ಕನ್ನಡದ ಹೆಸರಾಂತ ನಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಹಾಗೂ ನಿರ್ಮಾಪಕಿ ಸ್ಪಂದನಾ (Spandana) ಸೋಮವಾರ ಬೆಳಗ್ಗೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಈವರೆಗೂ ಅವರ ಮೃತದೇಹ ಭಾರತಕ್ಕೆ ತರಲಾಗಿಲ್ಲ. ಕಾರಣ, ವಿದೇಶದಲ್ಲಿ ಯಾವುದೇ ಪ್ರಜೆ ನಿಧನ ಹೊಂದಿದರೂ, ಅವರ ಮೃತದೇಹ ತರುವುದು ಸುಲಭವಲ್ಲ. ಅದರಲ್ಲೂ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ನಿಧನ ಹೊಂದಿದರೆ ಪ್ರಕ್ರಿಯೆ ಇನ್ನೂ ಕಠಿಣವಾಗಿರುತ್ತದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪ್ರವಾಸಕ್ಕೆಂದು ಬಂದು ಮೃತರಾದ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ (Postmortem) ತಡವಾಗುವುದು ಸಾಮಾನ್ಯ. ಭಾರತದಂತೆಯೇ ಅಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ವರದಿಯನ್ನು ಮೊದಲು ಪೊಲೀಸರು ಪಡೆದುಕೊಳ್ಳುತ್ತಾರೆ. ಸಾವಿಗೆ ಕಾರಣ ಏನು ಎನ್ನುವುದು ಮೊದಲು ಗೊತ್ತಾಗುವುದು ಅಲ್ಲಿನ ಪೊಲೀಸ್ ವ್ಯವಸ್ಥೆಗೆ.
ಪೊಲೀಸರಿಗೆ ಮರಣೋತ್ತರ ವರದಿ ಬಂದ ತಕ್ಷಣವೇ ಪರಿಶೀಲಿಸಿ ಅದು ಸಹಜ ಸಾವು ಅಂದ ಬಳಿಕವಷ್ಟೇ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗುತ್ತದೆ. ನಂತರ ಕುಟುಂಬದವರು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ ಹಾಗೂ ಪೊಲೀಸ್ ವರದಿಗಳನ್ನು ಪಡೆದುಕೊಂಡು ಆಯಾ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಬೇಕಾಗುತ್ತದೆ.
ಸ್ಪಂದನಾ ಬ್ಯಾಂಕಾಕ್ (Bangkok) ನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬವು ಈ ಎಲ್ಲ ವರದಿಗಳನ್ನು ಪಡೆದುಕೊಂಡು ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ರಾಯಭಾರಿ ಕಚೇರಿ ಮತ್ತು ಸ್ಥಳೀಯ ಆಡಳಿತ ಸೇರಿಕೊಂಡು ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳಲಾಗುತ್ತದೆ.
ಈ ಸಮಯದಲ್ಲಿ ಸ್ಪಂದನಾ ಅವರ ಪಾಸ್ ಪೋರ್ಟ್ ಮತ್ತೆ ವೀಸಾವನ್ನು ವಾಪಸ್ ಪಡೆದುಕೊಳ್ಳಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ನಂತರವಷ್ಟೇ ಮೃತದೇಹವನ್ನು ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುತ್ತದೆ.
ಏರ್‌ಪೋರ್ಟ್‌ಗೆ ಮೃತದೇಹ ತಂದ ತಕ್ಷಣವೇ ಅಲ್ಲೂ ಹಲವು ಪ್ರಕ್ರಿಯೆಗಳು ನಡೆಯಲಿವೆ. ಅಲ್ಲಿಯೂ ಕೂಡ ರಾಯಭಾರಿ ಕಚೇರಿಯಿಂದ ಪಡೆದಿರುವಂತಹ ಎಲ್ಲ ವರದಿಗಳನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಬೇಕು. ಆನಂತರವಷ್ಟೇ ಮೃತದೇಹವನ್ನು ವಿಮಾನದಲ್ಲಿ ಸಾಗಿಸಲು ಪರವಾನಿಗೆ ದೊರೆಯುತ್ತದೆ. ಈ ಎಲ್ಲಾ ಕಾರಣದಿಂದಾಗಿ ಸ್ಪಂದನಾ ಅವರ ಮೃತ ದೇಹ ಬೆಂಗಳೂರಿಗೆ ತರಲು ತಡವಾಗುತ್ತಿದೆ.
ನಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ಅವರ ಮೃತದೇಹ ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಅಲ್ಲಿಂದ ಸ್ಪಂದನಾ ಅವರ ನಿವಾಸಕ್ಕೆ ಮೃತದೇಹ ಬರಲಿದ್ದು, ಅಲ್ಲಿ ಪೂಜೆಯ ನಂತರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂ (Malleswaram) ಆಟ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.
ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ (Cremation) ಮಾಡಲಾಗುವುದು ಎಂದು ಬಿ.ಕೆ ಹರಿಪ್ರಸಾದ್ ಹೇಳಿದರು. ಇಂದು ಮಧ್ಯಾಹ್ನದವರೆಗೂ ಥೈಲ್ಯಾಂಡ್ ನ ದೇಶದ ಕಸ್ಟಮ್ ಕ್ಲಿಯರೆನ್ಸ್ ಪ್ರಕ್ರಿಯೆಗಳು ನಡೆಯಲಿವೆ. ತದನಂತರ ಸ್ಪಂದನಾ ಮೃತದೇಹ ಕುಟುಂಬಕ್ಕೆ ಹಸ್ತಾಂತರವಾಗಲಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್
ಕಳೆದ ಒಂದು ವಾರದಿಂದ ಸ್ಪಂದನಾ ಸೋದರ ಸಂಬಂಧಿಗಳ ಜೊತೆ ಬ್ಯಾಂಕಾಕ್ (Bangkok) ಪ್ರವಾಸದಲ್ಲಿದ್ದರು. ಭಾನುವಾರ ಅವರಿಗೆ ಹೃದಯನೋವು ಕಾಣಿಸಿಕೊಂಡಿದೆ. ರಾತ್ರಿ ಮಲಗಿದವರು ಎದ್ದೇಳಲಿಲ್ಲ ಎನ್ನುವ ಮಾಹಿತಿಯನ್ನು ಅವರ ಕುಟುಂವಸ್ಥರು ತಿಳಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಭಾನುವಾರ ರಾತ್ರಿಯೇ ವಿಜಯ ರಾಘವೇಂದ್ರ ಬ್ಯಾಂಕಾಕ್ ಗೆ ತೆರಳಿದ್ದಾರೆ.
ಭಾನುವಾರ ರಾತ್ರಿ ಬ್ಯಾಂಕಾಕ್ ಹೊರಟ ವಿಜಯ ರಾಘವೇಂದ್ರ, ಸೋಮವಾರ ಬೆಳಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ಎರಡೂ ಕುಟುಂಬ ಆಘಾತಕ್ಕೆ ಒಳಗಾಗಿದೆ. ಜೊತೆಗೆ ವಿಜಯ ರಾಘವೇಂದ್ರ ಜೊತೆ ಸಂಪರ್ಕದಲ್ಲಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಮುಗಿಸಲಾಗುತ್ತಿದೆ.
ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು.
ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸ್ಪಂದನಾ ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಗೆ ಆಘಾತ ಮೂಡಿಸಿದೆ’ ಎಂದು ಹೇಳಿದರು.
ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ (Death) ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಅನೇಕ ಗಣ್ಯರು ಸತಾಪ ವ್ಯಕ್ತ ಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಯೂರಪ್ಪ, ಬಸವರಾಜ ಬೊಮ್ಮಾಯಿ, ನಟಿ-ಸಂಸದೆ ಸುಮಲತಾ ಅಂಬರೀಶ್, ನಟಿ ರಾಗಿಣಿ, ನಿರ್ದೇಶಕ ನಾಗಭರಣ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ವಿಜಯ ರಾಘವೇಂದ್ರ ಮತ್ತು ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದಿದ್ದಾರೆ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದರು ನಿರೀಕ್ಷೆ ಮಾಡಿರಲಿಲ್ಲ. ಇದೊಂದ ಆಘಾತಕಾರಿ ಘಟನೆ’ ಎಂದಿದ್ದಾರೆ.
ವಿಜಯ ರಾಘವೇಂದ್ರ ಚಿತ್ರಗಳ ನಿರ್ದೇಶಕ ಹಾಗೂ ಅವರ ಪುತ್ರನಿಗೆ ನೃತ್ಯ ಹೇಳಿಕೊಡುತ್ತಿರುವ ಹಿರಿಯ ನಿರ್ದೇಶಕ ನಾಗಾಭರಣ ಮಾಧ್ಯಮಗಳ ಜೊತೆ ಮಾತನಾಡಿ, ‘ನೀವು ಆ ಸುದ್ದಿ ಹೇಳಿದ ತಕ್ಷಣ ನಾನು ಗೌರವ ಡಾಕ್ಟರೇಟ್ ಪಡೆದ ಸಂತೋಷ 100 ಪಟ್ಟು ಕುಸಿಯಿತು. ವಿಜಯ ರಾಘವೇಂದ್ರ ಕುಟುಂಬದ ಜೊತೆ ಬಹಳ ದೊಡ್ಡ ಒಡನಾಟ ಇತ್ತು. ಚಿನ್ನಾರಿ ಮುತ್ತ ಸಿನೆಮಾದಿಂದ ವಿಜಯ ರಾಘವೇಂದ್ರ ಬೆಳವಣಿಗೆ ಕಂಡವನು. ನನ್ನ ಚಿನ್ನಾರಿ ಮುತ್ತನನ್ನು ಅವನಲ್ಲಿ ಕಂಡಿದ್ದೆ. ಆ ಸುದ್ದಿ ಕೇಳಿ ನನಗೆ ನಿಜವಾಗಿಯೂ ಶಾಕ್ ಆಗಿದೆ’ ಎಂದು ತುಮಕೂರಿನಿಂದ ಮಾತನಾಡಿದ್ದಾರೆ.
ತೀವ್ರ ಹೃದಯಾಘಾತದಿಂದ ನಿಧನರಾಗಿರುವ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಟಿ ಹಾಗೂ ನಿರ್ಮಾಪಕಿಯೂ ಆಗಿ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ದೇಶನ ಮಾಡಿದ್ದ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ಅತಿಥಿ ಪಾತ್ರವೊಂದನ್ನು ನಿರ್ವಹಿಸಿದ್ದರು. ಈ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಜೊತೆಗೆ ಪತಿ ವಿಜಯ ರಾಘವೇಂದ್ರ ನಟಿಸಿದ್ದ ‘ಕಿಸ್ಮತ್’ ಚಿತ್ರಕ್ಕೆ ಸ್ಪಂದನಾ ನಿರ್ಮಾಪಕಿ. 2018ರಲ್ಲಿ ತೆರೆ ಕಂಡಿದ್ದ ಈ ಸಿನಿಮಾಗೆ ಸ್ಪಂದನಾ ಹಣ ಹೂಡಿದ್ದರು. ಪತಿಗಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ನಟನೆಯನ್ನು ವೃತ್ತಿಯಾಗಿ ಸ್ವೀಕಾರ ಮಾಡದೇ ಇದ್ದರೂ, ಕಲಾವಿದರಿಗೆ ಸ್ಪಂದನಾ ಸಾಕಷ್ಟು ಗೌರವವನ್ನು ನೀಡುತ್ತಿದ್ದರು.
ಸ್ಪಂದನಾ ಅಸಿಸ್ಟೆಂಟ್ ಪೊಲೀಸ್ ಕಮಿಷ್ನರ್ ಬಿ.ಕೆ. ಶಿವರಾಮ್ ಅವರ ಮಗಳು. ಆನಂತರ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಆಗಸ್ಟ್ 26, 2007ರಲ್ಲಿ ಮದುವೆಯಾಗಿದ್ದರು. ಇದೊಂದು ಅಪರೂಪದ ಜೋಡಿ ಎಂದೇ ಬಣ್ಣಿಸಲಾಗುತ್ತಿತ್ತು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೆಂಡತಿಯನ್ನು ಸಾಕಷ್ಟು ಕೊಂಡಾಡಿದ್ದರು ವಿಜಯ ರಾಘವೇಂದ್ರ. ತಮ್ಮ ಪ್ರೀತಿಯ ದಿನಗಳನ್ನೂ ಅವರು ಮೆಲುಕು ಹಾಕಿದ್ದರು.
ಸ್ಪಂದನಾ ಮತ್ತು ವಿಜಯ ರಾಘವೇಂದ್ರ ದಂಪತಿಗೆ ಮುದ್ದಾದ ಒಬ್ಬ ಮಗನಿದ್ದಾನೆ. ಅವನಿಗೆ ಅಭಿಮಾನಿದಂದಲೇ ಶೌರ್ಯ ಎಂದು ಹೆಸರಿಟ್ಟಿದ್ದರು ದಂಪತಿ. ಶೌರ್ಯ ಇದೀಗ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ನಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ನಿಧನಕ್ಕೆ ಅನೇಕ ಗಣ್ಯರು ಸಂತಾಪ (Condolence) ವ್ಯಕ್ತ ಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಯೂರಪ್ಪ, ಬಸವರಾಜ ಬೊಮ್ಮಾಯಿ, ನಟಿ-ಸಂಸದೆ ಸುಮಲತಾ ಅಂಬರೀಶ್, ನಟಿ ರಾಗಿಣಿ, ನಿರ್ದೇಶಕ ನಾಗಭರಣ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ವಿಜಯ ರಾಘವೇಂದ್ರ ಮತ್ತು ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದಿದ್ದಾರೆ. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ
ವಿಜಯ ರಾಘವೇಂದ್ರ ಚಿತ್ರಗಳ ನಿರ್ದೇಶಕ ಹಾಗೂ ಅವರ ಪುತ್ರನಿಗೆ ನೃತ್ಯ ಹೇಳಿಕೊಡುತ್ತಿರುವ ಹಿರಿಯ ನಿರ್ದೇಶಕ ನಾಗಭರಣ ಮಾಧ್ಯಮಗಳ ಜೊತೆ ಮಾತನಾಡಿ, ‘ನೀವು ಆ ಸುದ್ದಿ ಹೇಳಿದ ತಕ್ಷಣ ನಾನು ಗೌರವ ಡಾಕ್ಟರೇಟ್ ಪಡೆದ ಸಂತೋಷ 100 ಪಟ್ಟು ಕುಸಿಯಿತು. ವಿಜಯರಾಘವೇಂದ್ರ ಕುಟುಂಬದ ಜೊತೆ ಬಹಳ ದೊಡ್ಡ ಒಡನಾಟ ಇತ್ತು. ಚಿನ್ನಾರಿ ಮುತ್ತ ಸಿನೆಮಾದಿಂದ ವಿಜಯ ರಾಘವೇಂದ್ರ ಬೆಳವಣಿಗೆ ಕಂಡವನು. ನನ್ನ ಚಿನ್ನಾರಿಮುತ್ತವನ್ನು ಅವನಲ್ಲಿ ಕಂಡಿದ್ದೆ. ಆ ಸುದ್ದಿ ಕೇಳಿ ನನಗೆ ನಿಜವಾಗಿಯೂ ಶಾಕ್ ಆಗಿದೆ’ ಎಂದು ತಮಕೂರಿನಿಂದ ಮಾತನಾಡಿದ್ದಾರೆ.
ಮುಂದುವರೆದು ಮಾತನಾಡಿದ ನಾಗಭರಣ, ‘ನಿನ್ನೆ ಅವರ ಮಗು ಶೌರ್ಯನಿಗೆ ನಾನು ಪಾಠ ಹೇಳುತ್ತಿದ್ದೆ. ಅದನ್ನು ಮುಗಿಸಿಕೊಂಡು ಸಂಜೆ 5.30ಕ್ಕೆ ವಿಜಯರಾಘವೇಂದ್ರ ಮಗುವನ್ನು ಪಿಕ್ ಮಾಡಿದ್ದ. ನಿಜವಾಗಿಯೂ ಪರಿತಾಪ ಪಡುವ ವಿಚಾರ ಇದು. ನನಗೆ ರಿಯಾಕ್ಟ್ ಮಾಡೋಕೆ ಆಗ್ತಿಲ್ಲ. ಬಹಳ ಬಹಳ ದುಃಖದ ಸಂಗತಿ. ಯಾಕೋ ಆ ಕುಟುಂಬದ ಸುತ್ತ ಛಾಯೆಗಳು ನಿರಂತರವಾಗಿ ಎರಗ್ತಿದಿಯಲ್ಲ ಅನ್ನೋದೆ ಬಹಳ ದುಃಖದ ವಿಷಯ. ಯಾರನ್ನು ಕಳೆದುಕೊಳ್ಳಬಾರದು ಅಂತ ಇಷ್ಟಪಡ್ತಿವೋ ಅವರನ್ನ ಕಳೆದುಕೊಳ್ತಿದ್ದೇವೆ. ಒಂದೇ ಕುಟುಂಬದಲ್ಲಿ ಈ ರೀತಿಯಾಗಿ ಆಗ್ತಿದಿಯಲ್ಲಾ ಅನ್ನೋದೆ ದುಃಖದ ಸಂಗತಿ ಎಂದಿದ್ದಾರೆ.
ತೀವ್ರ ಹೃದಯಾಘಾತದಿಂದ ನಿಧನರಾಗಿರುವ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಟಿ ಹಾಗೂ ನಿರ್ಮಾಪಕಿಯೂ ಆಗಿ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ದೇಶನ ಮಾಡಿದ್ದ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ಅತಿಥಿ ಪಾತ್ರವೊಂದನ್ನು ನಿರ್ವಹಿಸಿದ್ದರು. ಈ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಜೊತೆಗೆ ಪತಿ ವಿಜಯ ರಾಘವೇಂದ್ರ ನಟಿಸಿದ್ದ ‘ಕಿಸ್ಮತ್’ ಚಿತ್ರಕ್ಕೆ ಸ್ಪಂದನಾ ನಿರ್ಮಾಪಕಿ. 2018ರಲ್ಲಿ ತೆರೆ ಕಂಡಿದ್ದ ಈ ಸಿನಿಮಾಗೆ ಸ್ಪಂದನಾ ಹಣ ಹೂಡಿದ್ದರು. ಪತಿಗಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ನಟನೆಯನ್ನು ವೃತ್ತಿಯಾಗಿ ಸ್ವೀಕಾರ ಮಾಡದೇ ಇದ್ದರೂ, ಕಲಾವಿದರಿಗೆ ಸ್ಪಂದನಾ ಸಾಕಷ್ಟು ಗೌರವವನ್ನು ನೀಡುತ್ತಿದ್ದರು. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ
ಸ್ಪಂದನಾ ಅಸಿಸ್ಟೆಂಟ್ ಪೊಲೀಸ್ ಕಮಿಷ್ನರ್ ಬಿ.ಕೆ. ಶಿವರಾಮ್ ಅವರ ಮಗಳು. ಆನಂತರ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಆಗಸ್ಟ್ 26, 2007ರಲ್ಲಿ ಮದುವೆಯಾಗಿದ್ದರು. ಇದೊಂದು ಅಪರೂಪದ ಜೋಡಿ ಎಂದೇ ಬಣ್ಣಿಸಲಾಗುತ್ತಿತ್ತು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೆಂಡತಿಯನ್ನು ಸಾಕಷ್ಟು ಕೊಂಡಾಡಿದ್ದರು ವಿಜಯ ರಾಘವೇಂದ್ರ. ತಮ್ಮ ಪ್ರೀತಿಯ ದಿನಗಳನ್ನೂ ಅವರು ಮೆಲುಕು ಹಾಕಿದ್ದರು.
ಸ್ಪಂದನಾ ಮತ್ತು ವಿಜಯ ರಾಘವೇಂದ್ರ ದಂಪತಿಗೆ ಮುದ್ದಾದ ಒಬ್ಬ ಮಗನಿದ್ದಾನೆ. ಅವನಿಗೆ ಅಭಿಮಾನಿದಂದಲೇ ಶೌರ್ಯ ಎಂದು ಹೆಸರಿಟ್ಟಿದ್ದರು ದಂಪತಿ. ಶೌರ್ಯ ಇದೀಗ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ (Hear Attack) ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದವರೂ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ’ ಎಂದಿದ್ದಾರೆ.
ಮುಂದುವರಿದು ಮಾತನಾಡಿದ ಕುಮಾರಸ್ವಾಮಿ, ‘ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲ ಹಿನ್ನೆಲೆ ಕೋವಿಡ್ (COVID 19) ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು’ ಎಂದರು. ಇದನ್ನೂ ಓದಿ:ಟೈಗರ್ ಶ್ರಾಫ್ ಜೊತೆ ಬ್ರೇಕಪ್? ಹೊಸ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ದಿಶಾ
ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಆ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಈಗಾಗಲೇ ವಿಜಯ ರಾಘವೇಂದ್ರ (Vijaya Raghavendra) ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passedway) ವೈದ್ಯರು ತಿಳಿಸಿದ್ದಾರೆ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.
ಶ್ರೀಮುರಳಿ ಹೇಳಿದ್ದೇನು?
ಸ್ಪಂದನಾ (Spandana) ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಗೆ ಆಘಾತ ಮೂಡಿಸಿದೆ’ ಎಂದು ಹೇಳಿದರು. ಇದನ್ನೂ ಓದಿ:ತಮಿಳಿಗೆ ಹಾರಿದ ‘ಸೀತಾರಾಮಂ’ ನಟಿ- ಶಿವಕಾರ್ತಿಕೇಯನ್‌ಗೆ ಮೃಣಾಲ್ ನಾಯಕಿ
ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ (Vijaya Raghavendra) ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.
ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passway) ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ದಯವಿಟ್ಟು ಊಹಾಪೋಹಗಳನ್ನು ಹಬ್ಬಿಸಬೇಡಿ. ಪರ್ಸನಲ್ ಲೈಫ್ ಇರುತ್ತೆ ಎಂದು ಸ್ಪಂದನಾ ವಿಜಯ್ ಅವರ ತಂದೆ ಬಿ.ಕೆ ಶಿವರಾಂ ಸಹೋದರ ಬಿ.ಕೆ ಹರಿಪ್ರಸಾದ್ (B K Hariprasad) ಮನವಿ ಮಾಡಿಕೊಂಡಿದ್ದಾರೆ.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ (Spandana Vijay) ನಿಧನದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪಂದನಾ ತನ್ನ ಕಸಿನ್ಸ್ ಜೊತೆಗೆ ಟ್ರಿಪ್ ಹೋಗಿದ್ರು. ವಿಜಯ ರಾಘವೇಂದ್ರಗೆ ಚಿತ್ರೀಕರಣ ಇತ್ತು. ಅದನ್ನು ಮುಗಿಸಿಕೊಂಡು ಅವರು ಕೂಡ ಸೇರಿಕೊಂಡಿದ್ದಾರೆ ಎಂದರು.
ಸ್ವಲ್ಪ ಆರೋಗ್ಯದಲ್ಲಿ ವೀಕ್ ಇದ್ದರು. ರೂಮರ್ರ್ಸ್ ಮಾಡಬೇಡಿ ಪರ್ಸನಲ್ ಲೈಫ್ ಇರುತ್ತೆ. ಮಗ ಸದ್ಯ ಇಲ್ಲೆ ಇದ್ದಾನೆ. ಅಂತ್ಯಕ್ರಿಯೆಯ ಬಗ್ಗೆ ಮೃತದೇಹ ಸಿಕ್ಕ ಬಳಿಕ ನಿರ್ಧಾರ ಮಡುತ್ತೇವೆ. ಮಂಗಳವಾರ ಮೃತದೇಹ ಬರುವ ಸಾಧ್ಯತೆ ಇದೆ ಎಂದು ಹರಿಪ್ರಸಾದ್ ತಿಳಿಸಿದರು.
ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ವಿಜಯ ರಾಘವೇಂದ್ರ ಬ್ಯಾಂಕಾಕ್ ಗೆ ಪ್ರಯಾಣ ಬೆಳೆಸಿದ್ದಾರೆ.
ಸ್ಪಂದನಾ (Spandana) ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಕೆ ಆಘಾತ ಮೂಡಿಸಿದೆ’ ಎಂದು ಹೇಳಿದರು.
ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ (Vijaya Raghavendra) ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.
ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passedway) ವೈದ್ಯರು ತಿಳಿಸಿದ್ದಾರೆ.