ಬೀದರ್: ಕಾಂಗ್ರೆಸ್ (Congress) ಸರ್ಕಾರ ಗ್ಯಾರಂಟಿ ಕಾರ್ಡ್‌ನಲ್ಲಿ (Guarantee Card) ಕರೆಂಟ್ ಬಿಲ್ (Electricity Bill) ಫ್ರೀ ಎಂದು ಹೇಳಿದೆ. ಹೀಗಾಗೀ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜೆಸ್ಕಾಂ (JESCOM) ಸಿಬ್ಬಂದಿಗೆ ವ್ಯಕ್ತಿಯೊಬ್ಬ ತರಾಟೆ ತೆಗೆದುಕೊಂಡ ಘಟನೆ ಬೀದರ್ (Bidar) ತಾಲೂಕಿನ ಯದಲಾಪೂರ್ ಗ್ರಾಮದಲ್ಲಿ ನಡೆದಿದೆ.
ಮನೆಗೆ ಬಂದು ಕರೆಂಟ್ ಬಿಲ್ ಎಷ್ಟು ಬಾಕಿ ಇದೆ ಎಂದು ಜೆಸ್ಕಾಂ ಸಿಬ್ಬಂದಿ ಕೇಳಿದ ತಕ್ಷಣ ಕಾಂಗ್ರೆಸ್ ಸರ್ಕಾರ ಬಂದರೆ ಅವರೇ ಕಟ್ಟುತ್ತಾರೆ ಎಂದಿದ್ದಾರೆ. ನಾವು ಯಾಕೆ ಕಟ್ಟೋಣ ಸರ್? ನೀವು ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಿ ಎಂದು ವ್ಯಕ್ತಿ ಹೇಳಿದ್ದಾನೆ.
ಅದು ಮುಂದಿನ ತಿಂಗಳು ಇದೆ, ಅವರು ಇನ್ನೂ ಆದೇಶ ಮಾಡಿಲ್ಲ ಎಂದು ಜೆಸ್ಕಾಂ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದಾಗ, ನಾವು ಒಂದು ರೂಪಾಯಿನೂ ಕಟ್ಟಲ್ಲ. ಕಾಂಗ್ರೆಸ್ ಸರ್ಕಾರ ಬಂದಿದೆಯಲ್ಲಾ? ನೀವು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮನೆಗೆ ಹೋಗಿ ಬಿಲ್ ಕೇಳಿ ಎಂದು ವ್ಯಕ್ತಿ ಪಟ್ಟು ಹಿಡಿದಿದ್ದಾನೆ. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಪ್ರಯಾಣ – ಮಾರ್ಗಸೂಚಿಯಲ್ಲಿ ಏನಿರಬಹುದು?
ರಾಯಚೂರು: ಕಾಂಗ್ರೆಸ್ ಸರ್ಕಾರ (Congress Government) ಘೋಷಿಸಿರುವ 200 ಯೂನಿಟ್ ಉಚಿತ ವಿದ್ಯುತ್ (200 Unit Electricity) ಗ್ಯಾರಂಟಿ ಗೊಂದಲದ ನಡುವೆ ರಾಯಚೂರಿನ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಗೋಲ್‌ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ. ಜೆಸ್ಕಾಂಗೆ (GESCOM) ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ.
ಗ್ರಾಮಿಣ ಭಾಗದಲ್ಲಿ ಗ್ರಾಮಸ್ಥರು, ಬಡ ರೈತರಿಂದ (Farmers) ವಸೂಲಿ ಮಾಡಿದ ವಿದ್ಯುತ್ ಬಿಲ್‌ಗೆ ರಶೀದಿ ಕೊಡದೇ ಸಂಗ್ರಹಿಸಿದ ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಗ್ರಾಮ ವಿದ್ಯುತ್ ಬಿಲ್ ಕಲೆಕ್ಟರ್‌ಗಳೇ ಗುಳುಂ ಮಾಡಿರುವುದು ಬಯಲಾಗಿದೆ. ತಕ್ಷಣದ ಮಾಹಿತಿ ಪ್ರಕಾರ ರಾಯಚೂರು ತಾಲೂಕಿನ ಚಂದ್ರಬಂಡಾ ಜೆಸ್ಕಾಂ ಶಾಖೆ ಸೇರಿ ಸುಮಾರು 20 ಲಕ್ಷ ರೂಪಾಯಿ ವಂಚನೆಯಾಗಿರುವುದು ಕಂಡುಬಂದಿದೆ ಎಂದು ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ ಹೇಳಿದ್ದಾರೆ. ಇದನ್ನೂ ಓದಿ: ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ
ಆರ್.ಆರ್ ಸಂಖ್ಯೆಗಳ ವಸೂಲಾತಿ ಹಾಗೂ ಬ್ಯಾಂಕ್‌ಗೆ ಹಣ ಸಂದಾಯವಾದ ಕುರಿತು ಜೆಸ್ಕಾಂ ಅಧಿಕಾರಿಗಳು ಪರಿಶೀಲಿಸಿದಾಗ ನಕಲಿ ದಾಖಲೆಗಳ ಮೂಲಕ ಗೋಲ್‌ಮಾಲ್ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಚಂದ್ರಬಂಡಾ ಗ್ರಾಮದ ವಿದ್ಯುತ್ ಬಿಲ್ ಕಲೆಕ್ಟರ್ ಮಲ್ಲೇಶ್‌ಗೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನೋಟಿಸ್ ನೀಡಿದ್ದು ಕ್ರಮಕ್ಕೆ ಮುಂದಾಗಿದ್ದಾರೆ. ಆದ್ರೆ ಚಂದ್ರಬಂಡಾ ಮಾತ್ರವಲ್ಲದೇ ಹಲವೆಡೆ ಇದೇ ರೀತಿ ಗೋಲ್ ಮಾಲ್ ನಡೆದಿದ್ದು ಕೋಟ್ಯಾಂತರ ರೂಪಾಯಿ ವಂಚಿಸಿರುವ ಅನುಮಾನ ಮೂಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್ ಶಾಗೆ ಸ್ಟಾಲಿನ್ ಪತ್ರ
ಗ್ರಾಮೀಣ ಭಾಗದ ಬಹುತೇಕ ಬಡ ರೈತರು ಉಚಿತ ವಿದ್ಯುತ್ ಭರವಸೆ ಇಟ್ಟುಕೊಂಡು ಕುಳಿತಿರುವಾಗ ತಮ್ಮ ಹಣ ದುರ್ಬಳಕೆಯಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಬಿಲ್ ಕೊಡದೇ, ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಇರುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಂತಾ ಒತ್ತಾಯಿಸಿದ್ದಾರೆ.
ಮೈಸೂರು: ಜೂನ್ 1ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ (Electricity Bill) ಬಂದರೆ ಬಿಲ್ ಕಟ್ಟಬೇಡಿ. 200 ಯೂನಿಟ್ ಮೇಲೆ ಎಷ್ಟು ಹೆಚ್ಚುವರಿ ಬಳಸುತ್ತೀರೋ ಅದಕ್ಕೆ ಮಾತ್ರ ಬಿಲ್ ಕಟ್ಟಿ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ರಾಜ್ಯದ ಜನತೆಗೆ ತಿಳಿಸಿದ್ದಾರೆ.
ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಮುಖ ನೋಡಿ ಯಾರೂ ಮತ ಹಾಕಿಲ್ಲ. ಗ್ಯಾರಂಟಿ ಕಾರ್ಡ್ (Guarantee Card) ನೋಡಿ ಮತ ಹಾಕಿದ್ದಾರೆ, ಅದು ನೆನಪಿರಲಿ. ನಾವು ಸೋತಿದ್ದೇವೆ, ಸತ್ತಿಲ್ಲ. ಕೊಟ್ಟ ಭರವಸೆ ಈಡೇರಿಸಿ. ಜೂನ್ 1ರವರೆಗೆ ಕಾಯುತ್ತೇನೆ. ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಜೂನ್ 1ರಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್ ಪಾತ್ರ ತಿರುಗೇಟು
ರಾಜಸ್ಥಾನದಲ್ಲಿ (Rajasthan) ಕಾಂಗ್ರೆಸ್ ಇದೇ ರೀತಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಇದು ಜಾರಿಯಾಗಿಲ್ಲ. ಸಿದ್ದರಾಮಯ್ಯ (Siddaramaiah) ಅಥವಾ ನಾನು ಯಾರೂ ಆರ್ಥಿಕ ತಜ್ಞರಲ್ಲ. ಸಿಎಂ ಕುರ್ಚಿ ಎನ್ನುವುದು ಯಾರ ಸ್ವತ್ತೂ ಅಲ್ಲ. ಆದರೆ ಪೊಲೀಸ್ ವ್ಯವಸ್ಥೆ ಎನ್ನುವುದು ಶಾಶ್ವತವಾಗಿ ಇರುತ್ತದೆ. ವಿಧಾನಸೌಧದಲ್ಲಿ ಕೂತು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತೀರಾ? ಮೊದಲು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವುದನ್ನು ನಿಲ್ಲಿಸಿ. ಫೆಬ್ರವರಿಯಲ್ಲಿ ಅಶ್ವಥ್ ನಾರಾಯಣ್ ನೀಡಿದ ಹೇಳಿಕೆಗೆ ಈಗ ಧಮ್ಕಿ ಹಾಕಿ ಎಫ್‌ಐಆರ್ (FIR) ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 200 ಯೂನಿಟ್ ಫ್ರೀ – ವಿದ್ಯುತ್ ಉಪಕರಣ ಖರೀದಿಗೆ ಫುಲ್ ಡಿಮ್ಯಾಂಡ್
ವಿಧಾನಸಭಾ ಚುನವಣಾ ಫಲಿತಾಂಶದ ಪರಿಣಾಮ ಲೋಕಸಭಾ ಚುನಾವಣೆಯ ಮೇಲೆ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಎಂಬುದು ಕನ್ನಡಿಗರಿಗೆ ಗೊತ್ತಿದೆ. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ (BJP) ಎಚ್ಚೆತ್ತುಕೊಳ್ಳಬೇಕಿತ್ತು. ಅವತ್ತು ಎಚ್ಚೆತ್ತುಕೊಂಡಿದ್ದರೆ ಬಿಜೆಪಿಗೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ. ಗ್ಯಾರಂಟಿ ಸ್ಕೀಂ ಪರ ನಾನಿದ್ದೇನೆ. ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ. ಗ್ಯಾರಂಟಿ ಕಾರ್ಡ್‌ನಲ್ಲಿ ಷರತ್ತು ಅನ್ವಯ ಎಂದು ಎಲ್ಲಿಯೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ
ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಾದರೂ ಹಿಡಿಯುತ್ತೇನೆ. ಮೈಸೂರು ಮತ್ತು ಕೊಡಗು (Kodagu) ಅಭಿವೃದ್ಧಿಗಾಗಿ ಕೈಕಾಲು ಹಿಡಿದು ಅಂಗಲಾಚುತ್ತೇನೆ. ಚುನಾವಣೆ ಬಂದಾಗ ರಾಜಕಾರಣ ಮಾಡೋಣ. ಉಳಿದ ಸಮಯದಲ್ಲಿ ಅಭಿವೃದ್ಧಿ ರಾಜಕಾರಣ ಮಾಡೋಣ. ಈ ಕುರಿತು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇನೆ. ಅಭಿವೃದ್ಧಿ ಪರ ಇರುವವರನ್ನು ಜಿಲ್ಲಾ ಉಸ್ತುವಾರಿ ಮಾಡಿ. ಅಭಿವೃದ್ಧಿ ವಿಚಾರದಲ್ಲಿ ನಾನು ಸಿಎಂ ಮನೆಗೆ ಹೋಗುತ್ತೇನೆ ಎಂದರು. ಇದನ್ನೂ ಓದಿ: ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ – ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್
ಕಾರವಾರ: ಕಾಂಗ್ರೆಸ್ (Congress) ಸರ್ಕಾರ ಬರುತ್ತಿದ್ದಂತೆ 200 ಯೂನಿಟ್ ವಿದ್ಯುತ್ (200 Unit Electricity) ಫ್ರೀ ನೀಡುವುದಾಗಿ ಘೋಷಣೆ ಮಾಡಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada) ವಿದ್ಯುತ್ ಉಕರಣಗಳಿಗೆ (Electrical Equipment) ಬೇಡಿಕೆ ಹೆಚ್ಚಾಗಿದ್ದು ಮನೆಗೆ ಬೇಕಾದ ಫ್ರಿಜ್, ಎಸಿ, ಎಲೆಕ್ಟ್ರಿಕ್ ಒಲೆ, ಫ್ಯಾನ್‌ಗಳ ಖರೀದಿ ಭರಾಟೆ ಜೋರಾಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು (Guarantee) ಘೋಷಣೆ ಮಾಡಿತ್ತು. ಇದರ ಫಲವಾಗಿ ಅಧಿಕಾರದ ಚುಕ್ಕಾಣಿ ಸಹ ಹಿಡಿದಿದ್ದು ತಾನು ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ಜಾರಿಗೆ ತರಲು ಮುಂದಾಗಿದೆ. ಹೀಗಾಗಿ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ನಂಬಿ ಮತಹಾಕಿದ ಜನ ಈಗ ಅವುಗಳ ಪ್ರಯೋಜನ ಪಡೆಯಲು ಹಾತೊರೆಯುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ 200 ಯೂನಿಟ್ ಉಚಿತ ವಿದ್ಯುತ್ ಸದ್ಬಳಕೆಗೆ ಜನ ಮುಂದಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳ್ಳಿ ಮತ್ತು ನಗರ ಪ್ರದೇಶದ ಜನ ಕಳೆದ ತಿಂಗಳಿಗಿಂತ ಈ ತಿಂಗಳು ಅತಿ ಹೆಚ್ಚು ವಿದ್ಯುತ್ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಪ್ರತಿ ಮನೆಗಳಲ್ಲಿ ತಿಂಗಳಿಗೆ ಅಂದಾಜು 35 ರಿಂದ 50 ಯೂನಿಟ್ ಒಳಗೆ ವಿದ್ಯುತ್ ಉಪಯೋಗವಾಗುತ್ತದೆ. ಆದರೆ ಕಾಂಗ್ರೆಸ್ ಪಕ್ಷ 200 ಯೂನಿಟ್‌ಗಳ ಉಚಿತ ವಿದ್ಯುತ್ ಘೋಷಣೆ ಮಾಡಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಲು ಜನ ಮುಂದಾಗಿದ್ದಾರೆ. ಇದನ್ನೂ ಓದಿ: ಹಾಪ್‌ಕಾಮ್ಸ್‌ನಲ್ಲಿ ಮೇ 26 ರಿಂದ ಮಾವು, ಹಲಸು ಮೇಳ
ಕೊಪ್ಪಳ: 200 ಯುನಿಟ್ ಕರೆಂಟ್ ಫ್ರೀ (Free Electricity) ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ಮಂಜುನಾಥ ಬಿಲ್ ವಸೂಲಾತಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಬಿಲ್ (Electricity Bill) ಕಟ್ಟಲ್ಲ, ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಲಾಗಿದೆ.
ಬಳ್ಳಾರಿ: ವಿದ್ಯುತ್ ಬಿಲ್ (Electricity Bill) ಕೇಳಲು ಹೋದ ಜೆಸ್ಕಾಂ (GESCOM) ಬಿಲ್ ಕಲೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬಳ್ಳಾರಿ (Bellary) ನಗರದ ವರಬಸಪ್ಪನ ದೇವಸ್ಥಾನ ಹಿಂಭಾಗದಲ್ಲಿ ನಡೆದಿದೆ.
ನಗರದ ರೂಪನಗೂಡಿ ರಸ್ತೆಯ ವರಬಸಪ್ಪನ ಗುಡಿ ಹಿಂಭಾಗದಲ್ಲಿನ ನಿವಾಸಿ ಗಿರೀಶ್ ಎಂಬಾತ ಜೆಸ್ಕಾಂ ಬಿಲ್ ಕಲೆಕ್ಟರ್ ಬಿ.ಎಂ.ಪಾರ್ವತೇಶ್ ಗೌಡ ಹಾಗೂ ನವೀನ್ ಎನ್ನುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಜೆಸ್ಕಾಂ ಸಿಬ್ಬಂದಿ ಇಬ್ಬರು ಗಿರೀಶ್ ಮನೆಗೆ ತೆರಳಿ 9 ಸಾವಿರ ಬಿಲ್ ಬಾಕಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ – ಬಿಬಿಸಿಯನ್ನು ಸಮರ್ಥಿಸಿಕೊಂಡ ಅಮೆರಿಕ
ಗಿರೀಶ್ ನಮ್ಮದು ಮಾತ್ರ ಅಲ್ಲ ಬೇರೆಯವರದ್ದು ಕೂಡ ಬಿಲ್ ಬಾಕಿ ಇದೆ. ಪದೇಪದೇ ಮನೆಗೆ ಬರಬೇಡಿ, ನಾನು ಕಟ್ಟುತ್ತೇನೆ ಎಂದು ಬೈದಿದ್ದಾನೆ. ಅಲ್ಲದೆ, ಅವಾಚ್ಯ ಪದಗಳಿಂದ ನಿಂದಿಸಿ, ಬಿಲ್ ಕಲೆಕ್ಟರ್ ಪಾರ್ವತೇಶ್ ಗೌಡ ಹಾಗೂ ಜೆಸ್ಕಾಂ ಸಿಬ್ಬಂದಿ ನವೀನ್‌ಕುಮಾರ್ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ಈ ಕುರಿತು ಕುರಿತು ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬೆಸ್ಕಾಂನ ಇಂದಿರಾನಗರ, ಕೋರಮಂಗಲ, ಶಿವಾಜಿನಗರ, ಮಲ್ಲೇಶ್ವರಂ ಮತ್ತು ವೈಟ್ ಫೀಲ್ಡ್ ವಿಭಾಗಗಳಿಗೆ (ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ) ಬಿಡ್ಲ್ಯೂಎಸ್‍ಎಸ್‍ಬಿ ಮತ್ತು ಬಿಬಿಎಂಪಿ (BBMP) ನೀರು ಸರಬರಾಜು ವಿಭಾಗ ಸೇರಿ ಮತ್ತಿತರ ಸರ್ಕಾರಿ ಕಚೇರಿಗಳು 236 ಕೋಟಿ ರೂ.ಗಳಿಗೂ ಅಧಿಕ ವಿದ್ಯುತ್ ಶುಲ್ಕ ಬಾಕಿ ಇರಿಸಿಕೊಂಡಿದ್ದು, ಬೆಸ್ಕಾಂನ (BESCOM) ಐದು ವಿಭಾಗಗಳೂ ಬಿಡ್ಲ್ಯೂಎಸ್‍ಎಸ್‍ಬಿ ಮತ್ತು ಬಿಬಿಎಂಪಿಗೆ ಬಿಲ್ ಪಾವತಿಸಲು ಕೋರಿ ಪ್ರತ್ಯೇಕ ನೋಟಿಸ್ ನೀಡಿದೆ.
ಬೆಸ್ಕಾಂನ ಶಿವಾಜಿನಗರ ವಿಭಾಗಗಳ ವ್ಯಾಪ್ತಿಗೆ ಬರುವ ಪಿಳ್ಳಣ್ಣ ಗಾರ್ಡ್‍ನ್, ಬಂಬೂ ಬಜಾರ್, ಕಾಕ್ಸ್ ಟೌನ್, ಬಾಣಸವಾಡಿ ಮತ್ತು ನಾಗವಾರ ಉಪ ವಿಭಾಗಗಳಿಗೆ ಬಿಡ್ಲ್ಯೂಎಸ್‍ಎಸ್‍ಬಿ (BWSSB) ಮತ್ತು ಬಿಬಿಎಂಪಿ ನೀರು ಸರಬರಾಜು ವಿಭಾಗ ಕ್ರಮವಾಗಿ 27.54 ಕೋಟಿ ರೂ. ಮತ್ತು 90.20 ಕೋಟಿ ರೂ. ಬಾಕಿ ಇರಿಸಿಕೊಂಡಿದ್ದು, ಬಾಕಿ ಪಾವತಿಸಲು ಸೂಚಿಸಿ ಶಿವಾಜಿನಗರ ಕಾರ್ಯನಿರ್ವಾಹಕ ಇಂಜಿನಿಯರ್ ಎರಡೂ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಬೆಸ್ಕಾಂನ ಕೋರಮಂಗಲ ವಿಭಾಗದ ಆಸ್ಟಿನ್ ಟೌನ್, ಕೋರಮಂಗಲ, ಮುರುಗೇಶ್ ಪಾಳ್ಯ, ಮಡಿವಾಳ, ಹೆಚ್.ಎ.ಎಲ್ ಉಪ ವಿಭಾಗಳ ವ್ಯಾಪ್ತಿಗೆ ಒಳಪಡುವ 10 ವಾರ್ಡ್‍ಗಳಿಂದ ಬಿಡ್ಲ್ಯೂಎಸ್‍ಎಸ್‍ಬಿ 23.71 ಕೋಟಿ ರೂ. ವಿದ್ಯುತ್ ಶುಲ್ಕ ಬಾಕಿ ಇರಿಸಿಕೊಂಡಿದ್ದು, 19 ವಾರ್ಡ್‍ಗಳಿಂದ ಬಿಬಿಎಂಪಿ ಸುಮಾರು 22.20 ಕೋಟಿ ರೂ. ವಿದ್ಯುತ್ ಶುಲ್ಕ ಪಾವತಿಸಬೇಕಾಗಿದೆ. ಇದನ್ನೂ ಓದಿ: ಆ ಕಾಲ ಹೋಯ್ತು.. ಭಾರತದ ತಂಟೆಗೆ ಬಂದ್ರೆ ಮುಖಮೂತಿ ನೋಡಲ್ಲ – ರಾಜನಾಥ್ ಸಿಂಗ್ ಎಚ್ಚರಿಕೆ
ಮಲ್ಲೇಶ್ವರಂ ವಿಭಾಗಗಳ ವ್ಯಾಪ್ತಿಗೆ ಒಳಪಡುವ ಉಪ ವಿಭಾಗಗಳಿಗೆ ಬಿಡ್ಲ್ಯೂಎಸ್‍ಎಸ್‍ಬಿ ಮತ್ತು ಬಿಬಿಎಂಪಿ ಕ್ರಮವಾಗಿ 13.60 ಕೋಟಿ ರೂ. ಮತ್ತು 16.70 ಕೋಟಿ ರೂ.ಗಳನ್ನು ಬೆಸ್ಕಾಂಗೆ ಪಾವತಿಸಬೇಕಾಗಿದೆ. ಮಲ್ಲೇಶ್ವರಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎರಡೂ ಸಂಸ್ಥೆಗಳಿಗೆ ಬಿಲ್ ಪಾವತಿಸಲು ಕೋರಿ ನೋಟಿಸ್ ನೀಡಿದ್ದಾರೆ. ಇಂದಿರಾನಗರ ವಿಭಾಗಕ್ಕೆ ಬಿಬಿಎಂಪಿ, ಬಿಡ್ಲ್ಯೂಎಸ್‍ಎಸ್‍ಬಿ, ಕಬ್ಬನ್ ಪಾರ್ಕ್, ವಸತಿ ಇಲಾಖೆ ಮ್ಯೂಸಿಯಂ, ತೋಟಗಾರಿಕೆ ಇಲಾಖೆ, ಪೋಸ್ಟ್ ಆಫೀಸ್, ನ್ಯಾಷನಲ್ ಎರೋನಾಟಿಕ್ಸ್ ಲಿಮಿಟೆಡ್, ಎಲ್‍ಐಸಿ, ಬಿಎಸ್‍ಎನ್‍ಎಲ್, ಬಿಡಿಎ, ಬಿಎಂಆರ್‌ಸಿಎಲ್, ಡಿಆರ್‌ಡಿಓ, ಹೈಕೋರ್ಟ್ ವಸತಿಗೃಹ, ಮುಂತಾದ ಸರ್ಕಾರಿ ಕಚೇರಿಗಳು ಒಟ್ಟು 36.25 ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸಬೇಕಾಗಿದೆ ಎಂದು ಇಂದಿರಾನಗರ ಕಾರ್ಯನಿರ್ವಾಹಕ ಇಂಜಿನಿಯರ್ ನೀಡಿರುವ ನೋಟಿಸ್‌ನಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ
ಹಾಗೆಯೇ ವೈಟ್ ಫೀಲ್ಡ್ ವಿಭಾಗದ ವ್ಯಾಪ್ತಿಗೆ ಬರುವ ಒಟ್ಟು 7 ವಾರ್ಡ್‍ಗಳಿಂದ ಬೆಸ್ಕಾಂಗೆ ಬಿಡ್ಲ್ಯೂಎಸ್‍ಎಸ್‍ಬಿ ಮತ್ತು ಬಿಬಿಎಂಪಿಯಿಂದ ಒಟ್ಟು 5.81 ಕೋಟಿ ರೂ. ವಿದ್ಯುತ್ ಶುಲ್ಕ ಬಾಕಿ ಇದೆ. ವಿದ್ಯುತ್ ಬಿಲ್ ವಸೂಲಿಗೆ ಕ್ರಮ ಕೈಗೊಳ್ಳಲು ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಕಟ್ಟು ನಿಟ್ಟಿನ ಸೂಚನೆ ನೀಡಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಆದೇಶ ಹೊರಡಿಸಿದೆ.
ಕೆಇಆರ್‌ಸಿ, 2022ರ ಸೆಪ್ಟೆಂಬರ್ 19 ರಂದು ಹೊರಡಿಸಿದ ಆದೇಶದನ್ವಯ ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆಯನ್ನು ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ಅನುಮತಿ ನೀಡಿದೆ. ಕೆಇಆರ್‌ಸಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕಗಳು ನಿಯಮಗಳು, 2013 ರ ಅನ್ವಯ ಇಂಧನ ಹೊಂದಾಣಿಕೆ ಶುಲ್ಕವನ್ನು 43 ಪೈಸೆ ಹೆಚ್ಚಳ ಮಾಡಿ ಬೆಸ್ಕಾಂಗೆ ಅನ್ವಯ ಆಗುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಕೇಂದ್ರ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (CGS), ಕರ್ನಾಟಕ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (KPCL) ಮತ್ತು ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (UPCL) ನಿಂದ ಎಲ್ಲಾ ಎಸ್ಕಾಂಗಳು ವಿದ್ಯುತ್ ಖರೀದಿಸುತ್ತಿವೆ. ಏಪ್ರಿಲ್-2022 ರಿಂದ ಜೂನ್-2022 ರವರೆಗೆ 643 ಕೋಟಿ ರೂ.ಗಳಷ್ಟು ವಿದ್ಯುತ್ ಖರೀದಿ ವೆಚ್ಚ ಹೆಚ್ಚಳವಾಗಿದ್ದು, 80 ಪೈಸೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಸೂಲಿ ಮಾಡಲು ಬೆಸ್ಕಾಂ ಕೆಇಆರ್‌ಸಿಗೆ 2022ರ ಆಗಸ್ಟ್ 30 ರಂದು ಅರ್ಜಿ ಸಲ್ಲಿಸಿತ್ತು. ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಹೆಚ್ಚವರಿ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಶುಲ್ಕವನ್ನು ಆರು ತಿಂಗಳಿಗೆ ಅನ್ವಯಿಸುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂ ಎಂ.ಡಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನ PayCM ಅಸ್ತ್ರಕ್ಕೆ ಬಿಜೆಪಿಯಿಂದ KaiPe ಪ್ರತ್ಯಸ್ತ್ರ
ಕಳೆದ ಜುಲೈ ನಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಟು ಬೆಸ್ಕಾಂಗೆ ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು. ಇದೀಗ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆ ಆದ ಹಿನ್ನೆಲೆಯಲ್ಲಿ 43 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಮೊತ್ತವನ್ನು ಅಕ್ಟೋಬರ್‌ನಿಂದ ಮುಂದಿನ ಮಾರ್ಚ್-2023ರವರೆಗೆ ಸಂಗ್ರಹಿಸಲಾಗುತ್ತದೆ ಎಂದು ಮಹಾಂತೇಶ ಬೀಳಗಿ ವಿವರಿಸಿದರು. ಇದನ್ನೂ ಓದಿ: ಮತ್ತೊಂದು ಕ್ರಷರ್ ದುರಂತ- ನೂರು ಅಡಿ ಆಳಕ್ಕೆ ಬಿದ್ದು ಕಾರ್ಮಿಕ ದುರ್ಮರಣ
ಇಂಧನ ವ್ಯತ್ಯಾಸ ದರಗಳನ್ನು KERC (ಇಂಧನ ವೆಚ್ಚ ಹೊಂದಾಣಿಕೆ ಶುಲ್ಕಗಳು) ನಿಯಮಗಳು, 2013ರ ಪ್ರಕಾರ, ನಿರ್ದಿಷ್ಟಪಡಿಸಿದ ಉಷ್ಣ ವಿದ್ಯುತ್ ಸ್ಥಾವರಗಳಿಂದ ಖರೀದಿಸಿದ ವಿದ್ಯುಚ್ಛಕ್ತಿಯ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆ ವ್ಯತ್ಯಾಸದಿಂದಾಗಿ ಕಾಲಕಾಲಕ್ಕೆ ಜಾರಿಯಲ್ಲಿರುವ ಜಕಾತಿಗೆ ಅನುಸಾರವಾಗಿ, ಪ್ರತಿ ಮೂರು ತಿಂಗಳಿಗೊಮ್ಮೆ ಕೆಇಆರ್‍ಸಿ ಮುಂದೆ ಅರ್ಜಿ ಸಲ್ಲಿಸಲಾಗುತ್ತದೆ. ಅರ್ಜಿಯನ್ನು ಆಯೋಗವು ಪರಾಮರ್ಶಿಸಿ, ಇಂಧನ ವ್ಯತ್ಯಾಸ ದರವನ್ನು ವಸೂಲಿ ಅಥವಾ ಕಡಿತಗೊಳಿಸಲು ಕಾಲಕಾಲಕ್ಕೆ ಆದೇಶಿಸುತ್ತದೆ. ಕಲ್ಲಿದ್ದಲು ಹಾಗೂ ತೈಲ ಬೆಲೆ ಹೆಚ್ಚಾದಾಗ ಹೊಂದಾಣಿಕೆ ವೆಚ್ಚ ಹೆಚ್ಚಾಗುತ್ತದೆ, ಕಡಿಮೆಯಾದಾಗ ವೆಚ್ಚ ಇಳಿಯುತ್ತದೆ ಎಂದು ಬೆಸ್ಕಾಂ ಎಂ.ಡಿ ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಭೋಪಾಲ್: 3,419 ಕೋಟಿ ರೂಪಾಯಿಯಷ್ಟು ವಿದ್ಯುತ್ ಬಿಲ್ ಬಂದಿರುವುದನ್ನು ಕಂಡು ಮಹಿಳೆ ಶಾಕ್ ಆದರೆ, ಆಕೆಯ ಮಾವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾಮಾನ್ಯವಾಗಿ ಗ್ರಾಹಕರಿಗೆ ವಿದ್ಯುತ್ ಇಲಾಖೆ ಆಗಾಗ್ಗೆ ಕರೆಂಟ್ ಬಿಲ್ ಮೂಲಕ ಶಾಕ್ ನೀಡುತ್ತಿರುತ್ತದೆ. ಮನೆಯಲ್ಲಿ ವಿದ್ಯುತ್ ಬಳಸದೇ ಇದ್ದರೂ ಲಕ್ಷಾಂತರ ರೂಪಾಯಿ ಕಟ್ಟಬೇಕೆಂಬ ಬಿಲ್ ಕಳುಹಿಸುವ ಘಟನೆಗಳು ಆಗಾಗ ನಡೆಯುತ್ತಲೆ ಇರುತ್ತದೆ. ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಶಿವ್ ವಿಹಾರ್ ನಿವಾಸಿಯಾಗಿರುವ ಗುಪ್ತಾ ಅವರಿಗೆ 3,419 ಕೋಟಿ ರೂಪಾಯಿಯಷ್ಟು ವಿದ್ಯುತ್ ಬಿಲ್ ಕಳುಹಿಸಲಾಗಿದೆ. ಇದರಿಂದ ಆತಂಕಗೊಂಡ ಗುಪ್ತಾ ಅವರ ಕುಟುಂಬದ ಮಹಿಳೆಗೆ ಆಕೆಯ ನೆರೆಹೊರೆಯವರು ಸಮಾಧಾನ ಹೇಳಿದ್ದಾರೆ.
ಈ ವಿಚಾರವಾಗಿ ಜನರಿಂದ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆಯೇ ಸ್ಪಷ್ಟೀಕರಣ ನೀಡಿರುವ ಮಧ್ಯಪ್ರದೇಶ ಸರ್ಕಾರಿ ಸ್ವಾಮ್ಯದ ವಿದ್ಯುತ್ ಕಂಪೆನಿ (MPMKVVC), ಇದೊಂದು ‘ಮಾನವ ದೋಷ’ದಿಂದ ಉಂಟಾದ ಸಮಸ್ಯೆ ಎಂದು ತಿಳಿಸಿದ್ದು, ಕೂಡಲೇ ವಿದ್ಯುತ್ ಬಿಲ್ ಮೊತ್ತವನ್ನು ಸರಿಪಡಿಸಿದೆ. ಅಲ್ಲದೇ ಈಗ ಗುಪ್ತಾ ಕುಟುಂಬ ಕಟ್ಟಬೇಕಿರುವುದು 1,300 ರೂಪಾಯಿಗಳನ್ನು ಮಾತ್ರ ಎಂದು ಹೇಳಿದೆ. ಇದನ್ನೂ ಓದಿ: ಊರಿನ ಯಾರ ಮನೆಯಲ್ಲಿ ಸಮಸ್ಯೆ ಇದ್ರೂ ಸ್ಪಂದಿಸ್ತಿದ್ದ: ಪ್ರವೀಣ್ ಮಾವ ಕಣ್ಣೀರು
ಈ ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಗುಪ್ತಾ ಅವರ ಪತಿ ಸಂಜೀವ್ ಕಂಕಣೆ ಅವರು, ಜುಲೈನಲ್ಲಿ ಮನೆಯಲ್ಲಿ ಬಳಸಿದ್ದ ವಿದ್ಯುತ್‍ಗೆ ಬಂದಿರುವ ಬೃಹತ್ ಮೊತ್ತದ ಬಿಲ್ ಕಂಡು ನನ್ನ ತಂದೆ ಆಘಾತಕ್ಕೊಳಗಗಿದ್ದಾರೆ. ಅಲ್ಲದೇ ನನ್ನ ಪತ್ನಿ ಕೂಡ ಆಘಾತಕ್ಕೊಳಗಾಗಿದ್ದಾರೆ. ಜುಲೈ 20 ರಂದು ಬಿಡುಗಡೆಯಾದ ಬಿಲ್ ಅನ್ನು ಮಧ್ಯಪ್ರದೇಶ ಮಧ್ಯ ಕ್ಷೇತ್ರ ವಿದ್ಯುತ್ ವಿತರಣ ಕಂಪನಿಯ (ಎಂಪಿಎಂಕೆವಿವಿಸಿ) ಪೋರ್ಟಲ್ ಮೂಲಕ ಪರಿಶೀಲನೆಗೆ ಒಳಪಡಿಸಲಾಗಿತ್ತು. ಆದರೆ ಅದು ಸರಿಯಾಗಿದೆ ಎಂದು ತೋರಿಸಿತು. ನಂತರ ರಾಜ್ಯ ವಿದ್ಯುತ್ ಕಂಪೆನಿ ಬಿಲ್ ಅನ್ನು ಸರಿಪಡಿಸಿದೆ ಎಂದು ತಿಳಿಸಿದ್ದಾರೆ.
ನಮ್ಮ ಉದ್ಯೋಗಿಯು ಬಳಕೆಯಾದ ಯುನಿಟ್ ಜಾಗದಲ್ಲಿ ಗ್ರಾಹಕ ಸಂಖ್ಯೆಯನ್ನು ಸಾಫ್ಟ್‍ವೇರ್‌ನಲ್ಲಿ ನಮೂದಿಸಿದ್ದಾರೆ. ಇದರಿಂದಾಗಿ ದೊಡ್ಡ ಮೊತ್ತದ ಬಿಲ್ ಸೃಷ್ಟಿಯಾಗಿದೆ. ಸರಿಯಾದ ಬಿಲ್ ಮೊತ್ತ 1,300 ರೂ ಅನ್ನು ವಿದ್ಯುತ್ ಗ್ರಾಹಕರಿಗೆ ಈಗ ನೀಡಲಾಗಿದೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ (ಬಿಎಂಎಝಡ್) ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್‌ಎಂಎಸ್ ಸ್ಟ್ಯಾಟಿಕ್ (ಡಿವೈಸ್ ಲ್ಯಾಂಗ್ವೇಜ್ ಮೆಸೇಜ್ ಸ್ಪೆಸಿಫಿಕೇಷನ್) ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.
ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ 17,68,000 ಎಲೆಕ್ಟ್ರೊ ಮೆಕಾನಿಕಲ್ ಮೀಟರ್‌ಗಳನ್ನು ಡಿಎಲ್‌ಎಂಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್‌ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ. ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮಾಪನಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಮೀಟರ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು ಪ್ರತಿನಿತ್ಯ 700 ರಿಂದ 900 ಮೀಟರ್‌ಗಳನ್ನು ಅಳವಡಿಸಲಾಗುತ್ತಿದೆ.
ಬೆಸ್ಕಾಂ ಒಂದು ವಿಭಾಗದಲ್ಲಿ ಮೀಟರ್ ಅಳವಡಿಕೆ ಕಾರ್ಯ ಪೂರ್ಣಗೊಂಡ ನಂತರವೇ ಇನ್ನೊಂದು ವಿಭಾಗದಲ್ಲಿ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ. 2024ರ ವೇಳೆಗೆ 17,68,000 ಎಲೆಕ್ಟ್ರೋ ಮೆಕಾನಿಕಲ್ ಮೀಟರ್‌ಗಳನ್ನು ಡಿಜಿಟಲ್ ಮೀಟರ್‌ಗೆ ಬದಲಿಸುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕ (ಮಾಪಕ ಮತ್ತು ವಾಣಿಜ್ಯ) ಪಿ.ರಂಗಸ್ವಾಮಿ ತಿಳಿಸಿದ್ದಾರೆ.
ಡಿಎಲ್‌ಎಂಎಸ್ ಸ್ಟ್ಯಾಟಿಕ್ ಮೀಟರ್ ಗ್ರಾಹಕ ಸ್ನೇಯಾಗಿದ್ದು ಸಿಂಗಲ್ ಫೇಸ್ ಅಥವಾ 3 ಫೇಸ್ ಮೀಟರ್ ಅಳವಡಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್ ವೊಲ್ಟೇಜ್ ಮತ್ತು ಬಳಕೆ ಕುರಿತು ಮಾಹಿತಿ ಪಡೆಯಬಹುದಾಗಿದೆ. ಈ ಡಿಜಿಟಲ್ ಮೀಟರ್‌ಗಳನ್ನು ಉಚಿತವಾಗಿ ಅಳವಡಿಸಲಾಗುತ್ತಿದ್ದು ಗ್ರಾಹಕರಿಂದ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲವೆಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಉಡುಪಿಯಲ್ಲಿ 85 ಮಂದಿಗೆ ಇಲಿ ಜ್ವರ – ಏನಿದರ ಲಕ್ಷಣ?
10 ವರ್ಷಗಳ ಹಿಂದೆ ಅಳವಡಿಸಿರುವ ಎಲೆಕ್ಟ್ರೋ ಮೆಕಾನಿಕಲ್ ಮೀಟರ್‌ಗಳನ್ನು ಡಿಜಿಟಲ್ ಮೀಟರ್‌ಗೆ ಬದಲಿಸಲಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಈ ಡಿಜಿಟಲ್ ಮೀಟರ್‌ನ ಇನ್ನೊಂದು ಉಪಯೋಗವೇನೆಂದೆರೆ ಗ್ರಾಹಕರು ತಾವು 2 ವರ್ಷಗಳ ಹಿಂದಿನ ಅವಧಿಯವರೆಗೂ ಬಳಸಿದ ವಿದ್ಯುತ್ ಪ್ರಮಾಣದ ವಿವರಗಳನ್ನು ಬೆಸ್ಕಾಂ ಕಛೇರಿಯಿಂದ ಪಡೆದು ಅದನ್ನು ವಿದ್ಯುತ್ ಬಿಲ್ ಜೊತೆ ತುಲನೆ ಮಾಡಿ ತಾವು ಬಳಸಿರುವ ವಿದ್ಯುತ್ ಪ್ರಮಾಣ ಸರಿಯಾಗಿದೆಯೇ ಎಂದು ತಿಳಿಯಬಹುದಾಗಿದೆ.
ಬೆಂಗಳೂರು ನಗರದಲ್ಲಿ ಡಿಜಿಟಲ್ ಮೀಟರ್‌ನ ಅಳವಡಿಕೆ ಪೂರ್ಣಗೊಂಡ ನಂತರ ಬೆಂಗಳೂರು ಗ್ರಾಮಾಂತರ ಪ್ರದೇಶ ಮತ್ತು ಚಿತ್ರದುರ್ಗ-ದಾವಣಗೆರೆ ಪ್ರದೇಶ ವಲಯದಲ್ಲಿ ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಡಿಜಿಟಲ್ ಮೀಟರ್ ಅಳವಡಿಕೆ ಕಾರ್ಯವನ್ನು 2 ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದ್ದು ಎಲ್ಲಾ ವಿಭಾಗಳಲ್ಲಿ ಹಂತ ಹಂತವಾಗಿ ಅಳವಡಿಸಲಾಗುವುದು. ಈ ಯೋಜನೆಯ ಒಟ್ಟು ಮೊತ್ತ 139 ಕೋಟಿ ರೂ.ಗಳಾಗಿದ್ದು, ಸಿಂಗಲ್ ಫೇಸ್ ಡಿಜಿಟಲ್ ಮೀಟರ್‌ಗೆ 934 ರೂ. ಮತ್ತು 3 ಫೇಸ್ ಮೀಟರ್‌ಗೆ 2,312 ರೂ.ಯಾಗಿದೆ. ಈ ವೆಚ್ಚವನ್ನು ಬೆಸ್ಕಾಂ ಭರಿಸಲಿದೆ. ಇದನ್ನೂ ಓದಿ: ಮತ್ತೆ 19 ರಾಜ್ಯಸಭಾ ಸಂಸದರು ಅಮಾನತು
ಡಿಜಿಟಲ್ ಮೀಟರ್ ಮಾರಾಟ ಮಳಿಗೆ:
ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಅನುಕುಲವಾಗಲು ಬೆಸ್ಕಾಂನ ಎಲ್ಲಾ ವಿಭಾಗಗಳಲ್ಲಿ ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮೀಟರ್‌ಗಳ ಮಾರಾಟ ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಬೆಸ್ಕಾಂ ನಿಗದಿ ಪಡಿಸಿರುವ ದರದಲ್ಲಿ ವೆಂಡರ್‌ಗಳು ಗ್ರಾಹಕರಿಗೆ ಈ ಡಿಜಿಟಲ್ ಮೀಟರ್‌ಗಳನ್ನು ಮಾರಾಟ ಮಾಡಲಿದ್ದಾರೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾರಾಟ ಮಳಿಗೆಗಳ ಸ್ಥಾಪನೆಯಿಂದ ಗ್ರಾಹಕರು ಮೀಟರ್ ಖರೀದಿಗೆ ಅಲೆದಾಡುವುದು ತಪ್ಪಿದಂತಾಗುತ್ತದೆ.
Live Tv
[brid partner=56869869 player=32851 video=960834 autoplay=true]