್‍ ಕುಮಾರ್ (Vijay Kumar) ನೀರಿಗೆ ಇಳಿದು ಐವರನ್ನು ರಕ್ಷಣೆ ಮಾಡಿದ್ದಾರೆ. ಇದೇ ವೇಳೆ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಕ್ವಿಕ್ ರೆಸ್ಕ್ಯೂ ಟೀಂ ವಾಹನವನ್ನು ತಡೆದ ನಮ್ಮ ಪ್ರತಿನಿಧಿ ನಾಗೇಶ್ ಸಹಾಯಕ್ಕೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಆದರೆ ಅದನ್ನು ನಂಬದ ಸಿಬ್ಬಂದಿಗೆ ಲೋಗೋ ತೋರಿಸಿ, ಕೂಡಲೇ ಬನ್ನಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ. ಆಗ ನೆರವಿಗೆ ಬಂದ ಕ್ವಿಕ್ ರೆಸ್ಕ್ಯೂ ಟೀಂ ರಕ್ಷಣಾ ಕಾರ್ಯ ನಡೆಸಿತು. ಕೆಳಗಿದ್ದವರನ್ನು ರಕ್ಷಿಸಲು  ಮಹಿಳೆಯೊಬ್ಬರು ತಾವು ಧರಿಸಿದ್ದ ತಮ್ಮ ಸೀರೆಯನ್ನು ಬಿಚ್ಚಿ ಹಗ್ಗದಂತೆ ಬಳಸಲು ನೀಡಿದರು. ಇದನ್ನೂ ಓದಿ: ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ ಮತ್ತು `ಪಬ್ಲಿಕ್ ಟಿವಿ’ಯ ಈ ಇಬ್ಬರು ಹೀರೋಗಳು..!

    ಇದಕ್ಕೆ ಸಂಬಂಧಿಸಿದ ದೃಶ್ಯಗಳು ವೈರಲ್ ಆಗುತ್ತಲೇ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಡಿಸಿಎಂ ಶಿವಕುಮಾರ್ ಮಾಧ್ಯಮಗಳ ಹೊಣೆಗಾರಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟಿವಿ ವತಿಯಿಂದ ಸನ್ಮಾನ ಮಾಡಲಾಯ್ತು. ವಿಜಯ್ ಕುಮಾರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸಂಚಾರಿ ಇಲಾಖೆ ಜಂಟಿ ಆಯುಕ್ತ ಅನುಚೇತ್ ಸನ್ಮಾನಿಸಿ, 10ಸಾವಿರ ನಗದು ಪುರಸ್ಕಾರ ನೀಡಿ ಬೆನ್ನು ತಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ – ಸಚಿವ ಎಂ.ಬಿ ಪಾಟೀಲ್‌

  • ಹಿರಿತೆರೆಗೆ ಕಾಲಿಟ್ಟ ‘ಪತ್ತೆದಾರಿ ಪ್ರತಿಭಾ’ ಧಾರಾವಾಹಿಯ ಅರ್ಥವ್

    ಹಿರಿತೆರೆಗೆ ಕಾಲಿಟ್ಟ ‘ಪತ್ತೆದಾರಿ ಪ್ರತಿಭಾ’ ಧಾರಾವಾಹಿಯ ಅರ್ಥವ್

    ಗೆಜ್ಜೆನಾದ, ನಂದ ಲವ್ಸ್ ನಂದಿತಾ, ಕನ್ನಡದ ಕಂದ, ಆಟ ಮುಂತಾದ ಸೂಪರ್ ಹಿಟ್ ಚಿತ್ರಗಳ ಹಾಗೂ ಕಿರುತೆರೆಯ ಸಾಕಷ್ಟು ಯಶಸ್ವಿ ಧಾರಾವಾಹಿಗಳ ನಿರ್ದೇಶಕ ಬಿ.ಎನ್ ವಿಜಯ್ ಕುಮಾರ್(ಗೆಜ್ಜೆನಾದ) (Vijay Kumar) ಈಗ ನಿರ್ಮಾಪಕರಾಗಿದ್ದಾರೆ. ಅಥರ್ವ್ ಪಿಕ್ಚರ್ಸ್ ಅಡಿಯಲ್ಲಿ ಧರ್ಮೇಂದ್ರ ಎಂ ರಾವ್ ಅವರ ಜೊತೆಯಾಗಿ ನೂತನ ಚಿತ್ರವೊಂದನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಶೀರ್ಷಿಕೆ ಏಪ್ರಿಲ್ 13 ರಂದು ಬಿಡುಗಡೆಯಾಗಲಿದೆ.

    ಇದು ಮಹಾನಗರವೊಂದರಲ್ಲಿ ನಡೆಯುವ ಕಥೆಯಾಗಿದೆ. ಮೂರು ವಿಭಿನ್ನ ಕಥೆಗಳು ಚಿತ್ರದಲ್ಲಿದೆ.  ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ರಾಕಿಭಾಯ್ ಹೆಸರಿನಲ್ಲಿ ಸಲ್ಮಾನ್ ಖಾನ್‌ಗೆ ಧಮ್ಕಿ

    ಬಿ.ಎನ್.ವಿಜಯ್ ಕುಮಾರ್ ಅವರ ಪುತ್ರ ಅಥರ್ವ್ (Atharv) ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯ ಧಾರಾವಾಹಿಗಳಾದ ‘ಪುನರ್ ವಿವಾಹ’ ಹಾಗೂ ‘ಪತ್ತೆದಾರಿ ಪ್ರತಿಭಾ’ ದಲ್ಲಿ ಅಥರ್ವ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಅಥರ್ವ್ ಹಿರಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆಯನ್ನು ಅಥರ್ವ್ ಅವರೆ ಬರೆದಿದ್ದಾರೆ. ಚಿತ್ರಕಥೆ ಅಥರ್ವ್ ಹಾಗೂ ರಾಜೀವ್ ಕಿರಣ್ ವೆನಿಯಲ್ ಅವರದು.  ‘ಕನ್ನಡತಿ’ ಧಾರಾವಾಹಿ ರೆಮೋಲ, ಸಂಪತ್ ಮೈತ್ರೇಯ, ಬಿ.ಸುರೇಶ್ (B. Suresh), ರೂಪಾ ರಾಯಪ್ಪ, ಆಶೀಶ್, ಬಿ.ಎಂ.ವೆಂಕಟೇಶ್, ಮೋಹನ್, ಆರ್ ಜೆ ಅನೂಪ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಸಾಕಷ್ಟು ಡಾಕ್ಯುಮೆಂಟರಿ, ಜಾಹೀರಾತು ಹಾಗೂ ಕಿರುಚಿತ್ರಗಳನ್ನು ನಿರ್ದೇಶಿಸಿರುವ ರಾಜೀವ್ ಕಿರಣ್ ವೆನಿಯಲ್ (Rajeev Kiran Venial) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೌಶನ್ ಜಾ ಛಾಯಾಗ್ರಹಣ, ಪ್ರದೀಪ್ ಗೋಪಾಲ್ ಸಂಕಲನ ಹಾಗೂ ಸಿದ್ಧಾರ್ಥ್ ಪರಾಶರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಉಗ್ರಗಾಮಿ ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿ

    ಉಗ್ರಗಾಮಿ ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿ

    ಶ್ರೀನಗರ: ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್(ಟಿಆರ್‌ಎಫ್) ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಪೊಂಬೆ ಮತ್ತು ಗೋಪಾಲ್‌ಪೋರಾ ಗ್ರಾಮಗಳಲ್ಲಿ ಬುಧವಾರ ನಡೆದಿದೆ.

    ಗೋಪಾಲ್‌ಪೋರಾ ಗ್ರಾಮಗಳಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಟಿಆರ್‌ಎಫ್ ಕಮಾಂಡರ್ ಸೇರಿದಂತೆ ಐವರು ಉಗ್ರರು ಹತರಾಗಿದ್ದಾರೆ. ಪೊಂಬೆಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದರೆ, ಗೋಪಾಲ್‌ಪೋರಾದಲ್ಲಿ ಇಬ್ಬರು ಹತರಾಗಿದ್ದಾರೆ. ಇದನ್ನೂ ಓದಿ:  ಚೀನಾ ಗಡಿ ಕ್ಯಾತೆ ನಡುವೆ ಭಾರತೀಯ ಸೇನೆಯಿಂದ ಆಪರೇಷನ್ ಹರ್ಕ್ಯುಲಸ್

    ಗೋಪಾಲ್‌ಪೋರಾ ಪ್ರದೇಶದಲ್ಲಿ ಉಗ್ರಗಾಮಿಗಳು ಇರುವ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ, ಅವರು ಪ್ರತಿದಾಳಿ ನಡೆಸಿದರು. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

    ಟಿಆರ್‌ಎಫ್ ಉಗ್ರಗಾಮಿ ಕಮಾಂಡರ್ ಅಫಾಕ್ ಸಿಕಂದರ್ ಲೋನ್ ಮತ್ತು ಮತ್ತೊಬ್ಬ ಟಿಆರ್‌ಎಫ್ ಸದಸ್ಯ ಇರ್ಫಾನ್ ಮುಸ್ತಾಕ್ ಲೋನ್‌ನನ್ನು ಗೋಪಾಲ್‌ಪೋರಾದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ. ಈ ಕುರಿತು ಪೊಲೀಸ್ ಮಹಾನಿರೀಕ್ಷಕ(ಕಾಶ್ಮೀರ) ವಿಜಯ್ ಕುಮಾರ್ ಟ್ವೀಟ್‌ನಲ್ಲಿ, ನಿಷೇಧಿತ ಭಯೋತ್ಪಾದಕ ಸಂಘಟನೆಯ ಟಿಆರ್‌ಎಫ್‌ನ ಭಯೋತ್ಪಾದಕ ಕಮಾಂಡರ್ ಅಫಾಕ್ ಸಿಕಂದರ್ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  4ಜಿ ಡೌನ್‍ಲೋಡ್ ವೇಗದಲ್ಲಿ ಜಿಯೋ ಫಸ್ಟ್

    ಇದಲ್ಲದೆ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಇಬ್ಬರು ಸಕ್ರಿಯ ಭಯೋತ್ಪಾದಕ ಸಹಚರರನ್ನು ಹಾಗೂ ಪುಲ್ವಾಮಾ ನಿವಾಸಿ ಅಮೀರ್ ಬಶೀರ್ ದಾರ್, ಶೋಪಿಯಾನ್ ನಿವಾಸಿ ಮುಖ್ತಾರ್ ಅಹ್ಮದ್ ಭಟ್ ಅವರನ್ನು ಪಡೆಗಳು ಬಂಧಿಸಿವೆ. ಅವರ ಬಳಿಯಿದ್ದ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.

  • ಹಿರಿಯ ನಿರ್ಮಾಪಕ ವಿಜಯ್ ಕುಮಾರ್ ನಿಧನ

    ಹಿರಿಯ ನಿರ್ಮಾಪಕ ವಿಜಯ್ ಕುಮಾರ್ ನಿಧನ

    ಬೆಂಗಳೂರು: ಹಿರಿಯ ನಿರ್ಮಾಪಕ, ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಬಿ. ವಿಜಯ್ ಕುಮಾರ್ ನಿಧನರಾಗಿದ್ದಾರೆ.

    ಹೃದಯಾಘಾತ ಸಂಭವಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಗರ್ ಆಸ್ಪತ್ರೆಯಲ್ಲಿ ರಾತ್ರಿ 9:20ಕ್ಕೆ ಕೊನೆಯುಸಿರೆಳೆದಿದ್ದಾರೆ. ಇಂದು ಜಯನಗರದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

    ವಿಷ್ಣುವರ್ಧನ್ ಅವರಿಗೆ ಬಹಳ ಆಪ್ತರಾಗಿದ್ದ ವಿಜಯ್ ಕುಮಾರ್, ವಿಷ್ಣು ಅಭಿನಯಿಸಿದ ಸಾಕಷ್ಟು ಸಿನಿಮಾಗಳ ನಿರ್ಮಾಪಕರಾಗಿದ್ದರು. ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್. ಮೌನಗೀತೆ, ಜಗದೇಕ ವೀರ ಸೇರಿ ಹಲವು ಚಿತ್ರಗಳನ್ನ ನಿರ್ಮಿಸಿದ್ದರು. ಇದನ್ನೂ ಓದಿ: ತಪ್ಪು ಸರಿಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ: ರಚಿತಾ ರಾಮ್

    ಸ್ವಚ್ಛ ಭಾರತ ಇವರ ನಿರ್ಮಾಣದ ಕೊನೆಯ ಚಿತ್ರವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ, ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

  • ಅಮೆರಿಕದಿಂದ ಆಗಮಿಸಿ ಮತದಾನಗೈದ ಟೆಕ್ಕಿ

    ಅಮೆರಿಕದಿಂದ ಆಗಮಿಸಿ ಮತದಾನಗೈದ ಟೆಕ್ಕಿ

    ದಾವಣಗೆರೆ: ಸ್ಥಳೀಯವಾಗಿ ಇದ್ದುಕೊಂಡು ಮತದಾನ ಮಾಡುವುದೇ ಕಷ್ಟವಿರುವಾಗ ವಿದೇಶದಿಂದ ಟೆಕ್ಕಿಯೊಬ್ಬರು ಜಿಲ್ಲೆಯ ಕಕ್ಕರಗೊಳ್ಳ ಗ್ರಾಮಕ್ಕೆ ಆಗಮಿಸಿ ಮತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

    ವಿಜಯ್ ಕುಮಾರ್ ಮತದಾನ ಮಾಡಲು ಬಂದ ಟೆಕ್ಕಿ. ಇವರು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಂದು ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕದಿಂದ ಸ್ವಗ್ರಾಮಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.

    ಮೊದಲ ಹಂತದ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಕಡಿಮೆ ಮತದಾನವಾಗಿದ್ದು, ರಾಜ್ಯದ ಜನತೆ ತಮ್ಮ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ನಾವೇ ವಿದೇಶದಿಂದ ಆಗಮಿಸಿ ಮತದಾನ ಮಾಡಿ ನಂತರ ಹೋಗುತ್ತಿದ್ದೇವೆ. ಇಲ್ಲೇ ಸ್ಥಳೀಯವಾಗಿ ಇದ್ದುಕೊಂಡು ಮತದಾನ ಮಾಡದೇ ಇರುವುದು ಸರಿಯಲ್ಲ. ಮತದಾನ ನಮ್ಮ ಹಕ್ಕು. ಅದನ್ನು ಯಾರು ಕೂಡ ಕಳೆದುಕೊಳ್ಳಬಾರದು ಎಂದು ಮತದಾರರಲ್ಲಿ ವಿಜಯ್ ಕುಮಾರ್ ಮನವಿ ಮಾಡಿಕೊಂಡರು.

  • ಜಯನಗರ ಎಲೆಕ್ಷನ್- ಸರತಿ ಸಾಲಲ್ಲಿ ನಿಂತು ಸೆಲೆಬ್ರಿಟಿಗಳಿಂದ ಹಕ್ಕು ಚಲಾವಣೆ

    ಜಯನಗರ ಎಲೆಕ್ಷನ್- ಸರತಿ ಸಾಲಲ್ಲಿ ನಿಂತು ಸೆಲೆಬ್ರಿಟಿಗಳಿಂದ ಹಕ್ಕು ಚಲಾವಣೆ

    ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ಅಕಾಲಿಕ ನಿಧನದಿಂದ ಮುಂದೂಡಿಕೆಯಾಗಿದ್ದ, ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಸೆಲೆಬ್ರಿಟಿಗಳು ಹಕ್ಕು ಚಲಾವಣೆ ಮಾಡಿದ್ದಾರೆ.

    216 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್, ನಟಿ ಭಾರತಿ ವಿಷ್ಣುವರ್ಧನ್, ತಾರಾ, ಅನುರಾಧ, ಪ್ರಮಿಳಾ ಜೋಷಾಯ್, ಮೇಘನಾ ರಾಜ್, ಸುಂದರ್ ರಾಜ್ ಹಾಸ್ಯ ನಟ ಉಮೇಶ್, ನಿರ್ಮಾಪಕ ಕೆ ಮಂಜು, ಸಾಹಿತಿ ಬರಗೂರು ರಾಮಚಂದ್ರಪ್ಪ, ಮುಖ್ಯಮಂತ್ರಿ ಚಂದ್ರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಸೇರಿದಂತೆ ಹಲವರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ್ರು.

    ಮುಖ್ಯಮಂಂತ್ರಿ ಚಂದ್ರು ಅಸಮಾಧಾನ: ಮತಗಟ್ಟೆಯ ಅವ್ಯವಸ್ಥೆ ಕಂಡು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ನಟ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಲ್ಲದೇ ಈ ಕುರಿತು ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.

    ಮೊದಲು ಒಂದು ತಾಸು ಲೇಟು ಅಂದ್ರು. ಸರತಿ ಸಾಲಿನಲ್ಲಿ ನಿಂತಿದ್ದೆ, ಮತದಾರರು ಇದ್ದಾಗ ಹೇಳಬೇಕಿತ್ತು, ಎಷ್ಟೊತ್ತು ಆಗುತ್ತೆ ಅಂತ. ಅಧಿಕಾರಿಗಳು ಎಲ್ಲಾ ಸರಿ ಮಾಡೋ ನಂಬಿಕೆ ಇದೆ. ವೋಟ್ ಹಾಕುವುದು ನಮ್ಮ ಹಕ್ಕು, ಅದಕ್ಕೆ ಕುಟುಂಬ ಸಮೇತ ಬಂದಿದ್ದೇನೆ. 216 ಮತಕೇಂದ್ರದ ಮಶಿನ್ ಮೇಲೆ ಗುಮಾನಿ ಇದೆ. ಮಶಿನ್ ಬದಲಾವಣೆ ಮಾಡಿಸಬೇಕು. ಹೊಸ ಯಂತ್ರ ಅಳವಡಿಸಿಬೇಕು. ಈ ಕುರಿತು ಚುನಾವಣೆ ಆಯುಕ್ತರಿಗೆ ದೂರು ನೀಡಿರುವುದಾಗಿ ಚಂದ್ರು ಹೇಳಿದ್ರು.

    ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಮತಗಟ್ಟೆಗಳಿಗೆ ಭೇಟಿ ನೀಡಿ, ಮತದಾನದ ಪ್ರಕ್ರಿಯೆ ಗಮನಿಸಿದ್ರು. ಬೆಳ್ಳಂಬೆಳಗ್ಗೆ ವೃದ್ಧರು, ಅನಾರೋಗ್ಯಕ್ಕೆ ತುತ್ತಾದವರು ವ್ಹೀಲ್ ಚೇರ್‍ಗಳಲ್ಲಿ ಬಂದು ತಮ್ಮ ಹಕ್ಕು ಚಲಾಯಿಸಿದ್ದು, ವಿಶೇಷವಾಗಿತ್ತು.

    ಜಯನಗರ ಕ್ಷೇತ್ರದ ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಇಲ್ಲಿ ಕಾಂಗ್ರೆಸ್‍ಗೆ ಬೆಂಬಲ ಸೂಚಿಸಿದೆ. ಬಿಜೆಪಿಯ ಪ್ರಹ್ಲಾದ್, ರವಿಕೃಷ್ಣಾರೆಡ್ಡಿ ಸೇರಿದಂತೆ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೂನ್ 13ರಂದು ಮತಎಣಿಕೆ ನಡೆಯಲಿದೆ.

    https://www.youtube.com/watch?v=mtQKKYeY1l4

    https://www.youtube.com/watch?v=6CAQxOoMenA

  • ಜಯನಗರ ಚುನಾವಣೆ: ಜೆಡಿಎಸ್, ಕಾಂಗ್ರೆಸ್ ಮೈತ್ರಿ

    ಜಯನಗರ ಚುನಾವಣೆ: ಜೆಡಿಎಸ್, ಕಾಂಗ್ರೆಸ್ ಮೈತ್ರಿ

    ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾತಿಗೆ ಮಾಜಿ ಪ್ರಧಾನಿ ಒಪ್ಪಿಗೆ ನೀಡಿದ್ದರಿಂದ ಮೈತ್ರಿ ಯಶಸ್ವಿಯಾಗಿದೆ.

    ಮೈತ್ರಿ ವಿಚಾರವಾಗಿ ಮಾತನಾಡಲು ರಾಮಲಿಂಗಾರೆಡ್ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ರು. ತಮ್ಮ ಮಗಳು ಸ್ಪರ್ಧೆ ಮಾಡ್ತಿರೋದ್ರೀಂದ ಬೆಂಬಲ ನೀಡುವಂತೆ ರಾಮಲಿಂಗಾರೆಡ್ಡಿ ದೇವೇಗೌಡರಿಗೆ ಕೇಳಿಕೊಂಡ್ರು. ರಾಮಲಿಂಗಾರೆಡ್ಡಿ ಮಾತಿಗೆ ಓಕೆ ಅಂದಿರೋ ದೇವೇಗೌಡರು ಮೈತ್ರಿಗೆ ಒಪ್ಪಿಕೊಂಡಿದ್ದಾರೆ.

    ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿಗೆ ಬೆಂಬಲ ನೀಡಬೇಕು ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಆದೇಶ ಹೊರಡಿಸಿದ್ದಾರೆ. ಜೆಡಿಎಸ್ ಮೈತ್ರಿಯಿಂದ ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹೋರಾಟ ನಡೆಯಲಿದೆ.

    ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರು ಜಯನಗರ ಕ್ಷೇತ್ರದಿಂದ 2 ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಚುನಾವಣೆಗೆ ಕೆಲ ದಿನಗಳು ಬಾಕಿ ಇರುವ ವೇಳೆಯಲ್ಲಿ ವಿಜಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದರು. ಮೇ 3 ರಂದು ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡು ಏಕಾಏಕಿ ಕುಸಿದು ಬಿದ್ದಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಕರೆತರುವಾಗಲೇ ಅವರ ಹೃದಯ ಬಡಿತ, ಬಿಪಿ ಕುಸಿತ ಕಂಡಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1 ಗಂಟೆ ಸುಮಾರಿಗೆ ಮೃತಪಟ್ಟಿದ್ದರು. ಹೀಗಾಗಿ ಈಗ ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರಿಗೆ ಬಿಜೆಪಿ ಜಯನಗರದ ಟಿಕೆಟ್ ನೀಡಿದೆ.

    2013ರ ಚುನಾವಣೆಯಲ್ಲಿ ವಿಜಯ್ ಕುಮಾರ್ ಅವರು 12,312 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದರು. ವಿಜಯಕುಮಾರ್ ಅವರಿಗೆ 43,990 ಮತಗಳು ಬಿದ್ದಿದ್ದರೆ ಕಾಂಗ್ರೆಸ್ಸಿನ ವೇಣುಗೋಪಾಲ್ ಅವರಿಗೆ 31,678 ಮತಗಳು ಬಿದ್ದಿತ್ತು. ಜೆಡಿಎಸ್ ನ ಸಮಿವುಲ್ಲಾ ಅವರಿಗೆ 12,097 ಮತಗಳು ಸಿಕ್ಕಿತ್ತು.