Tag: ವಿಜಯ್ ಬಾಬು

  • ಕೆ.ಆರ್.ಜಿ ಪಾಲಾಯ್ತು ಮಲಯಾಳಂ ‘ವಾಲಟ್ಟಿ’ ಸಿನಿಮಾ ರೈಟ್ಸ್

    ಕೆ.ಆರ್.ಜಿ ಪಾಲಾಯ್ತು ಮಲಯಾಳಂ ‘ವಾಲಟ್ಟಿ’ ಸಿನಿಮಾ ರೈಟ್ಸ್

    ಲಯಾಳಂನಲ್ಲಿ (Malayalam) ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ (Valatty). ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು.ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಇಂದು (ಜುಲೈ 10) ವಾಲಟ್ಟಿ – ಎ ಟೀಲ್ ಆಫ್ ಟೇಲ್ಸ್ ಸಿನೆಮಾದ ಟ್ರೈಲರ್ ಬಿಡುಗಡೆ ಮಾಡಿದೆ.

    ಸಾಕು ನಾಯಿಗಳ ಬಗ್ಗೆ ತಯಾರಾಗಿರುವ ಈ ಅದ್ಭುತ ಚಿತ್ರದಲ್ಲಿ ಹೃದಯ ಬೆಚ್ಚಗಾಗಿಸುವ ಎಲಿಮೆಂಟ್ಸ್ ತುಂಬಿವೆ. ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ, ಇದರಲ್ಲಿ ಒಟ್ಟು 9 ನಾಯಿಗಳು ಇದ್ದು, ಸತತವಾಗಿ 2 ವರ್ಷ ಆಕ್ಟಿಂಗ್ ತರಬೇತಿ ಪಡೆದಿವೆ. ನಾಯಿಗಳನ್ನು ಒಳಗೊಂಡ ಈ ಚಿತ್ರದಲ್ಲಿ ಅಮೋಘವಾದ ಸಾಹಸಮಯ ದೃಶ್ಯಗಳನ್ನೂ ನೋಡಬಹುದು.

    ಈಗಾಗಲೇ ಟ್ರೈಲರ್ ಬಿಡುಗಡೆಯಾಗಿದ್ದು ಮೇಕಿಂಗ್ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು ಪ್ರೇಕ್ಷಕರು ಡೈಲಾಗ್ಸ್ ಗೆ ಫಿದಾ ಆಗಿದ್ದಾರೆ. ವಾಲಟ್ಟಿ ಕನ್ನಡ ಡೈಲಾಗ್ ಡಬ್ಬಿಂಗ್ ಜವಾಬ್ದಾರಿಯನ್ನು ರತ್ನನ್ ಪ್ರಪಂಚ ಸಿನೆಮಾದ ನಿರ್ದೇಶಕ ರೋಹಿತ್ ಪಡಕ್ಕಿ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಇದನ್ನೂ ಓದಿ:ಪವನ್ ಒಡೆಯರ್ ನಿರ್ದೇಶನದ ಬಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್

    ಈಗಾಗಲೇ ಅಂಗಾಮಲಿ ಡೈರೀಸ್ ಹಾಗೂ ಹೋಮ್ ಎಂಬ ವಿಭಿನ್ನ ಸಿನೆಮಾಗಳನ್ನು ಮಾಡಿ ಹೊಸ ರೀತಿಯ ಸಿನಿಮಾಗಳಿಗೆ ಬುನಾದಿ ಹಾಡಿದ್ದ ವಿಜಯ್ ಬಾಬುರವರು ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್ ಚಿತ್ರವನ್ನು ಮಲಯಾಳಂನಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ.

     

    ನಿರ್ದೇಶಕ ದೇವನ್ (Devan) ಆಕ್ಷನ್ ಕಟ್ ಹೇಳಿರುವ ಚೊಚ್ಚಲ ಚಿತ್ರ ಇದಾಗಿದೆ. ‘ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್’ ಚಿತ್ರವು ಜುಲೈ 14 ರಂದು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ. ಜುಲೈ 21 ರಂದು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರ ಪ್ರಪಂಚದಾದ್ಯಂತ ಬಿಡುಗಡೆಗೊಳ್ಳಲಿದ್ದು, ಈ ಸಿನಿಮಾವನ್ನು ಕನ್ನಡದ ವಿತರಣಾ ಸಂಸ್ಥೆಯಾದ ಕೆಆರ್‌ಜಿ (KRG) ಸ್ಟುಡಿಯೋಸ್ ವಿಶ್ವದಾದ್ಯಂತ ಚಿತ್ರ ಬಿಡುಗಡೆಯ ಹಕ್ಕುಗಳನ್ನು ಪಡೆದುಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯಾಚಾರ ಪ್ರಕರಣ: ಮಾಲಿವುಡ್ ನಟ ವಿಜಯ್ ಬಾಬು ಬಂಧನ

    ಅತ್ಯಾಚಾರ ಪ್ರಕರಣ: ಮಾಲಿವುಡ್ ನಟ ವಿಜಯ್ ಬಾಬು ಬಂಧನ

    ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಲಿವುಡ್ ನಟ ಕಮ್ ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ. ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳ ಪೊಲೀಸರು ಇಂದು ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ.

    ನಟ ವಿಜಯ್ ಬಾಬು ಅವರನ್ನು ಬಂಧಿಸಿರುವ ಪೊಲೀಸರು ಜುಲೈ 3ರವೆರೆಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕಳೆದ ವಾರ ವಿಜಯ್‌ಗೆ ನಿರೀಕ್ಷಣ ಜಾಮೀನು ನೀಡಿತ್ತು. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಯುವನಟಿಯ ಫೋಟೋವನ್ನು ವಿಜಯ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇದರ ವಿರುದ್ಧ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:ಅಂಡರ್ ವರ್ಲ್ಡ್ ನಿಂದಾಗಿ ಬಾಲಿವುಡ್ ನಟಿ ಸೋನಾಲಿ ಬೇಂದ್ರೆಗೆ ಹಿನ್ನೆಡೆ

    ಇದೀಗ ಸೋಮವಾರ ಜುಲೈ 3ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿಚಾರಣೆ ನಡೆಸಲು ತನಿಖಾ ತಂಡಕ್ಕೆ ವಿಚಾರಣೆಗೆ ಅನುಮತಿ ನೀಡಲಾಗಿದೆ. ಇನ್ನು ವಿಚಾರಣೆಯ ನಂತರ ಅಸಲಿ ಸತ್ಯವೇನು ಎಂಬುದನ್ನ ಕಾದುನೋಡಬೇಕಿದೆ.
    Live Tv

  • ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ನಟ ವಿಜಯ್ ಬಾಬು ಪಾಸ್‌ಪೋರ್ಟ್ ಸೀಜ್

    ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ನಟ ವಿಜಯ್ ಬಾಬು ಪಾಸ್‌ಪೋರ್ಟ್ ಸೀಜ್

    ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರ ಪಾಸ್‌ಪೋರ್ಟ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮುಟ್ಟುಗೋಲು ಹಾಕಿದೆ. ಪಾಸ್‌ಪೋರ್ಟ್ ಕೂಡ ಜಪ್ತಿ ಆಗಿರುವುದರಿಂದ ವಿಜಯ್ ಬಾಬು ಅವರ ವೀಸಾ ಕೂಡ ರದ್ದಾಗಲಿದೆ ಎಂದು ಕೊಚ್ಚಿ ನಗರದ ಪೊಲೀಸ್ ಆಯುಕ್ತ ಸಿ.ಎಚ್ ನಾಗರಾಜು ತಿಳಿಸಿದ್ದಾರೆ.

    ಮಾಜಿ ಸಹೋದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ನಟ ವಿಜಯ್ ಬಾಬು ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಕೊಚ್ಚಿ ನಗರ ಪೊಲೀಸರ ಮನವಿಯ ಮೇರೆಗೆ ಆರೋಪಿ ವಿಜಯ್ ಬಾಬು ಅವರ ಪಾಸ್‌ಪೋರ್ಟ್ ಅನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಪ್ತಿ ಮಾಡಲಾಗಿದೆ. ವಿಜಯ್ ಬಾಬು ಹೆಸರಿನಲ್ಲಿರುವ ಎಲ್ಲಾ ದೇಶದ ವೀಸಾಗಳು ಈಗ ಅಮಾನ್ಯವಾಗಿದೆ. ಅವರು ಬೇರೆ ದೇಶಕ್ಕೆ ಹೋಗುವ ಸೂಚನೆಯಿದ್ದು, ವಿಜಯ್ ವಿರುದ್ಧ ನ್ಯಾಯಾಲಯದ ವಾರೆಂಟ್ ಇದೆ ಎಂದು ತಿಳಿದು ಬಂದಿದೆ. ಮಲಯಾಳಂ ನಟ ವಿಜಯ್ ಬಾಬು ಪಾಸ್‌ಪೋರ್ಟ್ ಜಪ್ತಿಯ ಹಿನ್ನೆಲೆ ಮೇ.24 ರಂದು ವಿಜಯ್ ಬಾಬು ಕಚೇರಿಗೆ ಹಾಜರಾಗದಿದ್ದರೆ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

    ಈ ಹಿಂದೆ ಏಪ್ರಿಲ್ 22ರಂದು ವಿಜಯ್ ಬಾಬು ವಿರುದ್ಧ ದಕ್ಷಿಣ ಎರ್ನಾಕುಲಂ ಪೊಲೀಸರು ಮಹಿಳೆಯೊಬ್ಬರು ನೀಡಿರುವ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಟ, ನಿರ್ಮಾಪಕ ವಿಜಯ್ ಬಾಬು ಸಿನಿಮಾಗಳಲ್ಲಿ ಪಾತ್ರ ಕೊಡುವ ನೆಪದಲ್ಲಿ ಮಹಿಳೆಯ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಜತೆ ಫೇಸ್‌ಬುಕ್ ಲೈವ್‌ನಲ್ಲಿ ಮಹಿಳೆಯ ಹೆಸರನ್ನು ಬಹಿರಂಗಪಡಿಸಿದ್ದ ಕಾರಣ ವಿಜಯ್ ಬಾಬು ಮೇಲೆ ಮತ್ತೊಂದು ದೂರು ದಾಖಲಾಗಿತ್ತು.

  • ಬಲವಂತದ ಕಿಸ್ : ಮಲಯಾಳಂ ಖ್ಯಾತ ನಟ ವಿಜಯ್ ವಿರುದ್ಧ ಮತ್ತೊಂದು ದೂರು

    ಬಲವಂತದ ಕಿಸ್ : ಮಲಯಾಳಂ ಖ್ಯಾತ ನಟ ವಿಜಯ್ ವಿರುದ್ಧ ಮತ್ತೊಂದು ದೂರು

    ಗಾಗಲೇ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಎದುರಿಸುತ್ತಿರುವ ಮಲಯಾಳಂ ಖ್ಯಾತ ನಟ ಕಂ ನಿರ್ಮಾಪಕ ವಿಜಯ್ ಬಾಬು ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕೆಲಸದ ವೇಳೆ ವಿಜಯ್ ನನಗೆ ಬಲವಂತವಾಗಿ ಕಿಸ್ ಮಾಡಲು ಮುಂದಾದ ಎಂದು ಮಹಿಳೆಯೊಬ್ಬರು ಬಹಿರಂಗವಾಗಿ ಮಾತನಾಡಿದ್ದಾರೆ. ಹೀಗಾಗಿ ವಿಜಯ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ವಿಜಯ್ ಬಾಬು ಯಾವಾಗಲೂ ವಿಪರೀತ ಕುಡಿಯುತ್ತಾರೆ. ಅಂದು ನನಗೂ ಅವರು ಕುಡಿಯುವಂತೆ ಆಫರ್ ಮಾಡಿದರು. ನಾನು ಒಪ್ಪಲಿಲ್ಲ. ಅವರು ಮಾತ್ರ ಕಂಟ್ರೋಲ್ ಗೆ ಸಿಗದಷ್ಟು ಕುಡಿದಿದ್ದರು. ಏಕಾಏಕಿ ಮುತ್ತಿಕ್ಕಲು ಬಂದರು. ನಾನು ಅವರನ್ನು ದೂರ ತಳ್ಳಿದೆ. ಕೇವಲ ಒಂದೇ ಒಂದು ಕಿಸ್ ಎಂದು ಬೇಡಿಕೆ ಇಟ್ಟರು. ನಾನು ನಿರಾಕರಿಸಿ ಅಲ್ಲಿಂದ ತಪ್ಪಿಸಿಕೊಂಡು ಬಂದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ವಿಜಯ್ ಬಾಬು, ಈವರೆಗೂ ಪೊಲೀಸರಿಗೆ ಸಿಕ್ಕಿಲ್ಲ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈವರೆಗೂ ಅವರನ್ನು ಬಂಧಿಸದೇ ಇರುವುದಕ್ಕೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ. ಎರ್ನಾಕುಲಂ ಪೊಲೀಸ್ ವಿರುದ್ಧ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.  ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿದ್ದ ವಿಜಯ್ ಬಾಬು, ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್ ನಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

  • ಸಿನಿಮಾದಲ್ಲಿ ಅವಕಾಶ ಕೊಡಿಸೋ ನೆಪದಲ್ಲಿ ಲೈಂಗಿಕ ದೌರ್ಜನ್ಯ – ನಟ ವಿಜಯ್ ಬಾಬು ವಿರುದ್ಧ ಪ್ರಕರಣ ದಾಖಲು

    ಸಿನಿಮಾದಲ್ಲಿ ಅವಕಾಶ ಕೊಡಿಸೋ ನೆಪದಲ್ಲಿ ಲೈಂಗಿಕ ದೌರ್ಜನ್ಯ – ನಟ ವಿಜಯ್ ಬಾಬು ವಿರುದ್ಧ ಪ್ರಕರಣ ದಾಖಲು

    ತಿರುವನಂತಪುರಂ: ಮಲಯಾಳಂನ ಮತ್ತೋರ್ವ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್‍ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಇದನ್ನೂ ಓದಿ: ಆಫ್‌ಸ್ಕ್ರೀನ್‌ನಲ್ಲಿ ಹೆಂಡತಿಗೆ ಮುತ್ತಿಟ್ಟ ಯಶ್‌

    ಯುವತಿ ಕೋಝಿಕೋಡ್ ನಿವಾಸಿಯಾಗಿದ್ದು, ವಿಜಯ್ ಬಾಬು ವಿರುದ್ಧ ಅತ್ಯಾಚಾರ ಹಾಗೂ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದರೂ, ಇದುವರೆಗೂ ಪೊಲೀಸರು ವಿಜಯ್ ಬಾಬುವನ್ನು ಕರೆಸಿ ವಿಚಾರಣೆ ನಡೆಸಿಲ್ಲ. ಬದಲಾಗಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಇದು ಗಂಭೀರ ಪ್ರಕರಣವಾಗಿದ್ದರೂ ಇದುವರೆಗೂ ನಟನನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಫ್ರೈಡೇ ಫಿಲ್ಮ್ ಹೌಸ್ ಸಿನಿಮಾ ನಿರ್ಮಾಣ ಸಂಸ್ಥೆ ಸ್ಥಾಪಕರಾಗಿರುವ ವಿಜಯ್ ಬಾಬು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದಾರೆ. 1983ರಲ್ಲಿ ಬಾಲ ನಟನಾಗಿ ಮಲೆಯಾಳಂ ಸಿನಿಮಾಗೆ ಎಂಟ್ರಿಕೊಟ್ಟ ವಿಜಯ್ ಬಾಬು ಸದ್ಯ ಬಾರಿ ಬೇಡಿಕೆಯ ನಟನಾಗಿ ಹೊರಹೊಮ್ಮಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಪರಾಗ್ ಸ್ಫೋಟಕ ಆಟ – ಆರ್‌ಆರ್‌ಗೆ 29 ರನ್‍ಗಳ ಜಯ, ಮತ್ತೆ ಕೊಹ್ಲಿ ವಿಫಲ

    ಪಿಲಿಪ್ಸ್ ಆ್ಯಂಡ್ ಮಂಕಿ ಪೆನ್ ಅನ್ನೋ ಚಿತ್ರ ನಿರ್ಮಿಸುವ ಮೂಲಕ ವಿಜಯ್ ಬಾಬು ಕೇರಳದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದರು. ಈ ಚಿತ್ರಕ್ಕೆ ಕೇರಳ ರಾಜ್ಯ ಮಕ್ಕಳ ಅತ್ಯುತ್ತಮ ಚಿತ್ರ(ನಿರ್ಮಾಪಕ) ಪ್ರಶಸ್ತಿಯನ್ನು ಪಡೆದಿದ್ದಾರೆ.