Tag: ವಿದ್ಯುತ್ ಸೌಲಭ್ಯ

  • ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಸಿಎಂ ಘೋಷಣೆ

    ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಸಿಎಂ ಘೋಷಣೆ

    ಬೆಂಗಳೂರು: ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೂ ನೇಕಾರ ಸಮ್ಮಾನ್ (Nekar Samman) ಯೋಜನೆ ವಿಸ್ತರಣೆ ಮಾಡಲು ಹಾಗೂ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್‌ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    8 ಜಿಎಸ್‌ಟಿ (GST) ಕೌನ್ಸಿಲ್ ಸಭೆಯಲ್ಲಿ ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ವೃತ್ತಿಪರ ನೇಕಾರರ ಕೈಮಗ್ಗಕ್ಕೆ ಕೈಗಾರಿಕಾ (Industry) ಇಲಾಖೆಯಿಂದ ನೀಡುತ್ತಿರುವ ಶೇ.30 ರಷ್ಟು ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಒಪ್ಪಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ 46,000 ಕೈಮಗ್ಗ ನೇಕಾರರಿಗೆ 5,000 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ತೀರ್ಮಾನಿಸಲಾಗಿದೆ. ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ `ಗುಡಿ ಕೈಗಾರಿಕೆ’ (Cottage Industry) ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

    ಕೈಮಗ್ಗ ನಿಗಮದಿಂದ ಸಮವಸ್ತ್ರ ಪೂರೈಕೆ:
    ಸರ್ಕಾರದ ನೇಕಾರ (ಕೈಮಗ್ಗ ಮತ್ತು ವಿದ್ಯುತ್ ಚಾಲಿತ) ನಿಗಮಗಳ ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಡಿಸೆಂಬರ್ ತಿಂಗಳಿನಲ್ಲಿಯೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ವಿವಿಧ ಇಲಾಖೆಗಳ ಸಮವಸ್ತ್ರ ಅಗತ್ಯತೆಯ ಶೇ.25 ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತಕ್ಕೆ ಅಂಧರ ವಿಶ್ವಕಪ್

    ಶೂನ್ಯ ಬಡ್ಡಿದರದಲ್ಲಿ ಸಾಲ:
    ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಗಿದೆ. 5 ಎಚ್‌ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ (Electricity Facility) ಒದಗಿಸಲು ಹಾಗೂ ನಿಗದಿತ ದರದಲ್ಲಿ ಶೇ.50 ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್‌ ಸ್ಪರ್ಧೆ

    ನೇಕಾರರ ಮಕ್ಕಳಿಗೆ ವಿದ್ಯಾನಿಧಿ:
    ನೇಕಾರರ ಮಕ್ಕಳಿಗೆ ವಿದ್ಯಾನಿಧಿಯನ್ನು ಡಿಸೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು. ಇದಕ್ಕೆ ಪೂರಕ ಮಾಹಿತಿಗಳನ್ನು ಸಂಗ್ರಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]