Tag: ವಿಟ್ಲ

  • ವಿಟ್ಲ ಪಂಚಲಿಂಗೇಶ್ವರ ಜಾತ್ರೆಯಲ್ಲಿ ದೇವರ ಪ್ರಭಾವಳಿಗೆ ಬಡಿದ ಡ್ರೋಣ್‌

    ವಿಟ್ಲ ಪಂಚಲಿಂಗೇಶ್ವರ ಜಾತ್ರೆಯಲ್ಲಿ ದೇವರ ಪ್ರಭಾವಳಿಗೆ ಬಡಿದ ಡ್ರೋಣ್‌

    ಮಂಗಳೂರು: ವಿಟ್ಲದ (Vitla) ಶ್ರೀಪಂಚಲಿಂಗೇಶ್ವರ ದೇವಸ್ಥಾನದ (Shri Panchalingeshwara Temple) ರಥೋತ್ಸವದ ವೇಳೆ ಡ್ರೋಣ್ (Drone) ನಿಯಂತ್ರಣ ತಪ್ಪಿ ದೇವರ ಪ್ರಭಾವಳಿಗೆ ಬಡಿದಿದೆ.

    ರಥದಲ್ಲಿ ಏರುವ ಹೊತ್ತಿಗೆ ದೇವರ ಉತ್ಸವ ಮೂರ್ತಿಗೆ ಡ್ರೋಣ್ ಬಡಿದಿದೆ.‌ ಬಳಿಕ ರಥದ ಮೇಲಿದ್ದ ಸಹಾಯಕ ಅರ್ಚಕರ ತಲೆಗೆ ಬಡಿದು ಬಿದ್ದಿದೆ. ಒಮ್ಮೆಗೆ ಈ ಘಟನೆಯಿಂದ ದೇವರ ಮೂರ್ತಿ ಹೊತ್ತ ಅರ್ಚಕರು ತಬ್ಬಿಬ್ಬಾಗಿದ್ದಾರೆ. ಅವರು ಕೊಂಚ ನಿಯಂತ್ರಣ ತಪ್ಪಿದ್ದರೂ ದೇವರ ಉತ್ಸವ ಮೂರ್ತಿ ಸಹಿತ ಅವರೂ ಕೆಳಕ್ಕೆ ಬೀಳುತ್ತಿದ್ದರು. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

    ತಕ್ಷಣ ಸಹ ಅರ್ಚಕರು ಡ್ರೋಣ್‌ನ್ನು ಒದ್ದು ಎಸೆದಿದ್ದಾರೆ. ಡ್ರೋಣ್ ಅಪರೇಟರ್ ಹುಚ್ಚಾಟಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಬೀಡಿ ಉದ್ಯಮಿ ಮನೆಗೆ ಇಡಿ ಹೆಸರಿನಲ್ಲಿ ದಾಳಿ – 30 ಲಕ್ಷದೊಂದಿಗೆ ಪರಾರಿ

    ಬೀಡಿ ಉದ್ಯಮಿ ಮನೆಗೆ ಇಡಿ ಹೆಸರಿನಲ್ಲಿ ದಾಳಿ – 30 ಲಕ್ಷದೊಂದಿಗೆ ಪರಾರಿ

    ಮಂಗಳೂರು: ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳೆಂದು ಮನೆಗೆ ದಾಳಿ ಮಾಡಿ 30 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ (Vittla) ಬೋಳಂತೂರುನಲ್ಲಿ ನಡೆದಿದೆ.

    ಸಿಂಗಾರಿ ಬೀಡಿ (Singari Beedi) ಉದ್ಯಮ ನಡೆಸುತ್ತಿದ್ದ ಬೋಳಂತೂರು ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರ ಮನೆಗೆ ಶುಕ್ರವಾರ ತಡ ರಾತ್ರಿ ತಮಿಳುನಾಡು ಮೂಲದ ಕಾರಿನಲ್ಲಿ ನಾಲ್ಕು ಜನರ ತಂಡ ಆಗಮಿಸಿದೆ.  ಇದನ್ನೂ ಓದಿ: ಮಾವನಿಂದ ಸೊಸೆಗೆ ತೊಟ್ಟಿಲು ಗಿಫ್ಟ್‌ – ಧನರಾಜ್‌ಗೆ ಕೊಟ್ಟ ಮಾತನ್ನು ಉಳಿಸಿದ ಗೋಲ್ಡ್‌

    ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಬೆಳಗ್ಗಿನ ಜಾವದವರೆಗೂ ತನಿಖೆ ನಡೆಸುವ ನಾಟಕವಾಡಿದ್ದರು. ಬಳಿಕ ಮನೆಯಲ್ಲಿ ಸಿಕ್ಕಿದ್ದ 30 ಲಕ್ಷ ನಗದು ಹಿಡಿದುಕೊಂಡು ಪರಾರಿಯಾಗಿದ್ದರು.

    ಅನುಮಾನಗೊಂಡ ಸುಲೈಮಾನ್ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಮಂಗಳೂರಲ್ಲಿ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ – ವಿಡಿಯೋ ವೈರಲ್

    ಮಂಗಳೂರಲ್ಲಿ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ – ವಿಡಿಯೋ ವೈರಲ್

    ಮಂಗಳೂರು: ಚರ್ಚ್‍ನ (Church) ಪಾದ್ರಿಯೊಬ್ಬ ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಘಟನೆ ವಿಟ್ಲ (Vitla) ಪೊಲೀಸ್ (Police) ಠಾಣಾ ವ್ಯಾಪ್ತಿಯ ಅಡ್ಯನಡ್ಕದ ಮನೇಲಾ ಎಂಬಲ್ಲಿ ನಡೆದಿದೆ.

    ಪೆರಿಯಲ್ತಡ್ಕನ ಚರ್ಚ್ ಒಂದರ ಪಾದ್ರಿ ನೆಲ್ಸನ್ ಒಲಿವೇರಾ ಹಲ್ಲೆ ನಡೆಸಿದ ವ್ಯಕ್ತಿಯಾಗಿದ್ದಾನೆ. ಜೋರ್ಜ್ ಮಾಂತೇರಿಯೋ (79) ಮತ್ತು ಅವರ ಪತ್ನಿ ಫಿಲೋಮಿನಾ (72) ಹಲ್ಲೆಗೊಳಗಾದ ವೃದ್ಧ ದಂಪತಿ ಎಂದು ತಿಳಿದು ಬಂದಿದೆ. ಘಟನೆ ಫೆ.29 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: RCB – MI ಹೈವೋಲ್ಟೇಜ್‌ ಕದನ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಕ್ವಾಡ್ ತೀವ್ರ ತಪಾಸಣೆ

    ವೃದ್ಧರನ್ನು ಪಾದ್ರಿ ಕಾಲಿನಿಂದ ಒದೆಯುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾದ್ರಿಯ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಹಿಂದಿದ್ಯಾ ಐಸಿಸ್ ಕೈವಾಡ?

  • ಮೂವರಿಂದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಆರೋಪಿಗಳು ಅರೆಸ್ಟ್

    ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಪ್ರಕರಣ ವಿಟ್ಲದಲ್ಲಿ (Vitla) ಬೆಳಕಿಗೆ ಬಂದಿದೆ.

    ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ಅಪ್ರಾಪ್ತ ಬಾಲಕಿಯ ಮೇಲೆ ಪ್ರತ್ಯೇಕವಾಗಿ ಅತ್ಯಚಾರ ನಡೆಸಿದ್ದಾರೆ. ಅಲ್ಲದೇ 2019 ರಿಂದ ನಿರಂತರವಾಗಿ ವಿವಿಧ ಕಡೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಬಂದಿದೆ.

    ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆ ಕೇಸ್‌ – ಹಣದೊಂದಿಗೆ ಚಾಲಕ, ಕ್ಲೀನರ್ ಪರಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮನೆಯ ಮೇಲೆ ಬಿದ್ದ ಕೋಳಿ ತುಂಬಿದ್ದ ಪಿಕಪ್- ಮಹಿಳೆಗೆ ಗಾಯ

    ಮನೆಯ ಮೇಲೆ ಬಿದ್ದ ಕೋಳಿ ತುಂಬಿದ್ದ ಪಿಕಪ್- ಮಹಿಳೆಗೆ ಗಾಯ

    ಮಂಗಳೂರು: ಕೋಳಿ ಸಾಗಾಟದ ಪಿಕಪ್ (Pickup) ವಾಹನವೊಂದು ರಸ್ತೆಯಿಂದ ಕೆಳಗೆ ಎಸೆಯಲ್ಪಟ್ಟು ಮನೆ ಮೇಲೆ ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

    ಬಂಟ್ವಾಳ (Bantwal) ತಾಲೂಕಿನ ಸಾರಡ್ಕ ಬಳಿಯ ಕೂರೇಲು ಎಂಬಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಕೋಳಿ (Chicken) ಸಾಗಾಟದ ಪಿಕಪ್ ನಿಯಂತ್ರಣ ತಪ್ಪಿ ಕೆಳಗೆ ಉರುಳಿ ಮನೆ ಮೇಲೆ ಬಿದ್ದಿದೆ. ಮನೆ ಸಂಪೂರ್ಣ ಹಾನಿಯಾಗಿದ್ದು ಮನೆಯೊಳಗಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಮಹಿಳೆ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಪಿಕಪ್ ನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದ್ದು, ಪಿಕಪ್‍ನಲ್ಲಿದ್ದ ಸುಮಾರು 500 ಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದೆ. ಘಟನೆಯ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

    ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

    ಮಂಗಳೂರು: ಬಜರಂಗದಳ (Bajrangdal) ಮತ್ತು ಬಿಜೆಪಿ ಕಾರ್ಯಕರ್ತರ (bJP Activists) ಮೇಲೆ ತಲವಾರು ದಾಳಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.

    ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡದಿಂದ ದಾಳಿ ನಡೆದಿರುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಬಿಲ್ ಕೇಳಲು ಬಂದ ಲೈನ್‍ಮೆನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿ ಅರೆಸ್ಟ್

    ಪೆರಾಜೆ (Peraje) ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿಯಾಗಿದೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್‍ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ಘಟನೆಯಿಂದ ಯುವಕರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು, ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ದೂರು ನೀಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವಿಟ್ಲದಲ್ಲಿ ಅಪ್ರಾಪ್ತೆ ಆತ್ಮಹತ್ಯೆ – ಇದು ಕೊಲೆ, ಲವ್‌ ಜಿಹಾದ್‌ ಎಂದ ವಿಎಚ್‌ಪಿ

    ವಿಟ್ಲದಲ್ಲಿ ಅಪ್ರಾಪ್ತೆ ಆತ್ಮಹತ್ಯೆ – ಇದು ಕೊಲೆ, ಲವ್‌ ಜಿಹಾದ್‌ ಎಂದ ವಿಎಚ್‌ಪಿ

    ಮಂಗಳೂರು: ರಾಜ್ಯ ಕರಾವಳಿ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಲವ್ ಜಿಹಾದ್ ನಡೆಯುತ್ತಿದೆ ಎನ್ನುವ ಹಿಂದೂಪರ ಸಂಘಟನೆಗಳ ಆರೋಪದ ನಡುವೆಯೇ ಲವ್ ಜಿಹಾದ್‍ಗೆ ಪುಷ್ಟಿ ನೀಡುವ ಹಲವು ಘಟನೆಗಳು ವರದಿಯಾಗುತ್ತಿದೆ. ಇಂಥಹ ಘಟನೆಗಳ ಸಾಲಿಗೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕಣಿಯೂರು ಎಂಬಲ್ಲಿ ನಡೆದ ಘಟನೆಯೂ ಸೇರಿಕೊಂಡಿದೆ.

    ಕಣಿಯೂರು ಮಸೀದಿಯ ಪಕ್ಕದಲ್ಲೇ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ದಂಪತಿಯ 14 ವರ್ಷದ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. 9ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಈ ಅಪ್ರಾಪ್ತೆಯ ಸಾವಿಗೆ ಅನ್ಯಕೋಮಿನ ಯುವಕ ಕಾರಣ ಎಂದು ಬಾಲಕಿ ಪೋಷಕರು ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬುರ್ಖಾ ಹಾಕಿ ಅಸಭ್ಯವಾಗಿ ವರ್ತಿಸಿದರೆ ಧರ್ಮದೇಟು – ಮಂಗಳೂರಿನಲ್ಲಿ ತಾಲಿಬಾನ್ ಸಂಸ್ಕೃತಿ ಹೇರಿಕೆಗೆ ಯತ್ನ

    ಬಾಲಕಿ ಕುಟಂಬ ಕಳೆದ 2 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಈ ನಡುವೆ ಕಣಿಯೂರು ನಿವಾಸಿಯಾಗಿರುವ ಆರೋಪಿ ಶಾಹುಲ್ ಹಮೀದ್ ಬಾಲಕಿಯ ತಂದೆಯ ಜೊತೆ ಕೂಲಿ ಕೆಲಸಕ್ಕೆ ಹೋಗುವ ನೆಪದಲ್ಲಿ ಮನೆಯ ಕಡೆ ಬರುತ್ತಿದ್ದ. ಬಳಿಕ ಪೋಷಕರು ಇಲ್ಲದ ಸಂದರ್ಭ ಬಾಲಕಿಯನ್ನು ಕಾಣಲು ಬರುತ್ತಿದ್ದ ಆರೋಪಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ.

    ಈ ವಿಚಾರ ಬಾಲಕಿಯ ಪೋಷಕರಿಗೆ ತಿಳಿದು ಸಾಹುಲ್ ಹಮೀದ್‍ಗೆ ಎಚ್ಚರಿಕೆ ನೀಡಿದ್ದರು. ಆದರೆ ಬಾಲಕಿಯ ಮುಗ್ದತೆಯನ್ನು ದುರುಪಯೋಗ ಪಡಿಸಿಕೊಂಡ ಶಾಹುಲ್ ಹಮೀದ್ ಆಕೆಯನ್ನು ಫೋನ್ ಮೂಲಕ ಸಂಪರ್ಕಿಸುತ್ತಿದ್ದ. ತನ್ನೊಂದಿಗೆ ಬರುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದ. ಇದನ್ನೂ ಓದಿ: ನಿಮಗಿಂತ ಹೆಚ್ಚಾಗಿ ತನ್ನ ದೇಶವನ್ನು ಪ್ರೀತಿಸುತ್ತಾನೆ, ಮೋದಿಯನ್ನು ಟೀಕಿಸಿದ್ದ ಕಮ್ರಾಗೆ ತಿರುಗೇಟು ನೀಡಿದ ಬಾಲಕನ ತಂದೆ 

    ಆಕೆಯ ತಲೆ ಕೂದಲನ್ನು ಕೊಂಡೊಯ್ದು, ಬಳಿಕ ಭಸ್ಮ ಮಾದರಿಯ ವಸ್ತುವನ್ನು ಆಕೆಗೆ ತಿನ್ನಲು ನೀಡಿದ್ದ ಎನ್ನಲಾಗಿದೆ. ಹೀಗಾಗಿ ಇದು ಆತ್ಮಹತ್ಯೆಯಲ್ಲ ಇದೊಂದು ವ್ಯವಸ್ಥಿತವಾದ ಕೊಲೆ, ವಾಮಚಾರ ನಡೆಸಿ ಲವ್ ಜಿಹಾದ್ ಮಾಡಲಾಗಿದೆ ಎಂದು ಹಿಂದೂಪರ ಸಂಘಟನೆ ವಿಎಚ್‌ಪಿ ಆರೋಪಿಸಿದೆ.

    ಆರೋಪಿ ಸಾಹುಲ್ ಹಮೀದ್ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಐ.ಪಿ.ಸಿ ಸೆಕ್ಷನ್ 305, ಎಸ್.ಸಿ-ಎಸ್.ಟಿ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ನಡೆದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

  • ಆಸ್ಪತ್ರೆಯಿಂದ ಮನೆಗೆ ಹೊರಟವರು ಮಸಣಕ್ಕೆ

    ಆಸ್ಪತ್ರೆಯಿಂದ ಮನೆಗೆ ಹೊರಟವರು ಮಸಣಕ್ಕೆ

    – ಗ್ರಾ.ಪಂ ಸದಸ್ಯ ಸೇರಿ ಇಬ್ಬರು ಬೈಕ್ ಸವಾರರ ದರ್ಮರಣ

    ಮಂಗಳೂರು: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಹಾಗೂ ಸಹಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಳಿಯ ಕನ್ಯಾನದಲ್ಲಿ ನಡೆದಿದೆ.

    ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ, ಕನ್ಯಾನ ಗ್ರಾಮ ಪಂಚಾಯತ್ ಸದಸ್ಯ ವಾಲ್ಟರ್ ಡಿಸೋಜಾ (45) ಹಾಗೂ ಕನ್ಯಾನದ ಪಂಜಾಜೆ ನಿವಾಸಿ ವಿಲ್ಸನ್ ಡಿಸೋಜಾ (52) ಮೃತಪಟ್ಟ ದುರ್ದೈವಿಗಳು. ಇವರಿಬ್ಬರೂ ಬುಧವಾರ ಕನ್ಯಾನದ ಸರ್ಕಾರಿ ಆಸ್ಪತ್ರೆಗೆ ತೆರಳಿ, ಬಳಿಕ ಅಲ್ಲಿಂದ ಮನೆಯ ಕಡೆಗೆ ತಮ್ಮ ಬೈಕ್‍ನಲ್ಲಿ ಸಾಗುತ್ತಿದ್ದರು. ಈ ವೇಳೆ ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆಯಲ್ಲೇ ಸ್ಕಿಡ್ ಆಗಿ ಬಿದ್ದಿದ್ದರು.

    ಈ ವೇಳೆ ಇಬ್ಬರ ತಲೆಗೆ ಬಲವಾದ ಹೊಡೆತ ಬಿದ್ದು ರಕ್ತಸ್ರಾವವಾಗಿತ್ತು. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • 5 ಸಾವಿರ ಕೊಡಿ ಅಂತಾ ಬಂದು ಬೆತ್ತಲೆಯಾಗಿ ಹನಿಟ್ರ್ಯಾಪ್ ಮಾಡಿದ್ಳು!

    5 ಸಾವಿರ ಕೊಡಿ ಅಂತಾ ಬಂದು ಬೆತ್ತಲೆಯಾಗಿ ಹನಿಟ್ರ್ಯಾಪ್ ಮಾಡಿದ್ಳು!

    ಮಂಗಳೂರು: ಯುವಕನೊಬ್ಬನನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ದರೋಡೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಸಮೀಪದ ಕುಡ್ತಮುಗೇರು ನಿವಾಸಿ ಮಹಮ್ಮದ್ ಹನೀಫ್ ಥಳಿತಕ್ಕೊಳಗಾಗಿ ದರೋಡೆಗೆ ಒಳಗಾದವನಾಗಿದ್ದು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿ ಸೇರಿ ಐವರನ್ನು ಬಂಧಿಸಿದ್ದಾರೆ.

    ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯ ಆಗಿದ್ದ ಪಜ್ಜು ಅಲಿಯಾಸ್ ಸುಮೈಯ್ಯಾ ಎಂಬಾಕೆ ಕಳೆದ ಶನಿವಾರ ರಾತ್ರಿ ಮಹಮ್ಮದ್ ಬಳಿ 5 ಸಾವಿರ ರೂಪಾಯಿ ಬೇಕೆಂದು ಹೇಳಿ ಕುಡ್ತಮುಗೇರಿನ ಫ್ಲಾಟ್ ಗೆ ಆಗಮಿಸಿದ್ದಳು. ಆದರೆ ಇವರನ್ನು ಫಾಲೋ ಮಾಡಿಕೊಂಡು ಟವೇರಾದಲ್ಲಿ ಬಂದಿದ್ದ ಐವರ ತಂಡ ಯುವತಿಯನ್ನು ಮಹಮ್ಮದ್ ಜೊತೆ ಬೆತ್ತಲೆಯಾಗಿ ನಿಲ್ಲಿಸಿ ಫೋಟೊ ತೆಗೆದಿದ್ದಾರೆ. ಆನಂತರ 5 ಲಕ್ಷ ರೂ. ಕೊಡುವಂತೆ ಪೀಡಿಸಿದ್ದಲ್ಲದೆ ರಾತ್ರಿ 2 ಗಂಟೆಯವರೆಗೂ ಥಳಿಸಿದ್ದಾರೆ.

    ಕೊನೆಗೆ ಮನೆಯ ಕಪಾಟು ಒಡೆದು 60 ಗ್ರಾಮ್ ಚಿನ್ನಾಭರಣ, 17 ಸಾವಿರ ರೂಪಾಯಿ ನಗದು ಹಾಗೂ ಮಹಮ್ಮದ್ ಬಳಸುತ್ತಿದ್ದ ಸ್ವಿಫ್ಟ್ ಕಾರನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೆ ಕೊಲ್ಲುವ ಬೆದರಿಕೆಯೊಡ್ಡಿ ತಂಡ ಅಲ್ಲಿಂದ ಪರಾರಿಯಾಗಿತ್ತು. ಆ ಬಳಿಕ ಮಹಮ್ಮದ್ ಸಂಬಂಧಿಕರಿಗೆ ವಿಷಯ ತಿಳಿಸಿದ್ದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ಫೌಜಿಯಾ ಮತ್ತು ಐವರ ತಂಡ ಈ ಕೃತ್ಯ ಎಸಗಿದ್ದಾಗಿ ದೂರು ದಾಖಲಾಗಿದ್ದು ವಿಟ್ಲ ಠಾಣೆಯಲ್ಲಿ ಹನಿಟ್ರ್ಯಾಪ್ ಮತ್ತು ದರೋಡೆ ಪ್ರಕರಣ ದಾಖಲಾಗಿದೆ.

    ಬಂಧಿತರು: ತೊಕ್ಕೊಟ್ಟು ಕೆಸಿ ರೋಡ್ ಕಾಲೋನಿ ನಿವಾಸಿ ಅಶ್ರಫ್ ಸಂಶೀರ್ (27), ಪರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿ ಜೈನುದ್ದೀನ್, ತೊಕ್ಕೊಟ್ಟು ಉಳ್ಳಾಲ ಮಾರ್ಗತಳಿ ನಿವಾಸಿ ಮಹಮ್ಮದ್ ಇಕ್ಬಾಲ್ (27), ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಉಬೈದುಲ್ಲಾ (32) ಮತ್ತು ಸಕಲೇಶಪುರ ಅರೆಹಳ್ಳಿ ಸಂತೋಷ ನಗರ ನಿವಾಸಿ ಪಜ್ಜು ಯಾನೆ ಪರ್ಝಾನ ಅಲಿಯಾಸ್ ಸುಮೈಯ್ಯ (26) ಬಂಧಿತರು. ಇವರ ಕೈಯಲ್ಲಿದ್ದ ಪಾಸ್ ಪೋರ್ಟ್, 6 ಮೊಬೈಲ್, 2 ಕಾರು, 8 ಗ್ರಾಂ ಚಿನ್ನ, 7.50 ಲಕ್ಷ ರೂಪಾಯೊ ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

     

  • ಕಣ್ಣಿಗೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಕಗ್ಗೊಲೆ

    ಕಣ್ಣಿಗೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಕಗ್ಗೊಲೆ

    ಮಂಗಳೂರು: ಗ್ರಾಮ ಪಂಚಾಯತ್ ಉಪಾಧ್ಯಕ್ಷರೊಬ್ಬರನ್ನು ಪಂಚಾಯತ್ ಒಳಗಡೆ ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ನಡೆದಿದೆ.

    ಅಬ್ದುಲ್ ಜಲೀಲ್ ಕೊಲೆಯಾದ ಉಪಾಧ್ಯಕ್ಷ. ಮುಸುಕುಧಾರಿಗಳಾಗಿ ಎರಡು ಬೈಕ್‍ನಲ್ಲಿ ಬಂದ ನಾಲ್ವರು ಅಬ್ದುಲ್ ಜಲೀಲ್ ಅವರ ಮೇಲೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಪಂಚಾಯತ್ ಒಳಗಿದ್ದ ಸಿಬ್ಬಂದಿಗೂ ಮಾರಕಾಸ್ತ್ರ ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ.

    ಹಲ್ಲೆಗೊಳಗಾದ ಜಲೀಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿಂದೆ ಕರೋಪಾಡಿಯಲ್ಲಿ ನಿಧಿಶೋಧ ಪ್ರಕರಣ ನಡೆದ ಸಂಧರ್ಭದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲು ಜಲೀಲ್ ನೆರವಾಗಿದ್ದು, ಜೈಲಿನಿಂದ ಬಿಡುಗಡೆಗೊಂಡ ಆರೋಪಿಗಳೇ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

    ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ.ಬೊರಸೆ ಸೇರಿದಂತೆ ಹಿರಿಯ ಅಧಿಕಾರಿಗಳು, ಶ್ವಾನದಳ, ಬೆರಳಚ್ಚು ತಜ್ಞ ರು ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಜಲೀಲ್ ಹತ್ಯೆಯ ಹಿಂದೆ ಹಲವು ಅನುಮಾನಗಳು ಕವಲೊಡೆದಿವೆ.