Tag: ವಿದ್ಯುತ್ ಸಂಪರ್ಕ

  • 30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅಸ್ತು – ಲಕ್ಷಾಂತರ ಜನಕ್ಕೆ ಗುಡ್‌ನ್ಯೂಸ್‌ ಕೊಟ್ಟ ಡಿಕೆಶಿ

    30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅಸ್ತು – ಲಕ್ಷಾಂತರ ಜನಕ್ಕೆ ಗುಡ್‌ನ್ಯೂಸ್‌ ಕೊಟ್ಟ ಡಿಕೆಶಿ

    ಕೋಲಾರ: ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿರುವವರಿಗೆ ವಿದ್ಯುತ್ (Electricity) ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

    ಕೋಲಾರದಲ್ಲಿ (Kolara) ಮಾಲೂರಿನ ಮಾರಿಕಾಂಭ ದೇವಾಲಯಕ್ಕೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್‌ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಇನ್ನೂ ಎರಡೂವರೆ ವರ್ಷ ಅಷ್ಟೇ ಬಾಕಿಯಿದೆ ನೀವು ಸಿಎಂ ಆಗ್ತೀರಾ? ಎಂದು ಪತ್ರಕರ್ತರ ಪ್ರಶ್ನೆಗೆ ನುಣುಚಿಕೊಂಡ ಡಿಕೆಶಿ, ಓಸಿ ಬಗ್ಗೆ ಗುಡ್‌ನ್ಯೂಸ್‌ ಕೊಟ್ಟರು.‌

    ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ಲಕ್ಷ ಜನ 30*40 ನಿವೇಶನದಲ್ಲಿ ಮನೆ ಕಟ್ಟಿದ್ರು. ಅವರೆಲ್ಲರಿಗೂ ಇದು ಅನುಕೂಲವಾಗಲಿದೆ. ಮಾಲೂರಿನ ಮಾರಿಕಾಂಭ ಸನ್ನಿಧಿಯಲ್ಲಿ ಈ ಶುಭ ಸುದ್ದಿಯನ್ನು ತಿಳಿಸುತ್ತಿದ್ದೇನೆ ಎಂದು ಹೇಳಿದರು.

    ಮುಂದುವರಿದು.. ಎತ್ತಿನಹೊಳೆ ಯೋಜನೆ ಕೋಲಾರ-ಚಿಕ್ಕಬಳ್ಳಾಪುರದ ಕೆಲವೆಡೆ ಭೂಮಿ ಪಡೆಯುವ ಕೆಲಸ ಆಗಬೇಕಿದೆ. ಉಳಿದಂತೆ ಆ ಭಾಗದಲ್ಲಿ ಪೈಪ್‌ಲೈನ್ ಕೆಲಸ ಮುಗಿದಿದೆ ಎಂದರು.

    ಇನ್ನೂ ಕೋಲಾರಕ್ಕೆ ನೀರು ಬರೋದು ಅನುಮಾನವಿಲ್ಲ ಅನ್ನೋ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ಅದು ಬಿಜೆಪಿ ಯೋಜನೆಯಲ್ಲ, ನಮ್ಮ ಯೋಜನೆ. ಮೊದಲಿನಿಂದಲೂ ಆ ಯೋಜನೆಯನ್ನ ಬಿಜೆಪಿ ವಿರೋಧ ಮಾಡ್ತಾ ಬರ್ತಾ ಇದ್ರು. ಆ ಯೋಜನೆ ನಮ್ಮ ಸರ್ಕಾರದ್ದು ನಾವು ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.

  • ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ನಾಳೆ ನಿರ್ಧಾರ – ಕಾನೂನು ಇಲಾಖೆ ವರದಿಗೆ ಸೂಚನೆ

    ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ನಾಳೆ ನಿರ್ಧಾರ – ಕಾನೂನು ಇಲಾಖೆ ವರದಿಗೆ ಸೂಚನೆ

    – ಎಲ್ಲ ಮಾರ್ಗಗಳ ಪರಿಶೀಲನೆಗೆ ಸಿಎಂ ಆದೇಶ

    ಬೆಂಗಳೂರು: ಗ್ರೇಟರ್ ಬೆಂಗಳೂರು (GBA) ವ್ಯಾಪ್ತಿ ಹಾಗೂ ರಾಜ್ಯದ ಇತರೆಡೆ ನಿರ್ಮಾಣ ಹಂತದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರು ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ (Karnaraka Government) ವಿಫಲವಾಗಿದೆ.

    ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತಾದರೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆಗದೇ ಹೇಗೆ ಅನುಕೂಲ ಮಾಡಿಕೊಡಬಹುದು ಎಂಬುದರ ಕುರಿತು ಮಾಹಿತಿ ನೀಡುವಂತೆ ಕಾನೂನು ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ. ನಾಳಿನ ಸಭೆಯಲ್ಲಿ ಕಾನೂನು ಇಲಾಖೆಯ ಸಲಹೆ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳೋ ಸಾಧ್ಯತೆಗಳಿವೆ. ಇದನ್ನೂ ಓದಿ: ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಎನ್. ಚಲುವರಾಯಸ್ವಾಮಿ

    ಸಭೆಯ ಬಳಿಕ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar), ಜಿಬಿಎಯಿಂದ ನಾವು ಪ್ರಪೋಸಲ್ ಕೊಟ್ಟಿದ್ವಿ. ಆದ್ರೆ ಇದು ಪಂಚಾಯತ್, ಮುನಿಸಿಪಾಲಿಟಿಗೂ ಎಲ್ಲದ್ದಕ್ಕೂ ಬೇಕು. ತಮಿಳುನಾಡು ಸೇರಿ ಬೇರೆ ಬೇರೆ ರಾಜ್ಯದ ಮಾಹಿತಿ ಪಡೆದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಏನಾದ್ರು ಮಾರ್ಗ ಇದೆಯಾ ಅಂತ ಪರಿಶೀಲನೆ ಮಾಡಲು ಕಾನೂನು ಇಲಾಖೆಗೆ ಹೇಳಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ – ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್

    ಅನುಮತಿ ಪಡೆಯದ ಕಟ್ಟಡಗಳಿಗೆ ನೀರು, ವಿದ್ಯುತ್‌ ಸಂಪರ್ಕ ಕೊಡಬಾರದು ಅಂತ ಸುಪ್ರೀಂ ಕೋರ್ಟ್ ಆದೇಶ ಇದೆ. ಹೀಗಾಗಿ ಸಿಎಂ ಅವರ ನೇತೃತ್ವದಲ್ಲಿ ಸಭೆ ಆಗಿದೆ. ಎಲ್ಲಾ ಇಲಾಖೆ ಸಚಿವರು ಭಾಗಿಯಾಗಿದ್ದರು, ಎಜಿ ಕೂಡಾ ಇದ್ದರು. ಇವತ್ತಿನ ಸಭೆಯಲ್ಲಿ ಅನೇಕ ಅಭಿಪ್ರಾಯಗಳು ಬಂದಿವೆ. ಅವಕಾಶ ಕೊಡೋಕೆ ಕಾನೂನಿನಲ್ಲಿ ಅನೇಕ ಅಡೆತಡೆಗಳು ಇವೆ. ಈಗಾಗಲೇ ಕ್ಯಾಬಿನೆಟ್‌ನಲ್ಲಿ 30*40 ಸೈಟ್ ಗೆ ಅನುಮತಿ ಕೊಡೋ ತೀರ್ಮಾನ ಮಾಡಿದ್ದೇವೆ. ಇದರ ಮೇಲೆ ಜಾಸ್ತಿ ಅಳತೆಯಲ್ಲಿ ಇರೋ ಕಟ್ಟಡಗಳಿಗೆ ಕೊಡೋದು ಹೇಗೆ ಅಂತ ಚರ್ಚೆ ಆಗಿದೆ. ನಾಳೆಯ (ಗುರುವಾರ) ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ಮಾಡ್ತೀವಿ. ಹೊಸ ಕಟ್ಟಡ ಕಟ್ಟಲು ಇನ್ನು ಮುಂದೆ ಬಿಡೊಲ್ಲ. ಈಗ ಕಟ್ಟಿರೋರಿಗೆ ಸಹಾಯ ಮಾಡೋದಕ್ಕೆ ದಾರಿ ಇದೆಯಾ ನೋಡ್ತಾ ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಕ್ಲೈಮ್ಯಾಕ್ಸ್‌ ಹಂತಕ್ಕೆ – ಅಂತಿಮ ವರದಿ ಸಲ್ಲಿಸಲು SIT ತಯಾರಿ

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಲಮಂಡಳಿ ಇಲಾಖೆ, ವಿದ್ಯುತ್ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

  • ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?

    ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?

    – ಸಿಎಂ, ಸಿಎಸ್‌ ನೇತೃತ್ವದಲ್ಲಿಂದು ಮಹತ್ವದ ಸಭೆ
    – 3 ಲಕ್ಷ ಮನೆಗಳಿಗೆ ಸಿಗಲಿದೆಯಾ ವಿದ್ಯುತ್‌ ಸಂಪರ್ಕ?

    ಬೆಂಗಳೂರು: ಸ್ವಾಧೀನಾನುಭವ ಪತ್ರ (Occupancy Certificates) ಇಲ್ಲದೇ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಇಲ್ಲ. ಹೀಗಾಗಿ ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ನೀಡಲು ಕ್ಯಾಬಿನೆಟ್‌ನಲ್ಲಿ ಚರ್ಚೆ ವಿಷಯ ಆಗಿತ್ತು. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ನಡೆದಿರಲಿಲ್ಲ. ಹೀಗಾಗಿ ವಿದ್ಯುತ್ ಸಂಪರ್ಕಕ್ಕಾಗಿ ಓಸಿ ವಿನಾಯಿತಿ ನೀಡಲು ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಸಿಎಂ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕ (Electricity connection) ನೀಡುವ ಸಲುವಾಗಿ ಓಸಿ ವಿನಾಯಿತಿ ಬಗ್ಗೆ ಚರ್ಚೆ ನಡೆಯಲಿದೆ. ಸಾಧಕ ಭಾಧಕಗಳ ಬಗ್ಗೆ ಚರ್ಚೆ ಆಗಿ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

    Occupancy Certificate

    ಇನ್ನೂ ಓಸಿಯಿಂದ ಒನ್ ಟೈಂ ರಿಲ್ಯಾಕ್ಸೇಷನ್ ಬೆಸ್ಕಾಂ ವ್ಯಾಪ್ತಿಯಲ್ಲಿ 3 ಲಕ್ಷಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕ ಸಿಗಲಿದೆ. ‌ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ 53 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. 53 ಸಾವಿರ ಅರ್ಜಿಯಿಂದ 3 ಲಕ್ಷಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಸಿಗಲಿದೆ. ಇದನ್ನೂ ಓದಿ:  ʻಆಪರೇಷನ್‌ ಸಿಂಧೂರʼ ಒಪ್ಪಿಕೊಂಡ ಪಾಕ್‌ ನಾಯಕ; ದಾಳಿಯಿಂದ ಹಾನಿಗೊಳಗಾದವರಿಗೆ ಪಂದ್ಯದ ಹಣ ನಿಡೋದಾಗಿ ಘೋಷಣೆ

    ಒಂದೇ ಬಿಲ್ಡಿಂಗ್ ನಲ್ಲಿ 4 ರಿಂದ 5 ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆಯಾಗಿದ್ದು ಅಸ್ತಿತ್ವದಲ್ಲಿ ಇರುವ ಕಟ್ಟಡಗಳಿಂದ ವಿದ್ಯುತ್ ಸಂಪರ್ಕಕ್ಕಾಗಿ 53 ಸಾವಿರ ಅರ್ಜಿ ಸಲ್ಲಿಕೆ ಆಗಿದೆ. ಕಮರ್ಷಿಯಲ್ ಮತ್ತು ರೆನ್ಸಿಡೆನ್ಷಿಯಲ್ ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿಸಲ್ಲಿಕೆಯಾಗಿದ್ದು. 30×40 ಚದರ ಅಡಿ ನಿವೇಶನದ ವಿದ್ಯುತ್ ಸಂಪರ್ಕಕ್ಕೆ 33 ಸಾವಿ ಅರ್ಜಿ ಸಲ್ಲಿಕೆಯಾಗಿದೆ. 1,200 ಚದರ ಅಡಿ ನಿವೇಶನಗಳಿಂದ 25 ಸಾವಿರ ಅರ್ಜಿಗೆ ರಿಲ್ಯಾಕ್ಸೇಷನ್ ಸಿಗಲಿದೆ. ಇದನ್ನೂ ಓದಿ: ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    ಒಟ್ಟಾರೆ ಓಸಿ ವಿದ್ಯುತ್ ಸಂಪರ್ಕಕ್ಕಾಗಿ ಲಕ್ಷಾಂತರ ಅರ್ಜಿಗಳು ಸಲ್ಲಿಕೆ ಆಗಿವೆ. ಸರ್ಕಾರ ಸಭೆ ಮಾಡಿ ವಿದ್ಯುತ್ ಸಂಪರ್ಕಕ್ಕಾಗಿ ವಿನಾಯಿತಿ ಕೊಡುತ್ತಾ ಕಾದು ನೋಡಬೇಕಿದೆ. ಇದನ್ನೂ ಓದಿ: ಸ್ಟೇಜ್‌ನಲ್ಲೇ ನಕ್ಕು ನಗಿಸಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಲ್ಲಮ್ಮ

  • ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

    ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

    – ಇಡೀ ರಾಜ್ಯಾದ್ಯಂತ ನೀರು ಸರಬರಾಜಿನಲ್ಲಿ ವ್ಯತ್ಯಯ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ನಿರಂತರ ಮಳೆಯಿಂದಾಗಿ ಅವಾಂತರಗಳು ಮುಂದುವರಿಯುತ್ತಲೇ ಇವೆ. ಭಾರೀ ಮಳೆಯ ಬಳಿಕ ಹವಾಮಾನ ಇಲಾಖೆ 22 ಸೂಕ್ಷ್ಮ ಪ್ರದೇಶಗಳ ಪೈಕಿ 18 ಸ್ಥಳಗಳಲ್ಲಿ ಭೂಕುಸಿತ (Landslide) ಸಾಧ್ಯತೆಗಳಿರುವುದಾಗಿ ಎಚ್ಚರಿಸಿದೆ.

    ಈಗಾಗಲೇ ಮಳೆಯಿಂದ ಸುಮಾರು 130 ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಇಡೀ ರಾಜ್ಯದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಆಗಾಗ್ಗೆ ಬರುತ್ತಿರುವ ಸಣ್ಣ ಸಣ್ಣ ಹಠಾತ್‌ ಮಳೆಯಿಂದ ರಾಜ್ಯದಲ್ಲಿ 259 ರಸ್ತೆಗಳಲ್ಲಿ ಸಂಚಾರವನ್ನೇ ಬಂದ್‌ ಮಾಡಲಾಗಿದೆ. ಇದನ್ನೂ ಓದಿ: ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸುಖ್ವಿಂದರ್‌ ಸಿಂಗ್ ಸುಖು, ಮಂಡಿ, ಕಾಂಗ್ರಾ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಅಲರ್ಟ್‌ ಆಗಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಇನ್ನೂ ಮಳೆಯಿಂದಾಗಿ ರೈಲು ಸೇವೆಗಳ ಮೇಲೂ ಪರಿಣಾಮ ಬೀರಿದೆ. ಶಿಮ್ಲಾ-ಕಲ್ಕಾ ರೈಲು ಮಾರ್ಗದಲ್ಲಿ ಮರಗಳು ಮತ್ತು ಅವಶೇಷಗಳು ಉರುಳಿ ಬಿದ್ದ ಪರಿಣಾಮ ಬಲವು ಗಂಟೆಗಳ ಕಾಲ ರೈಲು ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

  • ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

    ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

    ಬೆಂಗಳೂರು: ಬೆಸ್ಕಾಂ (BESCOM) ವಿದ್ಯುತ್‌ ಸಂಪರ್ಕದಲ್ಲಿ ಜುಲೈ 1 ರಿಂದ ಮಹತ್ವದ ಬದಲಾವಣೆಯಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ (Smart Meters) ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.

    ಈಗಾಗಲೇ ಬೆಂಗಳೂರಿನಲ್ಲಿ (Bengaluru) ಸ್ಮಾರ್ಟ್‌ ಮೀಟರ್‌ ಕಡ್ಡಾಯಗೊಳಿಸಲಾಗಿದ್ದು, ಗ್ರಾಮಾಂತರ ಪ್ರದೇಶಕ್ಕೂ ಇದನ್ನ ವಿಸ್ತರಣೆ ಮಾಡುವಂತೆ ಬೆಸ್ಕಾಂ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ (Electrical connection) ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸಬೇಕಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತರಿಂದ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ: ಸಿಎಂ ಸಮರ್ಥನೆ, ಜಾರಿಕೊಂಡ ಡಿಸಿಎಂ, ಅಸಲಿ ಕಹಾನಿ ಏನು!?

    ನಗರ ಪ್ರದೇಶದ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಶುರು
    ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಯೋಜನೆ ವಿಸ್ತರಿಸಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್‌ ಮೀಟರ್‌ ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ತಿಳಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್

    ಸ್ಮಾರ್ಟ್ ಮೀಟರ್ ಯಾಕೆ ಬೆಸ್ಕಾಂ ಹೇಳೋದೇನು?
    * ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್ ಮೀಟರ್‌ಗಳು ಜಿಪಿಆರ್‌ಎಸ್/ಆರ್‌ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ.
    * ಅಡ್ವಾನ್ಸ್ಡ್‌ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ.
    * ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ.
    * ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್ ಮಾಡಿಕೊಳ್ಳಬಹುದು.
    * ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

    ಗ್ರಾಹಕರಿಗೆ ಏನು ಅನುಕೂಲ?
    ಈ ಕುರಿತು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕ ರಾಜಾಜಿರಾವ್ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾರ್ಗಸೂಚಿಯಂತೆ ನಗರ ಪ್ರದೇಶಗಳಲ್ಲಿ ಫೆ. 15 ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭ ಆಗಿತ್ತು. ಜುಲೈ 1 ರಿಂದ ಗ್ರಾಮಿಣ ಭಾಗದಲ್ಲೂ ಇದು ವಿಸ್ತರಣೆಯಾಗುತ್ತೆ. ಹೊಸ ಸಂಪರ್ಕ, ತಾತ್ಕಾಲಿಕ ಸಂಪರ್ಕ ಪಡೆಯುವವರು ಸ್ಮಾರ್ಟ್ ಮೀಟರ್ ಪಡೆಯಬೇಕು. ಸ್ಮಾರ್ಟ್ ಮೀಟರ್‌ನಲ್ಲಿ, ಪ್ರಿಪೇಯ್ಡ್ , ಪೋಸ್ಟ್ ಪೇಯ್ಡ್ ಮೂಲಕ ಬಳಕೆ ಮಾಡಬಹುದು. ಗ್ರಾಹಕರ ದಿನ ನಿತ್ಯದ ಬಳಕೆಯನ್ನ ಮೊಬೈಲ್ ಆಪ್‌ನಲ್ಲಿಯೇ ನೋಡಿಕೊಳ್ಳಬಹುದು. ಪ್ರೀಪೇಯ್ಡ್ ನಲ್ಲಿ ಮುಂಗಡ ಹಣವನ್ನ ತುಂಬಿರುತ್ತಾರೆ. ಹಣ ಖಾಲಿಯಾಗ್ತಿದ್ದಂತೆ ಮೂರು ಬಾರಿ ಮೊಬೈಲ್‌ಗೆ ಅಲರ್ಟ್ ಮೆಸೇಜ್ ಬರುತ್ತೆ. ಹಣ ಖಾಲಿಯಾದಾಗ ವಿದ್ಯುತ್ ಸಂಪರ್ಕ ಕಡಿತ ಆಗುತ್ತೆ. ಸ್ಮಾರ್ಟ್ ಮೀಟರ್ ಗಳಿಂದ ಬೆಸ್ಕಾಂಗೂ ಆರ್ಥಿಕತೆ ಹೆಚ್ಚಳವಾಗಲಿದೆ. ಮನೆಗಳಿಗೆ ಹೊಸ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯ ಈರಲಿದೆ. ಇದರಿಂದ ಗ್ರಾಹಕರಿಗೂ ಅನುಕೂಲಗಳಿವೆ ಎಂದು ತಿಳಿಸಿದ್ದಾರೆ.

  • ಛತ್ತೀಸ್‌ಗಢದ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

    ಛತ್ತೀಸ್‌ಗಢದ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

    – ಪಟಾಕಿ ಸಿಡಿಸಿ ಗ್ರಾಮಸ್ಥರ ಸಂಭ್ರಮಾಚರಣೆ

    ರಾಯ್ಪುರ: ಛತ್ತೀಸ್‌ಗಢದಲ್ಲಿ(Chhattisgarh) ಹೊಸದಾಗಿ ರಚನೆಯಾದ ಮೊಹ್ಲಾ ಮನ್‌ಪುರ ಅಂಬಾಘರ್ ಚೌಕಿ(Mohla Manpur Ambagarh Chowki) ಜಿಲ್ಲೆಯ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ದೊರೆತಿದೆ.

    ಮೊಹ್ಲಾ ಮನ್ಪುರ್ ಅಂಬಾಗಢ ಚೌಕಿ ಜಿಲ್ಲೆ ಈ 17 ಗ್ರಾಮಗಳು ನಕ್ಸಲ್ ಪೀಡಿತ ದಟ್ಟ ಕಾಡುಗಳ ನಡುವೆ ಇವೆ. ಮುಖ್ಯಮಂತ್ರಿ ಮಜರತೋಲಾ ವಿದ್ಯುದ್ದೀಕರಣ ಯೋಜನೆಯಡಿಯಲ್ಲಿ 3 ಕೋಟಿ ರೂ.ಗಳ ಕಾಮಗಾರಿಗಳನ್ನು ಕಾರ್ಯಗತಗೊಳಿಸುವ ಮೂಲಕ ವಿದ್ಯುತ್ ಒದಗಿಸಲಾಗಿದೆ. ಈ ಯೋಜನೆಯು ಗ್ರಾಮಸ್ಥರ ಜೀವನದಲ್ಲಿ ಭರವಸೆ ಮತ್ತು ಬೆಳಕನ್ನು ತಂದಿದೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

    ಮೊಹ್ಲಾ ಮನ್ಪುರ್ ಅಂಬಾಗಢ ಚೌಕಿಯ ಕತುಲ್‌ಜೋರಾ, ಕಟ್ಟಪರ್, ಬೋದ್ರಾ, ಬುಕ್ಮಾರ್ಕಾ, ಸಂಬಲ್ಪುರ್, ಗಟ್ಟೆಗಹನ್, ಪುಗಡಾ, ಅಮಕೊಡೊ, ಪಟೇಮೆಟಾ, ಟಟೆಕಾಸಾ, ಕುಂಡಲ್ಕಲ್, ರೈಮನ್ಹೋರಾ, ನೈಂಗುಡ, ಮೆಟಾಟೋಡ್ಕೆ, ಕೊಹ್ಕಟೋಳ, ಅಡ್ಸಮೇಟಾ ಮತ್ತು ಕುಂಜ್ಕನ್ಹಾರ್ ಎಂಬ 17 ಹಳ್ಳಿಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇದನ್ನೂ ಓದಿ: ವಿಪಕ್ಷದವರು ಕ್ವಾರ್ಟರ್ ಅಲ್ಲ, ಫುಲ್ ಬಾಟಲ್ ಆದ್ರೂ ಹೇಳಲಿ ನಾವು ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

    ದಟ್ಟವಾದ ಕಾಡು ಪ್ರದೇಶ, ನಕ್ಸಲರ ಬೆದರಿಕೆ ನಡುವೆ ಈ ಹಳ್ಳಿಗಳನ್ನು ತಲುಪುವುದು ಕಷ್ಟವಾಗಿತ್ತು. ಹೀಗಿದ್ದರೂ ಗ್ರಿಡ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಲಾಗಿದೆ ಎಂದು ವಿದ್ಯುತ್ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

    ಈ ಹಳ್ಳಿಗಳಲ್ಲಿ ಸೋಲಾರ್ ಸಂಪರ್ಕ ಇದ್ರೂ ನಿರ್ವಹಣೆ ಸಮಸ್ಯೆ ಎದುರಾಗಿತ್ತು. ಹೀಗಾಗಿಯೇ ಅಲ್ಲಿನ ಜನ ಸೀಮೆಎಣ್ಣೆ ದೀಪಗಳ ಮೊರೆ ಹೋಗಿದ್ದರು. ವಿದ್ಯುತ್ ಸಂಪರ್ಕ ದೊರೆತ ಹಿನ್ನೆಲೆ ದಶಕಗಳ ಕನಸು ಈಡೇರಿದ ಖುಷಿಯಲ್ಲಿ ಗ್ರಾಮಸ್ಥರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

  • 100 ಕೋಟಿ ವೆಚ್ಚದ ನೂತನ ಬಸ್ ನಿಲ್ದಾಣಕ್ಕೆ ಕತ್ತಲೆ ಭಾಗ್ಯ; ಟಾರ್ಚ್‌ ಬೆಳಕಲ್ಲೇ ವರ್ತಕರ ವಹಿವಾಟು

    100 ಕೋಟಿ ವೆಚ್ಚದ ನೂತನ ಬಸ್ ನಿಲ್ದಾಣಕ್ಕೆ ಕತ್ತಲೆ ಭಾಗ್ಯ; ಟಾರ್ಚ್‌ ಬೆಳಕಲ್ಲೇ ವರ್ತಕರ ವಹಿವಾಟು

    – ವಿದ್ಯುತ್ ಸಂಪರ್ಕವಿಲ್ಲದೇ ಸಿಬ್ಬಂದಿ, ಪ್ರಯಾಣಿಕರು ಹೈರಾಣು

    ತುಮಕೂರು: 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೈಟೆಕ್ ಬಸ್ ನಿಲ್ದಾಣಕ್ಕೆ (Tumakuru Bus Stand) ಆರಂಭದಲ್ಲೇ ಗ್ರಹಣ ಹಿಡಿದಿದೆ. ವಿದ್ಯುತ್ (Electricity) ಸಂಪರ್ಕ ಇಲ್ಲದೇ ಕಗ್ಗತ್ತಲು ಕವಿದಿದೆ. ಪ್ರಯಾಣಿಕರು, ಸಿಬ್ಬಂದಿ ಹೈರಾಣಾಗಿದ್ದಾರೆ. ಇದನ್ನೂ ಓದಿ: ಉದ್ಘಾಟನೆ ದಿನವೇ ಬಾಗಿಲು ಮುಚ್ಚಿದ ತುಮಕೂರು KSRTC ಹೈಟೆಕ್‌ ಬಸ್ ನಿಲ್ದಾಣ!

    ಹೌದು. ಸ್ಮಾರ್ಟ್ ಸಿಟಿ ಯೋಜನೆ (Smart City Project) ಅಡಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತುಮಕೂರಿನ ನೂತನ ಬಸ್ ನಿಲ್ದಾಣ ಆರಂಭದಲ್ಲೇ ಮುಗ್ಗರಿಸಿದೆ. ಬಸ್ ನಿಲ್ದಾಣದಲ್ಲಿ ಕಾಮಗಾರಿ ಸಂಪೂರ್ಣವಾಗಿ ಮುಗಿಯದಿದ್ದರೂ ಕೆಎಸ್‌ಆರ್‌ಟಿಸಿ (KSRTC) ನಿಗಮದ ಅಧಿಕಾರಿಗಳು ತರಾತುರಿಯಲ್ಲಿ ಬಸ್ ಸಂಚಾರ ಆರಂಭಿಸಿದ್ದು ಪ್ರಯಾಣಿಕರು ಇನ್ನಿಲ್ಲದಂತೆ ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ – ಪ್ರಜ್ವಲ್‌ ವಿರುದ್ಧ ದೂರು

    ಕಳೆದ ಆಗಸ್ಟ್ 27ರಂದು ಹೊಸ ಬಸ್ ನಿಲ್ದಾಣ ಆರಂಭವಾಗಿದ್ದು, ಇನ್ನೂ ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ. ಇದರಿಂದ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾಗಳು ಅಳವಡಿಕೆಯಾಗಿಲ್ಲ. ಇದು ಜೇಬುಗಳ್ಳರಿಗೆ ವರದಾನವಾಗಿದ್ದು, ನಿತ್ಯ ಹತ್ತಾರು ಮಂದಿ ಪ್ರಯಾಣಿಕರು ತಮ್ಮ ಮೊಬೈಲ್, ಪರ್ಸ್ ಸೇರಿ ಇನ್ನಿತರ ಬೆಳೆಬಾಳುವ ವಸ್ತುಗಳನ್ನ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಸಿಸಿಟಿವಿ ಕಡ್ಡಾಯ – ಬೆಂಗಳೂರು ಪಿಜಿಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಏನಿದೆ?  

    ವಿದ್ಯುತ್‌ ಸಂಪರ್ಕವಿಲ್ಲದ ಕಾರಣ ಬಸ್ ನಿಲ್ದಾಣಕ್ಕೆ ಹೈಟೆಕ್ ಲುಕ್ ನೀಡುವ ಎಸ್ಕ್ಯುಲೇಟರ್‌ಗಳು ಕೆಲಸ ಮಾಡುತ್ತಿಲ್ಲ. ಹಿರಿಯ ನಾಗರಿಕರು ಮೆಟ್ಟಿಲು ಹತ್ತಲು ಹರಸಾಹಸ ಪಡುವಂತಾಗಿದೆ. ಎರಡು ಹೊಸ ಎಟಿಎಂಗಳೂ ಪ್ರಯೋಜನಕ್ಕೆ ಬಾರದಂತಾಗಿವೆ. ಮಹಿಳೆಯರು ವಿಶ್ರಾಂತಿ ಪಡೆಯಲು ನಿರ್ಮಿಸಿರುವ ಸಖಿ ಕೊಠಡಿಯೂ ಸಾರ್ವಜನಿಕ ಬಳಕೆಗೆ ಮುಕ್ತವಾಗಿಲ್ಲ. ಇವೆಲ್ಲದರ ನಡುವೆ ಪ್ರತಿ ತಿಂಗಳು ನಿಗಮಕ್ಕೆ ಲಕ್ಷಾಂತರ ರೂ. ಬಾಡಿಗೆ ಪಾವತಿಸುವ ಅಂಗಡಿ ಮಳಿಗೆಗಳಿಗೂ ವಿದ್ಯುತ್ ಸಂಪರ್ಕ ನೀಡಿಲ್ಲ. ಹೀಗಾಗಿ ಇಲ್ಲಿನ ವರ್ತಕರು ಟಾರ್ಚ್ ಬೆಳಕಿನಲ್ಲಿ ವ್ಯಾಪಾರ ಮಾಡುವಂತಾಗಿದೆ. ಸದ್ಯಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕವೇ ಆಸರೆಯಾಗಿದ್ದು, ರಾತ್ರಿ ಹೊತ್ತು ಮಾತ್ರ ಸೀಮಿತ ಕಡೆಗಳಲ್ಲಿ ಮಂದಗತಿಯ ಲೈಟ್‌ಗಳನ್ನ ಆನ್ ಮಾಡಲಾಗುತ್ತಿದೆ.

    ಒಟ್ಟಿನಲ್ಲಿ ತುಮಕೂರಿನಲ್ಲಿ ಹೊಸ ಬಸ್ ನಿಲ್ದಾಣ ಸಾರ್ವಜನಿಕರಿಗೆ ಅನುಕೂಲವಾಗುವುದಕ್ಕೆ ಬದಲಾಗಿ ಅನಾನುಕೂಲವನ್ನೇ ಉಂಟು ಮಾಡುತ್ತಿದೆ. ಇನ್ನಾದರೂ ಈ ಸಮಸ್ಯೆಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂಬುದು ಪ್ರಯಾಣಿಕರ ಆಗ್ರಹವಾಗಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ – ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ 

  • ವಿದ್ಯುತ್ ಸಂಪರ್ಕವನ್ನೇ ನೀಡದೇ 60,000 ಬಿಲ್ – ಉ.ಪ್ರದೇಶದ ಶಾಮ್ಲಿ ಜಿಲ್ಲೆಯ 12 ಗ್ರಾಮಸ್ಥರಿಗೆ ಶಾಕ್

    ವಿದ್ಯುತ್ ಸಂಪರ್ಕವನ್ನೇ ನೀಡದೇ 60,000 ಬಿಲ್ – ಉ.ಪ್ರದೇಶದ ಶಾಮ್ಲಿ ಜಿಲ್ಲೆಯ 12 ಗ್ರಾಮಸ್ಥರಿಗೆ ಶಾಕ್

    ಶಾಮ್ಲಿ: ವಿದ್ಯುತ್ ಸಂಪರ್ಕವನ್ನೇ ನೀಡದೇ 12 ಗ್ರಾಮಗಳಲ್ಲಿರುವ ಮನೆಗಳಿಗೆ 30,000 – 60,000 ರೂಪಾಯಿ ಬಿಲ್ ನೀಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶಾಮ್ಲಿ (Shamli) ಜಿಲ್ಲೆಯಲ್ಲಿ ನಡೆದಿದೆ. ಬಿಲ್ ಕಂಡು ಗ್ರಾಮಸ್ಥರು ಆಘಾತಗೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಶಾಮ್ಲಿ ಜಿಲ್ಲೆಯ ಖೋಕ್ಸಾ, ಅಲಾವುದ್ದೀನ್‍ಪುರ, ದುದ್ಲಿ, ಡೇರಾ ಭಾಗೀರಥ್, ನಯಾ ಗಾಂವ್ ಸೇರಿ ಹಲವು ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ಈ ಗ್ರಾಮಗಳಲ್ಲಿ ಬವಾರಿಯಾ ಬುಡಕಟ್ಟು ಜನಾಂಗದವರು ವಾಸವಾಗಿದ್ದಾರೆ. ಪ್ರತಿ ಗ್ರಾಮದಲ್ಲಿ 250- 300 ಮಂದಿ ವಾಸವಾಗಿದ್ದಾರೆ. ಇದನ್ನೂ ಓದಿ: 36 ಸೇತುವೆಗಳು ಸಂಚಾರಕ್ಕೆ ಅನರ್ಹ – ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಸರ್ಕಾರ

    ಕಳೆದ ಕೆಲವು ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಮೀಟರ್‌ಗಳನ್ನು ಉಚಿತವಾಗಿ ನೀಡುವುದಾಗಿ ವಿದ್ಯುತ್ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದರು. ಬಳಿಕ ಮನೆಗಳಿಗೆ ವಿದ್ಯುತ್ ಮೀಟರ್‌ಗಳನ್ನು ಅಳವಡಿಸಿದ್ದರು. ನಂತರ ವಿದ್ಯುತ್ ಸಂಪರ್ಕವನ್ನೇ ನೀಡದೇ ಈಗ ಬಿಲ್‍ಗಳನ್ನು ನೀಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ವೈರಲ್ ವೀಡಿಯೋದಲ್ಲಿರೋದು ಫಿಸಿಯೋಥೆರಪಿಸ್ಟ್ ಅಲ್ಲ, ರೇಪಿಸ್ಟ್: ಬಿಜೆಪಿ

    ನಾವು ವಿದ್ಯುತ್ ಇಲ್ಲದೇ ಜೀವನ ನಡೆಸಿದ್ದೇವೆ, ನಾವು ಯಾಕೆ ಬಿಲ್ ಪಾವತಿಸಬೇಕು ಎಂದು ಸ್ಥಳೀಯ ಆಡಳಿತವನ್ನು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮಾಂಚಲ್ ವಿದ್ಯುತ್ ವಿತ್ರನ್ ನಿಗಮ್ ಲಿಮಿಟೆಡ್‍ನ ಸೂಪರಿಂಟೆಂಡಿಂಗ್ ಎಂಜಿನಿಯರ್ ರಾಮ್ ಕುಮಾರ್ ಜನರು ಬಿಲ್ ಪಡೆದಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಗೋಹತ್ಯೆ ಮನೆ ಮೇಲೆ ದಾಳಿ – ವಿದ್ಯುತ್ ಸಂಪರ್ಕ ಕಟ್, ಶರಣಾಗಲು ಸೂಚನೆ

    ಅಕ್ರಮ ಗೋಹತ್ಯೆ ಮನೆ ಮೇಲೆ ದಾಳಿ – ವಿದ್ಯುತ್ ಸಂಪರ್ಕ ಕಟ್, ಶರಣಾಗಲು ಸೂಚನೆ

    ಚಿಕ್ಕಮಗಳೂರು: ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಘಟನೆ ನಗರದ ತಮಿಳು ಕಾಲೋನಿಯಲ್ಲಿ ನಡೆದಿದೆ.

    ಕಳೆದ ಒಂದೂವರೆ ತಿಂಗಳಿಂದಲೂ ಚಿಕ್ಕಮಗಳೂರು ನಗರದಲ್ಲಿ ಅಕ್ರಮ ಗೋಹತ್ಯೆ ಕೇಂದ್ರಗಳ ಮೇಲೆ ನಗರಸಭೆ ದಾಳಿ ಮಾಡುತ್ತಿದೆ. ಮೂರಕ್ಕೂ ಹೆಚ್ಚು ಅಕ್ರಮ ಗೋಹತ್ಯೆ ಕೇಂದ್ರಗಳ ಮೇಲೆ ಬುಲ್ಡೋಜರ್ ಪ್ರಯೋಗ ಕೂಡ ಮಾಡಿದ್ದರು. ಜೊತೆಗೆ 20ಕ್ಕೂ ಹೆಚ್ಚು ಅಕ್ರಮ ಗೋಹತ್ಯೆ ಮನೆಗಳ ಮೇಲೆ ದಾಳಿ ಮಾಡಿ ಮನೆಯ ಗೋಡೆಗಳಿಗೆ ನೋಟಿಸ್ ಕೂಡ ಅಂಟಿಸಿದ್ದರು. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವೀಡಿಯೋ ಶೇರ್ ಮಾಡಿದ ರಷ್ಯಾ

    ಗೋಹತ್ಯೆ ನಿಲ್ಲಿಸದ ಹಿನ್ನೆಲೆ ನಗರಸಭೆ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಪೊಲೀಸರು ನಗರದ ತಮಿಳು ಕಾಲೋನಿಯಲ್ಲಿ ಯಶ್ ಪಾಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಅಕ್ರಮ ಗೋಮಾಂಸವನ್ನ ವಶಪಡಿಸಿಕೊಂಡಿದ್ದಾರೆ. ಆದರೆ, ಮನೆಯ ಮಾಲೀಕ ಯಶ್ ಪಾಲ್ ನಾಪತ್ತೆಯಾಗಿರುವ ಹಿನ್ನೆಲೆ ನಗರಸಭೆ ಅಧ್ಯಕ್ಷರ ಸೂಚನೆ ಮೇರೆಗೆ ಅವರ ಮನೆಯ ವಿದ್ಯುತ್ ಸಂಪರ್ಕವನ್ನ ಕಡಿತಗೊಳಿಸಿದ್ದಾರೆ.

    ಮನೆಯ ನೀರಿನ ಸಂಪರ್ಕವನ್ನ ಕಡಿತಗೊಳಿಸಲು ನೀರಿನ ಸಂಪರ್ಕವಿರಲಿಲ್ಲ. ಹಾಗಾಗಿ, ವಿದ್ಯುತ್ ಸಂಪರ್ಕವನ್ನಷ್ಟೆ ಕಡಿತಗೊಳಿಸಿದ್ದಾರೆ. ನಾಪತ್ತೆಯಾಗಿರುವ ಯಶ್ ಪಾಲ್ ನಮ್ಮ ವಶಕ್ಕೆ ಬರದಿದ್ರೆ ಮನೆಯನ್ನೇ ನಗರಸಭೆ ಆಸ್ತಿ ಎಂದು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: 10ರ ಮಗಳು, ತಾಯಿ ಪ್ರತ್ಯೇಕ ಕೋಣೆಯಲ್ಲಿ ನೇಣಿಗೆ ಶರಣು – ಪ್ರೀತಿಸಿ ಮದ್ವೆಯಾಗಿದ್ದ ವೈದ್ಯ ದಂಪತಿ

    Live Tv
    [brid partner=56869869 player=32851 video=960834 autoplay=true]

  • ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

    ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

    ಶಿವಮೊಗ್ಗ: ರೈತರೊಬ್ಬರು ತನ್ನ ತೋಟದ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ನೀಡದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಹನುಮಂತಪ್ಪ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬುತ್ತಿದ್ದ ರೈತ. ಅವರು ಪ್ರತಿನಿತ್ಯ ಮನೆಯಿಂದ ಮಿಕ್ಸಿ ತಂದು ಮೆಸ್ಕಾಂ ಕಚೇರಿಯಲ್ಲಿ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದರು. ಹಲವು ವರ್ಷಗಳಿಂದ ಅವರು ತೋಟದ ಮನೆಯಲ್ಲಿಯೇ ವಾಸವಿದ್ದರು. ಅವರ ತೋಟದಲ್ಲಿರುವ ಕೊಳವೆ ಬಾವಿಯ ಐಪಿ ಸೆಟ್‍ಗೆ ವಿದ್ಯುತ್ ಸಂಪರ್ಕ ಇದೆ. ಆದರೆ ಐಪಿ ಸೆಟ್‍ನ ವಿದ್ಯುತ್‍ಗೆ ಸಮಯ ನಿಗದಿ ಇಲ್ಲ. ಹೀಗಾಗಿ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅವರು ಮೆಸ್ಕಾಂಗೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

    ರೈತ ಕಳೆದ 6 ತಿಂಗಳಿನಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್