Tag: ವಿದ್ಯಾರ್ಥಿ ವಿದ್ಯಾರ್ಥಿನಿಯರೇ

  • ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

    ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

    ಗಾಗಲೇ ಟೀಸರ್, ಹಾಡುಗಳು ಮತ್ತು ಎರಡು ಟ್ರೈಲರ್‌ನಿಂದ ಗಮನಸೆಳೆದಿರುವ ಅರುಣ್ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Film) ಚಿತ್ರವು ಇದೇ ಶುಕ್ರವಾರ (ಜು.19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿತ್ತು. ಈ ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

    ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್ ಶೆಟ್ಟಿ, ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Movies ಮಮತಾ ಸೆಂಧಿಲ್, ಅಮರ್, ಮನೋಜ್, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು. ಇದನ್ನೂ ಓದಿ:‘ಘಟಶ್ರಾದ್ಧ’ ಚಿತ್ರದ ನಿರ್ಮಾಪಕ ಸದಾನಂದ ಸುವರ್ಣ ನಿಧನ

    ಈ ಸಂದರ್ಭದಲ್ಲಿ ಮಾತನಾಡಿದ ಚಂದನ್ ಶೆಟ್ಟಿ, ಇದು ಬಿಡುಗಡೆಯಾಗುತ್ತಿರುವ ನನ್ನ ಮೊದಲ ಚಿತ್ರ. ಈ ಚಿತ್ರವನ್ನು ಜನ ಒಪ್ಪುತ್ತಾರಾ? ನನ್ನ ಅಭಿನಯ ಇಷ್ಟವಾಗುತ್ತದಾ? ಎಂಬ ಭಯ ಇತ್ತು. ಈಗ ಒಂದು ಮಟ್ಟಕ್ಕೆ ರಿಲ್ಯಾಕ್ಸ್ ಆಗಿದ್ದೀನಿ. ಅದಕ್ಕೆ ಕಾರಣ ದುಬೈನಲ್ಲಿ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ. ಅಲ್ಲಿ ಸಾಕಷ್ಟು ಕನ್ನಡಿಗರು ಚಿತ್ರ ನೋಡಿದರು. ಅವರು ಎಲ್ಲ ಸಿನಿಮಾಗಳನ್ನು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಇಡೀ ಚಿತ್ರಮಂದಿರ ತುಂಬಿತ್ತು. ಚಿತ್ರ ಮುಗಿದ ಮೇಲೆ ಎಲ್ಲರೂ ಒಳ್ಳೆಯ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ. ಈ ತಂಡದ ಭಾಗವಾಗಿರುವುದಕ್ಕೆ ನಾನು ನಿಜಕ್ಕೂ ಅದೃಷ್ಟವಂತ ಎಂದರೆ ತಪ್ಪಿಲ್ಲ. ನಮ್ಮ ನಿರ್ಮಾಪಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದೆ, ಎಲ್ಲದಕ್ಕೂ ಬಹಳ ಸಹಕಾರ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಾನು ಹೀರೋ ಎನ್ನುವುದಕ್ಕಿಂತ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್ ಪ್ರಮುಖ ಪಾತ್ರಧಾರಿಗಳು. ಅವರೆಲ್ಲಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಈ ಚಿತ್ರದ ನಿಜವಾದ ಹೀರೋ ನಿರ್ದೇಶಕರು. ಒಂದೊಳ್ಳೆಯ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಿದ್ದಾರೆ. ಮಕ್ಕಳು ಮತ್ತು ಅವರ ಪೋಷಕರು ಇಬ್ಬರೂ ಕೂತು ಒಟ್ಟಿಗೆ ನೋಡುವಂಥ ಚಿತ್ರ ಇದು. ಎಲ್ಲರೂ ಬಂದು ಚಿತ್ರ ನೋಡಿ ಎಂದರು.

    ಅರುಣ್ ಅಮುಕ್ತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮಗೆ ಯಾವ ಅಭಿಮಾನಿಗಳಿಲ್ಲ. ನಮ್ಮ ಚಿತ್ರ ನೋಡುವುದಕ್ಕೆ ಬರುವವರೇನಿದ್ದರೂ ಟ್ರೈಲರ್‌ ಮತ್ತು ಹಾಡುಗಳನ್ನು ನೋಡಿ ಬರಬೇಕು. ನಮ್ಮ ಪ್ರೇಕ್ಷಕರೇನಿದ್ದರೂ ಇವತ್ತಿನ ಯುವಜನತೆ. ಅವರಿಗೆ ಚಿತ್ರ ತಲುಪಿಸಬೇಕು. ಹೇಗೆ ತಲುಪಿಸಬೇಕು ಎಂಬುದರ ಕುರಿತು ನನಗೆ ಕೆಲವು ಯೋಚನೆಗಳಿದ್ದವು. ಹಾಗಾಗಿ, ನಾನೇ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾದೆ. ಸುಮಾರು 140 ಕೇಂದ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರದ ಟ್ರೈಲರ್‌ ಮತ್ತು ಹಾಡು ನೋಡಿ, ಕೆಲವು ಚಿತ್ರಮಂದಿರದವರು ಕರೆದು ಚಿತ್ರ ಪ್ರದರ್ಶಿಸುವ ಅವಕಾಶ ಕೊಟ್ಟಿದ್ದಾರೆ. ಆಮೇಲೆ ನೋಡೋಣ ಎಂದು ಕಾಯದೇ ಮೊದಲ ದಿನವೇ ಬಂದು ಚಿತ್ರ ನೋಡಿ’ ಎಂದು ಕರೆನೀಡಿದರು.

    ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ ಮಮತಾ ಸೆಂಧಿಲ್ ಮಾತನಾಡಿ, ಇದಕ್ಕೂ ಮುನ್ನ ‘ಕಾಟೇರ’ ಚಿತ್ರವನ್ನು ಬಿಡಗುಡೆ ಮಾಡಿದ್ದೆವು. ಇದು ನಮ್ಮ ಎರಡನೆಯ ಚಿತ್ರ. ನೋಡಿದವರೆಲ್ಲರೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬೇರೆ ದೇಶಗಳಲ್ಲೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಅಲ್ಲಿನ ಕನ್ನಡಿಗರು ಕೇಳುತ್ತಿದ್ದು, ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಮುಂತಾದ ಕಡೆ ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದರು.

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವನ್ನು ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸಿದ್ದಾರೆ. ತಮ್ಮ ಮೊದಲ ಪ್ರಯತ್ನಕ್ಕೆ ಕನ್ನಡಿಗರ ಪ್ರೋತ್ಸಾಹ, ಬೆಂಬಲವಿರಲಿ ಎಂದು ನಿರ್ಮಾಪಕರು ಇದೇ ಸಂದರ್ಭದಲ್ಲಿ ಕೇಳಿಕೊಂಡರು.

    ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ಅಮರ್, ಮನೋಜ್, ಮನಸ್ವಿ ಮುಂತಾದವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಚಿತ್ರವನ್ನು ನೋಡಿ ಹರಸಿ-ಹಾರೈಸುವುದಕ್ಕೆ ಮನವಿ ಮಾಡಿದರು.

  • ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು!

    ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು!

    ರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidhyarthi Vidyarthiniyare) ಚಿತ್ರ ಇದೇ ತಿಂಗಳ 19ರಂದು ತೆರೆಗಾಣುತ್ತಿದೆ. ಈಗಾಗಲೇ ಸೈಡ್ ಎ ಟ್ರೈಲರ್ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿ ಸೈಡ್ ಬಿ ಟ್ರೈಲರ್ ಲಾಂಚ್ ಆಗಿದೆ. ಜಬರ್ದಸ್ತ್ ಶೈಲಿಯಲ್ಲಿ ಮೂಡಿ ಬಂದಿರುವ ಈ ಟ್ರೈಲರ್ ಕಂಡವರೆಲ್ಲ ಅಕ್ಷರಶಃ ಥ್ರಿಲ್ ಆಗಿದ್ದಾರೆ. ಶೀರ್ಷಿಕೆ ನೋಡಿದವರು ಒಂದು ಸಿದ್ಧಸೂತ್ರದ ಕಲ್ಪನೆ ಮೂಡಿಸಿಕೊಂಡಿದ್ದರು. ಆದರೆ, ಈ ಸಿನಿಮಾ ಅದೆಲ್ಲವನ್ನೂ ಮೀರಿಕೊಂಡ ರಗಡ್ ಕಥೆಯನ್ನೊಳಗೊಂಡಿದೆ ಎಂಬುದನ್ನು ಸೈಡ್ ಬಿ ಟ್ರೈಲರ್ ಸಾಕ್ಷೀಕರಿಸಿದೆ. ಇದನ್ನೂ ಓದಿ:ದರ್ಶನ್‌ ಪ್ರಕರಣ: ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ- ಡಾಲಿ

    ನಿರ್ದೇಶಕ ಅರುಣ್ ಅಮುಕ್ತ ಇದೊಂದು ಭಿನ್ನ ಕಥಾನಕ ಎಂಬ ಸುಳಿವು ಬಿಟ್ಟುಕೊಟ್ಟಿದ್ದರು. ಈಗ ಸದರಿ ಟ್ರೈಲರ್ ಅದನ್ನು ಸಾಬೀತುಪಡಿಸಿದೆ. ಈ ಮೂಲಕ ಒಂದಿಡೀ ಸಿನಿಮಾದ ಝಲಕ್ಕುಗಳು ಸ್ಪಷ್ಟವಾಗಿ ಜಾಹೀರಾಗಿವೆ. ಕಾಲೇಜು ಕಹಾನಿಯ ಸುತ್ತಾ, ಮೈನವಿರೇಳಿಸೋ ಸಸ್ಪೆನ್ಸ್ ಥ್ರಿಲ್ಲರ್, ಕ್ರೈಂನೊಂದಿಗೆ ಈ ಸಿನಿಮಾ ರೂಪುಗೊಂಡಿರೋದೂ ಸ್ಪಷ್ಟವಾಗಿದೆ. ನೋಡಿದವರೆಲ್ಲ ಇದೊಂದು ಪ್ರಾಮಿಸಿಂಗ್ ಟ್ರೈಲರ್ ಅನ್ನೋ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ನೋಡಲೇಬೇಕೆಂಬ ತುಡಿತ ಮೂಡಿಸುವಷ್ಟು ಪರಿಣಾಮಕಾರಿಯಾಗಿ ಈ ಟ್ರೈಲರ್ ಅನ್ನು ರೂಪಿಸಲಾಗಿದೆ.

    ಈವರೆಗೂ ಒಂದಷ್ಟು ಹಾಡುಗಳ ಮೂಲಕವೇ ಪ್ರಧಾನವಾಗಿ ಈ ಸಿನಿಮಾ ಸೆಳೆದುಕೊಂಡಿತ್ತು. ಇದೀಗ ತೆರೆಗಾಣುವ ಕಡೇ ಘಳಿಗೆಯಲ್ಲಿ ಬಿ ಸೈಡ್ ಟ್ರೈಲರ್ ಮೂಲಕ ಚಿತ್ರತಂಡ ಮೋಡಿ ಮಾಡಿದೆ. ಈ ಮೂಲಕ ಪಾತ್ರಗಳ ಚಹರೆಗಳೆಲ್ಲ ಜಾಹೀರಾಗಿವೆ. ಒಂದು ವೇಳೆ ಟ್ರೈಲರ್‌ನಲ್ಲಿ ಕಾಣಿಸಿರುವ ಬಿಗುವಿನಲ್ಲಿಯೇ ಒಂದಿಡೀ ಸಿನಿಮಾ ಮೂಡಿ ಬಂದಿದ್ದರೆ ಗೆಲುವು ಗ್ಯಾರೆಂಟಿ ಎಂಬಂಥಾ ವಿಶ್ಲೇಷಣೆಗಳೂ ಕೇಳಿ ಬರುತ್ತಿವೆ. ರ್ಯಾಪರ್ ಚಂದನ್ ಶೆಟ್ಟಿಯ ಪಾತ್ರವೂ ನೋಡುಗರ ಗಮನ ಸೆಳೆದಿದೆ. ಇಲ್ಲಿ ಅವರಿಗೆ ಅಪರೂಪದ ಪಾತ್ರವೊಂದು ಸಿಕ್ಕಿರುವ ಸುಳಿವೂ ಕೂಡಾ ಪ್ರೇಕ್ಷಕರನ್ನು ತಲುಪಿದೆ. ನಿಖರವಾಗಿ ಹೇಳಬೇಕೆಂದರೆ, ನಿರ್ದೇಶಕ ಅರುಣ್ ಅಮುಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರ ಜೊತೆ ಮೋಡಿ ಮಾಡುವ ಎಲ್ಲ ಲಕ್ಷಣಗಳೂ ದಟ್ಟವಾಗಿ ಗೋಚರಿಸುತ್ತಿವೆ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ (Chandan Shetty), ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidhyarthi Vidhyathiniyare) ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 19ರಂದು ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ಅದೇ ದಿನ ನೆರೆಯ ಕೇರಳದಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ. ಈಗಾಗಲೇ ಕಾಲೇಜು ಬೇಸಿನ ಈ ಸಿನಿಮಾ ಭಿನ್ನ ಜಾಡಿನಲ್ಲಿ ರೂಪುಗೊಂಡಿದೆ ಎಂಬ ವಿಚಾರ ಪ್ರೇಕ್ಷಕರೆಲ್ಲರಿಗೂ ಮನದಟ್ಟಾಗಿದೆ. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿ ಚಿತ್ರತಂಡ ಮತ್ತೊಂದಷ್ಟು ಖುಷಿಯ ಸಂಗತಿಗಳನ್ನು ಹೊತ್ತು ತಂದಿದೆ. ಇದನ್ನೂ ಓದಿ:ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

    ಚಿತ್ರತಂಡ ಹಂಚಿಕೊಂಡಿರೋ ಮಾಹಿತಿಯ ಪ್ರಕಾರ ಹೇಳೋದಾದರೆ, ಬಿಡುಗಡೆಗೂ ಮುನ್ನವೇ ವಿದ್ಯಾರ್ಥಿ ವಿದ್ಯಾರ್ಥಿನಿಯರ ಹವಾ ಸಾಗರದಾಚೆಗೂ ಹಬ್ಬಿಕೊಳ್ಳಲಿದೆ. ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಪ್ರತಿಷ್ಠಿತ ಒಎಂಜಿ ಕಂಪೆನಿ ದುಬೈನಲ್ಲಿ ಈ ಚಿತ್ರದ ವಿತರಣಾ ಹಕ್ಕು ಪಡೆದುಕೊಂಡಿದೆ. ಇದಕ್ಕೆ ಬೇಕಾದ ಎಲ್ಲ ತಯಾರಿಗಳನ್ನೂ ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದು ವಿದ್ಯಾರ್ಥಿ ವಿದ್ಯಾರ್ಥಿನಿಯರು ರೂಪುಗೊಂಡಿರುವ ರೀತಿ ಮತ್ತು ಅದರ ಕಂಟೆಂಟಿನ ಗಟ್ಟಿತನಕ್ಕೊಂದು ಉದಾಹರಣೆ. ನಿಖರವಾಗಿ ಹೇಳುವುದಾದರೆ, ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಈ ತಿಂಗಳ ಬಹುಮುಖ್ಯ ಚಿತ್ರವಾಗಿ ದಾಖಲಾಗಿದೆ. ಈಗಿರುವ ಕ್ರೇಜ್ ನೋಡುತ್ತಿದ್ದರೆ ದೊಡ್ಡ ಮಟ್ಟದಲ್ಲಿ ಗೆಲ್ಲುವ ಲಕ್ಷಣಗಳೂ ದಟ್ಟವಾಗಿವೆ.

    ಇದು ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ ಚಿತ್ರ. ಈಗಿನ ಯುವ ಸಮೂಹವನ್ನು ಆವರಿಸಿಕೊಳ್ಳುವಂಥಾ ಕಥೆಯೊಂದಿಗೆ ಅರುಣ್ ಅಮುಕ್ತ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರಂತೆ. ಸದ್ಯದ ಮಟ್ಟಿಗೆ ಎಲ್ಲವೂ ಪಾಸಿಟಿವ್ ಆಗಿದೆ. ಆದರೆ, ಇಂಥಾ ಚಿತ್ರಗಳ ಬೆನ್ನಿಗೆ ಕನ್ನಡದ ತಾರೆಯರು, ತಂತ್ರಜ್ಞರು, ಕಲಾವಿದರೆಲ್ಲ ನಿಲ್ಲುವ ಅವಶ್ಯಕತೆ ಇದೆ. ಸ್ಟಾರ್ ಹೀರೋಗಳು ಇಂಥಾ ಸಿನಿಮಾಗಳಿಗೆ ಪ್ರೋತ್ಸಾಹ ನೀಡೋದು ಈವತ್ತಿನ ಸನ್ನಿವೇಷದ ತುರ್ತು. ಯಾಕೆಂದರೆ, ಈಗೊಂದಷ್ಟು ತಿಂಗಳಿಂದ ಹೇಳಿಕೊಳ್ಳುವಂಥಾ ಗೆಲುವು ದಕ್ಕದೆ ಕನ್ನಡ ಚಿತ್ರರಂಗ ಬಸವಳಿದಿದೆ. ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಥರದ ಸಿನಿಮಾಗಳು ಗೆದ್ದರೆ, ದೊಡ್ಡ ದೊಡ್ಡ ಸಿನಿಮಾಗಳ ಹಾದಿಯೂ ಸುಗಮವಾಗುತ್ತೆ. ಚಿತ್ರರಂಗದ ಉಳಿವಿನ ದೃಷ್ಟಿಯಿಂದ ಇಂಥಾ ಚಿತ್ರಗಳ ಗೆಲುವು ಅನಿವಾರ್ಯ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರ’ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ರಿಲೀಸ್

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರ’ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ರಿಲೀಸ್

    ರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ  ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ.

    ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

    ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

     

    ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್  ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್

    ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidhyarthi Vidyarthiniyare). ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ (Trailer) ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡಿಕೊಳ್ಳುತ್ತೆ. ಸೈಡ್ ಬಿ ಟ್ರೈಲರ್ ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

    `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜ್ ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೇಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿದಂತೆ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೇಲರ್.

    ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡಾ ಈ ಟ್ರೈಲರಿನಲ್ಲಿ ಸಾಕ್ಷಿಗಳಿದ್ದಾವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್  ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ದೇಶದ ಮೊದಲ ಎಐ ಆ್ಯನಿಮೇಟೆಡ್ `ಬ್ಯಾಡ್ ಬಾಯ್ಸ್’ ವಿಡಿಯೋ ಸಾಂಗ್ ರಿಲೀಸ್

    ದೇಶದ ಮೊದಲ ಎಐ ಆ್ಯನಿಮೇಟೆಡ್ `ಬ್ಯಾಡ್ ಬಾಯ್ಸ್’ ವಿಡಿಯೋ ಸಾಂಗ್ ರಿಲೀಸ್

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಹಂತ ಹಂತವಾಗಿ, ಕ್ರಿಯಾಶೀಲ ಹಾದಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾ ಮುಂದುವರೆಯುತ್ತಿದೆ. ಸದ್ಯದ ಮಟ್ಟಿಗೆ ಬಿಡುಗಡೆಗೆ ತಯಾರಾಗುತ್ತಿರುವ ಈ ಸಿನಿಮಾ ಸುತ್ತ ಸಕಾರಾತ್ಮಕ ವಾತಾವರಣ ಹಬ್ಬಿಕೊಂಡಿದೆ. ಆ ಖುಷಿಯಲ್ಲಿರುವ ಚಿತ್ರತಂಡವೀಗ `ಬ್ಯಾಡ್ ಬಾಯ್ಸ್’ (Bad Boys) ಎಂಬ ವೀಡಿಯೋ ಸಾಂಗ್ ಒಂದನ್ನು ಬಿಡುಗಡೆಗೊಳಿಸಿದೆ. ಅದಾಗಿ ವಾರ ಕಳೆಯೋದರೊಳಗಾಗಿ ಎಲ್ಲೆಡೆಯಿಂದ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಈ ಹೊತ್ತಿನ ಯುವ ಸಮುದಾಯವನ್ನು ಒಂದೇ ಸಲಕ್ಕೆ ಆವರಿಸಿಕೊಳ್ಳುವ ಶೈಲಿಯ ಈ ಹಾಡೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಲೇ, ಹೆಚ್ಚೆಚ್ಚು ವೀಕ್ಷಣೆ ಪಡೆಯುತ್ತಾ ಮುಂದುವರೆಯುತ್ತಿದೆ.

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಎಂಬ ಶೀರ್ಷಿಕೆಯೇ ಇದೊಂದು ಯುವ ಆವೇಗದ ಕಥಾನಕವನ್ನೊಳಗೊಂಡಿರುವ ಚಿತ್ರವೆಂಬುದನ್ನು ಸಾರಿ ಹೇಳುವಂತಿದೆ. ಇದೀಗ ಬಿಡುಗಡೆಗೊಂಡಿರುವ ಬ್ಯಾಡ್ ಬಾಯ್ಸ್ ವೀಡಿಯೋ ಸಾಂಗ್ ಶೀರ್ಷಿಕೆಗೆ ಅನ್ವರ್ಥವೆಂಬಂತಿದೆ. ಸಾಹಿತ್ಯ, ತಾಂತ್ರಿಕತೆ ಸೇರಿದಂತೆ ಎಲ್ಲ ರೀತಿಯಿಂದಲೂ ಹೊಸತೆಂಬಂತೆ ಮೂಡಿಬಂದಿರುವ ಈ ಹಾಡಿಗೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಭರ್ಜರಿ ಚೇತನ್ ಕುಮಾರ್ ಸಾಹಿತ್ಯ ಒದಗಿಸಿರುವ ಈ ಹಾಡು, ವಿಜೇತ್ ಕೃಷ್ಣ, ಕೀರ್ತನಾ ಚಂದ್ರು ಮತ್ತು ಸುನೈನಾ ಕಂಠಸಿರಿಯಲ್ಲಿ ಮೂಡಿ ಬಂದಿದೆ.

    ಯುವ ಸಮುದಾಯಕ್ಕೆ ಹಿಡಿಸುವಂತೆ ಮೂಡಿ ಬಂದಿರುವ ಈ ಹಾಡನ್ನು ತಾಂತ್ರಿಕವಾಗಿಯೂ ವಿಶೇಷತೆಗಳೊಂದಿಗೆ ರೂಪಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನ ಎಲ್ಲ ಕ್ಷೇತ್ರಗಳನ್ನೂ ಆವರಿಸಿಕೊಂಡಿದೆ. ಇದೀಗ ಇಡೀ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿ ಈ ಹಾಡಿಗೆ ಎಐ ಆನಿಮೇಷನ್ ನಡೆಸಲಾಗಿದೆ. ಇದಕ್ಕೆ ಸಿನಿಮಾ ಪ್ರೇಮಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಬಹುದೆಂಬ ಕುತೂಹಲ ಚಿತ್ರತಂಡದಲ್ಲಿತ್ತು. ಈಗ ಮೂಡಿಕೊಂಡಿರುವ ಭರಪೂರ ಮೆಚ್ಚುಗೆಯಲ್ಲಿ ಚಿತ್ರತಂಡದ ಶ್ರಮ ಸಾರ್ಥಕ್ಯ ಕಂಡಿದೆ.

     

    ಇದೀಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿರುವ ಈ ಹಾಡಿನಲ್ಲಿ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಮುಂತಾದವರು ಕಾಣಿಸಿಕೊಂಡಿದ್ದಾರೆ.  ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್  ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ರೋಲ್ ಮಾಡೆಲ್ ಸಿನಿಮಾ : ನಟ ರಘು ರಾಮನಕೊಪ್ಪ

    `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ರೋಲ್ ಮಾಡೆಲ್ ಸಿನಿಮಾ : ನಟ ರಘು ರಾಮನಕೊಪ್ಪ

    ರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರದ ಬಗ್ಗೆ ಪ್ರೇಕ್ಷಕ ವಲಯದಲ್ಲಿ ಚರ್ಚೆ ಶುರುವಾಗಿದೆ. ಹಂತ ಹಂತವಾಗಿ ಅಂಥದ್ದೊಂದು ಕುತೂಹಲ ನೋಡುಗರಲ್ಲಿ ಮೂಡಿಕೊಳ್ಳುವಂತೆ ಮಾಡುವಲ್ಲಿ ಚಿತ್ರತಂಡ ಯಶ ಕಂಡಿದೆ. ಹೀಗೆ ಸಾಗಿ ಬಂದಿರುವ ಈ ಸಿನಿಮಾದ ಚಿತ್ರೀಕರಣವೀಗ ಸಮಾಪ್ತಿಗೊಂಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ಆಯೋಜಿಸಿದ್ದ ಚಿತ್ರತಂಡ ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ತೆರೆದಿಟ್ಟಿದೆ. ಈ ಹಂತದಲ್ಲಿ ಚಿತ್ರೀಕರಣ ನಡೆದ ಬಗೆ, ಪಾತ್ರದ ಝಲಕ್ಕುಗಳೆಲ್ಲವೂ ಆಯಾ ಪಾತ್ರಗಳನ್ನು ನಿರ್ವಹಿಸಿದ ಕಲಾವಿದರ ಕಡೆಯಿಂದಲೇ ಅನಾವರಣಗೊಂಡಿರೋದು ವಿಶೇಷ.

    ಈ ಸಿನಿಮಾದಲ್ಲಿ ಬಹುಮುಖ್ಯವಾದ ಪಾತ್ರವೊಂದನ್ನು ರಘು ರಾಮನಕೊಪ್ಪ (Raghu Ramakoppa) ನಿಭಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆ ಹೊಂದಿರುವ ನಟ ರಘು. ಸಿನಿಮಾದಿಂದ ಸಿನಿಮಾಗೆ ಅವರ ಪಾಲಿಗೆ ಭಿನ್ನವಾದ ಪಾತ್ರಗಳೇ ಒಲಿದು ಬರುತ್ತಿವೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಈವರೆಗಿನದ್ದಕ್ಕಿಂತ ವಿಶೇಷವಾದ ಪಾತ್ರ ಸಿಕ್ಕ ಖುಷಿ ಅವರಲ್ಲಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ರಘು ರಾಮನಕೊಪ್ಪ ಒಂದಿಡೀ ಚಿತ್ರತಂಡದ ಕಾರ್ಯವೈಖರಿಯನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಲೇ, ತಮ್ಮ ಪಾತ್ರದ ಬಗ್ಗೆ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದಾರೆ.

    ಸಿನಿಮಾ ಬಗ್ಗೆ ಕನಸಿಟ್ಟುಕೊಂಡವರಿಗೆಲ್ಲ ಪ್ರತಿಯೊಂದರಲ್ಲಿಯೂ ಪ್ರೇರಣೆಯಾಗಬಲ್ಲ ರೋಲ್ ಮಾಡೆಲ್ಲಿನಂತಾ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಎಂಬುದು ರಘು ಅವರ ಅಚಲ ವಿಶ್ವಾಸ. ಯಾಕೆಂದರೆ, ಪಾತ್ರಗಳನ್ನು ಕಲಾವಿದರಿಗೆ ಕನೆಕ್ಟ್ ಮಾಡೋದರಿಂದ ಹಿಡಿದು, ಕಲಾವಿದರನ್ನು ಹೇಗೆಲ್ಲ ನಡೆಸಿಕೊಳ್ಳಬೇಕು ಎಂಬಲ್ಲಿಯವರೆಗೂ ಅವರ ಪಾಲಿಗೆ ಈ ಸಿನಿಮಾ ವಿಶೇಷ ಅನ್ನಿಸಿದೆಯಂತೆ. ಇನ್ನುಳಿದಂತೆ, ಬೇರೆ ಬೇರೆ ತೆರನಾದ ಪಾತ್ರಗಳನ್ನು ಬಯಸುವ ರಘು ಪಾಲಿಗಿಲ್ಲಿ ಬೇರೆಯದ್ದೇ ಶೇಡಿನ ಪಾತ್ರ ಸಿಕ್ಕಿದೆಯಂತೆ.

    ಸಾಮಾನ್ಯವಾಗಿ ಹಾಸ್ಯ ಪ್ರಧಾನ ಪಾತ್ರಗಳ ಮೂಲಕ ರಘು ರಾಮಕೊಪ್ಪ ಪ್ರಸಿದ್ಧರು. ಆದರೆ, ಅರುಣ್ ಅಮುಕ್ತ ಅದಕ್ಕೆ ತದ್ವಿರುದ್ಧ ಪಾತ್ರವೊಂದನ್ನು ರಘು ಅವರಿಗಾಗಿಯೇ ಸೃಷ್ಟಿಸಿದ್ದಾರೆ. ಅದರ ಫಲವಾಗಿ ರಘು ಇಲ್ಲಿ ಆಟೋ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಓರ್ವ ಮಗಳ ತಂದೆಯಾಗಿ, ಕುಟುಂಬದ ಜವಾಬ್ದಾರಿ ಹೊತ್ತ ಗೃಹಸ್ಥನಾಗಿ, ಮಗಳ ಬದುಕಿನಲ್ಲಾಗುವ ಘಟನಾವಳಿಗಳನ್ನು ಕಂಡು ಸಂಕಟ ಪಡುವ ಅಪ್ಪನಾಗಿ ಅವರಿಲ್ಲಿ ಕಾಣಿಸಿಕೊಂಡಿದ್ದಾರಂತೆ. ಒಟ್ಟಾರೆಯಾಗಿ, ಅದೊಂದು ಭಾವನಾತ್ಮಕ ಅಂಶಗಳಿರುವ ಪಾತ್ರ. ಹೀಗೆ ಕಲಾವಿದರನ್ನು ಒಂದೇ ಬಗೆಯ ಪಾತ್ರಗಳಿಗೆ ಕಟ್ಟುಬೀಳುವಂತೆ ಮಾಡದೆ, ಹೊಸಾ ಸಾಧ್ಯತೆಗಳಿಗೆ ತೆರೆದುಕೊಳ್ಳಲು ಅವಕಾಶ ಮಾಡಿಕೊಟ್ಟ ಈ ಚಿತ್ರತಂಡಕ್ಕೆ ರಘು ರಾಮನಕೊಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ. ಇದಲ್ಲದೇ ಈ ತಂಡದಿಂದ ಇನ್ನು ಮುಂದೆ ಬಿಗ್ ಪ್ರಾಜೆಕ್ಟುಗಳು ಸೃಷ್ಟಿಯಾಗುವ ಭರವಸೆಯನ್ನೂ ಕೂಡಾ ಹೊರಹಾಕಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಂತೃಪ್ತಿ ತಂದ ಚಿತ್ರ ಅಂತಾರೆ ನಿರ್ಮಾಪಕರು

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಂತೃಪ್ತಿ ತಂದ ಚಿತ್ರ ಅಂತಾರೆ ನಿರ್ಮಾಪಕರು

    ಯಾವುದೇ ಕಥೆಯೊಂದು ಸಿನಿಮಾ ರೂಪ ಧರಿಸಿ, ಪ್ರೇಕ್ಷಕರನ್ನು ಮುಖಾಮುಖಿಯಾಗೋ ಪ್ರಕ್ರಿಯೆಯ ಹಿಂದೆ ನಿರ್ಮಾಪಕರ ಪಾತ್ರ ಪ್ರಧಾನವಾಗಿರುತ್ತದೆ. ಅಷ್ಟಕ್ಕೂ ಸಿನಿಮಾ ಅನ್ನೋದೊಂದು ಟೀಮ್ ವರ್ಕ್. ಎಲ್ಲರ ಶ್ರಮ, ಪ್ರತಿಭೆಗಳ ಸಮ್ಮಿಲನದಿಂದ ಚಿತ್ರವೊಂದು ರೂಪುಗೊಳ್ಳುತ್ತದೆಂಬುದು ಸತ್ಯ. ಆದರೆ ನಿರ್ಮಾಪಕರ ಸಾಥ್ ಇಲ್ಲದೇ ಹೋದರೆ, ಅಂಥಾ ಕನಸೊಂದು ಸಾಕಾರಗೊಳ್ಳುವುದೇ ಕನಸಿನ ಮಾತಾಗುತ್ತದೆ. ಈ ನಿಟ್ಟಿನಲ್ಲಿ ನೋಡಹೋದರೆ, ಇದೀಗ ಚಿತ್ರೀಕರಣ ಮುಗಿಸಿಕೊಂಡಿರುವ, ಅರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರದ ಮುಖ್ಯ ಶಕ್ತಿಯಂತಿರುವವರು ನಿರ್ಮಾಪಕರಾದ ಸುಬ್ರಮಣ್ಯ ಕುಕ್ಕೆ (Subramanya Kukke) ಮತ್ತು ಎ.ಸಿ ಶಿವಲಿಂಗೇಗೌಡ.

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಚಿತ್ರೀಕರಣ ಐವತ್ತು ದಿನಗಳ ಕಾಲ ಅವ್ಯಾಹತವಾಗಿ ನಡೆದಿದೆ. ಹಾಗೆ ಕುಂಬಳಕಾಯಿ ಒಡೆದಾದ ನಂತರದಲ್ಲಿ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಗಮನಹರಿಸಿದೆ. ಇದೇ ಹೊತ್ತಿನಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸುವ ಮೂಲಕ ಮಾಧ್ಯಮ ಪ್ರತಿನಿಧಿಗಳನ್ನು ಮುಖಾಮುಖಿಯಾಗಿದೆ. ಈ ಹೊತ್ತಿನಲ್ಲಿ ಸದರಿ ಸಿನಿಮಾದ ಪಾತ್ರಧಾರಿಗಳೆಲ್ಲ ಪಾಲ್ಗೊಂಡು ಲವಲವಿಕೆಯಿಂದ ಮಾತಾಡಿದ್ದಾರೆ. ಪ್ರಧಾನವಾಗಿ ನಿರ್ಮಾಪಕರಾದ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ (Shivalingegowda) ಕೂಡಾ ನಿರ್ಮಾಪಕರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

    ಸಾಮಾನ್ಯವಾಗಿ, ಹೊಸಬರ ತಂಡವೊಂದಕ್ಕೆ ಸಾಥ್ ಕೊಡಲು ಹೆಚ್ಚಿನ ನಿರ್ಮಾಪಕರು ಹಿಂದೇಟು ಹಾಕುತ್ತಾರೆ. ಆದರೆ, ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ನಿರ್ದೇಶಕ ಅರುಣ್ ಅಮುಕ್ತ ಹೇಳಿದ ಕಥೆ ಕೇಳಿ ಖುಷಿಗೊಂಡು ಒಪ್ಪಿಗೆ ಸೂಚಿಸಿದ್ದರಂತೆ. ಮುಖ್ಯಭೂಮಿಕೆಯಲ್ಲಿ ಹೊಸಬರಿದ್ದರೂ ಕೂಡಾ ಯಾವುದೇ ಅಳುಕಿಲ್ಲದೆ ಸಾಥ್ ಕೊಟ್ಟಿದ್ದರಂತೆ. ಇದೆಲ್ಲದಕ್ಕೂ ಕಾರಣ ಕಥೆಯ ಮೇಲಿನ ನಂಬಿಕೆ ಮತ್ತು ಅದನ್ನು ಎಲ್ಲರೂ ಬೆರಗಾಗುವಂತೆ ಅರುಣ್ ಅಮುಕ್ತ ಮಾಡುತ್ತಾರೆಂಬ ಭರವಸೆ ಎಂಬ ವಿಚಾರವನ್ನು ನಿರ್ಮಾಪಕರಿಬ್ಬರೂ ವ್ಯಕ್ತಪಡಿಸಿದ್ದಾರೆ. ಒಂದೇ ಆವೇಗದಲ್ಲಿ ಚಿತ್ರೀಕರಣ ಮುಗಿಸಿಕೊಂಡ ನಿರ್ದೇಶಕರು, ಕಲಾವಿದರು ಮತ್ತು ತಾಂತ್ರಿಕ ವರ್ಗಕ್ಕೆ ನಿರ್ಮಾಪಕರು ಭೇಷ್ ಅಂದಿದ್ದಾರೆ. ನಿಖರವಾಗಿ ಹೇಳಬೇಕೆಂದರೆ, ಒಂದೊಳ್ಳೆ ಸಿನಿಮಾ ಮಾಡಿರುವ ತುಂಬು ತೃಪ್ತಿ ಅವರ ಮಾತುಗಳಲ್ಲಿ ಸ್ಪಷ್ಟವಾಗಿ ಧ್ವನಿಸಿದೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಅಜರ್ ಪಾತ್ರ ತುಂಬಾ ವಿಶೇಷವಾಗಿದೆ : ನಟ ಪ್ರಣವ್

    ಅಜರ್ ಪಾತ್ರ ತುಂಬಾ ವಿಶೇಷವಾಗಿದೆ : ನಟ ಪ್ರಣವ್

    ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  (Vidyarthi Vidyarthiniyare) ಚಿತ್ರವೀಗ ನಿರ್ಣಾಯಕ ಘಟ್ಟ ತಲುಪಿಕೊಂಡಿದೆ. ಬಹುಶಃ ಯಾರೂ ನಿರೀಕ್ಷಿಸಿರದ ವೇಗದಲ್ಲಿ ಈ ಸಿನಿಮಾವೀಗ ಚಿತ್ರೀಕರಣ ಮುಗಿಸಿಕೊಂಡಿದೆ. ಕುಂಬಳಕಾಯಿ ಒಡೆದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಹೊರಳಿಕೊಂಡಿರುವ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿದೆ. ಈ ವೇದಿಕೆಯಲ್ಲಿ ಚಿತ್ರೀಕರಣ ನಡೆಸಿದ ರೀತಿ, ಅದರಿಂದ ದಕ್ಕಿದ ಅನುಭವ, ಪಾತ್ರಗಳ ಆಯ್ಕೆ, ಅವುಗಳ ಗುಣಲಕ್ಷಣ ಮುಂತಾದ ಒಂದಷ್ಟು ಮುಖ್ಯ ವಿಚಾರಗಳನ್ನು ಹಂಚಿಕೊಳ್ಳಲಾಗಿದೆ.

    ಇದು ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಅರುಣ್ ಅತ್ಯಂತ ಜಾಣ್ಮೆಯಿಂದ, ಅಂದುಕೊಂಡಿದ್ದಕ್ಕಿಂತಲೂ ತುಸು ಬೇಗನೆ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಈ ಪತ್ರಿಕಾ ಗೋಷ್ಠಿಯ ಮೂಲಕ ಪಾತ್ರಗಳನ್ನು ಆಯಾ ಕಲಾವಿದರ ದೃಷ್ಟಿಕೋನದ ಮೂಲಕ ಪ್ರೇಕ್ಷಕರತ್ತ ದಾಟಿಸುವ ಪ್ರಯತ್ನ ಮಾಡಿದ್ದಾರೆ. ಇರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದರೆ, ಮೂರು ಜೋಡಿಗಳು ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಅದರಲ್ಲೊಂದು ಪಾತ್ರವಾಗಿರುವವರು ಪ್ರಣವ್ (Pranav). ಈ ಬಗೆಗಿನ ಒಂದಷ್ಟು ವಿವರಗಳನ್ನು ಈ ಪತ್ರಿಕಾ ಗೋಷ್ಠಿಯಲ್ಲಿ ಪ್ರಣವ್ ಹಂಚಿಕೊಂಡಿದ್ದಾರೆ.

    ಪ್ರಣವ್ ಈ ಹಿಂದೆ ಒಂದಷ್ಟು ಸಿನಿಮಾಗಳಲ್ಲಿ ಪಾತ್ರಗಳನ್ನು ನಿರ್ವಹಿಸಿದ್ದರಂತೆ. ಆದರೆ, ಪೂರ್ಣ ಪ್ರಮಾಣದ ಪಾತ್ರವೊಂದು ಅವರ ಪಾಲಿಗೆ ಒಲಿದು ಬಂದಿರೋದು ಈ ಚಿತ್ರದ ಮೂಲಕವೇ. ಇಂಥಾದ್ದೊಂದು ಅವಕಾಶ ಕೊಟ್ಟ ನಿರ್ಮಾಪಕರುಗಳು ಮತ್ತು ನಿರ್ದೇಶಕರನ್ನು ಮೆಚ್ಚಿಕೊಳ್ಳುತ್ತಲೇ ಅವರ ತಮ್ಮ ಪಾತ್ರದ ಬಗ್ಗೆ ಒಂದಷ್ಟು ಮಾತಾಡಿದ್ದಾರೆ. ಅವರಿಲ್ಲಿ ಅಜರ್ ಎಂಬ ಕಾಲೇಜು ಹುಡುಗನ ಪಾತ್ರವನ್ನು ನಿರ್ವಹಿಸಿದ್ದಾರಂತೆ. ಆದರೆ ಗೌಪ್ಯತೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಅದರ ಗುಣಲಕ್ಷಣಗಳನ್ನು ಬಿಟ್ಟುಕೊಡದಂತೆ ಪ್ರಣವ್ ಜಾಣತನ ತೋರಿಸಿದ್ದಾರೆ. ಒಟ್ಟಾರೆಯಾಗಿ ನಾಯಕನಾಗುವ ಅವರ ಕನಸು ಈ ಮೂಲಕ ನನಸಾಗಿದೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಮಾನಸಿಯ ಮನದಾಳ: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಅವಕಾಶ

    ಮಾನಸಿಯ ಮನದಾಳ: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಅವಕಾಶ

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಕಾಲೇಜು ವಾತಾವರಣದಲ್ಲಿ ಘಟಿಸುವ ಕಥೆಯನ್ನೊಳಗೊಂಡಿದೆ. ಬಹುಶಃ ಅದರ ಸುತ್ತ ಹಬ್ಬಿಕೊಂಡಿರುವ ಕೌತುಕಗಳ ಹಿಂದೆ ಇಂತಹ ಕಾಲೇಜ್ ಹಿನ್ನೆಲೆಯ ಸ್ಟೋರಿಯ ಬಲವೇ ಪ್ರಧಾನವಾಗಿ ಕೆಲಸ ಮಾಡಿದೆ. ಇದೀಗ ಚಿತ್ರೀಕರಣ ಮುಗಿಸಿಕೊಂಡು, ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಿಗೆ ಸಜ್ಜುಗೊಂಡಿರುವ ಚಿತ್ರತಂಡ, ಪತ್ರಿಕಾ ಗೋಷ್ಠಿಯೊಂದರ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿದೆ. ಈ ನೆಪದಲ್ಲಿ ಪಾತ್ರಗಳ ಚಹರೆ, ಅದಕ್ಕಾಗಿ ನಡೆದ ಆಯ್ಕೆ ಮುಂತಾದ ಒಂದಷ್ಟು ಕುತೂಹಲಕರ ಸಂಗತಿಗಳು ಅನಾವರಣಗೊಂಡಿವೆ.

    ನಿರ್ದೇಶಕ ಅರುಣ್ ಅಮುಕ್ತ ಇಲ್ಲಿನ ಪ್ರತೀ ಅಂಶಗಳನ್ನೂ ಪ್ರಧಾನವಾಗಿ ಪರಿಗಣಿಸಿ ಈ ಸಿನಿಮಾವನ್ನು ರೂಪಿಸಿದ್ದಾರೆ. ಅದರಲ್ಲಿಯೂ ಇಲ್ಲಿನ ಪ್ರತ್ಯೇಕ ಪಾತ್ರಗಳಿಗೂ ಕೂಡಾ ಅಳೆದೂ ತೂಗಿ, ಆಡಿಷನ್  ನಡೆಸುವ ಮೂಲಕ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರ ಮೂರು ಪ್ರಧಾನ ಜೋಡಿಗಳಿಗೆ ಹೊಸ ಮುಖಗಳನ್ನೇ ಆಯ್ಕೆ ಮಾಡಲಾಗಿದೆ. ಅದರಲ್ಲೊಂದು ನಾಯಕಿಯ ಪಾತ್ರಕ್ಕೆ ಚೆಲ್ಲುಚೆಲ್ಲಾಗಿ ವರ್ತಿಸುವ, ನೋಡಿದಾಕ್ಷಣ ಅಂಥಾದ್ದೇ ಫೀಲ್ ಬರುವ ಕಲಾವಿದೆಯ ಅವಶ್ಯಕತೆ ಇತ್ತು. ಅದಕ್ಕಾಗಿ ಆಡಿಷನ್ ನಡೆಸಿದಾಗ ಸಿಕ್ಕ ಹುಡುಗಿ ಮಾನಸಿ.

    ಮಾನಸಿ (Manasi) ಈ ವಿಚಾರವಾಗಿ ಒಂದಷ್ಟು ವಿಚಾರಗಳನ್ನು ಈ ಪತ್ರಿಕಾಗೋಷ್ಠಿಯ ಮೂಲಕ ಹಂಚಿಕೊಂಡಿದ್ದಾರೆ. ಮಾನಸಿ ಈಗಷ್ಟೇ ಸೆಕೆಂಡ್ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ. ಆಡಿಷನ್ ಮೂಲಕವೇ ತನ್ನನ್ನು ಈ ಪಾತ್ರಕ್ಕೆ ಆಯ್ಕೆ ಮಾಡಿಕೊಂಡು, ನಾಯಕಿಯಾಗಲು ಅವಕಾಶ ಕಲ್ಪಿಸಿದ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ಮಾನಸಿ ಧನ್ಯವಾದ ಸಲ್ಲಿಸಿದ್ದಾರೆ. ಅವರೇ ಹೇಳಿಕೊಂಡಿರೋ ಪ್ರಕಾರ ಹೇಳೋದಾದರೆ, ಚೈಲ್ಡ್ ಚೈಲ್ಡಾಗಿ ವರ್ತಿಸುವ, ಲವಲವಿಕೆಯ ಪಾತ್ರಕ್ಕವರು ಜೀವ ತುಂಬಿದ್ದಾರಂತೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.