Tag: ವಿಜಯ ರಾಘವೇಂದ್ರ

  • ‘ರುದ್ರಾಭಿಷೇಕಂ’ ಚಿತ್ರಕ್ಕೆ ಚಾಲನೆ:  ವೀರಗಾಸೆಯಲ್ಲಿ ವಿಜಯ ರಾಘವೇಂದ್ರ

    ‘ರುದ್ರಾಭಿಷೇಕಂ’ ಚಿತ್ರಕ್ಕೆ ಚಾಲನೆ: ವೀರಗಾಸೆಯಲ್ಲಿ ವಿಜಯ ರಾಘವೇಂದ್ರ

    ಮ್ಮ‌ನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿ ಪ್ರೇಕ್ಷಕರನ್ನು ರಂಜಿಸಿವೆ. ಅದೇ ಹಾದಿಯಲ್ಲಿ ಇದೀಗ  ಮತ್ತೊಂದು ಸಿನಿಮಾ ಸೆಟ್ಟೇರಿದೆ. ಪ್ರತಿಭಾವಂತ ನಟ ವಿಜಯ ರಾಘವೇಂದ್ರ ಅವರು  ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ ರುದ್ರಾಭಿಷೇಕಂ (Rudrabhishekam). ಈ ಚಿತ್ರದ ಮುಹೂರ್ತ ಸಮಾರಂಭ ದೇವನಹಳ್ಳಿ ಬಳಿಯ ವಿಜಯಪುರದ ಫಾರಂ ಹೌಸ್ ಒಂದರಲ್ಲಿ ಸರಳವಾಗಿ  ನೆರವೇರಿತು.

    ಮುಹೂರ್ತದ ನಂತರ ಮಾತನಾಡಿದ ವಿಜಯ ರಾಘವೇಂದ್ರ (Vijaya Raghavendra), ಇನ್ನೊಂದು ಒಳ್ಳೆಯ ಪ್ರಯತ್ನ. ನಮ್ಮ ನಾಡಿನ ಸಾಂಸ್ಕೃತಿಕ ಹಿನ್ನೆಲೆಯ ಜತೆಗೆ ಒಂದು ಸಣ್ಣ ಇತಿಹಾಸ, ಅದರ ವೈಭವವನ್ನು ತೆಗೆದುಕೊಂಡು ಹೋಗುವ ಕಥೆ. ಕಮರ್ಷಿಯಲ್ ಎಲಿಮೆಂಟ್ ಒಳಗೊಂಡಿದ್ದರೂ ಕೂಡ ಸಾಕಷ್ಟು ಡಿವೈನಿಟಿ ಇರುವ ಚಿತ್ರ. ನಿರ್ದೇಶಕರು ವೀರಗಾಸೆ ಕಲೆಯ ಹಿನ್ನೆಲೆ ಇಟ್ಟುಕೊಂಡು ಒಂದೊಳ್ಳೆ ಕಾನ್ಸೆಪ್ಟ್ ರೆಡಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ನಾನು ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಅಷ್ಟೇ ಅಲ್ಲ  ಚಿತ್ರದಲ್ಲಿ ನನಗೆ  ಸಾಕಷ್ಟು ಗೆಟಪ್ ಗಳಿವೆ ಎಂದು ಹೇಳಿದರು.

     

    ನಿರ್ದೇಶಕ ವಸಂತ್ ಕುಮಾರ್ ಮಾತನಾಡುತ್ತ ನಾನು ಕಳೆದ ಎರಡುವರೆ ದಶಕಗಳಿಂದಲೂ ಚಿತ್ರರಂಗದಲ್ಲಿದ್ದೇನೆ. ಹಲವಾರು ಚಿತ್ರಗಳಿಗೆ ಸಹನಿರ್ದೇಶನ, ಕಥೆ, ಚಿತ್ರಕಥೆ ಬರೆದಿದ್ದೇನೆ. ಇದೊಂದು ಟ್ರೆಡಿಷನಲ್ ಸಬ್ಜೆಕ್ಟ್. ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ಒಂದು ಕಲೆಯನ್ನು ಈ ಚಿತ್ರದ ಮೂಲಕ ಹೇಳಹೊಟಿದ್ದೇನೆ. ಒಂದೂವರೆ ವರ್ಷದಿಂದ ಸಾಕಷ್ಟು ರೀಸರ್ಚ್ ಮಾಡಿ ಈ ಕಥೆ ರೆಡಿ ಮಾಡಿಕೊಂಡಿದ್ದೇನೆ.  ಕಥೆ ಮಾಡಿಕೊಂಡು ಒಂದಷ್ಟು ಮಠಾಧೀಶರನ್ನು ಸಂಪರ್ಕಿಸಿದಾಗ ಅವರೆಲ್ಲ ಒಳ್ಳೆ ಪ್ರಯತ್ನ. ಗೆದ್ದೇ ಗೆಲ್ತೀಯ  ಎಂದು ಶುಭ ಹಾರೈಸಿದರು.

     

    ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ಇಲ್ಲಿ ಹೇಳುತ್ತಿದ್ದೇನೆ. ನಾನು ಕಥೆ ಮಾಡುವಾಗಲೇ  ವಿಜಯ ರಾಘವೇಂದ್ರ ಅವರನ್ನು ವೀರಗಾಸೆ ಗೆಟಪ್ ನಲ್ಲಿ ಕಲ್ಪಿಸಿಕೊಂಡೆ. ಈ ಸಮಯದಲ್ಲಿ ನನ್ನ ಹಲವಾರು ಸ್ನೇಹಿತರು ನಿರ್ಮಾಣದಲ್ಲಿ  ಕೈಜೋಡಿಸುತ್ತಿದ್ದಾರೆ. ಈ ಮೂಲಕ ನಾಡಿನ ಜನತೆಗೆ ಒಂದೊಳ್ಳೆ ಸಿನಿಮಾ ಕಟ್ಟಿ ಕೊಡಬೇಕೆಂದುಕೊಂಡುದ್ದೇನೆ. ಮೊದಲ ಹಂತದಲ್ಲಿ ಇದೇ ಫಾರಂ ಹೌಸ್ ನಲ್ಲಿ 15 ದಿನ ಶೂಟ್ ಮಾಡುತ್ತಿದ್ದೇವೆ. ನಂತರ ಇಡೀ ಊರತುಂಬ ಆಲದಮರ, ಹಿಂದುಳಿದವರೇ ಇರುವಂಥ ಲೊಕೇಶನ್ ಹುಡುಕೊದಾಗ ಸಿಕ್ಕಿದ್ದೇ ಚಿಕ್ಕತದಮಂಗಲ. ಅಲ್ಲಿ ಜಾಸ್ತಿ ಇರುವುದೇ ವೀರಭದ್ರ ದೇವರ ಒಕ್ಕಲಿನವರು‌. ಅಲ್ಲಿ ಹೋಗಿ ಶೂಟಿಂಗ್ ಮಾಡಬೇಕೆಂದಾಗ ಇಡೀ ಊರ ಜನತೆ ನಮಗೆ  ಸಹಕಾರ ಕೊಡ್ತಿದಾರೆ ಎಂದು ಹೇಳಿದರು.

    ನಿರ್ದೇಶಕರ ಸ್ನೇಹಿತರಾದ ಜಯರಾಮಣ್ಣ, ಶಿವರಾಮ್, ಚಿದಾನಂದ್, ಹಡಪದ, ರಮೇಶ್, ಮಂಜುನಾಥ್, ಮುನಿಕೃಷ್ಣಪ್ಪ, ರವಿ, ಅಶ್ವಥ್, ಆನಂದ್ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್  ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶಕರ ಒಂದು ಒಳ್ಳೆಯ ಪ್ರಯತ್ನಕ್ಕೆ ನಾವೆಲ್ಲ ಕೈ ಜೋಡಿಸಿರುವುದಾಗಿ ಅವರು ಹೇಳಿಕೊಂಡರು.

     

    ರುದ್ರಾಭಿಷೇಕಂ ಚಿತ್ರದ ನಾಯಕಿಯಾಗಿ ಮೈಸೂರು ಮೂಲದ ರಂಗಭೂಮಿ ಪ್ರತಿಭೆ ಪ್ರೇರಣಾ ನಟಿಸುತ್ತಿದ್ದಾರೆ. ಮತ್ತೊಬ್ಬ ದೈತ್ಯಪ್ರತಿಭೆ ಬಲ ರಾಜವಾಡಿ ಅವರು ಊರ ಗೌಡನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಅವರು ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಲ್ಲದೆ ತಾರಕೇಶ್ವರ ಸೇರಿ ಅನೇಕ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ  ಮುತ್ತುರಾಜ್  ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

  • ‘ವ್ಹೀಲ್‌ಚೇರ್‌ ಪ್ರೀಮಿಯರ್ ಲೀಗ್’ ಸೀಸನ್ 3ಕ್ಕೆ ಸಾಥ್ ನೀಡಿದ ನಟ ವಿಜಯ್  ರಾಘವೇಂದ್ರ

    ‘ವ್ಹೀಲ್‌ಚೇರ್‌ ಪ್ರೀಮಿಯರ್ ಲೀಗ್’ ಸೀಸನ್ 3ಕ್ಕೆ ಸಾಥ್ ನೀಡಿದ ನಟ ವಿಜಯ್ ರಾಘವೇಂದ್ರ

    ರ್ನಾಟಕ ವ್ಹೀಲ್‌ಚೇರ್‌ ಪ್ರೀಮಿಯರ್ ಲೀಗ್‌ (Wheelchair Premier League) ಸೀಸನ್‌ 3ರ ಟ್ರೋಫಿಯನ್ನು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಶಾಸಕ ಡಾ. ಸಿ ಎನ್‌ ಅಶ್ವತ್ಥನಾರಾಯಣ ಅನಾವರಣಗೊಳಿಸಿದರು. ಇತ್ತೀಚಿಗಷ್ಟೇ ಬೆಂಗಳೂರಿನ ಗೋಕುಲಂ ಗ್ರಾಂಡ್, HMR ಲೇಔಟ್, ಗೋಕುಲ ಎಕ್ಸೆನ್ಷನ್‌, ಮತ್ತಿಕೆರೆಯಲ್ಲಿ ನಡೆದ ಈ ಗ್ರ್ಯಾಂಡ್‌ ಕಾರ್ಯಕ್ರಮದಲ್ಲಿ ಸಿ.ಎನ್. ಅಶ್ವಥ್ ನಾರಾಯಣ ಅವರ ಜತೆಗೆ ಖ್ಯಾತ ಸಿನಿಮಾ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ವಿಜಯ ರಾಘವೇಂದ್ರ (Vijaya Raghavendra) ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ವರ್ಷದ ಕರ್ನಾಟಕ ವ್ಹೀಲ್‌ಚೇರ್‌ ಪ್ರೀಮಿಯರ್ ಲೀಗ್ (ಕೆಡಬ್ಲ್ಯೂಪಿಎಲ್) ಹಿಂದಿನ ಎರಡು ಸೀಸನ್‌ಗಳಿಗಿಂತ ಗ್ರ್ಯಾಂಡ್‌ ಆಗಿರಲಿದೆ. ಈ ಸೀಸನ್‌ನಲ್ಲಿ ಸ್ಥಳೀಯ ಪ್ರತಿಭೆಗಳು ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಆಟಗಾರರು ಭಾಗವಹಿಸಲಿದ್ದಾರೆ. ಇದು ಸ್ಪರ್ಧೆಯ ಜತೆಗೆ ನೋಡುಗರ ಉತ್ಸಾಹವನ್ನೂ ಹೆಚ್ಚಿಸಲಿದೆ ಎಂದು ಆಯೋಜಕರು ತಿಳಿಸಿದರು.

    KWPL ಸೀಸನ್-3 ಟ್ರೋಫಿಯನ್ನು ಅನಾವರಣಗೊಳಿಸಿದ ನಂತರ ಮಾತನಾಡಿದ ಡಾ.ಸಿ.ಎನ್. ಅಶ್ವತ್ಥನಾರಾಯಣ, ‘ಅಡೆತಡೆಗಳನ್ನು ಮುರಿದು, ಚಾಂಪಿಯನ್‌ಗಳನ್ನು ನಿರ್ಮಿಸುವುದು’ ಎಂಬ ಅಡಿಬರಹದಲ್ಲಿ ಶ್ಲಾಘಿಸಿದರು. ಆಟಗಾರರಿಗೆ ಕ್ರೀಡೆಯಲ್ಲಿ ಮಾತ್ರವಲ್ಲದೆ ಅವರ ಜೀವನದಲ್ಲೂ ನಿಜವಾದ ಚಾಂಪಿಯನ್ ಆಗಲು ಈ ವೇದಿಕೆ ತುಂಬ ಮಹತ್ವದ್ದು ಎಂದರು. ವಿಜಯ ರಾಘವೇಂದ್ರ ಅವರು “ನಾನು ಇಂದು ಮಾತ್ರವಲ್ಲದೆ ಲೀಗ್ ಪಂದ್ಯಾವಳಿಯ ಸಮಯದಲ್ಲಿಯೂ ಇರುತ್ತೇನೆ. ಎಲ್ಲರ ಜತೆಗಿದ್ದು, ಟೂರ್ನಮೆಂಟ್‌ ಅನ್ನು ಯಶಸ್ವಿಗೊಳಿಸೋಣ ಎಂದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ದಿವ್ಯಾಂಗ್ ಮೈತ್ರಿ ಸ್ಪೋರ್ಟ್ಸ್ ಅಕಾಡೆಮಿ ಸಂಸ್ಥಾಪಕ ಸದಸ್ಯ ಶ್ರೀ ಶಿವ ಪ್ರಸಾದ್, ಈ ವರ್ಷ ಕೆಡಬ್ಲ್ಯೂಪಿಎಲ್ ಸೀಸನ್-3ರ ಗುರಿಯು ಕ್ರೀಡಾ ಮನೋಭಾವದ ಜತೆಗೆ ಸಮುದಾಯ ನಿರ್ಮಾಣದ ಮನೋಭಾವವನ್ನು ಹುಟ್ಟುಹಾಕುವ ಕೆಲಸವಾಗಲಿದೆ. ಈ ಮೂಲಕ ಕ್ರೀಡೆಯಲ್ಲಿ ಜೀವನೋಪಾಯದ ದೃಷ್ಟಿಯನ್ನು ವೃದ್ಧಿಸಲು ವೀಲ್‌ಚೇರ್‌ ಕ್ರಿಕೆಟ್‌ಅನ್ನು ಕ್ರಾಂತಿಯ ರೀತಿ ಸಿದ್ಧಪಡಿಸಬೇಕಿದೆ.

    ಐಪಿಎಲ್‌ನಂತಹ ವೃತ್ತಿಪರ ಕ್ರಿಕೆಟ್ ಲೀಗ್‌ಗಳಂತೆ, ಕೆಡಬ್ಲ್ಯೂಪಿಎಲ್ ಸೀಸನ್ 3ರಲ್ಲಿಯೂ ಆಟಗಾರರ ಹರಾಜು ನಡೆಯಲಿದೆ. ತಂಡದ ಮಾಲೀಕರು ತಮ್ಮ ತಂಡಗಳನ್ನು ಕಾರ್ಯತಂತ್ರವಾಗಿ ನಿರ್ಮಿಸಲು ಅನುವು ಮಾಡಿಕೊಡುತ್ತದೆ. ಯಶಸ್ವಿ T20 ಸ್ವರೂಪವನ್ನು ಅಳವಡಿಸಿಕೊಂಡು ಕ್ರೀಡಾ ಪ್ರೇಮಿಗಳನ್ನು ಸೆಳೆಯಲಿದ್ದೇವೆ. KWPL ವ್ಹೀಲ್‌ಚೇರ್‌ ಕ್ರಿಕೆಟ್ ಕ್ಷೇತ್ರದಲ್ಲಿ ಒಂದು ಹೆಗ್ಗುರುತಾಗಲಿದೆ ಎಂಬ ಭರವಸೆ ಇದೆ. ಇದು ಅಸಾಧಾರಣ ಪ್ರತಿಭೆ, ದೃಢತೆ ಮತ್ತು ವಿಕಲಾಂಗ ಅಥ್ಲೀಟ್‌ಗಳ ಉತ್ಸಾಹವನ್ನು ಎತ್ತಿ ತೋರಿಸುತ್ತದೆ. ಈ ಪಂದ್ಯಾವಳಿಯು ಅಂಗವಿಕಲರು (PWD) ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ರೀಡೆ ಮತ್ತು ಸಮಾಜದಲ್ಲಿ ಅವರ ಸೇರ್ಪಡೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದರು. ಈ ವಿನೂತನ ಪ್ರಯತ್ನವು KST ಬೆಂಬಲದ ಜತೆಗೆ ದಿವ್ಯಾಂಗ್ ಮೈತ್ರಿ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕ್ಷಮಾತಾ ಇನ್ನೋವೇಶನ್ ಫೌಂಡೇಶನ್ (KIF) ಸಹಯೋಗದಲ್ಲಿ ನಡೆಯುತ್ತಿದೆ.

  • ರೋಮಿಯೋ ಚಿತ್ರ ನಿರ್ದೇಶಕನ ಸಿನಿಮಾಗೆ ವಿಜಯ ರಾಘವೇಂದ್ರ ಹೀರೋ

    ರೋಮಿಯೋ ಚಿತ್ರ ನಿರ್ದೇಶಕನ ಸಿನಿಮಾಗೆ ವಿಜಯ ರಾಘವೇಂದ್ರ ಹೀರೋ

    ಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಸಿದ್ದಪ್ಪ (Prakash Siddappa) ನಿರ್ಮಿಸುತ್ತಿರುವ ಹೊಸ ಚಿತ್ರವನ್ನು ರೋಮಿಯೋ, ರಾಗ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ (P. C. Shekhar) ನಿರ್ದೇಶಿಸುತ್ತಿದ್ದಾರೆ. ತಮ್ಮ ನಟನೆಯಿಂದಲೇ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijaya Raghavendra) ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಪ್ರಕಾಶ್, “ರೈತರ ಕುರಿತ ವಿಷಯ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ” ಮತ್ತು ಪಿ.ಸಿ. ಶೇಖರ್ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದರು. ಈಗ ಅವರು ಅಲಯನ್ಸ್ ಯೂನಿವರ್ಸಿಟಿಯ ಫಿಲ್ಮ್ ಮೇಕಿಂಗ್ ಕೋರ್ಸ್‌ನ ಸಹಯೋಗದಲ್ಲಿ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷದ ಸಂಗತಿ. ಅಲಯನ್ಸ್‌ನಲ್ಲಿ ಕಲಿತು ಈಗ ಬೇರೆ ಬೇರೆ ಉದ್ಯೋಗದಲ್ಲಿರುವ ಹಳೆ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದಲ್ಲಿ ನಮ್ಮೊಂದಿಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಉಳಿದ ಕಲಾವಿದರು ಮತ್ತು ತಂತ್ರಜ್ಞರ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು.

    ಅಲಯನ್ಸ್ ಯೂನಿವರ್ಸಿಟಿಯ ಚಲನಚಿತ್ರ ನಿರ್ಮಾಣ ಮತ್ತು ಮಾಧ್ಯಮ ಅಧ್ಯಯನದ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡುತ್ತಿರುವ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಚಲನಚಿತ್ರವನ್ನು ನಿರ್ದೇಶಿಸುವುದಕ್ಕಿಂತ ಹೆಚ್ಚಿನ ಖುಷಿ ಏನಿದೆ. ಈ ಅವಕಾಶಕ್ಕಾಗಿ ಪ್ರಕಾಶ್ ಅವರಿಗೆ ಧನ್ಯವಾದಗಳು. ಇದನ್ನು ಗುರು-ಶಿಷ್ಯ ಸಂಬಂಧ ಎನ್ನುತ್ತಾರೆ.

    ಇನ್ನು ಈ ಸಿನಿಮಾದ ಬಗ್ಗೆ ಮಾತನಾಡೋಣ, ಇದು ರೈತನ ಕುರಿತ ಸಿನಿಮಾ. ಬಹುತೇಕ ಚಿತ್ರೀಕರಣ ಹಳ್ಳಿಯಲ್ಲಿಯೇ ನಡೆಯಲಿದೆ. ರೈತ ಮತ್ತು ಸಾರ್ವಜನಿಕರ ನಡುವಿನ ಸಂಬಂಧದ ಜೊತೆಗೆ ದೇಶಕ್ಕೆ ರೈತನ ಮಹತ್ವವನ್ನು ತೋರಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುವುದು. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಕಥೆ ಬರೆಯುವಾಗ ವಿಜಯ ರಾಘವೇಂದ್ರರನ್ನು ಗಮನದಲ್ಲಿಟ್ಟುಕೊಂಡು ಕಥೆ ಬರೆದಿದ್ದೆ. ಅವರಿಗೆ ಕಥೆ ಹೇಳಿದಾಗ ಅವರು ಇಷ್ಟಪಟ್ಟು ನಟಿಸಲು ಒಪ್ಪಿದ್ದು ತುಂಬಾ ಖುಷಿ ತಂದಿದೆ. ಚಿತ್ರವು ಅದ್ದೂರಿ ತಾರಾಗಣ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಹೊಂದಿದೆ.  ಇಷ್ಟು ವರ್ಷಗಳ ನನ್ನ ಸಿನಿ ಪಯಣದಲ್ಲಿ ಇದೊಂದು ವಿಭಿನ್ನ ಶೈಲಿಯ ಸಿನಿಮಾ. ಇದು ನನ್ನ ಹೃದಯಕ್ಕೆ ಹತ್ತಿರವಾದ ಚಿತ್ರವಾಗಿದ್ದು, ತುಂಬಾ ಪ್ರೀತಿಯಿಂದ ಮಾಡಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

    ನಿರ್ದೇಶಕ ಪಿ.ಸಿ.ಶೇಖರ್ ಬಂದು ಈ ಚಿತ್ರದ ಕಥೆ ಹೇಳಿದಾಗ ಕಥೆ ಕೇಳಿ ತುಂಬಾ ಖುಷಿಯಾಯಿತು. ಅನ್ನದಾತ ರೈತನ ಕುರಿತಾದ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಿರ್ಮಾಪಕ ಪ್ರಕಾಶ್ ಸಿದ್ದಪ್ಪ ಅವರಿಗೆ ಧನ್ಯವಾದಗಳು. ಪಿ.ಸಿ.ಶೇಖರ್ ನಿರ್ದೇಶನದ ನನ್ನ ಮೊದಲ ಸಿನಿಮಾ ಇದು ಎನ್ನುತ್ತಾರೆ ನಟ ವಿಜಯ ರಾಘವೇಂದ್ರ.

  • ಪತ್ನಿ ಅಗಲಿ ಒಂದು ವರ್ಷ‍ : ಭಾವುಕತೆಯ ಪೋಸ್ಟ್ ಹಾಕಿದ ವಿಜಯ ರಾಘವೇಂದ್ರ

    ಪತ್ನಿ ಅಗಲಿ ಒಂದು ವರ್ಷ‍ : ಭಾವುಕತೆಯ ಪೋಸ್ಟ್ ಹಾಕಿದ ವಿಜಯ ರಾಘವೇಂದ್ರ

    ಟ ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ಅಗಲಿ ಇಂದಿಗೆ ಒಂದು ವರ್ಷ ಕಳೆದಿವೆ. ಹಾಗಾಗಿ ಮಗ ಮತ್ತು ಪತ್ನಿ ಜೊತೆಗಿರೋ ಫೋಟೋವನ್ನು ನಟ ವಿಜಯ ರಾಘವೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಭಾವುಕ ಪೋಸ್ಟ್ ಮಾಡಿದ್ದಾರೆ. ಪತ್ನಿಯೊಂದಿಗಿನ ನೆನಪುಗಳನ್ನು ಅವರು ಹಂಚಿಕೊಂಡಿದ್ದಾರೆ.

    ಪತ್ನಿಯ ನಿಧನದ ನಂತರ ಮೌನಕ್ಕೆ ಶರಣಾಗಿದ್ದ ವಿಜಯ ನಂತರ ದಿನಗಳಲ್ಲಿ ಚೇತರಿಸಿಕೊಂಡು ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನ ಅವರು ಈ ಹಿಂದೆಯೂ ಬಿಚ್ಚಿಟ್ಟಿದ್ದರು.

    ಸ್ಪಂದನಾ ಹೆಸರಿಗೆ ತಕ್ಕ ಜೀವ. ಉಸಿರಿಗೆ ತಕ್ಕ ಭಾವ. ಅಳತೆಗೆ ತಕ್ಕ ನುಡಿ. ಬದುಕಿಗೆ ತಕ್ಕ ನಡೆ. ನಮಗೆಂದೇ ಮಿಡಿದ ನಿನ್ನ ಹೃದಯವ. ನಿಲ್ಲದು ನಿನ್ನೊಂದಿಗಿನ ಕಲರವ. ನಾನೆಂದೂ ನಿನ್ನವ. ಕೇವಲ ನಿನ್ನವ ಎಂದು ವಿಜಯ್ ರಾಘವೇಂದ್ರ ಅವರು ಭಾವನ್ಮಾತಕವಾಗಿ ಸಾಲುಗಳನ್ನು ಹೇಳಿಕೊಂಡಿದ್ದರು.

    ಪ್ರೀತಿಸಿ ಗುರುಹಿರಿಯರ ಸಮ್ಮತಿ ಪಡೆದು ಆಗಸ್ಟ್ 26ರ 2017ರಲ್ಲಿ ವಿಜಯ-ಸ್ಪಂದನಾ ಮದುವೆಯಾದರು. ಅವರ ದಾಂಪತ್ಯಕ್ಕೆ ಪ್ರೀತಿಗೆ ಶೌರ್ಯ ಎಂಬ ಪುತ್ರ ಸಾಕ್ಷಿಯಾಗಿದ್ದಾರೆ. ಸ್ಪಂದನಾ ಅನಿರೀಕ್ಷಿತ ಅಗಲಿಕೆ ಕುಟುಂಬಕ್ಕೆ ಶಾಕ್ ನೀಡಿತ್ತು.

     

    ಆಗಸ್ಟ್ 6ರಂದು ಹೃದಯಾಘಾತದಿಂದ (Heart Attack) ಸ್ಪಂದನಾ ಬ್ಯಾಕಾಂಕ್‌ನಲ್ಲಿ ನಿಧನರಾದರು. ಆಗಸ್ಟ್ 9ರಂದು ಸ್ಪಂದನಾ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತ್ತು.

  • ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ‘ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

    ‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

    ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

     

    ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

  • ವಿಜಯ ರಾಘವೇಂದ್ರ ನಟನೆಯ ಹೊಸ ಸಿನಿಮಾದ ಮೊದಲ ಸಾಂಗ್ ರಿಲೀಸ್

    ವಿಜಯ ರಾಘವೇಂದ್ರ ನಟನೆಯ ಹೊಸ ಸಿನಿಮಾದ ಮೊದಲ ಸಾಂಗ್ ರಿಲೀಸ್

    ಕ್ರಿಯೇಟಿವ್ ಡೈರೆಕ್ಟರ್ ಹಾಗೂ ನಿರ್ಮಾಪಕ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ  ಹಾಗೂ ಕರ್ನಾಟಕದ ಚಿನ್ನಾರಿ ಮುತ್ತ  ವಿಜಯ್ ರಾಘವೇಂದ್ರ (Vijay Raghavendra) ಅಭಿನಯಯದ, ವಿಜಯ್ ಕನ್ನಡಿಗ ನಿರ್ದೇಶನದ, ಜೋಗ್ 101 (Jog 101) ಚಿತ್ರದ ಮೊದಲನೆಯ ಹಾಡು ‘ಮುಂಜಾನೆ ಮಂಜನ್ನು’ ಹಾಡಿನ ಲಿರಿಕಲ್ ವಿಡಿಯೋ ಸೆವೆನ್ ಸ್ಟಾರ್ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

    ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಹಾಡಿಗೆ    ಡಾ.ವಿ.ನಾಗೇಂದ್ರಪ್ರಸಾದ್  ರವರ ಸಾಹಿತ್ಯವಿದ್ದು, ಭಾರತದ ಸುಪ್ರಸಿದ್ಧ ಗಾಯಕ ರಘು ದೀಕ್ಷಿತ್ (Raghu Dixit) ಹಾಡಿದ್ದಾರೆ ಹಾಗು ಈ ಹಾಡಿನ ಇಂಗ್ಲೀಷ್ ಭಾಷಾಂತರವನ್ನು ಸುಮನ್ ಜಾದೂಗಾರ್ ಮಾಡಿದ್ದಾರೆ.  ಈ ಹಾಡಿನ ಬಿಡುಗಡೆಯ ವಿಚಾರವನ್ನು ತಾವುಗಳು ದೃಶ್ಯ ಮಾಧ್ಯಮದಲ್ಲಿ ಅಥವಾ ಪತ್ರಿಕೆ ಮಾಧ್ಯಮದಲ್ಲಿ ಪ್ರಕಟಿಸಿ ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೋರಿಕೊಳ್ಳುತ್ತೇವೆ. ತಾವು

    ಎಂದಿನಂತೆ ನಮ್ಮ ಜೊತೆಯಲ್ಲಿದ್ದು, ಈ ಹಾಡನ್ನಾ ಜನಸಾಮಾನ್ಯರಿಗೆ  ಮುಟಿಸುವಲ್ಲಿ ಸಹಕರಿಸಿಬೇಕೆಂದು ಸೆವೆನ್ ಸ್ಟಾರ್ ಪಿಕ್ಚರ್ಸ್ ಸಂಸ್ಥೆಯವರು ವಿನಂತಿ ಮಾಡಿಕೊಂಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ,  ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ “ಜೋಗ್ 101” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಬಿಗ್ ಬಾಸ್’ ಮನೆ ಪ್ರವೇಶ ಮಾಡಲಿದ್ದಾರೆ ವಿಜಯ್ ರಾಘವೇಂದ್ರ

    ‘ಬಿಗ್ ಬಾಸ್’ ಮನೆ ಪ್ರವೇಶ ಮಾಡಲಿದ್ದಾರೆ ವಿಜಯ್ ರಾಘವೇಂದ್ರ

    ಇಂದು ಸಂಜೆ ಪ್ರಸಾರವಾಗಬೇಕಿದ್ದ ವಾರದ ಕಥೆ ಕಿಚ್ಚನ ಜೊತೆ ಮತ್ತು ಕಿಚ್ಚನ ಪಂಚಾಯಿತಿ ಪ್ರಸಾರವಾಗುವುದಿಲ್ಲ. ಕಾರಣ ಸುದೀಪ್ ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ. ಸುದೀಪ್ ನೇತೃತ್ವದಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿ ಇಂದು ಮತ್ತು ನಾಳೆ ನಡೆಯುತ್ತಿದೆ. ಇಂದು ಅದ್ಧೂರಿಯಾಗಿ ಪಂದ್ಯಕ್ಕೆ ಚಾಲನೆ ಸಿಗಲಿದೆ. ಹೀಗಾಗಿ ಸುದೀಪ್ (sudeep) ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ.

    ಹಾಗಂತ ಇಂದಿನ ಕಾರ್ಯಕ್ರಮವನ್ನು ನೆನಪಿಸುವಂತಹ ಮತ್ತೊಂದು ಏರ್ಪಾಟನ್ನು ಮಾಡಿಕೊಂಡಿದೆ ಬಿಗ್ ಬಾಸ್ (Bigg Boss Kannada) ಟೀಮ್. ಇಂದು ಮನೆಯೊಳಗೆ ಹಿರಿಯ ನಟಿ, ಬಿಗ್ ಬಾಸ್ ವಿನ್ನರ್ ಶ್ರುತಿ ಅವರನ್ನು ಕಳುಹಿಸಿದೆ. ಬೆಳಗ್ಗೆ ಎಲ್ಲ ಸ್ಪರ್ಧಿಗಳೂ ನೋಡುತ್ತಿದ್ದ ಹಾಗೆಯೇ ಮನೆಯ ಮುಖ್ಯದ್ವಾರ ತೆರೆದುಕೊಂಡಿದೆ. ಅದರಿಂದ ಶ್ರುತಿ ಅವರು ಮನೆಯೊಳಗೆ ಪ್ರವೇಶಿಸಿದ್ದಾರೆ. ಎಲ್ಲರೂ ಸಂತೋಷದ ಅಲೆಯಲ್ಲಿ ತೇಲುತ್ತಿರುವ ಹಾಗೆಯೇ ಕಟಕಟೆಯಲ್ಲಿ ನಿಲ್ಲುವ ಗಳಿಗೆ ಎದುರಾಗಿದೆ. ಶ್ರುತಿ ನ್ಯಾಯಾಧೀಶರ ಕುರ್ಚಿಯಲ್ಲಿ ಕೂತಿದ್ದಾರೆ.

    ಈ ನಡುವೆ ಮತ್ತೋರ್ವ ಅತಿಥಿ ಕೂಡ ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಶ್ರುತಿ ಅವರು ಮನೆಯಿಂದ ಆಚೆ ಬರುತ್ತಿದ್ದಂತೆಯೇ ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ವಿಜಯ್ ರಾಘವೇಂದ್ರ (Vijaya Raghavendra) ಕೂಡ ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಾಹಿನಿಯು ಏನೂ ಹೇಳದಿದ್ದರೂ, ಇದು ಪಕ್ಕಾ ಎಂದೇ ಹೇಳಲಾಗುತ್ತಿದೆ.

     

    ವಿಜಯ್ ಕೂಡ ಹತ್ತಾರು ರಿಯಾಲಿಟಿ ಶೋನಲ್ಲಿ ಭಾಗಿಯಾದವರು. ಈ ಹಿಂದೆ ಬಿಗ್ ಬಾಸ್ ಮನೆಯಲ್ಲೂ ಇದ್ದವರು. ಹಾಗಾಗಿ ವಿಜಯ್ ರಾಘವೇಂದ್ರ ಅವರನ್ನು ಎರಡನೇ ದಿನಕ್ಕೆ ಅತಿಥಿಯಾಗಿ ದೊಡ್ಮನೆ ಒಳಗೆ ಕಳುಹಿಸಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಈ ವಿಷಯವನ್ನು ವಾಹಿನಿಯೇ ಸ್ಪಷ್ಟಪಡಿಸಬೇಕಿದೆ.

  • ಗೋವಾ ಚಿತ್ರೋತ್ಸವ: ಗಾಲಾ ಪ್ರೀಮಿಯರ್ ನಲ್ಲಿ ‘ಗ್ರೇ ಗೇಮ್ಸ್’ ಪ್ರದರ್ಶನ

    ಗೋವಾ ಚಿತ್ರೋತ್ಸವ: ಗಾಲಾ ಪ್ರೀಮಿಯರ್ ನಲ್ಲಿ ‘ಗ್ರೇ ಗೇಮ್ಸ್’ ಪ್ರದರ್ಶನ

    ವಿಜಯ್‍ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’ (Gray Games) ಚಿತ್ರವು ಇತ್ತೀಚೆಗಷ್ಟೇ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (Chirotsava) (IFFI) ರೆಡ್ ಕಾರ್ಪೆಟ್‍ ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನವಾಗಿದೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಗಂಗಾಧರ್ ಸಾಲಿಮಠ (Gangadhar Salimath) ನಿರ್ದೇಶನದ ಈ ಚಿತ್ರಕ್ಕೆ ನೆರೆದಿದ್ದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ ಒಳ್ಳೆಯ ವಿಮರ್ಶೆಗಳು ಸಿಕ್ಕಿವೆ.

    ಮೆಟಾವರ್ಸ್ ಮತ್ತು ಆನ್‍ಲೈನ್‍ ಗೇಮಿಂಗ್‍ ವೈಷಮ್ಯದ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ‘ಗ್ರೇ ಗೇಮ್ಸ್’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ (Vijaya Raghavendra) ಸೈಕಾಲಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಭಾವನಾ ರಾವ್ ಪೊಲೀಸ್‍ ಅಧಿಕಾರಿಯಾಗಿ ನಟಿಸಿದ್ದಾರೆ. ಶ್ರುತಿ ಪ್ರಕಾಶ್‍ ಈ ಚಿತ್ರದಲ್ಲಿ ಒಬ್ಬ ನಟಿಯಾಗಿ ಅಭಿನಯಿಸಿದ್ದು, ಈ ಚಿತ್ರದ ಮೂಲಕ ವಿಜಯ್‍ ರಾಘವೇಂದ್ರ ಅವರ ಅಕ್ಕನ ಮಗ ಜೈ, ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವುದರ ಜೊತೆಗೆ, ಇಲ್ಲಿ ಒಬ್ಬ ಗೇಮರ್ ಆಗಿ ಕಾಣಿಸಿಕೊಂಡಿದ್ದಾರೆ.

    ಗೋವಾ ಚಿತ್ರೋತ್ಸವದಲ್ಲಿ ಚಿತ್ರ ಪ್ರದರ್ಶನವಾಗಿದ್ದರ ಕುರಿತು ಸಂತೋಷ ವ್ಯಕ್ತಪಡಿಸಿರುವ ನಿರ್ದೇಶಕ ಗಂಗಾಧರ್ ಸಾಲಿಮಠ್‍, ‘ಚಿತ್ರೋತ್ಸವದಲ್ಲಿ ನಮ್ಮ ಚಿತ್ರಕ್ಕೆ ಸಿಕ್ಕ ಪ್ರೋತ್ಸಾಹ ಮತ್ತು ವಿಮರ್ಶೆಗಳಿಂದ ನಿಜಕ್ಕೂ ಹೃದಯ ತುಂಬಿಬಂದಿದೆ.  ಇಂಥದ್ದೊಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ಚಿತ್ರವನ್ನು ಪ್ರದರ್ಶಿಸುವುದಕ್ಕೆ ಅವಕಾಶ ಸಿಕ್ಕಿದ್ದು ಅತ್ಯಂತ ಗೌರವದ ವಿಷಯ. ಇದೊಂದು ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಚಿತ್ರವಾಗಿದ್ದು, ವರ್ಚ್ಯುಯಲ್‍ ಮತ್ತು ನೈಜತೆ ನಡುವೆ ಯಾವುದು ಸರಿ, ಯಾವುದು ತಪ್ಪು ಎಂಬ ನಮ್ಮ ದೃಷ್ಟಿಕೋನದ ಕುರಿತು ಸವಾಲು ಎಸೆಯುವಂತಿದೆ’ ಎನ್ನುತ್ತಾರೆ.

    ನಿರ್ಮಾಪಕ ಆನಂದ್‍ ಎಚ್‍. ಮುಗುದ್‍ ಮಾತನಾಡಿ, ‘ನಮ್ಮ ಚಿತ್ರವನ್ನು ನೋಡಿ ಅತ್ಯುತ್ತಮ ವಿಮರ್ಶೆಗಳನ್ನು ನೀಡಿದ ಪ್ರೇಕ್ಷಕರಿಗೆ ಧನ್ಯವಾದಗಳು. ಇದು ನಮ್ಮ ತಂಡದ ಶ್ರದ್ಧೆ ಮತ್ತು ಒಳ್ಳೆಯ ಚಿತ್ರ ನೀಡಬೇಕೆನ್ನುವ ಬದ್ಧತೆಗೆ ಸಿಕ್ಕ ಗೌರವ’ ಎಂದು ಹೇಳುತ್ತಾರೆ. ‘ಗ್ರೇ ಗೇಮ್ಸ್’ ಚಿತ್ರಕ್ಕೆ ಸರೀಶ್‍ ಗ್ರಾಮಪುರೋಹಿತ್‍, ಅರವಿಂದ್‍ ಜೋಷಿ ಮತ್ತು ಡೋಲೇಶ್ವರ್ ರಾಜ್‍ ಸುಂಕು ಸಹನಿರ್ಮಾಪಕರಾಗಿದ್ದು, ಚಿತ್ರವು ಫೆಬ್ರವರಿ 2024ಕ್ಕೆ ಬಿಡುಗಡೆ ಆಗಲಿದೆ.

  • ವಿಜಯ್ ರಾಘವೇಂದ್ರ ನಟನೆಯ ‘ಮರೀಚಿ’ ಚಿತ್ರದ ಟೀಸರ್ ರಿಲೀಸ್

    ವಿಜಯ್ ರಾಘವೇಂದ್ರ ನಟನೆಯ ‘ಮರೀಚಿ’ ಚಿತ್ರದ ಟೀಸರ್ ರಿಲೀಸ್

    ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ (Mareechi) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್ ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ (Teaser) ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

    ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ  ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ. ತುಂಬಾ ಅದ್ಭುತವಾಗಿ ಕಥೆ ಮೂಡಿ ಬಂದಿದೆ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ಸ್ಕ್ರೀನ್ ಪ್ಲೇ, ಸ್ಟೋರಿ ಎಲ್ಲವೂ ಚೆನ್ನಾಗಿ ಬಂದಿದೆ ಎಂದರು.

    ನಟ ವಿಜಯ್ ರಾಘವೇಂದ್ರ ಮಾತನಾಡಿ, ಮರೀಚಿ ಟೀಸರ್ ಲಾಂಚ್ ಆಗಿದೆ. ಟ್ಯಾಗ್ ಲೈನ್ ಹೇಳುವಂತೆ God father of good and bad ಎನ್ನುವಾಗೇ ಪ್ರತಿಯೊಬ್ಬರ ಮನಸ್ಸಿನಲ್ಲಿ ಕಥೆ ಎಣೆಯುವ ಮನಸ್ಸು ಆಗುತ್ತದೆ. ನಮ್ಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್ ಟೀಸರ್ ನೋಡಿದರೆ ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆ ಎಂದರು.

    ನಟಿ ಸೋನುಗೌಡ ಮಾತನಾಡಿ, ಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಫಾರ್ಪಮೆನ್ಸ್ ಗೆ ತುಂಬಾ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬಾ ಚೆನ್ನಾಗಿ ಬಂದಿದೆ. ಹ್ಯಾಪಿ ನ್ಯೂ ಇಯರ್ ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೇವು. ಇಲ್ಲಿಯೂ ಗಂಡ ಹೆಂಡತಿಯಾಗಿ ನಟಿಸಿದ್ದೇವೆ. ಎಮೋಷನಲ್ ಆಗಿ  ಮರೀಚಿ ಸಿನಿಮಾ ಮೂಡಿಬಂದಿದೆ. ಸ್ಕ್ರೀನ್ ನಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆ ಎಂದರು. ಮರೀಚಿ ಲವ್  ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ .

    ವಿಜಯ ರಾಘವೇಂದ್ರ (Vijaya Raghavendra) ಜೋಡಿಯಾಗಿ ನಟಿ ಸೋನು ಗೌಡ (Sonu Gowda) ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಇಲ್ಲ ಅನ್ನೋ ರಾಘು ನೋವು ಮಾಯ ಆಗಲ್ಲ- ನವೀನ್‌ ಕೃಷ್ಣ

    ಸ್ಪಂದನಾ ಇಲ್ಲ ಅನ್ನೋ ರಾಘು ನೋವು ಮಾಯ ಆಗಲ್ಲ- ನವೀನ್‌ ಕೃಷ್ಣ

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]