Tag: ವಿಜಯ ರಾಘವೇಂದ್ರ

  • ಸ್ಪಂದನಾ ವಿಜಯ್ ನಿಧನ- ಡಿಕೆಶಿ ಸಂತಾಪ

    ಸ್ಪಂದನಾ ವಿಜಯ್ ನಿಧನ- ಡಿಕೆಶಿ ಸಂತಾಪ

    ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ (Vijaya Raghavendra) ಅವರು ಧರ್ಮಪತ್ನಿ ಸ್ಪಂದನಾ (Spandana Vijay) ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್‍ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು ಎಂದು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನ

    ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ವಿಜಯ ರಾಘವೇಂದ್ರ ಬ್ಯಾಂಕಾಕ್ ಗೆ ಪ್ರಯಾಣ ಬೆಳೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುತೂಹಲ ಕೆರಳಿಸುವ ‘ಕದ್ದ ಚಿತ್ರ’: ಬಿಡುಗಡೆಗೆ ದಿನಗಣನೆ

    ಕುತೂಹಲ ಕೆರಳಿಸುವ ‘ಕದ್ದ ಚಿತ್ರ’: ಬಿಡುಗಡೆಗೆ ದಿನಗಣನೆ

    ವಿಜಯ ರಾಘವೇಂದ್ರ ನಾಯಕನಾಗಿ ನಟಿಸಿರುವ ‘ಕದ್ದ ಚಿತ್ರ’ (Kadda Chitra) ಸಿನಿಮಾ ರಿಲೀಸ್ ಗೆ ತಯಾರಾಗಿದೆ. ಶೀರ್ಷಿಕೆಯಲ್ಲಿಯೇ ವೈಶಿಷ್ಟ್ಯವನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರವನ್ನು ಸುಹಾಸ್ ಕೃಷ್ಣ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಒಂದು ಹಾಡು ಮತ್ತು ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ಖುಷಿಯಲ್ಲಿ ಬಹುತೇಕ ಕೆಲಸಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ, ಈ ತಿಂಗಳು ಕೊನೆಯಲ್ಲಿ ಸಿನಿಮಾವನ್ನು ರಿಲೀಸ್ ಮಾಡಲು ಹೊರಟಿದೆ.

    ಚಿನ್ನಾರಿಮುತ್ತ ಮೂಲಕ ಬಾಲನಟನಾಗಿ ಎಂಟ್ರಿ ಕೊಟ್ಟು, ಆ ನಂತರ ನಾನಾ ಚಿತ್ರಗಳಲ್ಲಿ ನಟಿಸಿದವರು ವಿಜಯ್ ರಾಘವೇಂದ್ರ (Vijay Raghavendra). ಇತ್ತೀಚಿನ ವರ್ಷಗಳಲ್ಲಂತೂ ಅವರನ್ನು ಹೊಸ ಹೊಸ ಕಥೆಗಳು ಹುಡುಕಿಕೊಂಡು ಬಂದಿವೆ. ಸೈಕಾಲಾಜಿಕಲ್ ಥ್ರಿಲ್ಲರ್ ಜಾನರ್ ನ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರು ಮೂರು ಶೇಡ್ ಇರುವಂತಹ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಸಿನಿಮಾದಲ್ಲಿ ಅವರದ್ದು ಖ್ಯಾತ ಬರಹಗಾರನ ಪಾತ್ರವಂತೆ.

    ಲುಕ್ ಸೇರಿದಂತೆ ಈವರೆಗೂ ಎಲ್ಲಿಯೂ ಕಾಣಿಸದೇ ಇರುವಂತ ವಿಜಯ್ ರಾಘವೇಂದ್ರ ಅವರನ್ನು ಈ ಸಿನಿಮಾದಲ್ಲಿ ನೋಡಬಹುದು ಎನ್ನುತ್ತಾರೆ ಚಿತ್ರದ ನಿರ್ದೇಶಕರು. ಈಗಾಗಲೇ ತೆಲುಗು ಸಿನಿಮಾವೊಂದರಲ್ಲಿ ನಟಿಸಿ, ಶಿವಾಜಿ ಸುರತ್ಕಲ್, ಮಿರ್ಚಿ ಮಂಡಕ್ಕಿ ಖಡಕ್ ಚಾಯ್ ಮುಂತಾದ ಸಿನಿಮಾಗಳ ಮೂಲಕ ಒಂದಷ್ಟು ಹೆಸರು ಮಾಡಿರುವ ನಮ್ರತಾ ಸುರೇಂದ್ರನಾಥ್ (Namrata Surendranath)  ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದನ್ನೂ ಓದಿ: ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಟೀಸರ್ ರಿಲೀಸ್

    ನಿರ್ದೇಶಕನಾಗಿಯೂ ಹೆಸರು ಮಾಡಿರುವ ರಾಘು ಶಿವಮೊಗ್ಗ ಪಬ್ಲಿಷರ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ವಿಜಯ್ ಮಗಳ ಪಾತ್ರದಲ್ಲಿ ಬೇಬಿ ಆರಾಧ್ಯ ನಟಿಸಿದ್ದಾಳೆ. ಸುಜಿತ್ ಸುಪ್ರಭ, ಸ್ಟೀಫನ್, ವಿನಯ್ ಕುಮಾರ್ ನೆಗೆಟಿವ್ ಶೇಡಿನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಥೆಯಲ್ಲಿ ಮಾತ್ರವಲ್ಲದೇ, ಸ್ಕ್ರೀನ್ ಪ್ಲೇ ವಿಚಾರದಲ್ಲಿಯೂ ಕದ್ದಚಿತ್ರ ಖಡಕ್ಕಾಗಿದೆ. ಸೆಕೆಂಡ್ ಹಾಫ್‍ನಲ್ಲಿ ಪ್ಯಾರಲೆಲ್ ಮೆಥೆಡ್ಡಿನ ಸ್ಕ್ರೀನ್ ಪ್ಲೇ ಮೂಲಕ ದೃಶ್ಯಗಳು ಚಲಿಸಲಿವೆ. ಸಿಂಗಲ್ ಟೇಕ್‍ನಲ್ಲಿ ಒಂದಷ್ಟು ಪ್ರಯೋಗಗಳನ್ನು ಮಾಡಲಾಗಿದೆಯಂತೆ.

     

    ಎ.ಎಸ್ ಮೂರ್ತಿ ಸಾರಥ್ಯದ ಅಭಿನಯ ತರಂಗದಲ್ಲಿ ನಟನೆ, ನಿರ್ದೇಶನ ಸೇರಿದಂತೆ ಒಂದಷ್ಟು ಪ್ರಕಾರಗಳಲ್ಲಿ ಪಳಗಿಕೊಂಡಿರುವವರು ನಿರ್ದೇಶಕ ಸುಹಾಸ್ ಕೃಷ್ಣ(Suhas Krishna). ಹಾಗೆ ಎರಡ್ಮೂರು ವರ್ಷ ರಂಗಭೂಮಿಯಲ್ಲಿ ಪಳಗಿಕೊಂಡಿದ್ದ ಸುಹಾಸ್ ಆ ಬಳಿಕ, ರವಿ ಶ್ರೀವತ್ಸ, ಸಾಯಿ ಕೃಷ್ಣ, ಅರವಿಂದ್ ಕೌಶಿಕ್, ರಾಘು ಶಿವಮೊಗ್ಗ ಮುಂತಾದ ನಿರ್ದೇಶಕರ ಜೊತೆಗೂ ಕೆಲಸ ಮಾಡಿ ಅನುಭವ ಪಡೆದವರು. ಇದೀಗ ಕದ್ದ ಚಿತ್ರದ ಮೂಲಕ ಸ್ವತಂತ್ರ ನರ್ದೇಶಕರಾಗಿದ್ದಾರೆ. ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ, ಗೌತಮ್ ಮನು ಸಂಕಲನ, ಸ್ಟೀಫನ್ ಕೊರಿಯೋಗ್ರಫಿ, ದುಷ್ಯಂತ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತ್ರಿಕೋನ ಪ್ರೇಮಕಥೆಯ ‘ಓ ಮನಸೇ’ ಹಾಡು ರಿಲೀಸ್

    ತ್ರಿಕೋನ ಪ್ರೇಮಕಥೆಯ ‘ಓ ಮನಸೇ’ ಹಾಡು ರಿಲೀಸ್

    ವಿಜಯ ರಾಘವೇಂದ್ರ (Vijay Raghavendra), ಧರ್ಮ ಕೀರ್ತಿರಾಜ್ (Dharma Keerthiraj) ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಓ ಮನಸೇ’ (O Manase) ಚಿತ್ರದ ಹಾಡುಗಳು ಬಿಡುಗಡೆಯಾಗಿದೆ.  ಯೂಟ್ಯೂಬ್ ನಲ್ಲೂ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿದೆ. ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

    ಇತ್ತೀಚೆಗೆ ನಡೆದ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕರು, ‘ಇದು ನಮ್ಮ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. ಮುಂದೆಯೂ ಜನರಿಗೆ ಸದಭಿರುಚಿ ಸಿನಿಮಾ ಕೊಡುವ ಉದ್ದೇಶದಿಂದ ಈ ಸಿನಿಮಾ ಮಾಡಲಾಗಿದೆ. ಒಂದು ಒಳ್ಳೆ ಸಿನಿಮಾ ಮಾಡಿದ ಖುಷಿ ನಮಗೆಲ್ಲಾ ಇದೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಜೊತೆ ನಾಯಕಿಯಾಗಿ ಸಂಚಿತ ಪಡುಕೋಣೆ ಅದ್ಬುತವಾಗಿ ನಟಿಸಿದ್ದಾರೆ.  ಟ್ರೇಲರ್ ಗೆ ಯೂಟ್ಯೂಬ್‌ನಲ್ಲಿ ಒಳ್ಳೆ ರೆಸ್ಪಾನ್ಸ್ ಬಂದಿದೆ. ಈಗ ಹಾಡುಗಳು ಬಿಡುಗಡೆಯಾಗಿದೆ.  ನಮ್ಮ ಬ್ಯಾನರ್ ನಿಂದ ಇನ್ನು ಹತ್ತಾರು ಸಿನಿಮಾ ಮಾಡುವ ಯೋಜನೆ ಇದೆ’ ಎಂದು ಹೇಳಿದರು.

    ಈ ಮೊದಲು ‘ನವರಂಗಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದ ಉಮೇಶ್ ಗೌಡ ಈಗ ಮೂರನೇ ಪ್ರಯತ್ನವಾಗಿ ‘ಓ ಮನಸೇ’ ನಿರ್ದೇಶನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ‘ಈಗಾಗಲೇ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಒಳ್ಳೆ ಪ್ರಶಂಸೆ ಸಿಕ್ಕಿದ್ದು, ಈಗ ಹಾಡುಗಳಿಗೂ ಒಳ್ಳೆ ರೆಸ್ಪಾನ್ಸ್ ಬರುತ್ತಿದೆ. ಇದೊಂದು ನೈಜಘಟನೆ ಆಧಾರಿತ ಸಿನಿಮಾ ಎಂಬುದು ವಿಶೇಷ’ ಎಂದು ಹೇಳಿದರು. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಇದೇ ಸಂದರ್ಭದಲ್ಲಿ ಮಾತನಾಡಿದ ನಟ ವಿಜಯರಾಘವೇಂದ್ರ ‘ಸಿನಿಮಾ ಪ್ರಮೋಷನ್‌ನಲ್ಲಿ ಆಡಿಯೋ ಬಿಡುಗಡೆ ಎಂಬುದು ಮುಖ್ಯವಾದ ಹಂತ. ಸಿನಿಮಾ ಮಾಡೋದು ಮುಖ್ಯವಲ್ಲ ಜನರಿಗೆ ಅದನ್ನು ತಲುಪಿಸುವುದು ಮುಖ್ಯ. ನಿರ್ಮಾಪಕರು ಒಳ್ಳೆ ಪ್ರಯತ್ನ ಮಾಡಿದ್ದಾರೆ.ಇದರಲ್ಲಿ ನಾನು ಪೊಲೀಸ್ ಪಾತ್ರ ಮಾಡಿದ್ದು, ಚಿತ್ರದಲ್ಲಿ ಕಾಮಿಡಿ. ಆ್ಯಕ್ಷನ್, ಲವ್ ಹೀಗೆ ಎಲ್ಲಾ ಅಂಶಗಳಿವೆ.  ಇದು ನನಗೆ ಸ್ಪೆಷಲ್ ಸಿನಿಮಾ ಎನ್ನಬಹುದು’ ಎಂದರು.  ‘ಕೊರೋನಾ ಟೈಮ್‌ನಲ್ಲಿ ನನಗೆ ಈ ಸಿನಿಮಾ ಸಿಕ್ಕಿದ್ದು, ಕಮ್ ಬ್ಯಾಕ್ ಜರ್ನಿ ಎನ್ನಬಹುದು. ನಾನು ಈ ಚಿತ್ರದಲ್ಲಿ ಲವರ್ ಬಾಯ್ ಹಾಗೂ ನೆಗಟಿವ್ ಸೈಡ್ ಪಾತ್ರ ಮಾಡಿದ್ದೇನೆ’ ಎಂದು ನಾಯಕ ಧರ್ಮ ಕೀರ್ತಿರಾಜ್ ತಿಳಿಸಿದರು.   ‘ಇದು ತ್ರಿಕೋನ ಪ್ರೇಮ ಕಥೆ”  ಒಳಗೊಂಡ ಸಿನಿಮಾ.  ಈ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ ಎಂದರು ನಾಯಕಿ ಸಂಚಿತಾ ಪಡುಕೋಣೆ (Sanchita Padukone).

    ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್, ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ, ನಟಿ ಶಾನ್ವಿ ಶ್ರೀವಾತ್ಸವ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಅಣಜಿ ನಾಗರಾಜ್, ಪುಟ್ಟಣ್ಣ ಮುಂತಾದವರು ಅಥಿತಿಗಳಾಗಿ ಆಗಮಿಸಿದ್ದರು.  ಕವಿರಾಜ್, ಡಾ. ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ವಿಶೇಷವಾಗಿ ಎರಡು ಗೀತೆಗಳನ್ನು ಥೈಲ್ಯಾಂಡ್‌ನ ಸುಂದರ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದೆ.   ಬಂಡೆ ಚಂದ್ರು, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಚಿತ್ರಕ್ಕೆ ಎಂ.ಆರ್ ಸೀನು ಛಾಯಾಗ್ರಹಣ, ಶ್ರೀನಿವಾಸ್ ಬಾಬು ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

    ‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

    ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ  “ಓ ಮನಸೇ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಚಿತ್ರದ ಕುರಿತು ಮಾತನಾಡಿದರು. ನಾನು ಕೊರೋನ ಒಂದನೇ ಅಲೆ ಮುಗಿದ ಮೇಲೆ ನಿರ್ಮಾಪಕರಲೊಬ್ಬರಾದ ರಾಮು ಅವರ ಬಳಿ ಈ ಚಿತ್ರದ ಕಥೆ ಹೇಳಿದೆ. ಅವರಿಗೆ ಕಥೆ ಇಷ್ಟವಾಗಿ, ತಮ್ಮ‌ ಮಿತ್ರರ ಒಡಗೂಡಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಆನಂತರ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅವರಿಗೆ ಚಿತ್ರದ ಕಥೆ ಹೇಳಲಾಯಿತು. ಅವರು ಸಹ ನಟಿಸಲು ಒಪ್ಪಿದರು. ಸಂಚಿತಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾದರು. ಲವ್ ಮತ್ತು ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಬೆಂಗಳೂರು ಮುಂತಾದ ಕಡೆ 55 ದಿನಗಳ ಕಾಲ ನಡೆದಿದೆ. ಹಾಡುಗಳ ಚಿತ್ರೀಕರಣ ಥೈಲ್ಯಾಂಡ್ ನಲ್ಲಿ ಆಗಿದೆ. ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ ಎಂದು ನಿರ್ದೇಶಕ ಉಮೇಶ್ ಗೌಡ ತಿಳಿಸಿದರು.

    ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ನಡುವೆ ಪೊಲೀಸ್ ಪಾತ್ರಗಳು ನನಗೆ ಹೆಚ್ಚು ಬರುತ್ತಿದೆ. ಮುಂದಿನ ಎರಡು ಚಿತ್ರಗಳಲ್ಲೂ ನನ್ನದು ಪೊಲೀಸ್ ಪಾತ್ರ. ಇದಕ್ಕೆ ಕಾರಣ “ಓ ಮನಸೇ” ತಂಡ ಎನ್ನಬಹುದು. ಏಕೆಂದರೆ ಕೊರೋನ ಸಮಯದಲ್ಲಿ ಬಿಡುವಿದಾಗ ಇವರು ಬಂದು ಈ ಚಿತ್ರದ ಕಥೆ ಹೇಳಿದರು. ಈ ಚಿತ್ರ ಒಪ್ಪಿದ ನಂತರ ಸಾಲುಸಾಲು ಚಿತ್ರಗಳನ್ನು ನಾನು ಒಪ್ಪಿಕೊಂಡೆ.  ತ್ರಿಕೋನ ಪ್ರೇಮಕಥೆ ಆಧಾರಿತ “ಓ ಮನಸೇ” ಚಿತ್ರವನ್ನು ತಾವು ನೋಡಿ ಹಾರೈಸಿ ಎಂದರು ವಿಜಯ ರಾಘವೇಂದ್ರ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವಕ್ಕೆ ಮೋದಿ ಜೊತೆ ಅಕ್ಷಯ್ ಕುಮಾರ್‌ಗೆ ಆಹ್ವಾನ

    ಕೊರೋನ ಸಮಯದಲ್ಲಿ ಸಿನಿಮಾಗಳು ಕಡಿಮೆಯಾಗಿದ್ದವು. ಅಂತಹ ಸಮಯದಲ್ಲಿ ನಿರ್ಮಾಪಕರು ಕರೆದು ಈ ಚಿತ್ರದ ಅಡ್ವಾನ್ಸ್ ನೀಡಿದರು. ಅವರು ಕೊಟ್ಟ ಘಳಿಗೆ ಚೆನ್ನಾಗಿದೆ. ಆನಂತರ ಸಾಕಷ್ಟು ಚಿತ್ರಗಳು ಬಂದವು. ಈ ಚಿತ್ರದ ಬಗ್ಗೆ ಹೇಳಬೇಕಾದರೆ, ನಾಯಕಿಯನ್ನು ನಾನು ಹಾಗೂ ವಿಜಯ ರಾಘವೇಂದ್ರ ಇಬ್ಬರೂ ಪ್ರೀತಿಸುತ್ತೇವೆ. ಯಾರಿಗೆ ಸಿಗುತ್ತಾರೆ? ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ನಿರ್ದೇಶಕರು ಅದ್ಭುತವಾಗಿ ಚಿತ್ರ ಮಾಡಿದ್ದಾರೆ ಎಂದರು ಧರ್ಮ ಕೀರ್ತಿರಾಜ್.

    ನನಗೆ ಕನ್ನಡ ಚಿತ್ರದಲ್ಲಿ ನಟಿಸಲು ಬಹಳ ಆಸೆ. ನನ್ನನ್ನು ಈ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಿದ್ದ ನಿರ್ದೇಶಕ – ನಿರ್ಮಾಪಕರಿಗೆ ಧನ್ಯವಾದ ಎಂದರು ಸಂಚಿತಾ ಪಡುಕೋಣೆ. ನಿರ್ಮಾಪಕರಾದ ‌ಎಂ.ಎನ್ ಭೈರೇಗೌಡ, ಧನಂಜಯ್, ಯುವರಾಜು, ಸು.ಕಾ.ರಾಮು ಮತ್ತು ವೆಂಕಟೇಶ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಧನು ಮಾಸ್ಟರ್ ನೃತ್ಯ ನಿರ್ದೇಶನದ ಬಗ್ಗೆ ಮಾಹಿತಿ ನೀಡಿದರು. ‌ ರಮೇಶ್ ಹಂಡ್ರಂಗಿ ಕಥೆ ಬರೆದಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ಶ್ರೀನಿವಾಸ್ ಪಿ‌ ಬಾಬು ಸಂಕಲನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿರುವ ಈ ಚಿತ್ರಕ್ಕೆ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ, ಹರೀಶ್ ರಾಯ್,  ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೋಲೋ ಆಕ್ಟರ್ ಆಗಿ ತೆರೆ ಮೇಲೆ ವಿಜಯ ರಾಘವೇಂದ್ರ

    ಸೋಲೋ ಆಕ್ಟರ್ ಆಗಿ ತೆರೆ ಮೇಲೆ ವಿಜಯ ರಾಘವೇಂದ್ರ

    ಯುವ ನಿರ್ದೇಶಕ ಎಂ. ಆನಂದ್ ರಾಜ್ ನಿರ್ದೇಶನದಲ್ಲಿ ವಿಜಯ ರಾಘವೇಂದ್ರ ನಟಿಸುತ್ತಿರುವ ಸಿನಿಮಾ ರಾಘು. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರೋ ಈ ಚಿತ್ರ ವಿಜಯ ರಾಘವೇಂದ್ರ ಸಿನಿ ಕೆರಿಯರ್ ನ ವಿಭಿನ್ನ ಸಿನಿಮಾ ಅನ್ನೋದನ್ನ ಚಿತ್ರತಂಡ ಆರಂಭದಿಂದ ಹೇಳಿಕೊಂಡು ಬಂದಿತ್ತು. ಇದೀಗ ಅದಕ್ಕೆ ಸಾಕ್ಷಿ ಎನ್ನುವಂತೆ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ಸಿನಿ ಪ್ರೇಕ್ಷಕರಲ್ಲಿ ಕ್ಯೂರಿಯಾಸಿಟಿ ಮೂಡಿಸಿದೆ.

    ‘ರಾಘು’ ಸಿನಿಮಾ ಮೂಲಕ ತಮ್ಮ ಸಿನಿ ಕೆರಿಯರ್ ನಲ್ಲೇ ಹೊಸದೊಂದು ಪ್ರಯೋಗಕ್ಕೆ ವಿಜಯ ರಾಘವೇಂದ್ರ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ. ಆ ಸಿಕ್ರೇಟ್ ಮೋಷನ್ ಪೋಸ್ಟರ್ ಮೂಲಕ ರಿವೀಲ್ ಆಗಿದೆ. ‘ರಾಘು’ ಸಿನಿಮಾ ಸೋಲೋ ಆಕ್ಟಿಂಗ್ ಸಿನಿಮಾವಾಗಿದ್ದು ಇಂಟ್ರಸ್ಟಿಂಗ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ಕ್ಯೂರಿಯಾಸಿಟಿ ಹುಟ್ಟು ಹಾಕಿದೆ. ಕನ್ನಡದ ಮಟ್ಟಿಗೆ ಇದೊಂದು ಹೊಸ ರೀತಿಯ ಪ್ರಯೋಗವಾಗಿದ್ದು, ಅಷ್ಟೇ ವಿಭಿನ್ನತೆಯನ್ನು ಸಿನಿಮಾ ಒಳಗೊಂಡಿದೆ. ಹೊಸ ರೀತಿಯ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಪೂರ್ತಿ ಸಿನಿಮಾ ವಿಜಯ ರಾಘವೇಂದ್ರ ಒಬ್ಬರೇ ನಟಿಸಿದ್ದಾರೆ. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ‘ಆನ’ ಹಾಗೂ ‘ಬ್ಯಾಂಗ್’ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವ ಇರುವ ಎಂ. ಆನಂದ್ ರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣ ಹೊಸತನದಿಂದ ಕೂಡಿರುವ ಈ ಸಿನಿಮಾ ಕನ್ನಡದಲ್ಲಿ ಹೊಸ ಪ್ರಯೋಗ. ವಿಜಯ ರಾಘವೇಂದ್ರ ಸಿನಿ ಕೆರಿಯರ್ ನ ಡಿಫ್ರೆಂಟ್ ಸಿನಿಮಾ ಇದಾಗಿದ್ದು, ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಶೇಡ್ ನಲ್ಲಿ ತೆರೆ ಮೇಲೆ ಪ್ರೇಕ್ಷಕರನ್ನು ಎದುರುಗೊಳ್ಳಲಿದ್ದಾರೆ ಎನ್ನುತ್ತಾರೆ ನಿರ್ದೇಶಕ ಎಂ. ಆನಂದ್ ರಾಜ್.

    ತಾಂತ್ರಿಕವಾಗಿ ಹಾಗೂ ಕ್ವಾಲಿಟಿ ವಿಚಾರದಲ್ಲಿ ಯಾವುದೇ ಕಾಂಪ್ರಮೈಸ್ ಆಗದೇ ಶ್ರೀಮಂತವಾಗಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಅದಕ್ಕೆಂದೇ ಹೊಸ ಟೆಕ್ನಾಲಜಿ ಇರುವ ಕ್ಯಾಮೆರಾಗಳು, ಅದ್ದೂರಿ ಸೆಟ್ ನಿರ್ಮಾಣ ಮಾಡಿ ‘ರಾಘು’ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕಾಗಿ ಸೌಂಡ್ ಡಿಸೈನಿಂಗ್ ನಲ್ಲಿ ಹೊಸ ರೀತಿಯ ಪ್ರಯೋಗವನ್ನು ಮಾಡಲಾಗಿದ್ದು, ಬಿ.ಆರ್.ನವೀನ್ ಕುಮಾರ್ ಡಿಫ್ರೆಂಟ್ ಇನ್ಸ್ ಟ್ರುಮೆಂಟ್ ಬಳಸಿ ಚಿತ್ರಕ್ಕೆ ಹೊಸ ರೀತಿಯ ಸೌಂಡ್ ಎಫೆಕ್ಟ್ ನೀಡಿದ್ದಾರೆ.

    ರಾಘು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು ಚಿತ್ರದ ಪ್ರಚಾರ ಕಾರ್ಯವನ್ನು  ಚಿತ್ರತಂಡ ಆರಂಭಿಸಿದೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅನೌನ್ಸ್ ಮಾಡಲಿದೆ. ಡಿ ಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ರಣ್ವಿತ್ ಶಿವಕುಮಾರ್, ಅಭಿಷೇಕ್ ಕೋಟ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವಿಜೇತ್ ಚಂದ್ರ ಸಂಕಲನ, ಉದಯ್ ಲೀಲಾ ಕ್ಯಾಮೆರಾ ವರ್ಕ್, ಹಾಡುಗಳಿಗೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದು, ರಿತ್ವಿಕ್ ಮುರಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಹೆಸರಿನಲ್ಲಿ ‘ಮಕ್ಕಳ ಚಿತ್ರೋತ್ಸವ’: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಬಾಲನಟರು

    ಪುನೀತ್ ಹೆಸರಿನಲ್ಲಿ ‘ಮಕ್ಕಳ ಚಿತ್ರೋತ್ಸವ’: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಬಾಲನಟರು

    ಕ್ಕಳ ದಿನಾಚರಣೆ ಪ್ರಯುಕ್ತ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್ ಮಾಡಲಾಯಿತು. ಜನವರಿ 26ರಿಂದ ಮೂರು ದಿನ ನಡೆಯುವ ಮಕ್ಕಳ ಚಲನ ಚಿತ್ರೋತ್ಸವವನ್ನು ಇದೇ ಮೊದಲ ಬಾರಿಗೆ ಉಲ್ಲಾಸ್ ಸ್ಕೂಲ್ ಸಿನಿಮಾಸ್ ಆಯೋಜನೆ ಮಾಡಿದೆ.  ಅದರ ಪೂರ್ವಭಾವಿಯಾಗಿ ಇಂದು ಚಂದನವನದ ಬಾಲನಟರನ್ನೆಲ್ಲ ಒಟ್ಟು ಗೂಡಿಸಿ ಮಕ್ಕಳ ಚಲನಚಿತ್ರೋತ್ಸವ ಲೋಗೋ ಲಾಂಚ್ ಮಾಡಿಸಲಾಯಿತು.

    ಜನವರಿ 26ರಿಂದ ಮೂರು ದಿನಗಳ ಕಾಲ ‘ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದ್ದು, ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಕೇವಲ ಕನ್ನಡ ಸಿನಿಮಾಗಳಿಗೆ ಆದ್ಯತೆ ನೀಡಲಾಗಿದೆ.  ಕಾರ್ಯಕ್ರಮದಲ್ಲಿ ಬಾಲ ನಟರಾಗಿ ಪ್ರಖ್ಯಾತಿ ಗಳಿಸಿದ್ದ ಕಲಾವಿದರನ್ನು ಒಂದೆಡೆ ಸೇರಿಸಿದ್ದು ವಿಶೇಷವಾಗಿತ್ತು. ಮಾಸ್ಟರ್ ಮಂಜುನಾಥ್, ಮಾಸ್ಟರ್ ರೋಹಿತ್, ಸುನಿಲ್ ರಾವ್, ವಿಜಯ ರಾಘವೇಂದ್ರ, ಮಾಸ್ಟರ್ ಆನಂದ್, ಅಭಿಷೇಕ್, ವಿನಾಯಕ ಜೋಶಿ, ಹೇಮಾ ಪಂಚಮುಖಿ, ಎಸ್.ಎಸ್. ಕೀರ್ತನ, ನಟರಾಜ್ ಗುಬ್ಬಿ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

    ಮಕ್ಕಳ ಚಿತ್ರಕ್ಕೆ ಆದ್ಯತೆ ಕಡಿಮೆಯಾಗುತ್ತಿದೆ. ಎಲ್ಲಾ ಫಿಲಂ ಪೆಸ್ಟಿವಲ್ ಗಳಿಗೆ ಹತ್ತು ಹದಿನೈದು ಸಿನಿಮಾಗಳನ್ನು ಕಳುಹಿಸಿದ್ರು ಒಂದೂ ಸಿನಿಮಾ ಕೂಡ ಸೆಲೆಕ್ಟ್ ಆಗೋದಿಲ್ಲ. ಮಕ್ಕಳ ಚಿತ್ರಕ್ಕೆ ಆದ್ಯತೆ ನೀಡೋ ದೃಷ್ಟಿಕೋನದಿಂದ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ಇದೇ ಮೊದಲ ಬಾರಿಗೆ ಮಕ್ಕಳ ಚಲನಚಿತ್ರೋತ್ಸವ ಆಯೋಜಿಸಲಾಗಿದೆ. ಈ ಬಾರಿ ಅಪ್ಪು ಅವರ ಸ್ಮರಣಾರ್ಥ ಕೇವಲ ಕನ್ನಡ ಸಿನಿಮಾಗಳನ್ನು ಮಾತ್ರ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಮಾಡಲಾಗುವುದು ಎಂದು ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ಮಾಲೀಕರಾದ ಉಲ್ಲಾಸ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದೊಡ್ಮನೆಯಲ್ಲಿ ರಂಪಾಟ: ಕೈ ಕೈ ಮಿಲಾಯಿಸಿದ ಸಂಬರ್ಗಿ-ಗೊಬ್ಬರಗಾಲ

    ಲೋಗೋ ಲಾಂಚ್ ಮಾಡಿ ಮಾತನಾಡಿದ ನಟ ವಿಜಯ ರಾಘವೇಂದ್ರ ನಾವು ತುಂಬಾ ಅದೃಷ್ಟವಂತ ತಲೆಮಾರು ಅಂತ ಹೇಳೋಕೆ ಇಷ್ಟಪಡ್ತಿನಿ. ಮುಂಬರುವ ಜನರೇಷನ್ ಗೆ ಈ ರೀತಿ ಸಪೋರ್ಟ್ ಸಿಗುತ್ತೋ ಇಲ್ವೋ ಗೊತ್ತಿಲ್ಲ. ಇವತ್ತು ಎಲ್ಲಾ ಬಾಲನಟರೂ ಒಂದೇ ವೇದಿಕೆಯಲ್ಲಿ ಮತ್ತೆ ಸೇರುವಂತಾಯ್ತು ಇದನ್ನು ಸಾಧ್ಯವಾಗಿಸಿದಕ್ಕೆ ಎಲ್ಲರಿಗೂ ಆಭಾರಿ. ಬಾಲನಟರಾಗಿದ್ದಾಗ ನಿರ್ದೇಶಕರಿಂದ, ಹಿರಿಯ ಕಲಾವಿದರಿಂದ ಸಿಕ್ಕ ಸಪೋರ್ಟ್, ತರಭೇತಿ ಎಲ್ಲವೂ ನಮ್ಮನ್ನು ಇಲ್ಲಿವರೆಗೆ ಕರೆತಂದು ನಿಲ್ಲಿಸಿವೆ. ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆರಂಭವಾಗಿರುವ ಮಕ್ಕಳ ಚಲನಚಿತ್ರೋತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು. ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ್ರು, ಸುಂದರ್ ರಾಜ್, ಎಮ್ ಏನ್ ಕುಮಾರ್, ಟಿ ಪಿ ಸಿದ್ದರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ‘ಮರೀಚಿ’ ಚಿತ್ರಕ್ಕೆ ಹೀರೋ ಆದ ಚಿನ್ನಾರ ಮುತ್ತ ವಿಜಯ ರಾಘವೇಂದ್ರ

    ‘ಮರೀಚಿ’ ಚಿತ್ರಕ್ಕೆ ಹೀರೋ ಆದ ಚಿನ್ನಾರ ಮುತ್ತ ವಿಜಯ ರಾಘವೇಂದ್ರ

    ಟ ವಿಜಯ ರಾಘವೇಂದ್ರ (Vijaya Raghavendra) ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯುವ ಪ್ರತಿಭೆ ಸಿದ್ಧ್ರುವ್ (Siddruva) ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ಮರೀಚಿ’ (Marichi) ಎಂಬ ಚಿತ್ರಕ್ಕೆ ಚಿನ್ನಾರಿ ಮುತ್ತ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ.

    ‘ಮರೀಚಿ’ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ . ‘ಮರೀಚಿ’ ಕಥೆ ಕೇಳಿ ವಿಜಯ ರಾಘವೇಂದ್ರ ಕೂಡ ಇಂಪ್ರೆಸ್ ಆಗಿದ್ದು ಯುವ ನಿರ್ದೇಶಕನ ಜೊತೆ ಸಿನಿಮಾ ಮಾಡಲು ಕೈ ಜೋಡಿಸಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಸಿನಿಮಾ ಸೆಟ್ಟೇರಲಿದ್ದು, ಅದಕ್ಕೂ ಮುನ್ನ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲು ನಿರ್ದೇಶಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ದೇವರು ಮೆಚ್ಚೋದಿಲ್ಲ ಎಂದು ಸಾನ್ಯ ವಿರುದ್ಧ ರಾಂಗ್ ಆದ ಸಂಬರ್ಗಿ

    ಚಿತ್ರದಲ್ಲಿ ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ (Sonu Gowda) ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ.  ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    ನವೆಂಬರ್ ನಲ್ಲಿ ‘ಮರೀಚಿ’ ಚಿತ್ರೀಕರಣ ಆರಂಭಗೊಳ್ಳಲಿದ್ದು, ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ ಹಲವು ಕಡೆ ಸಿನಿಮಾ ಸೆರೆ ಹಿಡಿಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಶೀಘ್ರದಲ್ಲೇ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್‍ರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ: ವಿಜಯ ರಾಘವೇಂದ್ರ

    ಪುನೀತ್‍ರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ: ವಿಜಯ ರಾಘವೇಂದ್ರ

    ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ ಎಂದು ನಟ ವಿಜಯ ರಾಘವೇಂದ್ರ ಹೇಳಿದರು.

    ರೋಟರಿ ಸಂಸ್ಥೆಯಿಂದ ಪುನೀತ್ ರಾಜಕುಮಾರ್ ಸ್ಮರಣಾರ್ಥವಾಗಿ ರಕ್ತದಾನ ಶಿಬಿರವನ್ನು ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ಈ ಶಿಬಿರದ ಉದ್ಘಾಟನೆಯನ್ನು ವಿಜಯ ರಾಘವೇಂದ್ರ ಮಾಡಿದ್ದು, ತಾವೂ ಸಹ ರಕ್ತದಾನ ಮಾಡಲು ಮುಂದಾದರು.

    ಈ ವೇಳೆ ಗಾಜನೂರಿನಲ್ಲಿ ಅಪ್ಪು ಅವರೊಡನೆ ಬಾಲ್ಯ ಕಳೆದ ನೆನಪನ್ನು ವಿಜಯ್ ಬಿಚ್ಚಿಟ್ಟರು. ಬೇರೆ ಯಾವುದರ ಬಗ್ಗೆಯು ತಲೆ ಕೆಡಿಸಿಕೊಳ್ಳೋದು ಬೇಡ, ಒಳ್ಳೆಯ ಕೆಲಸ ಮಾಡೋಣ ಎಂಬ ಪುನೀತ್ ಮಾತುಗಳನ್ನು ನೆನೆಪಿಸಿಕೊಂಡು ಭಾವುಕರಾದರು. ಇದನ್ನೂ ಓದಿ: ಪ್ರಾಣ ಕಳೆದುಕೊಂಡ ರೈತರಿಗಾಗಿ ‘ಅಸ್ತಿ ಕಲಶ ರ‍್ಯಾಲಿ’ ಆಯೋಜನೆ: ನವಾಬ್ ಮಲಿಕ್

    ಸದಾ ಒಳ್ಳೆಯ ಕೆಲಸಗಳ ಬಗ್ಗೆಯೇ ಚಿಂತಿಸುತ್ತಿದ್ದರು. ಅವರ ಒಳ್ಳೆಯ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ. ರಕ್ತದಾನ ಶಿಬಿರ ಉದ್ಘಾಟನೆ ಹಾಗು ರಕ್ತದಾನ ಮಾಡುವುದು ಸಾರ್ಥಕತೆ ಕೊಡುತ್ತೆ. ಪುನೀತ್ ರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ ಎಂದು ತಿಳಿಸಿದರು.

  • ಕೈಮುಗಿದು ಕೇಳಿಕೊಳ್ಳುತ್ತೇನೆ, ಯಾರು ಆತ್ಮಹತ್ಯೆ ಮಾಡ್ಕೋಬೇಡಿ: ವಿಜಯ್ ರಾಘವೇಂದ್ರ

    ಕೈಮುಗಿದು ಕೇಳಿಕೊಳ್ಳುತ್ತೇನೆ, ಯಾರು ಆತ್ಮಹತ್ಯೆ ಮಾಡ್ಕೋಬೇಡಿ: ವಿಜಯ್ ರಾಘವೇಂದ್ರ

    ಮಡಿಕೇರಿ: ಅಪ್ಪು ಅವರು ಯಾವಾಗಲೂ ಎಲ್ಲರಿಗೂ ಸ್ಫೂರ್ತಿ ಧೈರ್ಯ ತುಂಬುತಿದ್ದವರು. ಅವರು ಇದ್ದಿದ್ದರೆ ಇದನ್ನೆಲ್ಲ ಒಪ್ಪುತ್ತಿರಲಿಲ್ಲ. ಕೈಮುಗಿದು ಕೇಳಿಕೊಳ್ಳುತ್ತೇನೆ, ದಯವಿಟ್ಟು ಯಾರು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ನಟ ವಿಜಯ್ ರಾಘವೇಂದ್ರ ಮನವಿ ಮಾಡಿದ್ದಾರೆ.

    ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆಯುತ್ತಿರುವ ಸಿನಿಮಾ ಶೂಟಿಂಗ್‍ವೊಂದರಲ್ಲಿ ಬ್ಯುಸಿಯಾಗಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಅಪ್ಪು ಅವರು ಯಾವಾಗಲೂ ನಗು ಮೊಗದಿಂದಲೇ ಎಲ್ಲರಿಗೂ ಪಾಸಿಟಿವ್ ವಿಚಾರ ಹೇಳುತ್ತಿದ್ದರು. ಹೀಗಿರುವಾಗ ಅವರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಸರಿಯಲ್ಲ. ಅಪ್ಪು ಅವರಿಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರಾ ಅದು ಗೊತ್ತಿಲ್ಲ. ಆದರೆ ಅವರಿಗಾಗಿಯೇ ಆತ್ಮಹತ್ಯೆ ಮಾಡಿಕೊಳ್ಳಲಾಗುತ್ತಿದೆ ಎಂದು ಸುದ್ದಿ ಹರಡುತ್ತಿದೆ. ದಯವಿಟ್ಟು ಅದು ಆಗಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಇದೇ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಮನೆಯವರಿಗೆ ಸಾಂತ್ವನ, ಧೈರ್ಯ ಹೇಳುವುದಾಗಿ ತಿಳಿಸಿದ್ದಾರೆ. 11 ನೇ ದಿನದ ಕಾರ್ಯ ಇರುವುದರಿಂದ ನಾನೂ ಕೂಡ ಅಲ್ಲಿ ಇರಬೇಕಾಗಿತ್ತು. ಆದರೆ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವುದರಿಂದ ಹೋಗಲಾಗಲಿಲ್ಲ. ಏನೆಲ್ಲಾ ನಾನು ಹೇಳಬೇಕಾಗಿತ್ತೋ ಅದನ್ನೆಲ್ಲಾ ಫೋನ್ ಮೂಲಕವೇ ಹೇಳಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

  • ನಿರ್ದೇಶಕ ಶಶಿಕಾಂತ್ ಗಟ್ಟಿ ಚಿತ್ರದಲ್ಲಿ ವಿಜಯ ರಾಘವೇಂದ್ರ

    ನಿರ್ದೇಶಕ ಶಶಿಕಾಂತ್ ಗಟ್ಟಿ ಚಿತ್ರದಲ್ಲಿ ವಿಜಯ ರಾಘವೇಂದ್ರ

    ಟ ವಿಜಯ ರಾಘವೇಂದ್ರ ಶಶಿಕಾಂತ್ ಗಟ್ಟಿ ನಿರ್ದೇಶನದ ನೂತನ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ‘ರಿಂಗ ರಿಂಗ ರೋಸಸ್’ ಎಂದು ಟೈಟಲ್ ಫಿಕ್ಸ್ ಆಗಿದ್ದು, ಐಪಿಸಿ ಸೆಕ್ಷನ್ 300 ನಂತರ ಮತ್ತೊಮ್ಮೆ ಶಶಿಕಾಂತ್ ಗಟ್ಟಿ ಜೊತೆ ಕೆಲಸ ಮಾಡುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಚಿನ್ನಾರಿ ಮುತ್ತಾ.

    ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿರುವ ವಿಜಯ ರಾಘವೇಂದ್ರ ಸಿನಿಮಾ ನಿರ್ಮಾಣಕ್ಕೂ ಶಶಿಕಾಂತ್ ಗಟ್ಟಿ ಮುಂದಾಗಿರೋದಕ್ಕೆ ಶುಭ ಕೋರಿದ್ದಾರೆ. ರಾಂಚಿ, ಐಪಿಸಿ ಸೆಕ್ಷನ್ 300 ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದ ಶಶಿಕಾಂತ್ ಗಟ್ಟಿ ಆರು ವರ್ಷ ಸಮಯ ತೆಗೆದುಕೊಂಡು ‘ರಿಂಗ ರಿಂಗ ರೋಸಸ್’ ಕಥೆ ಹೆಣೆದಿದ್ದಾರೆ. ಚಿತ್ರ ಗ್ಯಾಂಗ್‍ಸ್ಟರ್ ಕಥಾನಕ ಹೊಂದಿದ್ದು, ವಿಭಿನ್ನ ಹಾಗೂ ಹೊಸತನದಿಂದ ‘ರಿಂಗ ರಿಂಗ ರೋಸಸ್’ ಸಿನಿಮಾ ಕೂಡಿರಲಿದೆ ಎಂದು ನಿರ್ದೇಶಕ ಶಶಿಕಾಂತ್ ಗಟ್ಟಿ ತಿಳಿಸಿದ್ದಾರೆ.

    ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಜೊತೆ ಮೊದಲ ಬಾರಿ ತಮ್ಮದೇ ಬ್ಯಾನರ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದಾರೆ ಶಶಿಕಾಂತ್ ಗಟ್ಟಿ. ರೆಗ್ಯುಲರ್ ಸಿನಿಮಾಗಳ ಹೀರೋ ಹೀರೋಯಿನ್ ಕಾನ್ಸೆಪ್ಟ್ ಗಿಂತಲೂ ಭಿನ್ನವಾದ ಕಥಾನಕ ಹಾಗೂ ಚಿತ್ರಕಥೆ ಚಿತ್ರದಲ್ಲಿ ನೀಡಲು ನಿರ್ದೇಶಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಒಬ್ಬ ಸಿನಿಮಾ ಹೀರೋಯಿನ್ ಜೀವನದಲ್ಲಾಗುವ ಘಟನೆಗಳ ಸುತ್ತ ‘ರಿಂಗ ರಿಂಗ ರೋಸಸ್’ ಸಿನಿಮಾ ಕಥೆ ಸುತ್ತಲಿದ್ದು, ಚಿತ್ರದಲ್ಲಿ ಐದು ಜನ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ವಿಜಯ್ ರಾಘವೇಂದ್ರ, ಸತ್ಯ, ರಘು ಭಟ್, ಕಾವ್ಯ ಗೌಡ, ತ್ರಿಪುರಾರಿ ಯಾದವ್, ವಿಶಾಲ್ ಹೆಗ್ಡೆ, ಸ್ನೇಕ್ ಅರುಣ್ ತಾರಾಬಳಗದಲ್ಲಿದ್ದು, ನಟ ವಿಜಯ ರಾಘವೇಂದ್ರ ಚಿತ್ರದಲ್ಲಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ.

    ಶಶಿಕಾಂತ್ ಮೋಷನ್ ಪಿಕ್ಚರ್ಸ್ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ಮೂಲಕ ‘ರಿಂಗ ರಿಂಗ ರೋಸಸ್’ ಸಿನಿಮಾ ನಿರ್ಮಾಣವಾಗುತ್ತಿದ್ದು, ಮಾರ್ಚ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಗೌತಮ್ ಶ್ರೀವತ್ಸ ಸಂಗೀತ, ವಿನೋದ್ ರಾಜ್ ಛಾಯಾಗ್ರಹಣ `ರಿಂಗ ರಿಂಗ ರೋಸಸ್’ ಚಿತ್ರಕ್ಕಿದೆ.