Tag: ವಿಜಯ್ ಶಂಕರ್

  • 2010 ರಲ್ಲೇ ಸಿಎಂ ಆಗಬೇಕಿತ್ತು, ಆಗ ಅವಕಾಶ ಕೈ ತಪ್ಪಿತ್ತು: ವಿಜಯ್‌ ಶಂಕರ್‌

    2010 ರಲ್ಲೇ ಸಿಎಂ ಆಗಬೇಕಿತ್ತು, ಆಗ ಅವಕಾಶ ಕೈ ತಪ್ಪಿತ್ತು: ವಿಜಯ್‌ ಶಂಕರ್‌

    ಮೈಸೂರು: 2010 ರಲ್ಲೇ ನಾನು ಸಿಎಂ ಆಗಬೇಕಿತ್ತು. ಆಗ ಅವಕಾಶ ಕೈ ತಪ್ಪಿತ್ತು ಎಂದು ಎಂದು ಮಾಜಿ ಸಚಿವ ಸಿ.ಎಚ್.‌ ವಿಜಯಶಂಕರ್ (Vijay Shankar) ಹೇಳಿದ್ದಾರೆ.

    ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಪಬ್ಲಿಕ್‌ ಟಿವಿ ಜೊತೆ ವಿಜಯಶಂಕರ್ ಮಾತನಾಡಿದರು.

    2010 ರಲ್ಲಿ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗ ಅವರು ನನ್ನ ಹೆಸರನ್ನು ಸಿಎಂ ಹುದ್ದೆಗೆ ಶಿಫಾರಸ್ಸು ಮಾಡಿದ್ರು. ಆದರೆ ಆಗ ಆ ಸ್ಥಾನ ಕೈ ತಪ್ಪಿತು.‌14 ವರ್ಷಗಳ ಅಧಿಕಾರದ ವನವಾಸದ ನಂತರ ಈಗ ಪಕ್ಷ ನನಗೆ ದೊಡ್ಡ ಹುದ್ದೆ ನೀಡಿದೆ ಎಂದರು. ಇದನ್ನೂ ಓದಿ: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಮೇಕೆ ಮಾಂಸ?

    ಪಕ್ಷ ಬಿಟ್ಟು ಹೋಗಿ ರಾಜಕೀಯವಾಗಿ ತಪ್ಪು ನಿರ್ಧಾರ ಮಾಡಿದ್ದೆ. ಅದು ರಾಜಕೀಯದಲ್ಲಿ ಸಹಜ ಕೂಡ ಎಂದು ಹೇಳಿದರು.

    ಶನಿವಾರ ವಿಜಯ್‌ ಶಂಕರ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಮೇಘಾಲಯದ (Meghalaya) ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

    1998, 2004 ರಲ್ಲಿ ವಿಜಯ್‌ ಶಂಕರ್‌ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ವಿಜಯ್‌ ಶಂಕರ್‌ ಅವರು ಪ್ರತಾಪ್‌ ಸಿಂಹ ವಿರುದ್ಧ ಸೋತಿದ್ದರು. ಮರಳಿ ಬಿಜೆಪಿಗೆ ಬಂದಿದ್ದ ವಿಜಯ್‌ ಶಂಕರ್‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

     

  • ಮೈಸೂರಿನ ವಿಜಯ್‌ ಶಂಕರ್‌ ಈಗ ಮೇಘಾಲಯದ ರಾಜ್ಯಪಾಲ

    ಮೈಸೂರಿನ ವಿಜಯ್‌ ಶಂಕರ್‌ ಈಗ ಮೇಘಾಲಯದ ರಾಜ್ಯಪಾಲ

    ನವದೆಹಲಿ: ಮೈಸೂರು-ಕೊಡಗು (Mysuru-Kodagu) ಕ್ಷೇತ್ರದ ಮಾಜಿ ಸಂಸದ ಸಿ ಹೆಚ್‌ ವಿಜಯ್‌ ಶಂಕರ್‌ ( CH Vijay Shankar) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಮೇಘಾಲಯದ (Meghalaya) ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

    ಶನಿವಾರ ದ್ರೌಪದಿ ಮುರ್ಮು ಅವರು 3 ರಾಜ್ಯಪಾಲರನ್ನು (Governors) ವರ್ಗಾವಣೆ ಮಾಡಿ 2 ರಾಜ್ಯಪಾಲರಿಗೆ ಹೆಚ್ಚುವರಿ ಹೊಣೆ ನೀಡಿದ್ದಾರೆ.  ಇದನ್ನೂ ಓದಿ: ದೆಹಲಿಯಲ್ಲಿ ಕೋಚಿಂಗ್ ಸೆಂಟರ್‌ಗೆ ನುಗ್ಗಿದ ನೀರು – ಮೂವರು ವಿದ್ಯಾರ್ಥಿಗಳು ದುರ್ಮರಣ

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಆಪ್ತರಾಗಿದ್ದ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ತ್ರಿಪುರಾ ಮಾಜಿ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಅವರು ಛತ್ತೀಸಗಢಕ್ಕೆ ನೇಮಕವಾಗಿದ್ದಾರೆ.

    ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಿದ್ದರೆ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

    ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದ ಆಪ್‌ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಬನ್ವಾರಿಲಾಲ್ ಪುರೋಹಿತ್‌ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ನೇಮಿಸುವುದರ ಜೊತೆಗೆ ಚಂಡೀಗಢದ ಹೊಣೆಯನ್ನು ನೀಡಲಾಗಿದೆ.

    ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರದ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿಯನ್ನು ಸಹ ನೀಡಲಾಗಿದೆ. ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡಲಾಗಿದೆ.

    1998, 2004 ರಲ್ಲಿ ವಿಜಯ್‌ ಶಂಕರ್‌ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ವಿಜಯ್‌ ಶಂಕರ್‌ ಅವರು ಪ್ರತಾಪ್‌ ಸಿಂಹ ವಿರುದ್ಧ ಸೋತಿದ್ದರು. ಮರಳಿ ಬಿಜೆಪಿಗೆ ಬಂದಿದ್ದ ವಿಜಯ್‌ ಶಂಕರ್‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

     

  • IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 -‌ KKRಗೆ 3 ವಿಕೆಟ್‌ಗಳ ರೋಚಕ ಜಯ

    IPL 2023: ಕೊನೆಯ ಓವರ್‌ನಲ್ಲಿ 6, 6, 6, 6, 6 -‌ KKRಗೆ 3 ವಿಕೆಟ್‌ಗಳ ರೋಚಕ ಜಯ

    ಅಹಮದಾಬಾದ್‌: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌ ಸಿಡಿಸಿದ 5 ಭರ್ಜರಿ ಸಿಕ್ಸರ್‌ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌, ಹಾಲಿ ಚಾಂಪಿಯನ್ಸ್‌ ಗುಜರಾತ್‌ ಜೈಂಟ್ಸ್‌ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಕೆಕೆಆರ್‌ ಗೆಲುವಿಗೆ ಕೊನೆಯ ಓವರ್‌ನಲ್ಲಿ 29 ರನ್‌ಗಳ ಅಗತ್ಯವಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಉಮೇಶ್‌ ಯಾದವ್‌ ಮೊದಲ ಎಸೆತದಲ್ಲಿ 1 ರನ್‌ ತೆಗೆದುಕೊಂಡರು. ನಂತರ ಕ್ರೀಸ್‌ಗೆ ಬಂದ ರಿಂಕು ಸಿಂಗ್‌ ಸತತ 5 ಎಸೆತಗಳನ್ನೂ ಭರ್ಜರಿ ಸಿಕ್ಸರ್‌ ಬಾರಿಸಿ ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ದರು. ಈ ಮೂಲಕ ಗೆಲುವಿನ ಹಾದಿಯಲ್ಲಿದ್ದ ಹಾಲಿ ಚಾಂಪಿಯನ್ಸ್‌ ಪಡೆಗೆ ಸೋಲುಣಿಸಿ ಕೆಕೆಆರ್‌ ತಂಡ ಸತತ 2ನೇ ಗೆಲುವು ದಾಖಲಿಸಿತು.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ಅಮೋಘ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 204 ರನ್‌ ಗಳಿಸಿತು. 205 ರನ್‌ ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: RCB ಅಭಿಮಾನಿಗಳೇ ಎಚ್ಚರ – ಬ್ಲ್ಯಾಕ್‌ನಲ್ಲಿ ದುಬಾರಿ ಬೆಲೆಗೆ ಟಿಕೆಟ್ ಖರೀದಿಸಿ ಮೋಸ ಹೋಗದಿರಿ

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಉತ್ತಮ ಶುಭಾರಂಭ ಪಡೆಯುವಲ್ಲಿ ವಿಫಲವಾಯಿತು. ಆದರೂ 3ನೇ ವಿಕೆಟ್‌ಗೆ ಜೊತೆಯಾದ ವೆಂಕಟೇಶ್‌ ಅಯ್ಯರ್‌, ನಾಯಕ ನಿತೀಶ್‌ ರಾಣ ಭರ್ಜರಿ ಬ್ಯಾಟಿಂಗ್‌ ನಡೆಸಿದರು. 3ನೇ ವಿಕೆಟ್‌ ಪತನಕ್ಕೆ ಈ ಜೋಡಿ 55 ಎಸೆತಗಳಲ್ಲಿ 100 ರನ್‌ ಕಲೆಹಾಕಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತ್ತು. ಅಷ್ಟರಲ್ಲೇ ನಿತೀಶ್‌ ರಾಣ 29 ಎಸೆತಗಳಲ್ಲಿ ಭರ್ಜರಿ 45 ರನ್‌ (4 ಬೌಂಡರಿ, 3 ಸಿಕ್ಸರ್‌) ಗಳಿಸಿ ಔಟಾದರು. ಇನ್ನೂ 207.50 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ ಏಕಾಂಗಿ ಹೋರಾಟ ನಡೆಸಿದ ವೆಂಕಟೇಶ್‌ ಅಯ್ಯರ್‌ 40 ಎಸೆತಗಳಲ್ಲಿ ಬರೋಬ್ಬರಿ 83 ರನ್‌ (5 ಸಿಕ್ಸರ್‌, 8 ಬೌಂಡರಿ) ಬಾರಿಸಿ ವಿಕೆಟ್‌ ಒಪ್ಪಿಸಿದರು.

    ಈ ಬೆನ್ನಲ್ಲೇ ಆಂಡ್ರೆ ರಸ್ಸೆಲ್‌, ಸುನೀಲ್‌ ನರೇನ್‌, ಶಾರ್ದೂಲ್‌ ಠಾಕೂರ್‌ ರಶೀದ್‌ ಖಾನ್‌ ಸ್ಪಿನ್‌ ದಾಳಿಗೆ ಮಕಾಡೆ ಮಲಗಿದರು. ಇದರಿಂದ ತಂಡ ಗೆಲುವಿನ ಭರವಸೆ ಕೈಚೆಲ್ಲಿತು. ಆದರೆ ಕ್ರೀಸ್‌ನಲ್ಲಿದ್ದ ರಿಂಕು ಸಿಂಗ್‌ ಕೊನೆಯ ಓವರ್‌ನಲ್ಲಿ ಭರ್ಜರಿ 5 ಸಿಕ್ಸರ್‌ ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. 228.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಿಂಕು ಸಿಂಗ್‌ 21 ಎಸೆತಗಳಲ್ಲಿ 48 ರನ್‌ (6 ಸಿಕ್ಸರ್‌, 1 ಬೌಂಡರಿ) ಬಾರಿಸಿದರೆ, ಉಮೇಶ್‌ ಯಾದವ್‌ 5 ರನ್‌ ಗಳಿಸಿ ಅಜೇಯರಾಗುಳಿದರು.

    ಗುಜರಾತ್‌ ಜೈಂಟ್ಸ್ ಪರ ರಶೀದ್‌ ಖಾನ್‌ 4 ಓವರ್‌ಗಳಲ್ಲಿ 37 ರನ್‌ ನೀಡಿ 3 ಪ್ರಮುಖ ವಿಕೆಟ್‌ ಕಿತ್ತರೆ, ಅಲ್ಝರಿ ಜೋಸೆಫ್‌ 2 ವಿಕೆಟ್‌ ಹಾಗೂ, ಮೊಹಮ್ಮದ್‌ ಶಮಿ, ಜಾಸ್‌ ಲಿಟಲ್‌ ತಲಾ ಒಂದು ವಿಕೆಟ್‌ ಕಬಳಿಸಿ ಮಿಂಚಿದರು. ಇದನ್ನೂ ಓದಿ: ಒಂದೇ ಕೈಯಲ್ಲಿ ಜಡೇಜಾ ಕ್ಯಾಚ್‌ – 10 ವರ್ಷದ ಹಿಂದೆ ʼಸರ್‌ ಜಡೇಜಾʼ ಎಂದಿದ್ದ ಧೋನಿ ಟ್ವೀಟ್‌ ವೈರಲ್‌

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ಪರ ಆರಂಭಿಕ ವೃದ್ಧಿಮಾನ್‌ ಸಹಾ 17 ರನ್‌ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ಕ್ರೀಸ್‌ಗಿಳಿದ ಸಾಯಿ ಸುದರ್ಶನ್‌ ಮತ್ತೊಮ್ಮೆ ಜವಾಬ್ದಾರಿಯುತ ಪ್ರದರ್ಶನ ನೀಡಿ ಗಮನಸೆಳೆದರು. ಸತತ 2ನೇ ಅರ್ಧ ಶತಕ ಸಿಡಿಸಿ ತಂಡ ಬೃಹತ್‌ ಮೊತ್ತ ಪೇರಿಸಲು ನೆರವಾದರು. ಸುದರ್ಶನ್‌ 38 ಎಸೆತಗಳಲ್ಲಿ 53 ರನ್‌ (2 ಸಿಕ್ಸರ್‌, 3 ಬೌಂಡರಿ) ಗಳಿಸಿ ಮಿಂಚಿದರು. ಸುದರ್ಶನ್‌ಗೆ ಉತ್ತಮ ಸಾಥ್ ನೀಡಿದ ಶುಭಮನ್‌ ಗಿಲ್ 39 ರನ್‌ (31 ಎಸೆತ, 5 ಬೌಂಡರಿ) ಗಳಿಸಿ ಔಟಾದರು. ಈ ಬೆನ್ನಲ್ಲೇ ಅಭಿನಮ್ ಮನೋಹರ್ 14 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

    ನಂತರ ಜೊತೆಯಾದ ವಿಜಯ್‌ ಶಂಕರ್‌ ಹಾಗೂ ಡೇವಿಡ್‌ ಮಿಲ್ಲರ್‌ ಜೋಡಿ ಭರ್ಜರಿ ರನ್‌ ಕಲೆಹಾಕಿತು. ಮುರಿಯದ 5ನೇ ವಿಕೆಟ್‌ಗೆ ಈ ಜೋಡಿ ಕೇವಲ 16 ಎಸೆತಗಳಲ್ಲಿ ಭರ್ಜರಿ 51 ರನ್‌ ಸಿಡಿಸಿತ್ತು. ಈ ವೇಳೆ ವಿಜಯ್‌ ಶಂಕರ್‌ 13 ಎಸೆತಗಳಲ್ಲಿ 46 ರನ್‌ ಚಚ್ಚಿದರೆ, ಮಿಲ್ಲರ್‌ 3 ಎಸೆತಗಳಲ್ಲಿ 2 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. 262 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ವಿಜಯ್‌ ಶಂಕರ್‌ 24 ಎಸೆತಗಳಲ್ಲಿ ಸ್ಫೋಟಕ 63 ರನ್‌ (4 ಬೌಂಡರಿ, 5 ಸಿಕ್ಸರ್)‌ ಚಚ್ಚಿ ತಂಡದ ಮೊತ್ತ 200ರ ಗಡಿ ದಾಟಿಸಿದರು.

    ಕೊಲ್ಕತ್ತಾ ನೈಟ್ ರೈಡರ್ಸ್ ಪರ ಸುನಿಲ್ ನರೇನ್‌ 3 ವಿಕೆಟ್ ಕಿತ್ತರೆ, ಸುಯಶ್ ಶರ್ಮಾ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • ಸುದರ್ಶನ್‌ ಫಿಫ್ಟಿ, ಮಿಲ್ಲರ್‌ ಸ್ಫೋಟಕ ಆಟ – ಗುಜರಾತ್‌ಗೆ ಸತತ ಎರಡನೇ ಜಯ

    ಸುದರ್ಶನ್‌ ಫಿಫ್ಟಿ, ಮಿಲ್ಲರ್‌ ಸ್ಫೋಟಕ ಆಟ – ಗುಜರಾತ್‌ಗೆ ಸತತ ಎರಡನೇ ಜಯ

    ನವದೆಹಲಿ: ಸಾಯ್‌ ಸುದರ್ಶನ್‌ (Sai Sudharsan) ಅವರ ಅರ್ಧಶತಕ ಮತ್ತು ಕೊನೆಯಲ್ಲಿ ಡೇವಿಡ್‌ ಮಿಲ್ಲರ್‌ (David Miller) ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧಗುಜರಾತ್‌ ಟೈಟಾನ್ಸ್‌ (Gujarat Titans) 6 ವಿಕೆಟ್‌ಗಳ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 8 ವಿಕೆಟ್‌ ನಷ್ಟಕ್ಕೆ 162 ರನ್‌ ಹೊಡೆಯಿತು. ನಂತರ ಬ್ಯಾಟಿಂಗ್‌ ಮಾಡಿದ ಗುಜರಾತ್‌ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡರೂ ಅಂತಿಮವಾಗಿ 18.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 163 ರನ್‌ ಹೊಡೆದು ಟೂರ್ನಿಯಲ್ಲಿ ಸತತ ಎರಡನೇ ಜಯ ಸಾಧಿಸಿತು.

    54 ರನ್‌ ಗಳಿಗೆ 3 ವಿಕೆಟ್‌ ಕಳೆದುಕೊಂಡಿದ್ದಾಗ ಸಾಯ್‌ ಸುದರ್ಶನ್‌ ಮತ್ತು ವಿಜಯ್‌ ಶಂಕರ್‌ (Vijay Shankar) ತಂಡಕ್ಕೆ ನೆರವಾದರು. ಇಬ್ಬರು 44 ಎಸೆತಗಳಲ್ಲಿ 53 ರನ್‌ ಜೊತೆಯಾಟವಾಡಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ವಿಜಯ್‌ ಶಂಕರ್‌ 29 ರನ್‌(23 ಎಸೆತ, 3 ಬೌಂಡರಿ) ಹೊಡೆದು ಔಟಾದರು. ಇದನ್ನೂ ಓದಿ: ಜಿಯೋ ಸಿನಿಮಾದಲ್ಲಿ ದಾಖಲೆ ಬರೆದ ಧೋನಿಯ ಅವಳಿ ಸಿಕ್ಸರ್

    ಮುರಿಯದ ಐದನೇ ವಿಕೆಟ್‌ಗೆ ಸುದರ್ಶನ್‌ ಮತ್ತು ಡೇವಿಡ್‌ ಮಿಲ್ಲರ್‌ 29 ಎಸೆತಗಳಲ್ಲಿ 56 ರನ್‌ ಚಚ್ಚುವ ಮೂಲಕ ತಂಡಕ್ಕೆ ಜಯವನ್ನು ತಂದುಕೊಟ್ಟರು. ಸುದರ್ಶನ್‌ ಔಟಾಗದೇ 62 ರನ್(‌ 48 ಎಸೆತ, 4 ಬೌಂಡರಿ, 2 ಸಿಕ್ಸರ್‌) ಡೇವಿಡ್‌ ಮಿಲ್ಲರ್‌ ಔಟಾಗದೇ 31 ರನ್‌(16 ಎಸೆತ, 2 ಬೌಂಡರಿ, 2 ಸಿಕ್ಸರ್‌) ಹೊಡೆದರು.

    ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 8.3 ಓವರ್‌ಗಳಲ್ಲಿ 67 ರನ್‌ಗಳಿಗೆ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು. ನಾಯಕ ಡೇವಿಡ್‌ ವಾರ್ನರ್‌ 37 ರನ್‌(32 ಎಸೆತ, 7 ಔಂಡರಿ), ಸರ್ಫರಾಜ್‌ ಖಾನ್‌ 30 ರನ್‌( 34 ಎಸೆತ), ಅಕ್ಷರ್‌ ಪಟೇಲ್‌ 36 ರನ್‌(22 ಎಸೆತ, 2 ಬೌಂಡರಿ, 3 ಸಿಕ್ಸರ್‌) ಅಭಿಷೇಕ್‌ ಪೂರೆಲ್‌ 20 ರನ್‌(11 ಎಸೆತ, 2 ಸಿಕ್ಸರ್‌) ಹೊಡೆದ ಪರಿಣಾಮ ಅಂತಿಮವಾಗಿ ಡೆಲ್ಲಿ ತಂಡ 162 ರನ್‌ ಗಳಿಸಿತು.

    ಮೊಹಮ್ಮದ್‌ ಶಮಿ ಮತ್ತು ರಶೀದ್‌ ಖಾನ್‌ ತಲಾ ಮೂರು ವಿಕೆಟ್‌ ಪಡೆದರೆ ಅಲ್ಜಾರಿ ಜೋಸೆಫ್‌ 2 ವಿಕೆಟ್‌ ಪಡೆದರು.

  • ಟೀಂ ಇಂಡಿಯಾ ಆಲ್‍ರೌಂಡರ್ ವಿಜಯ್ ಶಂಕರ್ ನಿಶ್ಚಿತಾರ್ಥ- ಫೋಟೋ ವೈರಲ್

    ಟೀಂ ಇಂಡಿಯಾ ಆಲ್‍ರೌಂಡರ್ ವಿಜಯ್ ಶಂಕರ್ ನಿಶ್ಚಿತಾರ್ಥ- ಫೋಟೋ ವೈರಲ್

    ಚೆನ್ನೈ: ಟೀಂ ಇಂಡಿಯಾ ಆಲ್‍ರೌಂಡರ್ 29 ವರ್ಷದ ವಿಜಯ್ ಶಂಕರ್ ಗುರುವಾರ ತಮ್ಮ ಗೆಳತಿ ವೈಶಾಲಿ ವಿಶ್ವೇಶ್ವರನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್‍ಸ್ಟಾದಲ್ಲಿ ನಿಶ್ಚಿತಾರ್ಥದ ಫೋಟೋ ಶೇರ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

    ಟೀಂ ಇಂಡಿಯಾದ ಹಲವು ಆಟಗಾರರು ಸೇರಿದಂತೆ ಅಭಿಮಾನಿಗಳು ವಿಜಯ್ ಶಂಕರ್ ಅವರಿಗೆ ಶುಭ ಕೋರಿದ್ದಾರೆ. 2019ರ ವಿಶ್ವ ತಂಡದ ಆಟಗಾರನಾಗಿದ್ದ ವಿಜಯ್ ಶಂಕರ್ ಗೆ ಕೆಎಲ್ ರಾಹುಲ್, ಚಹಲ್, ಕರುಣ್ ನಾಯರ್ ಸೇರಿದಂತೆ ಹಲವು ಆಟಗಾರರು ಅಭಿನಂದನೆ ತಿಳಿಸಿದ್ದಾರೆ.

     

    View this post on Instagram

     

    ???? PC – @ne_pictures_wedding

    A post shared by Vijay Shankar (@vijay_41) on

    ವಿಜಯ್ ಶಂಕರ್ ಟೀಂ ಇಂಡಿಯಾ ಪರ ಇದುವರೆಗೂ 12 ಏಕದಿನ, 9 ಟಿ20 ಪಂದ್ಯಗಳನ್ನಾಡಿದ್ದು, 2018ರಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಸದ್ಯ ಯುಎಇನಲ್ಲಿ ನಡೆಯಲಿರುವ ಐಪಿಎಲ್ 2020 ಟೂರ್ನಿಯಲ್ಲಿ ಹೈದರಾಬಾದ್ ತಂಡದ ಕಣಕ್ಕಿಳಿಯುತ್ತಿದ್ದಾರೆ.

    2019ರ ವಿಶ್ವಕಪ್ ತಂಡದಲ್ಲಿ ಅಚ್ಚರಿ ಎಂಬಂತೆ ಸ್ಥಾನ ಪಡೆದ ವಿಜಯ್ ಶಂಕರ್ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ತೋರಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಅರ್ಧದಲ್ಲೇ ಹಿಂದಿರುಗಿದ್ದರು. ಕಳೆದ ವರ್ಷದ ತಮಿಳುನಾಡು ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ವಿಜಯ್ ಶಂಕರ್, ಐಪಿಎಲ್ ಟೂರ್ನಿಯಲ್ಲಿ ತಮ್ಮ ಫಾರ್ಮ್ ನಿರೂಪಿಸಿ ಮತ್ತೆ ಆಯ್ಕೆ ಸಮಿತಿಯ ಗಮನ ಸೆಳೆಯುವ ಉದ್ದೇಶವನ್ನು ಹೊಂದಿದ್ದಾರೆ.

  • ವಿಜಯ್‌ ಶಂಕರ್‌ ಆತ್ಮಹತ್ಯೆ – ಸೂಸೈಡ್‌ಗೆ ಕಾರಣ ಏನು?

    ವಿಜಯ್‌ ಶಂಕರ್‌ ಆತ್ಮಹತ್ಯೆ – ಸೂಸೈಡ್‌ಗೆ ಕಾರಣ ಏನು?

    ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಎನ್ನವುದು ತಿಳಿದಿಲ್ಲ. ಆದರೆ ಐಎಂಎ ಹಗರಣ ಬೆಳಕಿಗೆ ಬಂದ ನಂತರ ಅವರು ಮಾನಸಿಕವಾಗಿ ನೊಂದಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

    ಐಎಂಎ ಹಗರಣದ ಸಂಬಂಧ ಸಿಬಿಐ ವಿಜಯ್ ಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡುವಂತೆ ಜೂನ್ 6 ರಂದು ಸಿಬಿಐ ಸರ್ಕಾರಕ್ಕೆ ಪತ್ರ ಬರೆದಿತ್ತು. ತನಿಖೆಯಲ್ಲಿ ಸಾಕಷ್ಟು ಮಾಹಿತಿಗಳು ಹೊರ ಬಂದಿವೆ. ಆರೋಪಿ ಸ್ಥಾನದಲ್ಲಿ ಇರುವ ವಿಜಯ್ ಶಂಕರ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಬೇಕು. ಅಲ್ಲದೆ ಆರೋಪಿ ವಿಜಯ್ ಶಂಕರ್‌ಗೆ ಸರ್ಕಾರ ಯಾವುದೇ ಸಹಾಯ ಮಾಡಬಾರದು ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಸಿಬಿಐ ಎಸ್‍ಪಿ ಶೇಪಸ್ ಕಲ್ಯಾಣ್ ಪತ್ರ ಬರೆದಿದ್ದರು.

    ಎಸ್‌ಪಿ ಬರೆದ ಪತ್ರಕ್ಕೆ ಜೂನ್‌ 8 ರಂದೇ ವಿಜಯ್‌ ಭಾಸ್ಕರ್‌ ಅನುಮತಿ ನೀಡಿದ್ದರು. ಇಲಾಖಾ ತನಿಖೆ ಮಾಡಲು ಸೂಕ್ತ ಪ್ರಕರಣ. ಈ ಸಂಬಂಧ ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಇಲಾಖೆಗೆ ಪತ್ರವನ್ನು ರವಾನಿಸಲಾಗಿತ್ತು.

    ಇಲಾಖಾ ಮಟ್ಟದ ತನಿಖೆಗೆ ಸರ್ಕಾರದ ಗ್ರೀನ್ ಸಿಗ್ನಲ್ ನೀಡಿದ್ದು ನಿವೃತ್ತಿಯ ಅಂಚಿನಲ್ಲಿ ಇದ್ದ ವಿಜಯ್ ಶಂಕರ್ ಗೆ ಇದು ಬಿಸಿ ತುಪ್ಪ ಆಗಿತ್ತು. ನಿವೃತ್ತಿಯ ಸಂದರ್ಭದಲ್ಲಿ ವಿಚಾರಣೆ ಮಾತ್ರ ಅಲ್ಲದೇ ಇಲಾಖೆ ಆರಂಭವಾದರೆ ಬಹಳ ಕಷ್ಟ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    ವಿಶೇಷ ತನಿಖಾ ತಂಡ ಬಂಧಿಸಿ ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದೇ ಇದ್ದಾಗ ವಿಜಯ್‌ ಶಂಕರ್‌ ಕಣ್ಣೀರಿಟ್ಟಿದ್ದರು. ಜಿಲ್ಲಾಧಿಕಾರಿಯಾಗಿದ್ದಾಗ ಅಕ್ರಮ ಒತ್ತುವರಿ ಜಾಗಗಗಳನ್ನು ವಶ ಪಡಿಸಿ ಸರ್ಕಾರಕ್ಕೆ ಜಾಗ ನೀಡಿದ್ದಾಗ ಉತ್ತಮ ಹೆಸರು ಬಂದಿತ್ತು. ಈಗ ಮತ್ತೆ ಸಿಬಿಐ ವಿಚಾರಣೆ ಸರ್ಕಾರ ಅನುಮತಿ ನೀಡಿದ್ದರಿಂದ ವಿಜಯ್‌ ಶಂಕರ್‌ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಪ್ರಶ್ನೆ ಎದ್ದಿದೆ.

    57 ವರ್ಷದ ವಿಜಯ್‌ ಶಂಕರ್‌ ನಿನ್ನೆ ಜಯನಗರದ ಟಿ ಬ್ಲಾಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಬಳಿಕ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸದೇ ಗಂಟಲ ದ್ರವನ್ನು ಕೋವಿಡ್‌ 19 ಪರೀಕ್ಷೆಗೆ ಪಡೆಯಲಾಗಿತ್ತು. ಇಂದು ಮಧ್ಯಾಹ್ನ ಫಲಿತಾಂಶ ನೆಗೆಟಿವ್‌ ಬಂದಿದೆ.

    ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಪುತ್ರಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನಡಿ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಐಎಂಎ ಪ್ರಕರಣದಿಂದ ತಂದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಿಬಿಐ ತನಿಖೆ, ಪ್ರಾಸಿಕ್ಯೂಷನ್ ಬಗ್ಗೆ ಮಾನಸಿಕ ಘಾಸಿಗೆ ಒಳಗಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಬಳಿಕ ಮಹಡಿ ಮೇಲೆ ಹೋಗಿದ್ದರು. ವಿಶ್ರಾಂತಿ ಪಡೆಯಲು ಹೋಗಿದ್ದಾರೆ ಎಂದು ನಾವು ಭಾವಿಸಿದ್ದೆವು. ಸಂಜೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರ ಬಂದಿರಲಿಲ್ಲ.

    ಐಎಂಎ ಪ್ರಕರಣದಿಂದ ತಂದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಿಬಿಐ ತನಿಖೆ, ಪ್ರಾಸಿಕ್ಯೂಷನ್ ಬಗ್ಗೆ ಮಾನಸಿಕ ಘಾಸಿಗೆ ಒಳಗಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಬಳಿಕ ಮಹಡಿ ಮೇಲೆ ಹೋಗಿದ್ದರು. ವಿಶ್ರಾಂತಿ ಪಡೆಯಲು ಹೋಗಿದ್ದಾರೆ ಎಂದು ನಾವು ಭಾವಿಸಿದ್ದೆವು. ಸಂಜೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರ ಬಂದಿರಲಿಲ್ಲ.

    ಕೊಠಡಿಯ ಬಾಗಿಲು ಬಡಿದರೂ ತಂದೆ ಡೋರ್ ತೆಗೆಯಲಿಲ್ಲ. ಹೀಗಾಗಿ ಡೋರ್ ಮುರಿದ ಒಳಗೆ ಹೋಗಿದ್ದೆವು. ಈ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ತಂದೆ ಇದ್ದರು. ಕೂಡಲೇ ವೈದ್ಯರನ್ನು ಕರೆಸಿ ನೋಡುವಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • `ವಿಶ್ರಾಂತಿಗೆ  ತೆರಳಿದ್ದ ತಂದೆ ಹೊರ ಬರಲಿಲ್ಲ, ಕೊಠಡಿಯ ಡೋರ್‌ ಬಡಿದರೂ ತೆಗೆಯಲಿಲ್ಲ’- ಪುತ್ರಿಯಿಂದ ದೂರು

    `ವಿಶ್ರಾಂತಿಗೆ ತೆರಳಿದ್ದ ತಂದೆ ಹೊರ ಬರಲಿಲ್ಲ, ಕೊಠಡಿಯ ಡೋರ್‌ ಬಡಿದರೂ ತೆಗೆಯಲಿಲ್ಲ’- ಪುತ್ರಿಯಿಂದ ದೂರು

    ಬೆಂಗಳೂರು: ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಪುತ್ರಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನಡಿ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಐಎಂಎ ಪ್ರಕರಣದಿಂದ ತಂದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಿಬಿಐ ತನಿಖೆ, ಪ್ರಾಸಿಕ್ಯೂಷನ್ ಬಗ್ಗೆ ಮಾನಸಿಕ ಘಾಸಿಗೆ ಒಳಗಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಬಳಿಕ ಮಹಡಿ ಮೇಲೆ ಹೋಗಿದ್ದರು. ವಿಶ್ರಾಂತಿ ಪಡೆಯಲು ಹೋಗಿದ್ದಾರೆ ಎಂದು ನಾವು ಭಾವಿಸಿದ್ದೆವು. ಸಂಜೆ ಎಷ್ಟು ಹೊತ್ತಾದರೂ ಕೊಠಡಿಯಿಂದ ಹೊರ ಬಂದಿರಲಿಲ್ಲ.

    ಕೊಠಡಿಯ ಬಾಗಿಲು ಬಡಿದರೂ ತಂದೆ ಡೋರ್ ತೆಗೆಯಲಿಲ್ಲ. ಹೀಗಾಗಿ ಡೋರ್ ಮುರಿದ ಒಳಗೆ ಹೋಗಿದ್ದೆವು. ಈ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ತಂದೆ ಇದ್ದರು. ಕೂಡಲೇ ವೈದ್ಯರನ್ನು ಕರೆಸಿ ನೋಡುವಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    57 ವರ್ಷದ ವಿಜಯ್‌ ಶಂಕರ್‌ ನಿನ್ನೆ ಜಯನಗರದ ಟಿ ಬ್ಲಾಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಬಳಿಕ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸದೇ ಗಂಟಲ ದ್ರವನ್ನು ಕೋವಿಡ್‌ 19 ಪರೀಕ್ಷೆಗೆ ಪಡೆಯಲಾಗಿತ್ತು. ಇಂದು ಮಧ್ಯಾಹ್ನ ಫಲಿತಾಂಶ ನೆಗೆಟಿವ್‌ ಬಂದಿದೆ.

    ಈಗ ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಲು ದೇಹವನ್ನು ತರಲಾಗಿದೆ. ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡಲಾಗುತ್ತದೆ.

  • ಸಾಯೋ ಮುನ್ನ ಕುತ್ತಿಗೆ ನೋವಿನ ಪ್ಯಾಡ್ ಧರಿಸಿದ್ದ ವಿಜಯ್ ಶಂಕರ್

    ಸಾಯೋ ಮುನ್ನ ಕುತ್ತಿಗೆ ನೋವಿನ ಪ್ಯಾಡ್ ಧರಿಸಿದ್ದ ವಿಜಯ್ ಶಂಕರ್

    ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಸಾವಿನ ಸುತ್ತ ಹಲವು ಅನುಮಾನಗಳು ಮೂಡುತ್ತಿವೆ. ಅಧಿಕಾರಿ ಆತ್ಮಹತ್ಯೆಗೂ ಮುನ್ನ ಕುತ್ತಿಗೆಗೆ ನೋವಿನ ಪ್ಯಾಡ್ ಧರಿಸಿದ್ದರು. ಗಟ್ಟಿಯಾಗಿದ್ದ ಪ್ಲಾಸ್ಟಿಕ್ ಪ್ಯಾಡ್ ಮೇಲೆ ಕುತ್ತಿಗೆ ಬಿಗಿದಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆಯೇ ಎಂದು ರಾತ್ರಿ ಪೊಲೀಸರು ಸುದೀರ್ಘವಾಗಿ ಮೃತದೇಹದ ಪಂಚನಾಮೆ ನಡೆಸಿದ್ದಾರೆ.

    ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆಗೆ ಕಾರಣವೇನು?, ಐಎಂಎ ಹಗರಣದ ವಿಚಾರಣೆಗೆ ಹೆದರಿ ಸಾವಿಗೆ ಶರಣಾದ್ರಾ..? ಸಿಬಿಐ ತನಿಖೆಯಿಂದ ಬಂಧನದ ಭೀತಿ ಎದುರಾಗಿತ್ತಾ..?, ಬಂಧನ ಭೀತಿಯಲ್ಲಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾದ್ರಾ?, ಕೌಟುಂಬಿಕ ಕಲಹ, ವೈಯಕ್ತಿಕ ವಿಚಾರದಲ್ಲಿ ಖಿನ್ನತೆ ಒಳಗಾಗಿದ್ರಾ ಹೀಗೆ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

    ಮಧ್ಯರಾತ್ರಿ ವಿಕ್ಟೋರಿಯಾ ಶವಾಗಾರಕ್ಕೆ ಮೃತ ದೇಹ ರವಾನಿಸಲಾಗಿದ್ದು, ಇಂದು ಕೊರೊನಾ ಸ್ವಾಬ್ ಟೆಸ್ಟ್ ನಂತರ ಪೋಸ್ಟ್ ಮಾರ್ಟಮ್ ಮಾಡಲಾಗುತ್ತೆ. ಪೋಸ್ಟ್ ಮಾರ್ಟಮ್ ನಂತರ ಮೃತ ದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್‍ಶಂಕರ್ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು.

    ಬೆಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿಜಯ್ ಶಂಕರ್, 20 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಮರಳಿದ್ದರು. ಬೆಳಗ್ಗೆ ಕಚೇರಿಯಲ್ಲಿ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೂ ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು. ಮಧ್ಯಾಹ್ನ ಕಚೇರಿಯಿಂದ ತೆರಳಿದ್ದ ವಿಜಯ್ ಶಂಕರ್ ಸಂಜೆ ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾಗಿದ್ದಾರೆ.

    ಐಎಂಎ ಕೇಸ್‍ನಲ್ಲಿ ಮನ್ಸೂರ್ ಖಾನ್‍ನಿಂದ 1.5 ಕೋಟಿ ರೂ.ಪಡೆದ ಆರೋಪ ವಿಜಯ್ ಶಂಕರ್ ಮೇಲಿತ್ತು. ಈ ಬಗ್ಗೆ 3 ದಿನದ ಹಿಂದೆ ವಿಚಾರಣೆಗೆ ಹಾಜರಾಗಲು ಸಿಬಿಐ ನೋಟಿಸ್ ಕೂಡ ಕೊಟ್ಟಿತ್ತು. ಒಟ್ಟನಲ್ಲಿ ಬಂಧನ ಭೀತಿಯಿಂದ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

  • ಬೆಳಗ್ಗೆ ಮೀಟಿಂಗ್, ಸಂಜೆ ಸೂಸೈಡ್- ವಿಜಯ್ ಶಂಕರ್ ಆತ್ಮಹತ್ಯೆಗೆ ಕಾರಣವೇನು?

    ಬೆಳಗ್ಗೆ ಮೀಟಿಂಗ್, ಸಂಜೆ ಸೂಸೈಡ್- ವಿಜಯ್ ಶಂಕರ್ ಆತ್ಮಹತ್ಯೆಗೆ ಕಾರಣವೇನು?

    -ಬಂಧನದ ಭೀತಿ ?
    -ಮೊದಲ ಬಲಿ ಪಡೆದ ಐಎಂಎ ಹಗರಣ

    ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಇಂದು ಬೆಂಗಳೂರಿನ ಜಯನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮಾನತುಗೊಂಡಿದ್ದ ವಿಜಯ್ ಶಂಕರ್ 20 ದಿನಗಳ ಹಿಂದೆ ಕೆಲಸಕ್ಕೆ ಮರಳಿದ್ದರು. ಇಂದು ಬೆಳಗ್ಗೆ ಕಚೇರಿಯಲ್ಲಿ ಸಾಲು ಸಾಲು ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ.

    1.5 ಕೋಟಿ ಲಂಚದ ಆರೋಪ: ಐಎಂಎ ಪ್ರಕರಣದಲ್ಲಿ 1.5 ಕೋಟಿ ರೂ. ಲಂಚ ಪಡೆದ ಆರೋಪ ವಿಜಯ್ ಶಂಕರ್ ಮೇಲಿತ್ತು. ಪ್ರಕರಣ ಸಂಬಂಧ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಎಸ್‍ಐಟಿ ತಂಡವು ವಿಜಯ್ ಶಂಕರ್ ಅವರನ್ನು ಬಂಧಿಸಿದೆ. ಎಸ್‍ಐಟಿ ಚಾರ್ಜ್ ಶೀಟ್ ಸಲ್ಲಿಸುವ ವೇಳೆ ಪ್ರಕರಣ ಎಸ್‍ಐಟಿಯಿಂದ ಸಿಬಿಐಗೆ ವರ್ಗಾವಣೆಯಾಗಿತ್ತು. ಸಿಬಿಐ ಸಹ ವಿಜಯ್ ಶಂಕರ್ ಅವರನ್ನ ಬಂಧಿಸಿತ್ತು.

    ಬಂಧನದ ಭೀತಿ: ಎಸ್.ಐ.ಟಿ ಕೇಸ್ ನಲ್ಲಿ 16 ಆರೋಪಿಯಾಗಿದ್ದ ವಿಜಯ್ ಶಂಕರ್, ಕೇಸ್ ಸಿಬಿಐಗೆ ವರ್ಗಾವಣೆಯಾದ ನಂತರ 4ನೇ ಆರೋಪಿಯಾಗಿದ್ದರು. ಕೆಲ ದಿನಗಳ ಹಿಂದೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಪ್ರಾಷಿಕ್ಯೂಷನ್ ಗೆ ಸರ್ಕಾರ ಅನುಮತಿ ನೀಡಿದೆ ಎಂಬ ಭಯದಲ್ಲಿದ್ದ ವಿಜಯ್ ಶಂಕರ್, ಇದರಿಂದ ತಪ್ಪಿಸಿಕೊಳ್ಳಲು ಪದೇ ಪದೇ ವಿಧಾನಸೌಧಕ್ಕೂ ಭೇಟಿ ನೀಡಿದ್ದರು ಎಂದು ತಿಳಿದ ಬಂದಿದೆ. ಈಗ ಬಂಧನದ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆಗಳು ವ್ಯಕ್ತವಾಗಿವೆ.

    ಇಂದು ಬೆಳಗ್ಗೆ 10:30 ರಿಂದ 12 ಗಂಟೆಯವರೆಗೂ ಸಭೆ ನಡೆಸಿದ್ದ ವಿಜಯ್ ಶಂಕರ್ ಮಧ್ಯಾಹ್ನ 12:30ಕ್ಕೆ ಕಚೇರಿಯಿಂದ ಹೊರ ಬಂದಿದ್ದರು. ಮನೆಗೆ ಬಂದಿದ್ದ ವಿಜಯ್ ಶಂಕರ್, ಸಂಜೆ ಸುಮಾರು 7 ಗಂಟೆಗೆ ತಮ್ಮ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ವೇಳೆ ಮನೆಯಲ್ಲಿ ವಿಜಯ್ ಶಂಕರ್ ಪತ್ನಿ ಹಾಗೂ ಪುತ್ರಿ ಇದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ತಿಲಕ ನಗರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

  • ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ ಆಪ್ತ ವಿಜಯ್ ಶಂಕರ್

    ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ ಆಪ್ತ ವಿಜಯ್ ಶಂಕರ್

    -ಮಂಗಳವಾರ ಬಿಜೆಪಿ ಸೇರ್ಪಡೆ

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಸಿ.ಎಚ್. ವಿಜಯ್ ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಪುನಃ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

    ಕೆಲದಿನಗಳ ಹಿಂದೆ ಬಿಜೆಪಿ ಸೇರುವ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದ ವಿಜಯ್ ಶಂಕರ್ ಇದೀಗ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಕಣಕ್ಕಿಳಿದಿದ್ದ ವಿಜಯ್ ಶಂಕರ್ ಬಿಜೆಪಿಯ ಪ್ರತಾಪ್ ಸಿಂಹ ವಿರುದ್ಧ ಸೋಲನ್ನು ಕಂಡಿದ್ದರು. ವಿಜಯ್ ಶಂಕರ್ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರೋದು ಸಿದ್ದರಾಮಯ್ಯರಿಗೆ ಹಿನ್ನಡೆ ಎನ್ನಲಾಗುತ್ತಿದೆ.

    ರಾಜೀನಾಮೆ ಸುದ್ದಿ ಹರಿದಾಡುತ್ತಿದ್ದ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ವಿಜಯ್ ಶಂಕರ್, ರಾಜಕಾರಣಿ ಎಷ್ಟು ವರ್ಷ ಮನೆಯಲ್ಲಿ ಕೂರಲು ಸಾಧ್ಯ ಹೇಳಿ. ಹೀಗಾಗಿ ಬದಲಾವಣೆ ಬಯಸಿ ಅಭಿಮಾನಿಗಳ ಅಭಿಪ್ರಾಯ ಕೇಳುತ್ತಿದ್ದೇನೆ. ಹುಣಸೂರು ಉಪ ಚುನಾವಣೆ ದೃಷ್ಟಿಯಿಂದ ಇಂಥಹ ತೀರ್ಮಾನ ಕೈಗೊಳ್ಳುತ್ತಿಲ್ಲ. ಒಂದು ರಾಷ್ಟ್ರೀಯ ಪಕ್ಷಕ್ಕೆ ಕಂಡಿಷನ್ ಹಾಕಿ ಸೇರಲು ಆಗಲ್ಲ. ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನಕ್ಕೆ ಬರುತ್ತೇನೆ. ಬಿಜೆಪಿ ಸೇರುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಯಾಕೆ ಬಿಟ್ಟೆ, ಅಲ್ಲಿನ ಪರಿಸ್ಥಿತಿ ಏನಾಗಿದೆ ಅನ್ನೋದನ್ನು ವಿವರಿಸುತ್ತೇನೆ ಎಂದು ತಿಳಿಸಿದ್ದರು.

    ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ವಿಜಯ್ ಶಂಕರ್ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಅನರ್ಹ ಶಾಸಕ ಹೆಚ್.ವಿಶ್ವನಾಥ್ ಪ್ರತಿನಿಧಿಸುವ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.