Tag: ವಿಜಯ್ ಭಾರ್ಗವ್

  • ‘ಪ್ರಜಾರಾಜ್ಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

    ‘ಪ್ರಜಾರಾಜ್ಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

    ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.  ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ದೇವರಾಜ್ ಹಾರೈಸಿದರು.

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ. ನಮ್ಮ ತಾತಂದಿರ ಕಾಲದಲ್ಲಿ ಸ್ವಾತಂತ್ರ್ಯ ಬಂದ ರಜತ ಮಹೋತ್ಸವ ಆಚರಿಸಿದರು. ನಮ್ಮ ತಂದೆಯ ಕಾಲದವರು ಸುವರ್ಣ ಮಹೋತ್ಸವ ಆಚರಣೆ ಮಾಡಿದರು. ನಾವು ಈಗ ‍ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಇಷ್ಟು ವರ್ಷವಾದರೂ ನಾವು ಯೋಚಿಸುವುದು ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಅಂತ? ಆದರೆ ನಮಗೆ ಬೇಕಾದ ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ನಾವು ಯೋಚಿಸಿಯೇ ಇಲ್ಲ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿರುವುದು ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ಯೋಚಿಸಿ ಎಂದು.  ನಾವು ಅದರ ಬಗ್ಗೆ ಯೋಚಸುತ್ತಲೇ ಇಲ್ಲ. ಎಂಬ ಪ್ರಧಾನ ಅಂಶದೊಂದಿಗೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ನೋಡಿ, ದೇಶದ ಪ್ರಜೆಗಳಾಗಿ ನಮ್ಮ ಕರ್ತವ್ಯವೇನು? ಎಂದು ಎಲ್ಲರೂ ತಿಳಿಯಬಹುದು ಎಂದು ನಿರ್ಮಾಪಕ ಹಾಗು ನಟ ವರದರಾಜು ಚಿತ್ರದ ಕುರಿತು ಮಾಹಿತಿ ನೀಡಿದರು.

    ಉತ್ತಮ ಕಥೆಯುಳ್ಳ ಚಿತ್ರ, ಎಲ್ಲರ ಸಹಕಾರದಿಂದ ಉತ್ತಮವಾಗಿ ಬಂದಿದೆ. ನಾನು ಈ ಚಿತ್ರದಲ್ಲಿ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ – ನಾಯಕ ವಿಜಯ್ ಭಾರ್ಗವ. ಚಿತ್ರದಲ್ಲಿ ಐದು ಹಾಡುಗಳಿದೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ವಿಜಯ್ ಭಾರ್ಗವ  ಬರೆದಿರುವ ಹಾಡುಗಳನ್ನು ರಿಯಲ್ ಸ್ಟಾರ್ ಉಪೇಂದ್ರ, ವಿಜಯ್ ಪ್ರಕಾಶ್ ಮುಂತಾದ ಖ್ಯಾತ ಗಾಯಕರು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹೇಳಿದರು. ಇದನ್ನೂ ಓದಿ: ಸಂದೀಪ್ ಕಿಶನ್ ಜೊತೆ ʻಸೂರ್ಯಕಾಂತಿʼ ನಟಿ ರೆಗಿನಾ ಡೇಟಿಂಗ್

    ಚಿತ್ರದಲ್ಲಿ ನಟಿಸಿರುವ ದಿವ್ಯ, ಮೀಸೆ ಪ್ರಕಾಶ್, ಎಸ್ಕಾರ್ಟ್ ಶ್ರೀನಿವಾಸ್ , ಚಿಕ್ಕ ಹೆಜ್ಜಾಜಿ‌ ಮಹದೇವ್, ಅಮೂಲ್ಯ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ದೇಶಕ ಮಹೇಶ್ ಕುಮಾರ್, ಒಕ್ಕಲಿಗ ಸಂಘದ ನಿರ್ದೇಶಕರಾದ ಡಿ.ಕೆ.ರಮೇಶ್, ನಿರ್ಮಾಣ ನಿರ್ವಾಹಕ ರವಿಶಂಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ‘ಪ್ರಜಾರಾಜ್ಯ’ ಸಿನಿಮಾ ಮೂಲಕ ಪ್ರಜಾಪ್ರಭುತ್ವದ ಅರಿವು

    ‘ಪ್ರಜಾರಾಜ್ಯ’ ಸಿನಿಮಾ ಮೂಲಕ ಪ್ರಜಾಪ್ರಭುತ್ವದ ಅರಿವು

    ವೀರೇನ್ ಕ್ರಿಯೇಷನ್ಸ್ ಲಾಂಛನದಲ್ಲಿ ಡಾ.ವರದರಾಜು ಡಿ.ಎನ್ ನಿರ್ಮಿಸಿರುವ, ವಿಜಯ್ ಭಾರ್ಗವ್ ನಿರ್ದೇಶಿಸಿರುವ ಚಿತ್ರ “ಪ್ರಜಾರಾಜ್ಯ”. ಇತ್ತೀಚೆಗೆ ಈ ಚಿತ್ರದ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ವಿವರಣೆ ನೀಡಿದರು. ನಾನು ವೈದ್ಯ. ನರರೋಗ ತಜ್ಞನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಸಮಾಜದ ಕೆಲವು ವಿಷಯಗಳು ನನ್ನನ್ನು ಚಿತ್ರ ಮಾಡಲು ಪ್ರೇರೇಪಿಸಿತು. ಈ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಉತ್ತಮವಾದ ಶಿಕ್ಷಣ ಹಾಗೂ ಆರೋಗ್ಯ ಉಚಿತವಾಗಿ ಸಿಗಬೇಕು. ಅದನ್ನು  ಕೇಳುವ ಹಕ್ಕು ನಮಗಿದೆ.  ಏಕೆಂದರೆ ನಾವು ಸರ್ಕಾರಕ್ಕೆ ತೆರಿಗೆ ಕಟ್ಟಿರುತ್ತೇವೆ. ಶಿಕ್ಷಣ ವ್ಯವಸ್ಥೆ, ಆರೋಗ್ಯ ಸಮಸ್ಯೆ ಹಾಗೂ ರೈತರ ಕಷ್ಟಕಾರ್ಪಣ್ಯಗಳ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಪೇಂದ್ರ ಅವರ “ಉಪೇಂದ್ರ” ಚಿತ್ರ ನನಗೆ ಸ್ಪೂರ್ತಿ. ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಅಡಿಬರಹ ಈ ಚಿತ್ರಕ್ಕಿದೆ.

    ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ಮಾಣ ಮಾಡಿದ್ದೇನೆ. ವಿಜಯ್ ಭಾರ್ಗವ್ ನಿರ್ದೇಶನ ಮಾಡಿದ್ದಾರೆ. ಹಿರಿಯ ನಟರಾದ ದೇವರಾಜ್, ನಾಗಾಭರಣ, ಸುಧಾರಾಣಿ, ಅಚ್ಯತಕುಮಾರ್ ತಬಲಾನಾಣಿ, ಸುಧಾ ಬೆಳವಾಡಿ, ಸಂಪತ್ ಮೈತ್ರೇಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಕೂಡ ನಟಿಸಿದ್ದೇನೆ. ಇದು ನಾಯಕ ಪ್ರಧಾನ ಚಿತ್ರವಲ್ಲ. ಚಿತ್ರ ನೋಡಿದ ಪ್ರೇಕ್ಷಕನಿಗೆ ಈ ಚಿತ್ರ ಇಷ್ಟವಾಗಿ, ಆತನಿಗೆ ಹೌದು, ನಾವು ಈ ರೀತಿ ಬದಲಾಗಬೇಕು ಎನಿಸಿದರೆ ಆತನೇ ನಮ್ಮ ಚಿತ್ರದ ನಾಯಕ ಎಂದು ನಿರ್ಮಾಪಕ ವರದರಾಜ್ “ಪ್ರಜಾರಾಜ್ಯ” ಚಿತ್ರದ ಬಗ್ಗೆ ಸಂಪೂರ್ಣ ವಿವರ ನೀಡಿದರು. ಇದನ್ನೂ ಓದಿ:ಬಿಗ್‌ ಬಾಸ್‌ ಮನೆಯಲ್ಲಿ ಮತ್ತೆ ರೂಪೇಶ್ ರಾಜಣ್ಣ ಕಿರಿಕ್

    ಸರಿಸುಮಾರು ೪೦೦ ಕ್ಕೂ ಅಧಿಕ ಚಿತ್ರಗಳು ವರ್ಷಕ್ಕೆ ಬಿಡುಗಡೆಯಾಗುತ್ತಿದೆ. ನೋಡುಗರಿಗೆ ಬೇಕಾದ ರೀತಿಯಲ್ಲಿ ಸಿನಿಮಾ ಮಾಡುವವರು ಹೆಚ್ಚಾಗಿದ್ದಾರೆ. ಆದರೆ ಸಾಮಾಜಿಕ ಕಳಕಳಿಯಿಟ್ಟುಕೊಂಡು ತಮಗೆ ಅನಿಸಿದ್ದನ್ನು ಸಿನಿಮಾ ಮಾಡಿರುವ ಡಾಕ್ಟರ್ ವರದರಾಜ್ ಅವರ ಧೈರ್ಯ ನಿಜಕ್ಕೂ ಮೆಚ್ಚುವಂತದು. ಅವರಿಗೆ ಹಾಗೂ ತಂಡಕ್ಕೆ ಶುಭವಾಗಲಿ ಎಂದರು ನಾಗಾಭರಣ. ಈ ಚಿತ್ರದಲ್ಲಿ ನನ್ನದು ಆಟೋ ಡ್ರೈವರ್ ಪಾತ್ರ. ನನಗೆ ತಪ್ಪು ಅನಿಸಿದ್ದನ್ನು ನೇರವಾಗಿ ಹೇಳುವ ವ್ಯಕ್ತಿ ಕೂಡ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಟ ತಬಲನಾಣಿ.

    ನನ್ನ ಮೇಲೆ ಭರವಸೆಯಟ್ಟು ಇಂತಹ ಉತ್ತಮ ಕಥೆಯುಳ್ಳ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ದೇಶಕ ವಿಜಯ್ ಭಾರ್ಗವ್. ಚಿತ್ರದಲ್ಲಿ ನಟಿಸಿರುವ ಕೆ.ಜಿ.ಎಫ್ ತಾತ ಎಂದೆ ಖ್ಯಾತರಾಗಿರುವ ಕೃಷ್ಣೋಜಿರಾವ್ ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಗೂ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಹಾಗೂ ನಿರ್ಮಾಣ ನಿರ್ವಾಹಕ ರವಿಶಂಕರ್ ಚಿತ್ರದ ಕುರಿತು ಮಾತನಾಡಿದರು. ಯೋಗರಾಜ್ ಭಟ್ ಹಾಗೂ ವಿ.ನಾಗೇಂದ್ರ ಪ್ರಸಾದ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. “ಕೆ.ಜಿ.ಎಫ್” ಖ್ಯಾತಿಯ ಶ್ರೀಕಾಂತ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ

    Live Tv
    [brid partner=56869869 player=32851 video=960834 autoplay=true]