Tag: ವಿಜಯ್ ದಳಪತಿ

  • ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ಚೆನ್ನೈ: ಕರೂರು ಕಾಲ್ತುಳಿತ ದುರಂತದಲ್ಲಿ (Karur Stampede) ಮೃತಪಟ್ಟ 39 ಮಂದಿಯ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

    ಸರ್ಕಾರದ ವತಿಯಿಂದ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಮೃತದೇಹಗಳನ್ನು ರವಾನಿಸಲಾಗಿದೆ. ಕುಟುಂಬಸ್ಥರು ಮೃತದೇಹಗಳನ್ನು ಅವರವರ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಸದ್ಯ ಗಾಯಾಳುಗಳು ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ಹಲವು ರಾಜಕೀಯ ಪಕ್ಷದ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇನ್ನು ಆಸ್ಪತ್ರೆಗೆ ಡಿಸಿಎಂ ಉದಯನಿಧಿ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಗಮನಿಸಿ – ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

    ತಮಿಳುನಾಡು ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ (Vijay Thalapathy) ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ ನಡೆದಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರ ಲಾಠಿಚಾರ್ಜ್‌ ಕಾರಣ: ಟಿವಿಕೆ ಆರೋಪ

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ಲದೇ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ. ಇದನ್ನೂ ಓದಿ: RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

    ಇನ್ನು ಮೃತರ ಕುಟುಂಬಸ್ಥರಿಗೆ ವಿಜಯ್ ದಳಪತಿ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಟಿವಿಕೆ ಸ್ಥಳೀಯ ಕಾರ್ಯದರ್ಶಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.  ಇದನ್ನೂ ಓದಿ: Bannerghatta | ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

  • ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    – ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಚೆನ್ನೈ: ತಮಿಳುನಾಡಿನ (Tamil Nadu) ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ (Karur Stampede) ಮೃತಪಟ್ಟವರ ಕುಟುಂಬಕ್ಕೆ ನಟ, ರಾಜಕಾರಣಿ ವಿಜಯ್ ದಳಪತಿ (Thalapathy Vijay) ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದ್ದು, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

    ತಮಿಳುನಾಡು ಕರೂರಿನಲ್ಲಿ ವಿಜಯ್ ದಳಪತಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಿಜಯ್ ದಳಪತಿ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

    ಎಕ್ಸ್‌ನಲ್ಲಿ ಏನಿದೆ?
    ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲರಿಗೂ ನಮಸ್ಕಾರಗಳು. ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತಾ, ಈ ದುಃಖವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಘಟನೆಯಿಂದ ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಯಾರೇ ಸಾಂತ್ವನದ ಮಾತುಗಳನ್ನು ಹೇಳಿದರೂ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಮೊತ್ತವು ಗಮನಾರ್ಹವಾಗಿಲ್ಲ. ಆದರೂ, ಈ ಕ್ಷಣದಲ್ಲಿ, ನಿಮ್ಮ ಕುಟುಂಬಕ್ಕೆ ಸೇರಿದವನಾಗಿ, ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ.

    ಅದೇ ರೀತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮೆಲ್ಲರ ಪ್ರೀತಿಪಾತ್ರರು ಬೇಗನೆ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮ ಪ್ರೀತಿಪಾತ್ರರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷ ನೀಡುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

    ಘಟನೆ ಏನು?
    ಕಾಲಿವುಡ್ ಸೂಪರ್ ಸ್ಟಾರ್ ಕಮ್ ರಾಜಕಾರಣಿ ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಅದಕ್ಕಾಗಿ 2026ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕರೂರಿನಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ‍್ಯಾಲಿ ಹಮ್ಮಿಕೊಂಡಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿನಮಾನಿಗಳು, ಬೆಂಬಲಿಗರು ಸೇರಿದ್ದರು. ತಮ್ಮ ನಾಯಕನಿಗಾಗಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದ್ರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ದೆ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ.

    39 ಮಂದಿ ಸಾವು, 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
    ಸ್ಥಳಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ಆಶಿರ್ವಾದ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರು ಹೊರತುಪಡಿಸಿ ಹೆಚ್ಚುವರಿ 500 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಈ ಹಿಂದೆಯೂ 15,000 ಜನಕ್ಕೆ 600 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಆದ್ರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. 48 ಮಂದಿ ಆಸ್ಪತ್ರೆಯಲ್ಲಿ ಸಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ಲಾಠಿ ಚಾರ್ಜ್ ಮಾಡಿಲ್ಲ, ದುರಂತಕ್ಕೆ ಕಾರಣಗಳನ್ನ ಪಟ್ಟಿ ಮಾಡಿದ್ದೇವೆಂದು ತಿಳಿಸಿದ್ದಾರೆ.

  • ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ

    ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ

    – ದಳಪತಿ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ 36 ಮಂದಿ ಬಲಿ

    ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ (Karur Stampede) ನಟ, ರಾಜಕಾರಣಿ ವಿಜಯ್‌ (Vijay) ಅವರ ರ‍್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 34 ಮಂದಿ ಸಾವನ್ನಪ್ಪಿದ್ದು, ನಟ ರಜನಿಕಾಂತ್‌ (Rajinikanth) ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಜನಿಕಾಂತ್‌, ಕರೂರಿನಲ್ಲಿ ನಡೆದ ಘಟನೆಯಲ್ಲಿ ಅಮಾಯಕರ ಜೀವಹಾನಿಯ ಸುದ್ದಿ ಹೃದಯವನ್ನು ಕಲಕಿದೆ. ಅಪಾರ ದುಃಖವನ್ನುಂಟು ಮಾಡಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಶನಿವಾರ ಸಂಜೆ ಕರೂರಿನಲ್ಲಿ ಟಿವಿಕೆ ನಾಯಕ ವಿಜಯ್ ರ‍್ಯಾಲಿ ವೇಳೆ ಈ ದುರಂತ ಸಂಭವಿಸಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆಯ ನಂತರ 50 ಕ್ಕೂ ಹೆಚ್ಚು ಜನರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

    ದುರಂತದ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಾಲ್ತುಳಿತ ಅವಘಡ ಕಳವಳಕಾರಿ ಎಂದಿದ್ದಾರೆ. ಸಂತ್ರಸ್ತರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

  • ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಶನಿವಾರ (ಸೆ.27) ನಡೆದ ತಮಿಳು ನಟ-ರಾಜಕಾರಣಿ ವಿಜಯ್ ದಳಪತಿಯವರ ರ‍್ಯಾಲಿಗಾಗಿ ಬರೋಬ್ಬರಿ 1 ಲಕ್ಷ ಮಂದಿ ಸತತ 7 ಗಂಟೆ ಕಾದಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

    ನಟ ವಿಜಯ ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌

  • ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌

    ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌

    ಚೆನ್ನೈ: ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ಮತ ಹಾಕಿದಂತೆ. ಹೀಗಾಗಿ, ಬಿಜೆಪಿ ಜೊತೆ ಯಾವ ಕಾರಣಕ್ಕೂ ಕೈಜೋಡಿಸಲ್ಲ ಎಂದು ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ದಳಪತಿ ಅಭಿಪ್ರಾಯಪಟ್ಟಿದ್ದಾರೆ.

    ಪಶ್ಚಿಮ ಕೊಂಗು ಪ್ರದೇಶದಲ್ಲಿ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ ಟಿವಿಕೆ ಮುಖ್ಯಸ್ಥ ವಿಜಯ್, 2026 ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆಗೆ ಮತ ಹಾಕುವುದು ಬಿಜೆಪಿಗೆ ಮತ ಹಾಕಿದಂತೆ ಎಂದು ಹೇಳಿದ್ದಾರೆ. ಕೇಸರಿ ಪಕ್ಷದೊಂದಿಗಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಮೈತ್ರಿ ಅವಕಾಶವಾದಿತನದಿಂದ ಕೂಡಿದೆ ಎಂದು ಟೀಕಿಸಿದ್ದಾರೆ.

    2021ರ ಚುನಾವಣೆ ವೇಳೆ ಡಿಎಂಕೆ ಹಲವಾರು ಭರವಸೆಗಳನ್ನು ನೀಡಿತ್ತು. ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತಹ ಭರವಸೆಗಳನ್ನು ಕಾರ್ಯಗತಗೊಳಿಸಿದ್ದಾರೆಯೇ? ಇತ್ತ ಅಮ್ಮನ (ಜಯಲಲಿತಾ) ಹೆಸರು ಜಪಿಸುತ್ತಿದ್ದರೂ, ಅವರ ಆದರ್ಶನಗಳನ್ನು ಎಐಎಡಿಎಂಕೆ ಮರೆತಿದೆ. ಬಿಜೆಪಿ ಜೊತೆ ಸೂಕ್ತವಲ್ಲದ ಮೈತ್ರಿ ಮಾಡಿಕೊಂಡಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ.

    ತಮಿಳುನಾಡಿನ ಕಲ್ಯಾಣಕ್ಕಾಗಿ ಇಂತಹ ಮೈತ್ರಿ ಏರ್ಪಟ್ಟಿತ್ತು ಎಂದು ಎಐಎಡಿಎಂಕೆ ಹೇಳಿಕೊಂಡಿದೆ. ಆದರೆ, ಟಿವಿಕೆ ಅಂತಹ ಅವಕಾಶವಾದಿ ರಾಜಕೀಯ ನಿಲುವನ್ನು ತೆಗೆದುಕೊಳ್ಳುವುದಿಲ್ಲ ಎಂದು ವಿಜಯ್‌ ಸ್ಪಷ್ಟಪಡಿಸಿದ್ದಾರೆ.

    ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತಮಿಳುನಾಡಿಗೆ ಏನು ಮಾಡಿದೆ? ಅದು ತಮಿಳುನಾಡಿಗೆ ನೀಟ್ ವ್ಯಾಪ್ತಿಯಿಂದ ವಿನಾಯಿತಿ ನೀಡಿದೆಯೇ? ಟಿವಿಕೆ ಸಾಮಾನ್ಯ ಜನರ ಧ್ವನಿಯಾಗಿದ್ದರೆ, ಡಿಎಂಕೆ ತಮಿಳುನಾಡನ್ನು ಲೂಟಿ ಮಾಡುತ್ತಿದೆ. 2026 ರ ವಿಧಾನಸಭಾ ಚುನಾವಣಾ ಹೋರಾಟ ಟಿವಿಕೆ ಮತ್ತು ಡಿಎಂಕೆ ನಡುವೆ ಎಂದು ಮಾತನಾಡಿದ್ದಾರೆ.

    ಪಶ್ಚಿಮ ಕೊಂಗು ಪ್ರದೇಶದ ಭಾಗವಾಗಿರುವ ನಾಮಕ್ಕಲ್, ದಶಕಗಳಿಂದ ಎಐಎಡಿಎಂಕೆಯ ಭದ್ರಕೋಟೆಯಾಗಿತ್ತು. ಕೊಂಗು ಪ್ರದೇಶದಾದ್ಯಂತ ಬಿಜೆಪಿ ಪ್ರಭಾವ ಹೊಂದಿದೆ.

  • ವಿಜಯ್ ದಳಪತಿ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್

    ವಿಜಯ್ ದಳಪತಿ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್

    ಕಾಲಿವುಡ್‌ನ ನಟ ವಿಜಯ್ ದಳಪತಿಗೆ (Vijay Thalapathy) ಇಂದು (ಜೂನ್-22) ಹುಟ್ಟುಹಬ್ಬದ ಸಂಭ್ರಮ. 51ನೇ ವಸಂತಕ್ಕೆ ಕಾಲಿಟ್ಟಿರುವ ನಟ ವಿಜಯ್ ದಳಪತಿ ತಮ್ಮ ಕೊನೆಯ ಸಿನಿಮಾ ʻಜನ ನಾಯಗನ್ʼ ಫಸ್ಟ್ ಲುಕ್ ಟೀಸರ್ (Jana Nayagan Teaser) ರಿಲೀಸ್ ಆಗಿದೆ. ವಿಜಯ್ ದಳಪತಿ ಖಾಕಿ ತೊಟ್ಟು ಕೊಡುವ ಎಂಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ವಿಜಯ್ ದಳಪತಿ ಜನ ನಾಯಗನ್ ಸಿನಿಮಾ ಮೂಲಕ ತಮ್ಮ ಸಿನಿಮಾ ಕೆರಿಯರ್‌ಗೆ ಬ್ರೇಕ್ ತೆಗೆದುಕೊಳ್ತಿದ್ದಾರೆ. ನಂತರ ರಾಜಕೀಯದಲ್ಲೇ ತಮ್ಮನ್ನ ತೊಡಗಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. 2026ರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಾರ್ಟಿ ಮೂಲಕ ಜನಸೇವೆಗೆ ಇಳಿಯಲು ಸಕಲ ಸಿದ್ಧತೆಯ ಜೊತೆಗೆ ಕೊನೆಯ ಸಿನಿಮಾ ಮೇಲೂ ಗಮನಹರಿಸಿದ್ದಾರೆ.

    ಜನ ನಾಯಗನ್ ಸಿನಿಮಾಗೆ ಎಚ್.ವಿನೋದ್ ನಿರ್ದೇಶನ ಮಾಡಿದ್ದಾರೆ. ವಿಜಯ್ ದಳಪತಿಗೆ ನಾಯಕಿಯಾಗಿ ಪೂಜಾ ಹೆಗ್ಡೆ ತೆರೆಹಂಚಿಕೊಂಡಿದ್ದಾರೆ. ಅನಿರುದ್ಧ್ ಮ್ಯೂಸಿಕಲ್ ಮ್ಯಾಜಿಕ್ ಈ ಚಿತ್ರಕ್ಕಿರಲಿದೆ. ಬಾಬಿ ಡಿಯೋಲ್, ಗೌತಮ್ ವಾಸುದೇವ್ ಮೆನನ್, ಮಮಿತಾ ಬೈಜು, ಪ್ರಕಾಶ್ ರಾಜ್ ಮುಂತಾದವ್ರು ಚಿತ್ರದ ತಾರಾಗಣದಲ್ಲಿದ್ದಾರೆ.

    ವಿಜಯ್ ದಳಪತಿ ನಟನೆಯ 69ನೇ ಸಿನಿಮಾ ಇದಾಗಿದ್ದು, ಜನ ನಾಯಗನ್ ಸಿನಿಮಾ 2026ರ ಜನವರಿ 09 ರಂದು ತೆರೆಗೆ ಬರಲಿದೆ. ಬರುವ ವರ್ಷ ಸಂಕ್ರಾಂತಿ ವಿಜಯ್ ಅಭಿಮಾನಿಗಳಿಗೆ ಡಬಲ್ ಧಮಾಕಾ ಸೃಷ್ಟಿಸಲಿದೆ. ಕೆವಿಎನ್ ನಿರ್ಮಾಣ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡಿದೆ. ಒಟ್ಟಿನಲ್ಲಿ ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳ ಸಂಭ್ರಮ ದುಪ್ಪಟ್ಟು ಮಾಡಿದ್ದಾರೆ ವಿಜಯ್.

  • ದಳಪತಿ ವಿಜಯ್‌ ನೋಡಲು ಮರದಿಂದ ಜಿಗಿದು ಅಭಿಮಾನಿಯ ಹುಚ್ಚಾಟ- ವಿಡಿಯೋ ವೈರಲ್

    ದಳಪತಿ ವಿಜಯ್‌ ನೋಡಲು ಮರದಿಂದ ಜಿಗಿದು ಅಭಿಮಾನಿಯ ಹುಚ್ಚಾಟ- ವಿಡಿಯೋ ವೈರಲ್

    ವಿಜಯ್ ದಳಪತಿ (Vijay Thalapathy) ತಮ್ಮ ರಾಜಕೀಯ ಪಕ್ಷದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆ ರೋಡ್ ಶೋ ನಡೆಸಿದ್ದಾರೆ. ಆಗ ಹುಚ್ಚು ಅಭಿಮಾನಿಯೊಬ್ಬ ವಿಜಯ್‌ನ ನೋಡಲೇಬೇಕು ಅಂತ ಮರದಿಂದ ಜಿಗಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಸಖತ್ ವೈರಲ್ ಆಗ್ತಿದೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ತುಂಬಾ ಕ್ರೂರವಾಗಿ ಸಾಯಿಸಿದ್ದಾರೆ: ಉಗ್ರರ ದಾಳಿ ಬಗ್ಗೆ ರಾಗಿಣಿ ಕಿಡಿ

    ನಿನ್ನೆ (ಏ.26) ಕೊಯಮತ್ತೂರಿನಲ್ಲಿ ವಿಜಯ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ವ್ಯಾನ್ ಮೇಲೆ ನಿಂತು ಜನರ ಕಡೆ ಕೈ ಬೀಸುತ್ತಿದ್ದರು. ಈ ವೇಳೆ, ಓರ್ವ ಅಭಿಮಾನಿ ಮರದಿಂದ ಜಿಗಿದು ವ್ಯಾನ್ ಏರಿದ್ದಾನೆ. ಆತನ ವರ್ತನೆ ಕಂಡು ವಿಜಯ್ ಒಮ್ಮೆ ಶಾಕ್ ಆಗಿದ್ದಾರೆ. ಬಳಿಕ ವಿಜಯ್‌ ತಂಡದವರು, ಆ ಅಭಿಮಾನಿಗೆ ಪಕ್ಷದ ಸ್ಕಾರ್ಫ್ ನೀಡಿ ಸಮಾಧಾನ ಮಾಡಿ ಕಳುಹಿಸಲಾಯಿತು. ಇದನ್ನೂ ಓದಿ:ದೇಶದ ಪರಿಸ್ಥಿತಿ ನೋಡಿದ್ರೆ ಯುದ್ಧ ಮಾಡೋದು ಶ್ರೇಷ್ಠ ಅಲ್ಲ: ವಿನೋದ್ ರಾಜ್

    ಸದ್ಯ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಮುಗಿಸಿ ನಂತರ ಕಂಪ್ಲೀಟ್ ಆಗಿ ರಾಜಕೀಯದಲ್ಲೇ ತೊಡಗಿಸಿಕೊಳ್ಳಲಿದ್ದಾರೆ. ಈ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ಮುಂದಿನ ವರ್ಷ ಜ.9ರಂದು ರಿಲೀಸ್ ಆಗಲಿದೆ.

  • ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದೀರಿ: ವಿಜಯ್‌ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಜಮಾತ್‌

    ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದೀರಿ: ವಿಜಯ್‌ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಜಮಾತ್‌

    ಟ, ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್‌ ದಳಪತಿ (Vijay Thalapathy) ವಿರುದ್ಧ ಅಖಿಲ ಭಾರತ ಮುಸ್ಲಿಂ ಜಮಾತ್‌ ಫತ್ವಾ (Fatwa) ಹೊರಡಿಸಿದೆ. ಮುಸ್ಲಿಂ ಸಮುದಾಯದ ಯಾರು ಕೂಡ ವಿಜಯ್‌ ಜೊತೆ ನಿಲ್ಲದಂತೆ ಮನವಿ ಮಾಡಿಕೊಂಡಿದೆ.

    ಮುಸ್ಲಿಮರನ್ನು ವಿಜಯ್ ನಕಾರಾತ್ಮಕವಾಗಿ ಬಿಂಬಿಸಿದ್ದಾರೆ. ಜೂಜುಕೋರರು ಮತ್ತು ಮದ್ಯ ಗ್ರಾಹಕರನ್ನು ತಮ್ಮ ಇಫ್ತಾರ್ ಕೂಟಕ್ಕೆ ಆಹ್ವಾನಿಸಿದ್ದರಿಂದ ಫತ್ವಾ ಹೊರಡಿಸಲಾಗಿದೆ ಎಂದು ಎಐಎಂಜೆ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಬರೇಲ್ವಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ನಟಿಸಲು ಹಲವು ಕಥೆಗಳನ್ನು ಕೇಳಿದ್ದೆ, ಯಾವುದು ಇಷ್ಟವಾಗಿಲ್ಲ: ಪೂಜಾ ಹೆಗ್ಡೆ

    ನಟ ವಿಜಯ್‌ ರಾಜಕೀಯ ಪಕ್ಷವನ್ನು ರಚಿಸಿದ್ದಾರೆ. ಮುಸ್ಲಿಮರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದಾರೆ. ಆದರೆ, ಅವರು ತಮ್ಮ ಚಲನಚಿತ್ರಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದನೆ ಹರಡುವವರಂತೆ ನಕಾರಾತ್ಮಕ ರೀತಿಯಲ್ಲಿ ಬಿಂಬಿಸಿದ್ದರು ಎಂದು ರಜ್ವಿ ಆರೋಪಿಸಿದ್ದಾರೆ.

    ಅವರು ಈಚೆಗೆ ಆಯೋಜಿಸಿದ್ದ ಇಫ್ತಾರ್ ಕೂಟಕ್ಕೆ ಜೂಜುಕೋರರು ಮತ್ತು ಮದ್ಯ ಸೇವಿಸುವವರನ್ನು ಆಹ್ವಾನಿಸಲಾಗಿತ್ತು. ಇದೆಲ್ಲದರಿಂದ ತಮಿಳುನಾಡಿನ ಸುನ್ನಿ ಮುಸ್ಲಿಮರು ಅವರ ಮೇಲೆ ಕೋಪಗೊಂಡಿದ್ದಾರೆ. ಅವರು ಫತ್ವಾ ಕೇಳಿದರು. ಹೀಗಾಗಿ, ಮುಸ್ಲಿಮರು ವಿಜಯ್ ಜೊತೆ ನಿಲ್ಲಬಾರದು ಎಂದು ಉಲ್ಲೇಖಿಸಿ ಫತ್ವಾ ಹೊರಡಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ವೈಯಕ್ತಿಕ ಸವಾಲುಗಳೊಂದಿಗೆ ಹೋರಾಡುತ್ತಿದ್ದೇನೆ: ಫ್ಯಾನ್ಸ್‌ಗೆ ಪತ್ರ ಬರೆದ ನಜ್ರಿಯಾ

    ನಟ, ರಾಜಕಾರಣಿ ವಿಜಯ್ ಅವರಿಗೆ ಮುಸ್ಲಿಮರಿಂದ ಬೆದರಿಕೆ ಇದೆ ಎಂದು ಕೇಂದ್ರದಿಂದ ವೈ-ಭದ್ರತೆ ಕೋರಲಾಗಿದೆಯೆಂದು ಪ್ರತಿಸ್ಪರ್ಧಿಗಳು ಆರೋಪಿಸಿದ್ದರು. ಇದರ ಬೆನ್ನಲ್ಲೇ ವಿವಾದ ಭುಗಿಲೆದ್ದಿತ್ತು.

    ವಿಜಯ್ ತಮ್ಮ ‘ಕಥಿ’ ಮತ್ತು ‘ಬೀಸ್ಟ್’ ಚಿತ್ರಗಳಲ್ಲಿ ಮುಸ್ಲಿಮರನ್ನು ನಕಾರಾತ್ಮಕವಾಗಿ ತೋರಿಸಿದ್ದಾರೆ. ಆದ್ದರಿಂದ, ನಟನಿಗೆ ಮುಸ್ಲಿಮರಿಂದ ಬೆದರಿಕೆ ಬರಬಹುದು ಎಂದು ವಿಜಯ್ ಮತ್ತು ಟಿವಿಕೆ, ಗೃಹ ಸಚಿವಾಲಯದಿಂದ ರಕ್ಷಣೆ ಕೋರಿದ್ದಾರೆ ಎಂದು ವಿಸಿಕೆ ವಕ್ತಾರ ವನ್ನಿಯರಸು ಹೇಳಿದ್ದರು. ಇದನ್ನೂ ಓದಿ: ಪೀರಿಯಡ್ಸ್ ಬಗ್ಗೆ ಸಮಂತಾ ಓಪನ್ ಟಾಕ್

    ಆದರೆ, ಟಿವಿಕೆ ಮತ್ತು ಮಿತ್ರ ಪಕ್ಷ ತಮಿಳುನಾಡು ಮುಸ್ಲಿಂ ಲೀಗ್ ಈ ಆರೋಪಗಳನ್ನು ನಿರಾಕರಿಸಿದೆ. ಇದು ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಮುಸ್ಲಿಮರನ್ನು ಟಿವಿಕೆಯಿಂದ ದೂರವಿಡಲು ಮಾಡಿದ ತಂತ್ರವಾಗಿದೆ ಎಂದು ಆರೋಪಿಸಿದೆ.

  • 2026ರ ಸಂಕ್ರಾಂತಿಯಂದು ರಿಲೀಸ್‌ ಆಗಲಿದೆ ವಿಜಯ್‌ ನಟನೆಯ ಕೊನೆಯ ಸಿನಿಮಾ

    2026ರ ಸಂಕ್ರಾಂತಿಯಂದು ರಿಲೀಸ್‌ ಆಗಲಿದೆ ವಿಜಯ್‌ ನಟನೆಯ ಕೊನೆಯ ಸಿನಿಮಾ

    ಮಿಳು ನಟ ವಿಜಯ್ (Vijay) ನಟನೆಯ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ರಿಲೀಸ್ ಡೇಟ್ ಬಗ್ಗೆ ಅಪ್‌ಡೇಟ್ ಸಿಕ್ಕಿದೆ. ಮುಂದಿನ ವರ್ಷ ಸಂಕ್ರಾಂತಿ ಹಬ್ಬದಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಇದನ್ನೂ ಓದಿ:ಮಾ.27ಕ್ಕೆ ಸಂಸತ್ತಿನಲ್ಲಿ `ಛಾವಾ’ ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ

    ಕೊನೆಗೂ ವಿಜಯ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ವಿಜಯ್ ಕೊನೆಯ ಚಿತ್ರ ಮುಂದಿನ ವರ್ಷ ಜನವರಿ 9ರಂದು ರಿಲೀಸ್ ಮಾಡೋದಾಗಿ ಚಿತ್ರತಂಡ ಅಪ್‌ಡೇಟ್‌ ಹಂಚಿಕೊಂಡಿದೆ. ಸಂಕ್ರಾಂತಿ ಹಬ್ಬದ ಸಡಗರದ ನಡುವೆ ವಿಜಯ್‌ ಕೊನೆಯ ಚಿತ್ರದ ಅಬ್ಬರ ಕೂಡ ಇರಲಿದೆ.

     

    View this post on Instagram

     

    A post shared by KVN Productions (@kvn.productions)

    ಈ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ‘ಜನ ನಾಯಗನ್‌’ ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈಗಾಗಲೇ ಚಿತ್ರದ ಪೋಸ್ಟರ್‌ನಿಂದ ಕುತೂಹಲ ಮೂಡಿಸಿದೆ. ‘ಬೀಸ್ಟ್‌’ ಚಿತ್ರದ ನಂತರ ‘ಜನ ನಾಯಗನ್‌’ ಚಿತ್ರದ ಮೂಲಕ 2ನೇ ಬಾರಿ ವಿಜಯ್ ಮತ್ತು ಪೂಜಾ ಹೆಗ್ಡೆ (Pooja Hegde) ಜೊತೆಯಾಗ್ತಿದ್ದಾರೆ.

    ಇನ್ನೂ ಈ ಚಿತ್ರದ ಬಳಿಕ ಮತ್ತೆ ತಾವು ನಟಿಸುವುದಿಲ್ಲ. ರಾಜಕೀಯದಲ್ಲಿ ಇರೋದಾಗಿ ವಿಜಯ್ ಈಗಾಗಲೇ ತಿಳಿಸಿದ್ದಾರೆ. ಹಾಗಾಗಿ ನಟನ ಕೊನೆಯ ಸಿನಿಮಾ ಸಂಭ್ರಮಿಸಲು ಫ್ಯಾನ್ಸ್ ಕಾಯ್ತಿದ್ದಾರೆ.

  • ನನ್ನ ವೃತ್ತಿ, ಸಂಭಾವನೆ ಎಲ್ಲ ಬಿಟ್ಟು ಬಂದಿದ್ದೇನೆ: ವಿಜಯ್ ಪವರ್‌ಫುಲ್ ಸ್ಪೀಚ್

    ನನ್ನ ವೃತ್ತಿ, ಸಂಭಾವನೆ ಎಲ್ಲ ಬಿಟ್ಟು ಬಂದಿದ್ದೇನೆ: ವಿಜಯ್ ಪವರ್‌ಫುಲ್ ಸ್ಪೀಚ್

    ಕಾಲಿವುಡ್ ಸ್ಟಾರ್ ನಟ ವಿಜಯ್ (Vijay Thalapathy) ಅವರು ಬೇಡಿಕೆಯಲ್ಲಿರುವಾಗಲೇ ನಟನೆಗೆ ಗುಡ್ ಬೈ ಹೇಳ್ತಿದ್ದಾರೆ. ಸಿನಿಮಾ ಬಿಟ್ಟು ‘ತಮಿಳಿಗ ವೆಟ್ರಿ ಕಳಗಮ್’ (TVK) ತಮ್ಮದೇ ಸ್ವಂತ ಪಕ್ಷ ಸ್ಥಾಪಿಸಿ ರಾಜಕೀಯದ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಪಕ್ಷದ ಮೊದಲ ರ‍್ಯಾಲಿ ಮಾಡಿದ್ದಾರೆ. 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದ ಈ ರ‍್ಯಾಲಿಯಲ್ಲಿ ವಿಜಯ್ ಪವರ್‌ಫುಲ್ ಆಗಿ ಭಾಷಣ ಮಾಡಿದ್ದಾರೆ. ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.

    ಈ ವೇಳೆ, ನಾನು ನನ್ನ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ತೊರೆದೆ. ನನ್ನ ಸಂಪಾದನೆ ತೊರೆದೆ. ನಾನು ಇಲ್ಲಿ ನಿಮ್ಮ ವಿಜಯ್ ಆಗಿ ಇಲ್ಲಿದ್ದೇನೆ. ನಿಮ್ಮನ್ನು ನಂಬಿ ಬಂದಿದ್ದೇನೆ ಎಂದು ವಿಜಯ್ ಮಾತನಾಡಿದ್ದಾರೆ. ಈ ಮೂಲಕ ಸಿನಿಮಾ ಕೆರಿಯರ್‌ ತೊರೆಯುತ್ತಿರುವ ಕುರಿತು ನಟ ಸ್ಪಷ್ಟನೆ ನೀಡಿದ್ದಾರೆ. ಅವರ ಈ ಪವರ್‌ಫುಲ್ ಸ್ವೀಚ್ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಇದನ್ನೂ ಓದಿ:ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

    ಇನ್ನೂ ಚೆನ್ನೈನಿಂದ ನೂರು ಕಿಲೋ ಮೀಟರ್ ದೂರದಲ್ಲಿರುವ ವಿಲ್ಲುಪುರಂನಲ್ಲಿ ಈ ರ‍್ಯಾಲಿ ನಡೆದಿದೆ. ಸುಮಾರು 5 ಲಕ್ಷ ಮಂದಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ರ‍್ಯಾಲಿ ನಡೆದ ಜಾಗದಲ್ಲಿ ಭರ್ಜರಿ ಟ್ರಾಫಿಕ್ ಜಾಮ್ ಆಗಿತ್ತು.

    ಅಂದಹಾಗೆ, ದಳಪತಿ ವಿಜಯ್ ಕೊನೆಯ ಸಿನಿಮಾಗೆ ಕನ್ನಡದ ಕೆವಿಎನ್ (KVN Productions) ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ.