Tag: ವಿಜಯ ಕಿರಗಂದೂರ

  • ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಮುಂದಿನ ಚಿತ್ರಗಳು ಯಾವುವು?: ಲಿಸ್ಟ್ ಇಲ್ಲಿದೆ

    ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಮುಂದಿನ ಚಿತ್ರಗಳು ಯಾವುವು?: ಲಿಸ್ಟ್ ಇಲ್ಲಿದೆ

    ಭಾರತೀಯ ಸಿನಿಮಾ ರಂಗದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್  (Hombale Films) ಐದು ವರ್ಷದಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡುವುದಾಗಿ ಈ ಹಿಂದೆಯೇ ತಿಳಿಸಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ ಅದು ಭಾರತೀಯ ನಾನಾ ಭಾಷೆಗಳ ಚಿತ್ರಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ಕಾಂತಾರ, ಕೆಜಿಎಫ್ ರೀತಿಯ ಹಿಟ್ ಚಿತ್ರಗಳನ್ನು ನೀಡಿರುವ ಈ ಸಂಸ್ಥೆ ಹಲವಾರು ಚಿತ್ರಗಳಿಗೆ ಈಗಾಗಲೇ ಹಣ ಹೂಡಿದೆ.

    ಕನ್ನಡ, ಮಲಯಾಳಂ, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಲು ಹೊಂಬಾಳೆ ಫಿಲ್ಮ್ಸ್ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಕನ್ನಡದ ಕಾಂತಾರ ಮತ್ತು ಕೆಜಿಎಫ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿವೆ. ಈ ಸಂಸ್ಥೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ (Salar) ಸದ್ಯದಲ್ಲೇ ಬಿಡುಗಡೆ ಆಗಲಿದೆ.

    ಪ್ರಭಾಸ್‍ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್‍ ನಿರ್ಮಾಣದ, ಪ್ರಶಾಂತ್‍ ನೀಲ್‍ ನಿರ್ದೇ‍ಶನದ ಅತ್ಯಂತ ಮಹತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

    ಪ್ರೇಕ್ಷಕರಿಗೆ ಗುಣಮಟ್ಟದ ಚಿತ್ರಗಳನ್ನು ನೀಡಬೇಕೆನ್ನುವ ಹೆಬ್ಬಯಕೆಯೊಂದಿಗೆ ಹಲವು ಚಿತ್ರಗಳ ನಿರ್ಮಾಣದಲ್ಲಿ ಹೊಂಬಾಳೆ ಫಿಲಂಸ್‍ ತೊಡಗಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ‘ಯುವ’, ‘ಕಾಂತಾರ 2’ (Kantara 2), ‘ರಘು ತಥಾ’, ‘ಬಘೀರ’, ‘ಸಲಾರ್ ಪಾರ್ಟ್‍ 2’, ‘ಕೆಜಿಎಫ್‍ 3’ (KGF 3), ‘ರಿಚರ್ಡ್‍ ಆಂಟೋನಿ’, ‘ಟೈಸನ್‍’ ಮುಂತಾದ ಚಿತ್ರಗಳನ್ನು ನಿರ್ಮಿಸುತ್ತಿದೆ. ಈಗ ‘ಸಲಾರ್ 1’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗುವ ಮೂಲಕ ಈ ಸಂಭ್ರಮ ಇನ್ನಷ್ಟು ಹೆಚ್ಚಾಗಿದೆ.

    ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’ ಚಿತ್ರದ ಬಿಡುಗಡೆ ದಿನಾಂಕದ ಜೊತೆಗೆ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ‘ಬಾಹುಬಲಿ’ ಖ್ಯಾತಿಯ ಪ್ರಭಾಸ್‍, ‘ಕೆಜಿಎಫ್‍ 1’ ಮತ್ತು ‘ಕೆಜಿಎಫ್‍ 2’ ಚಿತ್ರದ ನಿರ್ಮಾಪಕ ವಿಜಯ್‍ ಕಿರಗಂದೂರು ಮತ್ತು ನಿರ್ದೇಶಕ ಪ್ರಶಾಂತ್‍ ನೀಲ್‍ ಮೊದಲ ಬಾರಿಗೆ ಜೊತೆಯಾಗಿ ಕೆಲಸ ಮಾಡಿದ್ದು, ಆಕ್ಷನ್‍ ಚಿತ್ರಗಳಲ್ಲಿ ನಟನೆ, ನಿರ್ಮಾಣ ಮತ್ತು ನಿರ್ದೇಶನದಲ್ಲಿ ಜನಪ್ರಿಯವಾದ ಮೂವರು ಒಟ್ಟಿಗೆ ಕೆಲಸ ಮಾಡುತ್ತಿರುವುದು ವಿಶೇಷ. ಭಾರತದ ಅತೀ ದೊಡ್ಡ ಆಕ್ಷನ್‍ ಚಿತ್ರ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದ್ದು, ಇದುವರೆಗೂ ಕಂಡು ಕೇಳರಿಯದ ಬೃಹತ್ ಆಕ್ಷನ್‍ ದೃಶ್ಯಗಳು ಈ ಚಿತ್ರದ ಹೈಲೈಟ್‍ ಆಗಲಿದೆ ಎಂದು ಹೇಳಲಾಗಿದೆ.

     

    ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸುತ್ತಿದ್ದು, ಕ್ರಿಸ್ಮಸ್‍ ಅಂಗವಾಗಿ ಡಿಸೆಂಬರ್ 22ರಂದು ಹಲವು ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]